Breaking News

ಗೋಕಾಕ

ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿದೇರ್ಶನ ನೀಡಿದ ಗೋಕಾಕ ಪಿಎಸ್ಐ ಕೆ. ವಾಲಿಕರ.

ಗೋಕಾಕ : ಪ್ರಥಮ ಬಾರಿಗೆ ಸ್ಥಳೀಯ ಶಹರ ಪೊಲೀಸ್ ಠಾಣೆಯ ಪಿಎಸ್ಐ ಕೆ.ವಾಲಿಕರ ಅವರು ಪಥ ಸಂಚಲನಕ್ಕೆ ಕನ್ನಡದಲ್ಲಿ ಕವಾಯತ್ತಿಗೆ ನಿರ್ದೇಶನ ನೀಡಿ ಎಲ್ಲರ ಗಮನ ಸೆಳೆದರು. ಇದೇ ಸಂದರ್ಭದಲ್ಲಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಮಾಧ್ಯಮ ಪ್ರತಿನಿಧಿಗಳು ಪಿಎಸ್ಐ ಕೆ.ವಾಲಿಕರ ಅವರಿಗೆ ಸತ್ಕರಿಸಿ ,ಗೌರವಿಸಿದರು.   ಈ ಸಂದರ್ಭದಲ್ಲಿ ಕರವೇ ಮುಖಂಡ ಬಸವರಾಜ ಖಾನಪ್ಪನವರ , ಸಾದಿಕ ಹಲ್ಯಾಳ ,ಮಹಾನಿಂಗ ಕೆಂಚನ್ನವರ ಜಾಪರ ಶಾಬಾಶಖಾನ, ಬಸವರಾಜ ದೇಶನೂರ, ಜೇಮ್ಸ ವರ್ಗಿಸ, ಉಪಸ್ಥಿತರಿದ್ದರು.

Read More »

ರಮೇಶ್ ಜಾರಕಿಹೊಳಿಯವರು ಒಬ್ಬ ಪವರ್ ಫುಲ್ ನಾಯಕರು ಎಷ್ಟು ಶಾಸಕರನ್ನು ಬೇಕಾದರೂ ಬಿಜೆಪಿಗೆ ಕರೆತರಬಹುದು- ಗೋವಿಂದ್ ಕಾರಜೋಳ್

ರಮೇಶ್ ಜಾರಕಿಹೊಳಿ ಒಬ್ಬ ಸಮರ್ಥ ನಾಯಕರು. ಅವರು ಬಿಜೆಪಿಗೆ ಎಷ್ಟು ಜನರನ್ನು ಬೇಕಾದರೂ ಕರೆ ತರಬಹುದು. ಅವರಲ್ಲಿ ಆ ಶಕ್ತಿ ಇದೆ. ಅವರು ಎಷ್ಟು ಜನ ಶಾಸಕರನ್ನು ಬೇಕಾದರೂ ಕರೆತರಬಹುದು ಎಂದು ಸಚಿವ ಗೋವಿಂದ ಕಾರಜೋಳ ಹೇಳಿದ್ದಾರೆ.ಬೆಳಗಾವಿಯಲ್ಲಿ ಗಣರಾಜ್ಯೋತ್ಸವ ಸಂಬರ್ಭದಲ್ಲಿ ಧ್ವಜಾರೋಹಣದ ನೆರವೇರಿಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳರವರು, ರಮೇಶ್ ಜಾರಕಿಹೊಳಿ ಒಬ್ಬ ಹಿರಿಯ ರಾಜಕಾರಣಿಗಳು. ಮಾಜಿ ಮಂತ್ರಿ ಹಾಗೂ ಅನುಭವಿ ರಾಜಕಾರಣಿ. ಅವರ …

Read More »

ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.

ಮೂಡಲಗಿ : ಮೂಡಲಗಿ ತಾಲೂಕಿನ ಸಾರ್ವಜನಿಕರ ಬಹು ನಿರೀಕ್ಷೆಯ ಉಪ ನೋಂದಣಾಧಿಕಾರಿಗಳ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯಿಂದ ಅನುಮೋದನೆ ದೊರೆತಿದೆ ಎಂದು ಕೆಎಂಎಫ್ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.   ಮೂಡಲಗಿಯಲ್ಲಿ ಹೊಸದಾಗಿ ಉಪನೋಂದಣಾಧಿಕಾರಿಗಳ ಕಛೇರಿಯನ್ನು ಫೆಬ್ರುವರಿ ತಿಂಗಳೊಳಗೆ ಆರಂಭಿಸಲಾಗುವುದು ಎಂದು ಅವರು ಹೇಳಿದರು.   ಸತತವಾಗಿ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಕಛೇರಿ ಆರಂಭಕ್ಕೆ ಹಣಕಾಸು ಇಲಾಖೆಯು ನಮ್ಮ ಪ್ರಸ್ತಾವಣೆಯನ್ನು ವಿಳಂಬ ಮಾಡಿತ್ತು. ಆದರೂ ಹಲವು …

Read More »

ಕಾರಜೋಳಗೆ ಜಿಲ್ಲಾ ಉಸ್ತುವಾರಿ : ಶಾಸಕ ಬಾಲಚಂದ್ರ ಜಾರಕಿಹೊಳಿ ಹರ್ಷ

  ಗೋಕಾಕ : ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ ಅವರನ್ನು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಮುಂದುವರೆಸಿರುವುದಕ್ಕೆ ಕೆಎಂಎಫ್ ಅಧ್ಯಕ್ಷ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಹರ್ಷ ವ್ಯಕ್ತಪಡಿಸಿದ್ದಾರೆ. ಗೋವಿಂದ ಕಾರಜೋಳ ಅವರು ಉಸ್ತುವಾರಿ ಸಚಿವರಾಗಿ ಜಿಲ್ಲೆಯಲ್ಲಿ ಉತ್ತಮವಾಗಿ ಕೆಲಸ ನಿರ್ವಹಿಸುತ್ತಿದ್ದಾರೆ. ಮುಂಬರುವ ತಾಪಂ, ಜಿಪಂ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಯ್ಕೆಯಾಗಲು ಎಲ್ಲರೂ ಶ್ರಮಿಸಬೇಕು. ಜಿಲ್ಲೆಯನ್ನು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಕಾರ್ಯಗಳು ನೆರವೇರಲಿಕ್ಕೆ ಕಾರಜೋಳ …

Read More »

ಸ್ವಚ್ಛತಾ ಕಾರ್ಯ ವೀಕ್ಷಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

  ಗೋಕಾಕ: ಕಳೆದ ಆರು ತಿಂಗಳಿಂದ ಪ್ರತಿ ಭಾನುವಾರ ನಗರದಲ್ಲಿ ಸತೀಶ್ ಜಾರಕಿಹೊಳಿ ಫೌಂಡೇಶನ್ ಮೂಲಕ ಸ್ವಚ್ಛತಾ ಕಾರ್ಯ ಹಮ್ಮಿಕೊಳ್ಳಲಾಗುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗೋಕಾಕ ನಗರದ ಬಸ್‌ ನಿಲ್ದಾಣ ಸೇರಿದಂತೆ ಇತರೆ ಸ್ಥಳದಲ್ಲಿಯೂ ಸತೀಶ್‌ ಜಾರಕಿಹೊಳಿ ಫೌಂಡೇಶನ್ ಸದಸ್ಯರು ಸ್ವಚ್ಛತಾ ಕಾರ್ಯ ಕೈಗೊಂಡಿದ್ದಾರೆ. ಅದನ್ನು ವೀಕ್ಷಿಸಲಾಯಿತು ಎಂದು ತಿಳಿಸಿದರು. ಇದೇ ಸಂದರ್ಭದಲ್ಲಿ ನಗರದ ತರಕಾರಿ ಮಾರುಕಟ್ಟೆಯಲ್ಲಿ ವ್ಯಾಪಾರಸ್ಥರ ಸಮಸ್ಯೆ …

Read More »

ಗೋಕಾಕ:ಪಿಎಸ್ಐ ಹುದ್ದೆಗೆ ಆಯ್ಕೆಯಾದ ವಿದ್ಯಾರ್ಥಿಗಳಿಗೆ ಶಾಸಕ ರಮೇಶ ಜಾರಕಿಹೊಳಿ ಅಭಿನಂದನೆ

ಪಿಎಸ್ಐ ಹುದ್ದೆಗೆ ಆಯ್ಕೆಯಾಗಿರುವ ಗೋಕಾಕ ಮತಕ್ಷೇತ್ರದ ಘಟಪ್ರಭಾ , ಶಿವಾಪೂರ ಹಾಗೂ ಮಮದಾಪೂರ ಗ್ರಾಮದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಶಾಸಕ ರಮೇಶ ಜಾರಕಿಹೊಳಿ ಅಭಿನಂದಿಸಿದ್ದಾರೆ.   ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು ಶೈಕ್ಷಣಿಕವಾಗಿ ಅಭಿವೃದ್ಧಿ ಹೊಂದಲು ಗೋಕಾಕ ಮತಕ್ಷೇತ್ರದಲ್ಲಿ ಶೈಕ್ಷಣಿಕವಾಗಿ ಹಲವಾರು ರಚನಾತ್ಮಕ ಕಾರ್ಯಕ್ರಗಳನ್ನು ಆಯೋಜಿಸಲಾಗುತ್ತಿದ್ದು, ಇದರ ಸದುಪಯೋಗ ಪಡೆದು ಘಟಪ್ರಭಾದ ಕುಮಾರಿ ಚೈತ್ರಾ ಹನಮಂತ ಗಿಡ್ಡೂರ, ಶಿವಾಪೂರದ ಕಿರಣ ಬಸಗೌಡ ಪಾಟೀಲ ಹಾಗೂ ಮಮದಾಪೂರ ಗ್ರಾಮದ ಕುಮಾರಿ …

Read More »

ಪಾದಯಾತ್ರೆ ಹತ್ತಿಕ್ಕಲು ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್‌ ಜಾರಕಿಹೊಳಿ

    ಗೋಕಾಕ: ಕಾಂಗ್ರೆಸ್ ಹಮ್ಮಿಕೊಂಡಿದ್ದ ಮೇಕೆದಾಟು ಪಾದಯಾತ್ರೆ ಮೊಟಕುಗೊಳಿಸಿಲು ರಾಜ್ಯ ಸರ್ಕಾರ ವೀಕೆಂಡ್ ಕರ್ಫ್ಯೂ ಜಾರಿ ಮಾಡಿತ್ತು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಆರೋಪಿಸಿದರು.   ನಗರದ ಹಿಲ್ಲ್‌ ಗಾರ್ಡನ್‌ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಕೆದಾಟು ಪಾದಯಾತ್ರೆ ಯಶಸ್ವಿ ಆಗಬಾರದು, ಪಾದಯಾತ್ರೆ ಬೆಂಗಳೂರು ತಲುಪಬಾರದು ಎಂಬ ಉದ್ದೇಶ ಸರ್ಕಾರದಾಗಿತ್ತು. ಈಗ ವೀಕೆಂಡ್ ಕರ್ಫ್ಯೂ ವಾಪಸ್ ಪಡೆಯುವ ಮೂಲಕ ಅದನ್ನು ಬಿಜೆಪಿ ಸರ್ಕಾರವೇ ಸಾಬೀತು ಮಾಡಿದೆ …

Read More »

ಯುವಕರ ಪಾಲಿನ ಸ್ಪೂರ್ತಿ ಚಿಲುಮೆ ಸುಭಾಷ್ ಚಂದ್ರ ಬೋಸ್: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ

    ಗೋಕಾಕ: ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಅವರು, ಇಲ್ಲಿನ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ನೇತಾಜಿ ಸುಭಾಷ್ ಚಂದ್ರ ಬೋಸ್‌ ಅವರ 125 ನೇ ಜಯಂತಿಯನ್ನು ಆಚರಿಸಿದರು, ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ, ಗೌರವ ಅರ್ಪಿಸಿದರು. ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ನೇತಾಜಿ ಅವರ ಭಾವಚಿತ್ರಕ್ಕೆ ಪುಷ್ಪ ಸಲ್ಲಿಸಿದರು.   ಈ ವೇಳೆ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಮಾತನಾಡಿ, ಸ್ವಾತಂತ್ರ್ಯ ಸೇನಾನಿ ನೇತಾಜಿ …

Read More »

ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ

ಘಟಪ್ರಭ ಸೇವಾದಳದಲ್ಲಿ ತರಬೇತಿ ಪಡೆದು ಸೇನೆ, ಪೊಲೀಸ್ ಇಲಾಖೆಗೆ ಆಯ್ಕೆಯಾದರೆ ನಮ್ಮ ಶ್ರಮ ಸಾರ್ಥಕ: ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಶಿಕ್ಷಣ, ಆರೋಗ್ಯ ಮತ್ತು ಸಾಮಾಜಿಕವಾಗಿ ಅಭಿವೃದ್ಧಿಯಾಗಲು ಕರೆ ಬೆಳಗಾವಿ: ಗ್ರಾಮೀಣ, ಬಡ ಮತ್ತು ಶೋಷಿತ ಸಮುದಾಯದ ಆಕಾಂಕ್ಷಿಗಳಿಗೆ 100 ಜನ ಸಾಮರ್ಥ್ಯದ ಪೂರ್ಣ ಪ್ರಮಾಣದ ಸೈನಿಕ ಹಾಗೂ ಪೊಲೀಸ್ ತರಬೇತಿ ಕೇಂದ್ರವನ್ನು ಯಮಕನಮರಡಿಯಲ್ಲಿ ನಿರ್ಮಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು.   ಘಟಪ್ರಭದ ಡಾ.ಎನ್.ಎಸ್.ಹರ್ಡೀಕರ್ …

Read More »

ಗೋಕಾಕ, ಮೂಡಲಗಿ ತಾಲೂಕ ಪಂಚಾಯತ್ ಜಮಾಬಂದಿ ಸಭೆ

ಗೋಕಾಕ: ಇಲ್ಲಿನ ತಾಪಂ ಕಾರ್ಯಾಲಯದಲ್ಲಿ ಬುಧವಾರ ಗೋಕಾಕ ಹಾಗೂ ಮೂಡಲಗಿ ತಾಲೂಕು ಪಂಚಾಯತಿಗಳ 2020-21ನೇ ಸಾಲಿನ ಜಮಾಬಂದಿ ಸಭೆ ಜರುಗಿತು. ಜಿಲ್ಲಾ ಪಂಚಾಯತ್ ಉಪ ನಿರ್ದೇಶಕ ಭೀಮಪ್ಪ ಲಾಳಿ ಅವರು ಸಭೆಯಲ್ಲಿ ತಾಲೂಕು ನೋಡಲ್ ಅಧಿಕಾರಿಗಳಾಗಿ ಭಾಗವಹಿಸಿ ಮಾತನಾಡಿ, ಮೂಲಭೂತ ಸೌಕರ್ಯಗಳ ಅಭಿವೃದ್ಧಿ ಕೈಗೊಳ್ಳಲು ಸೂಚಿಸಿದರು. 2020-21ನೇ ಸಾಲಿನ ಖರ್ಚುವೆಚ್ಚಗಳ ಬಗ್ಗೆ ಪರಿಶೀಲಿಸಿದರು. ಗೋಕಾಕ ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಮುರಳೀಧರ ದೇಶಪಾಂಡೆ, ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ವ್ಯಾಪ್ತಿಯ ಅನುಷ್ಠಾನಾಧಿಕಾರಿಗಳು, …

Read More »