Breaking News

ಚಿಕ್ಕೋಡಿ

ಚಿಕ್ಕೋಡಿ ಪೊಲೀಸ್ ಠಾಣೆ ಪೇದೆ ಓರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ

ಚಿಕ್ಕೋಡಿ: ಕರ್ತವ್ಯ ಮುಗಿಸಿ ಊರಿಗೆ ತೆರಳುತ್ತಿದ್ದ ಚಿಕ್ಕೋಡಿ ಪೊಲೀಸ್ ಠಾಣೆ ಪೇದೆ ಓರ್ವ ರಸ್ತೆ ಅಪಘಾತದಲ್ಲಿ ಮೃತಪಟ್ಟ ಧಾರುಣ ಘಟನೆ ಚಿಕ್ಕೋಡಿ ತಾಲೂಕಿನ ನಾಗರಮುನ್ನೋಳ್ಳಿ ಗ್ರಾಮದ ಹತ್ತಿರ ಗುರುವಾರ ಸಂಭವಿಸಿದೆ. ಮೃತ ಪೇದೆ ರಮೇಶ ನಾಯಿಕ(೨೫) ಎಂದು ಗುರ್ತಿಸಲಾಗಿದೆ. ಈತನು ಕರ್ತವ್ಯ ಮುಗಿಸಿ ದ್ವಿಚಕ್ರ ವಾಹನದ ಮೂಲಕ ತನ್ನ ಊರು ಗೋಕಾಕ ತಾಲೂಕಿನ ಪಾಮಲದಿನ್ನಿ ಗ್ರಾಮಕ್ಕೆ ತೆರಳುವಾಗ ನಿಪ್ಪಾಣಿ ಮುಧೋಳ ರಾಜ್ಯ ಹೆದ್ದಾರಿಯ ನಾಗರಮುನ್ನೋಳ್ಳಿ ಗ್ರಾಮ ವ್ಯಾಪ್ತಿಯ ಬೆಳಗಲಿ ಕ್ರಾಸ್ …

Read More »

ವಿದ್ಯಾರ್ಥಿನಿಯರೊಂದಿಗೆ ಅಸಭ್ಯ ವರ್ತನೆ- ಶಿಕ್ಷಕ ಅಮಾನತು………..

ಚಿಕ್ಕೋಡಿ: ಏಳನೇ ತರಗತಿ ವಿದ್ಯಾರ್ಥಿನಿಯರೊಂದಿಗೆ ಶಿಕ್ಷಕ ಅಸಭ್ಯವಾಗಿ ವರ್ತಿಸಿರುವ ಘಟನೆ ಜಿಲ್ಲೆಯ ಚಿಕ್ಕೋಡಿ ತಾಲೂಕಿನಲ್ಲಿ ನಡೆದಿದ್ದು, ಶಿಕ್ಷಕನನ್ನು ಅಮಾನತು ಮಾಡಿ ಚಿಕ್ಕೋಡಿ ಡಿಡಿಪಿಐ ಗಜಾನನ ಮನ್ನಿಕೇರಿ ಆದೇಶ ಹೊರಡಿಸಿದ್ದಾರೆ. ಶಿಕ್ಷಕ ವಿದ್ಯಾರ್ಥಿನಿಯರೊಂದಿಗೆ ಅನುಚಿತವಾಗಿ ವರ್ತಿಸಿದ್ದು, ಲೈಂಗಿಕ ಕಿರುಕುಳ ನಿಡುತ್ತಿದ್ದ ಎಂದು ಶಾಲಾ ವಿದ್ಯಾರ್ಥಿನಿಯರು ಶಿಕ್ಷಣ ಇಲಾಖೆಗೆ ಲಿಖಿತ ದೂರು ಸಲ್ಲಿಸಿದ್ದರು. ದೂರು ಪರಿಶಿಲಿಸಿ, ಕರ್ನಾಟಕ ನಾಗರಿಕ ಸೇವಾ (ನಡತೆ) ನಿಯಮ 1966 ರ ನಿಯಮ 3 (1) ಉಲ್ಲಂಘನೆ ಅಡಿಯಲ್ಲಿ …

Read More »

ಚಿಕನ್ ತರಲು ಹೋದ ವೃದ್ಧ ನಾಪತ್ತೆ- ಕುಟುಂಬಸ್ಥರಲ್ಲಿ ಆತಂಕ

ಚಿಕ್ಕೋಡಿ (ಬೆಳಗಾವಿ): ಚಿಕನ್ ತರಲು ಹೋದ ವೃದ್ಧನೋರ್ವ ನಾಪತ್ತೆಯಾಗಿರುವ ಘಟನೆ ರಾಯಬಾಗ ತಾಲೂಕಿನಲ್ಲಿ ನಡೆದಿದ್ದು, ಕುಟುಂಬಸ್ಥರಲ್ಲಿ ಆತಂಕ ಶುರುವಾಗಿದೆ. ರಾಯಬಾಗ ತಾಲೂಕಿನ ಮೇಖಳಿ ಗ್ರಾಮದ ರಾಮಪ್ಪ ತಿಪ್ಪಣ್ಣ ಭಜಂತ್ರಿ (80) ಕಾಣೆಯಾದ ವೃದ್ಧ. ರಾಮಪ್ಪ ಅವರು ಏಪ್ರಿಲ್ 28ರಂದು ಸಂಜೆ 4 ಗಂಟೆ ಸುಮಾರಿಗೆ ಸೈಕಲ್ ತೆಗೆದುಕೊಂಡು ಬೂದಿಹಾಳ ಗ್ರಾಮಕ್ಕೆ ಹೋಗಿ ಚಿಕನ್ ತರುತ್ತೇನೆ ಎಂದು ಹೇಳಿ ಹೋಗಿದ್ದರು. ರಾತ್ರಿಯಾದರೂ ಮನೆಗೆ ಮರಳಿ ಬಂದಿಲ್ಲ. ಎಲ್ಲಿದ್ದಾರೆ ಎನ್ನುವ ಸುಳಿವು ಕೂಡ …

Read More »

ಚಿಕ್ಕೋಡಿ:ಕೊಳವೆ ಬಾವಿಗೆ ಬಿದ್ದು ರೈತ ಸಾವು,……..

ಚಿಕ್ಕೋಡಿ (ಬೆಳಗಾವಿ): ಕೊಳವೆ ಬಾವಿಗೆ ಬಿದ್ದು ರೈತ ಸಾವನ್ನಪ್ಪಿರುವ ಘಟನೆ ರಾಯಬಾಗ ತಾಲೂಕಿನ ಸುಲ್ತಾನಪುರ ಗ್ರಾಮದಲ್ಲಿ ನಡೆದಿದೆ. ಸುಲ್ತಾನಪೂರ ಗ್ರಾಮದ ಲಕ್ಕಪ್ಪ ಸಂಗಪ್ಪ ದೊಡಮನಿ (38) ಕೊಳವೆ ಬಾವಿಯಲ್ಲಿ ಸಿಲುಕಿ ಮೃತಪಟ್ಟ ರೈತ. ಕೊಳವೆ ಬಾವಿಗೆ ಸಿಲುಕಿದ್ದ ಮಾಹಿತಿ ತಿಳಿಯುತ್ತಿದ್ದಂತೆ ರಾಯಬಾಗ ತಹಶೀಲ್ದಾರ್ ಚಂದ್ರಕಾಂತ ಭಜಂತ್ರಿ, ಅಗ್ನಿ ಶಾಮಕ ಸಿಬ್ಬಂದಿ ಹಾಗೂ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ದೌಡಾಯಿಸಿದರು. ತಕ್ಷಣವೇ 2 ಜೆಸಿಬಿಗಳನ್ನು ಕರೆಯಿಸಿ ಕಾರ್ಯಾಚರಣೆ ಆರಂಭಿಸಿದರು. ಸುಮಾರು 18ರಿಂದ 20 …

Read More »

ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ಸಾವು…………..

ಚಿಕ್ಕೋಡಿ (ಬೆಳಗಾವಿ): ವಿದ್ಯುತ್ ತಂತಿ ಸ್ಪರ್ಶಿಸಿ ತಂದೆ-ಮಗ ಸಾವನ್ನಪ್ಪಿರುವ ಘಟನೆ ಕಾಗವಾಡ ತಾಲೂಕಿನ ಜುಗುಳ ಗ್ರಾಮದಲ್ಲಿ ನಡೆದಿದೆ. ಜುಗುಳ ಗ್ರಾಮದ ಭರತ್ ಅಲಾಸೆ (46), ಮಗ ಪ್ರೇಮ್ ಅಲಾಸೆ (20) ಮೃತ ದುರ್ದೈವಿಗಳು. ಭರತ್ ಅವರು ತಮ್ಮ ಹೊಲದಿಂದ ಟ್ರ್ಯಾಕ್ಟರ್ ನಲ್ಲಿ ಮೇವು ತರುತ್ತಿದ್ದರು. ಈ ವೇಳೆ ಟ್ರ್ಯಾಕ್ಟರ್ ಮೇಲೆ ಕುಳಿದಿದ್ದ ಭರತ್, ಪ್ರೇಮ್ ವಿದ್ಯುತ್ ತಂತಿ ತಗುಲಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮೃತರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ …

Read More »

1800 ಕುಟುಂಬಗಳಿಗೆ ಆಹಾರ ಧಾನ್ಯ ವಿತರಿಸಿದ ಗಣೇಶ ಹುಕ್ಕೇರಿ………

ಚಿಕ್ಕೋಡಿ – ಮಾಜಿ ಸಚಿವ ಹಾಗೂ ಮಾಜಿ ಸಂಸದ ಪ್ರಕಾಶ ಹುಕ್ಕೇರಿ ಹಾಗೂ ಶಾಸಕ ಗಣೇಶ ಹುಕ್ಕೇರಿ ಚಿಕ್ಕೋಡಿ-ಸದಲಗಾ ಮತಕ್ಷೇತ್ರದ ಶಮನೆವಾಡಿಯಲ್ಲಿ 1800 ಕುಟುಂಬಗಳಿಗೆ ಆಹಾರ ಧಾನ್ಯ ವಿತರಿಸಿದರು. ಮಹಾಮಾರಿ ಕೊರೋನಾ ಕಾಯಿಲೆ  ತಡೆಗಟ್ಟುವ ಸಲುವಾಗಿ ದೇಶದಲ್ಲಿ ಲಾಕ್ಡೌನ್ ಇರುವುದರಿಂದ  ಅನ್ನಪೂರ್ಣೇಶ್ವರಿ ಫೌಂಡೇಶನ್ ವತಿಯಿಂದ  ಬಡ ಕುಟುಂಬಗಳಿಗೆ ಉಚಿತವಾಗಿ ಆಹಾರಧಾನ್ಯ ವಿತರಣೆ ಮಾಡಲಾಯಿತು. ಜನರು ಆದಷ್ಟು ಮನೆಯಿಂದ ಹೊರಗೆ ಬಾರದೆ ಎಚ್ಚರದಿಂದಿರಬೇಕು. ಹೊರಗೆ ಬರಬೇಕಾದ ಅನಿವಾರ್ಯತೆ ಬಂದರೂ ಮಾಸ್ಕ್ ಧರಿಸಿ, …

Read More »

ಜಾರ್ಖಂಡ್‍ಗೆ ನಡೆದುಕೊಂಡೇ ಹೋಗುತ್ತಿದ್ದ ಕಾರ್ಮಿಕ ಚಿಕ್ಕೋಡಿಯಲ್ಲಿ ಸಾವು

ಚಿಕ್ಕೋಡಿ (ಬೆಳಗಾವಿ): ನಡೆದುಕೊಂಡೇ ಜಾರ್ಖಂಡ್‍ನ ತನ್ನ ಗ್ರಾಮಕ್ಕೆ ಹೋಗುತ್ತಿದ್ದ ಕಾರ್ಮಿಕನೊಬ್ಬ ರಸ್ತೆಯಲ್ಲೇ ಸಾವನ್ನಪ್ಪಿರುವ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ಪಟ್ಟಣದಲ್ಲಿ ನಡೆದಿದೆ. ಜಾರ್ಖಂಡ್ ಮೂಲದ ಬಾಬಾಲಾಲ್ ಸಿಂಗ್(45) ಮೃತ ದುರ್ದೈವಿ. ಬೆಳಗಾವಿ ಜಿಲ್ಲೆಯ ಖಾನಾಪುರದಲ್ಲಿ ಕೂಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರ ತಂಡವು ಲಾಕ್‍ಡೌನ್‍ನಿಂದಾಗಿ ಕೆಲಸವಿಲ್ಲದೆ ಸಂಕಷ್ಟಕ್ಕೆ ಸಿಲುಕಿತ್ತು. ಲಾಕ್‍ಡೌನ್ ಸಡಿಲಿಕೆ ಹಿನ್ನೆಲೆಯಲ್ಲಿ 13 ಜನರ ಕಾರ್ಮಿಕರು ವಾಹನ ಹಾಗೂ ರೈಲ್ವೆ ವ್ಯವಸ್ಥೆ ಇಲ್ಲದ ಕಾರಣ ಮೇ 5ರಂದು ನಡೆದುಕೊಂಡು ಜಾರ್ಖಂಡ್‍ಗೆ …

Read More »

ಚಿಕ್ಕೋಡಿ:ಕರ್ತವ್ಯ ನಿರತ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕ್ರಮ

ಚಿಕ್ಕೋಡಿ: ತಾಲ್ಲೂಕಿನ ಯಕ್ಸಂಬಾದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕರ್ತವ್ಯ ನಿರತ ವೈದ್ಯರು ಹಾಗೂ ಸಿಬ್ಬಂದಿ ಮೇಲೆ ಹಲ್ಲೆ ನಡೆಸಿದ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಮಂಗಳವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಉಪವಿಭಾಗಾಧಿಕಾರಿ ರವೀಂದ್ರ ಕರಲಿಂಗನ್ನವರ ಅವರಿಗೆ ಮನವಿ ಸಲ್ಲಿಸಿದರು. ಯಕ್ಸಂಬಾದ ಸಮೂದಾಯ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಮಲ್ಲಿಕಾರ್ಜುನ ಪೂಗತ್ಯಾನಟ್ಟಿ ಇವರು ರೋಗಿಗಳಿಗೆ ಚಿಕಿತ್ಸೆ ನೀಡುತ್ತಿರುವ ಸಂದರ್ಭದಲ್ಲಿ ಕುಡಿದ ಮತ್ತಿನಲ್ಲಿ ಬಂದ ಶಮನೇವಾಡಿಯ ಸಂಜೀವಕುಮಾರ …

Read More »

ಕುಡುಕನಿಂದ ವೈದ್ಯರ ಮೇಲೆ ಹಲ್ಲೆ, ಪೊಲೀಸ್ ಜೀಪ್ ಕೆಳಗೆ ಮಲಗಿ ರಂಪಾಟ……

ಚಿಕ್ಕೋಡಿ (ಬೆಳಗಾವಿ): ಲಾಕ್‍ಡೌನ್ ಹಿನ್ನೆಲೆ ರಾಜ್ಯದಲ್ಲಿ ಕಳೆದ 43 ದಿನಗಳಿಂದ ಮದ್ಯ ಮಾರಾಟ ಸಂಪೂರ್ಣ ಬಂದ್ ಮಾಡಲಾಗಿತ್ತು. ಆದರೆ ನಿನ್ನೆಯಿಂದ ರಾಜ್ಯ ಸರ್ಕಾರ ಲಾಕ್‍ಡೌನ್ ಸಡಿಲಿಕೆ ಮಾಡಿ ಕಂಟೈನಮೆಂಟ್ ಝೋನ್‍ಗಳನ್ನು ಹೊರತುಪಡಿಸಿ ಉಳಿದ ಎಲ್ಲಾ ಕಡೆ ಮದ್ಯ ಮಾರಾಟಕ್ಕೆ ಅವಕಾಶ ನೀಡಿದೆ. ಮದ್ಯ ಸಿಕ್ಕಿದ್ದೇ ತಡ ಕೆಲವೆಡೆ ಕುಡುಕರ ರಂಪಾಟ, ಗಲಾಟೆಗಳು ಜೋರಾಗಿ ಶುರುವಾಗಿವೆ. ಹೌದು ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಯಕ್ಸಂಬಾ ಗ್ರಾಮದಲ್ಲಿ ಕುಡುಕನೊಬ್ಬ ವೈದ್ಯರ ಮೇಲೆ ಹಲ್ಲೆ …

Read More »

11 ಟೈರ್ ಟ್ಯೂಬ್‍ನಲ್ಲಿ ಸಾಗಿಸುತ್ತಿದ್ದ 330 ಲೀಟರ್ ಕಳ್ಳಭಟ್ಟಿ ವಶ………

ಚಿಕ್ಕೋಡಿ/ಬೆಳಗಾವಿ: ಕೊರೊನಾದಿಂದ ರಾಜ್ಯದಲ್ಲಿ ಮದ್ಯ ಮಾರಾಟ ಬಂದ್ ಆಗಿದ್ದ ಕಾರಣ ಕಳ್ಳ ಭಟ್ಟಿ ದಂಧೆಗೆ ಕಡಿವಾಣ ಹಾಕಲು ಚಿಕ್ಕೋಡಿ ವಿಭಾಗದ ಅಬಕಾರಿ ಪೊಲೀಸರು ಹರಸಾಹಸ ಪಡುತ್ತಿದ್ದಾರೆ. ಚಿಕ್ಕೋಡಿ ವಿಭಾಗದ ಅಬಕಾರಿ ಪೊಲೀಸರು ಹುಕ್ಕೇರಿ ತಾಲೂಕಿನ ಶಹಬಂದರ ಗ್ರಾಮದಲ್ಲಿ ಕಳ್ಳ ಭಟ್ಟಿ ದಂಧೆಕೋರರ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಸುಮಾರು 330 ಲೀಟರ್ ಕಳ್ಳಭಟ್ಟಿ ವಶಕ್ಕೆ ಪಡೆದುಕೊಡಿದ್ದಾರೆ. ಶಹಬಂದರ್ ಗ್ರಾಮದ ಬಳಿ ಕಳ್ಳಭಟ್ಟಿ ಸಾಗಿಸುತ್ತಿದ್ದ ಎರಡು ದ್ವಿ-ಚಕ್ರ ವಾಹನ ಹಾಗೂ …

Read More »