ಬೆಂಗಳೂರು: ಕೋವಿಡ್ ಪ್ರಕರಣಗಳ ಸಂಖ್ಯೆಯಲ್ಲಿ ಶೇಕಡ 2ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಮಾತ್ರ ಒಂಬತ್ತನೇ ತರಗತಿಯಿಂದ ದ್ವಿತೀಯ ಪಿಯುಸಿವರೆಗಿನ ವಿದ್ಯಾರ್ಥಿಗಳಿಗೆ ಇದೇ 23ರಿಂದ ಭೌತಿಕ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರ ತೀರ್ಮಾನ ಕೈಗೊಂಡಿದೆ. ಶನಿವಾರ ಕೋವಿಡ್ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಕೋವಿಡ್ ದೃಢಪ್ರಮಾಣ ದರ ಶೇ 2ಕ್ಕಿಂತ ಹೆಚ್ಚಿರುವ ಜಿಲ್ಲೆಗಳಲ್ಲಿ ವಿದ್ಯಾರ್ಥಿಗಳಿಗೆ ಭೌತಿಕ ತರಗತಿ ಆರಂಭಿಸದೇ …
Read More »5ನೇ ಸ್ವಾತಂತ್ರೋತ್ಸವದ ಸಂಭ್ರಮ; ರಾಜ್ಯವನ್ನುದ್ದೇಶಿಸಿ ಸಿಎಂ ಭಾಷಣ
ಬೆಂಗಳೂರು: 75ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಬೆಂಗಳೂರಿನ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬಸವರಾಜ್ ಬೊಮ್ಮಾಯಿ, ರಾಜ್ಯದ ಜನತೆಗೆ ಸ್ವಾತಂತ್ರ್ಯೋತ್ಸವ ದಿನದ ಶುಭಾಷಯ ಕೋರಿದರು. ಬಳಿಕ ಮಾತನಾಡಿದ ಸಿಎಂ, ಇಂದಿನಿಂದ ನವ ಕರ್ನಾಟಕ ನಿರ್ಮಾಣ ಆರಂಭ. ರೈತರ ಬದುಕಿನಲ್ಲಿ ಕ್ರಾಂತಿ ತರುವ ಕಾಲ ಬಂದಿದೆ. ರೈತರನ್ನು ಕೇಂದ್ರ ಬಿಂದುವನ್ನಾಗಿ ಅಭಿವೃದ್ಧಿ ಕೆಲಸ ಮಾಡಲಾಗುವುದು. ರೈತನ ಶ್ರಮ, ಕೂಲಿಕಾರನ ಬೆವರಲ್ಲಿ ದೇವರಿದ್ದಾನೆ. ಇದಕ್ಕೆ ನಾವು ಬೆಲೆ …
Read More »ಬಸ್ ಪ್ರಯಾಣಿಕರಿಗೆ ಸಾರಿಗೆ ಸಚಿವ ಶ್ರೀರಾಮುಲು ಸಿಹಿ ಸುದ್ದಿ
ಬೆಂಗಳೂರು: ಡೀಸೆಲ್ ದರ, ಕೊರೋನಾದಿಂದ ಆರ್ಥಿಕ ನಷ್ಟ, ಬಿಡಭಾಗಗಳ ದರ ಹೆಚ್ಚಳವಾಗಿದ್ದರಿಂದ ಬಸ್ ಪ್ರಯಾಣ ದರವನ್ನು ಏರಿಕೆ ಮಾಡುವ ಸಾಧ್ಯತೆ ಇದೆ ಎನ್ನಲಾಗಿತ್ತು. ಆದರೆ, ಸದ್ಯಕ್ಕೆ ಪ್ರಯಾಣ ದರ ಏರಿಕೆ ಮಾಡದಿರಲು ಸರ್ಕಾರ ನಿರ್ಧರಿಸಿದೆ. ಸದ್ಯಕ್ಕೆ ಬಸ್ ದರ ಹೆಚ್ಚಳ ಮಾಡಿ ಜನರಿಗೆ ಮಾಡುವುದಿಲ್ಲವೆಂದು ಸಾರಿಗೆ ಸಚಿವ ಬಿ. ಶ್ರೀರಾಮುಲು ತಿಳಿಸಿದ್ದಾರೆ. ಹಿರಿಯ ಅಧಿಕಾರಿಗಳೊಂದಿಗೆ ಸಾರಿಗೆ ಇಲಾಖೆ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಸಲಾಗಿದೆ. ನಷ್ಟದಲ್ಲಿರುವ ಸಾರಿಗೆ ಸಂಸ್ಥೆಯನ್ನು ಲಾಭದತ್ತ ತೆಗೆದುಕೊಂಡು …
Read More »ಸಂಗೊಳ್ಳಿ ರಾಯಣ್ಣ ಜನ್ಮ ದಿನ, ಹುತಾತ್ಮರ ದಿನ ಆಚರಣೆಗೆ ರಾಜ್ಯ ಸರ್ಕಾರದ ಆದೇಶ
ಬೆಂಗಳೂರು: ಸ್ವಾತಂತ್ರ ಹೋರಾಟಗಾರ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮ ದಿನವಾದ ಆಗಸ್ಟ್ 15 ಹಾಗೂ ಹುತಾತ್ಮ ದಿನ ಜನವರಿ 26ರ ದಿನದಂದು ರಾಜಧಾನಿ ಮತ್ತು ಎಲ್ಲ ಜಿಲ್ಲೆಗಳಲ್ಲಿ ವಿವಿಧ ಕಾರ್ಯಕ್ರಮ ಹಮ್ಮಿಕೊಂಡು ಸರ್ಕಾರಿ ಗೌರವ ಸಲ್ಲಿಸುವಂತೆ ಸರ್ಕಾರದ ಅಧೀನ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದಾರೆ. ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಜನ್ಮ ದಿನವಾದ ಆಗಸ್ಟ್ 15 ಹಾಗೂ ಹುತಾತ್ಮ ದಿನ ಜನವರಿ 26 ದಿನದಂದು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಸರ್ಕಾರದ ಸಕಲ …
Read More »ರಾಜ್ಯದ ಜನರಿಗೆ ಸಿಎಂ ಬೊಮ್ಮಾಯಿ ಭರ್ಜರಿ ಗುಡ್ ನ್ಯೂಸ್: ‘ಅಮೃತ’ ಹೊಸ ಯೋಜನೆಗಳ ಘೋಷಣೆ
ಬೆಂಗಳೂರು: ಬೆಂಗಳೂರಿನಲ್ಲಿ 75 ನೇ ಸ್ವಾತಂತ್ರೋತ್ಸವದ ಅಂಗವಾಗಿ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಧ್ವಜಾರೋಹಣ ನೆರವೇರಿಸಿದ್ದಾರೆ. ನಂತರ ಮಾತನಾಡಿದ ಅವರು, ಕೃಷಿ, ರೈತರ ಬದುಕಿನಲ್ಲಿ ಸಂಕಷ್ಟದ ಸಮಯವಾಗಿದೆ. ರೈತರನ್ನು ಕೃಷಿಯನ್ನು ಕೇಂದ್ರವಾಗಿಟ್ಟುಕೊಂಡು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗಿದೆ. ರೈತ ಏಕಿಷ್ಟು ಪ್ರಾಮುಖ್ಯವೆಂಬುದಕ್ಕೆ ಒಂದು ಮಾತಿದೆ. ರವೀಂದ್ರನಾಥ ಠಾಗೋರ್ ಅವರಿಗೆ ದೇವರು ಎಲ್ಲಿದ್ದಾನೆ ಎಂದು ಒಬ್ಬನು ಪ್ರಶ್ನಿಸಿದ. ರೈತರ ಶ್ರಮದಲ್ಲಿ ಕೂಲಿಕಾರ ಬೆವರಲ್ಲಿ ದೇವರಿದ್ದಾನೆ ಎಂದು ಅವರು ಹೇಳಿದ್ದರು. …
Read More »ಸಾರಿಗೆ ನಿಗಮದ ನಿದ್ದೆಗೆಡಿಸಿದ ಗಾಂಜಾ ಸಾಗಣೆ! ಸದ್ಯದ ವ್ಯವಸ್ಥೆಯಲ್ಲಿ ಜಾಡು ಪತ್ತೆ ಅಸಾಧ್ಯ!
ಬೆಂಗಳೂರು: ಗಾಂಜಾ ಸಾಗಣೆಗೆ ಸರ್ಕಾರಿಬಸ್‌ಗಳನ್ನು ಸ್ವತಃ ಸಿಬ್ಬಂದಿ ಇಬ್ಬರು ಬಳಸಿಕೊಳ್ಳುತ್ತಿದ್ದ ಅಂಶ ಈಗ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಅಧಿಕಾರಿಗಳ ನಿದ್ದೆಗೆಡಿಸಿದ್ದು, ಬರುವ ದಿನಗಳಲ್ಲಿ ಇದರ ಜಾಡು ಪತ್ತೆ ಹಾಗೂ ಕಡಿವಾಣವೇ ದೊಡ್ಡ ಸವಾಲಾಗಿದೆ. ಬಸ್‌ಗಳಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ಕಿರಿಯ ಸಹಾಯಕ ವಿಠಲ್ ಭಜಂತ್ರಿ ಹಾಗೂ ಚಾಲಕ ಕಂ ನಿರ್ವಾಹಕ ಶರಣ ಬಸಪ್ಪ ಕ್ಷತ್ರೀಯ ಎಂಬುವರು ಲಗೇಜುಗಳ ರೂಪದಲ್ಲಿ ಗಾಂಜಾವನ್ನು ವಿಜಯಪುರ ಮತ್ತು ಕಲಬುರಗಿಯಿಂದ ಬೆಂಗಳೂರಿಗೆ …
Read More »ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿದ ತಮಿಳುನಾಡು ಸರ್ಕಾರ; ಕರ್ನಾಟಕದಲ್ಲಿ ಯಾವಾಗ?; ಸಿದ್ದರಾಮಯ್ಯ ಪ್ರಶ್ನೆ
ಬೆಂಗಳೂರು: ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ಸರ್ಕಾರ ಪ್ರತಿ ಲೀಟರೆ ಪೆಟ್ರೋಲ್ ಬೆಲೆಯಲ್ಲಿ ರೂ.3 ಕಡಿತಗೊಳಿಸಿ ಆದೇಶಿಸಿದ್ದು, ತಮಿಳುನಾಡು ಸರ್ಕಾರ ಈ ನಿರ್ಧಾರವನ್ನು ರಾಜ್ಯದ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಸ್ವಾಗತಿಸಿದ್ದಾರೆ. ಅಲ್ಲದೆ, ಕರ್ನಾಟಕದಲ್ಲಿ ಯಾವಾಗ ಎಂದು ಶುಕ್ರವಾರ ಪ್ರಶ್ನಿಸಿದ್ದಾರೆ. ಸಾಮಾಜಿಕ ಜಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಪೆಟ್ರೋಲ್ ಮೇಲಿನ ಸುಂಕವನ್ನು ರೂ.3 ಇಳಿಸಿ ತಮಿಳುನಾಡು ಸರ್ಕಾರ ಲಕ್ಷಾಂತರ ಜನರಿಗೆ ಸಹಾಯ ಮಾಡಿದೆ. ನಾನು …
Read More »ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಈ ಬಾರಿ ಪಕ್ಷದ ಚಿಹ್ನೆ ಮೇಲೆ ನಡೆಯುವುದು ಫಿಕ್ಸ್ ಆಗಿದೆ.
ಬೆಂಗಳೂರು – ಬೆಳಗಾವಿ ಮಹಾನಗರ ಪಾಲಿಕೆ ಚುನಾವಣೆ ಈ ಬಾರಿ ಪಕ್ಷದ ಚಿಹ್ನೆ ಮೇಲೆ ನಡೆಯುವುದು ಫಿಕ್ಸ್ ಆಗಿದೆ. ಕಾಂಗ್ರೆಸ್ ಮತ್ತು ಬಿಜೆಪಿ ಚುನಾವಣೆಗೆ ಸಜ್ಜಾಗುತ್ತಿದ್ದು, ಉಸ್ತುವಾರಿಗಳನ್ನು ನೇಮಿಸಲಾಗಿದೆ. ಭಾರತೀಯ ಜನತಾ ಪಾರ್ಟಿ ಜಿಲ್ಲಾ ಉಸ್ತುವಾರಿ ಸಚಿವಗೋವಿಂದ ಕಾರಜೋಳ ಮತ್ತು ಶಾಸಕ ಅಭಯ ಪಾಟೀಲ ಅವರಿಗೆ ಚುನಾವಣೆ ಹೊಣೆ ವಹಿಸಿದೆ. ಕಾಂಗ್ರೆಸ್ ಮಾಜಿ ಸಚಿವ ಎಂ.ಬಿ.ಪಾಟೀಲ ಅವರಿಗೆ ಜವಾಬ್ದಾರಿ ನೀಡಿದೆ. ತನ್ಮೂಲಕ ಚುನಾವಣೆಗೆ ಎಲ್ಲ ಸಿದ್ಧತೆ ಆರಂಭವಾಗಿದೆ. ಬಿಜೆಪಿ ಹುಬ್ಬಳ್ಳಿ -ಧಾರವಾಡಕ್ಕೆ …
Read More »ಸ್ವಾತಂತ್ರ್ಯ ದಿನಾಚರಣೆಯ ಸಿದ್ದತೆ: ಅಧಿಕಾರಿಗಳಿಂದ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಪರಿಶೀಲನೆ
ಬೆಂಗಳೂರು :ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಸಿದ್ಧತೆಯನ್ನ ನಡೆಸಲಾಗುತ್ತಿದ್ದು, ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮ ನಡೆಯಲಿದೆ. ನೂತನ ಸಿಎಂ ಬಸವರಾಜ ಬೊಮ್ಮಾಯಿ ರವರಿಂದ ಧ್ವಜಾರೋಹಣ ನಡೆಯುತ್ತದೆ. ಆದ್ದರಿಂದ ಪೊಲೀಸ್ ಆಯುಕ್ತ ಕಮಲ್ ಪಂಥ್, ಪಾಲಿಕೆ ಮುಖ್ಯ ಆಯುಕ್ತ ಗೌರವ್ ಗುಪ್ತಾ ಬೆಂಗಳೂರು ನಗರ ಡಿಸಿ ಮಂಜುನಾಥ್, ಪರಿಶೀಲನೆ ನಡೆಸಿದ್ದಾರೆ. ಇವರ ಜೊತೆಗೆ ಸಿಸಿಬಿ ಮುಖ್ಯಸ್ಥ ಸಂದೀಪ್ ಪಾಟೀಲ್ ರವರು ಸಾಥ್ ನೀಡಿದ್ದಾರೆ. ಇನ್ನೂ …
Read More »ಕೆಎಸ್‌ಆರ್‌ಟಿಸಿ ಬಸ್ ಚಾಲಕ ನಿರ್ವಾಹಕರೇ ಗಾಂಜಾ ಮಾರಾಟ ಮಾಡುತಿದ್ದ ಪ್ರಕರಣ ಪತ್ತೆ ; ಇಬ್ಬರ ಬಂಧನ
ಬೆಂಗಳೂರು: ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಗಾಂಜಾ ತಂದು ಮಾರಾಟ ಮಾಡುತ್ತಿದ್ದ ಆರೋಪದಡಿ ಬಿಎಂಟಿಸಿ ಬಸ್ ಚಾಲಕ, ನಿರ್ವಾಹಕರನ್ನು ಕೆಂಗೇರಿ ಪೊಲೀಸರು ಬಂಧಿಸಿದ್ದಾರೆ. ವಿಠ್ಠಲ್ ಭಜಂತ್ರಿ ಮತ್ತು ಶರಣಬಸಪ್ಪ ಎಂಬುವವರೇ ಬಂಧಿತರು ಬಂಧಿತರಿಂದ 9.800 ಕೆಜಿ ಗಾಂಜಾವನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಆರೋಪಿಗಳು ಕಳೆದ ಮೂರು ವರ್ಷಗಳಿಂದ ಕೆಂಗೇರಿ ಬಳಿ ತುರಹಳ್ಳಿ ಅರಣ್ಯ ಪ್ರದೇಶದಲ್ಲಿಯೂ ಗಾಂಜಾ ಮಾರಾಟ ಮಾಡುತ್ತಿದ್ದರು. ಬಂಧಿತರು ವಿಜಯಪುರ, ಕಲಬುರಗಿಯಿಂದ ಗಾಂಜಾ ತಂದು ಮಾರುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಬಿಎಂಟಿಸಿ …
Read More »