ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ತಿಳಿಗೇಡಿತನದ ಹೇಳಿಕೆಯನ್ನು ತಿದ್ದಿಕೊಳ್ಳಲಿ – ಸಿದ್ಧಾರ್ಥ ಸಿಂಗೆ 🔴 ಮಾನ್ಯ ಶ್ರೀ ಲಕ್ಷ್ಮಣ ಸವದಿಯವರು ವಿಧಾನ ಪರಿಷತ್ ವಾಯುವ್ಯ ಶಿಕ್ಷಕ ಹಾಗೂ ಪದವಿಧರ ಮತಕ್ಷೇತ್ರದ ಚುನಾವಣೆಯ ತಮ್ಮ ಪಕ್ಷದ ಪ್ರಚಾರ ಸಭೆ ಬೆಳಗಾವಿಯಲ್ಲಿ ಕೆಲವು ಹಾಸ್ಯಾಸ್ಪದ ಮಾತುಗಳನ್ನಾಡಿ ನಗೆಪಾಟಲಿಗೆ ಈಡಾಗಿರುವದು ಕೆಲವರಿಗೆ ಸೋಜಿಗ ಎನಿಸಿದರೂ ನಿಜವಾಗಿಯೂ ಅವರೊಬ್ಬ ನಗೆಪಾಟಲಿನ ವ್ಯಕ್ತಿತ್ವ ಹೊಂದಿರುವವರು ಎಂದೆ ಹೇಳಬೇಕಾಗುತ್ತದೆ 🟠 ಚುನಾವಣಾ ಪ್ರಚಾರದಲ್ಲಿ ಅಂಗವೈಕಲ್ಯವನ್ನು ಅವಹೇಳನಕ್ಕೆ ಉಪಯೋಗಿಸಿ ಎಲ್ಲ …
Read More »ರೈತನ ಸಂಕಷ್ಟಕ್ಕೆ ಸ್ಪಂದಿಸಿದ ಶಾಸಕ ಶ್ರೀಮಂತ ಪಾಟೀಲ
ಅಥಣಿ : ಎರಡು ವರ್ಷಗಳ ಹಿಂದೆ ಪ್ರವಾಹದಲ್ಲಿ ಮನೆ ಕಳೆದುಕೊಂದಿದ್ದ ಬಡ ರೈತ ಕಲ್ಲಪ್ಪ ಅವರಿಗೆ ಸರಕಾರ ಹೊಸ ಮನೆ ಮಂಜೂರು ಮಾಡಿ ಎರಡು ಕಂತು ಕೂಡ ನೀಡಿದೆ. ಆದರೆ, ಮೂರನೇ ಕಂತಿಗೆ ಸಹಾಯಕಾಗಿ ಎರಡು ವರ್ಷ ಕಳೆದರೂ ಅಧಿಕಾರಿಗಳು ನಿರ್ಲಕ್ಷ ಮಾಡಿದರು. ಕೊನೆಗೆ ಈ ಬಡ ರೈತ ಶಾಸಕರಾದ ಶ್ರೀಮಂತ ಪಾಟೀಲರನ್ನು ಭೇಟಿಯಾಗಿ ಸಮಸ್ಯೆ ತೋಡಿಕೊಂಡಿದ್ದಾರೆ. ತಕ್ಷಣ ಸ್ಪಂದಿಸಿದ ಶಾಸಕರು ಶಾಸಕರು ನೇರವಾಗಿ ಕೃಷ್ಣಾ ಕಿತ್ತೂರಿಗೆ ತೆರಳಿ ಅಧಿಕಾರಿಗಳನ್ನು …
Read More »ಟಿಸಿ ಸರಿಪಡಸಲು ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಹೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ
ಟಿಸಿ ಸರಿಪಡಸಲು ಹಣ ಪಡೆಯುತ್ತಿದ್ದಾರೆ ಎಂದು ಆರೋಪಿಸಿ ಹೆಸ್ಕಾಂ ಕಚೇರಿಗೆ ರೈತರು ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿರುವ ಘಟನೆ ಅಥಣಿಯಲ್ಲಿ ನಡೆದಿದೆ. ಹೌದು ಟಿಸಿ ಸರಿಪಡಿಸಲು ಹೆಸ್ಕಾಂ ಸಿಬ್ಬಂದಿಗಳು ಹಣ ಪಡೆಯುತ್ತಿದ್ದಾರೆ ಎಂದ ಆರೋಪಿಸಿದ ಅಥಣಿ ಪಟ್ಟಣದ ಹುಬ್ಬಳ್ಳಿ ವಿದ್ಯುತ್ ಸರಬರಾಜು ನಿಗಮದ ಅಥಣಿ ಶಾಖೆ ಮುಂದೆ ರೈತರು ಧರಣಿ ನಡೆಸಿದರು. ಹಲವು ರೈತರಿಂದ ಹಣ ಪಡೆದು ಸರ್ವಿಸ್ ಕೊಟ್ಟಿದ್ದು ಬಡ ರೈತರಿಗೆ ಅನ್ಯಾಯ ಮಾಡುತ್ತಿದ್ದಾರೆ ಎಂದು ಪ್ರತಿಭಟನಾಕಾರರು ತಮ್ಮ …
Read More »ಕೂಲಿ ಮಾಡಿ ಜೀವನ ಸಾಗಿಸುವ ಕುಟುಂಬದ ಶಿಲ್ಪಾ ರಾಜು ಪರ್ನಾಕರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 614 ಅಂಕ ಪಡೆದು ಸಾಧನೆ ತೋರಿದ್ದಾರೆ.
ತೆಲಸಂಗ (ಬೆಳಗಾವಿ ಜಿಲ್ಲೆ): ಇಲ್ಲಿನ ಕೃಷಿ ಜಮೀನುಗಳಲ್ಲಿ ಕೂಲಿ ಮಾಡಿ ಜೀವನ ಸಾಗಿಸುವ ಕುಟುಂಬದ ಶಿಲ್ಪಾ ರಾಜು ಪರ್ನಾಕರ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ 614 ಅಂಕ ಪಡೆದು ಸಾಧನೆ ತೋರಿದ್ದಾರೆ. ಓದು-ಬರಹ ಬಾರದ ತಂದೆ-ತಾಯಿಗೆ ಹೆಮ್ಮೆಯ ಭಾವ ನೀಡಿದ್ದಾರೆ. ಪತ್ರಾಸಿನ ಮನೆ, ಮನೆಯ ಅಂಗಳದಲ್ಲಿ ಜಾನವಾರು, ನಿತ್ಯ ಹೊಲದ ಕೆಲಸ ಮತ್ತು ಕೂಲಿ ಮಾಡಿಕೊಂಡೆ ಬದುಕಿನ ಬಂಡಿ ಜಗ್ಗುವ ಅವಿಭಕ್ತ ಕುಂಟುಂಬವಿದು. ಕೊರತೆಗಳ ನೆಪವನ್ನು ಬದಿಗಿಟ್ಟು ಸಾಧನೆ ತೋರಿದ್ದಾರೆ. ಗ್ರಾಮದ ಅಂಬೇಡ್ಕರ್ …
Read More »ಮೀಸಲಾತಿಗಾಗಿ ತೀವ್ರ ಹೋರಾಟ: ಪಂಚಮಸಾಲಿ ಶ್ರೀ
ಅಥಣಿ: ‘ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಹಿಂದುಳಿದ ವರ್ಗ 2ಎ ಮೀಸಲಾತಿಗೆ ಆಗ್ರಹಿಸಿ ಹೋರರಾಟವನ್ನು ತೀವ್ರಗೊಳಿಸಲಾಗುವುದು’ ಎಂದು ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಎಚ್ಚರಿಕೆ ನೀಡಿದರು. ಮೀಸಲಾತಿಗೆ ಆಗ್ರಹಿಸಿ ಇಲ್ಲಿ ಶನಿವಾರ ನಡೆದ ಧರಣಿ ಸತ್ಯಾಗ್ರಹ ಹಾಗೂ ಬೈಕ್ ರ‍್ಯಾಲಿಯಲ್ಲಿ ಅವರು ಮಾತನಾಡಿದರು. ‘ಬಜೆಟ್ ಅಧಿವೇಶನ ಸಂದರ್ಭದಲ್ಲಿ ಮೀಸಲಾತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರು. ಆದರೆ, ಇದುವರೆಗೂ ನಮ್ಮ ಬೇಡಿಕೆ …
Read More »ಮನೆ ಕಳ್ಳತನಕ್ಕೆ ಬಂದ ಖತರ್ನಾಕ್ ಕಳ್ಳನೋರ್ವ ಬಾಲಕಿಯನ್ನೇ ಹೊತ್ತೊಯ್ದ
ಬೆಳಗಾವಿ: ಮನೆ ಕಳ್ಳತನಕ್ಕೆ ಬಂದ ಖತರ್ನಾಕ್ ಕಳ್ಳನೋರ್ವ ಬಾಲಕಿಯನ್ನೇ ಹೊತ್ತೊಯ್ದ ವಿಚಿತ್ರ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದೆ. 1 ವರ್ಷದ ಬಾಲಕಿಯನ್ನು, ಅನಿಲ್ ರಾಮು ಲಂಬೂಗೋಳ (31) ಎಂಬ ಖದೀಮ ಭಾನುವಾರ ತಡರಾತ್ರಿ ಅಪಹರಿಸಿದ್ದಾನೆ. ಮನೆಯಲ್ಲಿ ಕಳ್ಳತನ ಮಾಡುವಾಗ ಮನೆಯವರ ಕಣ್ಣಿಗೆ ಬಿದ್ದಿದ್ದ ಅನಿಲ್ ರಾಮು, ಹೊರಗಡೆ ನಿಂತಿದ್ದ ಮಗುವನ್ನ ಅಪಹರಿಸಿದ್ದಾನೆ. ಈ ಬಗ್ಗೆ ಪೋಷಕರು ಅಂಕಲಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅಪಹರಣ ಮಾಡಿದ ಬಾಲಕಿ ಮತ್ತು …
Read More »ಪೊಲೀಸ್ ಸಿಬ್ಬಂದಿ ಜಿ, ಎನ್, ದೊಡಮನಿ, ಪಿ ಎಸ್ ಮಲಗೌಡರ ಹಾಗೂ ಗಿರಿಮಲ್ಲ ಆಜುರ ಅವರ ಕಾರ್ಯಕ್ಕೆ ಹಿರಿಯ ಅಧಿಕಾರಿಗಳು ಹಾಗೂ ಅಥಣಿ ಜನರಿಂದ ಪ್ರಶಂಸೆಯ ಹರಿದು ಬಂದಿದೆ.
ಬೆಳಗಾವಿ: ಸಾಮಾನ್ಯವಾಗಿ ಪೊಲೀಸರು ಎಂದರೇ ಬೈಯುವರೇ ಹೆಚ್ಚು, ಆದರೆ ಬೆಳಗಾವಿ ಜಿಲ್ಲೆಯ ಅಥಣಿ ಪೋಲಿಸರು ಮಾನವೀಯತೆ ಮೆರೆದು ಜನತೆಯಿಂದ ಬೇಶ್ ಅನಿಸಿಕೊಂಡಿದ್ದಾರೆ. ಸಂಕೇಶ್ವರ-ವಿಜಯಪುರ ರಾಜ್ಯ ಹೆದ್ದಾರಿಯ ಕರಿ ಮಸೂತಿ ಸಮೀಪದಲ್ಲಿ ಕಾರು ಬೈಕ್ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಬೈಕ್ ಸವಾರರು ತೀವ್ರವಾಗಿ ಗಾಯಗೊಂಡಿದ್ದರು. ಈ ವೇಳೆ ಅಂಬುಲೆನ್ಸ್ ಬಾರದ ಕಾರಣ ಗಸ್ತು ತಿರುಗುತ್ತಿದ್ದ ಪೊಲೀಸರು ತಾವೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳನ್ನು ಅಥಣಿ ಸಮುದಾಯ ಆಸ್ಪತ್ರೆಗೆ ದಾಖಲು ಮಾಡಿ ಮಾನವೀಯತೆ …
Read More »ಕೇಂದ್ರ ಸರ್ಕಾರ ಜನರ ಸಮಸ್ಯೆಗೆ ಸ್ಪಂದಿಸಿಲ್ಲ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ
ಅಥಣಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಾರ್ವಜನಿಕರ ಸಮಸ್ಯೆಗೆ ಸ್ಪಂದನೆ ನೀಡಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಆರೋಪಿಸಿದರು. ಅಥಣಿ ಪಟ್ಟಣದಲ್ಲಿ ಪುರಸಭೆ ಚುನಾವಣಾ ನಿಮಿತ್ತ ಹಮ್ಮಿಕೊಂಡಿದ್ದ ಪ್ರಚಾರ ಸಭೆ ಉದ್ದೇಶಿಸಿ ಅವರು ಮಾತನಾಡಿದರು. ಡಿ. 27ರಂದು ನಡೆಯುವ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಮತ ನೀಡಿ, ಕಾಂಗ್ರೆಸ್ ಪಕ್ಷದ ಶಕ್ತಿ ಬಲಪಡಿಸಬೇಕು ಎಂದರು. ಕಾಂಗ್ರೆಸ್ ಕಾರ್ಯಕರ್ತರು ಒಗ್ಗಟ್ಟಿನಿಂದ ಕೆಲಸ ಮಾಡಿದರೆ ಮಾತ್ರ ಹೆಚ್ಚಿನ ಅಭ್ಯರ್ಥಿಗಳು …
Read More »ಚಮಕ್ ಚಮಕ್ ಲೈಟ್ ಹಚ್ಚಿಕೊಂಡು ಹೊಸ ಬಸ್ ಬರುತ್ತಿವೆ : ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್
ಅಥಣಿ : ಬೆಳಗಾವಿ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿತ 4 ಸಾವಿರಕ್ಕೂ ಅಧಿಕ ಮತಗಳಿವೆ. ಅವುಗಳನ್ನು ಹಿಡಿದಿಟ್ಟುಕೊಳ್ಳುವುದು ನಮ್ಮ ಜವಾಬ್ದಾರಿಯಾಗಿದೆ. ಇದರ ನಡುವೆ ಹೊಸ ಹೊಸ ಬಸ್ಗಳಲ್ಲಿ ಚಮಕ್ ಚಮಕ್ ಲೈಟು ಹಚ್ಚಿಕೊಂಡು ಬರುತ್ತಿದ್ದಾರೆ. ಹೊಸ ಬಸ್ಗಳು ಜಾತ್ರೆ ಮಾಡಿಕೊಂಡು ಹೋಗುತ್ತಾರೆ, ಹಳೆ ಬಸ್ಗಳೇ ರೆಗ್ಯುಲರಾಗಿ ಇರುತ್ತವೆ. ಇದರಿಂದ ಮತದಾರಿಗೆ ತಿಳುವಳಿಕೆ ನೀಡಲು ಎರಡನೇ ಬಾರಿ ಅಥಣಿ ಚುನಾವಣೆ ಪ್ರಚಾರಕ್ಕೆ ಬಂದಿದ್ದೇನೆ ಎಂದು ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಹೇಳಿದರು. ವಿಧಾನಪರಿಷತ್ ಚುನಾವಣೆ ಹಿನ್ನೆಲೆ ಕಾಂಗ್ರೆಸ್ …
Read More »ಅಥಣಿ : ಪಾಟಾ ಕಟ್ ಆಗಿ ದಾರಿ ತಪ್ಪಿದ ಬಸ್, ತಪ್ಪಿದ ಬಾರಿ ದುರಂತ.
ಅಥಣಿ : ಕರ್ನಾಟಕ ರಾಜ್ಯ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಪಾಟಾ ಕಟ್ಟಾಗಿ ರಸ್ತೆ ಬಿಟ್ಟು ತಗ್ಗು ಪ್ರದೇಶಕ್ಕೆ ಬಸ್ ನೂಕಿದ ಘಟನೆ ಸಂಭವಿಸಿ ಭಾರಿ ದುರಂತ ತಪ್ಪಿದೆ. ಅಥಣಿ ಘಟಕಕ್ಕೆ ಸೇರಿದ ಬಸ್ ಅಡಹಳ್ಳಿ ಗ್ರಾಮದಿಂದ ಅಥಣಿ ಬರುವಾಗ ಈ ಅವಘಡ ಸಂಭವಿಸಿದೆ. ಚಾಲಕನ ಜಾಗೃತೆಯಿಂದ ಬಾರಿ ಅನಾಹುತ ತಪ್ಪಿದೆ. ಮಾತೋಶ್ರೀ ಕ್ರಾಸ್ ಬಳಿ ಈ ಅವಘಡ ಸಂಭವಿಸಿದ್ದು. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಬೇರೆ ಬಸ್ ವ್ಯವಸ್ಥೆ ಮಾಡಿ …
Read More »