ಬೆಂಗಳೂರು: ಕೋವಿಡ್ 19 ಸೋಂಕು ನಿಯಂತ್ರಣದಲ್ಲಿದೆ. ಮುಂದೆಯೂ ಕೋವಿಡ್ ನಿಯಂತ್ರಣಕ್ಕೆ ಜನ ಸಹಕರಿಸಬೇಕು. ಮಾರುಕಟ್ಟೆಗಳಲ್ಲಿ ಜನಸಂದಣಿ ಆಗದಂತೆ ಜನರು ಸ್ವಯಂನಿಯಂತ್ರಣ ಹಾಕಿಕೊಳ್ಳಬೇಕು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿ, ಹಬ್ಬದ ಸಂಭ್ರಮದಲ್ಲಿ ಜನತೆ ಮೈಮರೆಯಬೇಡಿ. ಕೋವಿಡ್ ನಿಯಮಗಳನ್ನು ಪಾಲಿಸಿ. ಜನ ಸೇರುವುದು ಬೇಡ ಎಂದರು. ಕೋವಿಡ್ ನಿಯಮ ಪಾಲಿಸಿ ಹಬ್ಬ ಆಚರಿಸಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಜನತೆಯಲ್ಲಿ ಮನವಿ ಮಾಡಿದರು. ಭಾರತದಲ್ಲಿ ಕಳೆದ 24ಗಂಟೆಗಳಲ್ಲಿ 36,571 …
Read More »ಗಡಿ ಕಣ್ಗಾವಲು ವಿಸ್ತರಿಸಿ ಸರಕಾರ ಆದೇಶ
ಬೆಂಗಳೂರು – ಕೊರೋನಾ ಹಿನ್ನೆಲೆಯಲ್ಲಿ ರಾಜ್ಯದ ಗಡಿ ಪ್ರದೇಶಗಳಲ್ಲಿ ಹಾಕಲಾಗಿರುವ ಕಣ್ಗಾವಲನ್ನು ಆಗಸ್ಟ್ 30ರ ವರೆಗೂ ವಿಸ್ತರಿಸಿದ ಸರಕಾರ ಆದೇಶ ಹೊರಡಿಸಿದೆ. ಕರ್ನಾಟಕ -ಮಹಾರಾಷ್ಟ್ರ, ಕರ್ನಾಟಕ – ಕೇರಳ ಗಡಿ ಪ್ರದೇಶಗಳಲ್ಲಿ ಕಟ್ಟುನಿಟ್ಟಿನ ಕಣ್ಗಾವಲು ಹಾಕಿ ಈ ಹಿಂದೆ ಜುಲೈ 3ರಂದು ಆದೇಶ ಹೊರಡಿಸಲಾಗಿತ್ತು. ಇದೀಗ ಈ ಆದೇಶವನ್ನು ಆಗಸ್ಟ್ 30ರ ವರೆಗೆ ವಿಸ್ತರಿಸಲಾಗಿದೆ.
Read More »ಹಬ್ಬಕ್ಕೆ ಸಂಬಳವಿಲ್ಲದೆ ಸಂಕಷ್ಟಕ್ಕೆ ಸಿಲುಕಿದ ಸಾರಿಗೆ ನೌಕರರು
ಬೆಂಗಳೂರು: ರಾಜ್ಯಾದ್ಯಂತ ವರಮಹಾಲಕ್ಷ್ಮಿ ಹಬ್ಬ ಆಚರಣೆಗೆ ಜನ ಸಂಭ್ರಮ ಸಡಗರದಿಂದ ಸಜ್ಜಾಗುತ್ತಿದ್ದರೆ, ಈ ಹೊತ್ತಿನಲ್ಲಿ ಸಾರಿಗೆ ನಿಗಮಗಳ ನೌಕರರು ವೇತನ ಇಲ್ಲದೆ ಹಬ್ಬ ಹೇಗಪ್ಪಾ ಮಾಡೋದು ಎಂಬ ಚಿಂತೆಯಲ್ಲಿದ್ದಾರೆ. ಕೊರೋನಾದಿಂದ ತೀವ್ರ ಸಂಕಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳು ಆಗಸ್ಟ್ ಅರ್ಧ ತಿಂಗಳು ಮುಗಿದರೂ ನೌಕರರಿಗೆ ಜುಲೈ ತಿಂಗಳ ವೇತನ ಬಿಡುಗಡೆ ಮಾಡಿಲ್ಲ. ಪರಿಣಾಮ 4 ಸಾರಿಗೆ ನಿಗಮಗಳಿಂದ 1 ಲಕ್ಷ 30 ಸಾವಿರಕ್ಕೂ ಹೆಚ್ಚು ಸಿಬ್ಬಂದಿ ಸಂಬಳ ಇಲ್ಲದೆ …
Read More »ಹಿಂದೂ ದೇವತೆಗಳಿಗೆ ಆಕ್ಷೇಪಾರ್ಹ ಪದ ಬಳಕೆ: ಸಚಿವ ನಿರಾಣಿ ಮೇಲೆ FIR ಸಾಧ್ಯತೆ
ಬೆಂಗಳೂರು: ಹಿಂದೂ ದೇವತೆಗಳಿಗೆ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಆರೋಪ ಎದುರಿಸುತ್ತಿರುವ, ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್. ಆರ್.ನಿರಾಣಿ ಮೇಲೆ ಇಂದು ಕೊಡಿಗೇಹಳ್ಳಿ ಠಾಣೆ ಪೊಲೀಸರು ಎಫ್ಐಆರ್ ದಾಖಲಿಸುವ ಸಾಧ್ಯತೆಗಳಿವೆ. ಹಿಂದೂ ದೇವತೆಗಳ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದಾರೆ ಎಂದು ಆರೋಪ ಕೇಳಿ ಬಂದ ಹಿನ್ನೆಲೆ, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿ, ಸೆಪ್ಟೆಂಬರ್ 13 ರೊಳಗೆ ತನಿಖಾ ವರದಿ ಸಲ್ಲಿಸಲು ಸೂಚನೆ ನೀಡಿತ್ತು. …
Read More »ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರ…
ಬೆಂಗಳೂರು: ಮಾಜಿ ಶಾಸಕ ವಿನಯ್ ಕುಲಕರ್ಣಿಗೆ ಜಾಮೀನು ಮಂಜೂರಾಗಿದೆ. ಹೌದು. ಯೋಗೇಶ್ ಗೌಡ ಹತ್ಯೆ ಕೇಸ್‍ನಲ್ಲಿ ಸಾಕ್ಷಿ ನಾಶ ಪ್ರಕರಣದಲ್ಲಿ ಕುಲಕರ್ಣಿಗೆ ಇಂದು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ. ಯೋಗೇಶ್ ಗೌಡ ಹತ್ಯೆ ಪ್ರಕರಣ ಸಂಬಂಧ ಹಿಂಡಲಗಾ ಜೈಲಿನಲ್ಲಿದ್ದ ವಿನಯ್ ಕುಲಕರ್ಣಿ ವಿರುದ್ಧ ಸಿಬಿಐ ಎರಡು ಕೇಸ್ ದಾಖಲಿಸಿತ್ತು. ಇದೀಗ ಸಾಕ್ಷ್ಯನಾಶ ಪ್ರಕರಣದಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯವು ಜಾಮೀನು ಮಂಜೂರು ಮಾಡಿದೆ. ವಿನಯ್ ಕುಲಕರ್ಣಿ ಅವರು ಈಗಾಗಲೇ …
Read More »ವಾಲ್ಮೀಕಿ ಜಯಂತಿಯೊಳಗೆ ಶೇ. 7.5 ಮೀಸಲಾತಿ ಘೋಷಣೆ ಮಾಡ್ತೀವಿ; ಸಿಎಂ ಬೊಮ್ಮಾಯಿ
ಬೆಂಗಳೂರು (ಆ.19): ವಾಲ್ಮೀಕಿ ಜಯಂತ್ಯೋತ್ಸವದ ಒಳಗಾಗಿ ಪರಿಶಿಷ್ಟ ವರ್ಗಕ್ಕೆ ಶೇ.7.5 ಮೀಸಲಾತಿ ಘೋಷಣೆ ಮಾಡುತ್ತೇನೆ. ನನ್ನ ಮೇಲೆ ನಂಬಿಕೆ ಇಡಿ. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದಾಗಲೂ ನಾನೇ ಹಲವು ಸಭೆಗಳಲ್ಲಿ ಭಾಗಿಯಾಗಿ ಕೆಲಸ ಮಾಡಿದ್ದೀನಿ. ಆದ್ದರಿಂದ ಮುತುವರ್ಜಿ ವಹಿಸಿ ಕೆಲಸ ಮಾಡುತ್ತೇನೆ. ವಾಲ್ಮೀಕಿ ಸಮುದಾಯಕ್ಕೆ ಅನ್ಯಾಯವಾಗಲು ಬಿಡುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಭರವಸೆ ನೀಡಿದರು. ಬೆಂಗಳೂರಿನ ಮುಖ್ಯಮಂತ್ರಿ ಗೃಹಕಚೇರಿ ಕೃಷ್ಣಾದಲ್ಲಿ ರಾಜನಹಳ್ಳಿ ವಾಲ್ಮೀಕಿ ಮಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ನೇತೃತ್ವದ ನಿಯೋಗದ …
Read More »ಲೇಡಿ ಪೊಲೀಸ್ನಿಂದ ರೇಪ್ ಬೆದರಿಕೆ; ಜನತಾ ದರ್ಶನ ವೇಳೆ ಸಿಎಂ ಮುಂದೆ ಮಹಿಳೆ ಅಳಲು
ಬೆಂಗಳೂರು, ಆ. 19: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಜನತಾ ದರ್ಶನ ನಡೆಸಿದ ವೇಳೆ ಮಹಿಳೆಯೊಬ್ಬರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗಮನ ಸೆಳೆಯಿತು. ಆರ್ ಟಿ ನಗರದಲ್ಲಿರುವ ತಮ್ಮ ನಿವಾಸದಲ್ಲಿ ಬೊಮ್ಮಾಯಿ ಅವರು ಜನತಾ ದರ್ಶನ ನಡೆಸಿ ಸಾರ್ವುಜನಿಕರಿಂದ ಅಹವಾಲು ಸ್ವೀಕರಿಸಿದರು. ಈ ವೇಳೆ ಮಹಿಳೆಯೊಬ್ಬರು ಸಿಎಂಗೆ ಅಹವಾಲು ಸಲ್ಲಿಸಲು ಸಾಕಷ್ಟು ಪ್ರಯತ್ನಿಸಿದರೂ ಸಾಧ್ಯವಾಗಲಿಲ್ಲ. ಸಿಎಂ ತಮ್ಮ ಕಾರಿನಲ್ಲಿ ಅಲ್ಲಿಂದ ಹೊರಡತೊಡಗಿದಾಗ ಆ ಮಹಿಳೆ ಆಕ್ರೋಶ ವ್ಯಕ್ತಪಡಿಸಿದರು. ಮುಖ …
Read More »ಈ ಬಾರಿಯೂ ಬೆಳಗಾವಿಯಲ್ಲಿ ಅಧಿವೇಶನ ನಡೆಯಲ್ಲ ಬೆಂಗಳೂರಿನಲ್ಲಿಯೇ ನಡೆಯಲಿದೆ
ಬೆಂಗಳೂರು: ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ನಿಗದಿ ಮಾಡಲಾಗಿದ್ದು 10 ದಿನಗಳ ಕಾಲ ಮುಂಗಾರು ಅಧಿವೇಶ ನಡೆಯಲಿದೆ. ಸೆ.13ರಿಂದ ಸೆ.24ರ ವರೆಗೆ ವಿಧಾನಮಂಡಲ ಅಧಿವೇಶ ನಡೆಸಲಾಗುವುದು ಎಂದು ಇಂದು ಸಿಎಂ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಜೆ.ಸಿ.ಮಾಧುಸ್ವಾಮಿ, ಈ ಬಾರಿ ಬೆಂಗಳೂರಿನಲ್ಲಿಯೇ ಹತ್ತುದಿನಗಳ ಕಾಲ ವಿಧಾನಮಂಡಲ ಅಧಿವೇಶನ ನಡೆಯಲಿದೆ ಎಂದರು. ಸಂಪುಟ ಉಪಸಮಿತಿ ರಚನೆಗೆ ಕ್ಯಾಬಿನೇಟ್ …
Read More »ಅಫ್ಘಾನ್ ಪ್ರಜೆಗಳಿಗೆ ಭಯ ಬೇಡ: ಅರಗ ಜ್ಞಾನೇಂದ್ರ
ಬೆಂಗಳೂರು: ರಾಜ್ಯದಲ್ಲಿ 339 ಮಂದಿ ಅಫ್ಘಾನಿಸ್ತಾನದ ಪ್ರಜೆಗಳಿದ್ದಾರೆ. ಈ ಪೈಕಿ 192 ಮಂದಿ ವಿದ್ಯಾರ್ಥಿಗಳಿದ್ದಾರೆ. ಅಫ್ಘಾನ್ ಘಟನೆ ಸಂಬಂಧ ಯಾರು ಭಯ ಪಡುವ ಅಗತ್ಯವಿಲ್ಲ. ಮಾನವೀಯ ನೆಲೆಯಲ್ಲಿ ರಾಜ್ಯ ಸರ್ಕಾರ ನೆರವಿಗೆ ಬರಲಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಹೇಳಿದರು. ಬೆಂಗಳೂರಿನ ಮೈಸೂರು ರಸ್ತೆಯಲ್ಲಿ ಸಿಎಆರ್ ಮೈದಾನದಲ್ಲಿ ಬುಧವಾರ ಆಯೋಜಿಸಿದ್ದ ನಗರ ಪೊಲೀಸರು ಪತ್ತೆ ಮಾಡಿದ 36 ಕೋಟಿ ರೂ. ಮೌಲ್ಯದ ಕಳವು ಮಾಲುಗಳ ಪ್ರದರ್ಶನ ಮತ್ತು ಮಾಲೀಕರಿಗೆ …
Read More »ಸಚಿವೆ ಶಶಿಕಲಾಗೆ ಝೀರೋ ಟ್ರಾಫಿಕ್: ಹೈಕೋರ್ಟ್‌ಗೆ ಅರ್ಜಿ
ಬೆಂಗಳೂರು: ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲು ಕೆಂಪೇಗೌಡ ಅಂತರ ರಾಷ್ಟ್ರೀಯ ವಿಮಾನ ನಿಲ್ದಾಣದಿಂದ ರಾಜಭವನಕ್ಕೆ ಬರಲು ಶಶಿಕಲಾ ಜೊಲ್ಲೆ ಅವರಿಗೆ ಝೀರೋ ಟ್ರಾಫಿಕ್ (ತಡೆರಹಿತ ಸಂಚಾರ) ಸೌಲಭ್ಯ ಕಲ್ಪಿಸಿದ್ದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಗೆ ಪ್ರತಿಕ್ರಿಯೆ ಸಲ್ಲಿಸುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅಧಿಕಾರ ದುರುಪಯೋಗ ಮಾಡಿಕೊಂಡಿರುವ ಪೊಲೀಸ್ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆರೋಪಿಸಿ ನಗರದ ವಕೀಲ ಜಿ. ಬಾಲಾಜಿ ನಾಯ್ಡು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು …
Read More »