Breaking News

ಗೋಕಾಕ

ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನಾ ಸಭೆ

ಗೋಕಾಕ ಮತಕ್ಷೇತ್ರದ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಮಾಜಿ ಸಚಿವ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಇಂದು ಕೊಣ್ಣೂರ ಪುರಸಭೆ ವ್ಯಾಪ್ತಿಯಲ್ಲಿ ಸಂಭಾವ್ಯ ಪ್ರವಾಹ ಕುರಿತು ಸಿದ್ಧತೆ ಹಾಗೂ ಪ್ರಗತಿ ಪರಿಶೀಲನಾ ಸಭೆ ಜರುಗಿತು.  ಗೋಕಾಕ ಮತಕ್ಷೇತ್ರದ ಕೊಣ್ಣೂರ ಪುರಸಭೆ ಕಾರ್ಯಾಲಯದಲ್ಲಿ ಶಾಸಕ ರಮೇಶ ಜಾರಕಿಹೊಳಿ ಅಧ್ಯಕ್ಷತೆಯಲ್ಲಿ ಕೊಣ್ಣೂರು ಪುರಸಭೆಯ ಅಧಿಕಾರಿಗಳೊಂದಿಗೆ ಪ್ರವಾಹ ತಡೆ ಪರಿಶೀಲನಾ ಸಭೆ ನಡೆಯಿತು. ಈ ವೇಳೆ ಪ್ರವಾಹ ನಿಯಂತ್ರಣ ಹಾಗೂ ಅಧಿಕಾರಿಗಳು ಈ ವೇಳೆ ತರೆಗೆದುಕೊಳ್ಳಬೇಕಾದ ಕ್ರಮಗಳನ್ನು …

Read More »

ಪ್ರವಾಸೀ ತಾಣಗಳಿಗೆ ಬಂದಾಗ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು: S.P. ಸಂಜೀವ್ ಪಾಟೀಲ್

ಪ್ರವಾಸೀ ತಾಣಗಳಿಗೆ ಬಂದಾಗ ಸಾರ್ವಜನಿಕರು ತುಂಬಾ ಎಚ್ಚರಿಕೆಯಿಂದ ವರ್ತಿಸಬೇಕು. ತಮ್ಮ ಹಾಗೂ ತಮ್ಮ ಜೊತೆ ಬಂದವರ ಕುರಿತಂತೆ ಕಾಳಜಿ ವಹಿಸಬೇಕೆಂದು ಬೆಳಗಾವಿ ಎಸ್‍ಪಿ ಡಾ. ಸಂಜೀವ್ ಪಾಟೀಲ್ ಹೇಳಿದ್ದಾರೆ. ಹೌದು ಬೆಳಗಾವಿ ಜಿಲ್ಲೆಯಲ್ಲಿ ಮಳೆಯಾಗುತ್ತಿದ್ದರು ಜನಪ್ರಿಯ ಪ್ರವಾಸಿ ತಾಣಗಳಿಗೆ ಪ್ರವಾಸಿಗರು ಭೇಟಿ ನಿಡುತ್ತಿದ್ದಾರೆ. ಇನ್ನು ಅವರ ಸುರಕ್ಷತೆಯನ್ನು ಸ್ವತಃ ಪ್ರವಾಸಿಗರೇ ಮಾಡಿಕೊಳ್ಳಬೇಕು. ಈ ಹಿನ್ನೆಲೆಯಲ್ಲಿ ಇಂದು ಎಸ್‍ಪಿ ಡಾ. ಸಂಜೀವ್ ಪಾಟೀಲ್ ಬೆಳಗಾವಿ ಜಿಲ್ಲೆಯ ಗೋಕಾಕ್ ಫಾಲ್ಸ್‍ಗೆ ಭೇಟಿ ನೀಡಿ …

Read More »

ಮಹಾ ಮಂಡಳಕ್ಕೇK.M.F. ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ನೇತೃತ್ವ ದಲ್ಲಿ ಅವಿರೋಧ ಆಯ್ಕೆ…

ಗೋಕಾಕ: ಹಿಡಕಲ್ ಡ್ಯಾಂ ಘಟಪ್ರಭಾ ಯೋಜನಾ ಮಟ್ಟದ ನೀರು ಬಳಕೆದಾರರ ಸಹಕಾರಿ ಸಂಘಗಳ ಮಹಾಮಂಡಳದ ನೂತನ ಅಧ್ಯಕ್ಷರಾಗಿ ಗೋಕಾಕ ತಾಲೂಕಿನ ದುರದುಂಡಿ ಗ್ರಾಮದ ಅಶೋಕ ಶಿವಪುತ್ರ ಖಂಡ್ರಟ್ಟಿ ಹಾಗೂ ಉಪಾಧ್ಯಕ್ಷರಾಗಿ ಮುಗಳಖೋಡ ಗ್ರಾಮದ ಮಲ್ಲಿಕಾರ್ಜುನ ಪರಮಾನಂದ ಹುಂಡೇಕರ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಗುರುವಾರದಂದು ಹಿಡಕಲ್ ಡ್ಯಾಂನ ಮಹಾಮಂಡಳದ ಪ್ರಧಾನ ಕಛೇರಿಯಲ್ಲಿ ಜರುಗಿದ ಮಹಾಮಂಡಳದ ಅಧ್ಯಕ್ಷ-ಉಪಾಧ್ಯಕ್ಷರ ಚುನಾವಣೆಯಲ್ಲಿ ಎರಡೂ ಸ್ಥಾನಗಳಿಗೆ ತಲಾ ಒಂದೊಂದು ನಾಮಪತ್ರಗಳು ಸಲ್ಲಿಕೆಯಾಗಿದ್ದರಿಂದ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಗಳಿಗೆ …

Read More »

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!

ಸಹಾಯಧನ ಚೇಕ್ ವಿತರಿಸಿದ ಶಾಸಕ ರಮೇಶ ಜಾರಕಿಹೊಳಿ.!     ಗೋಕಾಕ: ಆಕಸ್ಮೀಕ ಸಿಡಿಲು ಬಡಿದು ಮೃತಪಟ್ಟ ಜಾನುವಾರು ಮಾಲಕಿ ನಾಗವ್ವ ಪರಸನ್ನವರ ಅವರಿಗೆ ಶಾಸಕ ರಮೇಶ ಜಾರಕಿಹೊಳಿ ಬುಧವಾರದಂದು ತಮ್ಮ ಗೃಹ ಕಚೇರಿಯಲ್ಲಿ ೩೦ಸಾವಿರ ರೂಗಳ ಚೇಕ್ ವಿತರಣೆ ಮಾಡಿದರು. ಈ ಸಂದರ್ಭದಲ್ಲಿ ತಹಶೀಲ್ದಾರ ಪ್ರಕಾಶ ಹೊಳೆಪ್ಪಗೋಳ, ಮಾಜಿ ಜಿಪಂ ಸದಸ್ಯ ಟಿ ಆರ್ ಕಾಗಲ, ಗ್ರಾಮ ಲೆಕ್ಕಾಧಿಗಳು ಇದ್ದರು.

Read More »

ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ,ಅಪಾಯಕ್ಕೆ ಆಹ್ವಾನ

ಬೆಳಗಾವಿ: ಮತ್ತೊಂದು ಮಳೆಗಾಲ ಬಂದರೂ ಹಳ್ಳಿಗಳ ಸಂಪರ್ಕ ರಸ್ತೆಗಳು ಮಾತ್ರ ಇನ್ನೂ ದುರಸ್ತಿ ಕಂಡಿಲ್ಲ. ಕಳೆದ ಬಾರಿಯ ಅತಿವೃಷ್ಟಿ ಹಾಗೂ ಪ್ರವಾಹ ಪ್ರಭಾವದಿಂದ ಹಳ್ಳಿಗಳಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳು ಎಲ್ಲೆಂದರಲ್ಲಿ ತಗ್ಗು ಬಿದ್ದಿದ್ದವು. ಅವುಗಳಲ್ಲಿ ಕೆಲವನ್ನು ತೇಪೆ ಹಚ್ಚಿ ದುರಸ್ತಿ ಮಾಡಲಾಗಿದೆ. ಮತ್ತೆ ಕೆಲವು ಇನ್ನೂ ಹಾಗೇ ಇವೆ. ಹೀಗಾಗಿ, ಹಳ್ಳಿ ಮತ್ತು ನಗರಗಳ ಮಧ್ಯೆ ಸಂಚಾರ ಕೊಂಡಿಯಾದ ರಸ್ತೆಗಳೇ ಈಗ ಸಂಚಕಾರ ತರುವಂತಾಗಿವೆ. ಅತಿಯಾಗಿ ಮಳೆ ಬಿದ್ದ ಬೆಳಗಾವಿ ತಾಲ್ಲೂಕು, …

Read More »

ಶಾಸಕ ಬಾಲಚಂದ್ರ ಜಾರಕಿಹೊಳಿ ಅವರ ಕಾರ್ಯ ಶ್ಲಾಘನೀಯ : ಅಶೋಕ ಪಾಟೀಲ…

  ಘಟಪ್ರಭಾ : ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ಸಮರ್ಥ ನಾಯಕತ್ವದಲ್ಲಿ ಅರಭಾವಿ ಮತಕ್ಷೇತ್ರ ಸರ್ವಾಂಗೀಣ ಪ್ರಗತಿಯತ್ತ ಮುನ್ನಡೆಯುತ್ತಿದ್ದು, ಅದರಂತೆ ರೈತರ ಜೀವನಾಡಿಯಾಗಿರುವ ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ರೈತರ ಸಹಕಾರದೊಂದಿಗೆ ಅಭಿವೃದ್ಧಿ ಪಥದತ್ತ ಸಾಗುತ್ತಿದೆ ಎಂದು ಘಟಪ್ರಭಾ ಸಹಕಾರಿ ಸಕ್ಕರೆ ಕಾರ್ಖಾನೆ ಅಧ್ಯಕ್ಷ ಅಶೋಕ ಪಾಟೀಲ ಹೇಳಿದರು. ಇಲ್ಲಿಗೆ ಸಮೀಪದ ಅರಭಾವಿ-ಚಳ್ಳಿಕೇರಿ ರಾಹೆ-45 ಯಿಂದ ಪ್ರಭಾಶುಗರವರೆಗಿನ ಲೋಕೋಪಯೋಗಿ ಇಲಾಖೆಯ ಅನುದಾನದಡಿ 2 ಕೋಟಿ ರೂ. ವೆಚ್ಚದ ರಸ್ತೆ …

Read More »

ಗೋಕಾಕ KSRTC ನೌಕರರ ಬೀಳ್ಕೊಡುಗೆ ಸಮಾರಂಭದಲ್ಲಿ ಸಂತೋಷ್ ಜಾರಕಿಹೊಳಿ ಭಾಗಿ

ಗೋಕಾಕ: ಗೋಕಾಕ ನಗರದ ವಾಯುವ್ಯ ರಸ್ತೆ ಸಾರಿಗೆ ಘಟಕದ ಸಿಬ್ಬಂದಿಗಳ ಉದ್ಘಾಟನೆ ಸಂದರ್ಭ ದಲ್ಲಿ ಸಂತೋಷ್ ಜಾರಕಿಹೊಳಿ ಭಾಗವಹಿಸಿದ್ದರು. ಗೋಕಾಕ ಘಟಕದ ಸಿಬ್ಬಂದಿಗಳ ಬೀಳ್ಕೊಡುವ ಸಮಾರಂಭದಲ್ಲಿ ಸಂತೋಷ್ ಜಾರಕಿಹೊಳಿ ಅವರು ಭಾಗಿಯಾಗಿಅವರಿಗೆ ಗೌರವಯುತವಾಗಿ ನಮಸ್ಕರಿಸಿ ಬೀಳ್ಕೊಡುಗೆ ಮಾಡಿಕೊಟ್ಟರು.     ಗೋಕಾಕ ನಗರದ ವಿವಿಧ ಸಭೆ ಸಮಾರಂಭ ಗಳಲ್ಲಿ ಸಂತೋಷ್ ಜಾರಕಿಹೊಳಿ ಅವರು ಇತ್ತೀಚಿನ ದಿನಗಳಲ್ಲಿ ಆಕ್ಟಿವ್ ಆಗಿ ಭಾಗವಹಿಸುತ್ತಿದ್ದಾರೆ, ಬೀಳ್ಕೊಡುಗೆ ಪಡೆದ ಸಿಬ್ಬಂದಿಗಳಿಗೆ ಸಂತೋಷ್ ಜಾರಕಿಹೊಳಿ ಅಭಿನಂದಿಸಿ ನಿಮ್ಮ …

Read More »

ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಮಲೇರಿಯಾ ಮಾಸಾಚರಣೆ &ಆರೋಗ್ಯ ತಪಾಸಣಾ ಶಿಬಿರ

ಗೋಕಾಕ: ಗೋಕಾಕ ಹಿರೆನಂದಿ ಗ್ರಾಮದಲ್ಲಿರುವ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ತಾಲೂಕ ವೈದ್ಯ ಅಧಿಕಾರಿಗಳ ಆಶ್ರಯದಲ್ಲಿ ಸಂತೋಷ್ ಜಾರಕಿಹೊಳಿ ಅವರ ಶ್ರೀ ಸೌಭಾಗ್ಯ ಲಕ್ಷ್ಮಿ ಶುಗರ್ಸ್ ನಲ್ಲಿ ಆರೋಗ್ಯ ತಪಾಸಣಾ ಶಿಬಿರ ನಡೆಸಲಾಯಿತು. ಆರೋಗ್ಯ ತಪಾಸಣಾ ಶಿಬಿರದಲ್ಲಿ ಮಲೇರಿಯಾ ಮಾಸಾಚರಣೆ ಹಾಗೂ ವಿವಿಧ ರೀತಿಯ ತಪಾಸಣೆ ಗಳನ್ನ ಮಾಡಲಾಯಿತು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರ್ಮನ್ ಸಂತೋಷ್ ಜಾರಕಿಹೊಳಿ ಅವರು ಹಾಗೂ ಆರೋಗ್ಯ ಅಧಿಕಾರಿಗಳು ಸಸಿಗೆ ನೀರುಣಿಸುವ ಮೂಲಕ ಕಾರ್ಯ ಕ್ರಮಕ್ಕೆ …

Read More »

ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಸಾವು

ಗದ್ದೆಯಲ್ಲಿ ತುಂಡಾಗಿ ಬಿದ್ದಿದ್ದ ವಿದ್ಯುತ್ ತಂತಿ ತುಳಿದು ಬಾಲಕಿ ಮೃತಪಟ್ಟಿರುವ ಹೃದಯವಿದ್ರಾವಕ ಘಟನೆ ಗೋಕಾಕ ತಾಲೂಕಿನ ಹೂಲಿಕಟ್ಟಿ ಗ್ರಾಮದಲ್ಲಿ ನಡೆದಿದೆ. 8 ವರ್ಷದ ಚೂನವ್ವ ಸರ್ವಿ ಮೃತ ದುರ್ದೈವಿ ಬಾಲಕಿ. ಹೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯದಿಂದ ತುಂಡರಿಸಿ ಬಿದ್ದಿದ್ದ ತಂತಿಯ ಮೇಲೆ ಕಾಲಿಟ್ಟು ಬಾಲಕಿ ಮೃತಪಟ್ಟಿದ್ದಾಳೆ. ನಿನ್ನೆ ಶನಿವಾರ ರಾತ್ರಿ ಈ ಘಟನೆ ಸಂಭವಿಸಿದೆ. ಬಾಲಕಿಯನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಗೋಕಾಕ ಗ್ರಾಮೀಣ ಪೆÇಲೀಸರು ಭೇಟಿ, ನೀಡಿ …

Read More »

ಬೆಳಗಾವಿ ರಸ್ತೆ ಅಪಘಾತ: ಮೃತರ ಕುಟುಂಬಕ್ಕೆ ತಲಾ 7 ಲಕ್ಷ ರೂ. ಪರಿಹಾರ ಘೋಷಣೆ

ಬೆಳಗಾವಿ: ತಾಲೂಕಿನ ಕಲ್ಯಾಳ್ ಬ್ರಿಡ್ಜ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ ಕುಟುಂಬಸ್ಥರಿಗೆ ಸರ್ಕಾರದಿಂದ ತಲಾ 5 ಲಕ್ಷ ರೂ. ಹಾಗೂ ಜಿಲ್ಲಾಡಳಿತದಿಂದ 2 ಲಕ್ಷ ರೂ. ಪರಿಹಾರ ಒದಗಿಸಲಾಗುತ್ತದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಿಸಿದರು. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಅಪಘಾತದಲ್ಲಿ ಏಳು ಮಂದಿ ಮೃತಪಟ್ಟಿದ್ದು ಅನೇಕರಿಗೆ ಗಾಯಗಳಾಗಿರುವ ಬಗ್ಗೆ ಮಾಹಿತಿ ಬಂದಿದೆ. ಮೃತರೆಲ್ಲರೂ ಕೂಲಿ ಕಾರ್ಮಿಕರು. ಸರ್ಕಾರದಿಂದ ಮೃತರ ಕುಟುಂಬಸ್ಥರಿಗೆ ಪರಿಹಾರ ತಲುಪಿಸಲಾಗುವುದು, ಜೊತೆಗೆ …

Read More »