ಚಿಕ್ಕೋಡಿ : ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಹಾರುಗೇರಿ ಗ್ರಾಮದ ಅಕ್ಬರ್ ಶಬ್ಬೀರ್ ಜಮಾದಾರ್ (22) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಕಳ್ಳತನದ ವ್ಯವಹಾರದಲ್ಲಿ ನಂಬಿಕೆ ದ್ರೋಹ ಎಸಗಿದ್ದಾನೆಂದು ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಮೃತನ ತಾಯಿ ಕೈರುಣ ಜಮಾದಾರ ಆರೋಪಿಸಿದರು. ಬಸ್ತವಾಡ ಗ್ರಾಮದ ಹೊರವಲಯದಲ್ಲಿ ಜಮಾದಾರ್ನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದು, ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕಳೆದ ಎರಡು …
Read More »ನಾವು ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಸ್ಥಾನವನ್ನು ಗೆಲ್ಲುತ್ತೇವೆ: ಸತೀಶ್ ಜಾರಕಿಹೊಳಿ
ಚಿಕ್ಕೋಡಿ (ಬೆಳಗಾವಿ): “ಲೋಕಸಭಾ ಚುನಾವಣೆಗೆ ಇನ್ನು ತುಂಬಾ ಸಮಯವಿದೆ. ಯಾರು ಸ್ಪರ್ಧೆ ಮಾಡಬೇಕೆಂಬುದು ಇನ್ನೂ ಅಂತಿಮವಾಗಿಲ್ಲ. ಪಕ್ಷ ಯಾರನ್ನು ಗುರುತಿಸುತ್ತದೋ ಅವರು ಸ್ಪರ್ಧೆ ಮಾಡುತ್ತಾರೆ. ನಾವು ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಸ್ಥಾನವನ್ನು ಗೆಲ್ಲುತ್ತೇವೆ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುನ್ನೂರು ಪ್ರವಾಸ ಮಂದಿರದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಎರಡೂವರೆ ವರ್ಷದ ಬಳಿಕ ಹಿರಿಯ ಸಚಿವರು ಬೇರೆಯವರಿಗೆ ಅವಕಾಶ ನೀಡಬೇಕು ಎಂಬ …
Read More »ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನು ಬಾವಿಯಲ್ಲಿ ದೂಡಿ ಕೊಲೆ,ಜೀವಾವಧಿ ಶಿಕ್ಷೆ ಮತ್ತು ೭ ಸಾವಿರ ದಂಡ ವಿಧಿಸಿ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು
ಚಿಕ್ಕೋಡಿ: ಅನೈತಿಕ ಸಂಬಂಧದಿಂದ ಹೆತ್ತ ಮಗನನ್ನು ಬಾವಿಯಲ್ಲಿ ದೂಡಿ ಕೊಲೆ ಮಾಡಿದ ಆರೋಪದ ಹಿನ್ನಲ್ಲೆಯಲ್ಲಿ ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದ ಶ್ರೀಮತಿ ಸುಧಾ ಸುರೇಶ ಕರಿಗಾರ(೩೧) ಇತಳಿಗೆ ಜೀವಾವಧಿ ಶಿಕ್ಷೆ ಮತ್ತು ೭ ಸಾವಿರ ದಂಡ ವಿಧಿಸಿ ಚಿಕ್ಕೋಡಿ ಏಳನೆ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ. ಹುಕ್ಕೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳೆದ ೨೨-೧೦-೨೦೧೯ರಲ್ಲಿ ನಡೆದ ಪ್ರಕರಣದ ವಿಚಾರಣೆ ನಡೆಸಿದ ಚಿಕ್ಕೋಡಿ ಏಳನೆ ಹೆಚ್ಚುವರಿ …
Read More »ಹೊಸಕೋಟೆ ಮತ್ತು ಬೆಳಗಾವಿಯಲ್ಲಿ ವಿದ್ಯುತ್ ಕಂಬ ದುರಸ್ತಿ ಮಾಡುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಇಬ್ಬರು ಲೈನ್ಮ್ಯಾನ್ಗಳು ಸಾವನ್ನಪ್ಪಿದ್ದಾರೆ.
(ಬೆ. ಗ್ರಾ)/ಬೆಳಗಾವಿ : ಪ್ರತ್ಯೇಕ ಕಡೆಗಳಲ್ಲಿ ವಿದ್ಯುತ್ ಕಂಬದ ಮೇಲೆ ಕೆಲಸ ಮಾಡುವಾಗ ಹೈ ವೋಲ್ಟೇಜ್ ವಿದ್ಯುತ್ ಪ್ರವಹಿಸಿ ಇಬ್ಬರು ಲೈನ್ಮ್ಯಾನ್ಗಳು ಸಾವನ್ನಪ್ಪಿದ್ದಾರೆ. ಮೃತರನ್ನು ಕೋಲಾರ ಜಿಲ್ಲೆಯವ ಅನಿಲ್ (35) ಮತ್ತು ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದ ಸಿದ್ದರಾಮ ಕುಪವಾಡೆ (38) ಎಂದು ಗುರುತಿಸಲಾಗಿದೆ. ಪ್ರಕರಣ -1: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಮಾಲೂರು ರಸ್ತೆಯ ವಿಜಯನಗರ ಗೇಟ್ ಬಳಿ ಅನಿಲ್ ಕೆಲಸ ಮಾಡುವಾಗ ಘಟನೆ ನಡೆಯಿತು. ಬೆಸ್ಕಾಂನಲ್ಲಿ ಗುತ್ತಿಗೆ …
Read More »ಸಿಎಂ ಸಿದ್ದರಾಮಯ್ಯ ಹಾಗೂ ವಿವಿಧ ಇಲಾಖೆಯ ಸಚಿವರು ಆಗಮಿಸಲಿದ್ದಾರೆ ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಹೇಳಿದ್ದಾರೆ.
ಚಿಕ್ಕೋಡಿ : ನಾಳೆ ಅಥಣಿ ತಾಲೂಕಿನ ಕೋಕಟನೂರ ಗ್ರಾಮಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ವಿವಿಧ ಇಲಾಖೆಗಳ ಸಚಿವರು ಆಗಮಿಸಿ, ಹಲವು ಅಭಿವೃದ್ಧಿ ಯೋಜನೆಗಳಿಗೆ ಚಾಲನೆ ನೀಡುವರು ಎಂದು ಅಥಣಿ ಶಾಸಕ ಲಕ್ಷ್ಮಣ್ ಸವದಿ ಮಾಹಿತಿ ನೀಡಿದರು. ಬೆಳಗಾವಿ ಜಿಲ್ಲೆಯ ಕೋಕಟನೂರ ಗ್ರಾಮದಲ್ಲಿಂದು ಕಾರ್ಯಕ್ರಮದ ರೂಪುರೇಷೆ ಹಾಗೂ ವೇದಿಕೆ ನಿರ್ಮಾಣ ಕಾರ್ಯ ಪರಿಶೀಲನೆ ನಡೆಸಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಆಗಸ್ಟ್ 11ರಂದು 10:30ಕ್ಕೆ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್, ಲೋಕೋಪಯೋಗಿ …
Read More »ಹಾಳಾದ ರಸ್ತೆಯನ್ನು ದುರಸ್ತಿ ಮಾಡುವಂತೆ ಹಲವು ಬಾರಿ ಮನವಿ ಮಾಡಿದರೂ ಸ್ಪಂದಿಸದ ಪಿಡಬ್ಲ್ಯೂಡಿ ಅಧಿಕಾರಿಗಳು
ಚಿಕ್ಕೋಡಿ (ಬೆಳಗಾವಿ): ಆಗಸ್ಟ್ 11ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಥಣಿ ತಾಲೂಕಿನ ಕೋಕಟನೂರ ಗ್ರಾಮಕ್ಕೆ ಆಗಮಿಸುತ್ತಿದ್ದು ಎಚ್ಚೆತ್ತುಕೊಂಡ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ರಸ್ತೆ ದುರಸ್ತಿ ಕಾರ್ಯಕ್ಕೆ ಮುಂದಾಗಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ. ಅಥಣಿಯಿಂದ ಕೋಕಟನೂರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಸುಮಾರು 20 ಕಿಮೀ ರಸ್ತೆ ದುರಸ್ತಿ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಿದ್ದಾರೆ. ಈ ಹಿಂದೆ ರಸ್ತೆ ದುರಸ್ತಿಗೆ ಅಥಣಿ ಲೋಕೋಪಯೋಗಿ ಅಧಿಕಾರಿಗಳಿಗೆ ಹಲವು ಬಾರಿ ಜನರು ಮನವಿ ಸಲ್ಲಿಸಿದರೂ ಕ್ಯಾರೆನ್ನದ ಅಧಿಕಾರಿಗಳು ಸದ್ಯ …
Read More »ಒಣದ್ರಾಕ್ಷಿ ಬೆಲೆ ಕುಸಿತದಿಂದ ಬೆಳೆಗಾರರು ಅಕ್ಷರಶಃ ಕಂಗಾಲ
ಚಿಕ್ಕೋಡಿ (ಬೆಳಗಾವಿ) : ಒಣದ್ರಾಕ್ಷಿ ಬೆಲೆ ಕುಸಿತದಿಂದ ಬೆಳೆಗಾರರು ಅಕ್ಷರಶಃ ಕಂಗಾಲಾಗಿದ್ದು, ರಾಜ್ಯ ಸರ್ಕಾರ ತುರ್ತಾಗಿ ಬೆಳೆ ಖರೀದಿ ಮಾಡಿ ತಮ್ಮ ನೆರವಿಗೆ ಬರುವಂತೆ ರೈತರು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಮನವಿ ಮಾಡಿದ್ದಾರೆ. ರಾಜ್ಯದಲ್ಲಿ ವಿಜಯಪುರ ಜಿಲ್ಲೆಯನ್ನು ಬಿಟ್ಟರೆ ಬೆಳಗಾವಿ ಜಿಲ್ಲೆಯ ರಾಯಬಾಗ, ಕಾಗವಾಡ, ಅಥಣಿ, ಚಿಕ್ಕೋಡಿ, ನಿಪ್ಪಾಣಿ, ಹುಕ್ಕೇರಿ ಅತಿ ಹೆಚ್ಚು ದ್ರಾಕ್ಷಿ ಬೆಳೆಗಾರರನ್ನು ಹೊಂದಿರುವ ಪ್ರದೇಶ ಎಂಬ ಹೆಗ್ಗಳಿಕೆ ಪಡೆದುಕೊಂಡಿದೆ. ಆದರೆ, ಈ ಬಾರಿ ಬೆಲೆ ಕುಸಿತದಿಂದ ಸಾವಿರಾರು ಟನ್ …
Read More »ಟೊಮೆಟೊ ಕಳ್ಳನನ್ನು ಸೆರೆ ಹಿಡಿದು ಪೊಲೀಸರಿಗೆ ಒಪ್ಪಿಸಿದ್ ರೈತ
ಚಿಕ್ಕೋಡಿ (ಬೆಳಗಾವಿ) : ಕಳೆದ ಎರಡು ತಿಂಗಳಿಂದ ಟೊಮೆಟೊ ಬೆಲೆ ಗಗನಕ್ಕೇರಿದ್ದು, 200 ರೂ. ಗಡಿ ಮುಟ್ಟಿದೆ. ಗ್ರಾಹಕರ ಜೇಬಿಗೆ ಹೊರೆಯಾಗಿ ಪರಿಣಮಿಸಿರುವ ಟೊಮೆಟೊ, ರೈತರಿಗೆ ಹೆಚ್ಚಿನ ಲಾಭವನ್ನು ತಂದುಕೊಡುತ್ತಿದೆ. ಆದರೆ ಇತ್ತೀಚೆಗೆ ತೋಟಕ್ಕೆ ನುಗ್ಗಿ ಟೊಮೆಟೊ ಕಳ್ಳತನ ಮಾಡುತ್ತಿರುವ ಪ್ರಕರಣಗಳು ಹೆಚ್ಚಾಗುತ್ತಿವೆ. ಇದರ ನಡುವೆ ರೈತರೋರ್ವರು ಟೊಮೆಟೊ ಕಳ್ಳನನ್ನು ಸೆರೆಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ಜಿಲ್ಲೆಯಲ್ಲಿ ನಡೆದಿದೆ. ರಾಯಭಾಗ ತಾಲೂಕಿನ ಸಿದ್ದಾಪೂರ ಗ್ರಾಮದ ಬುಜಪ್ಪಾ ಗಾಣಗೇರ ಎಂಬುವರು ಟೊಮೆಟೊ ಕಳ್ಳತನ …
Read More »ಚಿಕ್ಕೋಡಿಯಲ್ಲಿ ಹಲವು ದೇವಸ್ಥಾನಗಳು ಜಲಾವೃತ
ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಗೆ, ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಹಲವು ನದಿಗಳಲ್ಲಿ ಒಳಹರಿವು ಹೆಚ್ಚಾಗಿದ್ದು, ನದಿ ಪಾತ್ರದ ಪ್ರಮುಖ ದೇವಾಲಯಗಳು ಜಲಾವೃತವಾಗಿವೆ. ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಗಣೇಶ್ ಮಂದಿರ ಜಲದಿಗ್ಬಂದನ ಗೊಂಡಿದ್ದು, ಮಹಾರಾಷ್ಟ್ರ – ಕರ್ನಾಟಕ ಗಡಿಯಲ್ಲಿರುವ ನರಸಿಂಹ ಹಾಡಿ ದೇವಸ್ಥಾನ ಭಾಗಶಃ ಜಲಾವೃತವಾಗಿದೆ. ಇನ್ನು ಭಕ್ತರು ರಭಸವಾಗಿ ಹರಿಯುತ್ತಿರುವ ನೀರನ್ನು ಲೆಕ್ಕಿಸದೇ, ದತ್ತ ದೇವರ ದರ್ಶನವನ್ನು ಪಡೆದುಕೊಳ್ಳುತ್ತಿದ್ದಾರೆ. ಕೃಷ್ಣಾ ನದಿ ಮತ್ತು ಪಂಚಗಂಗಾ ನದಿಗಳ …
Read More »ಜೈನ ಮುನಿ ಮಹಾರಾಜರ ಕನಸುಗಳನ್ನು ಪೂರ್ಣ ಮಾಡುತ್ತೇವೆ: ಸಂಸದ ಅಣ್ಣಾಸಾಹೇಬ್ ಜೊಲ್ಲೆ
ಚಿಕ್ಕೋಡಿ (ಬೆಳಗಾವಿ) : ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆಘಾತ ಉಂಟು ಮಾಡಿದೆ. ಹಿರೇಕೋಡಿ ಎಂಬ ಸಣ್ಣ ಹಳ್ಳಿಯಲ್ಲಿ ಉತ್ತಮ ಆಶ್ರಮ ಕಟ್ಟಿ, ಶಿಕ್ಷಣ ಸಂಸ್ಥೆ ಮಾಡಿದರು. ಮುಂದೆ ಅವರು ಬಿಟ್ಟು ಹೋದ ಕನಸುಗಳನ್ನು ಪೂರ್ಣ ಮಾಡುತ್ತೇವೆ ಎಂದು ಸಂಸದ ಅಣ್ಣಾಸಾಹೇಬ್ ಜೊಲ್ಲೆ ಹೇಳಿದರು. ಇಂದು ಜೈನಮುನಿ ಆಶ್ರಮಕ್ಕೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕಾಮಕುಮಾರ ನಂದಿ ಮಹಾರಾಜರು ಬಿಇ ಪದವೀಧರ ಆಗಿದ್ದು, 14 ಭಾಷೆಗಳಲ್ಲಿ ಪರಿಣಿತರಾಗಿದ್ದರು. …
Read More »