ಬೆಂಗಳೂರು: ರೌಡಿ ಶೀಟರ್ ಬಬ್ಲಿ ಕೊಲೆಯ ಭೀಕರತೆ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಜುಲೈ19 ರಂದು ಕೋರಮಂಗಲ ಬ್ಯಾಂಕ್ನಲ್ಲಿ ಕೊಲೆ ನಡೆದಿತ್ತು. ಆಡುಗೋಡಿ ರೌಡಿಶೀಟರ್ ಆಗಿದ್ದ ಬಬ್ಲಿ ಹೆಂಡತಿ ಜೊತೆ ಬ್ಯಾಂಕ್ ಗೆ ಬಂದಿದ್ದಾಗ ಅಟ್ಯಾಕ್ ನಡೆದಿತ್ತು. ಬ್ಯಾಂಕ್ ಒಳಗೆ ನುಗ್ಗಿ ರೌಡಿಗಳ ಗ್ಯಾಂಗ್ ಬಬ್ಲಿಯನ್ನ ಕೊಚ್ಚಿ ಕೊಲೆ ಮಾಡಿತ್ತು.. ಕೊಲೆಯ ನಂತರ ಬೈಕ್ ಮೇಲೆ ಮಚ್ಚು ಹಿಡಿದು ಗ್ಯಾಂಗ್ ಸಂಭ್ರಮಿಸಿತ್ತು.. ಈ ಭಯಾನಕ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ. ನಿನ್ನೆ ಕೋರಮಂಗಲ ಪೊಲೀಸರು …
Read More »ಸಿಎಂ ಬದಲಾಗೋ ಮುನ್ನ ಪಂಚಮಸಾಲಿಗೆ ಒಬಿಸಿ ಮೀಸಲಾತಿ ಕೊಡಿ ಎಂದ ಸ್ವಾಮೀಜಿ
ಬೆಂಗಳೂರು: ಲಿಂಗಾಯಿತ ಪಂಚಮಸಾಲಿ ಸಮಯದಾಯಕ್ಕೆ ಒಬಿಸಿ(2ಎ) ಮೀಸಲಾತಿ ನೀಡುವುದಾಗಿ ಭರವಸೆ ನೀಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ ಅವರು, ಸಿಎಂ ಸ್ಥಾನ ಬದಲಾಗುವ ಮುನ್ನ ಕೊಟ್ಟ ಭರವಸೆ ಈಡೇರಿಸಬೇಕು ಎಂದು ಲಿಂಗಾಯತ ಪಂಚಮಸಾಲಿ ಪೀಠಾಧ್ಯಕ್ಷ ಜಯಮೃತ್ಯುಂಜಯ ಸ್ವಾಮೀಜಿ ಆಗ್ರಹಿಸಿದ್ದಾರೆ. ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗದ ಮೀಸಲಾತಿಗೆ ಸೇರಿಸಬೇಕೆಂದು 39 ದಿನ ಪಾದಯಾತ್ರೆ ಕೈಗೊಂಡು ಒತ್ತಾಯಿಸಲಾಗಿತ್ತು. ಆಗ ಮುಂದಿನ 6 ತಿಂಗಳಲ್ಲಿ ಮೀಸಲಾತಿ ನೀಡುವುದಾಗಿಸಿಎಂ ಯಡಿಯೂರಪ್ಪ ಅವರು ಸದನದಲ್ಲಿ ಭರವಸೆ ಕೊಟ್ಟಿದ್ದ, ಹಿನ್ನೆಲೆಯಲ್ಲಿ ಮಾ. …
Read More »ಮೊದಲ ಬಾರಿಗೆ ರಾಜೀನಾಮೆ ವಿಚಾರವಾಗಿ ಮಾತನಾಡಿರುವ ಸಿಎಂ
ಬೆಂಗಳೂರು: ಮೊದಲ ಬಾರಿಗೆ ರಾಜೀನಾಮೆ ವಿಚಾರವಾಗಿ ಮಾತನಾಡಿರುವ ಸಿಎಂ ಯಡಿಯೂರಪ್ಪ ಜುಲೈ 26ರ ಕಾರ್ಯಕ್ರಮದ ಬಳಿಕ ಹೈಕಮಾಂಡ್ ಸೂಚನೆಯಂತೆ ಮುಂದಿನ ನಿರ್ಧಾರ ಕೈಗೊಳ್ಳಲಿದ್ದೇನೆ. ಪಕ್ಷವನ್ನ ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದೇನೆ. ವರಿಷ್ಠರ ಸೂಚನೆಯಂತೆ 26ರಿಂದ ಕೆಲಸ ಆರಂಭಿಸಲಿದ್ದೇನೆ ಎಂದಿದ್ದಾರೆ. ಧನ್ವಂತರಿ ಯಾಗದಲ್ಲಿ ಭಾಗಿಯಾದನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಕ್ಷದಲ್ಲಿ ಯಾರಿಗೂ 75 ವರ್ಷ ದಾಟಿದವರಿಗೆ ಯಾವುದೇ ಸ್ಥಾನಮಾನ ಕೊಟ್ಟಿಲ್ಲ ಆದರೆ ನನ್ನ ಕೆಲಸವನ್ನು ಮೆಚ್ಚಿ ಪ್ರಧಾನಿ ಮೋದಿ, ಅಮಿತ್ ಶಾ, …
Read More »ಮಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೆ ಎದುರಾಯ್ತು ಮತ್ತೊಂದು ಸಮಸ್ಯೆ!
ಬೆಂಗಳೂರು, ಜು. 22: ಮುಖ್ಯಮಂತ್ರಿ ಯಡಿಯೂರಪ್ಪ ಅವರ ಬದಲಾವಣೆ ಚರ್ಚೆ ಬಿಜೆಪಿಯಲ್ಲಿ ಹೆಚ್ಚಾಗುತ್ತಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಲಿಂಗಾಯತ ಸಮುದಾಯದ ನಾಯಕರು ಪಕ್ಷಬೇಧ ಮರೆತು ಯಡಿಯೂರಪ್ಪ ಅವರನ್ನು ಬದಲಾವಣೆ ಮಾಡಬಾರದು ಎಂದು ಬಿಜೆಪಿ ಹೈಕಮಾಂಡ್ ಮೇಲೆ ಒತ್ತಡ ಹಾಕಿದ್ದಾರೆ. ಅದರೊಂದಿಗೆ ಈಗ ಮತ್ತೊಂದು ಒತ್ತಡ ಯಡಿಯೂರಪ್ಪ ಅವರಿಗೆ ಎದುರಾಗಿದೆ. ಈ ಹಿಂದೆ ಸಿಎಂ ಯಡಿಯೂರಪ್ಪ ಅವರೇ ಕೊಟ್ಟಿದ್ದ ಭರವಸೆಯನ್ನು ಈಡೇರಿಸಬೇಕೆಂದು ಲಿಂಗಾಯತ ಪಂಚಮಸಾಲಿ ಸಮುದಾಯ ಆಗ್ರಹಿಸಿದೆ. ಪಂಚಮಸಾಲಿ ಸಮುದಾಯಕ್ಕೆ 2ಎ …
Read More »ಡಿಕೆಶಿ ಬಿಟ್ಟು ಸಿದ್ದು ಜತೆ ರಾಹುಲ್ ಪ್ರತ್ಯೇಕ ಮಾತುಕತೆ : ರಾಜ್ಯ ಕಾಂಗ್ರೆಸ್‌ನಲ್ಲಿ ಸಂಚಲನ
ಬೆಂಗಳೂರು: ರಾಜ್ಯ ರಾಜಕೀಯ ವಿದ್ಯಮಾನಗಳ ವಿಚಾರವಾಗಿ ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್‌ಗಾಂಧಿ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜತೆ ಪ್ರತ್ಯೇಕ ಮಾತುಕತೆ ನಡೆಸಿರುವುದು ಕಾಂಗ್ರೆಸ್ ವಲಯದಲ್ಲಿ ಸಂಚಲನ ಮೂಡಿಸಿದೆ. ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯಾದರೆ ಕಾಂಗ್ರೆಸ್ ಯಾವ ರೀತಿಯ ಹೆಜ್ಜೆ ಇಡಬಹುದು. ಮುಂದಿನ ಕಾರ್ಯತಂತ್ರ ಹಾಗೂ ಆಪರೇಷನ್ ಕಮಲ ಕಾರ್ಯಾಚರಣೆಯಡಿ ಬಿಜೆಪಿ ಸೇರಿ ಸಚಿವರಾಗಿರುವವರ ಮನಸ್ಥಿತಿ ಮತ್ತಿತರ ವಿಷಯಗಳ ಬಗ್ಗೆ ಸಿದ್ದರಾಮಯ್ಯ ಅವರಿಂದ ಮಾಹಿತಿ ಪಡೆದಿರುವುದ ಕುತೂಹಲಕ್ಕೆ ಕಾರಣವಾಗಿದೆ. ಯಡಿಯೂರಪ್ಪ ಬದಲಾವಣೆಯಾದರೆ ಆರು …
Read More »ಸಿಎಂ ಯಡಿಯೂರಪ್ಪ ನೇತೃತ್ವದಲ್ಲಿ ಇಂದು ಸಚಿವ ಸಂಪುಟ ಸಭೆ: ಹಲವು ಮಹತ್ವದ ಯೋಜನೆಗಳಿಗೆ ಅನುಮೋದನೆ ನಿರೀಕ್ಷೆ
ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆಯ ಮಾತುಗಳು ಕೇಳಿಬರುವುದರ ಮಧ್ಯೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ನೇತೃತ್ವದ ಸಚಿವ ಸಂಪುಟ ಗುರುವಾರ ಸಭೆ ಸೇರಲಿದ್ದು ಹಲವು ಯೋಜನೆಗಳಿಗೆ ಆಡಳಿತಾತ್ಮಕ ಅನುಮೋದನೆ ಪಡೆಯಲಿದೆ. ತೆರೆಮರೆಯಲ್ಲಿ ಈಗ ಹಲವು ಚಟುವಟಿಕೆಗಳು ವೇಗವಾಗಿ ನಡೆಯುತ್ತಿದ್ದು ಸಚಿವ ಸಂಪುಟ ಹಲವು ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವ ನಿರೀಕ್ಷೆಯಿದೆ. ಮುಖ್ಯಮಂತ್ರಿಗಳು ಹಲವು ಕ್ರಮಗಳನ್ನು ಇಂದಿನ ಸಭೆಯಲ್ಲಿ ಕೈಗೊಂಡು ಅದಕ್ಕೆ ಸಚಿವ ಸಂಪುಟ ಅನುಮೋದನೆಯನ್ನು ನೀಡಲಿದೆ ಎಂದು ಹೇಳಲಾಗುತ್ತಿದೆ. ಈ …
Read More »ಇಂದು SSLC ಕನ್ನಡ, ಇಂಗ್ಲಿಷ್ ಸೇರಿ ಭಾಷಾ ಪರೀಕ್ಷೆ
ಬೆಂಗಳೂರು:ಎಸ್‌ಎಸ್‌ಎಲ್ಸಿ ಭಾಷಾ ವಿಷಯದ ಪರೀಕ್ಷೆ ಜುಲೈ 22 ರ ಗುರುವಾರ ಇಂದು ನಡೆಯಲಿದೆ. ರಾಜ್ಯದ 4485 ಪರೀಕ್ಷಾ ಕೇಂದ್ರಗಳಲ್ಲಿ 8,76,508 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಕನ್ನಡ, ಇಂಗ್ಲಿಷ್, ಹಿಂದಿ ಸೇರಿದಂತೆ ಇತರೆ ಭಾಷಾ ವಿಷಯಗಳ ಪರೀಕ್ಷೆ ನಡೆಯಲಿದೆ. ಜುಲೈ 19 ರಂದು ಮೊದಲ ಪತ್ರಿಕೆಯ ಪರೀಕ್ಷೆ ನಡೆದಿತ್ತು. ಇಂದು ಎರಡನೇ ಪತ್ರಿಕೆ ಪರೀಕ್ಷೆ ನಡೆಯಲಿದ್ದು, ಪ್ರಥಮ, ದ್ವಿತೀಯ ಮತ್ತು ತೃತೀಯ ಭಾಷೆಗಳ ಪರೀಕ್ಷೆ ನಡೆಸಲಾಗುವುದು. ಆಗಸ್ಟ್ 10 ರೊಳಗೆ ಫಲಿತಾಂಶ …
Read More »ಕಾನ್ಸ್‌ಟೇಬಲ್‌ಗೆ ಪೇಟ ತೊಡಿಸಿ ಸನ್ಮಾನ; ಶಿವು ಉತ್ತಮ ಕಾರ್ಯಕ್ಕೆ ನಗರ ಪೊಲೀಸ್ ಆಯುಕ್ತ ಪಂತ್ ಶ್ಲಾಘನೆ
ಬೆಂಗಳೂರು: ನಗರ ಪೊಲೀಸ್ ಆಯುಕ್ತ ಕಮಲ್‌ಪಂತ್ ಅವರು ಬೆಂಗಳೂರಿನ ಕೆ.ಜಿ.ಹಳ್ಳಿ ಠಾಣೆ ಕಾನ್ಸ್‌ಟೇಬಲ್ ಶಿವುಗೆ ಪೇಟ ತೋಡಿಸಿ, ಶಾಲು ಹೊದಿಸಿ ಸನ್ಮಾನಿಸಿದ್ದಾರೆ. ಬಕ್ರೀದ್ ಹಿನ್ನಲೆ ನೆನ್ನೆ ರಾತ್ರಿ ಪೊಲೀಸ್ ಆಯುಕ್ತರಾದ ಕಮಲ್‌ಪಂತ್ ಸಿಟಿ ರೌಂಡ್ಸ್ ಹಾಕಿದ್ದರು. ಈ ವೇಳೆ ಕಮಲ್‌ಪಂತ್ ಅವರನ್ನು ಸನ್ಮಾನಿಸಲು ಮುಸ್ಲಿಮರು ಆಗಮಿಸಿದ್ದರು, ಆಗ ಸನ್ಮಾನಿಸಬೇಕಿರುವುದು ನನಗಲ್ಲ ಎಂದು ಪೊಲೀಸ್ ಕಾನ್ಸ್‌ಟೇಬಲ್ ಶಿವು ಅವರಿಗೆ ಸನ್ಮಾನಿಸಿದ್ದಾರೆ. ನಿನ್ನೆ ರಾತ್ರಿ ಶಿವಾಜಿನಗರ ಕೆ.ಜಿ ಹಳ್ಳಿ, ಡಿ.ಜೆ ಹಳ್ಳಿ, ಗೋವಿಂದಪುರ, …
Read More »‘ಸಿಡಿ ಅಸ್ತ್ರ’ಕ್ಕೆ ಬೆಟ್ಟಿ ಬಿದ್ದ ಸಿಎಂ ರಾಜಕೀಯ ಕಾರ್ಯದರ್ಶಿ : ‘ಶಾಸಕ ಎಂಪಿ ರೇಣುಕಾಚಾರ್ಯ’ ವಿರುದ್ಧ ‘CD ಷಡ್ಯಂತ್ರ’.?
ಬೆಂಗಳೂರು : ಸಿಎಂ ಬದಲಾವಣೆ ಬೆನ್ನಲ್ಲೇ, ಈಗ ಸಿಡಿ ಷಡ್ಯಂತ್ರದ ಸುದ್ದಿ ಹರಿದಾಡುತ್ತಿದೆ. ಅದರಲ್ಲೂ ಸಿಎಂ ರಾಜಕೀಯ ಕಾರ್ಯದರ್ಶಿ ಎಂ.ಪಿ.ರೇಣುಕಾಚಾರ್ಯ ಅವರ ಸಿಡಿ ವಿಚಾರ ಕೂಡ ಈಗ ಮುನ್ನಲೆಗೆ ಬಂದಿದ್ದು, ಇದೇ ಕಾರಣಕ್ಕಾಗಿ ದಿಢೀರ್ ದೆಹಲಿಗೆ ಅವರು ಭೇಟಿ ನೀಡಿದ್ದಾರೆ ಎನ್ನಲಾಗಿದೆ. ಈ ಮೂಲಕ ಎಂಪಿ ರೇಣುಕಾಚಾರ್ಯ ವಿರುದ್ಧ ಸಿಡಿ ಷಡ್ಯಂತ್ರ ನಡೆಯುತ್ತಿದೆ ಎನ್ನಲಾಗಿದೆ. ಇಂದು ಸಿಎಂ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ದೆಹಲಿಯಲ್ಲಿ ಕಾಣಿಸಿಕೊಂಡಿದ್ದಾರೆ. ಸಿಎಂ ಪರವಾಗಿ …
Read More »ಸಿಎಂ ಯಡಿಯೂರಪ್ಪನವರನ್ನು ಬದಲಿಸಿದ್ರೆ ಬಿಜೆಪಿ ಸರ್ವನಾಶ; ಹೈಕಮಾಂಡ್ ಗೆ ದಿಂಗಾಲೆಶ್ವರ ಸ್ವಾಮೀಜಿ ಎಚ್ಚರಿಕೆ
ಬೆಂಗಳೂರು: ಸಿಎಂ ಬದಲಾವಣೆ ವದಂತಿ ಬೆನ್ನಲ್ಲೇ ಬಾಲೇಹೊಸೂರು ದಿಂಗಾಲೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಚರ್ಚಿಸಿದ ಮಠಾಧೀಶರ ನಿಯೋಗ ಬಿಜೆಪಿ ಹೈಕಮಾಂಡ್ ಗೆ ಖಡಕ್ ಎಚ್ಚರಿಕೆ ನೀಡಿದೆ. ಸಿಎಂ ಯಡಿಯೂರಪ್ಪ ಭೇಟಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ದಿಂಗಾಲೇಶ್ವರ ಶ್ರೀ, ಸಮರ್ಥವಾಗಿ ಆಡಳಿತ ನಡೆಸುತ್ತಿರುವ ಯಡಿಯೂರಪ್ಪನರನ್ನು ಬದಲಾವಣೆ ಮಾಡಬೇಕು ಎಂಬುದು ಒಂದು ಕೆಟ್ಟ ಉದ್ದೇಶ. ಸಿಎಂ ಬಿ ಎಸ್ ವೈ ಕೇವಲ ಲಿಂಗಾಯತ ನಾಯಕ ಮಾತ್ರವಲ್ಲ, ಈ ರಾಜ್ಯದ …
Read More »