Breaking News

ಗೋಕಾಕ

ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ

ಶ್ರೇಷ್ಠ ಫೌಂಡೇಶನ್ ವತಿಯಿಂದ ಸ್ಕೌಟ್ಸ್ ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರ ವಿತರಣೆ ಗೋಕಾಕ : ಹಿರೇನಂದಿ ಗ್ರಾಮದ ಸರ್ಕಾರಿ ಪ್ರೌಢಶಾಲೆ ಸ್ಕೌಟ್ಸ್, ಗೈಡ್ಸ್ ಹಾಗೂ ಕ್ರೀಡಾಪಟುಗಳಿಗೆ ಸಮವಸ್ತ್ರವನ್ನು ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿತರಿಸಿದರು. ಈ ಸಂದರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯರು ಸಿಬ್ಬಂದಿ ವರ್ಗ ವಿದ್ಯಾರ್ಥಿಗಳು ಮತ್ತು ಶಾಲಾ ಸುಧಾರಣಾ ಸಮಿತಿಯವರು ಉಪಸ್ಥಿತರಿದ್ದರು.

Read More »

ಗೋಕಾಕ: ರಮೇಶ ಜಾರಕಿಹೊಳಿ, ಹೇಳಿಕೆ

ಗೋಕಾಕ: ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಕೂಡಲಸಂಗಮ ಜಯ ಮೃತ್ಯುಂಜಯ ಸ್ವಾಮಿಜಿಗಳ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಶಾಸಕ ರಮೇಶ ಜಾರಕಿಹೊಳಿ ತಿಳಿಸಿದ್ದಾರೆ. ಗುರುವಾರದಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿರುವ ಅವರು, ಪಂಚಮಸಾಲಿ ಸಮಾಜದ ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡಲಾಗುವುದು, ಕೂಡಲ ಸಂಗಮ ಪೀಠದ ಜಗದ್ಗುರು ಜಯ ಮೃತ್ಯುಂಜಯ ಸ್ವಾಮಿಜಿಯವ ನೇತ್ರತ್ವದಲ್ಲಿ ಪಂಚಮಸಾಲಿ ಸಮಾಜಕ್ಕೆ ಮಕ್ಕಳ ಶಿಕ್ಷಣ ಮತ್ತು ಉದ್ಯೋಗಕ್ಕಾಗಿ 2ಎ ಮೀಸಲಾತಿ ನೀಡಬೇಕೆನ್ನುವ ಅವರ ಹೋರಾಟ …

Read More »

K.P.T.C.L. ಪರೀಕ್ಷೆ ಅಕ್ರಮ ಮತ್ತೊರ್ವ ಆರೋಪಿಯನ್ನು ಬಂಧಿಸುವಲ್ಲಿ ಗೋಕಾಕ್ ನಗರ ಪೊಲೀಸರು ಯಶಸ್ವಿ

ಕೆಪಿಟಿಸಿಎಲ್ ಪರೀಕ್ಷೆ ಅಕ್ರಮ ಪ್ರಕರಣದಲ್ಲಿ ಮತ್ತೊರ್ವ ಆರೋಪಿಯನ್ನು ಬಂಧಿಸುವಲ್ಲಿ ಗೋಕಾಕ್ ನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಭೀಮಶಿ(ಭೀಮಪ್ಪ) ಸಿದ್ದಪ್ಪ ಗುದಿಗೊಪ್ಪ ಬಂಧಿತ ಆರೋಪಿ. ಈತ ಇಲೆಕ್ಟ್ರಾನಿಕ್ ಡಿವೈಸ್‍ಗಳನ್ನೂ ವಿದ್ಯಾರ್ಥಿಗಳಿಗೆ ಕೊಟ್ಟವನು ಮತ್ತು ಪ್ರಶ್ನೆ ಪತ್ರಿಕೆ ಸೋರಿಕೆ ಮಾಡಲು ಮತ್ತು ಇಲೆಕ್ಟ್ರಾನಿಕ್ ಡಿವೈಸ್ ಖರೀದಿ ಮಾಡಲು ಹಣ ಕೊಟ್ಟವನು. ಈತನಿಂದ 6 ಮೊಬೈಲ್ ಮತ್ತು ಒಂದು ಲ್ಯಾಪಟಾಪ್ ಮತ್ತು 3 ಇಲೆಕ್ಟ್ರಾನಿಕ್ ಡಿವೈಸ್ ಮತ್ತು ಒಂದು ಕಾರನ್ನು ಜಪ್ತಿ ಮಾಡಲಾಗಿದೆ. ಬಂಧಿತ ಆರೋಪಿಯನ್ನು …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು.   ಈ ಸಂದರ್ಭದಲ್ಲಿ ಗ್ರಾಮದಲ್ಲಿ ಮಹಿಳೆಯರು ಕುಂಭ ಮೇಳ, ಯುವಕರು ಭಂಡಾರದಲ್ಲಿ ಮಿಂದೆದ್ದು ಅತಿ ಉತ್ಸಾಹದಿಂದ …

Read More »

ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ

*ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ* ಗೋಕಾಕ : ತಾಲೂಕಿನ ಸಂತೋಷ ಜಾರಕಿಹೊಳಿ ಅವರ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಕಾರ್ಖಾನೆಯಲ್ಲಿ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಹಿರೇನಂದಿ ಗ್ರಾಮದಿಂದ ಕಾರ್ಖಾನೆವರಗೆ ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿಯನ್ನು ಭವ್ಯ ಮೆರವಣಿಗೆ ಮೂಲಕ ತರಲಾಯಿತು. ನಂತರ ಗೋಮಾತೆ ಗೆ ಪೂಜೆ ಸಲ್ಲಿಸಿ, ಶ್ರೀ ಅನಂತಪದ್ಮನಾಭ ಸ್ವಾಮಿ ಮೂರ್ತಿ ಪ್ರತಿಷ್ಠಾಪನೆ ಮಾಡಿದರು. ಈ ಸಂದರ್ಭದಲ್ಲಿ ಗ್ರಾಮದಲ್ಲಿ …

Read More »

ಉಪ್ಪಾರ ಸಮುದಾಯದ ಹೋರಾಟಕ್ಕೆ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಬೆಂಬಲ*

        *ಗೋಕಾಕ* : ಪರಿಶಿಷ್ಟ ಜಾತಿ ಅಥವಾ ಪರಿಶಿಷ್ಟ ಪಂಗಡಕ್ಕೆ ಸೇರ್ಪಡೆಗೊಳಿಸುವಂತೆ ನಡೆಸುತ್ತಿರುವ ಉಪ್ಪಾರ ಸಮುದಾಯದ ಹೋರಾಟಕ್ಕೆ ಅರಭಾವಿ ಶಾಸಕ ಹಾಗೂ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಬೆಂಬಲ ಸೂಚಿಸಿದ್ದಾರೆ. ಈ ಬಗ್ಗೆ ಗುರುವಾರದಂದು ಹೇಳಿಕೆ ನೀಡಿರುವ ಅವರು, ಉಪ್ಪಾರ ಸಮುದಾಯದ ಬೇಡಿಕೆಯನ್ನು ಈಡೇರಿಸುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯ ಮಾಡುವುದಾಗಿ ಅವರು ಹೇಳಿದ್ದಾರೆ. ರಾಜ್ಯದಲ್ಲಿ ಸುಮಾರು 50 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಉಪ್ಪಾರ ಸಮುದಾಯವಿದೆ. ಶೈಕ್ಷಣಿಕವಾಗಿ, …

Read More »

ಸಂಚಾರಿ ಪಶು ಚಿಕಿತ್ಸಾಲಯ ವಾಹನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ*: ರೈತರ ಜಾನುವಾರುಗಳು ಅನಾರೋಗ್ಯಕ್ಕೀಡಾದಾಗ ರೈತರು ಟೋಲ್ ಫ್ರೀ 1962 ಕ್ಕೆ ಕರೆ ಮಾಡಿದಲ್ಲಿ ಸಂಚಾರಿ ಪಶು ಚಿಕಿತ್ಸಾಲಯ ವಾಹನ ರೈತರ ಮನೆ ಬಾಗಿಲಿಗೆ ತೆರಳಿ ಜಾನುವಾರುಗಳಿಗೆ ತುರ್ತು ಚಿಕಿತ್ಸೆ ನೀಡಲಿದೆ ಎಂದು ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು. ತಮ್ಮ ಗೃಹ ಕಛೇರಿಯಲ್ಲಿ ಪಶು ಪಾಲನಾ ಇಲಾಖೆಯಿಂದ ಸಂಚಾರಿ ಪಶು ಚಿಕಿತ್ಸಾ ವಾಹನಗಳಿಗೆ ಚಾಲನೆ ನೀಡಿ ಮಾತನಾಡಿದ ಅವರು, ರೈತರ ಜಾನುವಾರುಗಳ ಆರೋಗ್ಯ ರಕ್ಷಣೆಗಾಗಿ …

Read More »

194 ಕೋಟಿ ರೂ. ವೆಚ್ಚದ ಕೌಜಲಗಿ ಭಾಗದ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿ ರೈತರಿಗೆ ವರದಾನ : ಶಾಸಕ ಬಾಲಚಂದ್ರ ಜಾರಕಿಹೊಳಿ

  ಗೋಕಾಕ : ಕೌಜಲಗಿ ಭಾಗದ ರೈತರ ಬಹು ವರ್ಷಗಳ ಬೇಡಿಕೆಯಾಗಿರುವ ಕಲ್ಮಡ್ಡಿ ಏತ ನೀರಾವರಿ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದ್ದು, ರೈತರ ಎಫ್.ಐ.ಸಿ ಕಾಮಗಾರಿಗೆ 32 ಕೋಟಿ ರೂ. ಅನುದಾನ ಬಿಡುಗಡೆಯಾಗಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದ್ದಾರೆ. ಚಿಕ್ಕ ನೀರಾವರಿ ಇಲಾಖೆಯಿಂದ 162 ಕೋಟಿ ರೂ. ಮೊತ್ತದ ಕಲ್ಮಡ್ಡಿ ಏತ ನೀರಾವರಿ ಯೋಜನೆಯ ಕಾಮಗಾರಿಯು ಈಗಾಗಲೇ ಪೂರ್ಣಗೊಂಡಿದೆ. ರೈತರ ಜಮೀನುಗಳಿಗೆ ಹೊಲಗಾಲುವೆ ಮೂಲಕ ನೀರು …

Read More »

ಪ್ರತಿ ಶನಿವಾರ ದಂತೆ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ

ಗೋಕಾಕ : ಸದ್ದಿಲ್ಲದೆ, ಯಾವುದೇ ರೀತಿಯ ಪ್ರಚಾರ ಬಯಸದೆ ನಿಸ್ವಾರ್ಥ ಸೇವೆಯಿಂದ ಜನತೆಯ ಮನದಲ್ಲಿ ಮನೆ ಮಾಡಿದ್ದಾರೆ ಸಾಹುಕಾರ್ ಮನೆತನದ ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ. ಹೌದು ಸಂತೋಷ ಜಾರಕಿಹೊಳಿ ಅವರು ಸಾಕಷ್ಟು ಸಮಾಜ ಸೇವೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದು ಅನೇಕ ಸಾಮಾಜಿಕ ಕಾರ್ಯಗಳನ್ನು ಸದ್ದಿಲ್ಲದೆ ಮಾಡಿದ್ದಾರೆ. ಇಂದು ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ …

Read More »

ಗೋಕಾಕ :ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಗೋಕಾಕ : ಗೋಕಾಕ ನಗರದ ಕಿಲ್ಲಾ ಪ್ರದೇಶದಲ್ಲಿ ಬೇರೊಬ್ಬರ ಮನೆಯ ಗ್ಯಾಲರಿಯಲ್ಲಿ ಮಹಿಳೆಯೋರ್ವಳ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಡೆದಿದೆ. ಶವವಾಗಿ ಪತ್ತೆಯಾಗಿರುವ ಮಹಿಳೆಯನ್ನು ಮರಾಠಾಗಲ್ಲಿಯ ನಿವಾಸಿಯಾದ ಜಭೀನಾ ಮುಲ್ಲಾ (40) ಎಂದು ಗುರುತಿಸಲಾಗಿದೆ. ಗೋಕಾಕ ನಗರದ ಕಿಲ್ಲಾದಲ್ಲಿರುವ ಕಿರಣ್ ದೀಕ್ಷಿತ್ ಎಂಬುವವರ ಮನೆಯ ಮುಂದಿನ ಗ್ಯಾಲರಿಯಲ್ಲಿ ಮೃತದೇಹ ನೇತಾಡುತ್ತಿತ್ತು. ಮನೆ ರಸ್ತೆ ಪಕ್ಕದಲ್ಲಿರುವುದರಿಂದ ಈ ದೃಶ್ಯ ಕಂಡು ವಾಕಿಂಗ್ ಹೋಗುತ್ತಿದ್ದವರು ಬೆಚ್ಚಿಬಿದ್ದಿದ್ದಾರೆ. ಕೆಲವು ದಿನಗಳ ಹಿಂದೆ …

Read More »