Breaking News

ಬೆಂಗಳೂರು

ದೂರದೃಷ್ಟಿ ಇಟ್ಟುಕೊಂಡು ಸಮರ್ಥವಾಗಿ ವಿದ್ಯುತ್ ನಿರ್ವಹಣೆ ಮಾಡಿ

ಬೆಂಗಳೂರು : ವಿದ್ಯುತ್ ಕ್ಷೇತ್ರದಲ್ಲಿ ಸಾವಲಂಬಿ ಆಗುವುದರ ಜೊತೆಗೆ ಸಮರ್ಥವಾಗಿ ವಿದ್ಯುತ್ ನಿರ್ವಹಣೆಯನ್ನು ದೂರದೃಷ್ಟಿಯನ್ನು ಇಟ್ಟುಕೊಂಡು ಕೆಲಸ ಮಾಡುವಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಸೂಚನೆ ನೀಡಿದರು.‌ ಮುಖ್ಯಮಂತ್ರಿಯಾದ ನಂತರ ಇದೇ ಮೊದಲ ಬಾರಿಗೆ ಬೆಂಗಳೂರಿನಲ್ಲಿ ನಡೆಸಿದ ಇಂಧನ ಇಲಾಖೆ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಅಧಿಕಾರಿಗಳಿಗೆ ಈ ಸೂಚನೆ ನೀಡಿದರು. ವಿದ್ಯುತ್ ಉತ್ಪಾದನೆ ಮತ್ತು ನಿರ್ವಹಣೆ ಇನ್ನು ಬಹಳ ವ್ಯವಸ್ಥಿತವಾಗಿ ಮಾಡಬೇಕು. ಮಾರುಕಟ್ಟೆ ಸ್ಥಿತಿಗತಿಯನ್ನು ಆಧರಿಸಿ ಹೆಚ್ಚಿನ ದರಕ್ಕೆ …

Read More »

ಸರ್ಕಾರದ ಹೂ ನಿಷೇಧ ಆದೇಶಕ್ಕೆ ಹೂ ಮಾರಾಟಗಾರರ ಪ್ರತಿಭಟನೆ

ಬೆಂಗಳೂರು, – ಸರಕಾರದ ಮುಖ್ಯ ಕಾರ್ಯದರ್ಶಿ ರವಿ ಕುಮಾರ್ ಅವರು ಸರ್ಕಾರಿ ಕಾರ್ಯಕ್ರಮಗಳಲ್ಲಿ ಹೂಗುಚ್ಚ, ಹಾರ, ತುರಾಯಿ, ಹಣ್ಣಿನ ಬುಟ್ಟಿಯನ್ನು ನೀಡದಂತೆ ಹೊರಡಿಸಿರುವ ಆದೇಶವನ್ನು ಕೂಡಲೇ ಹಿಂದಕ್ಕೆ ತೆಗೆದುಕೊಳ್ಳಬೇಕು ಎಂದು ಆಗ್ರಹಿ ದಕ್ಷಿಣ ಭಾರತದ ಪುಷ್ಪ ಬೆಳೆಗಾರರ ಸಂಘ, ರಾಜ್ಯದ ಎಲ್ಲಾ ಪುಷ್ಪ ಬೆಳೆಗಾರರು ಹಾಗೂ ಪುಷ್ಪ ಬೆಳೆಗಾರರ ರೈತ ಸಂಘಟನೆಗಳು, ರಾಜ್ಯದ ಎಲ್ಲಾ ಪುಷ್ಪ ಮಾರಾಟಗಾರರು ಮತ್ತು ಪುಷ್ಪ ಮಾರಾಟಗಾರರ ಸಂಘಗಳ ವತಿಯಿಂದ ನಾಳೆ (ಗುರುವಾರ) ಬೃಹತ್ ಪ್ರತಿಭಟನೆಯನ್ನು …

Read More »

ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ಇಂದು(ಬುಧವಾರ, ಆಗಸ್ಟ್ 11) ವೇಳಾಪಟ್ಟಿ ಪ್ರಕಟಿಸಿದೆ.

ಬೆಂಗಳೂರು : ಕಳೆದ ಮೂರು ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದ ಹುಬ್ಬಳ್ಳಿ-ಧಾರವಾಡ, ಬೆಳಗಾವಿ ಹಾಗೂ ಕಲಬುರಗಿ ಮಹಾನಗರ ಪಾಲಿಕೆಗಳ ಸಾರ್ವತ್ರಿಕ ಚುನಾವಣೆಗೆ ಕೊನೆಗೂ ಕಾಲ ಕೂಡಿ ಬಂದಿದ್ದು, ರಾಜ್ಯ ಚುನಾವಣಾ ಆಯೋಗ ಇಂದು(ಬುಧವಾರ, ಆಗಸ್ಟ್ 11) ವೇಳಾಪಟ್ಟಿ ಪ್ರಕಟಿಸಿದೆ. ಅದರಂತೆ, ಈ ಮೂರು ಮಹಾನಗರ ಪಾಲಿಕೆಗಳಿಗೆ ಸೆ.3 ರಂದು ಚುನಾವಣೆ ನಡೆಯಲಿದ್ದು, ಸೆ.6ಕ್ಕೆ ಫಲಿತಾಂಶ ಹೊರಬೀಳಲಿದೆ. ಈ ಸಂಬಂಧ ಆ.16ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅದೇ ದಿನದಿಂದ ಮೂರು ಮಹಾನಗರ …

Read More »

ನಮಗೆ ಬೆಂಕಿ ಬಂಡಾಯ ಏನೂ ಇಲ್ಲ : ಸಚಿವ ಶ್ರೀರಾಮುಲು

ಬೆಂಗಳೂರು : ನಮಗೆ ಬೆಂಕಿ ಬಂಡಾಯ ಏನೂ ಇಲ್ಲ ನಮ್ಮದು ಶಿಸ್ತಿನ ಪಕ್ಷ, ನಮ್ಮ ಹೈಕಮಾಂಡ್ ಇದೆ ಎಂದು ಸಚಿವ ಶ್ರೀರಾಮುಲು ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆಯ ವಿಚಾರಕ್ಕೆ ಸಂಬಂಧಿಸಿದಂತೆ ರಾಮುಲು ಅಸಮಧಾನಗೊಂಡಿದ್ದರೆ ನಾನು ಕೆಲವು ಮಾಧ್ಯಮದಲ್ಲಿ ನೋಡಿದ್ದೇನೆ. ನನಗೆ ಯಾವ ಅಸಮಾಧಾನ ಇಲ್ಲ, ನಮ್ಮದು ಶಿಸ್ತಿನ ಪಕ್ಷ, ಹೈಕಮಾಂಡ್ ಎಲ್ಲವನ್ನು ನಿರ್ಧರಿಸುತ್ತದೆ ಎಂದಿ ಹೇಳಿದ್ದಾರೆ. ನನಗೆ ಕೊಟ್ಟ ಸಾರಿಗೆ ಇಲಾಖೆ ನಿರ್ವಹಣೆ ‌ಮಾಡುತ್ತೇನೆ. ಜನಪರವಾದ ಕೆಲಸ ‌ಮಾಡಬೇಕು. …

Read More »

ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು

ದೆಹಲಿ: ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವು ಪ್ರಕರಣಕ್ಕೆ ಸಂಬಂಧಿಸಿ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಕೆಯಾಗಿದೆ.   ವಿಧಾನಸಭೆಯ ನಿವೃತ್ತ ಭದ್ರತಾ ಅಧೀಕ್ಷಕರಾದ ಎಂ.ಎನ್.ಪಿಳ್ಳಪ್ಪ ಎಂಬುವವರು ದೂರು ನೀಡಿದ್ದು, ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕ್ರಮ‌ ಕೈಗೊಳ್ಳಬೇಕು ಮತ್ತು ಮೃತರ ಕುಟುಂಬಕ್ಕೆ ಸೂಕ್ತ ಪರಿಹಾರ ಒದಗಿಸಲು ಮನವಿ ಮಾಡಿದ್ದಾರೆ.

Read More »

ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆಗೆ 1 ವರ್ಷ; ಇನ್ನೂ ನನಗೆ ನ್ಯಾಯ ಸಿಕ್ಕಿಲ್ಲಾ ಎಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ

ಬೆಂಗಳೂರು: ಒಂದು ವರ್ಷದ ಹಿಂದೆ ಇಡೀ ಬೆಂಗಳೂರಿಗೆ ಬೆಂಗಳೂರೆ ಬೆಚ್ಚಿ ಬೀಳುವಂತ ಘಟನೆ ನಡೆದಿತ್ತು. ಕೆಜಿ ಹಳ್ಳಿ-ಡಿಜೆ ಹಳ್ಳಿ ಗಲಭೆ ಪ್ರಕರಣ(DJ Halli and KG Halli Violence) ಜನರ ನಿದ್ದೆ ಕೆಡಿಸಿತ್ತು. ಒಂದು ಫೇಸ್​ಬುಕ್ ಪೋಸ್ಟ್​ನಿಂದ ಭಾರಿ ಅನಾಹುತ ನಡೆದಿತ್ತು. ಶಾಸಕ ಅಖಂಡ ಶ್ರೀನಿವಾಸ ಮೂರ್ತಿ(Akhanda Srinivas Murthy) ಮನೆ ಬೆಂಕಿಗೆ ಆಹುತಿಯಾಗಿತ್ತು. ಸದ್ಯ ಇಂದು ಈ ಘಟನೆ ನಡೆದು ಒಂದು ವರ್ಷ ಕಳೆದಿದೆ. ಈ ಬಗ್ಗೆ ಡಿಜೆ …

Read More »

ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡಬೇಕು : ಸಿಎಂ ಬೊಮ್ಮಾಯಿ

ಬೆಂಗಳೂರು : ಪೊಲೀಸರು ಜನಸ್ನೇಹಿಯಾಗಿ ಕೆಲಸ ಮಾಡುವ ಮೂಲಕ ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಬೇಕು ಮತ್ತು ಅಪರಾಧವನ್ನು ಸಂಪೂರ್ಣವಾಗಿ ಸದೆಬಡಿಯುವ ಕೆಲಸ ಮಾಡಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರರಿಗೆ ಸಿಎಂ ಬೊಮ್ಮಾಯಿ ನಿರ್ದೇಶನ ನೀಡಿದ್ದಾರೆ. ಅಪರಾಧ ಪ್ರಕರಣಗಳನ್ನು ಹತೋಟಿಗೆ ತರಬೇಕು. ಜೂಜು, ಡಾರ್ಕ್ವೆಬ್‌ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜೀ ಮಾಡಿಕೊಳ್ಳುವಂತಿಲ್ಲ. ಭೂ ವಿವಾದದ ಹಿನ್ನೆಲೆಯಲ್ಲಿ ಸಂಭವಿಸುವ ಅಪರಾಧ ಪ್ರಕರಣಗಳನ್ನು ತಡೆಗಟ್ಟಬೇಕು. ಮಾದಕ ವಸ್ತುಗಳ …

Read More »

ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್​ ಸಿಂಗ್​ಗೆ ಸೂಚನೆ ನೀಡಿದ್ದಾರೆ​.

ಬೆಂಗಳೂರು: ಸಚಿವ ಸ್ಥಾನಕ್ಕೆ ಆನಂದ್ ಸಿಂಗ್​ ರಾಜೀನಾಮೆ ನೀಡುತ್ತಾರೆ ಎನ್ನುವ ಸುದ್ದಿ ಎಲ್ಲೆಡೆ ಹರಿದಾಡುತ್ತಿದ್ದಂತೆ, ಮಾಜಿ ಮುಖ್ಯಮಂತ್ರಿ ಬಿಎಸ್​ ಯಡಿಯೂರಪ್ಪ ತಮ್ಮನ್ನು ಭೇಟಿಯಾಗುವಂತೆ ಸಚಿವ ಆನಂದ್​ ಸಿಂಗ್​ಗೆ ಸೂಚನೆ ನೀಡಿದ್ದಾರೆ​.   ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ರಚನೆಯಾಗುತ್ತಿದ್ದಂತೆ ಅನೇಕ ಸಚಿವರು ತಮಗೆ ನೀಡಿದ ಖಾತೆಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದ್ದಾರೆ. ಆನಂದ್​ ಸಿಂಗ್​ ಕೂಡ ಖಾತೆ ಬದಲಾವಣೆಗೆ ಪಟ್ಟು ಹಿಡಿದಿದ್ದು, ಇಂಧನ ಹಾಗೂ ಅರಣ್ಯ ಖಾತೆ ನೀಡುವಂತೆ ವರಿಷ್ಠರ …

Read More »

ಸಮಾಜದಲ್ಲಿ ಜೂಜು, ಡಾರ್ಕ್‌ ವೆಬ್‌ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು.

ಬೆಂಗಳೂರು: ಸಮಾಜದಲ್ಲಿ ಜೂಜು, ಡಾರ್ಕ್‌ ವೆಬ್‌ ಮತ್ತಿತರ ಕಾನೂನು ಬಾಹಿರ ಚಟುವಟಿಕೆಗಳನ್ನು ನಿಯಂತ್ರಿಸಬೇಕು. ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳುವಂತಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪೊಲೀಸ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ಮಂಗಳವಾರ ವಿಧಾನಸೌಧದಲ್ಲಿ ರಾಜ್ಯದ ಹಿರಿಯ ಪೊಲೀಸ್‌ ಅಧಿಕಾರಿಗಳೊಂದಿಗೆ ಸಭೆ ನಡೆಸಿ ವಿವಿಧ ವಿಷಯಗಳ ಕುರಿತು ಚರ್ಚಿಸಿದರು. ರಾಜ್ಯದಲ್ಲಿ ಅತ್ಯುತ್ತಮ ಪೊಲೀಸ್‌ ಅಧಿಕಾರಿಗಳ ತಂಡ ಕಾರ್ಯನಿರ್ವಹಿಸುತ್ತಿದ್ದು, ಪೊಲೀಸರು ಜನರು ಶಾಂತಿ ನೆಮ್ಮದಿಯ ಜೀವನ ನಡೆಸುವ ವಾತಾವರಣ ಸೃಷ್ಟಿಸಬೇಕು ಎಂದು …

Read More »

ಗೃಹ ಇಲಾಖೆ ಬಲವರ್ಧನೆಗೆ ಪ್ರಯತ್ನ: ಆರಗ ಜ್ಞಾನೇಂದ್ರ

ಬೆಂಗಳೂರು: ಸಿಬ್ಬಂದಿ ಕೊರತೆಯನ್ನು ಪರಿಹರಿಸಿ, ಆಧುನೀಕರಣಕ್ಕೆ ಒತ್ತು ನೀಡುವ ಮೂಲಕ ಗೃಹ ಇಲಾಖೆಯ ಬಲವರ್ಧನೆಗೆ ಪ್ರಯತ್ನಿಸಲಾಗುವುದು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಗೃಹ ಸಚಿವರಾದ ಬಳಿಕ ಸೋಮವಾರ ವಿಕಾಸಸೌಧದಲ್ಲಿ ಮೊದಲ ಬಾರಿಗೆ ಗೃಹ ಇಲಾಖೆಯ ಹಿರಿಯ ಅಧಿಕಾರಿಗಳು ಮತ್ತು ಐಪಿಎಸ್‌ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಮೊದಲ ಬಾರಿಗೆ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿದ್ದೇನೆ. ಪೊಲೀಸರನ್ನು ನಂಬಿ ಜನರು ನೆಮ್ಮದಿಯಿಂದ …

Read More »