Breaking News

ಗೋಕಾಕ

ಗೋಕಾಕ್ ತಾಲೂಕಿನ ಕಡಬಗಟ್ಟಿ ಗುಡ್ಡದ ಶ್ರೀ ಚೌಡೇಶ್ವರಿ ದೇವಿ ದೇವಸ್ಥಾನದಲ್ಲಿ ಭಕ್ತರು ದೇವಿಗೆ ಸಾರಾಯಿ, ಸಿಗರೇಟು ಅರ್ಪಣೆ ಮಾಡುತ್ತಿರುವುದು ವಿಶೇಷ

ಬೆಳಗಾವಿ : ಸಾಮಾನ್ಯವಾಗಿ ದೇವರಿಗೆ ಭಕ್ತರು ಹೂವು, ಹಣ್ಣು, ತೆಂಗಿನಕಾಯಿ ಅರ್ಪಿಸುವುದನ್ನು ನಾವು ನೀವೆಲ್ಲ ನೋಡಿದ್ದೇವೆ. ಆದರೆ, ಇಲ್ಲೊಂದು ದೇವಸ್ಥಾನದಲ್ಲಿ ಭಕ್ತರು ದೇವಿಗೆ ಸಾರಾಯಿ, ಸಿಗರೇಟು ಅರ್ಪಣೆ ಮಾಡುತ್ತಿರುವುದು ವಿಶೇಷವಾಗಿದೆ. ಈ ದೇವಾಲಯದ ಮತ್ತೊಂದು ವಿಶೇಷ ಎಂದರೆ ಮಂಗಳಮುಖಿಯೊಬ್ಬರು ದೇವಿಗೆ ಪೂಜೆ ಸಲ್ಲಿಸುತ್ತಿದ್ದಾರೆ.  ಜಾತ್ರೆ ಮಹೋತ್ಸವದ ಹಿನ್ನೆಲೆ ದೇವಾಲಯಕ್ಕೆ ಭಕ್ತರ ದಂಡೇ ಹರಿದುಬಂದಿದ್ದು, ವಿಶೇಷ ಪೂಜೆ ಸಲ್ಲಿಸಿದರು. ಹೀಗೆ ದೇವಿಗೆ ಭಕ್ತರು ಸಾರಾಯಿ ಕುಡಿಸಿ, ಸಿಗರೇಟು ಸೇದಿಸುತ್ತಿರುವುದು ಗೋಕಾಕ್ ತಾಲೂಕಿನ ಕಡಬಗಟ್ಟಿ …

Read More »

ರೈತರು ಸಾಲಕ್ಕೆ ಹೆದರದೇ ಧೈರ್ಯವಾಗಿ ಜೀವನ ಸಾಗಿಸಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : ಮಾನವ ಜನ್ಮ ಪವಿತ್ರವಾದದ್ದು. ಜೀವನವೆಂದ ಮೇಲೆ ಪ್ರತಿಯೊಬ್ಬರಿಗೂ ಕಷ್ಟಗಳು ಬಂದೇ ಬರುತ್ತವೆ. ಜೊತೆಗೆ ಸಾಲವೂ ಕೂಡ ಇದ್ದೇ ಇರುತ್ತದೆ. ಧೈರ್ಯದಿಂದ ಜೀವನವನ್ನು ಸಾಗಿಸಬೇಕೇ ಹೊರತು ಆತ್ಮಹತ್ಯೆಯಂತಹ ಹೀನ ಕೃತ್ಯಕ್ಕೆ ಯಾರೂ ಕೈ ಹಾಕಬಾರದು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಪಟ್ಟಣದ ತಹಶೀಲ್ದಾರ ಕಛೇರಿ ಆವರಣದಲ್ಲಿ ಸಾಲದ ಬಾಧೆಗೆ ಹೆದರಿ ಆತ್ಮಹತ್ಯೆಗೆ ಶರಣಾದ 4 ರೈತ ಕುಟುಂಬಗಳ ವಾರಸುದಾರರಿಗೆ ತಲಾ 5 ಲಕ್ಷ ರೂ.ಗಳ ಧನಾದೇಶ …

Read More »

ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್

ಗೋಕಾಕ : ಓರ್ವ ಯೋಧನಿಂದ ಮತ್ತೊಬ್ಬ ಯೋಧನ ಮೇಲೆ ಪೈರಿಂಗ್ ಆಗಿರುವ ಘಟನೆ ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ರಾಜನಕಟ್ಟಿಯಲ್ಲಿ ನಡೆದಿದೆ. ರಾಜನಕಟ್ಟೆ ಗ್ರಾಮದ ಇಬ್ಬರು ವ್ಯಕ್ತಿಗಳು ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಇಂದು ಸಂಜೆ ಇಬ್ಬರು ಯೋಧರ ನಡುವೆ ಹಣಕಾಸಿನ ವಿಚಾರಕ್ಕೆ ಜಗಳ ನಡೆದಿತ್ತು ಎನ್ನಲಾಗಿದೆ. ಅವರಿಬ್ಬರ ಜಗಳ ವಿಕೋಪಕ್ಕೆ ತಿರುಗಿ ಯೋಧರೊಬ್ಬರು ಮತ್ತೊಬ್ಬ ಯೋಧನ ಮೇಲೆ ಡಬಲ್ ರಿವಾಲ್ವಾರ ಗನ್ ನಿಂದ ಪೈರ್ ಮಾಡಿದ್ದಾರೆ. ಪೈರಿಂಗ್ ಮಾಡಿದ …

Read More »

ಗೋಕಾಕ್ ತಾಲೂಕಿನ ಘಟಪ್ರಭಾದಲ್ಲಿ ನಡೆದಿದೆ ಬರ್ಬರವಾಗಿ ಕೊಲೆ

ಬೆಳಗಾವಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ಗೋಕಾಕ್ ತಾಲೂಕಿನ ಘಟಪ್ರಭಾದಲ್ಲಿ ನಡೆದಿದೆ. ರಾಯಬಾಗ ತಾಲೂಕಿನ ರೈಲ್ವೆ ಸ್ಟೇಷನ್ ನಿವಾಸಿ ಸಂಜಯ ಸಾಗರ ಕಾಂಬಳೆ (30) ಕೊಲೆಗೀಡಾದ ವ್ಯಕ್ತಿ. ಹಲವು ದಿನಗಳಿಂದ ಬುದ್ಧಿ ಮಾಂಧ್ಯನಂತೆ ವರ್ತಿಸುತ್ತಿದ್ದ ಈತನನ್ನು ಘಟಪ್ರಭಾದ ಅನುರಾಧಾ ಬಾರ್ ಹತ್ತಿರ ಕೊಲೆ ಮಾಡಲಾಗಿದೆ. ಘಟಪ್ರಭಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

Read More »

ಪ್ರತಿ ಶನಿ ವಾರ ದಂತೆ ಈ ವಾರ ಕೂಡ್ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನ ಸಂತರ್ಪಣೆ

ಗೋಕಾಕ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಗೋಕಾಕ ತಾಲೂಕಿನ ಕೈ ಹೊಸೂರ್ ಗ್ರಾಮದಲ್ಲಿ ಶ್ರೀ ಹನುಮಾನ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಈ ಸಂದರ್ಭದಲ್ಲಿ ಸಿದ್ದಲಿಂಗಪ್ಪ ಬಡಕೂರಿ, ಸಿಂಗಪ್ಪ ಮರಕಟ್ಟಿ, …

Read More »

ಬೈಕ್ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಗೋಕಾಕ್ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ.

ಬೆಳಗಾವಿ: ವಾಟ್ಸ್​ಆಯಪ್​ನಲ್ಲಿ ಚರ್ಚಿಸಿ ಬಳಿಕಬೈಕ್ ಅಡ್ಡಗಟ್ಟಿ ದರೋಡೆ ಮಾಡುತ್ತಿದ್ದ 9 ಮಂದಿ ಆರೋಪಿಗಳನ್ನು ಗೋಕಾಕ್ ಗ್ರಾಮೀಣ ಪೊಲೀಸರು ಬಂಧಿಸಿದ್ದಾರೆ. ಬೆಣಚಿನಮರಡಿಯ ಖಿಲಾರಿ ಗ್ಯಾಂಗ್ ಮತ್ತು ಗೋಕಾಕ್​ ಎಸ್‌ಪಿ ಸರ್ಕಾರ ಗ್ಯಾಂಗ್‌ ಎಂಬ ಹೆಸರಿಟ್ಟುಕೊಂಡು ದರೋಡೆಗೆ ಇಳಿದಿದ್ದ ಗೋಕಾಕ್​ ತಾಲೂಕಿನ ಬೆಣಚಿನಮರಡಿಯ ದುರ್ಗಪ್ಪ ವಡ್ಡರ, ನಾಗಪ್ಪ ಮಾದರ, ಯಲ್ಲಪ್ಪ ಗೀಸನಿಂಗವ್ವಗೋಳ, ಕೃಷ್ಣಾ ಪೂಜೇರಿ, ರಾಮಸಿದ್ಧ ತಪಸಿ, ಬೀರಸಿದ್ಧ ಗುಂಡಿ, ಉದ್ದಪ್ಪ ಖಿಲಾರಿ, ಗೋಕಾಕ್​ನ ಪರಶುರಾಮ ಗೊಂಧಳಿ ಹಾಗೂ ಆಕಾಶ ತಳವಾರ ಬಂಧಿತರು. ಸಾಮಾನ್ಯವಾಗಿ …

Read More »

ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ

ಗೋಕಾಕ: ಕರ್ನಾಟಕ ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿಯಲ್ಲಿ ಲೋಕೋಪಯೋಗಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ ಜಾರಕಿಹೊಳಿ ಅವರು ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದರು. ನಗರದ ಹಿಲ್ ಗಾರ್ಡನ್ ಕಛೇರಿಯಲ್ಲಿ ಯಮಕನಮರಡಿ ಮತಕ್ಷೇತ್ರದ ವಿಧಾನ ಸಭಾ ಮತಕ್ಷೇತ್ರದ ಅನುದಾನ ಅಡಿಯಲ್ಲಿ ಫಲಾನುಭವಿಗಳಿಗೆ ವಿಕಲಚೇತನರಿಗೆ ಯಂತ್ರಚಾಲಿತ ದ್ವಿಚಕ್ರ ವಾಹನ ವಿತರಿಸಿದರು. ಈ ಸಂದರ್ಭದಲ್ಲಿ ಯುವ ನಾಯಕ ರಾಹುಲ್ ಜಾರಕಿಹೊಳಿ ಹಾಗೂ ಅಂಗವಿಕಲ ಕಲ್ಯಾಣ ಅಧಿಕಾರಿ ನಾಮದೇವ ಬಿಲ್ಕರ ಹಾಗೂ …

Read More »

ರಾಯಬಾಗ:ಸರ್ವಧರ್ಮ ಸಮಾನ ಸಿಪಿಐ ಮುಲ್ಲಾ, ಠಾಣೆಗೆ ಆಗಮಿಸಿದ ಗಣೇಶ

ರಾಯಬಾಗ:ಸರ್ವಧರ್ಮ ಸಮನ್ವಯ ಸಿಪಿಐ ಮುಲ್ಲಾ ಠಾಣೆಗೆ ಆಗಮಿಸಿದ ಗಣೇಶ.ಹೌದು ಬೆಳಗಾವಿ ಜಿಲ್ಲೆಯ ಪಟ್ಟಣದಲ್ಲಿಂದು ಪ್ರತಿ ವರ್ಷದಂತೆ ಈ ವರ್ಷವೂ ಕೂಡಾ ಪೋಲಿಸ್ ಗಣೇಶ ಆಗಮನ, ಗಣೇಶ ಚತುರ್ಥೀ ಹಬ್ಬದ ನಿಮಿತ್ಯ ಎಲ್ಲೆಡೆ ಸಡಗರ ಸಂಭ್ರಮದಿಂದ ಗಣೇಶನನ್ನ ಅದ್ದೂರಿಯಾಗಿ ಆಚರಣೆ ಮಾಡುತ್ತಿದ್ದಾರೆ ಇಂದು ಪಟ್ಟಣದ ರಾಯಬಾಗದಲ್ಲಿ ಪೋಲಿಸ್ ಇಲಾಖೆ ವತಿಯಿಂದ ಠಾಣೆಗೆ ಗಣಪಣ ಆಗಮನ, ಇಂದು ರಾಯಬಾಗ ಪೊಲಿಸರು ಅದ್ದೂರಿಯಾಗಿ ಗಣೇಶನನ್ನ ಪೋಲಿಸ್ ಜೀಪ ಮೇಲಿಟ್ಟು ಅದ್ದೂರಿಯಾಗಿ ಪಟಾಕಿ ಸಿಡಿಸಿ ವಾದ್ಯಮೇಳದೊಂದಿಗೆ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ದಿನ ಆಚರಣೆ

ಗೋಕಾಕ : ಯುವ ನಾಯಕ ಸಂತೋಷ ಜಾರಕಿಹೊಳಿ ಅವರ ಒಡೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ದಿನಾಚರಣೆ ಆಚರಿಸಲಾಯಿತು.   ತಾಲೂಕಿನ ಚಿಕ್ಕನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಭಗವಾನ್ ಶ್ರೀ ವಿಶ್ವಕರ್ಮ ದಿನಾಚರಣೆ ಅಂಗವಾಗಿ ಭಾವಚಿತ್ರಕ್ಕೆ ವಿಶೇಷ ಪೂಜೆ ಸಲ್ಲಿಸಿ, ಪ್ರಸಾದ ವಿತರಿಸಿದರು.   ಈ ಸಂದರ್ಭದಲ್ಲಿ ಕಾರ್ಖಾನೆ ಎಲ್ಲ‌ ಸಿಬ್ಬಂದಿಗಳು ಹಾಗೂ ಕಾರ್ಮಿಕರು ಉಪಸ್ಥಿತರಿದ್ದರು.

Read More »

ಗೋಕಾಕ ನಗರಕ್ಕೆ ಅಂಟಿಕೊಂಡ ಗಾಂಜಾ ಘಾಟು! ನಿತ್ಯ ಹತ್ತಾರು ಯುವಕರು ಗಾಂಜಾ ಬಲೆಗೆ

ಗೋಕಾಕ : ನಗರದ ನದಾಫ್ ಗಲ್ಲಿ ಮಸ್ತಾನ್ ಸಾಬ್ ದರ್ಗಾ ಹತ್ತಿರ ನಿತ್ಯ ಹತ್ತಾರು ಯುವಕರು ಗಾಂಜಾ ಬಲೆಗೆ ಬೀಳುತ್ತಿದ್ದು ಗಾಂಜಾ ಸೇವನೆಗೆ ಬಳಸುವ ವಸ್ತುಗಳು ದಿನನಿತ್ಯ ಈ ಪ್ರದೇಶದಲ್ಲಿ ಕಂಡು ಬರುತ್ತಿವೆ. ಯುವಕರು ಸಿಗರೇಟ್ ಸೆದುತ್ತಿರುವಂತೆ ಕಂಡು ಬಂದರು ಸಹಿತ ಅದು ಸಿಗರೇಟ್ ಆಗಿರುವುದಿಲ್ಲ. ಬದಲಾಗಿ ಅದರೊಂದಿಗೆ ಗಾಂಜಾ ಕೂಡ ಸೇರಿಸಿ ಸಿಗರೇಟ್ ಸೆದುತ್ತಿರುವುದು ಕಂಡು ಬರುತ್ತದೆ. ಪೋಷಕರಿಗೆ ಆತಂಕ! ನಮ್ಮ ಮಗನೊಬ್ಬ ಗಾಂಜಾಗೆ ಬಲೆಗೆ ಸಿಲುಕಿದ್ದು ,ನಾವು …

Read More »