Breaking News

ಗೋಕಾಕ

ರಮೇಶ ಜಾರಕಿಹೊಳಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ರಾಜ್ಯ ರೈತ ಸಂಘದ ಕಾರ್ಯಕರ್ತರು

ಗೋಕಾಕ:  ಕರ್ನಾಟಕ ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ರದ್ದುಪಡಿಸಬೇಕೆಂದು ಆಗ್ರಹಿಸಿ ಇಂದು ಕರ್ನಾಟಕ ರಾಜ್ಯ ರೈತ ಸಂಘದ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಇದೇ ವೇಳೆ ಪ್ರತಿಭಟನೆ ನಡೆಯುತ್ತಿದ್ದ  ಬಸವೇಶ್ವರ ವೃತ್ತದಿಂದ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರ ಗೃಹ ಕಚೇರಿಗೆ ತೆರಳಿ ಮನವಿ ನೀಡಲು ಮುಂದಾದ  ರೈತರನ್ನು ಪೊಲೀಸರು ಅಲ್ಲಿಯೇ ಘೇರಾವ್ ಹಾಕಿ ತಡೆದರು. ಮುಂಜಾಗೃತಾ ಕ್ರಮವಾಗಿ ಸಚಿವರ ಮನೆಯ ಸುತ್ತ ಬಿಗಿ ಭದ್ರತೆಯನ್ನು ಪೊಲೀಸರು ಮಾಡಿದ್ದಾರೆ. ರೈತ ವಿರೋಧಿ …

Read More »

ಗೋಕಾಕ ನಗರದಲ್ಲಿ ಐದು ದಿನಗಳ ಕಾಲ ಲಾಕ್ ಡೌನ್

ಗೋಕಾಕ:  ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಗೋಕಾಕ ನಗರದಲ್ಲಿ ಐದು ದಿನಗಳ ಕಾಲ ಲಾಕ್ ಡೌನ್ ಮಾಡಲು  ನಿರ್ಧರಿಸಲಾಗಿದೆ ಎಂದು ನಗರಸಭೆ  ಕಮಿಷನರ್ ಶಿವನಂದ ಹಿರೇಮಠ್  ತಿಳಿಸಿದ್ದಾರೆ.  ನಗರದ ಖಾಸಗಿ ಹೋಟೆಲ್ ಸಭಾಂಗಣದಲ್ಲಿ  ಅಂಗಡಿ, ಮುಗ್ಗಟ್ಟು ಹಾಗೂ ವ್ಯಾಪಾರಸ್ತರೊಂದಿಗೆ ಮಂಗಳವಾರ  ನಡೆದ ಸಭೆಯಲ್ಲಿ ನಾಳೆಯಿಂದ  ಆ. 15(ರವಿವಾರ)ದವರೆಗೂ ಲಾಕ್ ಡೌನ್ ಮಾಡಲು ತೀರ್ಮಾನಿಸಲಾಗಿದೆ. ಬಳಿಕ  ಮಾಧ್ಯಮದವರೊಂದಿಗೆ ಮಾತನಾಡಿದ ಅವರು,  ನಗರದಲ್ಲಿ ಸಾವಿನ ಸಂಖ್ಯೆ ಹೆಚ್ಚುತಲಿದೆ.  ಹೀಗಾಗಿ ಬಟ್ಟೆ ಅಂಗಡಿ, …

Read More »

ಗೋಕಾಕ್ ಫಾಲ್ಸ್ ಬಳಿ ಯುವಕರ ಸೆಲ್ಫಿ ಹುಚ್ಚಾಟ………

ಗೋಕಾಕ್: ಜಿಲ್ಲೆಯ ಗೋಕಾಕ್ ಜಲಪಾತ ಧುಮ್ಮಿಕ್ಕಿ ಹರಿಯುತ್ತಿದ್ದು, ನೀರಿನ ಭಯವಿಲ್ಲದೆ ಯುವಕರು ತಮ್ಮ ಹುಚ್ಚಾಟ ಮೆರೆಯುತ್ತಿದ್ದಾರೆ.ಹೌದು. ಜಲಪಾತದ ತುದಿಗೆ ಹೋಗಿ ಯುವಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಮಳೆ ತಗ್ಗಿದರೂ ಅಪಾಯದ ಮಟ್ಟ ಮೀರಿ ಘಟಪ್ರಭಾ ನದಿ ಹರಿಯುತ್ತಿದೆ. 180 ಅಡಿಯಿಂದ ಧುಮ್ಮುಕ್ಕುತ್ತಿರುವ ಜಲಪಾತದ ಮೇಲೆ ನಿಂತು ಸೆಲ್ಫಿ ಕ್ಲಿಕ್ಕಿಸಿಕೊಂಡು ಯುವಕರು ಮಜಾ ಮಾಡುತ್ತಿರುವುದು ಸ್ಥಳೀಯರ ಕೆಂಗಣ್ಣಿಗೆ ಗುರಿಯಾಗಿದೆ ಹೌದು. ಜಲಪಾತದ ತುದಿಗೆ ಹೋಗಿ ಯುವಕರು ಸೆಲ್ಫಿ ತೆಗೆದುಕೊಳ್ಳುತ್ತಿದ್ದಾರೆ. ಮಳೆ ತಗ್ಗಿದರೂ ಅಪಾಯದ …

Read More »

, ಬ್ಯಾಲ್ಯದ ಸ್ನೇಹಿತ ಎಸ್.ಎ.  ಕೋತ್ವಾಲ್ ನಿಧನ ಹಿನ್ನೆಲೆ ಸಚಿವರ ಪ್ರವಾಸ ರದ್ದು

ಬೆಳಗಾವಿ:  ಮಾರ್ಕಂಡೇಯ ಜಲಾಶಯಕ್ಕೆ ಬಾಗಿನ ಅರ್ಪಿಸುವ ಕಾರ್ಯಕ್ರವನ್ನು ಕೊನೆ ಕ್ಷಣದಲ್ಲಿ ಮುಂದೂಡಲಾಗಿದೆ. ಹುಕ್ಕೇರಿ ತಾಲೂಕಿನ ಶಿರೂರು ಗ್ರಾಮದ ಸಮೀಪದ ಮಾರ್ಕಂಡೇಯ ಜಲಾಶಯಕ್ಕೆ ಇಂದು ಸಚಿವ ರಮೇಶ ಜಾರಕಿಹೊಳಿ ಅವರು ಬಾಗಿನ ಅರ್ಪಿಸಲಿದ್ದರು. ಆದ್ರೆ ಕಾರಣಾಂತರಿಗಳಿಂದ ಕಾರ್ಯಕ್ರವನ್ನು ಮುಂದೂಡಲಾಗಿದೆ ಎಂದು ನೀರಾವರಿ ನಿಗಮ ಅಧಿಕಾರಿಗಳು ತಿಳಿಸಿದ್ದಾರೆ. ಗೋಕಾಕ ನಗರಸಭೆ ಸದಸ್ಯ, ಬ್ಯಾಲ್ಯದ ಸ್ನೇಹಿತ ಎಸ್.ಎ.  ಕೋತ್ವಾಲ್ ನಿಧನ ಹಿನ್ನೆಲೆ ಸಚಿವರ ಪ್ರವಾಸ ರದ್ದುಗೊಳಿಸಿದ್ದಾರೆ ಎನ್ನಲಾಗುತ್ತಿದೆ.

Read More »

ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ.

ಗೋಕಾಕ: ನಗರಸಭೆ ಹಿರಿಯ ಸದಸ್ಯ ಮತ್ತು ಮಾಜಿ ಅಧ್ಯಕ್ಷ ಶೇಖ್ ಫತೆವುಲ್ಲಾ .ಎ.ಖೋತವಾಲ (ಗೌಡರು) ಅವರು ಇಂದು ನಿಧನರಾಗಿದ್ದಾರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯತಿದ್ದ ಅವರು ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಗೋಕಾಕ ನಗರಸಭೆಗೆ 8 ಬಾರಿ ಸದಸ್ಯರಾಗಿ ಆಯ್ಕೆಯಾಗಿದ್ದ ಅವರು ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಅಂಜುಮನ್ ಇಸ್ಲಾಂ ಕಮಿಟಿ ಗೋಕಾಕ ಮತ್ತು ತಂಜೀಮ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿ‌ ಮತ್ತು ಗ್ರಾಮ ದೇವತೆ …

Read More »

ನಗರಸಭೆ ಮಾಜಿ ಅಧ್ಯಕ್ಷರು, ಹಾಲಿ ಸದಸ್ಯರಾದ ಎಸ್ ಎ ಕೋತ್ವಾಲ್ ಗೌಡರು ನಿಧನ : ಸಚಿವ ರಮೇಶ ಜಾರಕಿಹೊಳಿ ಸಂತಾಪ.

ನನ್ನ ಹಿರಿಯ ಸ್ನೇಹಿತ, ಗೋಕಾಕ್ ನಗರಸಭೆಯ ಸದಸ್ಯರಾಗಿದ್ದ *ಶ್ರೀಯುತ ಜನಾಬ್ ಶೇಖ್ ಫತೇವುಲ್ಲಾ ಕೋತ್ವಾಲ್* ಅವರ ಅಕಾಲಿಕ ಮರಣದಿಂದ ನಾನು ದಿಗ್ಭ್ರಮೆಗೊಂಡಿದ್ದೇನೆ. *ನನ್ನ ಬಾಲ್ಯದ ಗೆಳೆಯನಾಗಿದ್ದ ಕೋತ್ವಾಲ್* ನನ್ನ ರಾಜಕೀಯ ಪ್ರಗತಿಯಲ್ಲಿ ಹೆಜ್ಜೆ ಹೆಜ್ಜೆಗೂ ನನ್ನೊಂದಿಗೆ ನಿಂತು ಜಯಗಳಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದ್ದರು. ಗೋಕಾಕ್ ನಗರಸಭೆಗೆ ಸತತ *ಆರನೇ ಬಾರಿ ಆಯ್ಕೆ* ಯಾಗಿದ್ದರು ಮತ್ತು ನಗರಸಭೆಯ ಅಧ್ಯಕ್ಷರಾಗಿ ನಗರದ ಅಭಿವೃದ್ಧಿಗೆ ಕಾರಣಕರ್ತರಾಗಿದ್ದರು. ಜಾತ್ಯಾತೀತ ವ್ಯಕ್ತಿಯಾಗಿದ್ದ ಕೋತ್ವಾಲ್, ಗೋಕಾಕ್ ನಗರದ *ಅಂಜುಮನ್ …

Read More »

ಗೋಕಾಕ್ ತಾಲೂಕಿನ ಯುವಕ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ

ಬೆಳಗಾವಿ- ನಿನ್ನೆ ಸಂಜೆ ಹೊತ್ತಿಗೆ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋದ ಪ್ರಕರಣಕ್ಕೆ ಸಮಂಧಿಸಿದಂತೆ ಬೆಳಗ್ಗೆ 8 ಗಂಟೆಯಿಂದ ಯುವಕನಿಗಾಗಿ ಶೋಧ ಕಾರ್ಯಚರಣೆ ಆರಂಭವಾಗಿದೆ. ಡುಮ್ಮ‌ಉರುಬಿನಟ್ಟಿ ಗ್ರಾಮದ ಬಳಿ ಬಳ್ಳಾರಿ ನಾಲಾದಲ್ಲಿ ಯುವಕ ಕೊಚ್ಚಿಕೊಂಡು ಹೋಗಿದ್ದಾನೆ ಎಂದು ಹೇಳಲಾಗುತ್ತಿದೆ. ಜಲಾವೃತವಾದ ಗದ್ದೆಯಲ್ಲಿ ಮುಳುಗಡೆಯಾದ ಪಂಪ್‌ಸೆಟ್ ನೋಡಲು‌ ಹೋಗಿದ್ದ ಯುವಕ ಕಾಲು ಜಾರಿ ಬಳ್ಳಾರಿ ನಾಲೆಗೆ ಬಿದ್ದು ನೀರಿನ ಸೆಳುವಿಗೆ ಕೊಚ್ಚಿ ಹೋಗಿದ್ದಾನೆ.   18 ವರ್ಷದ ನಾಗರಾಜ್ ಹೆಬ್ಬಳ್ಳಿ‌ ಬಳ್ಳಾರಿ …

Read More »

ಮೈದುಂಬಿ ಹರಿಯುತ್ತಿವೆ..ಗೋಕಾಕ್..ಗೋಡಚಿನಮಲ್ಕಿ ಫಾಲ್ಸ..ಪ್ರವಾಸಿಗರ ಕೈ ಬೀಸಿ ಕರೆಯುತ್ತಿವೆ..!

ಮಹಾರಾಷ್ಟ್ರದ ಪಶ್ಚಿಮಘಟ್ಟ ಪ್ರದೇಶದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದಾಗಿ ಗಡಿ ಜಿಲ್ಲೆ ಬೆಳಗಾವಿಯ ನದಿಗಳು ತುಂಬಿ ಹರಿಯುತ್ತಿದ್ದು. ಮತ್ತೆ ಪ್ರವಾಹಭೀತಿ ಎದುರಾಗಿದೆ. ಅಷ್ಟೇ ಅಲ್ಲದೇ ರಾಜ್ಯದ ಎರಡನೇ ಅತೀ ದೊಡ್ಡ ಜಲಪಾತ ಎಂದು ಕರೆಯುವ ಗೋಕಾಕ್ ಫಾಲ್ಸ್ ಮತ್ತು ಗೋಡಚಿನಮಲ್ಕಿ ಫಾಲ್ಸ ಕೂಡ ನಯನಮನೋಹರವಾಗಿ ಹರಿಯುತ್ತಿದೆ. ಮತ್ತು ಪ್ರವಾಸಿಗರನ್ನು ಕೈ ಬೀಸಿ ಕರೆಯುತ್ತಿದೆ. ಹೌದು 180ಅಡಿಯಷ್ಟು ಎತ್ತರದಿಂದ ನೀರು ಧುಮ್ಮುಕ್ಕಿ ಬೀಳುತ್ತಿರುವ ಗೋಕಾಕ ಜಲಪಾತ ಈಗ ನೋಡುವುದೇ ಕಣ್ಣಿಗೆ ಹಬ್ಬ. ಮಳೆಗಾಲದ …

Read More »

ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಶುಕ್ರವಾರ ೮೭ ಕೊರೋನಾ ವರದಿಗಳು ದೃಢ

ಗೋಕಾಕ: ಗೋಕಾಕ ಮತ್ತು ಮೂಡಲಗಿ ತಾಲೂಕಿನಲ್ಲಿ ಶುಕ್ರವಾರ ೮೭ ಕೊರೋನಾ ವರದಿಗಳು ದೃಢಪಟ್ಟಿವೆ ಎಂದು ತಾಲೂಕಾ ವೈದ್ಯಾಧಿಕಾರಿ ಡಾ. ಜಗದೀಶ ಜಿಂಗಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿರುವ ಅವರು, ಗೋಕಾಕ ನಗರದಲ್ಲಿಯೆ ಇಂದು ಒಂದೇ ದಿನದಲ್ಲಿ ಹಾಪ್ ಸೆಂಚುರಿ ಸಮೀಪಿಸಿದ್ದು, ನಗರದಲ್ಲಿ ಕೊರೋನಾ ಪೀಡಿತರ ಸಂಖ್ಯೆ ಒಂದೇ ದಿನ ೪೭ ಕ್ಕೆ ಬಂದು ತಲುಪಿದೆ. ಗ್ರಾಮೀಣ ಪ್ರದೇಶ ಅಂಕಲಗಿಯಲ್ಲಿ ೧೮ ಪ್ರಕರಣಗಳು ವರದಿಯಾಗಿದ್ದು ಆತಂಕ ಹೆಚ್ಚಿಸಿದೆ. ಉಳಿದಂತೆ ಮೂಡಲಗಿ …

Read More »

ಪ್ರವಾಹ ಸಮಸ್ಯೆ ಎದುರಾದರೆ ಅದನ್ನು ಎದುರಿಸುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ: ತಹಶೀಲ್ದಾರ ಪ್ರಕಾಶ ಹೂಳೆಪ್ಪಗೋಳ

ಗೋಕಾಕ: ಪ್ರವಾಹ ಸಮಸ್ಯೆ ಎದುರಾದರೆ ಅದನ್ನು ಎದುರಿಸುವ ಎಲ್ಲ ಮುಂಜಾಗೃತಾ ಕ್ರಮಗಳನ್ನು ತೆಗೆದುಕೊಳ್ಳಲಾಗಿದ್ದು ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಗೋಕಾಕ ತಹಶೀಲ್ದಾರ ಪ್ರಕಾಶ ಹೂಳೆಪ್ಪಗೋಳ ಹೇಳಿದರು. ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಪ್ರವಾಹ ಸಮಸ್ಯೆ ಇನ್ನೂ ಎದುರಾಗಿಲ್ಲ. ಹಿರಣ್ಯಕೇಶಿ, ಮಾರ್ಕಂಡೇಯ  ನದಿಗಳಲ್ಲಿ  ನೀರು ಹೆಚ್ಚಿನ ಪ್ರಮಾಣದಲ್ಲಿ ಬರುತ್ತಿದೆ. ಮತ್ತು ಶಿರೂರು ಡ್ಯಾಂನಿಂದ  ನೀರು ಬಿಡುಗಡೆಯಾಗಿದೆ ಹೀಗಾಗಿ ನದಿಗಳು ತುಂಬಿ ಹರಿಯುತ್ತಿವೆ. ಹಿಡಕಲ್ ಜಲಾಶಯ ಇನ್ನೂ ಅರ್ಧದಷ್ಟು ಖಾಲಿಯಿದೆ. ಅದು ಭರ್ತಿಯಾಗುವರೆಗೂ ಪ್ರವಾಹ …

Read More »