ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಬೇರೆ ಪಕ್ಷದ ಅಭ್ಯರ್ಥಿಗಳನ್ನ ಸೆಳೆದು ಆಪರೇಷನ್ ಕಮಲದ ಮೂಲಕ ಗುರುತಿಸಿಕೊಳ್ಳುವ ಬಿಜೆಪಿ ಪಕ್ಷ ಈಗ ಸ್ಥಳೀಯ ಸಂಸ್ಥೆಗಳಾದ ಹುಕ್ಕೇರಿ ಮತ್ತು ಸಂಕೇಶ್ವರ ಪುರಸಭೆಯ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನದ ಚುನಾವಣೆಯಲ್ಲೂ ಆಪರೇಷನ್ ಕಮಲ ನಡೆಸಿ ಅಧಿಕಾರ ಪಡೆಯಲು ಶಾಸಕ ಉಮೇಶ್ ಕತ್ತಿ, ಸಹೋದರ ರಮೇಶ್ ಕತ್ತಿ ಹಾಗೂ ಸಂಸದ ಅಣ್ಣಾಸಾಹೇಬ ಜೊಲ್ಲೆ ನೇತೃತ್ವದಲ್ಲಿ ಸಿದ್ಧತೆ ನಡೆದಿದೆ ಬಿಜೆಪಿ ಪಕ್ಷ ಕೇವಲ ರಾಜ್ಯ ಹಾಗೂ ರಾಷ್ಟ್ರ ಮಟ್ಟದಲ್ಲಿ ಆಪರೇಷನ್ …
Read More »ಬೆಳಗಾವಿ ಲೋಕಸಭೆ ಚುನಾವಣೆ ದಿ.ಸುರೇಶ ಅಂಗಡಿ ಕುಟುಂಬ ಹೊರತು ಪಡಿಸಿ ಟಿಕೆಟ್ ನೀಡಿದರೇ ಕಾಂಗ್ರೆಸ್ ಬಿಜೆಪಿ ಯಾರೇ ಟಿಕೆಟ್ ನೀಡಿದರೂ ಸ್ಪರ್ಧಿಸಲು ಸಿದ್ದ- ಪ್ರಕಾಶ ಹುಕ್ಕೇರಿ
ಚಿಕ್ಕೋಡಿ: ಕೇಂದ್ರ ಸಚಿವ ದಿ.ಸುರೇಶ ಅಂಗಡಿ ನಿಧನದಿಂದ ತೆರವಾದ ಬೆಳಗಾವಿ ಲೋಕಸಭೆ ಕ್ಷೇತ್ರದ ಉಪಚುನಾವಣೆಯಲ್ಲಿ ಸುರೇಶ ಅಂಗಡಿ ಕುಟುಂಬ ಹೊರತು ಪಡಿಸಿ ಟಿಕೆಟ್ ನೀಡಿದರೇ ಕಾಂಗ್ರೆಸ್ ಅಥವಾ ಬಿಜೆಪಿ ಪಕ್ಷದಿಂದ ಸ್ಪರ್ಧಿಸಲು ನಾನು ಸಿದ್ಧ ಎಂದು ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹೊಸ ಬಾಂಬ್ ಸಿಡಿಸಿದರು. ಚಿಕ್ಕೋಡಿ ತಾಲೂಕಿನ ಪ್ಯಾಕ್ಟರಿ ಕ್ರಾಸ್ ಬಳಿ ಪೆಟ್ರೋಲ್ ಬಂಕ್ ಉದ್ಘಾಟಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಸುರೇಶ ಅಂಗಡಿ ಬಿಜೆಪಿಯಲ್ಲಿ ಇದ್ದರೇ …
Read More »ಚಿಕ್ಕೋಡಿ ಪುರಸಭೆಗೆ ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆ
ಚಿಕ್ಕೋಡಿ: ಚಿಕ್ಕೋಡಿ ಪುರಸಭೆಗೆ ಬಿಜೆಪಿ ಬೆಂಬಲಿತ ಪ್ರವೀಣ ಕಾಂಬಳೆ ಅಧ್ಯಕ್ಷರಾಗಿ, ಸಂಜಯ ಕವಟಗಿಮಠ ಉಪಾಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದರು. ಚುನಾವಣಾಧಿಕಾರಿಯಾಗಿ ತಹಶೀಲ್ದಾರರ ಸುಭಾಷ ಸಂಪಗಾವಿ ಕಾರ್ಯನಿರ್ವಹಿಸಿದರು. 23 ಸದಸ್ಯರ ಬಲದ ಪುರಸಭೆಯಲ್ಲಿ 13 ಬಿಜೆಪಿ ಬೆಂಬಲಿತ ಹಾಗೂ 10 ಕಾಂಗ್ರೆಸ್ ಬೆಂಬಲಿತ ಸದಸ್ಯರು ಆಯ್ಕೆಯಾಗಿದ್ದರು. ಬಿಜೆಪಿ ಬೆಂಬಲಿತ ಅಭ್ಯರ್ಥಿಗಳಿಂದ ಮಾತ್ರ ನಾಮಪತ್ರ ಸಲ್ಲಿಕೆಯಾಗಿದ್ದರಿಂದ ಚುನಾವಣಾಧಿಕಾರಿ ಅವಿರೋಧವಾಗಿ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ವಿಧಾನ ಪರಿಷತ್ ಮುಖ್ಯಸಚೇತಕ ಮಹಾಂತೇಶ …
Read More »ಯುವಕನ ಹುಚ್ಚಾಟ: ಟೆಲಿಫೋನ್ ಟವರ್ ಮೇಲಿಂದ ನದಿಗೆ ಹಾರಿ ಈಜಾಟ!
ಚಿಕ್ಕೋಡಿ: ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಭೀಕರವಾಗಿದೆ. ಕೃಷ್ಣಾ ನದಿಯಂತೂ ಅಪಾಯದ ಮಟ್ಟ ಮೀರಿ ಹರಿಯುತ್ತಿದೆ. ಆದ್ರೆ ತುಂಬಿತುಳುಕುತ್ತಿರುವ ಕೃಷ್ಣಾ ನದಿಯಲ್ಲಿ ಯುವಕನೊಬ್ಬ ಹುಚ್ವಾಟ ಮೆರೆದಿದ್ದಾನೆ. ಟವರ್ ಮೇಲೇರಿ ನದಿಗೆ ಹಾರಿ ಮನಸಾರೆ ಈಜಾಟ ನಡೆಸಿದ ಯುವಕ ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಕಲ್ಲೋಳ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ಯುವಕ ಸಾಗರ್ ಕೋಳಿ ಎಂಬಾತನೇ ಈ ಹುಚ್ಚಾಟ ಮೆರೆದವ. ಸಾಗರ್ ಕೋಳಿ, ಟೆಲಿಫೋನ್ ಟವರ್ ಮೇಲೇರಿ ಅಲ್ಲಿಂದ ನದಿಗೆ ಹಾರಿ ಮನಸಾರೆ …
Read More »ಮಹಾರಾಷ್ಟ್ರ ಘಟ್ಟ ಪ್ರದೇಶ ಹಾಗೂ ಚಿಕ್ಕೋಡಿ ಉಪವಿಭಾಗದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದೆ.
ಚಿಕ್ಕೋಡಿ: ಮಹಾರಾಷ್ಟ್ರ ಘಟ್ಟ ಪ್ರದೇಶ ಹಾಗೂ ಚಿಕ್ಕೋಡಿ ಉಪವಿಭಾಗದಲ್ಲಿ ಹೆಚ್ಚಾಗಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಕೃಷ್ಣಾನದಿಗೆ ಅಪಾರ ಪ್ರಮಾಣದ ನೀರು ಹರಿದುಬಂದಿದೆ. ರಾಜಾಪೂರ ಹಾಗೂ ಹಿಪ್ಪರಗಿ ಬ್ಯಾರೆಜ್ಗಳಿಂದ1,21,500 ಕ್ಯೂಸೆಕ್, ಕೊಯ್ನಾ, ಆಲಮಟ್ಟಿ ಜಲಾಶಯಗಳಿಂದ ಕ್ಯೂಸೆಕ್,1,51,000 ಕ್ಯೂಸೆಕ್ ಹಾಗೂ ದೂಧಗಂಗಾ ನದಿಯಿಂದ 11,616 ಕ್ಯೂಸೆಕ್ ಸೇರಿ ಒಟ್ಟು 2,84,116 ಕ್ಯೂಸೆಕ್ ನೀರನ್ನು ಕೃಷ್ಣಾನದಿಗೆ ಬಿಡಲಾಗಿದೆ. ಮಹಾರಾಷ್ಟ್ರದಲ್ಲಿ ಪ್ರದೇಶಗಳ ಮಳೆಯ ಪ್ರಮಾಣ ಕೊಯ್ನಾ – 64 ಮಿ.ಮೀ, ನವಜಾ-67 ಮಿ.ಮೀ, ಮಹಾಬಲೇಶ್ವರ -126 …
Read More »ಕುಂಭದ್ರೋಣ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದ ರೈತರು ಕಂಗಾಲಾಗಿದ್ದಾರೆ.
ಚಿಕ್ಕೋಡಿ: ಬೆಳೆಗಳೆಲ್ಲವೂ ಭರಪೂರ ಬಂದಿದ್ದು, ಇನ್ನೇನು ಕಟಾವು ಮಾಡಬೇಕೆಂದು ಕೆಲ ರೈತರು ಯೋಚಿಸಿದರೆ, ಕೆಲ ರೈತರು ಫಸಲಿಗೆ ಬಂದ ಬೆಳೆಗಳನ್ನು ಕಟಾವು ಮಾಡಿ ರಾಶಿ ಮಾಡಲು ಮುಂದಾದ ಸಂದರ್ಭದಲ್ಲೇ ಕುಂಭದ್ರೋಣ ಮಳೆಯಿಂದ ಚಿಕ್ಕೋಡಿ ಉಪ ವಿಭಾಗದ ರೈತರು ಕಂಗಾಲಾಗಿದ್ದಾರೆ. ಕಳೆದ ಎರಡು-ಮೂರು ದಿನಗಳಿಂದ ಭಾರಿ ಮಳೆ ಸುರಿಯುತ್ತಿದ್ದು, ಮಳೆಯ ಜೊತೆಗೆ ಗಾಳಿಯೂ ಸಹಿತ ಜೋರಾಗಿ ಬೀಸುತ್ತಿರುವ ಪರಿಣಾಮ ಗೋವಿನ ಜೋಳ ಹಾಗೂ ಕಬ್ಬಿನ ಬೆಳೆ ನೆಲಸಮವಾಗಿವೆ. ಈ ಬಾರಿ ಮಳೆ …
Read More »ಮಹಾತ್ಮ ಗಾಂಧೀಜಿ ಅವರು ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಎರಡು ದಿನ ವಾಸ್ತವ್ಯ ಹೂಡಿದ್ದಲ್ಲದೇ, ಪಟ್ಟಣಕ್ಕೂ ಭೇಟಿ ನೀಡಿದ್ದರು.
ಚಿಕ್ಕೋಡಿ: ಮಹಾತ್ಮ ಗಾಂಧೀಜಿ ಅವರು ತಾಲ್ಲೂಕಿನ ನವಲಿಹಾಳ ಗ್ರಾಮದಲ್ಲಿ ಎರಡು ದಿನ ವಾಸ್ತವ್ಯ ಹೂಡಿದ್ದಲ್ಲದೇ, ಪಟ್ಟಣಕ್ಕೂ ಭೇಟಿ ನೀಡಿದ್ದರು. 1934ರ ಫೆಬ್ರುವರಿ ಮತ್ತು ಮಾರ್ಚ್ನಲ್ಲಿ ಕರ್ನಾಟಕ ವಿವಿಧ ಜಿಲ್ಲೆಗಳಲ್ಲಿ ಸಂಚಿರಿಸಿದ್ದರು. 1934ರ ಮಾರ್ಚ್ 7 ಮತ್ತು 8ರಂದು ತಾಲ್ಲೂಕಿನ ನವಲಿಹಾಳದ ಅಕ್ಕಾಚಂದ್ ಮೆಹತಾ ಎನ್ನುವವರ ಮನೆಯಲ್ಲಿ ವಾಸ್ತವ್ಯ ಹೂಡಿದ್ದರು. ಆ ಮನೆ ಇಂದು ಪಾಳು ಬಿದ್ದಿದೆ. ‘ರಾಷ್ಟ್ರಪಿತನ ಪಾದಸ್ಪರ್ಶದಿಂದ ಪಾವನಗೊಂಡಿರುವ ಗ್ರಾಮದಲ್ಲಿ ಗಾಂಧಿ ಸ್ಮಾರಕ ನಿರ್ಮಿಸಬೇಕು’ ಎನ್ನುವುದು ಸಾರ್ವಜನಿಕರ ಆಗ್ರಹವಾಗಿದೆ. …
Read More »ಅಂಗಡಿ ಕುಟುಂಬ ಹೊರತುಪಡಿಸಿ ಟಿಕೆಟ್ ನೀಡೋದಾದ್ರೆ ಕತ್ತಿಗೆ ನೀಡಿ – ಅಭಿಮಾನಿಗಳ ಆಗ್ರಹ
ಚಿಕ್ಕೋಡಿ(ಬೆಳಗಾವಿ): ಇತ್ತಿಚೆಗೆ ನಿಧನರಾದ ಬೆಳಗಾವಿ ಸಂಸದ ಹಾಗೂ ರಾಜ್ಯ ರೇಲ್ವೆ ಸಚಿವರಾಗಿದ್ದ ದಿ. ಸುರೇಶ್ ಅಂಗಡಿ ನಿಧನದ ಬೆನ್ನಲ್ಲೇ ಬೆಳಗಾವಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಈಗಾಗಲೇ ಸುರೇಶ್ ಅಂಗಡಿ ಕುಟುಂಬಕ್ಕೆ ಸಾಂತ್ವನ ಹೇಳಲು ನಳಿನ್ ಕುಮಾರ್ ಭೇಟಿ ನೀಡಿ ಟಿಕೆಟ್ ಸಂಬಂಧಿಸಿದಂತೆ ಅನೌಪಚಾರಿಕ ಸಭೆ ಕೂಡ ನಡೆಸಿದ್ದಾರೆ ಎನ್ನಲಾಗುತ್ತಿದೆ. ಈಗಾಗಲೇ ಮುಂಬರುವ ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಗಾಗಿ ಕಮಲ ನಾಯಕರಲ್ಲಿ ಪೈಪೋಟಿ ಶುರುವಾಗಿದ್ದು, ಈ ಪೈಕಿ ಹಲವು ನಾಯಕರು …
Read More »ಆಪರೇಷನ್ ಕಮಲ ಮಾಡುವುದಕ್ಕೆ ದೆಹಲಿಗೆ ತೆರಳಿದ್ದೆನೆ ಎಂಬುವುದು ಸುಳ್ಳು. ನಾನು ಮಹಾದಾಯಿ ವಿಚಾರವಾಗಿ ಚರ್ಚಿಸಲು ಹೋಗಿದ್ದೆ
ಗೋಕಾಕ್: ಮಹಾರಾಷ್ಟ್ರದಲ್ಲಿ ಆಪರೇಷನ್ ಕಮಲ ಮಾಡುವುದಕ್ಕೆ ದೆಹಲಿಗೆ ತೆರಳಿದ್ದೆನೆ ಎಂಬುವುದು ಸುಳ್ಳು. ನಾನು ಮಹಾದಾಯಿ ವಿಚಾರವಾಗಿ ಚರ್ಚಿಸಲು ಹೋಗಿದ್ದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ. ನಗರದ ಅಡಿಬಟ್ಟಿ ಕಾಲೋನಿಯಲ್ಲಿ ಪೌರಕಾರ್ಮಿಕರ ಗೃಹ ಭಾಗ್ಯ ಯೋಜನೆ ಯಡಿಯಲ್ಲಿ ನಿರ್ಮಿಸಿದ ಪೌರಕಾರ್ಮಿಕರ ವಸತಿ ಸಮುಚ್ಛಯ ಕಟ್ಟಡಗಳನ್ನು ಇಂದು ಉದ್ಘಾಟಿಸಿ, ಮಾತನಾಡಿದರು. ಪೌರ ಕಾರ್ಮಿಕರಿಗಾಗಿ ಜಿ+2ಮಾದರಿಯಲ್ಲಿ ಮನೆ ನಿರ್ಮಾಣ ಮಾಡಿ ಕೊಡಲಾಗಿದೆ. ಮುಂದಿನ ಹಂತದಲ್ಲಿ 10 ಎಕರೆ ಜಾಗದಲ್ಲಿ ಇನ್ನಷ್ಟು ಮನೆಗಳನ್ನು …
Read More »ಖಡಕಲಾಟ ಪೊಲೀಸರ್ ಭರ್ಜರಿ ಕಾರ್ಯಾಚರಣೆ 8.61 ಲಕ್ಷ ಮೌಲ್ಯದ ವಸ್ತುಗಳು ವಶ
ಚಿಕ್ಕೋಡಿ:ರಸ್ತೆ ಬದಿಯಲ್ಲಿರುವ ಹಾಗೂ ಹೊಲ ಮನೆಯ ಹತ್ತಿರ ನಿಲ್ಲಿಸಿದ ಟ್ರಾಕ್ಟರ್ ಟ್ರೇಲರ್ಗಳನ್ನು ಹಾಗೂ ಡಿಸ್ಕ ಸಮೇತ 46 ಟಾಯರಗಳನ್ನು ಕಳ್ಳತನ ಮಾಡಿದ ಆರೋಪಿಗಳನ್ನು ಖಡಕಲಾಟ ಪೋಲಿಸರು ಬಂಧಿಸಿದ್ದಾರೆ. ಆರೋಪಿತರು ನಿಪ್ಪಾಣಿ ತಾಲೂಕಿನ ಗಳತಗಾ ಗ್ರಾಮದ ಮಾರುತಿ ಬಸಪ್ಪಾ ಠೊಣ್ಣೆ (24), ಮಹಾದೇವ ಮುರಾರಿ ಮಾಕಾಳೆ (27), ಬಾಬು ಸಿದ್ದಪ್ಪಾ ಡಾಲೆ (37), ಶಿವಾನಂದ ಮಾರುತಿ ಗಜಬರ (29), ಖಾನಾಪೂರ ತಾಲೂಕಿನ ಕಕ್ಕೇರಿ ಗ್ರಾಮದ ಸಂಜು ಬಿಷ್ಟಪ್ಪಾ ಅಂಬಡಗಟ್ಟಿ …
Read More »