ಬೆಂಗಳೂರು, ಆ.25- ರಾಜ್ಯದಲ್ಲಿ ಮಾದಕ ದ್ರವ್ಯ ಜಾಲವನ್ನು ನಿರ್ಮೂಲನೆ ಮಾಡಲು ನಿರ್ಧಾರ ಮಾಡಲಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.ಕೋರಮಂಗಲದ ಕೆಎಸ್‍ಆರ್‍ಪಿ ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ಪೊಲೀಸ್ ಪಬ್ಲಿಕ್ ಶಾಲೆಯ ಶಿಶು ವಿಹಾರ, ಆಡಳಿತ ಕಚೇರಿಯ ನೂತನ ಕಟ್ಟಡ ಉದ್ಘಾಟನೆ ಹಾಗೂ ಕೆಎಸ್‍ಆರ್‍ಪಿ ತರಬೇತಿ ಶಾಲೆ- 4ನೆ ಪಡೆ ನವೀಕೃತ ಕಟ್ಟಡ ಉದ್ಘಾಟನೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಾದಕ ವಸ್ತುಗಳ ವ್ಯಸನಿಗಳಾಗಿ ಯುವ ಪೀಳಿಗೆ ಹಾಳಾಗುವುದನ್ನು ತಪ್ಪಿಸಬೇಕಿದೆ ಎಂದರು. …
Read More »ಮತ್ತೆ ರಣಕಹಳೆ ಊದಿದ ಪಂಚಮಸಾಲಿ ಸಮುದಾಯ, ಇವತ್ತಿನಿಂದ್ಲೇ ‘ಪಂಚಮಸಾಲಿ’ ಹೋರಾಟ ಶುರು
ಬೆಂಗಳೂರು: ಸೆಪ್ಟಂಬರ್ 13 ರಿಂದ ವಿಧಾನ ಮಂಡಲ ಅಧಿವೇಶನ ಶುರುವಾಗ್ತಿದೆ. ಇದರ ಬೆನ್ನಲ್ಲೇ ಮತ್ತೆ ಮೀಸಲಾತಿ ಕಿಚ್ಚು ಹೊತ್ತಿಕೊಳ್ಳೋ ಸಾಧ್ಯತೆ ಇದೆ. ಯಾಕೆಂದ್ರೆ, ಪಂಚಮಸಾಲಿ ಸಮುದಾಯ 2ಎ ಮೀಸಲಾತಿಗೆ(2A Reservation Row )ಮತ್ತೆ ರಣಕಹಳೆ ಊದಿದೆ. ಇದ್ರಿಂದ ಬಸವರಾಜ ಬೊಮ್ಮಾಯಿ(Basavaraj Bommai) ಸರ್ಕಾರಕ್ಕೆ ಮೀಸಲಾತಿ ಸವಾಲ್ ಎದುರಾಗಿದೆ. 2ಎ ಮೀಸಲಾತಿಗಾಗಿ ಪಂಚಮಸಾಲಿ ಸಮುದಾಯ ಪ್ರತಿಭಟನೆ ಮಾಡಿತ್ತು. ಜಯಮೃತ್ಯುಂಜಯ ಸ್ವಾಮೀಜಿ ಪಾದಯಾತ್ರೆ ನಡೆಸಿದ್ರು. ದೊಡ್ಡ ಮಟ್ಟದಲ್ಲಿ ಸಮಾವೇಶ ಕೂಡ ಮಾಡಿದ್ರು. ಬಿ.ಎಸ್.ಯಡಿಯೂರಪ್ಪ …
Read More »ಕರ್ನಾಟಕ ಹೈಕೋರ್ಟ್- ಎರಡನೇ ವಿಭಾಗ ಸಹಾಯಕರ (ಎಸ್ಡಿಎ) ಹುದ್ದೆಗೆ ಅರ್ಜಿ ಆಹ್ವಾನ
ಕರ್ನಾಟಕ ಹೈಕೋರ್ಟ್‌ಗೆ 142 ದ್ವಿತೀಯ ದರ್ಜೆ ಸಹಾಯಕರ ಹುದ್ದೆಗೆ ನೇಮಕಾತಿ ಮಾಡಿಕೊಳ್ಳಲಿದ್ದು, ಅಭ್ಯರ್ಥಿಗಳು ಹೆಚ್ಚಿನ ವಿವರಗಳಿಗಾಗಿ karnatakajudiciary.kar.nic ನಲ್ಲಿ ಪರಿಶೀಲಿಸಬಹುದು. ಅಭ್ಯರ್ಥಿಗಳು ಸೆಪ್ಟೆಂಬರ್ 24, 2021 ರೊಳಗೆ ಅರ್ಜಿ ಸಲ್ಲಿಸಬಹುದು. ನೇಮಕಾತಿ ನಡೆಯುತ್ತಿರುವ ಒಟ್ಟು ಖಾಲಿ ಹುದ್ದೆಗಳ ಸಂಖ್ಯೆ 142. ಒಮ್ಮೆ ನೇಮಕಗೊಂಡ ನಂತರ, ಅಭ್ಯರ್ಥಿಗಳು ಎರಡು ವರ್ಷಗಳ ಕಾಲ ಪರೀಕ್ಷಾ ಅವಧಿಯಲ್ಲಿರುತ್ತಾರೆ. ಹುದ್ದೆಗಳಿಗೆ ಅರ್ಜಿ ಸಲ್ಲಿಸಲು, ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸಿನವರಾಗಿರಬೇಕು ಮತ್ತು 35 ವರ್ಷ ಮೀರಿರಬಾರದು. …
Read More »ಯತ್ನಾಳ್ ವಿರುದ್ಧ ಕಾನೂನು ಕ್ರಮಕ್ಕೆ ಸಲೀಂ ಅಹ್ಮದ್ ಆಗ್ರಹ
ಬೆಂಗಳೂರು: ‘ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಮಾತನಾಡಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್ ಆಗ್ರಹಿಸಿದ್ದಾರೆ. ಯತ್ನಾಳ್ ಅವರ ವಿರುದ್ಧ ಪ್ರತಿಭಟನೆಗೆ ಮಾಡಿದ್ದ ಕಾರ್ಯಕರ್ತರು ಪೊಲೀಸರ ವಶದಲ್ಲಿದ್ದ ಕಾರಣ ವಿಧಾನಸೌಧ ಪೊಲೀಸ್ ಠಾಣೆಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, ‘ಯತ್ನಾಳ್ ಅವರ ಮಾತುಗಳು, ಅವರ ವ್ಯಕ್ತಿತ್ವ ಹಾಗೂ ಬಿಜೆಪಿಯ ಮನಸ್ಥಿತಿಯನ್ನು ತೋರುತ್ತದೆ’ ಎಂದು ಆಕ್ರೋಶ …
Read More »ಆರ್ಥಿಕತೆಯ ಗಂಧಗಾಳಿ ತಿಳಿಯದ ಸಿದ್ದರಾಮಯ್ಯ ಬಜೆಟ್ ಮಂಡಿಸಿದ್ದಾದರೂ ಹೇಗೆ: ಬಿಜೆಪಿ
ಬೆಂಗಳೂರು: ‘ಆರ್ಥಿಕತೆಯ ಗಂಧಗಾಳಿ ಗೊತ್ತಿಲ್ಲದಂತೆ ವರ್ತಿಸುವ ಸಿದ್ದರಾಮಯ್ಯ ಅವರು ಅತಿ ಹೆಚ್ಚು ಅವಧಿಗೆ ಬಜೆಟ್ ಮಂಡಿಸಿದ್ದಾದರೂ ಹೇಗೆ ಎನ್ನುವ ಪ್ರಶ್ನೆ ಮೂಡುತ್ತಿದೆ’ ಎಂದು ಬಿಜೆಪಿ ವ್ಯಂಗ್ಯವಾಡಿದೆ. ಈ ಕುರಿತು ಟ್ವೀಟ್ ಮಾಡಿರುವ ಬಿಜೆಪಿ, ‘ಸಿದ್ದರಾಮಯ್ಯ ಅವರೇ, ಕೈಗಾರಿಕೆ ಹಾಗೂ ಉತ್ಪಾದನಾ ಕ್ಷೇತ್ರದ ವೃದ್ಧಿಗೆ ಸಹಕಾರ ನೀಡದೆ ಇದ್ದರೆ ದೇಶದ ಪ್ರಗತಿ ಹೇಗೆ ಸಾಧ್ಯ’ ಎಂದು ಪ್ರಶ್ನಿಸಿದೆ. ‘ಸಿದ್ದರಾಮಯ್ಯ ಅವರೇ, ಕೃಷಿ ಭೂಮಿ ಖರೀದಿ ಮಿತಿಗೆ ವಿನಾಯಿತಿ ನೀಡುವಾಗ ನೀವು ಯಾವ …
Read More »ಕೋವಿಡ್ ಮೂರನೇ ಅಲೆ ನಿರೀಕ್ಷೆ ಸದ್ಯಕ್ಕೆ ಇಲ್ಲ: ಡಿ. ರಂದೀಪ್
ಬೆಂಗಳೂರು: ‘ಮೂರನೇ ಅಲೆ ಬಂದರೆ, ಅದು ಕೊರೋನಾ ವೈರಾಣುವಿನ ಹೊಸ ರೂಪಾಂತರ ತಳಿಯಿಂದ ಎಂದು ತಜ್ಞರು ತಿಳಿಸಿದ್ದಾರೆ. ಉದಾಹರಣೆಗೆ ಬೆಂಗಳೂರಿನಲ್ಲಿ ಡೆಲ್ಟಾ ಪ್ಲಸ್ ತಳಿಯಿಂದ ಸೋಂಕು ಹರಡುವಿಕೆ ಹೆಚ್ಚಾದರೆ ಅದು ಮೂರನೇ ಅಲೆ ಎಂದರ್ಥ. ಸದ್ಯಕ್ಕೆ ಕೊರೋನಾ ಮೂರನೇ ಅಲೆಯ ನಿರೀಕ್ಷೆ ಇಲ್ಲ’ ಎಂದು ಬಿಬಿಎಂಪಿ ವಿಶೇಷ ಆಯುಕ್ತ (ಆರೋಗ್ಯ) ಡಿ. ರಂದೀಪ್ ಸ್ಪಷ್ಟಪಡಿಸಿದರು. ಸುದ್ದಿಗಾರರ ಜೊತೆ ಮಂಗಳವಾರ ಮಾತನಾಡಿದ ಅವರು, ‘ಎಲ್ಲ ವಲಯಗಳಲ್ಲಿ ಕೋವಿಡ್ ಪರೀಕ್ಷೆಗೆ ಬಂದ ಶೇ …
Read More »ಡಿಎಸ್‌ಎಸ್ ಅಧ್ಯಕ್ಷ ರಘು ವಿರುದ್ಧ ನಟ ಜಗ್ಗೇಶ್ ಮಾನನಷ್ಟ ಮೊಕದ್ದಮೆ
ಬೆಂಗಳೂರು: ಬಿಬಿಎಂಪಿ ಶಾಲಾ ಕಾಲೇಜುಗಳ ವಿದ್ಯಾರ್ಥಿಗಳಿಗೆ ಸ್ವೆಟರ್ ನೀಡದೇ ವಂಚನೆ ನಡೆಸಲಾಗಿದೆ ಎನ್ನುವ ಆರೋಪದಲ್ಲಿ ಸಂಬಂಧವಿಲ್ಲದೇ ತಮ್ಮ ಹಾಗೂ ಆರ್.ಅಶೋಕ್ ಅವರ ಹೆಸರನ್ನು ತೆಗೆದು ದಲಿತ ಸಂಘರ್ಷ ಸಮಿತಿ(ಡಿಎಸ್‌ಎಸ್) ಅಧ್ಯಕ್ಷ ಸಿ.ಎಸ್.ರಘು ಅವರು ಅಪಮಾನಿಸಿದ್ದಾರೆ. ಹೀಗಾಗಿ ಇವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತಿದ್ದೇನೆ ಎಂದು ನಟ ಜಗ್ಗೇಶ್ ಟ್ವೀಟ್ ಮೂಲಕ ಹೇಳಿದ್ದಾರೆ. ‘ಬಿಬಿಎಂಪಿ ಶಾಲಾ, ಕಾಲೇಜುಗಳ ವಿದ್ಯಾರ್ಥಿಗಳಿಗೆ ಸ್ವೆಟರ್‌ಗಳನ್ನು ಕರ್ನಾಟಕ ಕೈಮಗ್ಗ ನಿಗಮದಿಂದ (ಕೆಎಚ್‌ಡಿಸಿ) ಖರೀದಿಸಲಾಗಿದೆ. ಕೆಟಿಪಿಪಿ ಕಾಯ್ದೆಯ 4ಜಿ …
Read More »ಉತ್ತರ ಪ್ರದೇಶ, ಕಾಶ್ಮೀರದಿಂದ ಬಂದು ಸರ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಸೆರೆ!
ಬೆಂಗಳೂರು: ಉತ್ತರ ಪ್ರದೇಶ ಮತ್ತು ಕಾಶ್ಮೀರದಿಂದ ನಗರಕ್ಕೆ ಬಂದು ಸರ ಕಳವು ಮಾಡುತ್ತಿದ್ದ ನಾಲ್ವರನ್ನು ಪಶ್ಚಿಮ ವಿಭಾಗ ಪೊಲೀಸರು ಬಂಧಿಸಿದ್ದಾರೆ. ರಾಹುಲ್, ಗೌರವ್, ನಿತಿನ್, ರಿಯಾಜ್ ಅಹ್ಮದ್ ಮೀರ್, ಕಮಲ್ ಬಂಧಿತರು. ವಿಜಯನಗರ ದಲ್ಲಿ ಪಾದಚಾರಿ ಮಹಿಳೆ ಬಳಿ ಬೈಕ್ ನಲ್ಲಿ ಬಂದ ಆರೋಪಿಗಳ ಚಿನ್ನದ ಸರ ಕದ್ದು ಪರಾರಿ ಆಗಿದ್ದರು. ಇದರ ತನಿಖೆ ಕೈಗೊಂಡ ಪಶ್ಚಿಮ ವಿಭಾಗ ಪೊಲೀಸರು ಆರೋಪಗಳನ್ನು ಬಂಧಿಸಿದ್ದಾರೆ. ಆರೋಪಿಗಳ ವಿಚಾರಣೆ ಯಿಂದ ವಿಜಯನಗರ, ಕೆಂಗೇರಿ, …
Read More »ರಾಗಿಣಿ, ಸಂಜನಾ ಡ್ರಗ್ಸ್ ಸೇವನೆ ದೃಢ
ಬೆಂಗಳೂರು: ಅಂತರರಾಷ್ಟ್ರೀಯ ಡ್ರಗ್ಸ್ ಜಾಲ ಪ್ರಕರಣದಲ್ಲಿ ಸಿಕ್ಕಿಬಿದ್ದಿದ್ದ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಹಾಗೂ ಇತರರು ಮಾದಕ ವಸ್ತು ಸೇವನೆ ಮಾಡಿದ್ದ ಸಂಗತಿ ‘ಕೂದಲು ಮಾದರಿ’ ಪರೀಕ್ಷೆಯಿಂದ ದೃಢಪಟ್ಟಿದೆ. ಅದರ ವರದಿ ಸಮೇತ ಹೆಚ್ಚುವರಿ ದೋಷಾರೋಪ ಪಟ್ಟಿಯನ್ನು ಸಿಸಿಬಿ ಪೊಲೀಸರು, ನ್ಯಾಯಾಲಯಕ್ಕೆ ಸೋಮವಾರ ಸಲ್ಲಿಸಿದ್ದಾರೆ. ತಮ್ಮದೇ ಜಾಲ ರೂಪಿಸಿಕೊಂಡು ಪಾರ್ಟಿಗಳನ್ನು ಆಯೋಜಿಸುತ್ತಿದ್ದ ಆರೋಪಿಗಳು, ಡ್ರಗ್ಸ್ ಸೇವನೆ ಹಾಗೂ ಮಾರಾಟ ಮಾಡುತ್ತಿದ್ದರು. ಕೆಲ ನಟ-ನಟಿಯರು, ಉದ್ಯಮಿಗಳು, ವ್ಯಾಪಾರಿಗಳು ಹಾಗೂ ಗಣ್ಯ …
Read More »‘ಆನಂದ’ ಇಲ್ಲದೇ ಸಿಂಗ್ ಅಧಿಕಾರ ಸ್ವೀಕಾರ!
ಬೆಂಗಳೂರು : ಪ್ರಬಲ ಖಾತೆಗಾಗಿ ಮುನಿಸಿಕೊಂಡು ಬೆಂಗಳೂರಿನತ್ತ ತಲೆ ಹಾಕದೇ ಹೊಸಪೇಟೆಯಲ್ಲೇ ಬೀಡು ಬಿಟ್ಟಿದ್ದ ಪ್ರವಾಸೋದ್ಯಮ ಸಚಿವ ಆನಂದ್‌ಸಿಂಗ್ ಅವರು ಮಂಗಳವಾರ ಮಧ್ಯಾಹ್ನ ‘ದಿಢೀರ್’ ಅಧಿಕಾರ ಸ್ವೀಕರಿಸಿದರು. ಅಧಿಕಾರ ಸ್ವೀಕಾರ ಕ್ರಿಯೆಯೇ ಒಂದು ರೀತಿಯಲ್ಲಿ ಪ್ರಹಸನದಂತೆ ನಡೆಯಿತು. ಬಾಯಿ ಮಾತಿನಲ್ಲಿ ತಮಗೆ ಅಸಮಾಧಾನ ಇಲ್ಲ ಎಂದು ಹೇಳುತ್ತಲೇ ಒಲ್ಲದ ಮನಸ್ಸಿನಿಂದಲೇ ಆನಂದ್‌ಸಿಂಗ್ ಅಧಿಕಾರ ಸ್ವೀಕರಿಸಿದರು. ಪೂರ್ವ ನಿಗದಿಯಾದ ಯಾವುದೇ ‘ಕಾರ್ಯಕ್ರಮ’ಗಳಲ್ಲಿದೇ ಏಕಾಏಕಿ ಸಚಿವಗಿರಿ ಸ್ವೀಕರಿಸಿದರು. ತಮ್ಮನ್ನು ಭೇಟಿ ಮಾಡಲು ಬಂದಿದ್ದ …
Read More »