Breaking News

ಗೋಕಾಕ

ಹಿಡಲಕ ಗ್ರಾಮದಲ್ಲಿ ಅಕ್ರಮ ಬೆಳೆದ ಗಾಂಜಾ ಪೊಲೀಸರ ವಶಕ್ಕೆ

ದಿನಾಂಕ: 15/09/2022 ರಂದು 0715 ಗಂಟೆಗೆ ಹಿಡಕಲ್ ಗ್ರಾಮ ಹದ್ದಿಯ ಜಮೀನ ರಿಸನಂ. 149 ನೇದ್ದರಲ್ಲಿ ಮಾಲಕನು ಅನಧೀಕೃತವಾಗಿ ಗಾಂಜಾ ಎಂಬುವ ಮಾದಕ ಪದಾರ್ಥದ ಗಿಡಗಳನ್ನು ಮಾರಾಟ ಮಾಡುವ ಉದ್ದೇಶದಿಂದ ಬೆಳೆಸಿರುತ್ತಾನೆ ಅಂತಾ ಖಾತ್ರಿದಾಯಕ ಮಾಹಿತಿ ಬಂದಂತೆ, ಮಾನ್ಯ ಶ್ರೀ ಶ್ರೀಪಾದ ಜಲ್ಲೆ, ಪೊಲೀಸ್ ಉಪಾಧೀಕ್ಷಕರು ಅಥಣಿ ಉಪ-ವಿಭಾಗ, ಮಾನ್ಯ ಶ್ರೀ ಕೆ. ಎಸ್. ಹಟ್ಟಿ, ಸಿಪಿಐ ಹಾರೂಗೇರಿ ವೃತ್ತ ರವರ ಮಾರ್ಗದರ್ಶನದಲ್ಲಿ ರಾಘವೇಂದ್ರ ಖೋತ, ಪಿಎಸ್‌ಐ(ಕಾ&ಸು) ಹಾರೂಗೇರಿ ಪೊಲೀಸ್ …

Read More »

ಗೋಕಾಕ ನಲ್ಲಿ ರೇಬಿಸ್ ದಿನ ಆಚರಣೆ

ಗೋಕಾಕ  : ಗೋಕಾಕ ತಾಲೂಕಿನಲ್ಲಿ ವಿಶ್ವ ರೇಬೀಸ್ ದಿನಾಚರಣೆ ಅಂಗವಾಗಿ ಮಿಷನ್ ರೇಬೀಸ್ ಕಾರ್ಯಕ್ರಮವನ್ನು ದಿನಾಂಕ:-15-09-2022 ರಂದು ಪಶು ಆಸ್ಪತ್ರೆ ಗೋಕಾಕನಲ್ಲಿ ಉಚಿತವಾಗಿ ಶ್ವಾನಗಳಿಗೆ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು,   ನಗರ ಸಭೆ ಅಧ್ಯಕ್ಷರಾದ ಶ್ರೀ ಜಯಾನಂದ ಹುಣಶ್ಯಾಳಿ ಇವರು ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಸಹಾಯಕ ನಿರ್ದೇಶಕರಾದ ಡಾ:ಮೋಹನ.ವಿ.ಕಮತ ರವರು ಕಾರ್ಯಕ್ರಮದ ಕುರಿತು ಮಾತನಾಡಿ ರೇಬೀಸ್ ರೋಗ ಪ್ರಾಣಿಜನ್ಯ ರೋಗವಾಗಿದ್ದು ಜಾನುವಾರುಗಳಿಂದ ಜಾನುವಾರುಗಳಿಗೆ, ಜಾನುವಾರುಗಳಿಂದ ಮಾನವರಿಗೆ ಹರಡುವ ರೋಗವಾಗಿದ್ದು, …

Read More »

ಹೃದಯಾಘಾತದಿಂದ ಯೋಧ ಸಾವು: ಗೋಕಾಕದ ಮೇಲ್ಮಟ್ಟಿಯಲ್ಲಿ ಪಾರ್ಥಿವ ಶರೀರದ ಮೆರವಣಿಗೆ

ಗೋಕಾಕ (ಬೆಳಗಾವಿ ಜಿಲ್ಲೆ): ಹೃದಯಾಘಾತದಿಂದ ಮಂಗಳವಾರ ನಿಧನರಾದ ಯೋಧ ಬಾಳಪ್ಪ ಯಲಿಗಾರ (33) ಅವರ ಮೃತದೇಹವನ್ನು ಬುಧವಾರ ಅವರ ಹುಟ್ಟೂರಾದ ಗೋಕಾಕ ತಾಲ್ಲೂಕಿನ ಮೇಲ್ಮಟ್ಟಿಗೆ ತರಲಾಯಿತು. ಅಪಾರ ಸಂಖ್ಯೆಯಲ್ಲಿ ಸೇರಿದ ಸುತ್ತಮುತ್ತಲಿನ ಗ್ರಾಮಗಳ ಜನ, ಯೋಧನ ಮೃತದೇಹಕ್ಕೆ ಗೌರವಪೂರ್ಣ ಸ್ವಾಗತ ಕೋರಿದರು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಬಿ.ನಂದಗಾವಿ ಹಾಗೂ ಡಿಎಆರ್ ಎಸ್ಪಿ ವೈ.ಕೆ. ಕಾಶಪ್ಪನವರ ಅವರು ಪುಷ್ಪಗುಚ್ಛ ಸಮರ್ಪಿಸಿ ಗೌರವ ಸಲ್ಲಿಸಿದರು. ಮಹಾರಾಷ್ಟ್ರದ ಔರಂಗಾಬಾದನಲ್ಲಿ ಮಂಗಳವಾರ ಮಧ್ಯಾಹ್ನ ಕೆಲಸದಲ್ಲಿ ಇದ್ದಾಗಲೇ …

Read More »

ಪಶು ವೈದ್ಯಕೀಯ ಸಂಸ್ಥೆಯಿಂದ ಶ್ವಾನಗಳಿಗೆ ಉಚಿತ ರೇಬೀಸ್ ಲಸಿಕಾ ಕಾರ್ಯಕ್ರಮ. ಡಾ :ಮೋಹನ ಕಮತ

ಗೋಕಾಕ ತಾಲೂಕಿನಲ್ಲಿ ಮಿಷನ್ ರೇಬೀಸ್ ಕಾರ್ಯಕ್ರಮವನ್ನು 15-09-2022 ರಿಂದ 30-09-2022 ರ ವರೆಗೆ   ಗೋಕಾಕ ತಾಲೂಕಿನ ಎಲ್ಲ ಪಶು ವೈದ್ಯಕೀಯ ಸಂಸ್ಥೆಗಳಲ್ಲಿ ಉಚಿತವಾಗಿ ಶ್ವಾನಗಳಿಗೆ ರೇಬೀಸ್ ಲಸಿಕಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುವುದು ಆದ್ದರಿಂದ ಶ್ವಾನ ಮಾಲೀಕರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ಡಾ:ಮೋಹನ.ವಿ.ಕಮತ ಸಹಾಯಕ ನಿರ್ದೇಶಕರು ಪಶು ಆಸ್ಪತ್ರೆ ಗೋಕಾಕ ಇವರು ತಿಳಿಸಿರುತ್ತಾರೆ.  

Read More »

ಕೊಚ್ಚಿ ಹೋಗಿದ್ದ ಯುವಕನ ಶವ 3 ದಿನ ಆದ್ಮೇಲೆ ಪತ್ತೆ

ಭಾರಿ ಮಳೆಗೆ ತುಂಬಿ ಹರಿಯುತ್ತಿದ್ದ ಹಳ್ಳದಲ್ಲಿ ಕೊಚ್ಚಿ ಹೋಗಿದ್ದ ಗೋಕಾಕ ತಾಲೂಕಿನ ಕೊಳವಿ ಗ್ರಾಮದ ಯುವಕನ ಮೃತದೇಹ ಪತ್ತೆಯಾಗಿದೆ. ಹೌದು ಸೆ.9ರಂದು ಹೊಲಕ್ಕೆ ಹೋಗುವಾಗ ನೀರಿನಲ್ಲಿ ಕೊಳವಿ ಗ್ರಾಮದ ದುಂಡಪ್ಪ ಮಾಲದಿನ್ನಿ(25) ಎಂಬ ಯುವಕ ಕೊಚ್ಚಿಕೊಂಡು ಹೋಗಿದ್ದ.     ಬಳಿಕ ಅಗ್ನಿಶಾಮಕ ಸಿಬ್ಬಂದಿಗಳಿಂದ ಸತತವಾಗಿ ಮೂರು ದಿನಗಳ ಕಾರ್ಯಾಚರಣೆ ಬಳಿಕ ಇಂದು ಬೆನಚಿನಮರಡಿ ಕೊಳವಿ ಮಾರ್ಗದ ಮಧ್ಯೆ ಶವ ಪತ್ತೆಯಾಗಿದೆ. ಗೋಕಾಕ ಗ್ರಾಮೀಣ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More »

ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಳ್ಳಿ: ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ

ಗೋಕಾಕ: ” ಬಡ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಸರ್ಕಾರ ಅನೇಕ ಸೌಲಭ್ಯಗಳನ್ನು ಕಲ್ಪಿಸಿದ್ದು, ಇದರ ಸದುಪಯೋಗ ಪಡೆದುಕೊಂಡು ಜೀವನ ಯಶಸ್ಸು ಕಾಣಬೇಕು” ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಹೇಳಿದರು.   ನಗರದ ಗೃಹ ಕಚೇರಿಯಲ್ಲಿ ವಿಧಾನ ಪರಿಷತ್ ಸದಸ್ಯ ಲಖನ್ ಜಾಕಿರಹೊಳಿ ಅವರು ಕಟ್ಟಡ ಕಾರ್ಮಿಕ ಬಡಮಕ್ಕಳಿಗೆ ಸಹಾಯಧನ ಚೆಕ್‌ ವಿತರಿಸಿ, ಮಾತನಾಡಿದ ಅವರು,   ಕೂಲಿ ಕಾರ್ಮಿಕರ ಮಕ್ಕಳು ಇನ್ನು ಹೆಚ್ಚಿನ ಉನ್ನತ ಮಟ್ಟದಲ್ಲಿ ವಿದ್ಯಾಭ್ಯಾಸ …

Read More »

ಉಮೇಶ ಕತ್ತಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ*

*ಗೋಕಾಕ:* ಅರಣ್ಯ ಹಾಗೂ ಆಹಾರ ಸಚಿವರಾಗಿದ್ದ ಉಮೇಶ ಕತ್ತಿ ಅವರ ನಿಧನದ ಹಿನ್ನೆಲೆಯಲ್ಲಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಕತ್ತಿಯವರ ಬೆಲ್ಲದ ಬಾಗೇವಾಡಿ ನಿವಾಸಕ್ಕೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಗುರುವಾರದಂದು ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿರುವ ನಿವಾಸದಲ್ಲಿ ದಿ.ಉಮೇಶ ಕತ್ತಿ ಅವರ ಭಾವಚಿತ್ರಕ್ಕೆ ನಮನ ಸಲ್ಲಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಮೃತ ಉಮೇಶ ಕತ್ತಿ ಸಹೋದರ ರಮೇಶ ಕತ್ತಿ, …

Read More »

ಆಪ್ತ ಸ್ನೇಹಿತನ ಅಗಲಿಕೆಗೆ ಶಾಸಕ ಬಾಲಚಂದ್ರ ಜಾರಕಿಹೊಳಿ ಕಂಬನಿ*

  ಗೋಕಾಕ್- ರಾಜ್ಯದ ಹಿರಿಯ ಶಾಸಕ, ಆಹಾರ ಮತ್ತು ಅರಣ್ಯ ಸಚಿವ ಉಮೇಶ್ ಕತ್ತಿ ಅವರ ಅಕಾಲಿಕ ನಿಧನಕ್ಕೆ ಅರಭಾವಿ ಶಾಸಕ, ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಸಂತಾಪ ಸೂಚಿಸಿದ್ದಾರೆ. ಕತ್ತಿ ಅವರ ನಿಧನದಿಂದ ಮುತ್ಸದ್ದಿ, ಕ್ರಿಯಾಶೀಲ ವ್ಯಕ್ತಿತ್ವದ ಆಪ್ತ ಸ್ನೇಹಿತನೊಬ್ಬನನ್ನು ಕಳೆದುಕೊಂಡಿದ್ದೇನೆ. ನನ್ನ ಮತ್ತು ಕತ್ತಿ ಅವರ ಮಧ್ಯೆ ಸುಮಾರು ೨ ದಶಕದ ಒಡನಾಟವೂ ಎಂದೂ ಮರೆಯದ ಘಟನೆ ಎಂದೂ ಅವರು ತಿಳಿಸಿದ್ದಾರೆ. ಉತ್ತಮ ಹೃದಯವಂತಿಕೆಯ …

Read More »

ಸತತ ಮಳೆ: ಗೋಕಾಕ ಫಾಲ್ಸ್‌ನಲ್ಲಿ ಗುಡ್ಡ ಕುಸಿತ

ಘಟಪ್ರಭಾ (ಬೆಳಗಾವಿ ಜಿಲ್ಲೆ): ಒಂದು ಗಂಟೆ ಸುರಿದ ಮಳೆಯಿಂದಾಗಿ ಗೋಕಾಕ ಫಾಲ್ಸ್‌ನಲ್ಲಿ ಗುಡ್ಡ ಕುಸಿದಿದೆ. ಇದರಿಂದ ವಾಹನ ಸಂಚಾರಕ್ಕೆ ಅಡಚಣೆಯಾಯಿತು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಕಲ್ಲುಗಳನ್ನು ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ.   ಸವದತ್ತಿ ತಾಲ್ಲೂಕಿನ ನವಿಲುತೀರ್ಥ ಹಾಗೂ ಹುಕ್ಕೇರಿ ತಾಲ್ಲೂಕಿನ ಹಿಡಕಲ್ ಜಲಾಶಯಗಳೆರಡೂ ಭರ್ತಿಯಾಗಿವೆ. ನವಿಲುತೀರ್ಥದಿಂದ 3 ಸಾವಿರ ಕ್ಯುಸೆಕ್ ಹಾಗೂ ಹಿಡಕಲ್‌ನಿಂದ 2,341 ಕ್ಯುಸೆಕ್ ನೀರು ನದಿಗೆ ಹರಿಬಿಡಲಾಗುತ್ತಿದೆ.

Read More »

ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ.!

ಗೋಕಾಕ: ಶಿಕ್ಷಣದಿಂದ ದೇಶ ಅಭಿವೃದ್ಧಿಯಾಗಲು ಸಾಧ್ಯವಾಗಿದ್ದು, ಶಿಕ್ಷಣಕ್ಕೆ ಹೆಚ್ಚಿನ ಪ್ರಾತಿನಿಧ್ಯವನ್ನು ನೀಡಿ ಶಿಕ್ಷಕರು ಕಾರ್ಯನಿರ್ವಹಿಸಬೇಕು ಎಂದು ವಿಧಾನ ಪರಿಷತ್ ಸದಸ್ಯ ಲಖನ್ ಜಾರಕಿಹೊಳಿ ಹೇಳಿದರು. ಸೋಮವಾರದಂದು ನಗರದ ಶ್ರೀ ಲಕ್ಷ್ಮೀದೇವಿ ದೇವಸ್ಥಾನ ಸಭಾಂಗಣದಲ್ಲಿ ಜಿಲ್ಲಾ ಪಂಚಾಯಿತಿ ಬೆಳಗಾವಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಚಿಕ್ಕೋಡಿ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಗೋಕಾಕ ಇವುಗಳ ಸಂಯುಕ್ತಾಶ್ರಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ೧೩೫ನೇ ಹುಟ್ಟು ಹಬ್ಬದ ಸವಿನೆನಪಿನಲ್ಲಿ ಹಮ್ಮಿಕೊಂಡ ಶಿಕ್ಷಕರ …

Read More »