ಗೋಕಾಕ : ಖ್ಯಾತ ಪತ್ರಕರ್ತ, ಸಾಹಿತಿ, ಲೇಖಕ, ಅಕ್ಷರ ಮಾಂತ್ರಿಕ ರವಿ ಬೆಳೆಗೆರೆ ಅವರ ನಿಧನಕ್ಕೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಮತ್ತು ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತೀವ್ರ ಶೋಕ ವ್ಯಕ್ತಪಡಿಸಿದ್ದಾರೆ. ಕನ್ನಡ ಪತ್ರಿಕೋದ್ಯಮದಲ್ಲಿ ತಮ್ಮದೇಯಾದ ಅಸಂಖ್ಯಾತ ಅಭಿಮಾನಿಗಳನ್ನು ಹೊಂದಿದ್ದ ಬೆಳೆಗೆರೆ ಅವರ ನಿಧನದಿಂದ ನಾಡಿಗೆ ಅಪಾರ ನಷ್ಟವಾಗಿದೆ. ನಾಡಿನ ಹೆಸರಾಂತ ಪತ್ರಿಕೆಗಳಲ್ಲಿ ದುಡಿದು ನಂತರ ವಾರ ಪತ್ರಿಕೆಯ ಮೂಲಕ ದಿಟ್ಟ ಪತ್ರಕರ್ತರಾಗಿ ವಿಶಿಷ್ಟ ಸೇವೆ ಸಲ್ಲಿಸುತ್ತಿದ್ದ ಅವರ …
Read More »ನಾಡಿನ ಜನತೆಗೆ ದೀಪಾವಳಿ ಹಬ್ಬದ ಶುಭಾಶಯ ಕೋರಿದ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ
ಗೋಕಾಕ : ನಾಡಿನ ಜನತೆಗೆ ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷ ಹಾಗೂ ಬಾಲಚಂದ್ರ ಜಾರಕಿಹೊಳಿ ಅವರು ಬೆಳಕಿನ ಹಬ್ಬ ದೀಪಾವಳಿಯ ಶುಭಾಶಯ ಕೋರಿದ್ದಾರೆ. ಎಲ್ಲರ ಬದುಕಿನಲ್ಲಿ ದೀಪಾವಳಿ ಹಬ್ಬ ನಿರಾಸೆಯ ಕಾರ್ಮೋಡ ತೊಡೆದು ಚೈತನ್ಯ ತುಂಬಲಿ. ಎಲ್ಲರ ಜೀವನದಲ್ಲಿ ದೀಪಗಳ ಬೆಳಕು ಸದಾ ಬೆಳಗಲಿ. ಮಹಾಲಕ್ಷ್ಮೀ ದೇವಿ ಸರ್ವರಿಗೂ ಸುಖ, ಶಾಂತಿ, ನೆಮ್ಮದಿ, ಸಮೃದ್ಧಿ, ಸಂಪತ್ತು, ಶಕ್ತಿ, ಆಯುರಾರೋಗ್ಯ ಕರುಣಿಸಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದ್ದಾರೆ. ಕೋವಿಡ್-19 ಹಿನ್ನೆಲೆಯಲ್ಲಿ ದೀಪಾವಳಿ …
Read More »ಬರುವ ಲೋಕಸಭಾ ಉಪ ಚುನಾವಣೆಯಲ್ಲಿ ಗೋಕಾಕ ಮತ್ತು ಅರಭಾವಿ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆ:ಬಾಲಚಂದ್ರ ಜಾರಕಿಹೊಳಿ
ಗೋಕಾಕ : ಬರುವ ಲೋಕಸಭಾ ಉಪ ಚುನಾವಣೆಯಲ್ಲಿ ಗೋಕಾಕ ಮತ್ತು ಅರಭಾವಿ ಮತಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಗೆ ಅತ್ಯಧಿಕ ಮತಗಳ ಮುನ್ನಡೆಯನ್ನು ದೊರಕಿಸಿಕೊಡುವುದಾಗಿ ಶಾಸಕ ಮತ್ತು ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು ಸೋಮವಾರ ನಗರದ ಹೊರವಲಯದಲ್ಲಿರುವ ಗೋಕಾಕ ಸಪ್ಲಾಯರ‍್ಸ್ ಸಭಾ ಭವನದಲ್ಲಿ ಅರಭಾವಿ ಮಂಡಲದಿಂದ ನಡೆಯುತ್ತಿರುವ ಪ್ರಶಿಕ್ಷಣ ವರ್ಗ ಕಾರ್ಯಾಗಾರದ ಸಮಾರೋಪ ಸಮಾರಂಭದಲ್ಲಿ ಮಾತನಾಡಿದ ಅವರು, ಕಳೆದ ಚುನಾವಣೆಯಲ್ಲಿ ನೀಡಿರುವ ಮುನ್ನಡೆಗಿಂತ …
Read More »ಬೆಂಗಳೂರಿನಲ್ಲಿ ತಿಂಗಳು ಕಾಲ ಫಲಾನುಭವಿಗಳ ವಸತಿ ಸೌಕರ್ಯಕ್ಕಾಗಿ ಸತತವಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ವಸತಿ ಸಚಿವ ವಿ. ಸೋಮಣ್ಣ ಅವರನ್ನು ಭೇಟಿ ಮಾಡಿ ಮನವಿ ಮಾಡಿಕೊಂಡಿದ್: ಬಾಲಚಂದ್ರ ಜಾರಕಿಹೊಳಿದ
ಗೋಕಾಕ : 2019ರ ಅಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆ ಹಾಗೂ ಪ್ರವಾಹದಿಂದಾಗಿ ಅಪಾರ ಪ್ರಮಾಣದಲ್ಲಿ ಮನೆಗಳು ಸಂಪೂರ್ಣ ಕುಸಿತಗೊಂಡಿದ್ದು, ಅಂತಹ ಮನೆಗಳಿಗೆ ಪರಿಹಾರ ದೊರಕಿಸಿಕೊಡಲು ಶಾಸಕರು ಪ್ರಯತ್ನಿಸುತ್ತಿದ್ದಾರೆ. ಹೈಡ್/ಡೆಲಿಟ್ ಆದ ಫಲಾನುಭವಿಗಳ ಮನೆಗಳ ನಿರ್ಮಾಣಕ್ಕೆ ಪರಿಹಾರವನ್ನು ದೊರಕಿಸಿಕೊಡಲು ಬಾಲಚಂದ್ರ ಜಾರಕಿಹೊಳಿ ಅವರು ಈಗಾಗಲೇ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದಾರೆಂದು ಜಿಪಂ ಸದಸ್ಯ ಗೋವಿಂದ ಕೊಪ್ಪದ ತಿಳಿಸಿದರು. ಈ ಬಗ್ಗೆ ರವಿವಾರ ನಗರದಲ್ಲಿ ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ಶಾಸಕ ಬಾಲಚಂದ್ರ ಜಾರಕಿಹೊಳಿ …
Read More »ಗೋಕಾಕ ನಗರ ಠಾಣೆ ಗೆ ನೂತನ P.S.I. ಆಗಮನ ಮಾಧ್ಯಮ ಮಿತ್ರ ಹಾಗೂ C.P.I.ಅವರಿಂದ ಸನ್ಮಾನ
ಗೋಕಾಕ ನಗರ ಠಾಣೆಗೆ ನೂತನವಾಗಿ ಆಗಮಿಸಿದP.S.I. K.B. ವಾಲಿಕರ ಅವರನ್ನ ನಗರ ಠಾಣೆಯ C.P.I. ಗೋಪಾಲ ರಾಠೋಡ ಅವರು ಇಂದು ಹೂ ಗುಚ್ಛ ನೀಡಿ ಸ್ವಾಗತ ಕೋರಿದರು. ಅದೇರೀತಿ ಮಾಧ್ಯಮ ಮಿತ್ರರು ಕೂಡ ನೂತನವಾಗಿ ಆಗಮಿಸಿದ ಕೆ. ಬಿ . ವಾಲಿಕರ ಅವರಿಗೆ ಮಾಲಾರ್ಪಣೆ ಮಾಡುವ ಮೂಲಕ ಸನ್ಮಾನಿಸಿ ಅಭಿನಂದಿಸಿದರು. ಗೋಕಾಕ ನಗರದಲ್ಲಿ ಕಾನೂನು ವ್ಯವಸ್ಥೆ ಕಾಪಾಡುವಲ್ಲಿ ಇವರು ಯಶಸ್ವಿ ಯಾಗಲಿ ಎಂದು ಇವರ …
Read More »ಬಿಜೆಪಿ ಪ್ರಶಿಕ್ಷಣ ವರ್ಗ ಉದ್ಘಾಟಿಸಿದ ಸಚಿವ ಜಾರಕಿಹೊಳಿ
ಗೋಕಾಕ್ ಗ್ರಾಮೀಣ ಮಂಡಲ ಬಿಜೆಪಿ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಜಲಸಂಪನ್ಮೂಲ ಸಚಿವರಾದ ಶ್ರೀ ರಮೇಶ್ ಜಾರಕಿಹೊಳಿ ಅವರು ಇಂದು ಉದ್ಘಾಟಿಸಿದರು. ಗೋಕಾಕ್ ನಗರದ ಸಮುದಾಯ ಭವನದಲ್ಲಿ ಭಾರತೀಯ ಜನತಾ ಪಾರ್ಟಿ ಗೋಕಾಕ್ ಗ್ರಾಮೀಣ ಮಂಡಲ ವತಿಯಿಂದ ಎರಡು ದಿನಗಳ ಕಾರ್ಯಕರ್ತರ ಪ್ರಶಿಕ್ಷಣ ವರ್ಗವನ್ನು ಹಮ್ಮಿಕೊಳ್ಳಲಾಗಿದೆ ಈ ಕಾರ್ಯಕ್ರಮದಲ್ಲಿ ರಾಜ್ಯಸಭಾ ಸದಸ್ಯರಾದ ಈರಣ್ಣ ಕಡಾಡಿ ಮತ್ತಿತರ ಬಿಜೆಪಿ ನಾಯಕರು ಉಪಸ್ಥಿತರಿದ್ದರು.
Read More »ಡಿಸಿಸಿ ಬ್ಯಾಂಕ್ ಚುನಾವಣೆ ಎಂಇಎಸ್ ಮುಖಂಡರಿಗೆ ಬಿಜೆಪಿ ಬೆಂಬಲ 10 ಬಾರಿ ಯೋಚನೆ ಮಾಡಲಿ: ಸತೀಶ ಜಾರಕಿಹೊಳಿ
ಗೋಕಾಕ: ಡಿಸಿಸಿ ಬ್ಯಾಂಕ್ ಚುನಾವಣೆ ಎಂಇಎಸ್ ಮುಖಂಡರಿಗೆ ಬಿಜೆಪಿ ಬೆಂಬಲ ನೀಡುತ್ತಿರುವ ವಿಚಾರವಾಗಿ ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ ಜಾರಕಿಹೊಳಿ ಪ್ರತಿಕ್ರಿಯಿಸಿದ್ದು, ಸತತವಾಗಿ ಕರ್ನಾಟಕದ ವಿರುದ್ದ ಹೋರಾಟ ಮಾಡುವವರಿಗೆ ಬೆಂಬಲ ನೀಡುವ ಮುನ್ನ 10 ಬಾರಿ ಯೋಚನೆ ಮಾಡಲಿ ಎಂದು ಹೇಳಿದ್ದಾರೆ. ನಗರದ ತಮ್ಮ ಹಿಲ್ ಗಾರ್ಡನ್ ನಿವಾಸದಲ್ಲಿ ಮಾತನಾಡಿದ ಅವರು, ಕರ್ನಾಟಕ ರಾಜ್ಯೋತ್ಸವ ದಿನದಂದು ಕರಾಳ ದಿನಾಚರಣೆಯಲ್ಲಿ ಭಾಗಿಯಾಗುವ ವಿರೋಧಿಗಳಿಗೆ ಒಂದು ರಾಜಕೀಯ ಪಕ್ಷ ಆಹ್ವಾನ ನೀಡಲು …
Read More »ಸುಣಧೋಳಿ ಜಡಿಸಿದ್ದೇಶ್ವರ ಮಠದ ಬಿಕ್ಕಟ್ಟನ್ನು ಬಗೆ ಹರಿಸಿದ ಶೂನ್ಯ ಸಂಪಾದನ ಮಠ ಶ್ರೀಗಳು ಮತ್ತು ಅರಭಾಂವಿ ಶಾಸಕ ಬಾಲಚಂದ್ರ ಜಾರಕಿಹೊಳಿ.
. ಗೋಕಾಕ: ಕಳೆದ ಆರೇಳು ತಿಂಗಳಿನಿಂದ ಮೂಡಲಗಿ ತಾಲೂಕಿನ ಸುಣಧೋಳಿ ಗ್ರಾಮದ ಜಡಿಸಿದ್ದೇಶ್ವರ ಮಠದಲ್ಲಿ ಎರಡು ಗುಂಪುಗಳ ಮಧ್ಯ ಭಿನ್ನಾಭಿಪ್ರಾಯಗಳು ಮೂಡಿದ್ದರಿಂದ ಅಲ್ಲಿನ ಪೀಠಾಧಿಕಾರಿಗಳಿಗೆ ಸೇವೆಯನ್ನು ನಿರ್ವಹಿಸಲು ತೊಂದರೆಯಾಗುತ್ತಿರುವದನ್ನು ಮನಗಂಡು ಗೋಕಾಕ ಶೂನ್ಯ ಸಂಪಾದನಾಮಠದ ಸ್ವಾಮಿಜೀ ಹಾಗೂ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರುಗಳು ಮಧ್ಯಸ್ಥಿಕೆ ವಹಿಸಿ ಪ್ರಕರಣವನ್ನು ಸುಖಾಂತ್ಯಗೊಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಮಂಗಳವಾರ ರಾತ್ರಿ ನಗರದ ಶೂನ್ಯ ಸಂಪಾದನಮಠದಲ್ಲಿ ಮುರುಘರಾಜೇಂದ್ರ ಮಹಾಸ್ವಾಮಿಗಳ ಅಧ್ಯಕ್ಷತೆಯಲ್ಲಿ ಜರುಗಿದ ಭಕ್ತರ ಸಭೆಯಲ್ಲಿ ಮಠದ ಆಸ್ತಿ ವ್ಯವಹಾರಕ್ಕೆ …
Read More »ನೆಲ,ಜಲ,ಭಾಷೆಗೆ ವಿರೋಧ ಮಾಡಿದ್ದನ್ನು ನೋಡಬೇಕಿತ್ತು,ಹತ್ತು ಬಾರಿ ಯೋಚಿಸಬೇಕಿತ್ತು…
ಬೆಳಗಾವಿ- ಎಂಈಎಸ್ ಮಾಜಿ ಶಾಸಕ ಅರವಿಂದ್ ಪಾಟೀಲ್ ಅವರನ್ನು ಬಿಜೆಪಿಗೆ ಕರ್ಕೊಂಡ ಬರ್ತೀವಿ ಎಂದು ಸಚಿವ ರಮೇಶ್ ಜಾರಕಿಹೊಳಿ ಅವರ ಹೇಳಿಕೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಘಟಪ್ರಭಾದಲ್ಲಿರುವ ಸೇವಾದಳದ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದ ಅವರು,ಕರಾಳ ದಿನಾಚರಣೆಯಲ್ಲಿ ಪಾಲ್ಗೊಂಡು,ನಾಡಿನ ನೆಲ,ಜಲ,ಭಾಷೆಗೆ ವಿರೋಧ ಮಾಡಿದ್ದನ್ನು ಮಂತ್ರಿಗಳು ನೋಡಬೇಕಾಗಿತ್ತು,ರಾಷ್ಟ್ರೀಯ ಪಕ್ಷವೊಂದು ನಾಡಿನ ವಿರುದ್ಧ ಕೆಲಸ ಮಾಡಿದವರಿಗೆ,ಪಕ್ಷಕ್ಕೆ ಅಹ್ವಾನ ನೀಡುತ್ತಿದೆ.ಅದು ಅವರ ಪಕ್ಷದ ಸಿದ್ಧಾಂತ ಈಬಗ್ಗೆ ನಾವು ಏನೂ …
Read More »ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ
ಮೂಡಲಗಿ: ತಾಲೂಕಿನ ಕಲ್ಲೋಳಿ ಪಟ್ಟಣದ ನೀಲಕಂಠ ಬಸವರಾಜ ಕಪ್ಪಲಗುದ್ದಿ ಇವರು ದಿಬಿಡಿಸಿಸಿ ಬ್ಯಾಂಕಿಗೆ ಎರಡನೇಯ ಬಾರಿಗೆ ನಿರ್ದೇಶಕರಾಗಿ ಅವರೋಧವಾಗಿ ಆಯ್ಕೆಯಾಗಿ ಕಲ್ಲೋಳಿಗೆ ಆಗಮಿಸಿದ ಸಂದರ್ಭದಲ್ಲಿ ಪಟ್ಟಣದ ನಾಗರಿಕರು ಹಾಗೂ ರಾಜಕೀಯ ದುರೀಣರು ಹೂ ಮಾಲೆ ಹಾಕಿ ಬರಮಾಡಿಕೊಂಡರು. ಅವಿರೋಧವಾಗಿ ಬಿಡಿಸಿಸಿ ಬ್ಯಾಂಕಿಗೆ ನಿರ್ದೇಶಕರಾಗಿ ಆಯ್ಕೆಗೊಂಡ ನೀಲಕಂಠ ಕಪ್ಪಲಗುದ್ದಿ ಪಟ್ಟಣದ ಜಾಗೃತ ದೇವರಾದ ಹನುಮಾನ ದೇವಸ್ಥಾನಕ್ಕೆ ತೇರಳಿ ಹನುಮಾನ ದರ್ಶನ ಪಡೆದುಕೊಂಡರು. ಈ ಸಂಧರ್ಭದಲ್ಲಿ ಈರಪ್ಪ ಹೆಬ್ಬಾಳ, ಸುಭಾಸ ಕುರಬೇಟ, …
Read More »
Laxmi News 24×7