ಚಿಕ್ಕೋಡಿ/ಬೆಳಗಾವಿ: ಒಂದು ದಿನದ ನವಜಾತ ಗಂಡು ಮಗುವನ್ನು ದೇವಸ್ಥಾನದಲ್ಲಿ ಬಿಟ್ಟು ಹೋಗಿರುವ ಅಮಾನವೀಯ ಘಟನೆ ಜಿಲ್ಲೆಯ ರಾಯಬಾಗ ತಾಲೂಕಿನ ಮುಗಳಖೋಡ ಪಟ್ಟಣದಲ್ಲಿ ನಡೆದಿದೆ. ಪಟ್ಟಣದ ಹೊರವಲಯದ ಬಸವೇಶ್ವರ ದೇವಸ್ಥಾನದಲ್ಲಿ ಹೆರಿಗೆಯ ನಂತರ ಗಂಡು ಮಗುವನ್ನು ಕೈಚೀಲದಲ್ಲಿ ಇಟ್ಟು ಪರಾರಿಯಾಗಿದ್ದಾರೆ. ಇಂದು ಬೆಳಗಿನ ಜಾವ 5 ಗಂಟೆಗೆ ಮಗು ಅಳುವಿನ ಧ್ವನಿ ಕೇಳಿದ ಸ್ಥಳೀಯರು ಮಗುವನ್ನು ರಕ್ಷಿಸಿ, ಆರೋಗ್ಯ ಇಲಾಖೆಯ ಸಿಬ್ಬಂದಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಆಗಮಿಸಿದ ಆಶಾ ಕಾರ್ಯಕರ್ತೆಯರು ಹಾಗೂ …
Read More »ಸಾಮಾಜಿಕ ಜಾಲತಾಣದಲ್ಲಿ ನಿಶ್ಚಿತಾರ್ಥ – ಸಮಾಜಕ್ಕೆ ಮಾದರಿಯಾದ ಕುಟುಂಬ
ಚಿಕ್ಕೋಡಿ (ಬೆಳಗಾವಿ): ಕೊರೊನಾ ಸೋಂಕು ಹರಡದಂತೆ ದೇಶಾದ್ಯಂತ ಏಪ್ರಿಲ್ 14ರವರೆಗೆ ಲಾಕ್‍ಡೌನ್ ಘೋಷಿಸಲಾಗಿದ್ದು, ಸಭೆ ಸಮಾರಂಭ ಮತ್ತು ಮದುವೆಗಳು ರದ್ದಾಗಿವೆ. ಆದರೆ ಬೆಳಗಾವಿಯ ಜೋಡಿಯೊಂದು ಸಾಮಾಜಿಕ ಜಾಲತಾಣದ ಮೂಲಕ ಮದುವೆಯ ನಿಶ್ಚಿತಾರ್ಥ ನೆರವೇರಿಸಿಕೊಂಡು ಸಮಾಜಕ್ಕೆ ಮಾದರಿಯಾಗಿದೆ. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನಿವಾಸಿ ಹಾಗೂ ಶಿಕ್ಷಕರಾಗಿರುವ ಪ್ರಕಾಶ್ ಪಾಟೀಲ್ ಅವರು ತಮ್ಮ ಪುತ್ರಿ ಆಶಾ ಪಾಟೀಲ್ ಅವರ ನಿಶ್ಚಿತಾರ್ಥವನ್ನು ಬಾಗಲಕೋಟೆಯ ಮಹಾಂತೇಶ್ ಜೊತೆಗೆ ನೆರವೇರಿಸಿದರು. ಅತಿ ಸರಳವಾಗಿ ಸಾಮಾಜಿಕ ಜಾಲತಾಣದ …
Read More »ಚಿಕ್ಕೋಡಿ ಪಟ್ಟಣದಲ್ಲಿ ಬುಧುವಾರ 52 ದ್ವಿಚಕ್ರವಾಹಗಳನ್ನು ಸೀಜ್ ಮಾಡಿದ್ದಾರೆ.
ಚಿಕ್ಕೋಡಿ : ಲಾಕ್‍ಡೌನ್ ಇದ್ದರೂ ಮನೆಯಿಂದ ಹೊರಗೆ ಬರಬೇಡಿ ಎಂದು ಪೊಲೀಸರು ಮನವಿ ಮಾಡಿಕೊಂಡರೂ ಕೇಳದೇ ಅನಾವಶ್ಯಕವಾಗಿ ರಸ್ತೆಯಲ್ಲಿ ಅಡ್ಡಾಡಿ ಲಾಕ್‍ಡೌನ್ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಚಿಕ್ಕೋಡಿ ಪಟ್ಟಣದಲ್ಲಿ ಬುಧುವಾರ 52 ದ್ವಿಚಕ್ರವಾಹಗಳನ್ನು ಸೀಜ್ ಮಾಡಿದ್ದಾರೆ. ಇಡೀ ವಿಶ್ವವನ್ನೇ ತಲ್ಲಣಗೊಳಿಸಿರುವ ಮಹಾಮಾರಿ ಕೊರೊನಾ ತೊಲಗಿಸುವ ನಿಟ್ಟಿನಲ್ಲಿ ಲಾಕ್‍ಡೌನ್ ಹೇರಲಾಗಿದೆ. ಸಾರ್ವಜನಿಕರು ಮನೆಯಲ್ಲಿಯೇ ಇರುವ ಮೂಲಕ ಲಾಕ್‍ಡೌನ್ ಪಾಲಿಸಿ ಎಂದು ಪೊಲೀಸರು ಮನವಿ ಮಾಡಿದರೂ ಕೇಳದ ಹಿನ್ನೆಲೆಯಲ್ಲಿ ಬುಧೂವಾರ ಡಿವೈಎಸ್ಪಿ ಮನೋಜ ನಾಯಿಕ …
Read More »ಚಿಕ್ಕೋಡಿ: ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಮತ್ತೆ ಹಲ್ಲೆ
ಚಿಕ್ಕೋಡಿ: ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತೆಯರ ಮೇಲೆ ಮತ್ತೆ ಹಲ್ಲೆ ಮಾಡಲಾಗಿದೆ. ಬೆಳಗಾವಿ ಜಿಲ್ಲೆ ರಾಯಬಾಗ ತಾಲೂಕಿನ ಕುಡಚಿ ಪಟ್ಟಣದಲ್ಲಿ ಆರೋಗ್ಯ ಮಾಹಿತಿ ಕಲೆ ಹಾಕಲು ಹೋಗಿದ್ದ ಆಶಾ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಿದ ಘಟನೆ ನಡೆದಿದೆ. ಪಟ್ಟಣದಲ್ಲಿ ನಾಲ್ಕು ಕೊರೊನಾ ಪಾಸಿಟಿವ್ ಪ್ರಕರಣ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಮನೆ ಮನೆ ಆರೋಗ್ಯ ಸರ್ವೆ ಕಾರ್ಯಕ್ಕೆ ಮುಂದಾಗಿದೆ. ಇದೇ ಕೆಲಸ ನಿಮಿತ್ತವಾಗಿ ಪಟ್ಟಣದಲ್ಲಿ ಆಶಾ ಕಾರ್ಯಕರ್ತೆಯರು ಪ್ರತಿ …
Read More »ಲಾಕ್‍ಡೌನ್ ಉಲ್ಲಂಘಿಸದವರಿಗೆ ಲೂಸ್‍ಮೋಶನ್ ಮಾತ್ರೆ ನೀಡಬೇಕು: ಮಹೇಶ್ ಕುಮಟಳ್ಳಿ
ಚಿಕ್ಕೋಡಿ(ಬೆಳಗಾವಿ): ಲಾಕ್‍ಡೌನ್ ಉಲ್ಲಂಘಿಸಿದವರಿಗೆ ಪೊಲೀಸರು ಹೊಡೆಯುವ ಬದಲು ಅವರಿಗೆ ಲೂಸ್‍ಮೋಶನ್ ಮಾತ್ರೆ ನೀಡಬೇಕು ಎಂದು ಅಥಣಿ ಬಿಜೆಪಿ ಶಾಸಕ ಮಹೇಶ್ ಕುಮಟಳ್ಳಿ ಹೇಳಿದ್ದಾರೆ. ಅಥಣಿ ಪ್ರವಾಸಿ ಮಂದಿರದಲ್ಲಿ ಸುದ್ದಿಗೋಷ್ಠಿಯಲ್ಲಿ ಹಾಸ್ಯ ಚಟಾಕೆ ಹಾರಿಸಿದ ಕುಮಟಳ್ಳಿ, ನನಗೆ ಒಂದು ವಾಟ್ಸಾಪ್ ಮೆಸೇಜ್ ಬಂದಿತ್ತು. ಅದರಲ್ಲಿ ಮಹಿಳೆಯೋರ್ವಳು ಹೇಳುತ್ತಿದ್ದಳು, ಪೊಲೀಸರು ಲಾಕ್‍ಡೌನ್ ಉಲ್ಲಂಘಿಸಿದವರನ್ನ ಹಿಡಿದು ಲೂಸ್‍ಮೋಶನ್ ಮಾತ್ರೆ ಕೊಟ್ಟರೆ ಅವರು ಮನೆಯಲ್ಲೂ ಇರುತ್ತಾರೆ. ಮತ್ತೆ ದಿನನಿತ್ಯ ಕೈಗಳನ್ನ ತೊಳೆದುಕೊಳ್ಳುತ್ತಾರೆ ಎಂಬುದಾಗಿತ್ತು ಎಂದು ಶಾಸಕರು …
Read More »“ರಾಜ್ಯದಲ್ಲಿ ಮದ್ಯ ಸಂಪೂರ್ಣನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ:ಸಚಿವ ರಮೇಶ್ ಜಾರಕಿಹೊಳಿ
ಚಿಕ್ಕೋಡಿ(ಬೆಳಗಾವಿ): ರಾಜ್ಯದಲ್ಲಿ ಮದ್ಯ ಸಂಪೂರ್ಣ ನಿಷೇಧ ಮಾಡಬೇಕು. ಸಂಪೂರ್ಣವಾಗಿ ಮದ್ಯ ನಿಷೇಧ ಮಾಡಲು ಮೊದಲು ನಾನೇ ಬೆಂಬಲ ಸೂಚಿಸುತ್ತೇನೆ ಎಂದು ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚಿದ ಕೊರೊನಾ ಪಾಸಿಟಿವ್ ಹೆಚ್ಚಳ ಹಿನ್ನೆಲೆಯಲ್ಲಿ ಜಿಲ್ಲೆಯ ಅಥಣಿ ಪಟ್ಟಣದಲ್ಲಿ ಅಧಿಕಾರಿಗಳ ಸಭೆ ನಡೆಸಿದ್ದರು. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕೊರೋನಾ ರೋಗ ಬಂದು ಜನರಿಗೆ ಒಳ್ಳೆಯ ದಾರಿ ತೋರಿಸಿದೆ. ಕೆಟ್ಟ ಚಟಗಳನ್ನ ಕಡಿಮೆ ಮಾಡಲು ಅವಕಾಶ ಸಿಕ್ಕಿದೆ. …
Read More »ಲೈಟ್ ಆಫ್ ಮಾಡದ್ದಕ್ಕೆ ಮಸೀದಿಗೆ ನುಗ್ಗಿ ಗಲಾಟೆ – 22 ಮಂದಿ ಬಂಧನ
ಚಿಕ್ಕೋಡಿ: ನಿನ್ನೆ ರಾತ್ರಿ ದೀಪ ಬೆಳಗಿಸುವಂತೆ ಪ್ರಧಾನಿ ಮೋದಿ ಕರೆ ನೀಡಿದ್ದರೂ ಲೈಟ್ ಆಫ್ ಮಾಡದ್ದಕ್ಕೆ ಮಸೀದಿಗೆ ನುಗ್ಗಿ ಗಲಾಟೆ ಮಾಡಿದ ಘಟನೆ ಯಮಕನಮರಡಿ ಹಾಗೂ ಸದಲಗಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹೊಸೂರ ಗ್ರಾಮದಲ್ಲಿ ಲೈಟ್ ಆನ್ ಇದೆ ಎಂದು ಮಸೀದಿಗೆ ನುಗ್ಗಿ ಗಲಾಟೆ ಮಾಡಿದ್ದ 9 ಜನರ ಗುಂಪನ್ನ ಯಮಕನಮರಡಿ ಪೊಲೀಸರು ಬಂಧಿಸಿದ್ದಾರೆ. ಜೊತೆಗೆ ನಿಪ್ಪಾಣಿ ತಾಲೂಕಿನ ಬೆಡಕಿಹಾಳ ಗ್ರಾಮದಲ್ಲಿ ಮಸೀದಿಯಲ್ಲಿ …
Read More »ನೀರು ಮತ್ತು ದಿನ ಬಳಕೆ ವಸ್ತುಗಳ ತೊಂದರೆಯಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು; ದುರ್ಯೋಧನ ಐಹೋಳೆ
ಚಿಕ್ಕೋಡಿ: ಗ್ರಾಮೀಣ ಪ್ರದೇಶದ ಜನರಿಗೆ ಕುಡಿಯುವ ನೀರು ಮತ್ತು ದಿನ ಬಳಕೆ ವಸ್ತುಗಳ ತೊಂದರೆಯಾಗದಂತೆ ಅಧಿಕಾರಿಗಳು ಜಾಗೃತಿ ವಹಿಸಬೇಕು ಎಂದು ರಾಯಬಾಗ ಶಾಸಕ ದುರ್ಯೋಧನ ಐಹೋಳೆ ಹೇಳಿದರು. ತಾಲೂಕಿನ ಉಮರಾಣಿ ಗ್ರಾಮದಲ್ಲಿ ಶುಕ್ರವಾರ ಕೊರೊನಾ ವೈರಸ್ ಕುರಿತು ಜನಜಾಗೃತಿ ಮೂಡಿಸುವ ನಿಟ್ಟಿನಲ್ಲಿ ನಡೆಸಿದ ತಾಲೂಕಾ ಮಟ್ಟದ ಅಧಿಕಾರಿಗಳು ಮತ್ತು ಗ್ರಾಮ ಪಂಚಾಯತ ಸದಸ್ಯರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶದ ಜನರಿಗೆ ಗ್ರಾಮ ಪಂಚಾಯತಿ ವತಿಯಿಂದ ಮಾಸ್ಕ್ …
Read More »ದೆಹಲಿ ಸಮಾವೇಶಕ್ಕೆ ಹೋಗಿದ್ದವರ ಶೋಧಕ್ಕೆ ಹುಕ್ಕೇರಿ ಪೊಲೀಸರ ಹೊಸ ಐಡಿಯಾ
ಬೆಳಗಾವಿ(ಚಿಕ್ಕೋಡಿ): ದೇಶವನ್ನೇ ತಲ್ಲಣಗೊಳಿಸಿರುವ ಕೊರೊನಾ ಶಂಕಿತರಾದ ದೆಹಲಿ ನಿಜಾಮುದ್ದೀನ್ ಸಮಾವೇಶದ ನಂಟು ಇದ್ದವರ ಪತ್ತೆಗಾಗಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ಪಟ್ಟಣದ ಪೊಲೀಸರು ಹೊಸ ಐಡಿಯಾವೊಂದನ್ನ ಮಾಡಿದ್ದಾರೆ. ಪೊಲೀಸರು ಗಲ್ಲಿ ಗಲ್ಲಿಗಳಿಗೆ ಹೋಗಿ ಯಾರಾದರೂ ದೆಹಲಿಯ ನಿಜಾಮುದ್ದೀನ್ ಸಮಾವೇಶಕ್ಕೆ ಜಮಾತ್‍ಗೆ ಹೋಗಿ ಬಂದಿದ್ದರೆ ದಯವಿಟ್ಟು ಬಂದು ಮಾಹಿತಿ ನೀಡಿ ಎಂದು ಮನವಿ ಮಾಡಿಕೊಂಡಿದ್ದಾರೆ. ಹುಕ್ಕೇರಿ ಪಟ್ಟಣದ ತಬ್ಲಿಗ ಸಮಾಜದ ಎರಿಯಾಗಳಿಗೆ ಹೋಗಿ ಪೊಲೀಸರು ಧ್ವನಿ ವರ್ಧಕಗಳ ಮೂಲಕ ಮನವಿ ಮಾಡಿಕೊಂಡಿದ್ದಾರೆ. ಹುಕ್ಕೇರಿ …
Read More »ಚಿಕ್ಕೋಡಿ:ಮದ್ಯ ಸಿಗುತ್ತಿಲ್ಲವೆಂದು ಬಾವಿಗೆ ಹಾರಿ ಪ್ರಾಣ ಬಿಟ್ಟ
ಚಿಕ್ಕೋಡಿ (ಬೆಳಗಾವಿ): ಲಾಕ್‍ಡೌನ್ ಹಿನ್ನೆಲೆ ರಾಜ್ಯದಲ್ಲಿ ಮದ್ಯದ ಅಂಗಡಿ ಬಂದ್ ಆಗಿವೆ. ಪರಿಣಾಮ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಬಾವಿಗೆ ಹಾರಿ ವ್ಯಕ್ತಿಯೊಬ್ಬ ಆತ್ಮಹತ್ಯೆಗೆ ಶರಣಾದ ಘಟನೆ ಚಿಕ್ಕೋಡಿ ತಾಲೂಕಿನ ಕೋಥಳಿ ಗ್ರಾಮದಲ್ಲಿ ನಡೆದಿದೆ. ಕೋಥಳಿ ಗ್ರಾಮದ ಪೋಪಟ್ ಈರಪ್ಪ ಬಡಿಗೇರಿ (44) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಮದ್ಯದ ಅಂಗಡಿ ಬಂದ್ ಆಗಿದ್ದರಿಂದ ಪೋಪಟ್ ಸೋಮವಾರ ಕುಡಿಯುವುದಕ್ಕೆ ಎಣ್ಣೆ ಸಿಗಲಿಲ್ಲವೆಂದು ಕೋಥಳಿ ಗ್ರಾಮದ ಗಲ್ಲಿ ಗಲ್ಲಿ ಸುತ್ತಿ ನಾಪತ್ತೆಯಾಗಿದ್ದ. ಆದರೆ ಇಂದು …
Read More »