ಚಿಕ್ಕೋಡಿ: ಶಿಕ್ಷಣ ಸಚಿವ ಸುರೇಶ್ ಕುಮಾರ್ ಪ್ರಬುದ್ಧರು, ಜೊತೆಗೆ ಉತ್ತಮ ವಾಗ್ಮಿಗಳಾಗಿದ್ದಾರೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರನ್ನು ಆಹಾರ ಹಾಗೂ ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಅವರು ಚಿಕ್ಕೋಡಿಯಲ್ಲಿ ಹಾಡಿಹೊಗಳಿದ್ದಾರೆ. ಇಂದು ನಡೆದ ಎಸ್‍ಎಸ್‍ಎಲ್‍ಸಿ ಪರೀಕ್ಷಾ ಕೇಂದ್ರಗಳಿಗೆ ಸಚಿವ ಉಮೇಶ್ ಕತ್ತಿ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಳಿಕ ಮಾತನಾಡಿದ ಅವರು, ಶಿಕ್ಷಣ ಸಚಿವರು ಜವಾಬ್ದಾರಿಯುತ ಮಂತ್ರಿಯಾಗಿದ್ದಾರೆ. ಉತ್ತಮ ರೀತಿಯಿಂದ ವಿದ್ಯಾರ್ಥಿಗಳಿಗೆ ಯಾವುದೇ ತೊಂದರೆ …
Read More »ಮಳೆರಾಯನ ಅಬ್ಬರ- ಕೃಷ್ಣಾ ನದಿ ನೀರಿನಲ್ಲಿ ಏರಿಕೆ, ಸೇತುವೆ ಜಲಾವೃತ
ಚಿಕ್ಕೋಡಿ: ಮಹಾರಾಷ್ಟ್ರದ ಘಟ್ಟ ಪ್ರದೇಶಗಳಲ್ಲಿ ಮತ್ತೆ ಮಳೆರಾಯನ ಅಬ್ಬರ ಆರಂಭವಾಗಿದೆ. ಕೃಷ್ಣಾ ನದಿಯಲ್ಲಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿ ಸೇತುವೆಗಳು ಜಲಾವೃತವಾಗಿದೆ. ಕಳೆದ ಎರಡು ದಿನಗಳಿಂದ ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶಗಳಲ್ಲಿ ಭಾರಿ ಮಳೆಯಾಗುತ್ತಿದೆ. ಈ ಹಿನ್ನೆಲೆ ಕೃಷ್ಣಾ ನದಿಯಲ್ಲಿ ಒಳಹರಿವಿನ ಪ್ರಮಾಣದಲ್ಲಿ ಹೆಚ್ಚಳವಾದ ಪರಿಣಾಮ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದ ಬಳಿ ಕೃಷ್ಣಾ ನದಿಯ ಕಲ್ಲೋಳ – ಯಡೂರ ಸಂಪರ್ಕ ಸೇತುವೆ ಜಲಾವೃತಗೊಂಡಿದೆ. ಸದ್ಯ 56 ಸಾವಿರ ಕ್ಯೂಸೇಕ್ ನಷ್ಟು …
Read More »ವಿಧವಾ ಮಾಸಾಶನಕ್ಕಾಗಿ ಕಚೇರಿಗೆ ಬಂದಿದ್ದ ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಸಿಲ್ದಾರ ಸಾರ್ವಜನಿಕರಿಂದ ಒದೆ
ವಿಧವಾ ಮಾಸಾಶನಕ್ಕಾಗಿ ಕಚೇರಿಗೆ ಬಂದಿದ್ದ ಮಹಿಳೆಗೆ ಮರ್ಮಾಂಗ ತೋರಿಸಿದ ಗ್ರೇಡ್ 2 ತಹಸಿಲ್ದಾರ ಸಾರ್ವಜನಿಕರಿಂದ ಒದೆ ತಿಂದಿದ್ದಾನೆ. ಚಿಕ್ಕೋಡಿ ಗ್ರೇಡ್ 2 ತಹಸಿಲ್ದಾರ ಜಮಾದಾರ ಎನ್ನುವಾತ ಮಾನಗೇಡಿ ಕೃತ್ಯ ಮಾಡಿದಾತ. ತಾಲೂಕಿನ ಮಹಿಳೆಯೊಬ್ಬಳ ಪತಿ ಕೊರೋನಾದಿಂದ ಸಾವಿಗೀಡಾಗಿದ್ದಾರೆ. ಹಾಗಾಗಿ ತನಗೆ ವಿಧವಾ ಮಾಸಾಶನ ಮಂಜೂರು ಮಾಡುವಂತೆ ಅರ್ಜಿ ಸಲ್ಲಿಸಿದ್ದಾಳೆ. ಆಕೆಯ ಪುತ್ರ ಈ ಸಂಬಂಧ ಹಲವು ಬಾರಿ ತಹಸಿಲ್ದಾರ ಕಚೇರಿಗೆ ಬಂದಿದ್ದಾನೆ. ಆದರೆ ಕೆಲಸ ಮಾಡಿಕಕೊಡದ ಜಮಾದಾರ, ತಾಯಿಯನ್ನು ಕಚೇರಿಗೆ …
Read More »ನೀರಾವರಿ ಯೋಜನೆಯಿಂದ ರೈತರ ಅಭಿವೃದ್ಧಿ-ಸಚಿವೆ ಶಶಿಕಲಾ ಜೊಲ್ಲೆ
ಚಿಕ್ಕೋಡಿ – ನಿಪ್ಪಾಣಿ ತಾಲೂಕಿನ ಸಮಗ್ರ ಅಭಿವೃದ್ಧಿ ಜೊತೆಗೆ ರೈತರ ಅಭಿವೃದ್ಧಿಗೆ ಕೂಡ ಆದ್ಯತೆ ನೀಡಲಾಗಿದೆ. ಕಳೆದ ೩೦-೩೫ ವರ್ಷಗಳಿಂದ ನೀರಿಲ್ಲದೆ ಒಣಗುತ್ತಿರುವ ಬರಡು ಭೂಮಿ ನೀರಾವರಿ ಯೋಜನೆಯಿಂದ ಹಸಿರಿಕರಣವಾಗಲಿದೆ. ಗಂಗಾಕಲ್ಯಾಣ ಯೋಜನೆಯಿಂದ ರೈತರ ಆರ್ಥಿಕ ಅಭಿವೃದ್ಧಿ ಆಗಲಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು. ಸಮೀಪದ ಸೌಂದಲಗಾ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ಮಂಜೂರಾದ ೧.೫ ಕೋಟಿ ವೆಚ್ಚದಲ್ಲಿ ಗಂಗಾಕಲ್ಯಾಣ ನೀರಾವರಿ ಯೋಜನೆಯನ್ನು …
Read More »ಲಂಚ ಪಡೆಯುತ್ತಿದ್ದ ಪಿಎಸ್‌ಐ, ಇಬ್ಬರು ಸಿಬ್ಬಂದಿ ಎಸಿಬಿ ಬಲೆಗೆ
ಚಿಕ್ಕೋಡಿ: ಅನಧಿಕೃತ ಪಾನ್ ಮಸಾಲಾ ಕಾರ್ಖಾನೆ ನಡೆಸುತ್ತಿದ್ದೀರಿ ಎಂದು ಹೆದರಿಸಿ, ಮಾಲೀಕನಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದ ಸದಲಗಾ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಇಬ್ಬರು ಪೊಲೀಸ್ ಪೇದೆಗಳು ಭ್ರಷ್ಟಾಚಾರ ನಿಗೃಹ ದಳ(ಎಸಿಬಿ)ದ ಬಲೆಗೆ ಬಿದ್ದಿದ್ದಾರೆ. ಗುರುವಾರ ರಾತ್ರಿ ಠಾಣೆ ಮೇಲೆ ದಾಳಿ ನಡೆಸಿದ ಎಸಿಬಿ ಅಧಿಕಾರಿಗಳು 40 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಪಿಎಸ್‌ಐ ಕುಮಾರ ಹಿತ್ತಲಮನಿ ಹಾಗೂ ಕಾನ್ಸಟೇಬಲ್ ಮಾಯಪ್ಪಾ ಗಡ್ಡೆ ಮತ್ತು ಶ್ರೀಶೈಲ ಮಂಗಿ ಅವರನ್ನು ವಶಕ್ಕೆ …
Read More »ಬೈಕ್ ಅಪಘಾತ : ಸ್ಥಳದಲ್ಲಿಯೇ ಇಬ್ಬರ ಸಾವು.
ಚಿಕ್ಕೋಡಿ : ಬೈಕ್ ಸವಾರರಿಬ್ಬರು ರಸ್ತೆ ಅಪಘಾತದಲ್ಲಿ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಿಪ್ಪಾಣಿ-ಮುಧೋಳ ರಾಜ್ಯ ಹೆದ್ದಾರಿಯಲ್ಲಿ ನಿನ್ನೆ ರಾತ್ರಿ ನಾಗರಮುನ್ನೊಳ್ಳಿ ಟೋಲ್ ಗೆಟ್ ಹತ್ತಿರ ನಡೆದಿದೆ. ಮೃತರನ್ನು ಸಿದ್ದಾರ್ಥ ಅಶೋಕ ಖೇಮಲಾಪೊರೆ(24) ಮತ್ತು ಪ್ರಮೋದ ಕರೇಪ್ಪ ನಾಯ್ಕ(24) ಅಂತಾ ತಿಳಿದು ಬಂದಿದೆ. ನಿಪ್ಪಾಣಿ ಸಮೀಪದ ಸ್ತವನಿಧಿಗೆ ದೇವರಿಗೆಂದು ಹೋಗಿ ವಾಪಸ್ಸು ತಮ್ಮೂರಾದ ಬೆಲ್ಲದ-ಬಾಗೇವಾಡಿಗೆ ಬರುವಾಗ ನಾಗರಮುನ್ನೊಳ್ಳಿ ಟೋಲ್ ಗೇಟ್ ಹತ್ತಿರ ಮಳೆಯಾದ ಕಾರಣ …
Read More »ಚಿಕ್ಕೋಡಿಯಲ್ಲಿ ದೇವಿಯ ಮೂರ್ತಿಗೆ ಕಣ್ಣು ಅಂಟಿಸಿದ್ದ ಅರ್ಚಕ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಕೆಲ ದಿನಗಳಿಂದ ದೇವಿ ವಿಗ್ರಹ ಕಣ್ಣುಬಿಟ್ಟಿರುವುದೇ ಭಾರಿ ಸುದ್ದಿಯಾಗಿದೆ. ಸಂತೂಬಾಯಿ ದೇವಸ್ಥಾನದ ದೇವಿ ರಾತ್ರೋರಾತ್ರಿ ಕಣ್ಣುಬಿಟ್ಟಿದ್ದು ಅದೆಷ್ಟು ಶರವೇಗದಲ್ಲಿ ಹರಡಿತ್ತು ಎಂದರೆ ಗ್ರಾಮಸ್ಥರು ಮಾತ್ರವಲ್ಲದೇ ಅಕ್ಕಪಕ್ಕದ ಊರಿನವರೂ ಈ ಪವಾಡವನ್ನು ನೋಡಲು ತಂಡೋಪತಂಡವಾಗಿ ಬರತೊಡಗಿದರು. ಕರೊನಾ ತೊಲಗಿಸಲು ಈ ದೇವಿ ಕಣ್ಣು ಬಿಟ್ಟಿರುವುದಾಗಿ ಹೇಳಿದ್ದ ಅರ್ಚಕ, ಈ ದೇವಿಯನ್ನು ಪೂಜೆ ಮಾಡಿದರೆ ಕರೊನಾ ತೊಲಗುವುದಾಗಿ ಹೇಳಿದ್ದರು. ಆದ ಕಾರಣ …
Read More »ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ನಮಗೆ ಗೊತ್ತಾಗಿದೆ: ಉಮೇಶ್ ಕತ್ತಿ
ಚಿಕ್ಕೋಡಿ: ಪರಿಸರದ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಬೇಕು. ಕೊರೊನಾ ಸಂದರ್ಭದಲ್ಲಿ ಆಕ್ಸಿಜನ್ ಬೆಲೆ ಏನೇಂಬುದು ನಮಗೆ ಗೊತ್ತಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಉಮೇಶ್ ಕತ್ತಿ ಹೇಳಿದ್ದಾರೆ. ಹುಕ್ಕೇರಿ ತಾಲೂಕಿನ ಬೆಳವಿ ಗ್ರಾಮದಲ್ಲಿ ನೂರಕ್ಕೂ ಹೆಚ್ಚು ಸಸಿ ನೆಡುವ ಕಾರ್ಯಕ್ರಮಕ್ಕೆ ಉಮೇಶ್ ಕತ್ತಿ ಅವರು ಚಾಲನೆ ನೀಡಿದ್ದಾರೆ. ಈ ವೇಳೆ ಮಾತನಾಡಿದ ಅವರು, ಸಸಿ ನೆಟ್ಟು ಹೆಚ್ಚಿನ ಪ್ರಮಾಣದಲ್ಲಿ ಕಾಡನ್ನು ಬೆಳೆಸಿದರೆ ವಾಯುಮಾಲಿನ್ಯ ನಿರ್ಮೂಲನೆ ಆಗುವುದರ ಜೊತೆಗೆ ಆಕ್ಸಿಜನ್ …
Read More »ಕಾರ ಹುಣ್ಣಿಮೆ ನಿಮಿತ್ತ ಎತ್ತುಗಳ ಮೇಲೆ ಡಿ ಬಾಸ್ ಚಿತ್ರ ಬಿಡಿಸಿ ರೈತರ ಸಂಭ್ರಮ
ಚಿಕ್ಕೋಡಿ(ಬೆಳಗಾವಿ): ಚಾಲೆಂಜಿಗ್ ಸ್ಟಾರ್ ದರ್ಶನ ಅಭಿಮಾನಿಗಳು ಅವರ ಮೇಲಿನ ಪ್ರೀತಿಯಿಂದಾಗಿ ವಿಶಿಷ್ಟವಾಗಿ ತಮ್ಮ ಅಭಿಮಾನವನ್ನ ಪ್ರದರ್ಶನ ಮಾಡುತ್ತಾರೆ. ಅದೇ ರೀತಿ ಉತ್ತರ ಕರ್ನಾಟಕದಲ್ಲಿ ಆಚರಣೆ ಮಾಡುವ ಕಾರ ಹುಣ್ಣಿಮೆಯಲ್ಲೂ ಡಿ ಬಾಸ್ ಅಭಿಮಾನಿಗಳು ವಿಭಿನ್ನವಾಗಿ ತಮ್ಮ ಬಾಸ್ ಮೇಲೆ ಪ್ರೀತಿ ತೋರಿಸಿದ್ದಾರೆ. ಉತ್ತರ ಕರ್ನಾಟಕದಲ್ಲಿ ಆಚರಣೆ ಮಾಡುವ ರೈತರ ಹಬ್ಬ ಕಾರ ಹುಣ್ಣಿಮೆಯ ನಿಮಿತ್ತ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಶಮನೇವಾಡಿ ಗ್ರಾಮದಲ್ಲಿ ಎತ್ತುಗಳ ಮೇಲೆ ದರ್ಶನ ಚಿತ್ರ ಬಿಡಿಸಿ …
Read More »ಪ್ರವಾಹ ಎದುರಿಸಲು ಸಜ್ಜಾಗುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ D.C.M.
ಚಿಕ್ಕೋಡಿ: ಮಳೆಗಾಲ ಶುರುವಾದ ಹಿನ್ನಲೆ ಪ್ರವಾಹ ನಿರ್ವಹಣೆ ಕುರಿತು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸಚಿವ ಗೋವಿಂದ ಕಾರಜೋಳ ಚಿಕ್ಕೋಡಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ. ಕಳೆದವಾರ ಸುರಿದ ಮಳೆಗೆ ಜಿಲ್ಲೆಯ ನದಿಗಳು ಉಕ್ಕಿ ಹರಿದ ಪರಿಣಾಮ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿತ್ತು. ಜಿಲ್ಲೆಯ ಪ್ರಮುಖ ನದಿಗಾಳಾದ ಕೃಷ್ಣಾ, ಮಲಪ್ರಭಾ, ದೂದಗಂಗಾ, ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿದ್ದವು ಸದ್ಯ ಮಳೆಯ ಪ್ರಮಾಣ ತಗ್ಗಿದ್ದು ಮತ್ತೆ ಪರಿಸ್ಥಿತಿ …
Read More »
Laxmi News 24×7