Breaking News

ಬೆಂಗಳೂರು

ನೀಟ್‌ ಸೀಟು: ದಲ್ಲಾಳಿಗಳ ಮೋಸಕ್ಕೆ ಬಲಿಯಾಗಬೇಡಿ- ಸಚಿವ ಡಾ. ಶರಣಪ್ರಕಾಶ್‌ ಪಾಟೀಲ್‌

ಬೆಂಗಳೂರು : ವೈದ್ಯರಾಗಬೇಕೆಂಬ ಭವ್ಯ ಭವಿಷ್ಯದ ಕನಸು ಹೊತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ ಬರೆದಿರುವ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರು ಯಾವುದೇ ಕಾರಣಕ್ಕೂ ಮಧ್ಯವರ್ತಿಗಳ ಮೋಸದ ಜಾಲಕ್ಕೆ ಬೀಳಬಾರದು ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ. ಶರಣಪ್ರಕಾಶ್ ಪಾಟೀಲ್ ಸಲಹೆ ನೀಡಿದ್ದಾರೆ. ಈ ಸಂಬಂಧ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಸಚಿವರು, ಅತ್ಯುತ್ತಮವಾಗಿ ಓದಿ, ಪರೀಕ್ಷೆ ಬರೆದಿರುವ ಆಕಾಂಕ್ಷಿಗಳು, …

Read More »

ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಬಿಜೆಪಿಯಿಂದ ಸೈಬರ್ ಠಾಣೆಗೆ ದೂರು

ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸೈಬರ್ ಪೊಲೀಸ್ ಠಾಣೆಗೆ ಬಿಜೆಪಿ ನಿಯೋಗ ದೂರು ನೀಡಿದೆ. ಟಿ.ಎಫ್.ಹಾದಿಮನಿ ಎಂಬ ವ್ಯಕ್ತಿ ದೇಶದ ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿಯವರಿಗೆ ಅವಮಾನ ಆಗುವಂತೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಾಕಿದ್ದಾರೆ. ಹಾದಿಮನಿ ಅವರ ವಿರುದ್ಧ ಕೇಸ್ ದಾಖಲಿಸಿ ಬಂಧಿಸಬೇಕು ಎಂದು ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್. ರವಿಕುಮಾರ್ ಆಗ್ರಹಿಸಿದರು. ಇಂದು …

Read More »

ಜೈಲಿನಿಂದ ಬಿಡುಗಡೆಯಾದ ದಿನವೇ ಹತ್ಯೆ

ಬೆಂಗಳೂರು: ಜೈಲಿನಿಂದ ಬಿಡುಗಡೆಯಾದವನನ್ನು ಮಾತುಕತೆಗೆಂದು ಕರೆಸಿ ಹತ್ಯೆಗೈದಿದ್ದ ಇಬ್ಬರು ಆರೋಪಿಗಳನ್ನು ಜೆ.ಜೆ‌. ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಮಾರಕಾಸ್ತ್ರಗಳನ್ನು ಬಳಸಿ ಪೊಲೀಸರ ಮೇಲೆ ಹಲ್ಲೆಗೆ ಯತ್ನಿಸಿದ್ದ ದೀಪು (28) ಹಾಗೂ ಅರುಣ್ (27) ಎಂಬ ಆರೋಪಿಗಳಿಬ್ಬರ ಕಾಲಿಗೆ ಗುಂಡು ಹಾರಿಸುವ ಮೂಲಕ ಬಂಧಿಸಲಾಗಿದೆ. ಶನಿವಾರ ರಾತ್ರಿ ಜೆ. ಜೆ. ನಗರದ ಜನತಾ ಕಾಲೋನಿಯಲ್ಲಿ ವಿಜಯ್ (26) ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಆರೋಪಿಗಳು ಕೊಲೆ ಮಾಡಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಪ್ರಕರಣದ …

Read More »

ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಶಾಕ್

ಬೆಂಗಳೂರು(ಜೂ.13): ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಗಳಿಗೆ ಕರ್ನಾಟಕ ಹೈಕೋರ್ಟ್ ಶಾಕ್ ಕೊಟ್ಟಿದೆ. ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿಗೆ ಕೋರ್ಟ್​ ನಿರಾಕರಿಸಿದೆ. ಬೆಂಗಳೂರಿನಲ್ಲಿ ಓಲಾ, ಊಬರ್, ರಾಪಿಡೋ ಬೈಕ್ ಟ್ಯಾಕ್ಸಿಯನ್ನು ಬಂದ್ ಮಾಡುವಂತೆ ಈಗಾಗಲೇ ಕರ್ನಾಟಕ ಹೈಕೋರ್ಟ್​ ಆದೇಶ ಹೊರಡಿಸಿದೆ. ಇದನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಮೇಲ್ಮವಿಯನ್ನೂ ವಿಚಾರಣೆ ನಡೆಸಿದ ಹೈಕೋರ್ಟ್, ಬೈಕ್ ಟ್ಯಾಕ್ಸಿಗಳ ಸಂಚಾರಕ್ಕೆ ಮಧ್ಯಂತರ ಅನುಮತಿ ನೀಡಲು ನಿರಾಕರಿಸಿದೆ. ಹೈಕೋರ್ಟ್‌ನ ನ್ಯಾಯಮೂರ್ತಿ ವಿ.ಕಾಮೇಶ್ವರ ರಾವ್ ಹಾಗೂ ನ್ಯಾಯಮೂರ್ತಿ ಶ್ರೀನಿವಾಸ್ …

Read More »

ರಾಜ್ಯದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ 6 ಟಾಸ್ಕ್ ಫೋರ್ಸ್: ಎಂ.ಬಿ.ಪಾಟೀಲ್

ಬೆಂಗಳೂರು: ಮುಂದಿನ ಐದು ವರ್ಷಗಳಲ್ಲಿ ರಾಜ್ಯವನ್ನು ತಯಾರಿಕಾ ವಲಯದಲ್ಲಿ ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ಸರಕಾರವು 6 ಪ್ರಮುಖ ವಲಯಗಳ ಪ್ರಗತಿಗೆ ಪ್ರತ್ಯೇಕ ಟಾಸ್ಕ್-ಫೋರ್ಸ್ ಗಳನ್ನು ರಚಿಸಲಿದೆ. ಇದಕ್ಕೆ ಬೇಕಾದ ಸಮಗ್ರ ಟೌನ್-ಶಿಪ್ ಗಳ ಅಭಿವೃದ್ಧಿಯಿಂದ ಹಿಡಿದು ಕೈಗಾರಿಕಾ ಪ್ರದೇಶಗಳಿಂದ ಮಂಗಳೂರು ಮತ್ತು ಚೆನ್ನೈ ಬಂದರುಗಳಿಗೆ ಬೇಕಾದ ಸಮರ್ಪಕ ಸಂಪರ್ಕದವರೆಗೆ ಪ್ರತಿಯೊಂದು ಸೌಲಭ್ಯಗಳನ್ನೂ ಒದಗಿಸಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ರಾಜ್ಯದಲ್ಲಿ ತಯಾರಿಕಾ ವಲಯದ ಬಲವರ್ಧನೆಗೆ ಆಗಬೇಕಾದ …

Read More »

ವೃದ್ಧ ದಂಪತಿಗೆ ಮೂರು ತಿಂಗಳು ಡಿಜಿಟಲ್ ಅರೆಸ್ಟ್

ಬೆಂಗಳೂರು : ವೃದ್ಧ ದಂಪತಿಗೆ ಡಿಜಿಟಲ್ ಅರೆಸ್ಟ್ ಮೂಲಕ ವಂಚಿಸಿದ್ದ ಇಬ್ಬರು ಆರೋಪಿಗಳನ್ನು ಬೆಂಗಳೂರು ಆಗ್ನೇಯ ವಿಭಾಗದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ನಾರಾಯಣ್ ಸಿಂಗ್ ಚೌಧರಿ ಹಾಗೂ ಈಶ್ವರ್ ಸಿಂಗ್ ಬಂಧಿತ ಆರೋಪಿಗಳು. ಮಂಜುನಾಥ್ ಎಂಬುವರು ನೀಡಿದ ದೂರಿನನ್ವಯ ತನಿಖೆ ಕೈಗೊಂಡಿದ್ದ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿರುವುದಾಗಿ ತಿಳಿಸಿದ್ದಾರೆ. ಇಂಜಿನಿಯರ್ ಆಗಿದ್ದ ಮಂಜುನಾಥ್ 31 ವರ್ಷಗಳ ಕಾಲ ನೈಜೀರಿಯಾದಲ್ಲಿ ಕೆಲಸ ನಿರ್ವಹಿಸಿ, ನಿವೃತ್ತಿಯ ಬಳಿಕ ಬೆಂಗಳೂರಿನಲ್ಲಿ ವಾಸವಾಗಿದ್ದಾರೆ. ಬ್ಯಾಂಕ್‌ನ ಪ್ರತಿನಿಧಿಗಳ …

Read More »

ವಿರಾಟ್ ಕೊಹ್ಲಿ ವಿರುದ್ಧ ಪೊಲೀಸರಿಗೆ ದೂರು –

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡ ಐಪಿಎಲ್​ ಕಪ್​ ಗೆದ್ದ ಹಿನ್ನೆಲೆಯಲ್ಲಿ ನಡೆದ ಸಂಭ್ರಮಾಚರಣೆ ವೇಳೆ ಸಂಭವಿಸಿದ ಕಾಲ್ತುಳಿತ ದುರಂತ ಸಂಬಂಧ ಆರ್‌ಸಿಬಿ ಆಟಗಾರ ವಿರಾಟ್ ಕೊಹ್ಲಿ ವಿರುದ್ಧ ಪೊಲೀಸರಿಗೆ ದೂರು ನೀಡಲಾಗಿದೆ. ಘಟನೆ ಸಂಬಂಧ ಕೊಹ್ಲಿ ವಿರುದ್ಧವೂ ಪ್ರಕರಣ ದಾಖಲಿಸುವಂತೆ ಆಗ್ರಹಿಸಿ, ನೈಜ ಹೋರಾಟಗಾರರ ವೇದಿಕೆ ಪದಾಧಿಕಾರಿಗಳು ಕಬ್ಬನ್‌ ಪಾರ್ಕ್ ಪೊಲೀಸ್​ ಠಾಣೆಗೆ ಶುಕ್ರವಾರ ದೂರು ಕೊಟ್ಟಿದ್ದಾರೆ. ಈ ಸಂಬಂಧ ಪೊಲೀಸರು ದೂರಿನ ಪ್ರತಿ ಪಡೆದು, ಹಿಂಬರಹ ನೀಡಿದ್ದಾರೆ. ಕಾಲ್ತುಳಿತದ …

Read More »

ಸಂಭಾವನೆ ಪಡೆಯದೇ ರಾಯಭಾರಿಯಾಗಲು ಅನಿಲ್ ಕುಂಬ್ಳೆ ಸಮ್ಮತಿ

ಬೆಂಗಳೂರು: ವನ್ಯಜೀವಿ, ಅರಣ್ಯ ಸಂರಕ್ಷಣೆ ಮತ್ತು ಸಂವರ್ಧನೆಗೆ ಈಗ ಅನಿಲ್ ಕುಂಬ್ಳೆ ಬಲ ದೊರೆತಿದೆ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಇಂದು ತಮ್ಮನ್ನು ಭೇಟಿ ಮಾಡಿದ ಖ್ಯಾತ ಮಾಜಿ ಕ್ರಿಕೆಟಿಗ ಹಾಗೂ ಪರಿಸರ ಪ್ರೇಮಿ ಅನಿಲ್ ಕುಂಬ್ಳೆ ಅವರೊಂದಿಗೆ ಸಚಿವರು ಸಮಾಲೋಚಿಸಿದರು. ವನ್ಯಜೀವಿ, ಅರಣ್ಯ, ಪರಿಸರದ ಬಗ್ಗೆ ಅಪಾರ ಕಾಳಜಿ ಮತ್ತು ಪ್ರೀತಿ ಹೊಂದಿರುವ ಅನಿಲ್ ಕುಂಬ್ಳೆ ಅವರು ಯಾವುದೇ ಸಂಭಾವನೆ ಇಲ್ಲದೆ ಅರಣ್ಯ, ವನ್ಯಜೀವಿ ರಾಯಭಾರಿ …

Read More »

ವಿರಾಟ್ ಕೊಹ್ಲಿ ಮಾಲೀಕತ್ವದ ಪಬ್ ಮೇಲೆ ಪ್ರಕರಣ ದಾಖಲ

ಬೆಂಗಳೂರು, ಜೂನ್ 2: ಟೀಮ್ ಇಂಡಿಯಾ (Team India) ಕ್ರಿಕೆಟಿಗ, ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ಪ್ರಮುಖ ಬ್ಯಾಟರ್ ವಿರಾಟ್ ಕೊಹ್ಲಿ (Virat Kohli) ಮಾಲೀಕತ್ವದ ಪಬ್ ವಿರುದ್ಧ ಬೆಂಗಳೂರಿನಲ್ಲಿ ಎಫ್​ಐಆರ್ ದಾಖಲಾಗಿದೆ. ನಿಯಮಗಳನ್ನು ಉಲ್ಲಂಘಿಸಿ ಕಾರ್ಯನಿರ್ವಹಿಸಿದ್ದ ಆರೋಪದಲ್ಲಿ ಬೆಂಗಳೂರಿನ ಕಸ್ತೂರ್ ಬಾ ರಸ್ತೆಯಲ್ಲಿರುವ ‘ದ ಒನ್ 8 ಕಮ್ಯೂನ್’ ಪಬ್ ವಿರುದ್ಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​ ದಾಖಲಾಗಿದೆ. ಸಿಗರೇಟ್ ಮತ್ತು ಇತರ ತಂಬಾಕು ಉತ್ಪನ್ನಗಳು (ಜಾಹೀರಾತು ನಿಷೇಧ ಮತ್ತು ವ್ಯಾಪಾರ ಮತ್ತು ವಾಣಿಜ್ಯ, ಉತ್ಪಾದನೆ, …

Read More »

ವಿಧಾನಸೌಧ ಪ್ರವಾಸ ಇಂದಿನಿಂದ ಆರಂಭ

ಬೆಂಗಳೂರು, ಜೂನ್​ 01: ರಾಜಕಾರಣಿಗಳು ಮತ್ತು ಅಧಿಕಾರಿಗಳಿಂದಲೇ ತುಂಬಿರುತ್ತಿದ್ದ ರಾಜ್ಯದ ಆಡಳಿತ ಶಕ್ತಿ ಕೇಂದ್ರ ವಿಧಾನಸೌಧದ (Vidhan Soudha) ಒಳಕ್ಕೆ ಇನ್ನು ಜನಸಾಮಾನ್ಯರು ಕೂಡ ಹೋಗಬಹುದಾಗಿದೆ. ದೂರದ ಊರಿನಿಂದ ಬೆಂಗಳೂರಿಗೆ (Bengaluru) ಬರುವ ಹಲವರಿಗೆ ವಿಧಾನಸೌಧ ನೋಡಬೇಕು ಎಂಬ ಆಸೆ ಇರುತ್ತದೆ. ಆದರೆ, ಇಷ್ಟು ದಿನಗಳ ಕಾಲ ಹೊರಗಿನಿಂದಲೇ ವಿಧಾನಸೌಧವನ್ನು ಕಣ್ತುಂಬಿಕೊಳ್ಳುತ್ತಿದ್ದರು. ಈಗ ವಿಧಾನಸೌಧದ ಒಳಗೆ ಹೋಗಬಹುದು. ಅದರೊಳಗೆಲ್ಲ ಸುತ್ತಾಡಬಹುದು. ಆ ಭವ್ಯ ಕಟ್ಟಡವನ್ನು ಮುಟ್ಟಬಹುದು. ಹೌದು, ಭವ್ಯ ವಿಧಾನಸೌಧ ವೀಕ್ಷಣೆಗೆ ರಾಜ್ಯ …

Read More »