ಅಥಣಿ : ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್‌ಗಳ ಮೇಲೆ ಕುಳಿತು ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳಿಯಲ್ಲಿ ನೆರೆ ಸಂತ್ರಸ್ತರಿಗೆ (ಮಾಂಗ ವಸ್ತಿ ಜನರು) ಬೋಟ್ ವ್ಯವಸ್ಥೆ ಕಲ್ಪಿಸಲಾಗಿದೆ. ಕೃಷ್ಣಾ ನದಿ ಪ್ರವಾಹದಿಂದಾಗಿ ಹುಲಗಬಾಳಿ ಜಲಾವೃತವಾಗಿತ್ತು. ಇಲ್ಲಿಯ ಮಾಂಗ ವಸ್ತಿ ಜನರು ಬೋಟ್ ಇಲ್ಲದೇ ಪ್ಲಾಸ್ಟಿಕ್ ಬ್ಯಾರೆಲ್‌ಗಳ ಮೂಲಕ ಪ್ರವಾಹದ ನೀರಿನಲ್ಲಿ ಸಾಗುತ್ತಿದ್ದರು. ಈ ಬಗ್ಗೆ ಸುವರ್ಣ ನ್ಯೂಸ್ ವರದಿ ಮಾಡಿತ್ತು. ಈ ವರದಿಯನ್ನು ಗಮನಿಸಿದ …
Read More »ಅತ್ಯಾಚಾರಿ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಬೇಕು
ಅಥಣಿ: ಧಾರವಾಡ ಜಿಲ್ಲೆಯ ಬೋಗುರ ಗ್ರಾಮದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಖಂಡಿಸಿ ಪಟ್ಟಣದಲ್ಲಿ ಜಂಗಮ ಸಮಾಜದ ಪದಾಧಿಕಾರಿಗಳು ಮಂಗಳವಾರ ಪ್ರತಿಭಟನೆ ನಡೆಸಿದರು. ಮಿನಿ ವಿಧಾನಸೌಧದ ಎದುರು ಪ್ರತಿಭಟನೆ ನಡೆಸಿ, ಆರೋಪಿಗೆ ಗಲ್ಲು ಶಿಕ್ಷೆ ವಿಧಿಸುವಂತೆ ಒತ್ತಾಯಿಸಿದರು. ಅಥಣಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರ ಮನವಿ ಸಲ್ಲಿಸಿದರು. ಪುಟ್ಟ ಹಿರೇಮಠ ಮಾತನಾಡಿ, ಅಮ್ಮನಿಗೆ ಆರೋಗ್ಯ ಸರಿ ಇಲ್ಲದ ಕಾರಣ ದೇವಸ್ಥಾನಕ್ಕೆ ತೆರಳಿದ್ದ ಬಾಲಕಿ ಮೇಲೆ ಪಕ್ಕದ ಗ್ರಾಮದ ಯುವಕ ಅತ್ಯಾಚಾರ …
Read More »ವರ್ಷ ಕಳೆದರೂ ತಪ್ಪಿಲ್ಲ ಬೆಳಗಾವಿ ಪ್ರವಾಹ ಸಂತ್ರಸ್ತರ ಸಂಕಟ!
ಬೆಳಗಾವಿ: ಪ್ರವಾಹಕ್ಕೆ ನಲುಗಿ ಒಂದು ವರ್ಷ ಕಳೆದರೂ ಜಿಲ್ಲೆಯ ಎಲ್ಲ ಸಂತ್ರಸ್ತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ಕೊಡುವಂತೆ ಒತ್ತಾಯಿಸಿ, ಈಗಲೂ ಅಲ್ಲೊಂದು, ಇಲ್ಲೊಂದು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಕಳೆದ ವರ್ಷ ಆಗಸ್ಟ್ ತಿಂಗಳಿನಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ಸೇರಿದಂತೆ ಬಹುತೇಕ ಎಲ್ಲ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿತ್ತು. ಇದರ ಜೊತೆ ಅತಿವೃಷ್ಟಿಯೂ ಕೂಡಿಕೊಂಡು ಅಪಾರ ಹಾನಿಯನ್ನುಂಟು ಮಾಡಿತ್ತು. ಬೆಳಗಾವಿ, ಖಾನಾಪುರ, ಚಿಕ್ಕೋಡಿ, ಅಥಣಿ, ಗೋಕಾಕ, ರಾಮದುರ್ಗ, ಸವದತ್ತಿ, ರಾಯಬಾಗ, ಹುಕ್ಕೇರಿ …
Read More »ಶಾಲಾ ಕೊಠಡಿ ಕಾಮಗಾರಿಗಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗಳಿಗೆ ಶಾಸಕ ಮಹೇಶ್ ಕುಮಟಳ್ಳಿ ಭೂಮಿಪೂಜೆ
ಅಥಣಿ: ಶಾಲಾ ಕೊಠಡಿ ಕಾಮಗಾರಿಗಿ ಸೇರಿದಂತೆ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಲವು ಕಾಮಗಾರಿಗಳಿಗೆ ಶಾಸಕ ಮಹೇಶ್ ಕುಮಟಳ್ಳಿ ಭೂಮಿಪೂಜೆ ನೆರವೇರಿಸಿದರು. ತಾಲೂಕಿನ ಬಡಕಂಬಿತೋಟ, ಸಿಂಡ್ ಫಾರ್ಮ್, ಮುರಗುಂಡಿ, ಮಸರಗುಪ್ಪಿ, ಹೊಸಟ್ಟಿ, ದೇವರಡ್ಡೆರಹಟ್ಟಿ, ಅಥಣಿ ಪಟ್ಟಣದ ಲಿಡಕರ ಕಾಲೋನಿ, ಬಡಚಿ, ಕಟಗೇರಿ, ಬುರ್ಲಟ್ಟಿ, ಗ್ರಾಮಗಳಲ್ಲಿ ಹೆಚ್ಚುವರಿ ಶಾಲೆ ಕೊಠಡಿಗಳನ್ನು ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿಸಿ ಗ್ರಾಮಸ್ಥರ ಕುಂದು ಕೊರತೆಗಳ ಆಲಿಸಿದರು. ಅಥಣಿ ವಿಧಾನಸಭಾ ಕ್ಷೇತ್ರದಲ್ಲಿ 105 ಶಾಲೆ ಕೊಠಡಿಗಳನ್ನು ನಿರ್ಮಾಣಕ್ಕೆ ಸರ್ಕಾರ …
Read More »ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಖಾಸಗಿಕರಣ ಎಪಿಎಂಸಿ ಕಾನೂನು ತಿದ್ದುಪಡಿ
ಅಥಣಿ: ಭೂ ಸುಧಾರಣಾ ಕಾಯ್ದೆ, ವಿದ್ಯುತ್ ಖಾಸಗಿಕರಣ ಎಪಿಎಂಸಿ ಕಾನೂನು ತಿದ್ದುಪಡಿ ವಿರೋಧಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪದಾಧಿಕಾರಿಗಳು ಸೋಮವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು. ಇಲ್ಲಿನ ಮಿನಿ ವಿಧಾನಸೌಧದ ಎದುರು ಸೇರಿದ ರೈತರು ರಾಜ್ಯ ಸರ್ಕಾರದ ವಿರುದ್ದ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ತಹಸೀಲ್ದಾರ್ ಮೂಲಕ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ಶಾಸಕ ಮಹೇಶ ಕುಮಟಳ್ಳಿ ಅವರಿಗೆ ಮನವಿ ಸಲ್ಲಿಸಿದರು. ರೈತ ಸಂಘ ಹಾಗೂ …
Read More »ಮರಾಠಿಯಲ್ಲಿ ಮಾತನಾಡಿದ ಸಚಿವ ಶ್ರೀಮಂತ ಪಾಟೀಲ!
ಅಥಣಿ: ತಾಲ್ಲೂಕಿನ ಬಳ್ಳಿಗೇರಿ ಗ್ರಾಮದಲ್ಲಿ ಶ್ರೀ ಬಸವೇಶ್ವರ ಸಕ್ಕರೆ ಕಾರ್ಖಾನೆ ಶನಿವಾರ ನಡೆದ ಭೂಮಿ ಪೂಜೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಪಾಲ್ಗೊಂಡಿದ್ದ ಜವಳಿ ಸಚಿವ ಶ್ರೀಮಂತ ಪಾಟೀಲ ಮರಾಠಿಯಲ್ಲಿ ಮಾತನಾಡುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಅವರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ‘ನಮ್ಮ ಭಾಗದಲ್ಲಿ ಸಕ್ಕರೆ ಕಾರ್ಖಾನೆ ನಿರ್ಮಾಣವಾಗುತ್ತಿರುವುದು ತುಂಬಾ ಖುಷಿಯಾಗಿದೆ. ಕಾರ್ಖಾನೆಯ ಶೇ 75 ರಷ್ಟು ಹುದ್ದೆಗಳನ್ನು ಸ್ಥಳೀಯರಿಗೆ ನೀಡಬೇಕು’ ಎಂದು ಮರಾಠಿಯಲ್ಲಿ ಮನವಿ ಮಾಡಿದ್ದರು. …
Read More »ಅಥಣಿ: ಕೇಂದ್ರದ ಹಣ ಲೂಟಿ ಹೊಡೆಯುವ ಯತ್ನ; ಆರೋಪ
ಅಥಣಿ: ‘ಕೊರೊನಾ ಸೋಂಕು ಪರೀಕ್ಷೆ ಮಾಡಿಸಿದಾಗ ಒಂದೊಂದು ಸಲ ಒಂದೊಂದು ರೀತಿಯ ಫಲಿತಾಂಶವನ್ನು ಆರೋಗ್ಯ ಇಲಾಖೆಯವರು ನೀಡುತ್ತಿದ್ದಾರೆ. ಒಮ್ಮೆ ಪಾಸಿಟಿವ್ ನೀಡಿದರೆ, ಮರುದಿನವೇ ನೆಗೆಟಿವ್ ನೀಡುತ್ತಿದ್ದಾರೆ. ಕೇಂದ್ರ ಸರ್ಕಾರದಿಂದ ಬರುತ್ತಿರುವ ಕೋಟ್ಯಾಂತರ ರೂಪಾಯಿ ಅನುದಾನವನ್ನು ಲೂಟಿ ಹೊಡೆಯಲು ಹೀಗೆ ಮಾಡುತ್ತಿದ್ದಾರೆ’ ಎಂದು ಇಲ್ಲಿನ ಹಿಪ್ಪರಗಿ ಗಲ್ಲಿಯ ನಿವಾಸಿಯೊಬ್ಬರು ಆರೋಪಿಸಿದ್ದಾರೆ. ಪಟ್ಟಣದಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ‘ಇದೇ ತಿಂಗಳು 15ರಂದು ಅಥಣಿಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಿಸಿದ್ದೆ. ವರದಿ …
Read More »ಮಹೇಶ ಕುಮಟಳ್ಳಿ, ಅಧ್ಯಕ್ಷರು, ಕೊಳಗೇರಿ ಅಭಿವೃದ್ದಿ ನಿಗಮ ಮಂಡಳಿಶೀಘ್ರ ರಾಜ್ಯಾದ್ಯಂತ 91, 734 ಮನೆ ನಿರ್ಮಾಣ
ಅಥಣಿ: ಕೊಳಗೇರಿ ಅಭಿವೃದ್ದಿ ಮಂಡಳಿಯಿಂದ ಶೀಘ್ರ ರಾಜ್ಯಾದ್ಯಂತ 91, 734 ಮನೆ ನಿರ್ಮಾಣ ಮಾಡಲಾಗುವುದು, ಇದರಲ್ಲಿ ಉತ್ತರ ಕರ್ನಾಟಕ ಭಾಗಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಕೊಳಗೇಡಿ ಅಭಿವೃದ್ದಿ ಮಂಡಳಿ ಅಧ್ಯಕ್ಷ ಮಹೇಶ ಕುಮಟಳ್ಳಿ ಮಾಹಿತಿ ನೀಡಿದರು. ಅಥಣಿ ಪ್ರವಾಸಿ ಮಂದಿರದಲ್ಲಿ ಮಾದ್ಯಮದವವರೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾಹಿತಿ ನೀಡಿದ ಅವರು, 5.5 ಲಕ್ಷ ವೆಚ್ಚದ 91734 ಮನೆಗಳನ್ನು ಶೀಘ್ರ ನಿರ್ಮಾಣ ಮಾಡಲಾಗುವುದು. ಈ ಕಾರ್ಯಕ್ಕೆ 6500 ಕೋಟಿ ರೂ. …
Read More »ತಳ್ಳೋ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿ ಸಾಗಿಸಿದ ಅಮಾನವೀಯ ಘಟನೆ
ಚಿಕ್ಕೋಡಿ: ತಳ್ಳೋ ಗಾಡಿಯಲ್ಲಿ ಪತಿಯ ಶವವನ್ನು ಪತ್ನಿ ಸಾಗಿಸಿದ ಅಮಾನವೀಯ ಘಟನೆ ಬೆಳಗಾವಿಯ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ನಡೆದಿದೆ. ಸದಾಶಿವ ಹಿರಟ್ಟಿ (55) ಅನಾರೋಗ್ಯದಿಂದ ಗುರುವಾರ ರಾತ್ರಿ ಸಾವನ್ನಪ್ಪಿದ್ದರು. ಅನಾರೋಗ್ಯದಿಂದ ಬಳಲಿ ತೀರಿಹೋದ ಪತಿಯ ಅಂತ್ಯ ಸಂಸ್ಕಾರಕ್ಕೆ ಕೊರೊನಾ ಭಯದಿಂದ ಯಾರು ಬರದ ಕಾರಣ ಪತ್ನಿಯೇ ತಳ್ಳೋ ಗಾಡಿಯಲ್ಲಿ ಪರಿಚಯಸ್ಥರೊಬ್ಬರ ಸಹಾಯದಿಂದ ಶವ ಸಾಗಿಸಿದ್ದಾರೆ. ಅಥಣಿ ಪಟ್ಟಣದ ಸರ್ಕಾರಿ ಆಸ್ಪತ್ರೆಯ ಮುಂದೆ ಚಪ್ಪಲಿ ಹೊಲಿದುಕೊಂಡಿದ್ದ ಸದಾಶಿವ ನಿನ್ನೆ ತಡರಾತ್ರಿ ಮನೆಗೆ …
Read More »ತೈಲ ಬೆಲೆ ಏರಿಕೆ ಖಂಡಿಸಿ ಎತ್ತಿನ ಮೂಲಕ ಕೈ ಪ್ರತಿಭಟನೆ…..?
ಅಥಣಿ: ಕೇಂದ್ರದಲ್ಲಿ ಅಂದು ಕಾಂಗ್ರೆಸ್ ಸರಕಾರದ ಮನಮೋಹನ ಸಿಂಗ್ ಅವರು ಪ್ರಧಾನಿಯಾಗಿದ್ದಾಗ ಒಂದೆರಡು ರುಪಾಯಿ ತೈಲ ಬೆಲೆ ಹೆಚ್ಚಳ ಮಾಡಿದಾಗ ಬಿಜೆಪಿಯ ಸ್ಮೃತಿ ಇರಾಣಿ ಅವರು ಬಳೆಗಳನ್ನು ಕಳುಹಿಸಿಕೊಟ್ಟಿದ್ದರು. ಆದರೆ ಸುಮಾರು ೭-೪ ರುಪಾಯಿಗಳಷ್ಟು ತೈಲ ಬೆಲೆ ಏರಿಕೆಯಾಗಿದೆ. ಈಗೆಲ್ಲಿದ್ದಾರೆ ಎಂದು ಸ್ಮೃತಿ ಇರಾಣಿಗೆ ಕಾಂಗ್ರೆಸ್ ಮುಖಂಡ ಗಜಾನನ್ ಮಂಗಸೂಳೆ ಪ್ರಶ್ನೆ ಮಾಡಿದ್ದಾರೆ.. ಶನಿವಾರ ಕಾಂಗ್ರೆಸ್ ಕಾರ್ಯಕರ್ತರು ತೈಲ ಬೆಲೆ ಖಂಡಿಸಿ ಚಕ್ಕಡಿ ಗಾಡಿಯಲ್ಲಿ ದ್ವೀಚಕ್ರವಾಹನ ಇಟ್ಟುಕೊಂಡು …
Read More »