ಬೆಂಗಳೂರು: ಸಂಘದ ಶಾಖೆಗೆ ಬನ್ನಿ ಎಂದು ಬಿಜೆಪಿ ನಾಯಕ ಸಿ.ಟಿ.ರವಿ ಅವರು ನೀಡಿದ ಆಹ್ವಾನಕ್ಕೆ ಸರಣಿ ಟ್ವೀಟ್ ಗಳ ಮೂಲಕ ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರು ಬುಧವಾರ ತಿರುಗೇಟು ನೀಡಿದ್ದಾರೆ. ಕುಮಾರಸ್ವಾಮಿ ಅವರು ಮಾಡಿರುವ ಟ್ವೀಟ್ ಗಳು ”ಸಿ.ಟಿ.ರವಿ ಅವರೇ, ಮನೆಯಲ್ಲಿ ಕೂತು ಪುಸ್ತಕ ಓದಿದರೆ ಸಾಲದು ಎಂದಿದ್ದೀರಿ. ಆರ್ ಎಸ್ ಎಸ್ ಬಗ್ಗೆ ಜ್ಞಾನಾರ್ಜನೆ, ಅಧ್ಯಯನ, ಸಂಶೋಧನೆ ಮಾಡಲು ಸಂಘದ ಶಾಖೆಗೆ ಬನ್ನಿ ಎಂದು …
Read More »ಮಕ್ಕಳಿಂದ ಅನುಕಂಪ ಗಿಟ್ಟಿಸಿ ಮನೆ ಕಳ್ಳತನ ಮಾಡುತ್ತಿದ್ದ ಖತರ್ನಾಕ್ ಕಳ್ಳಿ ಅರೆಸ್ಟ್, 5 ಮಕ್ಕಳು ಬಾಲಮಂದಿರಕ್ಕೆ ಶಿಫ್ಟ್
ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ನಗರದಲ್ಲಿ ಖತರ್ನಾಕ್ ಕಳ್ಳಿಯ ಬಂಧನವಾಗಿದೆ. ಆರ್.ಟಿ.ನಗರ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿ ಲಕ್ಷ್ಮೀಯನ್ನು ಅರೆಸ್ಟ್ ಮಾಡಿದ್ದಾರೆ. ಆರೋಪಿ ಲಕ್ಷ್ಮೀ ವಿರುದ್ಧ 10ಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಪೊಲೀಸರಿಗೆ ಸಿಕ್ಕಿಬಿದ್ದಾಗ ಮಕ್ಕಳಿದ್ದಾರೆ, ಗರ್ಭಿಣಿ ಎಂದು ಅನುಕಂಪದ ಅಸ್ತ್ರ ಪ್ರಯೋಗ ಮಾಡಿದ್ದಾಳೆ. ಆದ್ರೆ ಕಳ್ಳಿಯ ಚಲಾಕಿತನ ತಿಳಿದಿದ್ದ ಪೊಲೀಸರು ಅನುಕಂಪದ ಅಲೆಗೆ ಮೋಸ ಹೋಗಿಲ್ಲ. ಆರೋಪಿ ಲಕ್ಷ್ಮೀಗೆ ಬರೋಬ್ಬರಿ ಆರು ಮಕ್ಕಳಿದ್ದಾರೆ. ಕಳ್ಳಿ ಲಕ್ಷ್ಮೀಯಿಂದ ಪೊಲೀಸರು ಮಕ್ಕಳನ್ನು …
Read More »ಕಾಂಗ್ರೆಸ್ ಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ’
ಬೆಂಗಳೂರು: ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ ಹರಿಹಾಯ್ದಿದ್ದಾರೆ. ಬಿಜೆಪಿ- ಜೆಡಿಎಸ್ ಒಳ ಒಪ್ಪಂದ ಮಾಡಿಕೊಂಡಿವೆ’ ಎಂಬ ಸಿದ್ದರಾಮಯ್ಯ ಆರೋಪಕ್ಕೆ ರವಿ ತಿರುಗೇಟು ನೀಡಿದ್ದಾರೆ. ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಜನತಾದಳದ ಅಡುಗೆ ಮನೆ, ಇನ್ನೊಬ್ಬರು ಮಲಗುವ ಕೋಣೆ ಇಣುಕಿ ನೋಡುವ ಚಟ ಅಂಟಿಕೊಂಡಿದೆ’ ಎಂದು ಲೇವಡಿ ಮಾಡಿದ್ದಾರೆ. ಬಿಜೆಪಿ ರಾಜ್ಯ ಘಟಕದ ಕಚೇರಿಯಲ್ಲಿ ಭಾನುವಾರ ನಡೆದ ಪಕ್ಷದ ಪ್ರಮುಖರ …
Read More »ಅನೇಕ ವರ್ಷಗಳಾದರೂ ಉದ್ಯಮ ಸ್ಥಾಪಿಸದ ಸಂಸ್ಥೆಗಳ ಭೂಮಿ ಮಂಜೂರಾತಿ ರದ್ದು : ಬಸವರಾಜ ಬೊಮ್ಮಾಯಿ
ಬೆಂಗಳೂರು: ಸರ್ಕಾರದಿಂದ ಭೂಮಿ ಪಡೆದು ಅನೇಕ ವರ್ಷಗಳಾದರೂ ಉದ್ಯಮ ಸ್ಥಾಪಿಸದ ಸಂಸ್ಥೆಗಳ ಭೂಮಿ ಮಂಜೂರಾತಿ ರದ್ದು ಮಾಡಲಾಗುವುದು ಎಂದು ಬಸವರಾಜ ಬೊಮ್ಮಾಯಿ ಅವರು ಭಾನುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೈಗಾರಿಕೆ ಉದ್ದೇಶಕ್ಕೆ ಭೂಮಿ ಹಂಚಿಕೆಯಾಗಿದ್ದರೂ ಕಾರ್ಯಾರಂಭ ಮಾಡದೆ ಇದ್ದರೆ ಪುನರ್ ಪರಿಶೀಲನೆ ನಡೆಸಿ ಭೂಮಿ ಹಂಚಿಕೆಯನ್ನು ರದ್ದುಪಡಿಸಲಾಗುವುದು ಎಂದು ಹೇಳಿದ್ದಾರೆ. ಬಳ್ಳಾರಿ ಭಾಗದಲ್ಲಿ ಭೂಮಿ, ನೀರು ಹಂಚಿಕೆಯಾಗಿ ಹತ್ತು ಹನ್ನೆರಡು ವರ್ಷಗಳು ಕಳೆದರೂ ಕೈಗಾರಿಕೆಗಳು ಪ್ರಾರಂಭವಾಗಿಲ್ಲ. ಇದರ ಬಗ್ಗೆ …
Read More »ಭಾರತ್ ಬಂದ್ ವೇಳೆ ಪೊಲೀಸರ ವಾಕಿಟಾಕಿಯೇ ಕಳವು
ಬೆಂಗಳೂರು: ಸೆಪ್ಟೆಂಬರ್ 27 ರಂದು ಕೃಷಿ ಕಾಯ್ದೆ ವಿರೋಧಿಸಿ ನಡೆದ ಭಾರತ್ ಬಂದ್ ವೇಳೆ ಪೊಲೀಸ್ ಇನ್ಸ್ಪೆಕ್ಟರ್ ಒಬ್ಬರ ವಾಕಿಟಾಕಿ ಕಳ್ಳತನವಾಗಿದೆ. ಟೌನ್ ಹಾಲ್ ಮುಂಭಾಗ ಘಟನೆ ನಡೆದಿದೆ. ಕೃಷಿ ಕಾಯ್ದೆ ವಿರೋಧಿಸಿ ರೈತ ಸಂಘಟನೆಗಳು ಹಲವು ಸಂಘಟನೆಗಳು ಭಾರತ್ ಬಂದ್ ನಡೆಸಿದ್ದವು. ಈ ವೇಳೆ ಟೌನ್ ಹಾಲ್ ಬಳಿ ರೈತರು ಪ್ರತಿಭಟನಾ ಜಾಥಾ ನಡೆಸಿದ್ದರು. ಈ ವೇಳೆ ಟೌನ್ ಹಾಲ್ ಬಳಿ ಕರ್ತವ್ಯಕ್ಕೆ ಎಸ್ ಜೆ ಪಾರ್ಕ್ ಠಾಣೆ …
Read More »ಬಿಜೆಪಿ ಗೆಲ್ಲಿಸಲು ಜೆಡಿಎಸ್‌ನಿಂದ ಮುಸ್ಲಿಂ ಅಭ್ಯರ್ಥಿ: ಸಿದ್ದರಾಮಯ್ಯ
ಬೆಂಗಳೂರು: ‘ಬಿಜೆಪಿಗೆ ಅನುಕೂಲ ಮಾಡಲು ಜೆಡಿಎಸ್‌ನವರು ಉತ್ತರ ಕರ್ನಾಟಕ ಭಾಗದಲ್ಲಿ ಮುಸ್ಲಿಂ ಅಭ್ಯರ್ಥಿ ಹಾಕುತ್ತಾರೆ’ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು. ‘ಜೆಡಿಎಸ್‌ನವರು ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಕಾಂಗ್ರೆಸ್ ಸೋಲಿಸುವ ಕೆಲಸ ಮಾಡುತ್ತಿದ್ದಾರೆ. ಬಸವಕಲ್ಯಾಣದಲ್ಲಿ ಅದನ್ನೇ ಮಾಡಿದ್ದರು. ಮುಸ್ಲಿಮರ ಬಗ್ಗೆ ಕಾಳಜಿ ಇದ್ದರೆ ಸಂಪುಟದಲ್ಲಿ ಯಾಕೆ ಯಾರಿಗೂ ಅವಕಾಶ ಕೊಟ್ಟಿರಲಿಲ್ಲ. ಮಂಡ್ಯ, ಮೈಸೂರಿನಲ್ಲಿ ಅಲ್ಪಸಂಖ್ಯಾತರಿಗೆ ಯಾಕೆ ಟಿಕೆಟ್ ಕೊಡಲ್ಲ ‘ ಎಂದು ಪ್ರಶ್ನಿಸಿದರು. ‘ಹಾನಗಲ್‌ನಲ್ಲಿ ಮನೋಹರ ತಹಶೀಲ್ದಾರ್ ಮತ್ತು …
Read More »ಭೂಸ್ವಾಧೀನಕ್ಕೆ ವಿರೋಧ; ಗಾಂಧಿ ವೇಷ ಧರಿಸಿ ಬೀದಿಗಿಳಿದ ಅನ್ನದಾತ; ಪ್ರತಿಭಟನಾ ನಿರತ ರೈತರನ್ನು ವಶಕ್ಕೆ ಪಡೆದ ಪೊಲೀಸರು
ಬೆಂಗಳೂರು: ಶಿವರಾಮ್ ಕಾರಂತ ಬಡಾವಣೆ ನಿರ್ಮಾಣಕ್ಕಾಗಿ ಬಿಡಿಎ ರೈತರ ಭೂಮಿ ಸ್ವಾಧೀನ ಪಡಿಸಿಕೊಳ್ಳುತ್ತಿರುವುದಕ್ಕೆ ರೈತರು ಪ್ರತಿಭಟನೆ ನಡೆಸುತ್ತಿದ್ದು, ಗಾಂಧಿ ವೇಷ ಧರಿಸಿ ವಿನೂತನ ಧರಣಿ ನಡೆಸುವ ಮೂಲಕ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಯಲಹಂಕ ತಾಲೂಕಿನ 17 ಗ್ರಾಮಗಳ ರೈತರು ಬಿಡಿಎ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದು, ಗಾಂಧಿ ಜಯಂತಿ ಹಿನ್ನೆಲೆಯಲ್ಲಿ ಬಿಳಿ ಪಂಚೆ, ಶಾಲು, ಟೋಪಿ ಮತ್ತು ಕೋಲು ಹಿಡಿದು ಗಾಂಧಿ ವೇಷ ಧರಿಸಿ ಪ್ರತಿಭಟನೆ ನಡೆಸಿದ್ದಾರೆ. ಶಿವರಾಮ ಕಾರಂತ ಬಡಾವಣೆಗಾಗಿ ಬಿಡಿಎ …
Read More »ಗ್ರಾಮೀಣ ಜನತೆಗೆ ಮತ್ತೊಂದು ಭರ್ಜರಿ ಗುಡ್ ನ್ಯೂಸ್: ಸಮೀಪದಲ್ಲೇ ಸರ್ಕಾರಿ ಸೇವೆ ಒದಗಿಸಲು ಗ್ರಾಪಂಗಳಲ್ಲಿ ನಾಗರಿಕ ಸೇವಾ ಕೇಂದ್ರ ಸ್ಥಾಪನೆ
ಬೆಂಗಳೂರು: ರಾಜ್ಯದ ಗ್ರಾಮೀಣ ಜನರಿಗೆ ಮತ್ತೊಂದು ಸಿಹಿ ಸುದ್ದಿ ಸಿಕ್ಕಿದೆ. ಗ್ರಾಮ ಪಂಚಾಯಿತಿಗೆ ಒಂದು ನಾಗರಿಕ ಸೇವಾ ಕೇಂದ್ರಗಳನ್ನು ಸ್ಥಾಪನೆ ಮಾಡಲಾಗುವುದು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು, ಜನರಿಗೆ ಅಗತ್ಯವಿರುವ ಸರ್ಕಾರಿ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ರಾಜ್ಯದ ಪ್ರತಿ ಗ್ರಾಮ ಪಂಚಾಯಿತಿಗಳಲ್ಲಿ ನಾಗರಿಕ ಸೇವಾ ಕೇಂದ್ರ ಆರಂಭಿಸುವಂತೆ ಇ -ಆಡಳಿತ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಇ ಆಡಳಿತ ಇಲಾಖೆಯ ಪ್ರಗತಿ ಪರಿಶೀಲನೆ ನಡೆಸಿದ ಸಿಎಂ, ಎಲ್ಲಾ ಗ್ರಾಮ ಪಂಚಾಯಿತಿಗಳ …
Read More »ಹಾನಗಲ್ ಉಪಚುನಾವಣೆ: ರೇಸ್ನಲ್ಲಿ 11 ಮಂದಿ.. ಇಕ್ಕಟ್ಟಿನಲ್ಲಿ ಬಿಜೆಪಿ ಹೈಕಮಾಂಡ್..!
ಬೆಂಗಳೂರು: ರಾಜ್ಯದಲ್ಲಿ ಎರಡು ಕ್ಷೇತ್ರಗಳಿಗೆ ಉಪಚುನಾವಣೆ ಘೋಷಣೆಯಾಗುತ್ತಿದ್ದಂತೆ ಟಿಕೆಟ್ಗಾಗಿ ಅಭ್ಯರ್ಥಿಗಳ ಲಾಭಿ ಜೋರಾಗಿದೆ. ಈಗಾಗಲೇ ಹಾನಗಲ್‌ನಲ್ಲಿ ಮೂರು ಪಕ್ಷಗಳ ಪೈಕಿ ಕಾಂಗ್ರೆಸ್ ಹಾಗೂ ಜೆಡಿಎಸ್ ತಮ್ಮ ಅಭ್ಯರ್ಥಿಯನ್ನು ಘೋಷಣೆ ಮಾಡಿವೆ. ಸದ್ಯ ಉಳಿದ ಬಿಜೆಪಿಯಲ್ಲಿ ಅಭ್ಯರ್ಥಿ ಆಯ್ಕೆಯ ಸಲುವಾಗಿ ಕಸರತ್ತು ಶುರುವಾಗಿದೆ. ಬಿಜೆಪಿ ಟಿಕೆಟ್ ರೇಸ್ನಲ್ಲಿ ಬರೊಬ್ಬರಿ 11 ಮಂದಿ ದೆಹಲಿಯಲ್ಲಿ ಹೈಕಮಾಂಡ್ನಿಂದ ಅಭ್ಯರ್ಥಿ ಆಯ್ಕೆ ಸದ್ಯ ಬಿಜೆಪಿಯಲ್ಲಿ ಅಭ್ಯರ್ಥಿಯ ಆಯ್ಕೆ ದೊಡ್ಡ ತಲೆನೋವಾಗಿದ್ದು, ಬರೋಬ್ಬರಿ 11 ಮಂದಿ ಟಿಕೆಟ್ …
Read More »ನಟ ವಿವೇಕ್‍ಗೆ ಉರುಳಾಗುತ್ತಾ ಸೌಜನ್ಯ ಜೊತೆಗಿನ ಲವ್?
ಬೆಂಗಳೂರು: ಕಿರುತೆರೆ ನಟಿ ಸೌಜನ್ಯ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಚುರುಕುಗೊಳಿಸಿದ್ದು, ನಟ ವಿವೇಕ್‍ನನ್ನು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ. ಶುಕ್ರವಾರ ವಿಚಾರಣೆ ನಡೆಸಿದ್ದಲ್ಲದೆ ಇಂದು ಮತ್ತೆ ಹಾಜರಾಗುವಂತೆ ಸೂಚಿಸಿದ್ದಾರೆ. ಹೀಗಾಗಿ ಸೌಜನ್ಯ ಜೊತೆಗಿನ ಲವ್ ವಿವೇಕ್‍ಗೆ ಮುಳುವಾಗುತ್ತಾ ಎಂಬ ಪ್ರಶ್ನೆ ಇದೀಗ ಕಾಡುತ್ತಿದೆ. ನಟಿ ಸೌಜನ್ಯ ಹಾಗೂ ಕಿರುತೆರೆ ನಟ ವಿವೇಕ್ ನಡುವೆ ಇದ್ದ ಲವ್ ವಿವೇಕ್‍ನನ್ನು ಇಕ್ಕಟ್ಟಿಗೆ ಸಿಲುಕಿಸುತ್ತಾ ಎಂಬ ಪ್ರಶ್ನೆ ಕಾಡುತ್ತಿದ್ದು, ಈ ಕುರಿತು ಪೊಲೀಸರು …
Read More »