Breaking News

ಚಿಕ್ಕೋಡಿ

ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ

ಆರೋಗ್ಯ ವೃದ್ಧಿಗೆ ಪೌಷ್ಟಿಕ ಆಹಾರ ಅಗತ್ಯ; ಸಚಿವ ಸತೀಶ್ ಜಾರಕಿಹೊಳಿ ಚಿಕ್ಕೋಡಿ: ಮಕ್ಕಳ ಆರೋಗ್ಯ ವೃದ್ಧಿಗೆ ಹಾಗೂ ಅಪೌಷ್ಟಿಕತೆ ತಡೆಗೆ ಸರಕಾರ ಹಲವು ಯೋಜನೆ ಹಾಗೂ ಕಾರ್ಯಕ್ರಮಗಳನ್ನು ಹಾಕಿಕೊಂಡಿದೆ. ಶಿಕ್ಷಕರು ಅವುಗಳ ಕುರಿತು ಅರಿವು ಮೂಡಿಸಬೇಕು. ಆದಷ್ಟೂ ಮಕ್ಕಳಿಗೆ ಬಿಸಿಯೂಟ ನೀಡಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಸೂಚಿಸಿದರು. ತಾಲೂಕಿನ ನಣದಿ ಗ್ರಾಮದ ಕೆಎಚ್‌ ಪಿಎಸ್‌ ಸರ್ಕಾರಿ ಹಿರಿಯ ಪ್ರಾಥಮಿಕ ಕನ್ನಡ ಶಾಲೆಯಲ್ಲಿ ಸೋಮವಾರ ಜಿಲ್ಲಾ ಪಂಚಾಯತ್‌, …

Read More »

ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ: ಕಾಂಬಳೆ

ಚಿಕ್ಕೋಡಿ: ‘ಪೋಷಣ್‌ ಅಭಿಯಾನದ ಮೂಲಕ ಗರ್ಭಿಣಿಯರು, ಬಾಣಂತಿಯರು ಮತ್ತು ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಿ, ಅಪೌಷ್ಟಿಕತೆ ಹೋಗಲಾಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ’ ಎಂದು ಚಿಕ್ಕೋಡಿ ಸಿಡಿಪಿಒ ಸಂತೋಷ ಕಾಂಬಳೆ ಹೇಳಿದರು. ತಾಲೂಕಿನ ಇಂಗಳಿ ಗ್ರಾಮದಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಿಡಿಪಿಒ ಕಚೇರಿ ಆಯೋಜಿಸಿದ್ದ ‘ಪೋಷಣ್‌ ಅಭಿಯಾನ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.   ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಎಚ್.ಸಿದ್ದಪ್ಪಾ ಮಾತನಾಡಿ, ‘ಎಲ್ಲರೂ ಸೇರಿ ಅಭಿಯಾನ ಯಶಸ್ವಿಗೊಳಿಸೋಣ’ ಎಂದರು. ಪ್ರಾಥಮಿಕ ಆರೋಗ್ಯ …

Read More »

ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಗಳಿಸಿದ ರೈತ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ತಾಲ್ಲೂಕಿನ ಕೇರೂರ ಗ್ರಾಮದ ರೈತ ಅಪ್ಪಾಸಾಬ ರೇಂದಾಳೆ ಅವರು, ಒಂದು ಎಕರೆಯಲ್ಲಿ ಕೊತ್ತಂಬರಿ ಸೊಪ್ಪು ಬೆಳೆದು ₹2.5 ಲಕ್ಷ ಆದಾಯ ಗಳಿಸಿದ್ದಾರೆ. ಅಪ್ಪಾಸಾಬ ಅವರಿಗೆ 8 ಎಕರೆ ಜಮೀನಿದೆ. 7 ಎಕರೆಯಲ್ಲಿ ಕಬ್ಬು ಬೆಳೆದಿದ್ದು, 1 ಎಕರೆಯಲ್ಲಿ ಕೊತ್ತಂಬರಿ ಬೀಜ ಬಿತ್ತಿದ್ದರು. ಹದ ಮಳೆ ಸುರಿದಿದ್ದರಿಂದ ಉತ್ತಮ ಇಳುವರಿ ಬಂದಿದೆ. ಕೊತ್ತಂಬರಿ ಸೊಪ್ಪಿನ ದರ ಏರಿಕೆಯಿಂದಾಗಿ ಕೈತುಂಬ ಹಣವೂ ಸಿಕ್ಕಿದೆ. ಕೆ.ಜಿಗೆ ₹370ರ ದರದಲ್ಲಿ ಅಶೋಕ ತಳಿಯ …

Read More »

ಸೈಬರ್‌ ಅಪರಾಧ ತಡೆಗೆ ಯುವಕರ ತಂಡ; ಜನರಿಗೂ ಡಿಜಿಟಲ್ ಸಾಕ್ಷರತೆ

ಚಿಕ್ಕೋಡಿ (ಬೆಳಗಾವಿ ಜಿಲ್ಲೆ): ಜಿಲ್ಲೆಯಲ್ಲಿ ಸೈಬರ್‌ ಅಪರಾಧಗಳನ್ನು ತಡೆಯಲು ಹಾಗೂ ಜನರನ್ನು ಜಾಗೃತಗೊಳಿಸಲು ಯುವಕರ ತಂಡವೊಂದು ನಾಲ್ಕು ವರ್ಷಗಳಿಂದ ಸದ್ದಿಲ್ಲದೇ ಕೆಲಸ ಮಾಡುತ್ತಿದೆ. ‘ಸೈಬರ್‌ ಕ್ರೈಂ ಅವೇರ್‌ನೆಸ್‌ ಟೀಮ್‌ ಚಿಕ್ಕೋಡಿ’ ಎಂಬ ಹೆಸರಿನಲ್ಲಿ ಎಂಟು ಯುವಕರು ತಂಡ ಉಚಿತವಾಗಿ ಡಿಜಿಟಲ್‌ ಸಾಕ್ಷರತೆ ನಡೆಸಿದೆ. 2020ರಲ್ಲಿ ರಚನೆಯಾದ ತಂಡವು ಈವರೆಗೆ 3,700ಕ್ಕೂ ಹೆಚ್ಚು ಸೈಬರ್‌ ವಂಚನೆ ಪ್ರಕರಣಗಳನ್ನು ಭೇದಿಸುವಲ್ಲಿ ಪೊಲೀಸ್‌ ಇಲಾಖೆಗೆ ನೆರವಾಗಿದೆ. 2,500 ‘ಲೋನ್‌ ಆಯಪ್’ ವಂಚನೆ ಪ್ರಕರಣ, 1,000 ವಿಡಿಯೊ …

Read More »

ವಿಜಯೇಂದ್ರ ರಾಜ್ಯಾಧ್ಯಕ್ಷ ಸ್ಥಾನ ಎಂದೂ ಒಪ್ಪಲ್ಲ, ಬಿಜೆಪಿಗೆ ಭ್ರಷ್ಟ ಎಂಬ ಲೇಬಲ್‌ ಕೊಟ್ಟಿದ್ದೇ ಬಿವೈ ವಿಜಯೇಂದ್ರ:ರಮೇಶ್ ಜಾರಕಿಹೊಳಿ

ಚಿಕ್ಕೋಡಿ: ಬಿಜೆಪಿ ( BJP) ನಾಯಕರ ಜೊತೆ ಆರ್‌ಎಸ್‌ಎಸ್ (RSS) ನಡೆಸಿದ ಸಂಘಟನಾ ಸಭೆ ವಿಚಾರವಾಗಿ ಶಾಸಕ ರಮೇಶ್ ಜಾರಕಿಹೊಳಿ (Ramesh Jarkiholi) ಪ್ರತಿಕ್ರಿಯೆ ನೀಡಿದ್ದು, ಈ ಸಂದರ್ಭದಲ್ಲಿ ಸ್ವಪಕ್ಷೀಯ ನಾಯಕರ ವಿರುದ್ಧವೇ ಗುಡುಗಿದ್ದಾರೆ. ರಾಜ್ಯಾಧ್ಯಕ್ಷ ವಿಜಯೇಂದ್ರ (BY Vijayendra) ವಿರುದ್ದ ಮತ್ತೊಮ್ಮೆ ಗುಡುಗಿರುವ ರಮೇಶ್ ಜಾರಕಿಹೊಳಿ, ವಿಜಯೇಂದ್ರನನ್ನು ರಾಜ್ಯಾಧ್ಯಕ್ಷ (BJP State President) ಎಂದು ಒಪ್ಪಿಲ್ಲ ಒಪ್ಪುವುದೂ ಇಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.   ವಿಜಯೇಂದ್ರವ ರಾಜ್ಯಾಧ್ಯಕ್ಷ ಸ್ಥಾನ …

Read More »

ಜೆಸಿಬಿಗೆ ಸಿಲುಕಿ ಮೂರು ವರ್ಷದ ಬಾಲಕಿ ದಾರುಣ ಮೃತ್ಯು

ಚಿಕ್ಕೋಡಿ: ತಾಲೂಕಿನ ಕಬ್ಬೂರ ಪಟ್ಟಣದ ಹನುಮಾನ ನಗರದ ತೋಟದ ಹತ್ತಿರ ಪೈಪಲೈನ್ ಹರಿ ತೆಗಿಯುವಾಗ ಜೆಸಿಬಿಗೆ ಸಿಲುಕಿ 3 ವರ್ಷದ ಬಾಲಕಿ ಮೃತಪಟ್ಟ ಧಾರುಣ ಘಟನೆ ಸಂಭವಿಸಿದೆ. ಪಟ್ಟಣ ಪಂಚಾಯತಿ ವತಿಯಿಂದ ಜಲಕುಂಭ ಕಾಮಗಾರಿಯನ್ನು ರಮೇಶ ಕುಕನೂರ ಎಂಬುವರ ಮನೆ ಮುಂದುಗಡೆ ರಸ್ತೆಯ ಬದಿ ಪೈಪಲೈನ್ ಹರಿ ತೆಗೆಯುವಾಗ ಮನೆಯ ಹತ್ತಿರ ಆಟ ಆಡುತ್ತಿದ್ದ 3 ವರ್ಷದ ಬಾಲಕಿ ಭೂಮಿಕಾ ರಮೇಶ ಕುಕನೂರ ಜೆಸಿಬಿಗೆ ಸಿಲುಕಿ ಮೃತಪಟ್ಟಿದ್ದಾರೆ. ಈ ಘಟನೆಯಿಂದಾಗಿ ಮೃತ …

Read More »

171 ಶಾಲಾ ಕೊಠಡಿ ನಿರ್ಮಾಣ: ಹುಕ್ಕೇರಿ

ಚಿಕ್ಕೋಡಿ: ‘ಕಳೆದ ಎರಡು ವರ್ಷಗಳಲ್ಲಿ ವಾಯವ್ಯ ಶಿಕ್ಷಕರ ಮತಕ್ಷೇತ್ರದಲ್ಲಿ ₹30 ಕೋಟಿ ಮೊತ್ತದಲ್ಲಿ 171 ಶಾಲಾ ಕೊಠಡಿ, ತಲಾ ₹50 ಲಕ್ಷ ಅನುದಾನದಲ್ಲಿ 3 ಪಿಯು ಕಾಲೇಜು ಕಟ್ಟಡಗಳು ನಿರ್ಮಾಣವಾಗುತ್ತಿವೆ’ ಎಂದು ವಿಧಾನ ಪರಿಷತ್ ಸದಸ್ಯ, ಕರ್ನಾಟಕ ಸರ್ಕಾರದ ದೆಹಲಿಯ ವಿಶೇಷ ಪ್ರತಿನಿಧಿ 2 ಪ್ರಕಾಶ ಹುಕ್ಕೇರಿ ಹೇಳಿದರು.   ಪಟ್ಟಣದ ಹೊರ ವಲಯದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಉಪ ನಿರ್ದೇಶಕರ ಕಾರ್ಯಾಲಯ, ಶಾಲಾ ಶಿಕ್ಷಣ ಇಲಾಖೆ, …

Read More »

ಕೊಯ್ನಾ ಜಲಾಶಯದಿಂದ ನೀರು ಬಿಡುವ ಸೂಚನೆ: ನದಿ ತೀರದಲ್ಲಿ ಎಚ್ಚರಿಕೆ

ಚಿಕ್ಕೋಡಿ: ಮಹಾರಾಷ್ಟ್ರ ಕೃಷ್ಣಾ ಹಾಗೂ ಉಪನದಿಗಳ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ ಮುಂದುವರೆದಿದ್ದು, ಕೊಯ್ನಾ ಆಣೆಕಟ್ಟೆಯಿಂದ 32,100 ಕ್ಯುಸೆಕ್ ನೀರನ್ನು ಗುರುವಾರ ಬೆಳಿಗ್ಗೆ 6ರಿಂದ ಹರಿಬಿಡಲಾಗುವುದು ಎಂದು ಮಹಾರಾಷ್ಟ್ರದ ಅಧಿಕಾರಿಗಳು ತಿಳಿಸಿದ್ದಾರೆ.   105 ಟಿಎಂಸಿ ಅಡಿ ನೀರು ಸಂಗ್ರಹ ಸಾಮರ್ಥ್ಯದ ಈ ಜಲಾಶಯದಲ್ಲಿ 101.78 ಟಿಎಂಸಿ ಅಡಿ ನೀರು ಸಂಗ್ರಹವಾಗಿದೆ. ಕೊಂಕಣ ಪ್ರದೇಶದಲ್ಲಿ ಮಳೆ ಹೆಚ್ಚಾಗಿದ್ದರಿಂದ ಆಣೆಕಟ್ಟೆಯಿಂದ ನೀರು ಬಿಡಲು ನಿರ್ಧರಿಸಲಾಗಿದೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ …

Read More »

ಚಿಕ್ಕೋಡಿ: ಮಹಡಿ ಮನೆ ಮೊರೆ ಹೋದ ಜನರು

ಚಿಕ್ಕೋಡಿ: ಮೇಲಿಂದ ಮೇಲೆ ಬರುವ ನದಿ ಪ್ರವಾಹ ಭೀತಿಯಿಂದ ಹೊರ ಬರಲು ನದಿ ತೀರದ ಬಹುತೇಕ ಜನರು ಮಹಡಿ ಮನೆಗಳ ಮೊರೆ ಹೋಗಿದ್ದಾರೆ. ತೋಟದ ವಸತಿ ಪ್ರದೇಶದಲ್ಲೂ ಮಹಡಿ ಮನೆಗಳನ್ನು ನಿರ್ಮಿಸಿಕೊಂಡಿದ್ದಾರೆ. ಚಿಕ್ಕೋಡಿ ಉಪ ವಿಭಾಗ ವ್ಯಾಪ್ತಿಯ ಕೃಷ್ಣಾ ಹಾಗೂ ಉಪ ನದಿಗಳಲ್ಲಿ ಪ್ರತಿ ವರ್ಷ ಮಳೆಗಾಲ ಬಂದರೆ ಸಾಕು ನದಿ ತೀರದ ಜನರು ಜೀವ ಕೈಯಲ್ಲಿ ಹಿಡಿದು ದಿನ ದೂಡಬೇಕಾಗುತ್ತದೆ. ಅದರಲ್ಲೂ ಕೃಷ್ಣಾ ನದಿ ತೀರದ ಚಿಕ್ಕೋಡಿ ತಾಲ್ಲೂಕಿನ ಮಾಂಜರಿ, …

Read More »

ಮಹಾರಾಷ್ಟ್ರದ ಘಟ್ಟ ಪ್ರದೇಶದಲ್ಲಿ ಮಳೆ: ಕೃಷ್ಣಾ ನದಿ ನೀರಿನ ಮಟ್ಟ ದಿಢೀರ್‌ ಏರಿಕೆ

ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟ ಪ್ರದೇಶ ಹಾಗೂ ಜಿಲ್ಲೆಯ ಕೃಷ್ಣಾ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಿಂದಾಗಿ, ದೂಧಗಂಗಾ ನದಿಯ ಮಲಿಕವಾಡ- ದತ್ತವಾಡ ಸೇತುವೆ ಸೋಮವಾರ ಜಲಾವೃತಗೊಂಡಿದೆ. ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ರಾಜಾಪೂರ ಬ್ಯಾರೇಜಿನಿಂದ ಕೃಷ್ಣಾ ನದಿಗೆ 47,250 ಕ್ಯುಸೆಕ್ ಹೊರ ಹರಿವು ಇದೆ. ದೂಧಗಂಗಾ ನದಿಗೆ 15,840 ಕ್ಯುಸೆಕ್ ನೀರು ಹರಿದು ಬರುತ್ತಿದ್ದು, ಚಿಕ್ಕೋಡಿ ತಾಲ್ಲೂಕಿನ ಕಲ್ಲೋಳ-ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಗೆ 63,090 ಕ್ಯುಸೆಕ್ ನೀರು ಹರಿದು ಬರುತ್ತಿದೆ. …

Read More »