Breaking News

ಕಿತ್ತೂರು

ಚಿಣ್ಣರಿಗೂ ಬಂತು ಉತ್ಸವದ ಹಿಗ್ಗು

ಕಿತ್ತೂರು: ಐತಿಹಾಸಿಕ ಉತ್ಸವದಲ್ಲಿ ಒಂದೆಡೆ ವರ್ಣರಂಜಿತ ವೇದಿಕೆಗಳಲ್ಲಿ ಸಾಹಿತ್ಯ, ಸಾಂಸ್ಕೃತಿಕ ಕಾರ್ಯಕ್ರಮ ನಡೆಯುತ್ತಿದ್ದರೆ, ಮತ್ತೊಂದೆಡೆ ಮಕ್ಕಳು ವಿವಿಧ ಆಟಗಳನ್ನಾಡಿ ಸಂಭ್ರಮದಲ್ಲಿ ಮಿಂದೆದ್ದರು. ಇಲ್ಲಿನ ಕೋಟೆ ಆವರಣದ ಮುಂಭಾಗದಲ್ಲಿ ಮಕ್ಕಳು ಹಾಗೂ ಯುವಕರಿಗಾಗಿ ವಿವಿಧ ಆಟಿಕೆಗಳನ್ನು ಅಳವಡಿಸಲಾಗಿದೆ. ಎಲ್ಲವೂ ವಿದ್ಯುತ್ ಚಾಲಿತ ಆಟಿಕೆಗಳೇ ಇರುವುದು ಈ ಬಾರಿಯ ವಿಶೇಷ. ಚಿಣ್ಣರು ಬಾತುಕೋಳಿ, ಬೈಕ್‌ಗಳ ತಿರುಗುಂಡಿ ಮೇಲೆ ಕುಳಿತು ಸಂಭ್ರಮಿಸಿದರು. ಮತ್ತೆ ಕೆಲವರು ಜಾರುಬಂಡೆಯಿಂದ ಜಾರಿ ನಲಿದರು. ರಬ್ಬರ್‌ನಿಂದ ಮಾಡಿದ ಡಾನ್ಸಿಂಗ್‌ ರೋಪ್ …

Read More »

198ನೇ ಕಿತ್ತೂರು ಉತ್ಸವಕ್ಕೆ ವೈಭವದ ತೆರೆ, ರಾತ್ರಿಯವರೆಗೂ ಸಾಂಸ್ಕೃತಿಕ ವೈಭವ

ಚನ್ನಮ್ಮನ ಕಿತ್ತೂರು (ರಾಣಿ ಚನ್ನಮ್ಮ ವೇದಿಕೆ): ‘ರಾಣಿ ಚನ್ನಮ್ಮ ದೇಶದ ಸ್ವಾತಂತ್ರ್ಯದ ಹೆಗ್ಗುರುತು ಮಾತ್ರವಲ್ಲ; ವಿಶ್ವದ ಹೆಣ್ಣುಮಕ್ಕಳ ಸಮಾನತೆಯ ಪ್ರತೀಕ’ ಎಂದು ಬೈಲೂರು ನಿಷ್ಕಲ ಮಂಟಪದ ನಿಜಗುಣಪ್ರಭು ಸ್ವಾಮೀಜಿ ಹೇಳಿದರು.   ಇಲ್ಲಿ ಮಂಗಳವಾರ ನಡೆದ 198ನೇ ಕಿತ್ತೂರು ಉತ್ಸವದ ಸಮಾರೋಪ ಸಮಾರಂಭದಲ್ಲಿ ಆಶೀರ್ವಚನ ನೀಡಿದ ಅವರು, ‘ಹೆಣ್ಣುಮಗಳು ಸಮಾಜದಿಂದ ಹೊರ, ಧರ್ಮದಿಂದ ಹೊರ ಎಂಬ ಸಂಪ್ರದಾಯಗಳು ಇದ್ದ ಕಾಲದಲ್ಲಿ ಚನ್ನಮ್ಮ ಖಡ್ಗ ಹಿಡಿದಳು. ಪ್ರಪಂಚದ ಬಹಳಷ್ಟು ರಾಜರು ಮಂತ್ರಿಗಳ ಮಾರ್ಗದರ್ಶನದಲ್ಲಿ …

Read More »

ದೀಪಗಳ ಬೆಳಕಿನಲ್ಲಿ ತೇಲಾಡಿದ.ಕಿತ್ತೂರು ಸಾಮ್ರಾಜ್ಯ

ಸರಿಯಾಗಿ 198 ವರ್ಷಗಳ ಹಿಂದಿನ ನೆನಪು. ಸಂಜೆ ಸೂರ್ಯಾಸ್ತದ ಸಮಯ. ದಿನವಿಡೀ ಬೆಳಕು ನೀಡಿದ್ದ ಸೂರ್ಯದೇವ ವಿಶ್ರಾಂತಿಗೆ ಜಾರುತ್ತಿದ್ದ. ಆದರೆ ಕಿತ್ತೂರು ಸಂಸ್ಥಾನದ ರಾಜಧಾನಿ ಕಿತ್ತೂರಿನಲ್ಲಿ ವಾತಾವರಣ ಉಳಿದೆಲ್ಲ ದಿನಕ್ಕಿಂತ ಭಿನ್ನವಾಗಿತ್ತು. ಸೂರ್ಯ ಇಳೆಗೆ ಜಾರುತ್ತಿದ್ದಂತೆ. ಕೋಟೆಯ ತುಂಬೆಲ್ಲ ದೀಪಗಳು ಬೆಳಗಿದವು. ಜನರ ಹರ್ಷೋದ್ಗಾರ ಮುಗಿಲು ಮುಟ್ಟಿತು. ಇಡೀ ಕಿತ್ತೂರು ದೀಪಾವಳಿ ಬೆಳಕಿನಲ್ಲಿ ಮುಳುಗಿತ್ತು. ಇದಕ್ಕೆ ಕಾರಣವಾಗಿದ್ದು ವೀರರಾಣಿ ಕಿತ್ತೂರ ಚನ್ನಮ್ಮನ ಸೈನ್ಯ ಕಂಪನಿ(ಬ್ರಿಟಿಷ್‌)ಸರಕಾರ ವಿರುದ್ಧ ವಿರೋಚಿತ ಜಯ ಸಾಧಿಸಿದ್ದು. …

Read More »

ಸಾರ್ವಜನಿಕ ಶೌಚಾಲಯದಿಂದಲೇ ಆದಾಯ,ಈ ವಿಚಾರ ಮಂಡಿಸಿದಾಗ ಸಭಿಕರು ಚಪ್ಪಾಳೆ ತಟ್ಟಿ ಮೆಚ್ಚುಗೆ

ಚನ್ನಮ್ಮನ ಕಿತ್ತೂರು (ಸಂಗೊಳ್ಳಿ ರಾಯಣ್ಣ ವೇದಿಕೆ): ‘ನನ್ನ ಸ್ವಂತ ಜಮೀನಿನಲ್ಲಿ ಸಾರ್ವಜನಿಕರಿಗೆ ಶೌಚಾಲಯ ಕಟ್ಟಿಸಿದೆ. ಅದರಿಂದಲೇ ಬಯೊಗ್ಯಾಸ್ ತಯಾರಿಸಿದೆ. ವಿದ್ಯುತ್ ಉತ್ಪಾದಿಸಿದೆ. ಎರೆಹೊಳ ಗೊಬ್ಬರ ಮಾಡಿದೆ. ಸ್ವಾವಲಂಬನೆಗೆ ಇನ್ನೇನು ಬೇಕು..?   ‘ಕೃಷಿ ಪಂಡಿತ’ ಪ್ರಶಸ್ತಿ ಪುರಸ್ಕೃತ ಕುರುಗುಂದದ ದಯಾನಂದ ಅಪ್ಪಯ್ಯನವರಮಠ ಅವರು ಕಿತ್ತೂರು ಉತ್ಸವ ಅಂಗವಾಗಿ ಮಂಗಳವಾರ ಕೃಷಿ ವಿಚಾರ ಸಂಕಿರಣದಲ್ಲಿ ಈ ವಿಚಾರ ಮಂಡಿಸಿದಾಗ ಸಭಿಕರು ಚಪ್ಪಾಳೆ ತಟ್ಟಿ ಮೆಚ್ಚುಗೆ ವ್ಯಕ್ತಪಡಿಸಿದರು. ‘ಊರ ಮುಂದಿನ ಹೊಲ ನಮ್ಮ ಹಿಸ್ಸೆಗೆ …

Read More »

ಕಿತ್ತೂರು ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಮಂಗಳವಾರ ಇತಿಹಾಸಪ್ರಿಯರ ದಂಡೇ ಲಗ್ಗೆ ಇಟ್ಟಿತ್ತು

ಕಿತ್ತೂರು: ಇಲ್ಲಿನ ಕೋಟೆ ಆವರಣದಲ್ಲಿರುವ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಮಂಗಳವಾರ ಇತಿಹಾಸಪ್ರಿಯರ ದಂಡೇ ಲಗ್ಗೆ ಇಟ್ಟಿತ್ತು. ಕಿರಿಯರಿಂದ ಹಿರಿಯರವರೆಗೆ ಎಲ್ಲ ವಯೋಮಾನದವರೂ ಭೇಟಿ ನೀಡಿ, ಇತಿಹಾಸಕ್ಕೆ ಸಂಬಂಧಿಸಿದ ವಿವಿಧ ಮಾಹಿತಿ ಸಂಗ್ರಹಿಸಿದರು.   ಇಲ್ಲಿರುವ ಕಿತ್ತೂರು ಅರಮನೆ ಬಾಗಿಲುಗಳು, ಕಿಟಕಿಗಳು, ಸೈನ್ಯ ಬಳಸಿದ ಖಡ್ಗ, ಗುರಾಣಿ, ಚಿಲಕತ್ತು (ಯುದ್ಧದ ಸಂದರ್ಭದಲ್ಲಿ ಧರಿಸುವ ಕಬ್ಬಿಣದ ಪೋಷಾಕು) ಮತ್ತಿತರ ಶಸ್ತ್ರಾಸ್ತ್ರಗಳು, ಸೈನಿಕರ ಉಡುಪುಗಳು, ಫಿರಂಗಿ ಗುಂಡುಗಳು, ವೀರಗಲ್ಲುಗಳು, ಮಹಾಸತಿ ಕಲ್ಲುಗಳನ್ನು ಬೆರಗುಗಣ್ಣಿನಿಂದ ವೀಕ್ಷಿಸಿದರು. ಅರೂವರೆ ಅಡಿಯಷ್ಟು …

Read More »

ಸೈಕ್ಲಿಂಗ್‍: ಲಾಯಪ್ಪ, ಪ್ರೀತಿ ಪ್ರಥಮ

ಚನ್ನಮ್ಮನ ಕಿತ್ತೂರು: ಇಲ್ಲಿ ಕಿತ್ತೂರು ಉತ್ಸವ ಅಂಗವಾಗಿ ಮಂಗಳವಾರ ನಡೆದ ರಾಜ್ಯಮಟ್ಟದ ಸೈಕ್ಲಿಂಗ್‍ನ ಪುರುಷರ ವಿಭಾಗ(24 ಕಿ.ಮೀ.)ದಲ್ಲಿ ಲಾಯಪ್ಪ ಮುಧೋಳ ಪ್ರಥಮ ಸ್ಥಾನ ಗಳಿಸಿದರು. ಪ್ರಭು ಕಾಲತಿಪ್ಪಿ, ಯಲ್ಲೇಶ ಹುಡೇದ ಕ್ರಮವಾಗಿ ದ್ವಿತೀಯ, ತೃತೀಯ ಸ್ಥಾನ ಗಳಿಸಿದರು. ಮಹಿಳೆಯರ ವಿಭಾಗದ(14 ಕಿ.ಮೀ.) ಸ್ಪರ್ಧೆಯಲ್ಲಿ ಪ್ರೀತಿ ಹಳಬರ ಮೊದಲ ಸ್ಥಾನ ಗಳಿಸಿದರೆ, ಅಮೂಲ್ಯ ಪೂಜೇರಿ ದ್ವಿತೀಯ, ಕಾವೇರಿ ಕಾರದಗಿ ತೃತೀಯ ಸ್ಥಾನ ಪಡೆದುಕೊಂಡರು. ಪುರುಷರ ಇಂಡಿಯನ್ ಮೇಡ್ ಸೈಕ್ಲಿಂಗ್(24 ಕಿ.ಮೀ.) ಸ್ಪರ್ಧೆಯಲ್ಲಿ …

Read More »

ದೀಪಾವಳಿ ಹಬ್ಬದ ಪ್ರಯುಕ್ತ ಹಚ್ಚಿದ ಪಟಾಕಿ ಕಿಡಿ ಸಿಡಿದು ಕುಶನ್ ಅಂಗಡಿಗೆ ಬೆಂಕಿ

ದೀಪಾವಳಿ ಹಬ್ಬದ ಪ್ರಯುಕ್ತ ಹಚ್ಚಿದ ಪಟಾಕಿ ಕಿಡಿ ಸಿಡಿದು ಕುಶನ್ ಅಂಗಡಿಗೆ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಬೆಳಗಾವಿ ಜಿಲ್ಲೆಯ ಕಿತ್ತೂರು ಪಟ್ಟಣದಲ್ಲಿ ತಡರಾತ್ರಿ ನಡೆದಿದೆ. ಹೌದು ಕಿತ್ತೂರು ಪಟ್ಟಣದ ಶಬ್ಬೀರ ಬೀಡಿ ಎಂಬುವವರಿಗೆ ಸೇರಿದ ಕುಶನ್ ಅಂಗಡಿಗೆ ನಿನ್ನೆ ತಡರಾತ್ರಿ ಬೆಂಕಿ ತಗುಲಿದೆ. ಪಟಾಕಿ ಕಿಡಿ ಸಿಡಿಯುತ್ತಿದ್ದಂತೆ ಧಗಧಗನೇ ಕುಶನ್ ಅಂಗಡಿ ಹೊತ್ತಿ ಉರಿದಿದೆ. ಅಂದಾಜು 3 ಲಕ್ಷ ಮೌಲ್ಯದ ಸಿದ್ಧಗೊಂಡಿದ್ದ ಕುಶನ್, ಪೀಠೋಪಕರಣ ಬೆಂಕಿಗಾಹುತಿಯಾಗಿವೆ. ಶಬ್ಬೀರ …

Read More »

ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ

ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದ್ದು, ವೀರಜ್ಯೋತಿಯ ಸ್ವಾಗತ, ಆನೆಯ ಮೇಲೆ ವೀರಮಾತೆ ಚನ್ನಮ್ಮಾಜಿಯ ಭವ್ಯ ಮರವಣಿಗೆಗೆ ಕಿತ್ತೂರು ಕಲ್ಮಠದ ರಾಜಯೋಗಿಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಈ ಅದ್ಭುತ ಕ್ಷಣಕ್ಕೆ ಹಲವು ಗಣ್ಯರು, ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ಹೌದು ಬೆಂಗಳೂರಿನಿಂದ ಆರಂಭವಾಗಿ ಇಡೀ ರಾಜ್ಯ ಸಂಚರಿಸಿ ಬೈಲಹೊಂಗಲದ ಚನ್ನಮ್ಮಾಜಿ ಸಮಾಧಿಯಿಂದ ಆಗಮಿಸಿದ ವೀರಜ್ಯೋತಿಯನ್ನು ಕಿತ್ತೂರು ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಸ್ವಾಗತಿಸಲಾಯಿತು. …

Read More »

ಚನ್ನಮ್ಮ ಕಿತ್ತೂರು ಉತ್ಸವ-2022ರ ಭವ್ಯ ಮೆರವಣಿಗೆಗೆ ಚಾಲನೆ

ವೀರರಾಣಿ ಚನ್ನಮ್ಮ ಕಿತ್ತೂರು ಉತ್ಸವ-2022ಕ್ಕೆ ವಿದ್ಯುಕ್ತ ಚಾಲನೆ ಸಿಕ್ಕಿದ್ದು, ವೀರಜ್ಯೋತಿಯ ಸ್ವಾಗತ, ಆನೆಯ ಮೇಲೆ ವೀರಮಾತೆ ಚನ್ನಮ್ಮಾಜಿಯ ಭವ್ಯ ಮೆರವಣಿಗೆಗೆ ಕಿತ್ತೂರು ಕಲ್ಮಠದ ರಾಜಯೋಗಿಂದ್ರ ಸ್ವಾಮೀಜಿ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು. ಈ ಅದ್ಭುತ ಕ್ಷಣಕ್ಕೆ ಹಲವು ಗಣ್ಯರು, ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ಬೆಂಗಳೂರಿನಿಂದ ಆರಂಭವಾಗಿ ಇಡೀ ರಾಜ್ಯ ಸಂಚರಿಸಿ ಬೈಲಹೊಂಗಲದ ಚನ್ನಮ್ಮಾಜಿ ಸಮಾಧಿಯಿಂದ ಆಗಮಿಸಿದ ವೀರಜ್ಯೋತಿಯನ್ನು ಕಿತ್ತೂರು ಪಟ್ಟಣದ ಚೆನ್ನಮ್ಮ ವೃತ್ತದಲ್ಲಿ ಸೋಮವಾರ ಬೆಳಿಗ್ಗೆ 10 ಗಂಟೆಗೆ ಸ್ವಾಗತಿಸಲಾಯಿತು. ಈ …

Read More »

ಕಿತ್ತೂರು ಉತ್ಸವ ನಾಳೆಗೆ ಮುಂದೂಡಿಕೆ….

ಕಿತ್ತೂರು :ಉತ್ಸವ ನಾಳೆಗೆ ಮುಂದೂಡಿಕೆ..   ಚನ್ನಮ್ಮನ ಕಿತ್ತೂರಿನಲ್ಲಿ ಇಂದು ನಡೆಯಬೇಕಿದ್ದ ಕಿತ್ತೂರು ಉತ್ಸವವನ್ನು ನಾಳೆ ಸೋಮವಾರ(ಅ.24)ಕ್ಕೆ ಮುಂದೂಡಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ತಿಳಿಸಿದ್ದಾರೆ.

Read More »