ಚಿಕ್ಕೋಡಿ : ಕಳೆದ ಒಂದೂವರೆ ವರ್ಷದ ಹಿಂದೆ ನಡೆದಿದ್ದ ಗ್ರಾಮ ಪಂಚಾಯತಿ ಚುನಾವಣೆಯಲ್ಲಿ ಪರಾಭವಗೊಂಡು ಮರು ಮತ ಎಣಿಕೆಗೆ ಕೋರ್ಟ್ ಮೆಟ್ಟಿಲೇರಿದ್ದ ಅಭ್ಯರ್ಥಿಗೆ ಮುಖಭಂಗವಾದ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯತಿಯ 2020 ರ ಡಿಸೆಂಬರ್ 30 ರಂದು ನಡೆದಿದ್ದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಮತ ಎಣಿಕೆ ಸರಿಯಾಗಿಲ್ಲ ಎಂದು ಆರೋಪಿಸಿ ಪರಾಜಿತ ಅಭ್ಯರ್ಥಿಯಾದ ರಾವಸಾಹೇಬ್ ಪಾಟೀಲ್ , ಸಂಕೇಶ್ವರದ ಜೆ.ಎಂ.ಎಫ್.ಸಿ ಕೋರ್ಟ್ ಮೊರೆ ಹೋಗಿದ್ದರು. …
Read More »ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು
ಬೇರೆಯವರ ಹೆಂಡತಿ ಬಗ್ಗೆ ಮಾತನಾಡುವಾಗ ಎಲ್ಲರೂ ಹುಷಾರಾಗಿಬೇಕು ಎನ್ನುವುದಕ್ಕೆ ನಿದರ್ಶನವಾಗಿ ಚಿಕ್ಕೋಡಿಯಲ್ಲೊಂದು ಘಟನೆ ನಡೆದಿದೆ. ಆತ್ಮೀಯ ಸ್ನೇಹಿತರ ನಡುವೆ ಹೆಂಡತಿ ವಿಚಾರ ಬಂದು ಅದು ಕೊಲೆಯಲ್ಲಿ ಅಂತ್ಯಗೊಂಡಿದೆ. ಆಗಿದ್ದೇನೆಂದರೆ, ಹೆಂಡತಿಯೊಂದಿಗೆ ಅಸಭ್ಯವಾಗಿ ವರ್ತಿಸಿದ ಗೆಳೆಯನನ್ನು ವ್ಯಕ್ತಿಯೊಬ್ಬ ಹೆಂಡ ಕುಡಿಸಿ ಕೊಲೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕರೋಶಿಯ ಸುನೀಲ್ ಸಾಳುಂಕೆ(೩೪) ಕೊಲೆಯಾದವನು. ಮಹಾಂತೇಶ ಮತ್ತು ರಾಜು ಎಂಬವರನ್ನು ಈ ಕೊಲೆಗೆ ಸಂಬಂಧಿಸಿ ಬಂಧಿಸಲಾಗಿದೆ. ಅಕ್ಟೋಬರ್ ೭ರಂದು ಈ ಕೊಲೆ …
Read More »ಚುನಾವಣೆ ನಡೆದು ಒಂದೂವರೆ ವರ್ಷದ ಬಳಿಕ ಮರು ಮತ ಎಣಿಕೆ ನಡೆಸಲು ಕೋರ್ಟ್ ಆದೇಶ
ಚಿಕ್ಕೋಡಿ(ಬೆಳಗಾವಿ): ಪಂಚಾಯತ್ ಚುನಾವಣೆ ನಡೆದು ಒಂದೂವರೆ ವರ್ಷ ಕಳೆದ ಬಳಿಕ ಮರು ಮತ ಎಣಿಕೆ ನಡೆಸಲು ನ್ಯಾಯಾಲಯ ಆದೇಶ ಹೊರಡಿಸಿದ್ದು, ಎಲ್ಲರ ಚಿತ್ತ ಕೋರ್ಟ್ನತ್ತ ನೆಟ್ಟಿದೆ. ಈ ಆದೇಶ ತೀವ್ರ ಕುತೂಹಲಕ್ಕೆ ಕಾರಣವಾಗಿದೆ. ಬರುವ ಅ.20 ರಂದು ನ್ಯಾಯಾಧೀಶರ ಸಮ್ಮುಖದಲ್ಲಿ ಮರು ಮತ ಎಣಿಕೆ ಪ್ರಕ್ರಿಯೆ ನಡೆಯಲಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೆಬ್ಬಾಳ ಗ್ರಾಮ ಪಂಚಾಯಿತಿಗೆ ಕಳೆದ 2020 ಡಿಸೆಂಬರ್ 23 ರಂದು ಚುನಾವಣೆ ನಡೆದಿತ್ತು. ಚುನಾವಣಾ ಫಲಿತಾಂಶ …
Read More »,ಕಬ್ಬು ತುಂಬಿದ ಟ್ರ್ಯಾಕ್ಟರಗಳ ಪ್ರವೇಶಕ್ಕೆ ಸಮಯ ನಿಗದಿ ಮಾಡಿರುವ ಎಸಿ ಸಂತೋಷ ಕಾಮಗೌಡರ
ಸದ್ಯ ಕಬ್ಬು ನುರಿಸುವ ಹಂಗಾಮು ಪ್ರಾರಂಭವಾಗಿದೆ.ಇದರಿಂದಾಗಿ ಟ್ರ್ಯಾಕ್ಟರಗಳು ಲೋಡಾಗಿ ಕಬ್ಬನ್ನು ತುಂಬಿಕೊಂಡು ಹೋಗುತ್ತಿರುವದರಿಂದ ಇದು ಜನರ ಪ್ರಾಣಕ್ಕೆ ಕುತ್ತು ತರಬಹುದು .ಇದನ್ನು ತಪ್ಪಿಸಲು ಚಿಕ್ಕೋಡಿ ಎಸಿ ಸಂತೋಷ ಕಾಮಗೌಡರ ಹೊಸ ಪ್ಲ್ಯಾನಯೊಂದನ್ನು ಹಾಕಿದ್ದಾರೆ…ಅದೇನೂ ಅಂತೀರಾ ಹಾಗಾದರೆ ಈ ವರದಿಯನ್ನು ನೋಡಿ… ಚಿಕ್ಕೋಡಿ ಉಪವಿಭಾಗದಲ್ಲಿ ಅತಿ ಹೆಚ್ಚಾಗಿ ಕಬ್ಬನ್ನು ಬೆಳೆಯುತ್ತಾರೆ. ಈಗಾಗಲೇ ಕೆಲ ದಿನಗಳ ಹಿಂದೆ ಕೆಲ ಸಕ್ಕರೆ ಕರ್ಖಾನೆಗಳು ಪ್ರಾರಂಭವಾಗಿವೆ. ಸಕ್ಕರೆ ಕರ್ಖಾನೆಗಳು ಮರುಪ್ರಾರಂಭ ಅಗುತ್ತಿದ್ದಂತೆ ಎಲ್ಲ ಕಡೆಗಳಲ್ಲೂ ಸಹ …
Read More »ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ಕೊಳೆತ ಸ್ಥಿತಿಯಲ್ಲಿ ಯುವಕನೋರ್ವ ಶವ ಪತ್ತೆ
ಕೊಳೆತ ಸ್ಥಿತಿಯಲ್ಲಿ ಯುವಕನೋರ್ವ ಶವ ಪತ್ತೆಯಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಕರೋಶಿ ಗ್ರಾಮದಲ್ಲಿ ನಡೆದಿದೆ. ಸುನೀಲ ಸಾಳುಂಕೆ ಎಂಬ ಯುವಕನ ಶವ ಪತ್ತೆಯಾಗಿದೆ.ಕಳೆದ ರವಿವಾರ ಮುಂಜಾನೆ ರವಿವಾರದಂದು ಮುಂಜಾನೆ ಕೆಲಸಕ್ಕೆ ಹೋಗುತ್ತೇನೆ ಎಂದು ತಾಯಿಗೆ ಹೇಳಿ ಹೊಗಿದ್ದ ಸುನೀಲ ಇಂದು ಕರೋಶಿ ಗ್ರಾಮದ ಹೊರವಲಯದಲ್ಲಿ ಶವವಾಗಿ ಪತ್ತೆಯಾಗಿದ್ದಾನೆ. ಸ್ಥಳಕ್ಕೆ ಚಿಕ್ಕೋಡಿ ಪೊಲೀಸ್’ರು ಭೇಟಿಯನ್ನು ನೀಡಿ ಪ್ರಕರಣದ ಕುರಿತು ತನಿಖೆಯನ್ನು ಕೈಗೆತ್ತಿಕೊಂಡಿದ್ದಾನೆ.ಚಿಕ್ಕೋಡಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
Read More »8ರಂದು ಅಣ್ಣಾಸಾಹೇಬ ಜೊಲ್ಲೆ ಜನ್ಮದಿನ: 2,000 ಅಂಗವಿಕಲರಿಗೆ ಸಲಕರಣೆ ವಿತರಣೆ
ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ‘ಸಂಸದ ಅಣ್ಣಾಸಾಹೇಬ ಜೊಲ್ಲೆ ಅವರ ಜನ್ಮದಿನದ ಅಂಗವಾಗಿ ಅ. 8ರಂದು 2,000 ಅಂಗವಿಕಲರಿಗೆ ಸಾಧನ ಸಲಕರಣೆಗಳನ್ನು ವಿತರಿಸಲಾಗುವುದು’ ಎಂದು ಯಕ್ಸಂಬಾದ ಬಸವಜ್ಯೋತಿ ಯುವ ಫೌಂಡೇಷನ್ ಅಧ್ಯಕ್ಷ ಬಸವಪ್ರಸಾದ ಜೊಲ್ಲೆ ಹೇಳಿದರು. ಪಟ್ಟಣದಲ್ಲಿ ಗುರುವಾರ ನಡೆದ ಪೂರ್ವಸಿದ್ಧತಾ ಸಭೆಯಲ್ಲಿ ಮಾತನಾಡಿದ ಅವರು, ‘ಜೊಲ್ಲೆ ಪರಿವಾರದಲ್ಲಿ ಸಮಾಜ ಸೇವೆಯ ಮೂಲಕವೇ ಜನ್ಮ ದಿನ ಆಚರಿಸಿಕೊಳ್ಳುವ ರೂಢಿ ಇದೆ. ಈ ಬಾರಿ ₹ 75 ಲಕ್ಷ ಮೌಲ್ಯದ ಸಲಕರಣೆಗಳ ವಿತರಣೆ, …
Read More »ಟಿಎಂನಲ್ಲಿ ಸಹಾಯ ಮಾಡುವ ನೆಪದಲ್ಲಿ ವಂಚನೆ: ಆರೋಪಿ ಬಂಧನ
ಚಿಕ್ಕೋಡಿ(ಬೆಳಗಾವಿ): ಎಟಿಎಂನಲ್ಲಿ ಹಣ ತೆಗೆಯುವಾಗ ಸಹಾಯದ ನೆಪದಲ್ಲಿ ವಂಚನೆ ಮಾಡುತ್ತಿದ್ದ ವ್ಯಕ್ತಿಯನ್ನು ಚಿಕ್ಕೋಡಿ ಪೊಲೀಸರು ಬಂಧಿಸಿದ್ದಾರೆ. ಆತನ ಬಳಿಯಿದ್ದ 51 ವಿವಿಧ ಬ್ಯಾಂಕ್ಗಳ ಎಟಿಎಂ ಕಾರ್ಡ್ ಗಳನ್ನು ಜಪ್ತಿ ಮಾಡಿಕೊಂಡಿದ್ದಾರೆ. ಮಹಾರಾಷ್ಟ್ರ ಮೂಲದ ಅಮುಲ್ ದಿಲೀಪ್ ಸಖಟೆ (30) ಬಂಧಿತ ಆರೋಪಿ. ಬೆಳಗಾವಿ ಜಿಲ್ಲೆಯ ಅಥಣಿ, ಚಿಕ್ಕೋಡಿ, ಗೋಕಾಕ್ ಹಾಗೂ ಬಾಗಲಕೋಟೆ ಸೇರಿದಂತೆ ಇತರ ರಾಜ್ಯಗಳಲ್ಲಿನ ಎಟಿಎಂನಲ್ಲಿ ಹಣ ತೆಗೆಯುವಾಗ ಸಹಾಯ ಮಾಡುವುದಾಗಿ ಹೇಳಿ, ಬಳಿಕ ಎಟಿಎ ಕಾರ್ಡ್ ಬದಲಿಸಿ ವಂಚನೆ …
Read More »ನವರಾತ್ರಿ ದಾಂಡಿಯಾ ಉತ್ಸವದಲ್ಲಿ ಶಶಿಕಲಾ ಜೊಲ್ಲೆ ಸಕತ್ ಸ್ಟೆಪ್ಸ್
ಚಿಕ್ಕೋಡಿ: ನವರಾತ್ರಿ (Navaratri) ಹಿನ್ನೆಲೆಯಲ್ಲಿ ಆಯೋಜಿಸಿದ್ದ ದಾಂಡಿಯಾ (Dandiya) ಉತ್ಸವ ಕಾರ್ಯಕ್ರಮದಲ್ಲಿ ಸಚಿವೆ ಶಶಿಕಲಾ ಜೊಲ್ಲೆ (Shashikala Jolle) ಸಕತ್ ಸ್ಟೆಪ್ಸ್ ಹಾಕಿ ಸಂಭ್ರಮಿಸಿದ್ದಾರೆ. ಬೆಳಗಾವಿ (Belgavi) ಜಿಲ್ಲೆಯ ನಿಪ್ಪಾಣಿಯಲ್ಲಿ ಜೊಲ್ಲೆ ಉದ್ಯೋಗ ಸಮೂಹದಿಂದ ಆಯೋಜಿಸಿದ್ದ ದಾಂಡಿಯಾ ಉತ್ಸವದಲ್ಲಿ ಮಹಿಳೆಯರು ಹಾಗೂ ಕುಟುಂಬಸ್ಥರೊಂದಿಗೆ ಶಶಿಕಲಾ ಜೊಲ್ಲೆ ದಾಂಡಿಯಾ ನೃತ್ಯ ಮಾಡಿದ್ದಾರೆ. ರಾಜಸ್ಥಾನಿ ವೇಷಭೂಷಣ ತೊಟ್ಟು ಮಿಂಚಿದ್ದಾರೆ. ಶಶಿಕಲಾ ಜೊತೆಗೆ ಅವರ ಪತಿ ಸಂಸದ ಅಣ್ಣಾಸಾಹೇಬ ಜೊಲ್ಲೆ (Annasaheb Jolle) ಅವರ ಪುತ್ರ …
Read More »ದಸರಾ ಹಬ್ಬಕ್ಕೆಂದು ಊರಿಗೆ ವಾಪಸ್ ಆಗುವಾಗ ಬೈಕ್ ಟೈರ್ ಪಂಕ್ಚರ್ ಆಗಿ ಬೈಕ್ ಅಪಘಾತ ಇಬ್ಬರು ಸ್ಥಳದಲ್ಲೇ ಮೃತಪಟ್ಟು ಮತ್ತಿಬ್ಬರು ಗಂಭೀರ ಗಾಯ ,
ಬೆಳಗಾವಿ : ದಸರಾ ಹಬ್ಬಕ್ಕೆಂದು ಊರಿಗೆ ಹಿಂತಿರುತ್ತಿದ್ದಾಗ ಬೈಕ್ ಟೈರ್ ಪಂಕ್ಚರ್ ಆಗಿ ಬೈಕ್ ಅಪಘಾತಕ್ಕೀಡಾಗಿದ್ದು, ಮಹಿಳೆ ಮತ್ತು ಬಾಲಕಿ ಸ್ಥಳದಲ್ಲೇ ಮೃತಪಟ್ಟು, ಇಬ್ಬರು ಗಂಭೀರ ಗಾಯಗೊಂಡಿರುವ ಘಟನೆ ನಿಪ್ಪಾಣಿ ತಾಲೂಕಿನ ಪುಣೆ ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯ ಕುರ್ಲಿ ಗ್ರಾಮದ ಬಳಿ ನಡೆದಿದೆ. ಜಿಲ್ಲೆಯ ಸವದತ್ತಿ ತಾಲೂಕಿನ ಮುಗುಳಿಹಾಳ ಗ್ರಾಮದ ಲಕ್ಷ್ಮೀ ಕೊಪ್ಪದ (25) ಹಾಗೂ ಭಾಗ್ಯಶ್ರೀ ವಕಮಿ (13) ಅಪಘಾತದಲ್ಲಿ ಮೃತಪಟ್ಟಿದ್ದು, ರಾಮದರ್ಗು ತಾಲೂಕಿನ ಕಟಕೋಳ ಗ್ರಾಮದ ಹಣಮಂತ ಸಕ್ರಿ …
Read More »ಪಿಎಫ್ಐ ಸಂಘಟನೆ ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತಾರ್ಹ: ಕಟೀಲ್
ಚಿಕ್ಕೋಡಿ(ಬೆಳಗಾವಿ): ದೇಶದಲ್ಲಿ ಪಿಎಫ್ಐ ಸಂಘಟನೆಯನ್ನು ಬ್ಯಾನ್ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ನಾನು ಸ್ವಾಗತಿಸುತ್ತೇನೆ. ದೇಶದಲ್ಲಿ ವಿದ್ವಂಸಕ ಕೃತ್ಯ ನಡೆಸುವ ಸಂಸ್ಥೆಗಳು, ಭಯೋತ್ಪಾದನಾ ಕೃತ್ಯಗಳಿಗೆ ಪ್ರೇರಣೆ ನೀಡುವ ಶಕ್ತಿಗಳನ್ನ ನಿಯಂತ್ರಣ ಮಾಡುವ ದೃಷ್ಟಿಯಿಂದ ಪಿಎಫ್ಐ ಮತ್ತು ಅದರ ಅಂಗ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ನಿಷೇಧ ಮಾಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಕಾಗವಾಡದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದ ದಿಟ್ಟ ನಿರ್ಧಾರದಿಂದ ದೇಶದಲ್ಲಿ ಪಿಎಫ್ಐ ಸಂಘಟನೆ …
Read More »