Breaking News

ಬೆಳಗಾವಿ

ಅರಭಾವಿ ಶಾಸಕ, ಬೆಮುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರ ಸಮರ್ಥ ಮಾರ್ಗದರ್ಶನ ಪ್ರಭಾ ಶುಗರ್ಸ್ ಅಧ್ಯಕ್ಷರಾಗಿ ಕಂಬಳಿ, ಉಪಾಧ್ಯಕ್ಷರಾಗಿ ಕಬ್ಬೂರ ಅವಿರೋಧವಾಗಿ ಆಯ್ಕೆ

ಗೋಕಾಕ- ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆಯ ನೂತನ ಅಧ್ಯಕ್ಷರಾಗಿ ಜೋಕಾನಟ್ಟಿ ಗ್ರಾಮದ ಶಿದ್ಲಿಂಗಪ್ಪ ಸಿದ್ದಪ್ಪ ಕಂಬಳಿ ಮತ್ತು ಉಪಾಧ್ಯಕ್ಷರಾಗಿ ರಂಗಾಪೂರ ಗ್ರಾಮದ ಮಲ್ಲಿಕಾರ್ಜುನ ಭೀಮಪ್ಪ ಕಬ್ಬೂರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಶನಿವಾರದಂದು ಕಾರ್ಖಾನೆಯ ಸಭಾಗೃಹದಲ್ಲಿ ಜರುಗಿದ ನೂತನ ಅಧ್ಯಕ್ಷ- ಉಪಾಧ್ಯಕ್ಷರ ಚುನಾವಣೆಯಲ್ಲಿ ತಲಾ ಒಂದೊಂದು ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಎರಡೂ ಸ್ಥಾನಗಳಿಗೆ ಅವಿರೋಧವಾಗಿ ಆಯ್ಕೆ ನಡೆಯಿತು ಎಂದು ಚುನಾವಣಾಧಿಕಾರಿಯಾಗಿದ್ದ ಗೋಕಾಕ ಸಹಕಾರ ಅಭಿವೃದ್ಧಿ ಅಧಿಕಾರಿ ಎಸ್.ಬಿ.ಬಿರಾದಾರ ಪಾಟೀಲ ಅವರು ಪ್ರಕಟಿಸಿದರು. ಇಲ್ಲಿಯವರೆಗೆ …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..

  ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ಹೂಲೀಕೇರಿ ತಾಂಡಾ ಗ್ರಾಮದ ಶ್ರೀ ವೆಂಕಟೇಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ …

Read More »

ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ

ಚಿಕ್ಕೋಡಿ: “ಕೂಡಲಸಂಗಮ ಪೀಠದಿಂದ ಬಸವ ಜಯಮೃತ್ಯುಂಜಯ ಸ್ವಾಮೀಜಿ ಅವರದ್ದು ಉಚ್ಚಾಟನೆಯೇ ಅಲ್ಲ, ಆ ಟ್ರಸ್ಟಿಗೂ ಕೂಡಲಸಂಗಮ ಪೀಠಕ್ಕೂ ಯಾವುದೇ ಸಂಬಂಧವಿಲ್ಲ. ಅದೊಂದು ಕುಟುಂಬದ ಟ್ರಸ್ಟ್​, ಕಳ್ಳರ ಕೂಟ. ಹೀಗಾಗಿ ಉಚ್ಚಾಟನೆ ಎಂಬ ಪ್ರಶ್ನೆಯೇ ಬರುವುದಿಲ್ಲ. ಆದ್ದರಿಂದ ಈ ಬಗ್ಗೆ ನಾನು ಮಾತನಾಡಿಲ್ಲ” ಎಂದು ಶಾಸಕ ಬಸನಗೌಡ ಪಾಟೀಲ್​ ಯತ್ನಾಳ್ ಪರೋಕ್ಷವಾಗಿ ಶಾಸಕ ವಿಜಯಾನಂದ ಕಾಶಪ್ಪನವರ ವಿರುದ್ಧ ಹರಿಹಾಯ್ದರು. ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿಯಲ್ಲಿ ಇಂದು ದಿ.ಉಮೇಶ್ ಕತ್ತಿ ಗ್ರಂಥ ಲೋಕಾರ್ಪಣೆ ಕಾರ್ಯಕ್ರಮದ …

Read More »

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ

ಘೋಡಗೇರಿ ಜಿ.ಪಂ ವ್ಯಾಪ್ತಿಯ ಹುಕ್ಕೇರಿ ವಿದ್ಯುತ್ ಸಹಕಾರ ಸಂಘದ ಪ್ರಚಾರ ಸಭೆ ವಿರೋಧಿಗಳ ಸುಳ್ಳು ವದಂತಿಗಳಿಗೆ ಕಿವಿಗೋಡಬೇಡಿ, ರೈತರೇ ನಮ್ಮ ಆಸ್ತಿ ಎಂದ ಬೆಮುಲ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ     ಘೋಡಗೇರಿ (ತಾ. ಹುಕ್ಕೇರಿ)- ‌ನಮ್ಮ ವಿರೋಧಿಗಳು ಸಾವಿರ ಸಲ ಟೀಕಿಸಲಿ, ಬೈಯಲಿ.‌ ಅಂತಹ ಯಾವುದೇ ಟೀಕೆ- ಟಿಪ್ಪಣಿಗಳಿಗೆ ಉತ್ತರಿಸುವ ಗೋಜಿಗೆ ಹೋಗುವುದಿಲ್ಲ. ಅವುಗಳ ಬಗ್ಗೆಯೂ ತಲೆ ಕೆಡಿಸಿಕೊಳ್ಳುವುದಿಲ್ಲ. ನಾವು ಯಾರನ್ನೂ ಟೀಕಿಸುವುದಿಲ್ಲ. ಮತ್ತೊಬ್ಬರನ್ನು ಬೈಯುವಂತಹ ಸಂಸ್ಕೃತಿಯೂ …

Read More »

ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ

ಬೆಳಗಾವಿ ಪ್ರತಿ ವರ್ಷದಂತೆ ಈ ವರ್ಷವೂ 98ನೇ ನಾಡ ಹಬ್ಬ ಉತ್ಸವವನ್ನು ಸೆ.22ರಿಂದ ಸೆ.26ರವರೆಗೆ ನಗರದ ಕನ್ನಡ ಸಾಹಿತ್ಯ ‌ಭವನದಲ್ಲಿ ಆಯೋಜಿಸಲಾಗಿದೆ ಎಂದು ನಾಡಹಬ್ಬದ ಪ್ರಧಾನ ಕಾರ್ಯದರ್ಶಿ ಡಾ. ಸಿ.ಕೆ.ಜೋರಾಪೂರ ಹೇಳಿದರು. ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಬೆಳಗಾವಿಯಲ್ಲಿ ನಡೆಸುವ ನಾಡಹಬ್ಬಕ್ಕೆ ತನ್ನದೆಯಾದ ಇತಿಹಾಸ ಇದೆ. ಪ್ರಚಲಿತ ವಿಷಯವನ್ನು ಮುಂದಿಟ್ಟುಕೊಂಡು ಚಿಂತನೆ ಮಾಡುವ ಕೆಲಸ ಮಾಡುತ್ತಿದ್ದೇವೆ ಎಂದರು. ಸೆ.22 ರಂದು ಸಂಜೆ 6ಕ್ಕೆ ನಾಡದೇವಿ ಭುವನೇಶ್ವರಿ ದೇವಿಯ ಭಾವಚಿತ್ರಕ್ಕೆ ಪೂಜೆ …

Read More »

ಸಹ್ಯಾದ್ರಿ ನಗರ ಬಸ್ ಪಲ್ಟಿ

ಸಹ್ಯಾದ್ರಿ ನಗರ ಬಸ್ ಪಲ್ಟಿ: ಗಾಯಾಳುಗಳನ್ನು ಜಿಲ್ಲಾಸ್ಪತ್ರೆಯಲ್ಲಿ ಭೇಟಿಯಾದ ಮುಸ್ತಾಕ್ ಮುಲ್ಲಾ | ಸಹ್ಯಾದ್ರಿ ನಗರದಲ್ಲಿ ಸಾರಿಗೆ ಬಸ್ ಪಲ್ಟಿಯಾಗಿ ಗಾಯಗೊಂಡ ಪ್ರಯಾಣಿಕರ ಆರೋಗ್ಯವನ್ನು ಪಾಲಿಕೆಯ ನಾಮನಿರ್ದೇಶಿತ ಸದಸ್ಯ ಮುಸ್ತಾಕ್ ಮುಲ್ಲಾ ಜಿಲ್ಲಾಸ್ಪತ್ರೆಗೆ ದೌಡಾಯಿಸಿ ವಿಚಾರಣೆ ನಡೆಸಿದರು. ಸಹ್ಯಾದ್ರಿ ನಗರದಲ್ಲಿ ಸಾರಿಗೆ ಬಸ್ ಪಲ್ಟಿಯಾಗಿರುವುದರಿಂದ ಸಾರಿಗೆಯಲ್ಲಿ ಪ್ರಯಾಣ ಮಾಡುತ್ತಿರುವವರಿಗೆ ಹಾಗೂ ಚಾಲಕ, ನಿರ್ವಾಹಕರಿಗೆ ಗುಣಮಟ್ಟದ ಆರೋಗ್ಯ ಚಿಕಿತ್ಸೆ ನೀಡಬೇಕು. ಯಾರೂ ಆತಂಕ ಪಡುವ ಅಗತ್ಯ ಇಲ್ಲ ಎಂದು ಗಾಯಾಳುಗಳಿಗೆ ಮುಸ್ತಾಕ್ …

Read More »

ಬೋರಗಾಂವ ವೃತ್ತದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ‌ಇಂದು‌ ಚಾಲನೆ ನೀಡಿದ ಪ್ರಿಯಾಂಕ ಸತೀಶ್ ಜಾರಕಿಹೊಳಿ

 ಚಿಕ್ಕೋಡಿ ಲೋಕಸಭಾ ಸದಸ್ಯರಾದ ಕುಮಾರಿ ಪ್ರಿಯಾಂಕ ಸತೀಶ್ ಜಾರಕಿಹೊಳಿ ಅವರು ಚಿಕ್ಕೋಡಿ ಲೋಕಸಭಾ ವ್ಯಾಪ್ತಿಯಲ್ಲಿನ ನಿಪ್ಪಾಣಿ‌ ವಿಧಾನಸಭಾ ಕ್ಷೇತ್ರದ ಬೋರಗಾಂವ ವೃತ್ತದಲ್ಲಿ ಇಂದು ಭಾಟನಾಗನೂರ ಬೋರಗಾಂವವಾಡಿ ರಸ್ತೆ (ರಾಜಿ-98) ರಸ್ತೆ ಕಿಮೀ 35.38 ರಿಂದ 38.00 (ಬೋರಗಾಂವವಾಡಿ ಕ್ರಾಸ್‌ದಿಂದ ಬೋರಗಾಂವ ವೃತ್ತ ) ವರೆಗೆ ಅಂದಾಜು ₹ 3.50 ಕೋಟಿ ವೆಚ್ಚದಲ್ಲಿ ರಸ್ತೆ ಸುಧಾರಣೆ ಕಾಮಗಾರಿಗೆ ‌ಇಂದು‌ ಚಾಲನೆ ನೀಡಿದರು. ಈ ವೇಳೆ ಬೋರಗಾಂವ ಪಟ್ಟಣ ಪಂಚಾಯಿತಿಗೆ ಭೇಟಿ ನೀಡಿ, …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ. ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿ ದೇವಸ್ಥಾನದ ಆವರಣದಲ್ಲಿ

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ.. ರಾಮದುರ್ಗ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ರಾಮದುರ್ಗ ತಾಲ್ಲೂಕಿನ ಹುಲಕುಂದ ಗ್ರಾಮದ ಶ್ರೀ ವಿಠ್ಠಲರುಕ್ಮಿಣಿ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ …

Read More »

ಹರಿಹರ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಕುರಿತು ಮಾತನಾಡಿದ್ದಾರೆ.

ಚಿಕ್ಕೋಡಿ (ಬೆಳಗಾವಿ) : ಸರ್ಕಾರ ಸಮುದಾಯಗಳ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸುತ್ತಿದೆ. ನಾವು ಅದರ ಪೂರ್ವಭಾವಿಯಾಗಿ ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳಿ ಸದ್ಭಕ್ತರ ಭಾವನೆ ಹಾಗೂ ವಿಚಾರಗಳನ್ನು ತಿಳಿದುಕೊಂಡು ಸಮೀಕ್ಷೆ ಪಟ್ಟಿಯಲ್ಲಿ ಏನನ್ನು ಬರೆಯಿಸಬೇಕು ಅಂತ ಸಮಾಲೋಚನೆಯನ್ನು ಮಾಡುತ್ತಿದ್ದೇವೆ ಎಂದು ಹರಿಹರ ಪೀಠದ ಜಗದ್ಗುರು ವಚನಾನಂದ ಶ್ರೀಗಳು ಹೇಳಿದ್ದಾರೆ. ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಂಬರುವ ದಿನಾಂಕ 28 ರಿಂದ ಅಕ್ಟೋಬರ್ 7ರವರೆಗೆ ಸರ್ಕಾರ ಸಾಮಾಜಿಕ ಮತ್ತು …

Read More »

ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ

ನಿಪ್ಪಾಣಿಯ ತವಂದಿ ಘಾಟನಲ್ಲಿ ಕಂದಕಕ್ಕೆ ಬಿದ್ದ ಕಂಟೇನರ್ ವಾಹನ ಚಿಕ್ಕೋಡಿ:ನಿಪ್ಪಾಣಿ ತಾಲೂಕಿನ ತವಂದಿ ಘಾಟ್‌ನಲ್ಲಿ ಕಂಟೇನರ್ ವಾಹನ ಪಲ್ಟಿಯಾದ ಪರಿಣಾಮ ಅದೃಷ್ಟವಶಾತ ಯಾವುದೇ ಸಾವುನೋವು ಸಂಭವಿಸಿಲ್ಲ. ಪುಣೆ-ಬೆಂಗಳೂರು ಹೆದ್ದಾರಿಯಲ್ಲಿ ಕಂಟೇನರ್ ಪಲ್ಟಿಯಾಗಿದೆ. ಅದೃಷ್ಟವಶಾತ್, ಅಪಘಾತದಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಕಂಟೇನರ್ ಚಾಲಕ ಬೆಳಗಾವಿಯಿಂದ ಕೊಲ್ಹಾಪುರಕ್ಕೆ ಹೋಗುತ್ತಿದ್ದಾಗ, ಚಾಲಕನ ನಿಯಂತ್ರಣ ತಪ್ಪಿ ಕಂಟೇನರ ವಾಹನ ಕಂದಕಕ್ಕೆ ಬಿದ್ದಿದೆ.

Read More »