ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ರೇಸ್ ವೀವ್ ಕಾಟೇಜ್ ನಿವಾಸದಲ್ಲಿ ನಿನ್ನೆ ರಾತ್ರಿ ಭೋಜನ ಕೂಟ ಏರ್ಪಡಿಸಲಾಗಿತ್ತು. ಈ ವೇಳೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ, ಕಾಂಗ್ರೆಸ್ ನಮ್ಮ ಶಾಸಕರನ್ನು ಸೆಳೆಯಲು ಗಾಳ ಹಾಕಿದೆ ಎಚ್ಚರದಿಂದಿರಿ. ಯಾರೂ ಕಾಂಗ್ರೆಸ್ ಪ್ರಲೋಭನೆಗೆ ಒಳಗಾಗುವುದು ಬೇಡ ಎಂದು ಕಿವಿಮಾತು ನೀಡಿದ್ದಾರೆ. ಶಾಸಕರೊಂದಿಗೆ ಚರ್ಚಿಸಿದ ಬಿಎಸ್‍ವೈ, ಯಾರಾದರೂ ಕಾಂಗ್ರೆಸ್ ನಾಯಕರು ನಮ್ಮ ಶಾಸಕರ ಸಂಪರ್ಕಿಸಿದರೆ ನಾಯಕರ ಗಮನಕ್ಕೆ ತನ್ನಿ. ಶಾಸಕರ ಬೇಕು ಬೇಡಗಳನ್ನು ಈಡೇರಿಸಲು …
Read More »ಕಣ್ಣೀರಿಡುತ್ತಾ ಸದನದಿಂದ ಹೊರ ಬಂದ ಅಂಜಲಿ ನಿಂಬಾಳ್ಕರ್
ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಇತ್ತೀಚೆಗೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ವಿಚಾರ ಪ್ರತಿಧ್ವನಿಸಿತು. ಈ ವಿಚಾರವಾಗಿ ಮಾತನಾಡಿದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್ ಭಾವುಕರಾದ ಸನ್ನಿವೇಶಕ್ಕೆ ಸದನದ ಸದಸ್ಯರು ಸಾಕ್ಷಿಯಾದರು. ರೇಪ್ ಪ್ರಕರಣದ ಚರ್ಚೆ ವೇಳೆ ಕಣ್ಣೀರಿಡುತ್ತಾ ಸದನದಿಂದ ಹೊರ ಬಂದ ಅಂಜಲಿ ನಿಂಬಾಳ್ಕರ್ ಗ್ಯಾಂಗ್ ರೇಪ್ ಕುರಿತ ಚರ್ಚೆಯಲ್ಲಿ ಭಾಗವಹಿಸಿ ಶಾಸಕಿ ರೂಪ ಶಶಿಧರ್ ಮಾತನಾಡುವಾಗ.. ಕಣ್ಣೀರಿಡುತ್ತಾ ಸದನದಿಂದ ಮೊಗಸಾಲೆಗೆ ಹೋದ ಅಂಜಲಿ ನಿಂಬಾಳ್ಕರ್ ನಂತರ ಕಣ್ಣೀರು ಒರೆಸಿಕೊಂಡು, …
Read More »ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಸಿಗಲ್ಲ, ಆರೋಗ್ಯ ಇಲಾಖೆ ಸಿಬ್ಬಂದಿಗೆ ಭಾನುವಾರ ರಜೆ ದಿನ
ಬೆಂಗಳೂರು: ರಾಜ್ಯದಲ್ಲಿ ಇನ್ಮುಂದೆ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮುಂದಾಗಿದೆ. ಇಡೀ ದೇಶವನ್ನು ಕೊರೊನಾ ಮುಕ್ತ ಮಾಡಲು ಮಕ್ಕಳು ಹೊರೆತು ಪಡಿಸಿ ಪ್ರತಿಯೊಬ್ಬರಿಗೂ ಕೊರೊನಾ ಲಸಿಕೆಯನ್ನು ಹಾಕಲಾಗುತ್ತಿತ್ತು. ವಾರದ 7 ದಿನವೂ ಲಸಿಕೆ ಹಾಕುವ ಅಭಿಯಾನ ನಡೆಯುತ್ತಿತ್ತು. ಆದ್ರೆ ಈಗ ಭಾನುವಾರ ಕೊರೊನಾ ಲಸಿಕೆ ಹಾಕದಿರಲು ಆರೋಗ್ಯ ಇಲಾಖೆ ಮುಂದಾಗಿದೆ. ಯಾವುದೇ ರಜೆ ಇಲ್ಲದೇ, ನಿರಂತರವಾಗಿ ಆರೋಗ್ಯ ಸಿಬ್ಬಂದಿ ಕೆಲಸ ಮಾಡ್ತಾ ಇದ್ದರು. …
Read More »ಬೆಂಕಿ ಅವಘಡ: ಪ್ರಾಣ ಉಳಿಸುವಂತೆ ಅಳಿಯನ ಬಳಿ ಅಂಗಲಾಚಿದ್ದ ಮೃತ ಮಹಿಳೆ
ಬೆಂಗಳೂರು: ‘ಕೊಠಡಿಯಲ್ಲಿ ಬೆಂಕಿ ಬಿದ್ದಿದೆ. ಬೇಗ ಬಂದು ಕಾಪಾಡಪ್ಪ. ಬೇಗ ಬಾ…’ ದೇವರಚಿಕ್ಕನಹಳ್ಳಿಯ ವಸತಿ ಸಮುಚ್ಚಯದಲ್ಲಿ ಮಂಗಳವಾರ ಸಂಭವಿಸಿದ್ದ ಅಗ್ನಿ ದುರಂತದಲ್ಲಿ ಸಜೀವ ದಹನವಾದ ಭಾಗ್ಯರೇಖಾ ಅವರು ತಮ್ಮ ಅಳಿಯ ಸಂದೀಪ್ ಬಳಿ ರಕ್ಷಣೆಗಾಗಿ ಅಂಗಲಾಚಿದ್ದ ಪರಿ ಇದು. ಸಂದೀಪ್-ಪ್ರೀತಿ ದಂಪತಿ ಪ್ರೀತಿಯ ಅವರ ತಾಯಿ ಭಾಗ್ಯರೇಖಾ ವಾಸವಿದ್ದ ಫ್ಲ್ಯಾಟ್‌ನ ಪಕ್ಕದಲ್ಲೇ (ಫ್ಲ್ಯಾಟ್ ನಂಬರ್ 211) ನೆಲೆಸಿದ್ದರು. ಅತ್ತೆ ಕರೆ ಮಾಡಿ ಹೇಳಿದ ಬಳಿಕವಷ್ಟೇ ಸಂದೀಪ್‌ಗೆ ಅಗ್ನಿ ಅವಘಡದ ವಿಷಯ …
Read More »ಕೊಡಗು, ಮಲೆನಾಡಿನಲ್ಲಿ ಇನ್ನೂ 3 ದಿನ ಮಳೆ ಹೆಚ್ಚಳ; ಹಲವೆಡೆ ಇಂದು ಹಳದಿ ಅಲರ್ಟ್ ಘೋಷಣೆ
ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಇನ್ನೂ ನಿಂತಿಲ್ಲ. ಸುಮಾರು 10 ದಿನಗಳಿಂದ ರಾಜ್ಯಾದ್ಯಂತ ಮಳೆ ಹೆಚ್ಚಾಗಿದ್ದು, ಇಂದಿನಿಂದ 3 ದಿನ ಮಳೆ ಸುರಿಯಲಿದೆ. ಇಂದು ಮತ್ತು ನಾಳೆ ಕರಾವಳಿ ಜಿಲ್ಲೆಗಳು, ಮಲೆನಾಡು ಹಾಗೂ ಕೊಡಗಿನಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. ಸೆ. 25ರಂದು ಕರ್ನಾಟಕದ ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಮಳೆ ಜಾಸ್ತಿಯಾಗಲಿದೆ. ಕರಾವಳಿ ಜಿಲ್ಲೆಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡದಲ್ಲಿ ಸೆ. 26ರವರೆಗೂ ಮಳೆ …
Read More »ಅಕ್ರಮವಾಗಿ ನಿರ್ಮಿಸಿರುವಂತ ಮಸೀದಿಗಳ ತೆರವಿಗೆ ಹೈಕೋರ್ಟ್ ಆದೇಶ
ಬೆಂಗಳೂರು: ಅಕ್ರಮವಾಗಿ ನಿರ್ಮಿಸಿರುವಂತ ಮಸೀದಿಗಳ ತೆರವಿಗೆ ಹೈಕೋರ್ಟ್ ಆದೇಶ ಹೊರಡಿಸಿದೆ. ಈ ಕುರಿತಂತೆ ಇಂದು ಹೈಕೋರ್ಟ್ ಗೆ ಸಲ್ಲಿಕೆಯಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಪೀಠವು, ನಗರದ ಹೆಚ್ ಬಿ ಆರ್ ಲೇಔಟ್ ನಲ್ಲಿ ಮಸೀದಿ ನಿರ್ಮಾಣಕ್ಕೆ ಬಿಬಿಎಂಪಿಯಿಂದ ಅನುಮತಿ ಪಡೆಯದೇ ಇದ್ದರ ಕುರಿತಂತೆ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ಬಿಬಿಎಂಪಿಯಿಂದ ನಿರ್ಮಾಣಕ್ಕೆ ಅನುಮತಿ, ನಕ್ಷೆ ಕೂಡ ಪಡೆಯದೇ ನಿರ್ಮಿಸುತ್ತಿದ್ದಂತ ನಿರ್ಮಾಣ ಹಂತದ ಮಸೀದಿ ತೆರವಿಗೆ ಕೋರ್ಟ್ ಬಿಬಿಎಂಪಿಗೆ ನಿರ್ದೇಶಿಸಿದೆ. ಅಂದಹಾಗೇ …
Read More »ಭವಾನಿಪುರ ಉಪ ಚುನಾವಣೆ : ದೀದಿ ಗೆಲ್ಲೋದು ಖಚಿತ ಎಂದ ಕುಮಾರಸ್ವಾಮಿ
ಬೆಂಗಳೂರು : ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಸಮೀಪಿಸಿದ್ದು, ಇದೇ ಸೆಪ್ಟಂಬರ್ 30ರಂದು ಚುನುವಾಣೆ ನಿಗದಿಯಾಗಿದೆ. ಮತದಾನ ಅಕ್ಟೋಬರ್ 3ರರವರೆಗೆ ನಡೆಯಲಿದೆ. ಮಮತಾ ಬ್ಯಾನರ್ಜಿ ಸ್ಪರ್ಧೆ ನಡೆಸಿದ್ದು, ತಾವು ಮುಖ್ಯಮಂತ್ರಿಯಾಗಿ ಉಳಿಯಲು ಈ ಚುನಾವಣೆಯನ್ನು ಗೆಲ್ಲಲೇ ಬೇಕಾದ ಅನಿವಾರ್ಯತೆ ಎದುರಾಗಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಕರ್ನಾಟಕ ಮಾಜಿ ಸಿಎಂ ಕುಮಾರಸ್ವಾಮಿ, ಇಡೀ ಭಾರತದ ಗಮನ ಸೆಳೆದಿರುವ ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭಾ ಕ್ಷೇತ್ರದ ಉಪ …
Read More »ಅಪಾರ್ಟ್ಮೆಂಟ್ನಲ್ಲಿ ಅಗ್ನಿ ದುರಂತ: ಸಿಲಿಂಡರ್ ಬಳಸುವಾಗ ಜನ ಮಾಡುವ ತಪ್ಪುಗಳೇನು..?
ಬೆಂಗಳೂರು: ಬೇಗೂರು ಠಾಣಾ ವ್ಯಾಪ್ತಿಯ ಅಶ್ರೀತ್ ಅಪಾರ್ಟ್ಮೆಂಟ್ನಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ ಇಡೀ ಸಿಲಿಕಾನ್ ಸಿಟಿ ಜನರನ್ನೇ ಶಾಕ್ಗೆ ಒಳಗಾಗುವಂತೆ ಮಾಡಿದೆ. ನಿನ್ನೆ ಮಧ್ಯಾಹ್ನ ದೇವರ ಚಿಕ್ಕನಹಳ್ಳಿಯ ಅಶ್ರೀತ್ ಅಪಾರ್ಟ್ಮೆಂಟ್ನ ಮೂರನೇ ಮಹಡಿಯಲ್ಲಿ ಸಂಭವಿಸಿರೋ ಫೈರ್ ಆಕ್ಸಿಡೆಂಟ್ನಲ್ಲಿ ಇಬ್ಬರು ಮೃತಪಟ್ಟಿದ್ದಾರೆ.. ಲಕ್ಷ್ಮಿದೇವಿ ಅನ್ನೋ 82 ವರ್ಷದ ವೃದ್ಧೆ ಹಾಗೂ 51 ವರ್ಷದ ಭಾಗ್ಯ ರೇಖಾ ಅನ್ನೋ ಮಹಿಳೆ ಸಾವನ್ನಪ್ಪಿದ್ದಾರೆ. ಅಷ್ಟಕ್ಕೂ ಭೀಕರ ದುರಂತಕ್ಕೆ ಕಾರಣವೇನು? ಅಪಾರ್ಟ್ಮೆಂಟ್ನಲ್ಲಿ ಸೇಫ್ಟಿ ಮೆಸರ್ಸ್ ಇರಲಿಲ್ವಾ? …
Read More »ಗೌರಿ ಲಂಕೇಶ್ ಹತ್ಯೆ, ಮೇಲ್ಮನವಿ ತೀರ್ಪು ಕಾಯ್ದಿರಿಕೆ
ಬೆಂಗಳೂರು: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಮಾಡಿದ್ದ ಆರೋಪಿಗಳಿಗೆ ಆಶ್ರಯ ನೀಡಿದ್ದ ಆರೋಪಿಯ ವಿರುದ್ದ ಸಂಘಟಿತ ಅಪರಾಧ ಪ್ರಕರಣವನ್ನು ಕೈಬಿಟ್ಟಿದ್ದನ್ನು ಪ್ರಶ್ನಿಸಿ ಗೌರಿ ಸಹೋದರಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ ತೀರ್ಪನ್ನು ಮಂಗಳವಾರ ಸುಪ್ರೀಂ ಕೋರ್ಟ್ ಕಾಯ್ದಿರಿಸಿದೆ. ಕರ್ನಾಟಕ ಸಂಘಟಿತ ಅಪರಾಧಗಳ ನಿಯಂತ್ರಣ ಕಾಯಿದೆ (ಕೋಕಾ) 2000ರ ಅಡಿ ಆರೋಪಿ ಮೋಹನ್ ನಾಯಕ್ ವಿರುದ್ಧ ದಾಖಲಿಸಿದ್ದ ಆರೋಪಗಳನ್ನು ಕೈಬಿಟ್ಟಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಕವಿತಾ ಲಂಕೇಶ್ ಸಲ್ಲಿಸಿದ್ದ ಮೇಲ್ಮನವಿಯ …
Read More »ಬೆಂಗಳೂರು ಬಸ್‌ನಲ್ಲಿ ಗೀತ ಗೋವಿಂದಂ ಸಿನಿಮಾ ಸ್ಟೈಲ್‌ನಲ್ಲಿ ಹುಡುಗಿಗೆ ಮುತ್ತು ಕೊಟ್ಟಿದ್ದ ಬಳ್ಳಾರಿಯ ಇಂಜಿನಿಯರ್ ಬಂಧನ
ಬೆಂಗಳೂರು: ಸಿನಿಮಾ ಸ್ಟೈಲ್‌ನಲ್ಲಿ ಬಸ್‌ನಲ್ಲಿ ಯುವತಿಗೆ ಕಿಸ್ ಕೊಟ್ಟ ಪ್ರಕರಣಕ್ಕೆ ಸಂಬಂಧಪಟ್ಟಂತೆ, ಯುವತಿಗೆ ಕಿಸ್ ಕೊಟ್ಟಿದ್ದ ಯುವಕನನ್ನು ಬಂಧಿಸಲಾಗಿದೆ. ಬಳ್ಳಾರಿ ಮೂಲದ ಇಂಜಿನಿಯರ್ ಮಧುಸೂದನ್ ರೆಡ್ಡಿ(25)ಯನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಗೀತ ಗೋವಿಂದಂ ಸಿನಿಮಾದಲ್ಲಿ ರಶ್ಮಿಕಾ ಮಂದಣ್ಣಗೆ ವಿಜಯ್ ದೇವರಕೊಂಡ ಚಲಿಸುತ್ತಿರುವ ಬಸ್ಸಲ್ಲಿ ಮುತ್ತು ಕೊಡುತ್ತಾರೆ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿತ್ತು. ಸಿನಿಮಾ ವೀಕ್ಷಿಸಿ ಪ್ರೇರಣೆಗೊಂಡ ಯುವಕನೋರ್ವ ಚಲಿಸುತ್ತಿದ್ದ ಬಸ್ಸಲ್ಲಿಯೇ ಯುವತಿಗೆ ಗೀತ ಗೋವಿಂದಂ ಸಿನಿಮಾದ ದೃಶ್ಯದ ರೀತಿಯಲ್ಲೇ ಮುತ್ತು …
Read More »