Breaking News

ಬೆಂಗಳೂರು

ರೇಣುಕಾಸ್ವಾಮಿ ಕೊಲೆ ಕೇಸ್​; ಆರೋಪಿ ವಿನಯ್​ ಕಪಾಳಕ್ಕೆ ಹೊಡೆದ ವಕೀಲರು

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಎ10 ಆಗಿರುವ ವಿನಯ್​ಗೆ ಅವರ ವಕೀಲರಿಂದಲೇ ಕಪಾಳ ಮೋಕ್ಷವಾಗಿರುವ ಘಟನೆ ಬೆಂಗಳೂರಿನ ಕೋರ್ಟ್​ ಆವರಣದಲ್ಲಿ ನಡೆದಿದೆ. ಎ10 ವಿನಯ್  ಸ್ಟೋನಿಬ್ರೂಕ್ ಮಾಲೀಕ. ಇತ್ತೀಚೆಗೆ ಆರೋಪಿ ವಕೀಲರ ಬದಲಾವಣೆಗೆ ಮುಂದಾಗಿದ್ದರು. ಈ ಬಗ್ಗೆ ಮತ್ತೆ ತಕರಾರು ತೆಗೆದಿದ್ದರು. ಇದರಿಂದ ಸದ್ಯ ಕೋರ್ಟ್​ ಆವರಣದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಮಾ.9ರಂದು  ನಟರಾಜ್ ಅವರು ವಿನಯ್ ಪರ ವಕಾಲತ್ತು ವಹಿಸಲು ಬಂದಿದ್ದರು. ಈ ವೇಳೆ ಅವರ ಬಳಿ ಬದಲಾವಣೆ  ಬಗ್ಗೆ  …

Read More »

ಮಾ.15ರಿಂದ ವಂದೇ ಭಾರತ್ ರೈಲುಗಳ ವೇಳಾಪಟ್ಟಿ ಪರಿಷ್ಕರಣೆ

ಬೆಂಗಳೂರು: ನೈರುತ್ಯ ರೈಲ್ವೆಯು ವಂದೇ ಭಾರತ್ ರೈಲುಗಳ ವೇಳಾಪಟ್ಟಿಯನ್ನು ನಿಗದಿತ ನಿಲ್ದಾಣಗಳಲ್ಲಿ ಪರಿಷ್ಕರಿಸಿದೆ. ಇದು ಮಾ.15ರಿಂದ ಜಾರಿಗೆ ಬರಲಿದ್ದು, ಮಾಹಿತಿ ಕೆಳಗಿನಂತಿದೆ. 1. ರೈಲು ಸಂಖ್ಯೆ 20669: ಎಸ್‌ಎಸ್‌ಎಸ್ ಹುಬ್ಬಳ್ಳಿ  -ಪುಣೆ  ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ಬೆಳಗಾವಿಯಲ್ಲಿ ಬೆಳಿಗ್ಗೆ 7:05ರಿಂದ 07:10 ಗಂಟೆ ಮತ್ತು ಘಟಪ್ರಭಾದಲ್ಲಿ ಬೆಳಿಗ್ಗೆ 07:48ರಿಂದ 07:50ರವರೆಗೆ ನಿಲುಗಡೆಯಾಗಲಿದೆ.  2. ರೈಲು ಸಂಖ್ಯೆ 20661: ಕೆಎಸ್‌ಆರ್ ಬೆಂಗಳೂರು -ಧಾರವಾಡ  ವಂದೇ ಭಾರತ್ ಎಕ್ಸ್‌ಪ್ರೆಸ್‌ ರೈಲು ದಾವಣಗೆರೆಯಲ್ಲಿ …

Read More »

GBA ಚುನಾವಣೆ: ಐದು ನಗರ ಪಾಲಿಕೆಗಳ ವಾರ್ಡ್ ವಾರು ಪರಿಷ್ಕೃತ ಕರಡು ಮತದಾರರ ಪಟ್ಟಿ ಬಿಡುಗಡೆ, ಆಕ್ಷೇಪಣೆ ಸಲ್ಲಿಕೆಗೆ ಅವಕಾಶ

ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರ ಪಾಲಿಕೆಗಳ ವಾರ್ಡ್ ವಾರು ಕರಡು ಮತದಾರರ ಪಟ್ಟಿ ಬಿಡುಗಡೆಯಾಗಿದೆ. ಈ ಪಟ್ಟಿಯಲ್ಲಿ ಒಟ್ಟು 88,92,528 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ತಿಳಿಸಿದರು. ಪರಿಷ್ಕೃತ ಕರಡು ಮತದಾರರ ಪಟ್ಟಿಯನ್ನು ಬಿಡುಗಡೆ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನವರಿ 19 ರಂದು ಕರಡು ಮತದಾರರ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿತ್ತು. ಅದರಲ್ಲಿದ್ದ ಲೋಪದೋಷಗಳನ್ನು ಸರಿಪಡಿಸಿ, ಮಾರ್ಪಾಡುಗಳು …

Read More »

ಶಾಸಕ ಬಸವರಾಜ್ ಶಿವಗಂಗಾ ಪಿಎ ಆತ್ಮಹತ್ಯೆ

ಬೆಂಗಳೂರು: ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ  ಪಿಎ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದ ಉಪ್ಪಾರಪೇಟೆ ಬಳಿಯ ಲಾಡ್ಜ್‌ನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಮೃತನನ್ನು ದಾವಣಗೆರೆ  ಮೂಲದ ಶಿವಕುಮಾರ್ ಎಂದು ಗುರುತಿಸಲಾಗಿದ್ದು, ಚನ್ನಗಿರಿ ಶಾಸಕ ಬಸವರಾಜ್ ಶಿವಗಂಗಾ ಪಿಎ ಆಗಿ ಕೆಲಸ ಮಾಡುತ್ತಿದ್ದರು. ಮೃತ ಶಿವಕುಮಾರ್ ಮೈ ತುಂಬಾ ಸಾಲ ಮಾಡಿಕೊಂಡಿದ್ದರು. ಕೆಲ ದಿನಗಳ ಹಿಂದೆಯಷ್ಟೇ ಕೆಲಸದಿಂದ ತೆಗೆಯಲಾಗಿತ್ತು. ಘಟನೆ ನಡೆದ ದಿನ ಹೆಂಡತಿಗೆ ವಿಡಿಯೋ ಕಾಲ್ ಮಾಡಿ, ನನಗೆ …

Read More »

ಡಿಕೆಶಿ ಪರವಾಗಿ ನಾವಿದ್ದೇವೆ, ದೆಹಲಿಯಿಂದ ನಾಳೆನೇ ಬರಲಿ ತೊಂದ್ರೆ ಇಲ್ಲ: ಸತೀಶ್ ಜಾರಕಿಹೊಳಿ

ಬೆಂಗಳೂರು: ದೆಹಲಿಗೆ  ತೆರಳಿರುವ ಡಿಸಿಎಂ ಡಿಕೆಶಿ  ಪರವಾಗಿ ನಾವಿದ್ದೇವೆ. ಅವರು ನಾಳೆನೇ ಬರಲಿ ತೊಂದರೆ ಇಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ವಿಧಾನಸೌಧದಲ್ಲಿ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. ಈ ವೇಳೆ ಡಿಸಿಎಂ ಡಿಕೆಶಿ ದೆಹಲಿಯಲ್ಲೇ ಉಳಿದಿರುವ ವಿಚಾರವಾಗಿ ಪ್ರತಿಕ್ರಿಸಿದರು. ಡಿಸಿಎಂ ಪರವಾಗಿ ನಾವಿದ್ದೇವೆ. ನಾವು ಇಲ್ಲಿ ನೋಡಿಕೊಳ್ಳುತ್ತೇವೆ ಎಂದಿದ್ದಾರೆ. ಆರ್‍ಎಸ್‍ಎಸ್ ಬಗ್ಗೆ ಮಾಜಿ ಸಂಸದ ಅನಂತ ಕುಮಾರ್ ಹೆಗ್ಡೆ ಹೇಳಿಕೆ ವಿಚಾರವಾಗಿ, ಆರ್‍ಎಸ್‍ಎಸ್ ಬ್ಯಾನ್ ಮಾಡ್ತೀವಿ ಅಂತ …

Read More »

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

ಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಿತು. ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ.ರೇವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರು, ಖಾಲಿ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಆಕ್ರೋಶ ವ್ಯಕ್ತಪಡಿಸಿದರು. ವಿಶ್ವಗುರು ಮೋದಿ ದೇಶ ಮಾರಾಟ ಮಾಡುತ್ತಾರೆ ಎಂದು ಭಿತ್ತಿಪತ್ರ ಹಿಡಿದು ಘೋಷಣೆ ಕೂಗಿದರು. ಇದೇ ವೇಳೆ ಮಾತನಾಡಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಜಿ.ಸಿ.ಚಂದ್ರಶೇಖರ್, …

Read More »

ಗ್ಯಾರಂಟಿ ಯೋಜನೆ ಪರಿಷ್ಕರಣೆ ಮಾಡಬೇಕು, ಸಿಎಂ, ಸಚಿವರು ಏನೂ ಮಾತನಾಡಿಲ್ಲ: ಹೆಚ್.ಎಂ ರೇವಣ್ಣ

ಬೆಂಗಳೂರು: ಗ್ಯಾರಂಟಿ ಯೋಜನೆಗಳ  ಪರಿಷ್ಕರಣೆ ಮಾಡುತ್ತೇವೆ, ಆದರೆ ಸಿಎಂ, ಸಚಿವರು ಇನ್ನೂ ಈ ಬಗ್ಗೆ ಮಾತನಾಡಿಲ್ಲ ಎಂದು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಹೆಚ್.ಎಂ ರೇವಣ್ಣ  ಹೇಳಿದ್ದಾರೆ. ಬೆಂಗಳೂರಲ್ಲಿ ಮಾತನಾಡಿದ ಅವರು, 51 ಸಾವಿರ ಕೋಟಿ ಇಟ್ಟು ಗ್ಯಾರಂಟಿ ಯಶಸ್ವಿಯಾಗಿದೆ. 91% ಡಿಬಿಟಿ ಮೂಲಕ ಹಣ ವರ್ಗಾಯಿಸಲಾಗಿದೆ. ಲಂಚ ಇಲ್ಲದೆ ಯೋಜನೆಗಳ ಹಣ ನೇರ ವರ್ಗಾವಣೆ ಆಗಿದೆ. ಯಾರೆಲ್ಲ ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಾರೆ ಅವರಿಗೆ ಸರಿಯಾದ ಮಾಹಿತಿ ಇಲ್ಲ ಎಂದು …

Read More »

ಕೇಂದ್ರದ ಅನ್ಯಾಯದಿಂದ ಸಾಲದ ಹೊರೆ – ಸಾಲರಾಮಯ್ಯ ಎಂದ ಬಿಜೆಪಿಗೆ ಪ್ರಿಯಾಂಕ್ ಖರ್ಗೆ ತಿರುಗೇಟು

ಬೀದರ್‌: ಕೇಂದ್ರದ ಅನ್ಯಾಯದಿಂದ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಬಿಜೆಪಿಗೆ ಸಚಿವ ಪ್ರಿಯಾಂಕ್ ಖರ್ಗೆ ತಿರುಗೇಟು ನೀಡಿದ್ದಾರೆ. ಬೀದರ್‌ನಲ್ಲಿ  ಮಾಧ್ಯಮಗಳ ಜೊತೆ ಅವರು ಮಾತನಾಡಿದರು. ಈ ವೇಳೆ ಬಜೆಟ್‌  ವಿಚಾರವಾಗಿ ಸಾಲಾರಾಮಯ್ಯ ಎಂದು ವ್ಯಂಗ್ಯ ಮಾಡಿದ್ದ ಬಿಜೆಪಿ ವಿರುದ್ಧ ಹರಿಹಾಯ್ದರು. ಅವರಿಗೆ ದೇಶ ಮತ್ತು ರಾಜ್ಯವನ್ನ ಆರ್ಥಿಕವಾಗಿ ಹೇಗೆ ನಡೆಸಬೇಕು ಎಂದು ಗೊತ್ತಿಲ್ಲ. ಕೇಂದ್ರ ಸರ್ಕಾರದ ಅನ್ಯಾಯದಿಂದಾಗಿ ನಮಗೆ ಇಷ್ಟೊಂದು ಸಾಲದ ಹೊರೆಯಾಗಿದೆ ಎಂದು ಅಸಮಾಧಾನ ಹೊರಹಾಕಿದರು. ಕೇಂದ್ರ ಸರ್ಕಾರ …

Read More »

ದಿಕ್ಕು ದೆಸೆಯಿಲ್ಲದ ಪ್ರಗತಿ ಶೂನ್ಯ ಬಜೆಟ್: ಬೊಮ್ಮಾಯಿ

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ರಾಜ್ಯ ಬಜೆಟ್ ದಿಕ್ಕು ದೆಸೆ ಇಲ್ಲದ ಪ್ರಗತಿ ಶೂನ್ಯ ಬಜೆಟ್ ಆಗಿದ್ದು, ಸಾಲದ ಶೂಲಕ್ಕೆ ರಾಜ್ಯವನ್ನು ತೆಗೆದುಕೊಂಡು ಹೋಗುವ ಬಜೆಟ್ ಇದಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ  ಹೇಳಿದರು. ಹಾವೇರಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್ ಕಳಪೆ ಬಜೆಟ್, ಅಭಿವೃದ್ದಿ ಶೂನ್ಯ, ಪ್ರಗತಿ ರಹಿತವಾದ ಅತಿ ಹೆಚ್ಚು ಸಾಲ ಮಾಡಿರುವ ಬಜೆಟ್ ಇದಾಗಿದೆ. 1.32 ಲಕ್ಷ ಕೋಟಿ …

Read More »

ಸಿಎಂ ಬಜೆಟ್‌ನಲ್ಲಿ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿ: ಎಂ.ಬಿ ಪಾಟೀಲ್ ಹರ್ಷ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ ದಾಖಲೆಯ 17ನೇ ಬಜೆಟ್ ಸರ್ವಾಂಗೀಣ ಅಭಿವೃದ್ಧಿ ದೃಷ್ಟಿಕೋನ, ಸಾಮಾಜಿಕ ನ್ಯಾಯ ಮತ್ತು ಪ್ರಾದೇಶಿಕ ಅಸಮತೋಲನ ನಿವಾರಣೆಯ ಸಮಗ್ರ ದೃಷ್ಟಿಕೋನವನ್ನು ಪ್ರತಿಫಲಿಸುತ್ತಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ್ ಹೇಳಿದ್ದಾರೆ. ಈ ಬಗ್ಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರದ ಜನಪರ ಆಡಳಿತಕ್ಕೆ ಈ ಬಜೆಟ್ ಉಜ್ವಲ ಸಾಕ್ಷಿಯಾಗಿದೆ. ಸಿದ್ದರಾಮಯ್ಯ ಅವರು ಬಜೆಟ್ ಗಾತ್ರವನ್ನು 4.48 ಲಕ್ಷ ಕೋಟಿ ರೂ.ಗೆ ಏರಿಸಿರುವುದು ರಚನಾತ್ಮಕ ಕ್ರಮವಾಗಿದೆ. …

Read More »