Breaking News

ಬೆಂಗಳೂರು

ಇದೊಂದು ಹಗರಣ, ಭ್ರಷ್ಟಾಚಾರಗಳ ಸರ್ಕಾರ: ಡಿ.ಕೆ.ಶಿವಕುಮಾರ್ ಆಕ್ರೋಶ

ಬೆಂಗಳೂರು, ಆ.25: ‘ಈ ಸರ್ಕಾರ ಆರೋಗ್ಯ ಕ್ಷೇತ್ರ, ಔಷಧ, ವೆಂಟಿಲೇಟರ್, ಆಯಂಬುಲೆನ್ಸ್ ವಿಚಾರವಾಗಿ ಹಗರಣ ಮಾಡುತ್ತಿದೆ ಎಂದು ನಾನು ಆಂಭದಿಂದಲೇ ಹೇಳುತ್ತಾ ಬಂದಿದ್ದೇನೆ. ಕರ್ನಾಟಕ ಸರ್ಕಾರ ದೇಶದಲ್ಲೇ ಅತ್ಯಂತ ಭ್ರಷ್ಟ ಸರಕಾರವಾಗಿದೆ. ಕೇಂದ್ರ ಸರ್ಕಾರ 4 ಕೋಟಿ ರುಪಾಯಿಗೆ ಖರೀದಿಸಿದ್ದನ್ನು, ರಾಜ್ಯ ಸರ್ಕಾರ 22 ಕೋಟಿ ರುಪಾಯಿಗೆ ಖರೀದಿ ಮಾಡುವಷ್ಟರ ಮಟ್ಟಿಗೆ ಭ್ರಷ್ಟಾಚಾರದಲ್ಲಿ ಮುಳುಗಿದೆ. ಈಗ ಮಕ್ಕಳಿಗೆ ನೀಡುವ ಸ್ವೆಟರ್ ನಲ್ಲೂ ಹಗರಣ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಕೆಪಿಸಿಸಿ …

Read More »

ಪಠ್ಯ ಪುಸ್ತಕ ಪೂರೈಕೆ: ವರದಿ ಕೇಳಿದ ಹೈಕೋರ್ಟ್‌

ಬೆಂಗಳೂರು: ರಾಜ್ಯದ ಸರಕಾರಿ ಹಾಗೂ ಅನುದಾನಿತ ಶಾಲೆಗಳ ವಿದ್ಯಾರ್ಥಿಗಳಿಗೆ ಪಠ್ಯ ಪುಸ್ತಕಗಳನ್ನು ಪೂರೈಸುವ ಕುರಿತ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ರಾಜ್ಯ ಸರಕಾರಕ್ಕೆ ಹೈಕೋರ್ಟ್‌ ಆದೇಶಿಸಿದೆ. ಈ ವಿಚಾರವಾಗಿ ಎ.ಎ. ಸಂಜೀವ್‌ ನಾರಾಯಣ ಹಾಗೂ ಇತರರು ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ಹಿರಿಯ ನ್ಯಾಯಮೂರ್ತಿ ಬಿ.ವಿ. ನಾಗರತ್ನ ಹಾಗೂ ನ್ಯಾ| ಪಿ. ಕೃಷ್ಣಭಟ್‌ ಅವರಿದ್ದ ವಿಭಾಗೀಯ ನ್ಯಾಯಪೀಠ ಮಂಗಳವಾರ ರಾಜ್ಯ ಸರ್ಕಾರಕ್ಕೆ ಈ ನಿರ್ದೇಶನ ನೀಡಿತು. ವಿಚಾರಣೆ ವೇಳೆ …

Read More »

‘ಸಿಎಂ ಸಚಿವಾಲಯ’ದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ..ಯಾರಿಗೆ ಯಾವ ಜವಾಬ್ದಾರಿ.?

ಬೆಂಗಳೂರು : ಸಿಎಂ ಸಚಿವಾಲಯದ ಅಧಿಕಾರಿಗಳಿಗೆ ಕರ್ತವ್ಯ ಹಂಚಿಕೆ ಮಾಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಆದೇಶ ಹೊರಡಿಸಿದ್ದಾರೆ.   ಮಂಜುನಾಥ್ ಪ್ರಸಾದ್, ಅನಿಲ್ ಕುಮಾರ್, ರಂಗರಾಕ್, ಪೊನ್ನುರಾಜ್, ಹೆಚ್ ಎಸ್ ಸತೀಶ್ ಸೇರಿದಂತೆ ಹಲವರಿಗೆ ಕರ್ತವ್ಯಗಳನ್ನು ಹಂಚಿಕೆ ಮಾಡಲಾಗಿದೆ.       ಯಾರಿಗೆ ಯಾವ ಜವಾಬ್ದಾರಿ.?   1) ಮಂಜುನಾಥ್ ಪ್ರಸಾದ್ : ಸಿಎಂ ಪ್ರಧಾನ ಕಾರ್ಯದರ್ಶಿ, ( ಸಚಿವ ಸಂಪುಟದ ಎಲ್ಲಾ ಕಡತಗಳ ನಿರ್ವಹಣೆ, ಎಲ್ಲಾ …

Read More »

ಎಫ್​ಎಸ್​ಎಲ್​ ವರದಿ ನೋಡಿ ಸಮಾಧಾನವಾಗಿದೆ: ಇಂದ್ರಜಿತ್ ಲಂಕೇಶ್

ಬೆಂಗಳೂರು: ಎಫ್​ಎಸ್​ಎಲ್ ಪರೀಕ್ಷೆಯಲ್ಲಿ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗಲ್ರಾನಿ ಸೇರಿದಂತೆ ಹಲವರು ಡ್ರಗ್ಸ್ ಸೇವಿಸಿರುವುದು ದೃಢಪಟ್ಟ ಬೆನ್ನಲ್ಲೇ, ನಿರ್ದೇಶಕ ಇಂದ್ರಜಿತ್ ಲಂಕೇಶ್ ಸುದ್ದಿಗೋಷ್ಠಿ ನಡೆಸಿ, ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ಇವತ್ತಿನ ಎಫ್​ಎಸ್​ಎಲ್​ ವರದಿ ನೋಡಿ ಸಮಾಧಾನವಾಗಿದೆ. ನನಗೆ ಯಾರ ಮೇಲೂ ವೈಯಕ್ತಿಕ ದ್ವೇಷವಿಲ್ಲ. ಈ ಪ್ರಕರಣದಲ್ಲಿ ಇನ್ನೂ ದೊಡ್ಡದೊಡ್ಡ ತಿಮಿಂಗಿಲಗಳಿವೆ. ಅವರನ್ನು ಹಿಡಿಯುವುದು ಇನ್ನೂ ಬಾಕಿ ಇದೆ. ಈ ಬಗ್ಗೆ ಕೋರ್ಟ್​ನಲ್ಲಿ ತನಿಖೆ ನಡೆಯುತ್ತಿದೆ. ಹಾಗಾಗಿ, ನಾನು …

Read More »

ಅಂತರರಾಜ್ಯ ಜಲವಿವಾದ: ದೆಹಲಿಯಲ್ಲಿ ಕಾನೂನು ತಜ್ಞರೊಂದಿಗೆ ಸಭೆ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಅಂತರರಾಜ್ಯ ಜಲ ವಿವಾದಗಳ ಬಗ್ಗೆ ನವದೆಹಲಿಯಲ್ಲಿ ಕಾನೂನು ತಜ್ಞರ ಜತೆ ಸಭೆ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಬೆಂಗಳೂರಿನ ತಮ್ಮ ನಿವಾಸದ ಬಳಿ ಅವರು ಮಾದ್ಯಮದವರೊಂದಿಗೆ ಮಾತನಾಡಿ ಈ ವಿಷಯ ತಿಳಿಸಿದರು. ರಾಜ್ಯ ಸರ್ಕಾರದ ಅಡ್ವೋಕೇಟ್ ಜನರಲ್, ರಾಜ್ಯದ ಹಿರಿಯ ವಕೀಲರು, ಕಾನೂನು ತಜ್ಞರು ಈ ಸಭೆಯಲ್ಲಿ ಭಾಗವಹಿಸಲಿದ್ದಾರೆ. ರಾಜ್ಯದ ನೀರಾವರಿ ವಿವಾದದ ಬಗ್ಗೆ ರಾಜ್ಯದ ಮುಂದಿನ ನಡೆಯ ಬಗ್ಗೆ ಈ ಸಭೆಯಲ್ಲಿ ತೀರ್ಮಾನಿಸಲಾಗುವುದು. …

Read More »

‘ಮಾದಕ’ ನಟಿಯರಿಗೆ ಮತ್ತೆ ಸಂಕಷ್ಟ , ಡ್ರಗ್ಸ್ ಸೇವನೆ ದೃಢ

ಬೆಂಗಳೂರು, ಆ.24- ಸ್ಯಾಂಡಲ್‍ವುಡ್ ನಟಿಯರಾದ ಸಂಜನಾ ಮತ್ತು ರಾಗಿಣಿ ಅವರುಗಳು ಡ್ರಗ್ಸ್ ಸೇವನೆ ಮಾಡಿರುವುದು ಎಫ್‍ಎಸ್‍ಎಲ್ ವರದಿಯಿಂದ ದೃಢಪಟ್ಟಿದೆ ಎಂದು ತಿಳಿದುಬಂದಿದೆ. ಈ ಇಬ್ಬರು ನಟಿಯರು ಡ್ರಗ್ಸ್ ಸೇವಿಸಿದ್ದಾರೆಯೇ ಎಂಬ ಬಗ್ಗೆ ತಿಳಿಯಲು ಇವರಿಬ್ಬರ ತಲೆ ಕೂದಲನ್ನು ಹೈದರಾಬಾದ್‍ನ ಎಫ್‍ಎಸ್‍ಎಲ್‍ಗೆ ಸಿಸಿಬಿ ಪೊಲೀಸರು ಕಳುಹಿಸಿದ್ದರು. ಇದೀಗ ಅದರ ವರದಿ ಸಿಸಿಬಿ ಕೈ ಸೇರಿದ್ದು, ವರದಿಯಲ್ಲಿ ಈ ಇಬ್ಬರು ನಟಿಯರಲ್ಲದೆ ಇನ್ನೂ ಹಲವರು ಡ್ರಗ್ಸ್ ಸೇವನೆ ಮಾಡಿರುವುದು ಉಲ್ಲೇಖಿಸಲಾಗಿದೆ ಎಂದು ಗೊತ್ತಾಗಿದೆ. …

Read More »

ಸರ್ಕಾರೀ ನೌಕರಿಗಾಗಿ ಐಐಟಿ ನಕಲಿ ಅಂಕಪಟ್ಟಿ ; ಎಂಜಿನಿಯರ್‌ ಬಂಧನ

ಬೆಂಗಳೂರು: ಅಸ್ಸಾಂನ ಗೌಹಾಟಿ ಐಐಟಿಯ ಹೆಸರಿನಲ್ಲಿ ನಕಲಿ ಅಂಕಪಟ್ಟಿ ಸಲ್ಲಿಸಿ ಕೇಂದ್ರ ವಿದ್ಯುತ್ ಸಂಶೋಧನ ಸಂಸ್ಥೆ(ಸಿಪಿಆರ್‌ಐ)ಯಲ್ಲಿ ನೌಕರಿ ಗಿಟ್ಟಿಸಿಕೊಂಡಿದ್ದ ಇಂಜಿನಿಯರ್ ಒಬ್ಬರು ಸಿಂಧುತ್ವ ಪರೀಕ್ಷೆ ವೇಳೆ ಸಿಕ್ಕುಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ನ್ಯೂ ಬಿಇಎಲ್ ರಸ್ತೆಯ ನಿವಾಸಿಯಾದ ಮನೀಶ್ ಸಿಂಗ್ (26) ಎಂಬುವರ ವಿರುದ್ಧ ಎಫ್​ಐಆರ್ ದಾಖಲಾಗಿದೆ. 2018ನೇ ಸಾಲಿನಲ್ಲಿ ಸಿಪಿಆರ್‌ಐ ಮೆಕಾನಿಕಲ್ ಇಂಜಿನಿಯರಿಂಗ್ ವಿಭಾಗಕ್ಕೆ ಕರೆದಿದ್ದ ಇಂಜಿನೀಯರಿಂಗ್ ಅಧಿಕಾರಿ ಹುದ್ದೆಗೆ ಮನೀಶ್ ಸಿಂಗ್ ನೇಮಕಗೊಂಡಿದ್ದರು. ನೇಮಕಾತಿ ವೇಳೆ ಮನೀಶ್ ಸಲ್ಲಿಸಿದ್ದ …

Read More »

ಪ್ರಥಮ ವರ್ಷ ಪದವಿ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ.!

ಬೆಂಗಳೂರು: ಪ್ರಥಮ ವರ್ಷಕ್ಕೆ ಪ್ರವೇಶ ಪಡೆದವರಿಗೆ ಉಚಿತವಾಗಿ ಟ್ಯಾಬ್ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಆಗಸ್ಟ್ 1 ರಿಂದ ಪ್ರಥಮ ವರ್ಷದ ಪದವಿ ತರಗತಿಗಳು ಶುರುವಾಗಿವೆ. ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಿಗೆ ಟ್ಯಾಬ್ ಅಗತ್ಯವಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತವಾಗಿ ಟ್ಯಾಬ್ ವಿತರಿಸಲಾಗುವುದು ಎಂದು ಸಿಎಂ ಹೇಳಿದ್ದಾರೆ. 2021 -22 ನೇ ಸಾಲಿನಲ್ಲಿ ಪ್ರಥಮ ವರ್ಷದ ಪದವಿ ಕೋರ್ಸ್ ಗೆ …

Read More »

ಡಿ.ಕೆ. ಶಿವಕುಮಾರ್ ಭೇಟಿಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ

ಬೆಂಗಳೂರು: ಜಿಲ್ಲಾ ಪಂಚಾಯತಿ ಸದಸ್ಯನ ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಶನಿವಾರ ಜಾಮೀನಿನ ಮೇಲೆ ಬಿಡುಗಡೆಯಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಇಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಭೇಟಿಯಾದರು. ಬೆಂಗಳೂರಿಗೆ ಆಗಮಿಸಿದ್ದ ವಿನಯ್ ಕುಲಕರ್ಣಿ, ಇಂದು ಸದಾಶಿವ ನಗರದ ಡಿ ಕೆ ಶಿವಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿದರು.

Read More »

ರಾಜ್ಯದಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆ : ಹವಾಮಾನ ಇಲಾಖೆ ಮಾಹಿತಿ

ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್ 26 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.   ಶ್ರೀಲಂಕಾದ ಕರಾವಳಿಯಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಇದರ ಪರಿಣಾಮದಿಂದ ಆಗಸ್ಟ್‌ 26ರವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಆಗಸ್ಟ್‌ 23ರಿಂದ 26ರವರೆಗೆ ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ಬಹುತೇಕ ಎಲ್ಲ ಸ್ಥಳಗಳಲ್ಲಿ ಗುಡುಗು ಸಹಿತ ವ್ಯಾಪಕ ಮಳೆಯಾಗಲಿದೆ ಎಂದು …

Read More »