Breaking News

ಗೋಕಾಕ

ಕರದಂಟು ನಾಡಿನ  ಪ್ರಸಿದ್ದ ಗೋಕಾಕ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ.

ಗೋಕಾಕ:  ಪಶ್ಚಿಮಘಟ್ಟ, ಬೆಳಗಾವಿ ಜಿಲ್ಲೆಯಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನಲೆ ಕರದಂಟು ನಾಡಿನ  ಪ್ರಸಿದ್ದ ಗೋಕಾಕ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಭಾರತ ನಯಾನಗರ ಜಲಪಾತ ಎಂದೇ ಖ್ಯಾತಿ ಪಡೆದಿರುವ ಗೋಕಾಕ ಫಾಲ್ಸ್,  ಹಿಡಕಲ್ ಜಲಾಶಯದಿಂದ ಘಟಪ್ರಭಾ ನದಿಗೆ 40 ಸಾವಿರ ಸಾವಿರ ಕ್ಯೂಸೆಕ್ಸ್ ನೀರು ಹರಿ ಬಿಡಲಾಗಿದೆ. ಹೀಗಾಗಿ ಫಾಲ್ಸ್  ನೀರಿನ ಮಟ್ಟ ಹೆಚ್ಚಿದ್ದು,  ಬಂಡೆಗಳ ಮೇಲಿಂದ ನೀರು ಧುಮುಕುವ ಮನೋಹರ ದೃಶ್ಯ  ನೋಡುಗರ ಕಣ್ಮನ ಸೆಳೆಯುತ್ತಿದೆ. …

Read More »

ಸತೀಶ ಶುಗರ್ಸ್ ಕಾರ್ಖಾನೆಯಲ್ಲಿ 74ನೇ ಸ್ವಾತಂತ್ರ್ಯ ದಿನಾಚರಣೆ

ಗೋಕಾಕ: ಭಾರತದ ಇತಿಹಾಸದಲ್ಲಿ ಮೈಲುಗಲ್ಲನ್ನು ಸೃಷ್ಟಿಸಿದ ದಿನ ಮತು ಭಾರತ ದೇಶದ ಎಲ್ಲ ಪ್ರಜೆಗಳು ಸಂಭ್ರಮ ಪಡುವ ದಿನ ಅದುವೇ ನಮ್ಮ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟ ಸುದಿನ ಅಗಸ್ಟ 15. ದಿನಾಂಕ 15.08.2020 ರಂದು ಬೆಳಿಗ್ಗೆ 7.45ಕ್ಕೆ ಸತೀಶ ಶುಗರ್ಸ ಕಾರ್ಖಾನೆಯಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಕಾರ್ಖಾನೆಗೆ ಅತಿ ಹೆಚ್ಚು ಕಬ್ಬು ಪೂರೈಸಿದ  ರೈತರುಗಳಾದ ಯಲ್ಲಪ್ಪಾ ರಂಗಪ್ಪಾ ಮಳಲಿ ಸಾ.ಮಲ್ಲಾಪೂರ ,ಈರಪ್ಪಾ ಸಿದ್ದಪ್ಪಾ ಕಿತ್ತೂರ ಇವರಿಂದ 74 ನೇಯ ಸ್ವಾತಂತ್ರ್ಯ …

Read More »

ಮುಂದುವರೆದ ಕೊರೊ‌ನಾ ಕಾಟ: ಮತ್ತೆ 61 ಜನರಿಗೆ ಸೋಂಕು

ಗೋಕಾಕ: ಮೂಡಲಗಿ ಮತ್ತು ಗೋಕಾಕ ತಾಲೂಕಿನಲ್ಲಿ ರವಿವಾರದಂದು 61 ಜನರಿಗೆ ಕೊರೋನಾ ಸೋಂಕು ದೃಡಪಟ್ಟಿದೆ ಎಂದು ತಾಲೂಕಾ ಆರೋಗ್ಯಾಧಿಕಾರಿ ಡಾ.ಜಗದೀಶ ಜಿಂಗಿ ಮಾಹಿತಿ ನೀಡಿದ್ದಾರೆ. ಗೋಕಾಕ ನಗರದಲ್ಲಿ 43, ಅಂಕಲಗಿ ಗ್ರಾಮದಲ್ಲಿ 4 , ದೂಪಧಾಳ 3, ಮಲ್ಲಾಪೂರ ಪಿ.ಜಿ2 , ಶಿಂಧಿಕೂರಬೇಟ, ಮದವಾಲ,ಮಲ್ಲಾಪೂರ, ಅವರಾಧಿ, ಕೌಜಲಗಿ, ತುಕ್ಕಾನಟ್ಟಿ, ಗಣೇಶವಾಡಿ, ಗೋಕಾಕ ಫಾಲ್ಸ, ಪಂಚನಾಯಕನಹಟ್ಟಿ ಗ್ರಾಮಗಳಲ್ಲಿ ತಲಾ ಒಬ್ಬರಿಗೆ ಕೊರೋನಾ ಸೋಂಕು ದೃಡಪಟ್ಟಿದೆ.

Read More »

ರಿಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ.:ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ

ಘಟಪ್ರಭಾ: ಇಂದಿನಿಂದ ಭಾರತ ದೇಶಕ್ಕಾಗಿ ಹಿರಿಯರು  ಕಂಡಂತಹ ಕನಸನ್ನು ನನಸು ಮಾಡುವ  ನಿಟ್ಟಿನಲ್ಲಿ ನಾವು  ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೇಳಿದರು. ಇಲ್ಲಿನ ಕಾಂಗ್ರೆಸ್ ಸೇವಾದಳ ಕಚೇರಿಯಲ್ಲಿ ಧ್ವಜಾರೋಹನ ಬಳಿಕ ಮಾತನಾಡಿದ ಅವರು, ಹಿರಿಯರ ತ್ಯಾಗ ಬಲಿದಾನದಿಂದ ನಮ್ಮ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿದೆ. ಭಾರತ ದೇಶ ಹೇಗಿರಬೇಕು ಎಂದು ಹಿರಿಯರು ಕಂಡಂತಹ ಕನಸನ್ನು  ನನಸು ಮಾಡುವುದಾಗಿ ಎಲ್ಲ ಭಾರತೀಯರು ಕಾರ್ಯ ಮಾಡಬೇಕಾಗಿದೆ. ದೇಶದ …

Read More »

ವರ್ಷ ಕಳೆದರೂ ತಪ್ಪಿಲ್ಲ ಬೆಳಗಾವಿ ಪ್ರವಾಹ ಸಂತ್ರಸ್ತರ ಸಂಕಟ!

ಬೆಳಗಾವಿ: ಪ್ರವಾಹಕ್ಕೆ ನಲುಗಿ ಒಂದು ವರ್ಷ ಕಳೆದರೂ ಜಿಲ್ಲೆಯ ಎಲ್ಲ ಸಂತ್ರಸ್ತರಿಗೆ ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ಕೊಡುವಂತೆ ಒತ್ತಾಯಿಸಿ, ಈಗಲೂ ಅಲ್ಲೊಂದು, ಇಲ್ಲೊಂದು ಪ್ರತಿಭಟನೆಗಳು ನಡೆಯುತ್ತಲೇ ಇವೆ. ಕಳೆದ ವರ್ಷ ಆಗಸ್ಟ್‌ ತಿಂಗಳಿನಲ್ಲಿ ಕೃಷ್ಣಾ, ಮಲಪ್ರಭಾ, ಘಟಪ್ರಭಾ, ಹಿರಣ್ಯಕೇಶಿ ಸೇರಿದಂತೆ ಬಹುತೇಕ ಎಲ್ಲ ನದಿಗಳಲ್ಲಿ ಪ್ರವಾಹ ಕಾಣಿಸಿಕೊಂಡಿತ್ತು. ಇದರ ಜೊತೆ ಅತಿವೃಷ್ಟಿಯೂ ಕೂಡಿಕೊಂಡು ಅಪಾರ ಹಾನಿಯನ್ನುಂಟು ಮಾಡಿತ್ತು. ಬೆಳಗಾವಿ, ಖಾನಾಪುರ, ಚಿಕ್ಕೋಡಿ, ಅಥಣಿ, ಗೋಕಾಕ, ರಾಮದುರ್ಗ, ಸವದತ್ತಿ, ರಾಯಬಾಗ, ಹುಕ್ಕೇರಿ …

Read More »

ರಮೇಶ ಜಾರಕಿಹೊಳಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರಾಜ್ಯ ರೈತ ಸಂಘದ ಕಾರ್ಯಕರ್ತರು

ಗೋಕಾಕ:  ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕೆಂದು ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನೆ ನಡೆಯುತ್ತಿದ್ದ  ಬಸವೇಶ್ವರ ವೃತ್ತದಿಂದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಗೆ ತೆರಳಿ ಮನವಿ ನೀಡಲು ಮುಂದಾದ  ರೈತರನ್ನು ಪೊಲೀಸರು ಅಲ್ಲಿಯೇ ಘೇರಾವ್ ಹಾಕಿ ತಡೆದರು. ಮುಂಜಾಗೃತಾ ಕ್ರಮವಾಗಿ ಸಚಿವರ ಮನೆಯ ಸುತ್ತ ಬಿಗಿ ಭದ್ರತೆಯನ್ನು ಪೊಲೀಸರು ಮಾಡಿದ್ದಾರೆ. ರೈತ ವಿರೋಧಿ …

Read More »

ಗೋಕಾಕ ನಗರದಲ್ಲಿ ಐದು ದಿನಗಳ ಕಾಲ ಲಾಕ್ ಡೌನ್

ಗೋಕಾಕ:  ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗೋಕಾಕ ನಗರದಲ್ಲಿ ಐದು ದಿನಗಳ ಕಾಲ ಲಾಕ್ ಡೌನ್ ಮಾಡಲು  ನಿರ್ಧರಿಸಲಾಗಿದೆ ಎಂದು ನಗರಸಭೆ  ಕಮಿಷನರ್ ಶಿವನಂದ ಹಿರೇಮಠ್  ತಿಳಿಸಿದ್ದಾರೆ.  ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ  ಅಂಗಡಿ, ಮುಗ್ಗಟ್ಟು ಹಾಗೂ ವ್ಯಾಪಾರಸ್ತರೊಂದಿಗೆ ಮಂಗಳವಾರ  ನಡೆದ ಸಭೆಯಲ್ಲಿ ನಾಳೆಯಿಂದ  ಆ. 15(ರವಿವಾರ)ದವರೆಗೂ ಲಾಕ್ ಡೌನ್ ಮಾಡಲು ತೀರ್ಮಾನಿಸಲಾಗಿದೆ. ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ನಗರದಲ್ಲಿ ಸಾವಿನ ಸಂಖ್ಯೆ ಹೆಚ್ಚುತಲಿದೆ.  ಹೀಗಾಗಿ ಬಟ್ಟೆ ಅಂಗಡಿ, …

Read More »

ಗೋಕಾಕ್ ಫಾಲ್ಸ್ ಬಳಿ ಯುವಕರ ಸೆಲ್ಫಿ ಹುಚ್ಚಾಟ………

ಗೋಕಾಕ್: ಜಿಲ್ಲೆಯ ಗೋಕಾಕ್ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ನೀರಿನ ಭಯವಿಲ್ಲದೆ ಯುವಕರು ತಮ್ಮ ಹುಚ್ಚಾಟ ಮೆರೆಯುತ್ತಿದ್ದಾರೆ.ಹೌದು. ಜಲಪಾತದ ತುದಿಗೆ ಹೋಗಿ ಯುವಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಮಳೆ ತಗ್ಗಿದರೂ ಅಪಾಯದ ಮಟ್ಟ ಮೀರಿ ಘಟಪ್ರಭಾ ನದಿ ಹರಿಯುತ್ತಿದೆ. 180 ಅಡಿಯಿಂದ ಧುಮ್ಮುಕ್ಕುತ್ತಿರುವ ಜಲಪಾತದ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡು ಯುವಕರು ಮಜಾ ಮಾಡುತ್ತಿರುವುದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ ಹೌದು. ಜಲಪಾತದ ತುದಿಗೆ ಹೋಗಿ ಯುವಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಮಳೆ ತಗ್ಗಿದರೂ ಅಪಾಯದ …

Read More »

, ಬ್ಯಾಲ್ಯದ ಸ್ನೇಹಿತ ಎಸ್.ಎ.  ಕೋತ್ವಾಲ್ ನಿಧನ ಹಿನ್ನೆಲೆ ಸಚಿವರ ಪ್ರವಾಸ ರದ್ದು

ಬೆಳಗಾವಿ:  ಮಾರ್ಕಂಡೇಯ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರವನ್ನು ಕೊನೆ ಕ್ಷಣದಲ್ಲಿ ಮುಂದೂಡಲಾಗಿದೆ. ಹುಕ್ಕೇರಿ ತಾಲೂಕಿನ ಶಿರೂರು ಗ್ರಾಮದ ಸಮೀಪದ ಮಾರ್ಕಂಡೇಯ ಜಲಾಶಯಕ್ಕೆ ಇಂದು ಸಚಿವ ರಮೇಶ ಜಾರಕಿಹೊಳಿ ಅವರು ಬಾಗಿನ ಅರ್ಪಿಸಲಿದ್ದರು. ಆದ್ರೆ ಕಾರಣಾಂತರಿಗಳಿಂದ ಕಾರ್ಯಕ್ರವನ್ನು ಮುಂದೂಡಲಾಗಿದೆ ಎಂದು ನೀರಾವರಿ ನಿಗಮ ಅಧಿಕಾರಿಗಳು ತಿಳಿಸಿದ್ದಾರೆ. ಗೋಕಾಕ ನಗರಸಭೆ ಸದಸ್ಯ, ಬ್ಯಾಲ್ಯದ ಸ್ನೇಹಿತ ಎಸ್.ಎ.  ಕೋತ್ವಾಲ್ ನಿಧನ ಹಿನ್ನೆಲೆ ಸಚಿವರ ಪ್ರವಾಸ ರದ್ದುಗೊಳಿಸಿದ್ದಾರೆ ಎನ್ನಲಾಗುತ್ತಿದೆ.

Read More »

ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ.

ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗೋಕಾಕ ನಗರಸಭೆಗೆ 8 ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಂಜುಮನ್ ಇಸ್ಲಾಂ ಕಮಿಟಿ ಗೋಕಾಕ ಮತ್ತು ತಂಜೀಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ‌ ಮತ್ತು ಗ್ರಾಮ ದೇವತೆ …

Read More »