Breaking News

ಬೆಂಗಳೂರು

ಕೊರೋನಾದಿಂದ ಚೇತರಿಸಿಕೊಂಡವರಿಗೆ ಶಾಕ್; ಶ್ವಾಸಕೋಶಕ್ಕೆ ಹಾನಿಯಾಗಿರಬಹುದು, ಟಿಬಿ ಪರೀಕ್ಷೆಗೆ ಸಲಹೆ

ಬೆಂಗಳೂರು: ಮಾರಕ ಕೊರೋನಾ ಸೋಂಕಿನಿಂದ ಗುಣಮುಖರಾದವರು ಟಿಬಿ ಪರೀಕ್ಷೆ ಮಾಡಿಸಿಕೊಳ್ಳುವಂತೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಆಗಸ್ಟ್ 31 ರವರೆಗೆ ಕ್ಷಯರೋಗ ಪತ್ತೆ ಆಂದೋಲನ ನಡೆಯಲಿದ್ದು, ವಿಧಾನಸೌಧದಲ್ಲಿ ಚಾಲನೆ ನೀಡಿದ ಸಚಿವರು, ಕೊರೋನಾ ಸೋಂಕಿನಿಂದ ಗುಣಮುಖರಾದವರು ಕ್ಷಯರೋಗ ಪತ್ತೆ ಮಾಡಿಸಿಕೊಳ್ಳುವಂತೆ ಸಲಹೆ ನೀಡಿದ್ದಾರೆ. ಸೋಂಕಿನಿಂದ ಶ್ವಾಸಕೋಶಕ್ಕೆ ಹಾನಿಯಾಗಿರಬಹುದು. ರಾಜ್ಯದಲ್ಲಿ 28 ಲಕ್ಷಕ್ಕೂ ಅಧಿಕ ಮಂದಿ ಕೊರೋನಾದಿಂದ ಗುಣಮುಖರಾಗಿದ್ದು, ಅವರಲ್ಲಿ ಶ್ವಾಸಕೋಶಕ್ಕೆ ಹಾನಿ ಉಂಟಾಗಿರುವ ಸಾಧ್ಯತೆಯಿರುತ್ತದೆ. ಕ್ಷಯರೋಗ ಶ್ವಾಸಕೋಶಕ್ಕೆ ಹಾನಿ …

Read More »

ರಾಜ್ಯದಲ್ಲಿ ತೈಲದರ ಇಳಿಕೆ ಪ್ರಸ್ತಾಪ ಇಲ್ಲ- ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು: ತಮಿಳುನಾಡಿನಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ನಮ್ಮ ರಾಜ್ಯದಲ್ಲಿ ಆ ರೀತಿಯ ಪ್ರಸ್ತಾಪ ಇಲ್ಲ ಎಂದಿದ್ದಾರೆ.   ಮಾಧ್ಯಮಗಳ ಜತೆ ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ತಮಿಳುನಾಡು ರಾಜ್ಯದಲ್ಲಿ ಪೆಟ್ರೋಲ್ ಬೆಲೆ 3 ರೂ. ಕಡಿತ ಮಾಡಿದಂತೆ ರಾಜ್ಯದಲ್ಲೂ ಕಡಿತ ಮಾಡುವ ಪ್ರಸ್ತಾಪ ಇಲ್ಲ ಎಂದು ಸ್ಪಷ್ಟನೆ ನೀಡಿದರು.   ಇಂದು 3 ಇಲಾಖೆಗಳ ಪದಾಧಿಕಾರಿಗಳ ಸಭೆ ಮಾಡುತ್ತೇನೆ. …

Read More »

ರಾಜ್ಯದಲ್ಲಿ 3,000 ವೈದ್ಯರು, 7,000 ನರ್ಸ್, 7,000 ಗ್ರೂಪ್ ಡಿ. ಸಿಬ್ಬಂದಿ ನೇಮಕ : ಸಚಿವ ಅಶ್ವತ್ಥನಾರಾಯಣ

ಬೆಂಗಳೂರು: 3ನೇ ಅಲೆ ಮಾತ್ರವಲ್ಲ ಭವಿಷ್ಯದಲ್ಲಿ ಯಾವುದೇ ರೀತಿಯ ಆರೋಗ್ಯ ತುರ್ತು ಸಂದರ್ಭ ಬಂದರೂ ಸಶಕ್ತವಾಗಿ ಎದುರಿಸಲು ಸಾಧ್ಯವಾಗುವಂತೆ ರಾಜ್ಯದ ಎಲ್ಲ ಜಿಲ್ಲಾ, ತಾಲೂಕು ಆಸ್ಪತ್ರೆ, ಸಮುದಾಯ ಮತ್ತು ಪ್ರಥಮಿಕ ಆರೋಗ್ಯ ಕೇಂದ್ರಗಳಲ್ಲಿ ಆರೋಗ್ಯ ಮೂಲಭೂತ ಸೌಲಭ್ಯಗಳನ್ನು ಆಮೂಲಾಗ್ರವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಅಶ್ವತ್ಥನಾರಾಯಣ ಹೇಳಿದರು. ಇದೇ ನಿಟ್ಟಿನಲ್ಲಿ 3,000 ವೈದ್ಯರನ್ನು ನೇಮಕ ಮಾಡಿಕೊಳ್ಳಲಾಗಿದ್ದು, ಇದರಲ್ಲಿ 2,000 ಮಂದಿ ತಜ್ಞ …

Read More »

ಸಚಿವರ ಸರ್ಕಾರಿ ಕಾರಿನಲ್ಲಿ ಉಲ್ಟಾ ಹಾರಿದ ರಾಷ್ಟ್ರ ಧ್ವಜ

ಬೆಂಗಳೂರು: ಕೇಂದ್ರ ರಾಜ್ಯ ಖಾತೆ ಸಚಿವ ನಾರಾಯಣ ಸ್ವಾಮಿ ಅವರ ಕಾರಿನಲ್ಲಿ ರಾಷ್ಟ್ರ ಧ್ವಜ ತಲೆ ಕೆಳಗಾಗಿ (ಉಲ್ಟಾ) ಹಾರಿದ ಘಟನೆ ನಡೆದಿದೆ. ಇಲ್ಲಿಯ ಬಿಜೆಪಿ ಕಚೇರಿಗೆ ಆಗಮಿಸಿದ ಗೂಟದ ಕಾರಿನಲ್ಲಿ ಉಲ್ಟಾ ಧ್ವಜ ಹಾರಾಡಿದೆ. ಕೇಸರಿ, ಬಿಳಿ, ಹಸಿರು ಬದಲಾಗಿ. ಹಸಿರು, ಬಿಳಿ, ಕೇಸರಿ ಧ್ವಜ ಹಾರಾಡಿದೆ. ಆದರೆ, ಈ ಯಡವಟ್ಟು ನಡೆದ ವೇಳೆ ಸಚಿವರು ಆ ಕಾರಿನಲ್ಲಿ ಇರಲಿಲ್ಲ. ಖಾಸಗಿ ಕಾರಿನಲ್ಲಿ ಸಚಿವ ನಾರಾಯಣ ಸ್ವಾಮಿ ಆಗಮಿಸಿದರು. …

Read More »

ಸಿಎಂ ಭೇಟಿ ವೇಳೆ ಮೊಬೈಲ್ ನಿಷೇಧ..!

ಬೆಂಗಳೂರು,ಆ.16- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗುವ ಸಾರ್ವಜನಿಕರ ಮೊಬೈಲ್ ಬಳಕೆ ಕಡ್ಡಾಯವಾಗಿ ನಿಷೇಧಿಸಲಾಗಿದೆ. ಆರ್‍ಟಿನಗರದಲ್ಲಿರುವ ಅವರ ನಿವಾಸದ ಮುಂದೆ ಫಲಕವನ್ನು ಹಾಕಲಾಗಿದ್ದು, ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವ ಸಾರ್ವಜನಿಕರು ಮೊಬೈಲ್‍ಗಳನ್ನು ಬಳಸಬಾರದೆಂದು ಕಟ್ಟುನಿಟ್ಟಿನ ಸೂಚನೆ ಕೊಡಲಾಗಿದೆ. ಒಂದು ವೇಳೆ ಸಾರ್ವಜನಿಕರು ಮೊಬೈಲ್ ಬಳಕೆ ಮಾಡಿದರೆ ಅಂಥವರಿಗೆ ಭೇಟಿಗೆ ಅವಕಾಶವನ್ನೇ ಕೊಡುವುದಿಲ್ಲ ಎಂದು ಎಚ್ಚರಿಸಲಾಗಿದೆ. ಮುಖ್ಯಮಂತ್ರಿಗಳನ್ನು ಭೇಟಿ ಮಾಡಲು ಬರುವವರು ತಮ್ಮ ಕೆಲಸ ಮುಗಿಸಿಕೊಂಡು ಹೋಗುವ ಬದಲು ಸೆಲ್ಫಿಗೆ ಮುಗಿಬೀಳುವುದು, …

Read More »

ಹಾರೋಗೆರಿ ಅಪ್ರಾಪ್ತ ಬಾಲಕಿ ಕೊಲೆ ಪ್ರಕರಣ: ರಾಹುಲ್ ಗಾಂಧಿ ಲಿಂಕ್ ಮಾಡಿ ಜೊಲ್ಲೆ ಖಂಡಿಸಿದ ರಕ್ಷಾ ರಾಮಯ್ಯ!

ಬೆಂಗಳೂರು, ಆ, 16: ಮುಜರಾಯಿ ಸಚಿವೆ ಶಶಿಕಲಾ ಜೊಲ್ಲೆ ನಡೆಯನ್ನು ಯುವ ಕಾಂಗ್ರೆಸ್ ತೀವ್ರವಾಗಿ ಖಂಡಿಸಿದೆ. ಕೆಲ ದಿನಗಳ ಹಿಂದೆ ಖಾಸಗಿ ಸುದ್ದಿ ವಾಹಿನಿ ನಡೆಸಿದ್ದ ಸ್ಟಿಂಗ್ ಆಪರೇಶನ್‌ನಲ್ಲಿ ಸಚಿವ ಶಶಿಕಲಾ ಜೊಲ್ಲೆ ಹೆಸರು ಕೇಳಿ ಬಂದಿತ್ತು. ಅದಾದ ಬಳಿಕ ಅವರನ್ನು ನೂತನ ಸಚಿವ ಸಂಪುಟಕ್ಕೆ ಸೇರಿಸಿಕೊಳ್ಳುವುದಿಲ್ಲ ಎನ್ನಲಾಗಿತ್ತು. ಆದರೆ ಬಿಜೆಪಿ ಹೈಕಮಾಂಡ್ ಮತ್ತೊಮ್ಮೆ ಅವರಿಗೆ ಮಂತ್ರಿಯಾಗುವ ಅವಕಾಶವನ್ನು ಮಾಡಿಕೊಟ್ಟಿದೆ. ಇದೇ ಸಂದರ್ಭದಲ್ಲಿ ಅವರ ನಡೆಯನ್ನು ಯುವ ಕಾಂಗ್ರೆಸ್ ತೀವ್ರವಾಗಿ …

Read More »

ಮನೆಯಲ್ಲಿ ನಿಗೂಢ ಸ್ಫೋಟ; ಪತಿ-ಪತ್ನಿ ಗಂಭೀರ ಮಧ್ಯರಾತ್ರಿ ಮನೆಯಲ್ಲಿ ಏಕಾಏಕಿ ಸ್ಫೋಟ

ಬೆಂಗಳೂರು: ಮಧ್ಯರಾತ್ರಿ ಮನೆಯಲ್ಲಿ ಸಂಭವಿಸಿದ ನಿಗೂಢ ಸ್ಫೋಟಕ್ಕೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಚಲ್ಲಾಪಿಲ್ಲಿಯಾಗಿದ್ದು, ವೃದ್ಧ ದಂಪತಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರಿನ ವಿಜಯನಗರದ ಹಂಪಿನಗರದಲ್ಲಿ ನಡೆದಿದೆ.   ಎರಡು ಅಂತಸ್ತಿನ ಮೊದಲನೇ ಮಹಡಿಯಲ್ಲಿ ಸ್ಫೋಟ ಸಂಭವಿಸಿದ್ದು, ವೃದ್ಧ ದಂಪತಿಗಳಾದ ಸೂರ್ಯನಾರಾಯಣ ಶೆಟ್ಟಿ ಹಾಗೂ ಪತ್ನಿ ಪುಷ್ಪಾವತಮ್ಮ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.   ಇನ್ನು ಸ್ಫೋಟದ ತೀವ್ರತೆಗೆ ಅಕ್ಕಪಕ್ಕದ ಸುಮಾರು ಐದಕ್ಕೂ ಹೆಚ್ಚು ಮನೆಗಳಿಗೆ ಹಾನಿಯುಂಟಾಗಿದೆ. ಘಟನಾಸ್ಥಳಕ್ಕೆ ಪೊಲೀಸರು ಭೇಟಿ …

Read More »

ಇಂದಿನಿಂದ ಕೇಂದ್ರ ಸಚಿವರ ಜನಾಶೀರ್ವಾದ ಯಾತ್ರೆ : ದೇಶಾದ್ಯಂತ ನಡೆಯಲಿದೆ ಯಾತ್ರೆ

ಬೆಂಗಳೂರು: ರಾಷ್ಟ್ರಾದ್ಯಂತ ಕೇಂದ್ರದ ನೂತನ ಸಚಿವರಿಂದ ಜನಾಶೀರ್ವಾದ ಯಾತ್ರೆಗೆ ಸೋಮವಾರ ಚಾಲನೆ ದೊರೆಯಲಿದ್ದು, ರಾಜ್ಯದ ನಾಲ್ವರು ಕೇಂದ್ರ ಸಚಿವರು ತಮ್ಮ ವಿಭಾಗ ವ್ಯಾಪ್ತಿಯಲ್ಲಿ ಯಾತ್ರೆ ನಡೆಸಲಿದ್ದಾರೆ. ಜನರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳುವ ಉದ್ದೇಶದಿಂದ ಈ ಯಾತ್ರೆ ಹಮ್ಮಿಕೊಳ್ಳಲಾಗಿದೆ. ಹಳೇ ಮೈಸೂರು ಭಾಗದಲ್ಲಿ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಖಾತೆ ಸಹಾಯಕ ಸಚಿವ ನಾರಾಯಣಸ್ವಾಮಿ, ಬೆಂಗಳೂರು ವಿಭಾಗದಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯಮಶೀಲತೆ ಸಹಾಯಕ ಸಚಿವ ರಾಜೀವ್‌ ಚಂದ್ರಶೇಖರ್‌, ಕರಾವಳಿ ಭಾಗದಲ್ಲಿ (ದಕ್ಷಿಣ ಕನ್ನಡ) …

Read More »

ನಕಲಿ ಅಂಕಪಟ್ಟಿ ಸರಕಾರಿ, ಖಾಸಗಿ ಕೆಲಸ ಗಿಟ್ಟಿಸಿಕೊಂಡ ಹಲವರು ! ತನಿಖೆಯಲ್ಲಿ ಗೊತ್ತಾಗಿದೆ.

ಬೆಂಗಳೂರು, ಆ.14: ನಕಲಿ ಅಂಕಪಟ್ಟಿ ಸಿದ್ಧಪಡಿಸಿ ಮಾರಾಟ ಮಾಡುತ್ತಿದ್ದ ಪಂಜಾಬಿ ದಂಪತಿ ಬಂಧನ ಪ್ರಕರಣ ಸಂಬಂಧ ನಕಲಿ ಪದವಿ ಸ್ನಾತಕೋತ್ತರ ಅಂಕಪಟ್ಟಿ ಪಡೆದ ಕೆಲವರು ಖಾಸಗಿ ಹಾಗೂ ಸರಕಾರಿ ಕೆಲಸ ಗಿಟ್ಟಿಸಿಕೊಂಡಿರುವುದು ಸಿಸಿಬಿ ಪೊಲೀಸರ ತನಿಖೆಯಲ್ಲಿ ಗೊತ್ತಾಗಿದೆ. ದಂಪತಿಯ ವಿಚಾರಣೆ ವೇಳೆ ನಕಲಿ ಅಂಕಪಟ್ಟಿಯ ಬೃಹತ್ ಜಾಲಪತ್ತೆಯಾಗಿದ್ದು, ದಂಪತಿಯಿಂದ ನಕಲಿ ಅಂಕಪಟ್ಟಿ ಪಡೆದವರ ಸಂಪೂರ್ಣ ಮಾಹಿತಿಯನ್ನು ಸಿಸಿಬಿ ಪೊಲೀಸರು ಸಂಗ್ರಹಿಸುತ್ತಿದ್ದಾರೆ. ಪ್ರತಿಷ್ಠಿತ ವಿಶ್ವವಿದ್ಯಾಲಯಗಳ ಹೆಸರಿನಲ್ಲಿ ನಕಲಿ ಅಂಕಪಟ್ಟಿಗಳನ್ನು ತಯಾರಿಸಿ ಪಿಯುಸಿ …

Read More »

21 ಪೊಲೀಸ್‌ ಅಧಿಕಾರಿಗಳಿಗೆ ರಾಷ್ಟ್ರಪತಿ ಪದಕ

ಬೆಂಗಳೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಇಬ್ಬರು ಐಪಿಎಸ್‌ ಅಧಿಕಾರಿಗಳು ಸೇರಿ ರಾಜ್ಯದ 21 ಮಂದಿ ಪೊಲೀಸ್‌ ಅಧಿಕಾರಿಗಳು ಪ್ರಸಕ್ತ ಸಾಲಿನ ರಾಷ್ಟ್ರಪತಿ ಪದಕಕ್ಕೆ ಭಾಜನರಾಗಿದ್ದಾರೆ. ಬೆಂಗಳೂರು ನಗರದ ಸಿಐಡಿಯ ಆರ್ಥಿಕ ವಿಭಾಗದ ಎಡಿಜಿಪಿ ಉಮೇಶ್‌ ಕುಮಾರ್‌, ರಾಜ್ಯದ ಆಂತರಿಕಾ ಭದ್ರತಾ ದಳ (ಐಎಸ್‌ಡಿ) ಎಡಿಜಿಪಿ ಜೆ. ಅರುಣ್‌ ಚಕ್ರವರ್ತಿ, ಕೆಎಸ್‌ಆರ್‌ಪಿ 3ನೇ ಬೆಟಾಲಿಯನ್‌ ಕಮಾಂಡೆಂಟ್‌ ಎಂ.ವಿ. ರಾಮಕೃಷ್ಣ ಪ್ರಸಾದ್‌, ಮಲ್ಲೇಶ್ವರಂ ಉಪವಿಭಾಗ ಎಸಿಪಿ ಕೆ.ಎಸ್‌.ವೆಂಕಟೇಶ್‌ ನಾಯ್ಡು, ಚಿಕ್ಕಪೇಟೆ ಉಪವಿಭಾಗದ ಎಸಿಪಿ …

Read More »