Breaking News

ಬೆಂಗಳೂರು

9 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಜೈಲು ಶಿಕ್ಷೆಗೊಳಗಾಗಿದ್ದ ಅಪರಾಧಿ ಬಂಧನ

ಬೆಂಗಳೂರು: 9 ವರ್ಷಗಳ ಕಾಲ ತಲೆಮರೆಸಿಕೊಂಡಿದ್ದ ಅಪರಾಧಿಯೋರ್ವನನ್ನು ಬೆಂಗಳೂರಿನ ಬ್ಯಾಟರಾಯನಪುರ ಪೊಲೀಸರು ಬಂಧಿಸಿದ್ದಾರೆ. ಅಪರಾಧಿ ಆಂಥೋನಿ ರಾಜ್(44) ಬಂಧಿತ ಅಪರಾಧಿ. 2012ರಲ್ಲಿ ಅಪಘಾತ ಪ್ರಕರಣವೊಂದರಲ್ಲಿ ಆಂಥೋನಿ ರಾಜ್‌ಗೆ ಕೋರ್ಟ್ 10 ತಿಂಗಳು 15 ದಿನ ಜೈಲು ಶಿಕ್ಷೆ ಪ್ರಕಟಿಸಿತ್ತು. ಆದರೆ ಶಿಕ್ಷೆ ಪ್ರಕಟವಾದ ಬಳಿಕ ಆಂಥೋನಿ ರಾಜ್ ತಲೆಮರೆಸಿಕೊಂಡಿದ್ದ. ಇದೀಗ ಪೊಲೀಸರಿಂದ ಬಂಧನಕ್ಕೊಳಪಟ್ಟ ನಂತರ ಆಂಥೋನಿ ರಾಜ್​ಗೆ ಮತ್ತೆ ದಂಡ ಮತ್ತು ಜೈಲುಶಿಕ್ಷೆಯನ್ನು ಕೋರ್ಟ್ ವಿಧಿಸಿದೆ. 2010ರಲ್ಲಿ ಟ್ರಾಕ್ಟರ್ ಡ್ರೈವರ್ …

Read More »

ಎಸ್‌ಟಿಪಿ ಸ್ಥಳಾಂತರ: ಲೋಕಾಯುಕ್ತ ತನಿಖೆಗೆ ಆದೇಶ

ಬೆಂಗಳೂರು: ಬೆಳಗಾವಿಯ ಅಲರವಾಡದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ(ಎಸ್‌ಟಿಪಿ) ನಿರ್ಮಾಣಕ್ಕೆ ₹2 ಕೋಟಿ ವೆಚ್ಚ ಮಾಡಿದ ಬಳಿಕ ಬೇರೆಡೆಗೆ ಸ್ಥಳಾಂತರಿಸಲು ಮುಂದಾಗಿರುವ ಪ್ರಕರಣದ ಬಗ್ಗೆ ಲೋಕಾಯುಕ್ತ ತನಿಖೆಗೆ ಹೈಕೋರ್ಟ್‌ ಆದೇಶಿಸಿದೆ. ಬೆಳಗಾವಿ ನಿವಾಸಿಗಳಾದ ನಾರಾಯಣ ಬೈರು ಸಾವಂತ್ ಸೇರಿ ಐವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್‌ಚಂದ್ರ ಶರ್ಮಾ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಈ ಆದೇಶ ನೀಡಿತು. ಬೆಳಗಾವಿ ಪಾಲಿಕೆ ಆಯುಕ್ತರು ಸಲ್ಲಿಸಿದ್ದ …

Read More »

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ಟೋಬರ್ 11ರವರೆಗೂ ನೈಟ್ ಕರ್ಫ್ಯೂ ಮುಂದುವರಿಕೆ

ಬೆಂಗಳೂರು : ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಅಕ್ಟೋಬರ್ 11ರವರೆಗೂ ನೈಟ್ ಕರ್ಫ್ಯೂ ಮುಂದುವರೆಯಲಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ. ಬೆಂಗಳೂರಿನಲ್ಲಿ ಇದೀಗ ನೈಟ್ ಕರ್ಫ್ಯೂ ಸರ್ಕಾರದ ಮಾರ್ಗಸೂಚಿ ಮೇರೆಗೆ ರಾತ್ರಿ 11 ಗಂಟೆಯಿಂದ ಮುಂಜಾನೆ 5 ಗಂಟೆವರೆಗೆ ಇರಲಿದೆ ಎಂದು ಪೊಲೀಸ್ ಆಯುಕ್ತರು ಆದೇಶ ಹೊರಡಿಸಿದ್ದಾರೆ. ದಿನದಿಂದ ದಿನಕ್ಕೆ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕಡಿಮೆಯಾಗುತ್ತಿದ್ದು, ನಿನ್ನೆ ಒಂದೇ ದಿನ181 ಮಂದಿ ಸೋಂಕಿತ …

Read More »

ಪಿಯು ಉಪನ್ಯಾಸಕರ ವರ್ಗಾವಣೆ ಈ ವರ್ಷವೂ ಅನುಮಾನ?

ಬೆಂಗಳೂರು : ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ವರ್ಗಾವಣೆ ಕಾಯ್ದೆ ತಿದ್ದುಪಡಿ ವಿಧೇಯಕ ಅಧಿವೇಶನದಲ್ಲಿ ಮಂಡನೇ ಆಗದೆ ಇರುವುದರಿಂದ ಈ ವರ್ಷ ವರ್ಗಾವಣೆ ಪ್ರಕ್ರಿಯೆ ನಡೆಯುವುದು ಕಷ್ಟವಿದೆ. ಉಪನ್ಯಾಸಕರ ವರ್ಗಾವಣೆಗೆ ಸಂಬಂಧಿಸಿದಂತೆ ಕಾಯ್ದೆಗೆ ತಿದ್ದುಪಡಿ ತರಬೇಕು ಮತ್ತು ವರ್ಗಾವಣೆ ಪ್ರಮಾಣ ಹೆಚ್ಚಿಸಬೇಕು ಎಂದು ಆಗ್ರಹಿ ಇತ್ತೀಚೆಗೆ ರಾಜ್ಯ ಸರ್ಕಾರಿ ಪಿಯು ಕಾಲೇಜಿನ ಉಪನ್ಯಾಸಕರ ಸಂಘದಿಂದ ಇಲಾಖೆಯ ಕಚೇರಿ ಮುಂಭಾಗದಲ್ಲಿ ಪ್ರತಿಭಟನೆಯನ್ನು ನಡೆಸಿದ್ದರು. ಹಳೇ ಕಾಯ್ದೆ ಹಾಗೂ ನಿಯಮದಡಿ ವರ್ಗಾವಣೆ ನಡೆಸಲು …

Read More »

ಕಾರುಗಳ ಮುಖಾಮುಖಿ ಡಿಕ್ಕಿ- ಇಬ್ಬರು ಚಾಲಕರು ಸಾವು

ಬೆಂಗಳೂರು: ಎರಡು ಕಾರುಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಎರಡೂ ಕಾರಿನ ಚಾಲಕರು ಸ್ಥಳದಲ್ಲೇ ಸಾವನಪ್ಪಿರುವ ಘಟನೆ ಕರ್ನಾಟಕದ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಬಳಿ ನಡೆದಿದೆ. ಆನೇಕಲ್ ಗಡಿಗೆ ಹೊಂದಿಕೊಂಡಿರುವ ತಮಿಳುನಾಡಿನ ಹೊಸೂರು ಸಮೀಪದ ಸೂಳಗಿರಿ ಎಚ್.ಪಿ ಪೆಟ್ರೋಲ್ ಬಂಕ್ ಎದುರು ಅಪಘಾತ ಸಂಭವಿಸಿದ್ದು, ಎರಡು ಕಾರಿನ ಚಾಲಕರಾದ ಬೆಂಗಳೂರಿನ ವೈಯಾಲಿಕಾವಲ್ ನಿವಾಸಿ ಸುಮಂತ್(21) ಹಾಗೂ ಕೋರಮಂಗಲ ನಿವಾಸಿ ವಿನ್ಸೆಂಟ್ ಗೋಪಿ (34) ಸ್ಥಳದಲ್ಲೇ ಸಾವನಪ್ಪಿದ್ದಾರೆ.

Read More »

ಯಡಿಯೂರಪ್ಪ ಲೂಟಿ‌ ಹೊಡೆಯುದನ್ನು ಬಿಟ್ಟು ಬೇರೇನೂ ಮಾಡಿಲ್ಲ: ಸಿದ್ದರಾಮಯ್ಯ

ಬೆಂಗಳೂರು: ಬಿ.ಎಸ್.ಯಡಿಯೂರಪ್ಪ ರಾಜಾಹುಲಿಯಂತೆ, ಇಂದಿರಾ ಕ್ಯಾಂಟಿನ್ ಮುಚ್ಚಿದಕ್ಕೆ ಅವರು ರಾಜಾಹುಲಿಯಾ? ಅತ್ಯುತ್ತಮ ಶಾಸಕನಂತೆ, ಯಡಿಯೂರಪ್ಪ ಎರಡು ವರ್ಷ ಸಿಎಂ ಆಗಿದ್ದರು. ಲೂಟಿ‌ ಹೊಡೆಯುವುದನ್ನು ಬಿಟ್ಟರೆ ಬೇರೆ ಏನು ಮಾಡಿಲ್ಲ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು. ಸಂಜಯನಗರದ ಕುವೆಂಪು ಆಟದ ಮೈದಾನದಲ್ಲಿ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಾನು ಏಳು ಕೆಜಿ ಅಕ್ಕಿ ಉಚಿತವಾಗಿ ಕೊಟ್ಟಿದ್ದೆ, ಕುಮಾರಸ್ವಾಮಿ ಅಕ್ಕಿ ಕೊಟ್ಟಿದ್ದರೆ ಹೇಳಿ? ಯಡಿಯೂರಪ್ಪ ಕೊಟ್ಟಿದ್ದರೇ? ಈಗ ಬೊಮ್ಮಾಯಿ …

Read More »

ಇದೇ 27ಕ್ಕೆ ಭಾರತ್ ಬಂದ್ : ಯಾರೆಲ್ಲಾ ಬಂದ್ ಬೆಂಬಲ ಸೂಚಿಸಿದ್ದಾರೆ ಗೊತ್ತಾ..?

ಬೆಂಗಳೂರು: ಕೇಂದ್ರ ಸರ್ಕಾರ ನೂತನ ಕೃಷಿ ಕಾಯ್ದೆಗಳನ್ನ ಜಾರಿಗೆ ತಂದು ವರ್ಷವಾಗ್ತಿದೆ. ಈ ನಿಟ್ಟಿನಲ್ಲಿ ಅಂದಿನಿಂದಲೂ ಈ ಕಾಯ್ದೆಗಳನ್ನ ರೈತರು ವಿರೋಧಿಸಿಕೊಂಡೇ ಬರ್ತಿದ್ದಾರೆ. ಆದ್ರೆ ಕೇಂದ್ರ ಸರ್ಕಾರ ಮಾತ್ರ ತಮ್ಮ ನಿರ್ಧಾರದಿಂದ ಹಿಂದೆ ಸರಿದಿಲ್ಲ. ಇದೀಗ ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಗಳನ್ನ ವಿರೋಧಿಸಿ, ರೈತ ಸಂಘಟನೆ ಇದೇ ತಿಂಗಳ 27 ಕ್ಕೆ ಭಾರತ್ ಬಂದ್ ಗೆ ಕರೆ ನೀಡಿದೆ. ಇದೀಗ ರೈತ ಸಂಘಟನೆ ನೀಡಿರುವ ಭಾರತ್ ಬಂದ್ ಗೆ …

Read More »

6ನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ತರಗತಿ ಅ.1ರಿಂದ ಆರಂಭ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೋವಿಡ್‌ ಪ್ರಕರಣಗಳ ದೃಢಪ್ರಮಾಣ ದರ ಶೇಕಡ 0.66ಕ್ಕೆ ಕುಸಿದಿರುವುದರಿಂದ ಅಕ್ಟೋಬರ್‌ 1ರಿಂದ ಆರನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಪೂರ್ಣ ಪ್ರಮಾಣದ ತರಗತಿಗಳನ್ನು ಆರಂಭಿಸಲು ನಿರ್ಧರಿಸಲಾಗಿದೆ. ಶುಕ್ರವಾರ ಕೋವಿಡ್‌ ನಿಯಂತ್ರಣ ಕಾರ್ಯಪಡೆ ಸಭೆ ನಡೆಸಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಕೋವಿಡ್‌ ದೃಢಪ್ರಮಾಣ ದರ ಶೇ 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ವಾರದಲ್ಲಿ ಐದು ದಿನಗಳ ಕಾಲ ಆರರಿಂದ ದ್ವಿತೀಯ ಪಿಯುಸಿವರೆಗಿನ ಶೇ 100ರಷ್ಟು …

Read More »

ಸೋಮವಾರ ಭಾರತ್ ಬಂದ್: ಬೆಂಗಳೂರಲ್ಲಿ ರೈತರ ಪ್ರತಿಭಟನೆ ಹೇಗಿರುತ್ತೆ..?

ಬೆಂಗಳೂರು: ಸೆಪ್ಟೆಂಬರ್​ 27ರ ಭಾರತ್ ಬಂದ್ ಅನ್ನು ಯಶಸ್ವಿಗೊಳಿಸುವ ಸಲುವಾಗಿ ಬಹುತೇಕ ಎಲ್ಲ ಸಂಘಟನೆಗಳು ಬೆಂಬಲ ನೀಡಿವೆ ಎಂದು ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ಆಯೋಜಿಸಿ ಮಾತನಾಡಿ ಭಾರತ ಬಂದ್​​ಗೆ ಬಹುತೇಕ ಸಂಘಟನೆಗಳ ಜೊತೆ ರೈತ ಸಂಘಟನೆಗಳ ಸಾಥ್ ಸಿಕ್ಕಿದೆ. ರೈತರೇ ಹೋರಾಟದ ಮುಂಚೂಣಿ ವಹಿಸಲಿದ್ದಾರೆ. ಕಾರ್ಮಿಕ ಸಂಘಟನೆಯೂ ಸಾಥ್ ನೀಡ್ತಿದೆ. ದಲಿತ ಸಮುದಾಯವೂ ಅಪಸ್ವರ ಎತ್ತಿಲ್ಲ ಬೇರೆ ಕಸುಬುಗಳ ಸಂಘಟನೆಗಳು ಬಂದ್‌ನಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಎಂದಿದ್ದಾರೆ. …

Read More »

ವೈದ್ಯರ ಬದಲಿಗೆ ನರ್ಸ್​​​​ಗಳಿಂದ ಗರ್ಭಿಣಿ ಹೆರಿಗೆ; ನವಜಾತ ಗಂಡು ಮಗು ಸಾವು

ಬೆಂಗಳೂರು: ಗರ್ಭಿಣಿಗೆ ಡಾಕ್ಟರ್ ಬದಲು ನರ್ಸ್​ಗಳು ಹೆರಿಗೆ ಮಾಡಿಸಿದ್ದರಿಂದ ನವಜಾತ ಗಂಡು ಮಗು ಸಾವನಪ್ಪಿದೆ ಎಂಬ ಆರೋಪ ಕೇಳಿ ಬಂದಿದೆ. ನಗರದ ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವಿರುದ್ಧ ಹೀಗೊಂದು ಆರೋಪ ಖುದ್ದು ಮಗು ಕಳೆದುಕೊಂಡ ತಾಯಿ ಪವಿತ್ರ ಹಾಗೂ ಸಂಬಂಧಿಕರು ಆರೋಪಿಸಿದ್ದಾರೆ. ಪಲ್ಲವಿ, ಕೋಣನಕುಂಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲೇ ಚೆಕಪ್ ಮಾಡಿಸುತ್ತಿದ್ದರು. ಇನ್ನು ನಿನ್ನೆ ರಾತ್ರಿ 10.30ಕ್ಕೆ ಪವಿತ್ರಗೆ ಹೆರಿಗೆ ನೋವು ಕಾಣಿಸಿಕೊಂಡ ಈ ಹಿನ್ನೆಲೆ ಆಕೆಯನ್ನ ಆಸ್ಪತ್ರೆಗೆ …

Read More »