ಚಿಕ್ಕೋಡಿ “ಸಾಮಾಜಿಕ ಅಂತರ ಕಾಯ್ದುಕೊಳ್ಳೋಣ, ನವ ಭಾರತ ಕಟ್ಟೋಣ”ಬೆಂಗಳೂರಿನಲ್ಲಿ ನಡೆದ ವಿಧಾನ ಸಭೆಯ ಅಧಿವೇಶನ ಮುಗಿಸಿ ಬಂದ ತಕ್ಷಣ, ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ಕೊರೋನಾ ವೈರಾಣು ಹರಡುವುದನ್ನು ತಪ್ಪಿಸುವ ಸಲುವಾಗಿ, ಎಲ್ಲಾ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಕೊಂಡು, ಒಬ್ಬರಿಗೊಬ್ಬರು ಅಂತರ ಕಾಯ್ದುಕೊಂಡು ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಸೌ. ಶಶಿಕಲಾ ಜೊಲ್ಲೆ ಜಿ, ಹಾಗೂ ಚಿಕ್ಕೋಡಿ …
Read More »ಜನರು ಮನೆಯಿಂದ ಹೊರ ಬರದಂತೆ ಚಿಕ್ಕೋಡಿ ಪೊಲೀಸರಿಂದ ಹೊಸ ಪ್ಲಾನ್
ಚಿಕ್ಕೋಡಿ: ಕೊರೊನಾ ವೈರಸ್ ಭೀತಿ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏಪ್ರಿಲ್ 14ರವರೆಗೆ ದೇಶಾದ್ಯಂತ ಲಾಕ್‍ಡೌನ್ ಘೋಷಿಸಿದ್ದಾರೆ. ಆದರೆ ಅನೇಕರು ತರಕಾರಿ ಖರೀದಿಗೆ ಅಂತ ಮನೆಯಿಂದ ಹೊರ ಬರುತ್ತಿದ್ದಾರೆ. ಹೀಗಾಗಿ ಚಿಕ್ಕೋಡಿ ಪೊಲೀಸರು ಪ್ಲಾನ್ ಮಾಡಿ ಮನೆಯಿಂದ ಜನರು ಹೊರ ಬರದಂತೆ ತಡೆಯಲು ಪ್ರಯತ್ನಿಸುತ್ತಿದ್ದಾರೆ. ಪೊಲೀಸರು ತಳ್ಳುವ ಗಾಡಿ ಅಥವಾ ಆಟೋಗಳಲ್ಲಿ ತರಕಾರಿ ಮಾರುವ ಒಟ್ಟು 12 ಜನರ ಹೆಸರು ಹಾಗೂ ಮೊಬೈಲ್ ನಂಬರ್ ಪಡೆದುಕೊಂಡಿದ್ದಾರೆ. ಅವರಿಗೆ ನಗರದ ವಿವಿಧ …
Read More »ಕೊರೋನಾ ಭೀತಿ; ಮಹಾರಾಷ್ಟ್ರದಿಂದ ಅಕ್ರಮವಾಗಿ ರಾಜ್ಯಕ್ಕೆ ಆಗಮಿಸುತ್ತಿರುವ ಸಾವಿರಾರು ಜನರು
ಚಿಕ್ಕೋಡಿ(ಮಾ.25): ಮಹಾರಾಷ್ಟ್ರದಲ್ಲಿ ದಿನನಿತ್ಯ ಕೊರೋನಾ ಭೀತಿ ಹೆಚ್ಚುತ್ತಿರುವ ಹಿನ್ನಲೆ ಮಹಾರಾಷ್ಟ್ರದಲ್ಲಿ ಕೆಲಸಕ್ಕೆಂದು ತೆರಳಿದ್ದ ಬೆಳಗಾವಿ ಜಿಲ್ಲೆಯ ಸಾವಿರಾರು ಜನ ಮರಳಿ ಗ್ರಾಮಕ್ಕೆ ಆಗಮಿಸುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶಗಳಲ್ಲಿ ಈಗ ಕೊರೋನಾ ಭೀತಿ ಹೆಚ್ಚಾಗಿದೆ. ಇಷ್ಟು ದಿನ ಬರಿ ನಗರ ಪ್ರದೇಶಗಳಲ್ಲಿ ಕೊರೋನಾ ಭೀತಿ ತಾಂಡವಾಡುತ್ತಿತ್ತು ದಿನಗಳು ಕಳೆಯುತ್ತಿದ್ದಂತೆ ಅದು ಜಿಲ್ಲಾ ಕೇಂದ್ರಗಳು ಗ್ರಾಮೀಣ ಭಾಗಕ್ಕೂ ಆವರಿಸಿದೆ. ಸದ್ಯ ಬೆಳಗಾವಿ ಜಿಲ್ಲೆಯಲ್ಲಿ ಯಾವುದೇ ಕೊರೋನಾ ಪ್ರಕರಣ ಇದುವರೆಗೂ ಪತ್ತೆಯಾಗಿಲ್ಲ. ಆದರೆ, ಜಿಲ್ಲೆಯಲ್ಲಿಗ ಕೊರೋನಾ …
Read More »ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕಾದೇವಿಗೂ ಕೊರೊನಾ ಬಿಸಿ
ಬೆಳಗಾವಿ(ಚಿಕ್ಕೋಡಿ): ಕೊರೊನಾ ವೈರಸ್ ಭೀತಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಚಿಂಚಲಿ ಮಾಯಕ್ಕಾದೇವಿಗೂ ಕೊರೊನಾ ಬಿಸಿ ತಟ್ಟಿದೆ. ಚಿಂಚಲಿಯ ಮಾಯಕ್ಕಾದೇವಿಯ ದರ್ಶನವನ್ನು ಇಂದಿನಿಂದ ಮಾರ್ಚ್ 31ರವರೆಗೂ ಸ್ಥಗಿತಗೊಳಿಸಲಾಗಿದೆ. ಕೊರೊನಾ ಸೋಂಕು ಹರಡುವುದನ್ನು ತಡೆಗಟ್ಟುವ ನಿಟ್ಟಿನಲ್ಲಿ ದೇವಸ್ಥಾನದ ಆಡಳಿತ ಮಂಡಳಿ ದೇವಸ್ಥಾನವನ್ನು ಬಂದ್ ಮಾಡಿದೆ. ಮಾಯಕ್ಕಾದೇವಿ ಉತ್ತರ ಕರ್ನಾಟಕ ಹಾಗೂ ದಕ್ಷಿಣ ಮಹಾರಾಷ್ಟ್ರದ ಆರಾದ್ಯ ದೇವತೆಯಾಗಿದ್ದು, ದೇವಿಯ ದರ್ಶನ ಪಡೆಯಲು ದಿನನಿತ್ಯ ಕರ್ನಾಟಕ ಹಾಗೂ ಮಹಾರಾಷ್ಟ್ರದಿಂದ …
Read More »ಬುದ್ಧಿವಾದ ಹೇಳಿದ ಪತ್ನಿಯನ್ನೇ ಕೊಂದ ಪತಿ
ಚಿಕ್ಕೋಡಿ(ಬೆಳಗಾವಿ): ಜಗಳವಾಡುತ್ತಿದ್ದ ಪತಿಗೆ ಜಗಳವಾಡಬೇಡ ಎಂದು ಬುದ್ಧಿವಾದ ಹೇಳಿದಕ್ಕೆ ತಲೆ ಕೆಟ್ಟ ಪತಿ ತನ್ನ ಹೆಂಡತಿಯನ್ನೇ ಕೊಡಲಿಯಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಹುಲಗಬಾಳ ಗ್ರಾಮದಲ್ಲಿ ಘಟನೆ ನಡೆದಿದ್ದು, ಹುಲಗಬಾಳ ಗ್ರಾಮದ ನಿವಾಸಿ ಲಕ್ಷ್ಮೀಬಾಯಿ ಸಿದ್ದರಾಯ ಮೊಳೆ(48) ಕೊಲೆಯಾದ ದುರ್ದೈವಿ, ಸಿದ್ದರಾಯ ಮೊಳೆ(54) ಪತ್ನಿಯನ್ನು ಕೊಲೆ ಮಾಡಿದ ಪಾಪಿ. ಪತಿ ಸಿದ್ದರಾಯ ಸದಾ ಅವರಿವರೊಂದಿಗೆ ಜಗಳವಾಡಿಕೊಳ್ಳುತ್ತಿದ್ದ, ಇದನ್ನು ಕಂಡ ಲಕ್ಷ್ಮೀಬಾಯಿ ಜಗಳವಾಡಬೇಡ ಎಂದು ಬುದ್ಧಿವಾದ …
Read More »ಚಿಕ್ಕೋಡಿಯ ಯಾವುದೇ ವೈದ್ಯರಿಗೆ ಕೊರೊನಾ ಬಂದಿಲ್ಲ, ಸುಳ್ಳು ಸುದ್ದಿ ಹರಡಿಸಬೇಡಿ: ವೈದ್ಯರ ಮನವಿ
ಬೆಳಗಾವಿ/ಚಿಕ್ಕೋಡಿ: ವೈದ್ಯ ಓರ್ವರಿಗೆ ಕೊರೊನಾ ರೋಗ ಬಂದಿದೆ ಎಂಬ ಗಾಳಿ ಸುದ್ದಿ ಎಲ್ಲೆಡೆ ಹರಡುತ್ತಿರುವ ಹಿನ್ನೆಲೆಯಲ್ಲಿ ಚಿಕ್ಕೋಡಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಚಿಕ್ಕೋಡಿಯ ಎಲ್ಲ ವೈದ್ಯರು ಪತ್ರಿಕಾಗೋಷ್ಠಿ ನಡೆಸಿ ನಮ್ಮಲ್ಲಿ ಯಾರಿಗೂ ಕೊರೊನಾ ಬಂದಿಲ್ಲ ಎಂದು ಸ್ಪಷ್ಟಪಡಿಸಿದರು. ಇಂಡಿಯನ್ ಮೆಡಿಕಲ್ ಅಸೋಸಿಯೇಷನ್ ವತಿಯಿಂದ ಐಎಂಎ ಸಭಾ ಭವನದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ವೈದ್ಯರು, ಚಿಕ್ಕೋಡಿಯ ಯಾವುದೇ ವೈದ್ಯರಿಗೆ ಕೊರೊನಾ ಬಂದಿಲ್ಲ. ಈ ಬಗ್ಗೆ ಯಾರು ಸುಳ್ಳು ಸುದ್ದಿ ಹರಡದಂತೆ …
Read More »ಉಚಿತವಾಗಿ ಕೋಳಿ ಹಂಚಿಕೆ – ಭೀತಿ ನಡುವೆಯೂ ಕೋಳಿ ಒಯ್ಯಲು ಮುಗಿಬಿದ್ದ ಜನ
ಚಿಕ್ಕೋಡಿ/ಬೆಳಗಾವಿ: ಜಿಲ್ಲೆಯ ಚಿಕ್ಕೋಡಿ ಪಟ್ಟಣದಲ್ಲಿ ಕೊರೊನಾ ವೈರಸ್ ಭೀತಿಯಿಂದ ಕೋಳಿ ವ್ಯಾಪಾರ ನೆಲಕಚ್ಚಿರುವ ಹಿನ್ನೆಲೆಯಲ್ಲಿ ಉಚಿತವಾಗಿ ಕೋಳಿಗಳ ಹಂಚಿಕೆ ಮಾಡಲಾಗಿದೆ. ಕೋಳಿಗಳ ಜೀವಂತ ಸಮಾಧಿ ಬಳಿಕ ಈಗ ಫಾರಂ ಮಾಲೀಕರು ಚಿಕನ್ ಪ್ರಿಯರಿಗೆ ಉಚಿತವಾಗಿ ಕೋಳಿಗಳನ್ನ ಹಂಚಿಕೆ ಮಾಡಿದ್ದಾರೆ. ಚಿಕ್ಕೋಡಿ ಪಟ್ಟಣದಲ್ಲಿ ವಿವಿಧ ಕಾಲೋನಿಗಳಲ್ಲಿ ಲಾರಿಗಳಲ್ಲಿ ಕೋಳಿ ತಂದು ಜನರಿಗೆ ಉಚಿತವಾಗಿ ನೀಡಲಾಗಿದೆ. ಕೊರೊನಾ ಭೀತಿ ನಡುವೆಯೂ ಉಚಿತ ಕೋಳಿ ತೆಗೆದುಕೊಂಡು ಹೋಗಲು ಜನ ಮುಗಿ ಬಿದ್ದಿದ್ದರು ಒಬ್ಬರು ಎರಡು …
Read More »ಅಂಗನವಾಡಿ ಆಹಾರಧಾನ್ಯ ಮನೆಗೆ ಸಾಗಿಸುತ್ತಿದ್ದ ಕಾರ್ಯಕರ್ತೆಯನ್ನ ರೆಡ್ ಹ್ಯಾಂಡ್ ಆಗಿ ಹಿಡಿದ ಗ್ರಾಮಸ್ಥರು!!
ಚಿಕ್ಕೋಡಿ: ಅಂಗನವಾಡಿ ಕಾರ್ಯಕರ್ತೆಯೊಬ್ಬಳು ಮಕ್ಕಳಿಗೆ ಕೊಡಬೇಕಾದ ಆಹಾರ ಧಾನ್ಯಗಳನ್ನು ಕದ್ದು ಮನೆಗೆ ತೆಗೆದುಕೊಂಡು ಹೋಗುತ್ತಿದ್ದಾಗ ಸಾರ್ವಜನಿಕರು ಹಿಡಿದು ಇಲಾಖಾ ಅಧಿಕಾರಿಗಳಿಗೆ ಒಪ್ಪಿಸಿದ ಘಟನೆಯೊಂದು ತಾಲೂಕಿನ ಹಿರೇಕೂಡಿ ಗ್ರಾಮದ ಮಿರ್ಜಿಕೋಡಿಯಲ್ಲಿ ಶನಿವಾರ ನಡೆದಿದೆ. ಅಂಗನವಾಡಿ ಕಾರ್ಯಕರ್ತೆ ಸುನೀತಾ ಕೋಟೆ ಎಂಬುವರು ತಮ್ಮ ಅಂಗನವಾಡಿಯಲ್ಲಿನ ಬೆಲ್ಲ, ಬೇಳೆ ಮುಂತಾದ ಆಹಾರ ದಾನ್ಯಗಳನ್ನು ದ್ವಿಚಕ್ರವಾಹನದ ಮೇಲೆ ಕದ್ದು ತೆಗೆದುಕೊಂಡು ಹೋಗುತ್ತಿರುವುದನ್ನು ಗಮನಿಸಿದ ಅಲ್ಲಿನ ಸಾರ್ವಜನಿಕರು ಕೂಡಲೇ ಅವರನ್ನು ತಡೆದು ಅವರ ಹತ್ತಿರವಿದ್ದ ಬೆಲ್ಲ ಮತ್ತು …
Read More »ಚಿಕ್ಕೋಡಿ: ಪಂಚಾಯಿತಿ ಸಿಬ್ಬಂದಿ ವೇತನಕ್ಕೆ ಹಣ ಮೀಸಲಿಡುವಂತೆ ಪ್ರತಿಭಟನೆ
ಚಿಕ್ಕೋಡಿ: 14 ನೇ ಹಣಕಾಸಿನ ಯೋಜನೆಯಲ್ಲಿ ಸಿಬ್ಬಂದಿ ವೇತನಕ್ಕೆ ಶೇ.10 ರಷ್ಟು ಮೊತ್ತವನ್ನು ಮೀಸಲಿರಿಸಲು ವಿಳಂಬ ನೀತಿ ಅನುಸರಿಸುತ್ತಿರುವುದನ್ನು ವಿರೋಧಿಸಿ ಕರ್ನಾಟಕ ರಾಜ್ಯ ಗ್ರಾಮ ಪಂಚಾಯತ ನೌಕರರ ಸಂಘ ಚಿಕ್ಕೋಡಿ ತಾಲೂಕ ಸಮಿತಿ ವತಿಯಿಂದ ಚಿಕ್ಕೋಡಿ ತಾಲೂಕು ಪಂಚಾಯತಿ ಮುಂದೆ ಪ್ರತಿಭಟನೆ ಮಾಡಿದರು. ಪಂಚಾಯತಿಗಳಲ್ಲಿ ಕೆಲಸ ನಿರ್ವಹಿಸುತ್ತಿರುವ ನೌಕರರಿಗೆ ವೇತನ ಕೊರತೆಯಾಗುವ ಮೊತ್ತವನ್ನು 14 ನೇ ಹಣಕಾಸಿನ ಯೋಜನೆಯಲ್ಲಿ ಶೇ.10 ರಷ್ಟು ಮೊತ್ತವನ್ನು ಸಿಬ್ಬಂದಿ ಖಾತೆಗೆ ಜಮಾ ಮಾಡಿ ವೇತನ …
Read More »ಫೆಬ್ರವರಿ 13ರ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ.
ಬೆಳಗಾವಿ/ಚಿಕ್ಕೋಡಿ: ಸರೋಜಿನಿ ಮಹಿಷಿ ವರದಿ ಜಾರಿಗೆ ಆಗ್ರಹಿಸಿ ವಿವಿಧ ಕನ್ನಡ ಸಂಘಟನೆಗಳು ಕರೆ ನೀಡಿರುವ ಫೆಬ್ರವರಿ 13ರ ಬಂದ್‍ಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ ನೀಡುವುದಿಲ್ಲ ಎಂದು ರಾಜ್ಯಾಧ್ಯಕ್ಷ ನಾರಾಯಣಗೌಡ ಹೇಳಿದ್ದಾರೆ. ಬಂದ್ ಕುರಿತು ಚಿಕ್ಕೋಡಿಯಲ್ಲಿ ಪಬ್ಲಿಕ್ ಟಿವಿಗೆ ಪ್ರತಿಕ್ರಿಯೆ ನೀಡಿದ ನಾರಾಯಣಗೌಡರು, ಸರೋಜಿನಿ ಮಹಿಷಿ ವರದಿ ಜಾರಿ ವಿಚಾರವಾಗಿ ಕರವೇ ಹೋರಾಟ ಮುಂದುವರಿಯಲಿದೆ. ಆದರೆ ನಾಳೆ ನಡೆಯುವ ಬಂದ್‍ಗೆ ಯಾವುದೇ ಬೆಂಬಲವನ್ನು ಕರವೇ ನೀಡುವುದಿಲ್ಲ. ಕೆಲ ಕನ್ನಡ ಸಂಘಟನೆಗಳು ಮಾತು …
Read More »