ಚಿಕ್ಕೋಡಿ: ಮನೆ ಗೋಡೆ ಕುಸಿದು ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ಚಿಕ್ಕೋಡಿ ತಾಲೂಕಿನ ಸದಲಗಾ ಪಟ್ಟಣದಲ್ಲಿ ನಡೆದಿದೆ. ಕಲ್ಲಪ್ಪ ಪರಗೌಡರ (70 ) ಮೃತ ದುರ್ದೈವಿ. ಜಿಲ್ಲೆಯಾದ್ಯಂತ ಸತತ ಮಳೆಯಾಗುತ್ತಿದ್ದು, ಮನೆ ಗೋಡೆಗಳು ಮಳೆ ನೀರಿನಿಂದ ಶಿಥೀಲಗೊಂಡಿದ್ದವು. ನಿನ್ನೆಯೂ ಭಾರೀ ಮಳೆಯಾದ ಹಿನ್ನೆಲೆ ಗೋಡೆ ಕುಸಿದು, ನಿದ್ದೆಯಲ್ಲಿದ್ದ ಕಲ್ಲಪ್ಪ ಪರಗೌಡರ ಅವರ ಮೇಲೆ ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
Read More »ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ(ಕಾಳಜಿ) ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು.
ಬೆಳಗಾವಿ: ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಪ್ರವಾಹ ಭೀತಿ ಎದುರಾಗಿದ್ದು, ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು ಮಲಪ್ರಭಾ ನದಿ ತೀರದ ವಿವಿಧ ಗ್ರಾಮಗಳು ಮತ್ತು ಮುಂಜಾಗ್ರತಾ ಕ್ರಮವಾಗಿ ಆರಂಭಿಸಲಾಗಿರುವ ಪರಿಹಾರ(ಕಾಳಜಿ) ಕೇಂದ್ರಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಸವದತ್ತಿ ತಾಲ್ಲೂಕಿನ ನವೀಲುತೀರ್ಥ ಜಲಾಶಯಕ್ಕೆ ಭೇಟಿ ನೀಡಿ ನೀರಿನ ಒಳ ಹರಿವು ಮತ್ತು ಹೊರ ಹರಿವು ಪ್ರಮಾಣದ ಮಾಹಿತಿಯನ್ನು ಪಡೆದುಕೊಂಡರು. ಜಲಾಶಯದ ನೀರಿನ ಮಟ್ಟದ ಮೇಲೆ ನಿರಂತರವಾಗಿ ನಿಗಾ ವಹಿಸಬೇಕು. …
Read More »ಕೊಯ್ನಾ ಜಲಾನಯನ ಪ್ರದೇಶದಲ್ಲಿ ಭೂಕಂಪನ- ಕೃಷ್ಣಾ ನದಿ ತೀರದಲ್ಲಿ ಆತಂಕ
ಚಿಕ್ಕೋಡಿ(ಬೆಳಗಾವಿ): ಮಹಾರಾಷ್ಟ್ರದ ಸಾತಾರಾ ಜಿಲ್ಲೆಯ ಕೊಯ್ನಾ ಜಲಾಶಯದ ಪರಿಸರದಲ್ಲಿ ಇಂದು ಮುಂಜಾನೆ 10.22 ಕ್ಕೆ ಭೂ ಕಂಪನವಾಗಿದ್ದು, ರಿಕ್ಟರ್ ಮಾಪನದಲ್ಲಿ ಕಂಪನದ ತೀವ್ರತೆಯು 2.9 ರಷ್ಟು ದಾಖಲಾಗಿದೆ.ಭೂ ಕಂಪನದ ಹಿನ್ನೆಲೆಯಲ್ಲಿ ಕೊಯ್ನಾ ಜಲಾಶಯದಿಂದ ಹೆಚ್ಚಿನ ಪ್ರಮಾಣದ ನೀರು ಹೊರ ಬಿಡುವ ಬಿಡುವ ಸಾಧ್ಯತೆ ಇದೆ. ಕಳೆದ ಕೆಲವು ದಿನಗಳಿಂದ ಪಶ್ಚಿಮ ಘಟ್ಟಗಳ ಪ್ರದೇಶದಲ್ಲಿ ಎಡೆಬಿಡದೆ ಮಳೆಯಾಗುತ್ತಿದ್ದು, ಮಳೆಯ ಪ್ರಮಾಣವು ಕೊಯ್ನಾ-136 ಮಿ.ಮೀ , ನವಜಾ-82 ಮಿ.ಮೀ, ಮಹಾಬಳೇಶ್ವರ-156ಮಿ.ಮೀ, …
Read More »ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವಂತೆ ಆಗ್ರಹ:
ಚಿಕ್ಕೋಡಿ : ನೆರೆ ಸಂತ್ರಸ್ತರಿಗೆ ಶಾಶ್ವತ ಪರಿಹಾರ ಒದಗಿಸುವ ಜತೆಗೆ ಗ್ರಾಮಗಳನ್ನು ಸ್ಥಳಾಂತರಕ್ಕೆ ಒತ್ತಾಯಿಸಿ ಶುಕ್ರವಾರ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನವರ ಅವರಿಗೆ ಮನವಿ ಸಲ್ಲಿಸಿದರು. ಕಳೆದ ವರ್ಷ ಪ್ರವಾಹ ಬಂದಾಗ ನೆರೆ ಸಂತ್ರಸ್ತರಿಗೆ ಸರಕಾರ ಕೇವಲ 10 ಸಾವಿರ ರೂ.ಪರಿಹಾರಧನ ನೀಡಿ ಕೈ ತೊಳೆದುಕೊಂಡಿದೆ. ಅದು ಸಹ ಕೆಲವರಿಗೆ ಮುಟ್ಟಿಲ್ಲ. ಹೀಗಾಗಿ ಪ್ರವಾಹ ಸಂತ್ರಸ್ತರ ಕುಟುಂಬಗಳಿಗೆ ಕೂಡಲೇ ಧನ ಸಹಾಯ ಒದಗಿಸಬೇಕು. ಪ್ರವಾಹ ಸಂತ್ರಸ್ತರ ಮನೆ …
Read More »ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆ ಮತ್ತು ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲ:ಬಿ.ಆರ್.ಸಂಗಪ್ಪಗೋಳ
ಚಿಕ್ಕೋಡಿ: ರಾಜ್ಯದಲ್ಲಿ ನಡೆಯುತ್ತಿರುವ ಕೋಮು ಗಲಭೆ ಮತ್ತು ಕೊರೊನಾ ನಿಯಂತ್ರಿಸುವಲ್ಲಿ ರಾಜ್ಯ ಸರಕಾರ ಸಂಪೂರ್ಣ ವಿಫಲವಾಗಿದೆ ಎಂದು ಜಿಲ್ಲಾ ಹೋರಾಟ ಸಮಿತಿ ಅಧ್ಯಕ್ಷ ಬಿ.ಆರ್.ಸಂಗಪ್ಪಗೋಳ ಆರೋಪಿಸಿದರು. ಪಟ್ಟಣದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಶಾಸಕರ ಮೇಲೆ ಮತ್ತು ಪೊಲೀಸ ಅಧಿಕಾರಿಗಳ ಮೇಲೆ ಹಲ್ಲೆ ನಡೆಯುತ್ತಿರುವುದನ್ನು ಕಂಡರೇ ಬೆಂಗಳೂರು ಬಿಹಾರ ಆಗಿದಂತೆ ಕಾಣುತ್ತಿದೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಅಧಿಕಾರದಿಂದ ಕೆಳಗೀಳಿಸುವ ಹುನ್ನಾದ ಬಿಜೆಪಿ ಪಕ್ಷದಲ್ಲಿರುವ ಕೆಲವು …
Read More »ಶಿವಸೇನೆ ಷಡ್ಯಂತ್ರಕ್ಕೆ ಗ್ರಾಮಸ್ಥರ ಮಂಗಳಾರತಿ; ಮಣಗುತ್ತಿ ಶಿವಾಜಿ ಮೂರ್ತಿ ವಿವಾದ ಇತ್ಯರ್ಥ
ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಮಣಗುತ್ತಿ ಗ್ರಾಮದಲ್ಲಿ ನಡೆದ ಶಿವಾಜಿ ಮೂರ್ತಿ ಪ್ರತಿ ಸ್ಥಾಪನೆ ಪ್ರಕರಣ ಕೊನೆಗೆ ಅಂತ್ಯ ಕಂಡಿದೆ. ಶಿವಾಜಿ ಮೂರ್ತಿ ವಿಚಾರವನ್ನೆ ಮುಂದಿಟ್ಟುಕೊಂಡು ರಾಜಕೀಯ ಮಾಡಲು ಹೊರಟಿದ್ದ ಎಂ.ಇ.ಎಸ್. ಹಾಗೂ ಶಿವಸೇನೆಗೆ ತೀವ್ರ ಮುಖ ಭಂಗವಾಗಿದೆ. ಹೌದು, ಕಳೆದ ಒಂದು ವಾರದಿಂದಲೂ ಮಣಗುತ್ತಿ ಗ್ರಾಮದಲ್ಲಿ ಶಿವಾಜಿ ಮಹಾರಾಜರ ಮೂರ್ತಿ ಪ್ರತಿ ಸ್ಥಾಪನೆ ಮಾಡುವ ವಿಚಾರವಾಗಿ ಹಲವಾರು ಗಲಾಟೆಗಳು ನಡೆದಿದ್ದವು. ಶಿವಸೇನೆಯ ಕುಮ್ಮಕ್ಕಿನಿಂದ ಸುಳ್ಳು ಪ್ರಚಾರ ಪಡೆದಿದ್ದ …
Read More »ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಸೋಲಾರ್ ಲ್ಯಾಂಪ್ ಹಾಗೂ ಸೋಲಾರ್ ವಾಟರ್ ಹೀಟರ್ ವಿತರಿಸಿದರು.
ಚಿಕ್ಕೋಡಿ – ಚಿಕ್ಕೋಡಿ -ಸದಲಗಾ ಶಾಸಕ ಗಣೇಶ ಹುಕ್ಕೇರಿ ಮಂಗಳವಾರ ಸೋಲಾರ್ ಲ್ಯಾಂಪ್ ಹಾಗೂ ಸೋಲಾರ್ ವಾಟರ್ ಹೀಟರ್ ವಿತರಿಸಿದರು. ಅರಣ್ಯ ಇಲಾಖೆಯ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯ ಅಡಿಯಲ್ಲಿ ವಿಶೇಷ ಪ್ರಯತ್ನ ಮಾಡಿ ಗಣೇಶ ಹುಕ್ಕೇರಿ ಬಡ ಜನರಿಗೆ ಈ ಸೌಲಭ್ಯ ಕೊಡಿಸಿದ್ದಾರೆ. ಸರಕಾರ ಯಾವುದೇ ಇರಲಿ, ಕ್ಷೇತ್ರದ ಜನರಿಗೆ ಎಲ್ಲ ರೀತಿಯ ಸೌಲಭ್ಯ ಕೊಡಿಸಲು ನಾನು ಮತ್ತು ಮಾಜಿ ಸಚಿವ ಪ್ರಕಾಶ ಹುಕ್ಕೇರಿ ನಿರಂತರವಾಗಿ ಪ್ರಯತ್ನ …
Read More »ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಫಲಿತಾಂಶ ಪಡೆದ ವಿದ್ಯಾರ್ಥಿನಿಗೆ ಸನ್ಮಾನ
ಚಿಕ್ಕೋಡಿ: ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ರ್ಯಾಂಕ್ ಪಡೆದುಕೊಂಡು ನಮ್ಮ ಶಾಲೆ ಹಾಗೂ ಜಿಲ್ಲೆಗೆ ಕೀರ್ತಿ ತಂದಿರುವ ವಿದ್ಯಾರ್ಥಿನಿ ಸಹನಾ ಶಂಕರ ಕಾಮಗೌಡ ಅವಳ ಮುಂದಿನ ವಿದ್ಯಾಭ್ಯಾಸದ ಸಮಗ್ರ ಖರ್ಚು ವೆಚ್ಚವನ್ನು ಸಂಸ್ಥೆ ಭರಿಸಲಿದೆ ಎಂದು ಸಿಎಲ್‍ಇ ಸಂಸ್ಥೆ ಕಾರ್ಯದರ್ಶಿ ಜಗದೀಶ ಕವಟಗಿಮಠ ತಿಳಿಸಿದರು. ಇಲ್ಲಿನ ಸಿಎಲ್‍ಇ ಸಂಸ್ಥೆಯ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡ ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ರ್ಯಾಂಕ ಪಡೆದ ಎಂ.ಕೆ.ಕವಟಗಿಮಠ ಪ್ರೌಢ ಶಾಲೆಯ ವಿದ್ಯಾರ್ಥಿನಿ ಸಹನಾ ಶಂಕರ ಕಾಮಗೌಡ …
Read More »ತುರ್ತು ಪರಿಸ್ಥಿತಿ ನಿರ್ವಹಣೆಗೆ ಸರ್ಕಾರ ಬದ್ಧ : ಜೊಲ್ಲೆ
: ಚಿಕ್ಕೋಡಿ: ಕೊಂಕಣ ಭಾಗದಲ್ಲಿ ಅತಿಯಾದ ಮಳೆಯಿಂದ ಉಂಟಾಗುವ ಪ್ರವಾಹ ನಿಯಂತ್ರಿಸಲು ಜಿಲ್ಲಾಡಳಿತ ಎಲ್ಲ ವ್ಯವಸ್ಥೆ ಮಾಡಿಕೊಂಡಿದೆ. ಶೀಘ್ರ ಕೊಲ್ಲಾಪುರ ಜಿಲ್ಲೆಯ ನೀರಾವರಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಹಾರಾಷ್ಟ್ರದ ಜಲಾಶಯಗಳಿಂದ ಬೀಡುವ ನೀರಿನ ಪ್ರಮಾಣದ ಕುರಿತು ಮಾಹಿತಿ ಪಡೆಯಲಾಗುತ್ತದೆ ಎಂದು ಸಂಸದ ಅಣ್ಣಾಸಾಹೇಬ ಜೊಲ್ಲೆ ಹೇಳಿದರು. ಶುಕ್ರವಾರ ಸದಲಗಾ ಪಟ್ಟಣದ ದೂಧಗಂಗಾ ನದಿಯ ಸಂಭವನೀಯ ಪ್ರವಾಹ ಅವಲೋಕಿಸಿ ಮಾತನಾಡಿ, ಉಕ್ಕಿ ಹರಿಯುತ್ತಿರುವ ದೂಧಗಂಗಾ ನದಿ ನೀರಿನಿಂದ ಜನಸಾಮಾನ್ಯರಿಗೆ ಯಾವುದೇ ರೀತಿಯ …
Read More »ಚಿಕ್ಕೋಡಿ ಪೊಲೀಸ ಠಾಣೆ ಯನ್ನು ಸೀಲ್‍ಡೌನ್ ಮಾಡಲಾಗಿದೆ.
ಚಿಕ್ಕೋಡಿ : ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಕೊರೊನಾ ಇದೀಗ ಚಿಕ್ಕೋಡಿ ಪೊಲೀಸ ಠಾಣೆಗೂ ವಕ್ಕರಿಸಿಕೊಂಡಿದ್ದು, ಪೊಲೀಸ್ ಠಾಣೆಯನ್ನು ಸೀಲ್‍ಡೌನ್ ಮಾಡಲಾಗಿದೆ. ಚಿಕ್ಕೋಡಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿಯೊಬ್ಬರಿಗೆ ಕೊರೊನಾ ಸೊಂಕು ಧೃಢಪಟ್ಟಿದ್ದು, ಸಿಬ್ಬಂದಿಯಲ್ಲಿ ಆತಂಕ ಮನೆ ಮಾಡಿದೆ.
Read More »