Breaking News

ಗೋಕಾಕ

ಜನರ, ಕಾರ್ಯಕರ್ತರ ಆಸೆಯಂತೆ ಗೆಲುವಿನ ಅಂತರ ಹೆಚ್ಚಿನ ಪ್ರಮಾಣದಲ್ಲಾಗಲೆಂದು ದೇವರಲ್ಲಿ ಪ್ರಾರ್ಥನೆ: ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಜಿಲ್ಲೆಯಲ್ಲಿ ಬಿಜೆಪಿಗೆ ಹೆಚ್ಚಿನ ಸ್ಥಾನಗಳು ಬಂದು ರಾಜ್ಯದಲ್ಲಿ ಮತ್ತೊಮ್ಮೆ ಬಿಜೆಪಿ ಸರ್ಕಾರ ಬರುತ್ತದೆ ಎಂದು ಕೆಎಂಎಫ್ ಅಧ್ಯಕ್ಷ, ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ನಗರದ ಹೊಸಪೇಟ ಗಲ್ಲಿಯ ಸರಕಾರಿ ಹಿರಿಯ ಪ್ರಾಥಮಿಕ ಕನ್ನಡ ಗಂಡು ಮಕ್ಕಳ ಶಾಲೆ ನಂ‌೩ ಮತಗಟ್ಟೆ ೧೩೧ ರಲ್ಲಿ ಬುಧವಾರ ಮತದಾನ ಮಾಡಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ಮಂತ್ರಿ ನರೇಂದ್ರ ಮೋದಿ ಸೇರಿದಂತೆ ಸಿಎಂ ಬೊಮ್ಮಾಯಿ ಅವರು ಈಗಾಗಲೇ ಈ …

Read More »

ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ :ಬಾಲಚಂದ್ರ ಜಾರಕಿಹೊಳಿ

ಗೋಕಾಕ: ಮೇ-10 ರಂದು ನಡೆಯುವ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡುತ್ತಿದ್ದು, ಜನಸೇವೆಗೆ ಮತ್ತೊಮ್ಮೆ ಬಿಜೆಪಿಯನ್ನು ಬೆಂಬಲಿಸಿ ಆಶೀರ್ವಾದ ಮಾಡುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮತದಾರರಲ್ಲಿ ಮನವಿ ಮಾಡಿದರು. ತಾಲೂಕಿನ ಕೌಜಲಗಿ ಪಟ್ಟಣದಲ್ಲಿ ಬುಧವಾರ ಸಂಜೆ ಜರುಗಿದ ಬಿಜೆಪಿ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮತಯಾಚಿಸಿ ಮಾತನಾಡಿದ ಅವರು, ಸತತ 6ನೇ ಬಾರಿಗೆ ವಿಧಾನ ಸಭಾ ಚುನಾವಣೆಯಲ್ಲಿ ಸ್ಪರ್ಧೆ ಮಾಡುತ್ತಿರುವುದಾಗಿ ಅವರು ಹೇಳಿದರು …

Read More »

ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು:ಬಾಲಚಂದ್ರ ಜಾರಕಿಹೊಳಿ

ಗೋಕಾಕ : ಪ್ರತಿ ಮತಗಟ್ಟೆಗಳಲ್ಲಿ ಕನಿಷ್ಠ ಶೇ 75-80 ರಷ್ಟು ಮತಗಳು ಬಿಜೆಪಿಗೆ ಮತ ಚಲಾಯಿಸುವಂತೆ ಮಾಡಿದರೆ ಮಾತ್ರ ನಮ್ಮ ಗೆಲುವಿನ ಗುರಿಯನ್ನು ತಲುಪಬಹುದು. ಈ ನಿಟ್ಟಿನಲ್ಲಿ ಮತಗಟ್ಟೆಗಳ ಪ್ರಮುಖರು ಪ್ರತಿ ಮನೆ ಮನೆಗೆ ತೆರಳಿ ಬಿಜೆಪಿಗೆ ಮತ ಬೀಳಲು ಶಕ್ತಿ ಮೀರಿ ಶ್ರಮಿಸುವಂತೆ ಅರಭಾವಿ ಬಿಜೆಪಿ ಅಭ್ಯರ್ಥಿ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕಾರ್ಯಕರ್ತರಿಗೆ ಕರೆ ನೀಡಿದರು. ಮಂಗಳವಾರ ಸಂಜೆ ನಗರದ ಹೊರವಲಯದಲ್ಲಿರುವ ಬಸವೇಶ್ವರ ಸಭಾ ಭವನದಲ್ಲಿ …

Read More »

ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ

ಹಿಡಕಲ್ ಜಲಾಶಯದಿಂದ ಜಿಆರ್‍ಬಿಸಿ, ಜಿಎಲ್‍ಬಿಸಿ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆಯಿಂದ 7 ದಿನಗಳವರೆಗೆ ನೀರು ಬಿಡುಗಡೆ : ಶಾಸಕ ಬಾಲಚಂದ್ರ ಜಾರಕಿಹೊಳಿ ಜನ ಹಾಗೂ ಜಾನುವಾರುಗಳಿಗೆ ಕುಡಿಯುವ ನೀರಿಗಾಗಿ ಮಾತ್ರ ನೀರನ್ನು ಬಳಕೆ ಮಾಡಲು ಮನವಿ ಮಾಡಿಕೊಂಡ ಬಾಲಚಂದ್ರ ಜಾರಕಿಹೊಳಿ ಗೋಕಾಕ : ಹಿಡಕಲ್ ಜಲಾಶಯದಿಂದ ಘಟಪ್ರಭಾ ಎಡದಂಡೆ, ಬಲದಂಡೆ ಹಾಗೂ ಸಿಬಿಸಿ ಕಾಲುವೆಗಳಿಗೆ ನಾಳೆ ದಿ. 22 ರಿಂದ 7 ದಿನಗಳವರೆಗೆ ಕುಡಿಯುವ ನೀರಿನ ಉದ್ಧೇಶಕ್ಕಾಗಿ 2.963 ಟಿಎಂಸಿ …

Read More »

ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

ಮೂಡಲಗಿ: ಅರಭಾವಿ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಇಂದು ಚುನಾವಣಾಧಿಕಾರಿಗಳಿಗೆ ತಮ್ಮ ನಾಮಪತ್ರ ಸಲ್ಲಿಸಿದರು. ಬುಧವಾರದಂದು ಇಲ್ಲಿನ ತಹಶೀಲ್ದಾರ ಕಛೇರಿಗೆ ತೆರಳಿದ ಬಾಲಚಂದ್ರ ಜಾರಕಿಹೊಳಿ ಅವರು ಚುನಾವಣಾಧಿಕಾರಿಯಾಗಿರುವ ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಅವರಿಗೆ ಬಿಜೆಪಿ ಅಧಿಕೃತ ಅಭ್ಯರ್ಥಿಯಾಗಿ ಉಮೇದುವಾರಿಕೆ ಸಲ್ಲಿಸಿದರು. ಬುಧವಾರ ಮುಂಜಾನೆ 11 ಗಂಟೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅತ್ಯಂತ ಸರಳವಾಗಿ ತಮ್ಮ ನಾಲ್ವರು ಸೂಚಕರೊಂದಿಗೆ ಒಂದು ನಾಮಪತ್ರ ಸಲ್ಲಿಸಿದರು. ಈ ಸಂದರ್ಭದಲ್ಲಿ …

Read More »

ಗೋಕಾಕ ಕ್ಷೇತ್ರದಿಂದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ನಾಮ ಪತ್ರ ಸಲ್ಲಿಕೆ

ಗೋಕಾಕ: ಗೋಕಾಕ ವಿಧಾನಸಭಾ ಕ್ಷೇತ್ರದಿಂದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಶುಭ ಮೂಹೂರ್ತ ದಲ್ಲಿ ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ವಿಧಾನ ಸಭೆ ಚುನಾವಣೆ ಕಾವು ದಿನದಿಂದ ದಿನಕ್ಕೆ ರಂಗೇರುತ್ತಿದೆ ಇಂದಿನಿಂದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಶುರು ಆಗಿದೆ ಇಂದು ರಮೇಶ್ ಜಾರಕಿಹೊಳಿ ಅವರು ಗೋಕಾಕ ನಲ್ಲಿ ತಮ್ಮ ನಾಮ ಪತ್ರ ಸಲ್ಲಿಕೆಯನ್ನ ಅತ್ಯಂತ ಸರಳ ರೀತಿಯಲ್ಲಿ ಮಾಡಿದ್ದಾರೆ   ಗುರುವಾರ ಶುಭ ಮೂಹರ್ತದಲ್ಲಿ ತಮ್ಮ ಆಪ್ತರೊಂದಿಗೆ ನಗರದ ಮಿನಿ …

Read More »

ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷ ಮತಗಳಿಂದ ಆಯ್ಕೆ ಮಾಡಿ.-ಸರ್ವೋತ್ತಮ ಜಾರಕಿಹೊಳಿ

ಗೋಕಾಕ: ಕಳೆದ ಎರಡು ದಶಕದಿಂದ ಅರಭಾವಿ ಕ್ಷೇತ್ರದ ಶಾಸಕರಾಗಿ, ಆ ಭಾಗದ ಜನರ ಆಶೋತ್ತರಗಳಿಗೆ ಸದಾ ಸ್ಪಂದಿಸುತ್ತಿರುವ ಬಾಲಚಂದ್ರ ಜಾರಕಿಹೊಳಿ ಅವರನ್ನು ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆಲ್ಲಿಸಿಕೊಡುವ ಸಂಕಲ್ಪವನ್ನು ಕಾರ್ಯಕರ್ತರು ಮಾಡುವಂತೆ ಯುವ ಧುರೀಣ ಸರ್ವೋತ್ತಮ ಜಾರಕಿಹೊಳಿ ಹೇಳಿದರು. ಅವರು, ಅರಭಾವಿ ಕ್ಷೇತ್ರದ ಹಳ್ಳೂರ, ಮೆಳವಂಕಿ, ಕೌಜಲಗಿ ಮತ್ತು ವಡೇರಹಟ್ಟಿ ಜಿಲ್ಲಾ ಪಂಚಾಯತ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ ಬಾಲಚಂದ್ರ ಜಾರಕಿಹೊಳಿ ಅವರ ಜನಪರ …

Read More »

ಮೂಡಲಗಿ ಬಳಿ ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಅಪಘಾತಕ್ಕೆ ನವದಂಪತಿ ಬಲಿ

ಮೂಡಲಗಿ :  ಬೆಳಗಾವಿ ಜಿಲ್ಲೆಯ  ಮೂಡಲಗಿ ಬಳಿ ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿ ನವದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.  ತಾಲೂಕಿನ ಹಳ್ಳೂರ ಗ್ರಾಮದ ಬಳಿ ಕಾರು ಹಾಗೂ ಟ್ಯಾಂಕರ್ ಮುಖಾಮುಖಿ ಡಿಕ್ಕಿಯಾಗಿದ್ದು, ವಿವಾಹವಾಗಿ 10 ನೇ ದಿನಕ್ಕೆ ನವ ದಂಪತಿ ಮೃತರಾಗಿದ್ದಾರೆ. ಮಹಾರಾಷ್ಟ್ರ ಮೂಲದ ಇಂದ್ರಜೀತ್ ಮೋಹನ ಡಮ್ಮಣಗಿ (27) ಹಾಗೂ ಕಲ್ಯಾಣಿ ಮೋಹನ ಡಮ್ಮಣಗಿ (24) ಮೃತರು. ನವ ದಂಪತಿ ಶನಿವಾರ ಕಾರಿನಲ್ಲಿ ಬಾದಾಮಿಯ ಬನಶಂಕರಿ ದೇವಿ ದರ್ಶನ ಪಡೆದು ಮರಳಿ …

Read More »

ವಿರೋಧಿಗಳ ಸುಳ್ಳು ವದಂತಿಗಳನ್ನು ನಂಬಬೇಡಿ, ಅತ್ಯಧಿಕ ಮತಗಳ “ಲೀಡ್” ನೀಡಿ ಆಯ್ಕೆ ಮಾಡಿ : ಶಾಸಕ ಬಾಲಚಂದ್ರ ಜಾರಕಿಹೊಳಿ

ಕಳೆದ ಸೋಮವಾರದಂದು ನಡೆದ ತುಕ್ಕಾನಟ್ಟಿ ಜಿಪಂ ವ್ಯಾಪ್ತಿಯ ಪ್ರಮುಖರ ಸಭೆಯಲ್ಲಿ ಮಾತನಾಡಿದ ಬಾಲಚಂದ್ರ ಜಾರಕಿಹೊಳಿ ತುಕ್ಕಾನಟ್ಟಿ(ತಾ:ಮೂಡಲಗಿ) : ಘಟಪ್ರಭಾ ಎಡದಂಡೆ ಮತ್ತು ಬಲದಂಡೆ ಕಾಲುವೆಗಳ ಕೊನೆಯ ಭಾಗದ ರೈತರಿಗೆ ಕಾಲುವೆಗಳಿಂದ ಸಮರ್ಪಕವಾಗಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ. ಬೇಸಿಗೆಯನ್ನು ಗಮನದಲ್ಲಿಟ್ಟುಕೊಂಡು ಜನರಿಗೆ ಕುಡಿಯುವ ನೀರಿನ ಸಮಸ್ಯೆಗಳು ತಲೆದೋರದಂತೆ ಕೆಲಸ ಮಾಡುತ್ತಿರುವುದಾಗಿ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಕಳೆದ ದಿ. 27 ರಂದು ಮೂಡಲಗಿ ತಾಲೂಕಿನ ತುಕ್ಕಾನಟ್ಟಿ ಗ್ರಾಮದ …

Read More »

ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಗೋಕಾಕ : ಕೆಎಂಎಫ್ ರೈತರ ಬೃಹತ್ ಸಂಸ್ಥೆಯಾಗಿದ್ದು ರೈತರ ಶ್ರೇಯೋಭಿವೃದ್ಧಿಗೆ ಮತ್ತು ಅವರ ಆರ್ಥಿಕ ಬಲವರ್ಧನೆಗಾಗಿ ಸಾಕಷ್ಟು ಯೋಜನೆಗಳನ್ನು ಅನುಷ್ಠಾನ ಮಾಡಿದ್ದು, ರೈತರು ಇದರ ಪ್ರಯೋಜನ ಪಡೆದುಕೊಳ್ಳುವಂತೆ ಕೆಎಂಎಫ್ ಅಧ್ಯಕ್ಷ, ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ಇತ್ತೀಚೆಗೆ ಇಲ್ಲಿನ ಎನ್‌ಎಸ್‌ಎಫ್ ಅತಿಥಿ ಗೃಹದಲ್ಲಿ ಜಿಲ್ಲಾ ಹಾಲು ಒಕ್ಕೂಟದಿಂದ ಒಟ್ಟು ೮.೬೦ ಲಕ್ಷ ರೂ.ಗಳ ಚೆಕ್‌ಗಳನ್ನು ಫಲಾನುಭವಿಗಳಿಗೆ ವಿತರಿಸಿ ಮಾತನಾಡಿದ ಅವರು, ರೈತರು ಹೈನುಗಾರಿಕೆಗೆ ಹೆಚ್ಚಿನ ಪ್ರೋತ್ಸಾಹ ನೀಡಿದರೆ ಹಾಲು ಉತ್ಪಾದಕರ ಸಂಘಗಳು …

Read More »