Breaking News

ಬೈಲ್ ಹೊಂಗಲ್

ಬೈಲಹೊಂಗಲ | ಬೆಂಕಿ ಅವಘಡ: ಸುಟ್ಟು ಕರಕಲಾದ ಬಣವೆ

ಬೈಲಹೊಂಗಲ: ಆಕಸ್ಮಿಕವಾಗಿ ಬೆಂಕಿ ತಗುಲಿದ್ದರಿಂದ ಸೋಯಾಬೀನ್ ಕಾಳಿನ ಬಣವೆ ಸುಟ್ಟು ಕರಕಲಾದ ಘಟನೆ ತಾಲ್ಲೂಕಿನ ದೊಡವಾಡ ಗ್ರಾಮದ ಬುಧವಾರ ತಡರಾತ್ರಿ ಸಂಭವಿಸಿದೆ. ರೈತ ಸಿದ್ದಪ್ಪ ವೀರಭದ್ರಪ್ಪ ಹುದಲಿ ಅವರಿಗೆ ಸೇರಿದ ಬಣವೆಗೆ ಬೆಂಕಿ ಹೊತ್ತಿಕೊಂಡಿದೆ. ಬೈಲಹೊಂಗಲದ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ, ಬೆಂಕಿ ನಂದಿಸಿದರು.   ’11 ಎಕರೆಯಲ್ಲಿ ಬೆಳೆದಿದ್ದ ಸೋಯಾಬೀನ್‌ ಕಾಯಿಗಳನ್ನು ಒಂದೆಡೆ ರಾಶಿ ಮಾಡಿ ಇಟ್ಟಿದ್ದೆವು. ಇದರಿಂದ ಸುಮಾರು ₹5 ಲಕ್ಷ ಕೈಗೆಟುಕಬಹುದು ಎಂದು ಅಂದಾಜಿಸಿದ್ದೆವು. ಆದರೆ, …

Read More »

ಕೂಲಿ ಕಾರ್ಮಿಕರ ಜಗಳ: ಒಬ್ಬರ ಕೊಲೆಯಲ್ಲಿ ಅಂತ್ಯ

ಬೈಲಹೊಂಗಲ: ಉಪಹಾರದ ಕೈಚೀಲಕ್ಕಾಗಿ ಕೂಲಿ ಕಾರ್ಮಿಕರಿಬ್ಬರ ಮಧ್ಯೆ ಮಾತಿನ ಚಕಮಕಿ ನಡೆದು ಕಾರ್ಮಿಕನೊಬ್ಬನನ್ನು ಕುಡಗೋಲಿನಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲ್ಲೂಕಿನ ಬುಡರಕಟ್ಟಿ ಗ್ರಾಮದಲ್ಲಿ ಸೋಮವಾರ ನಡೆದಿದೆ. ಬುಡರಕಟ್ಟಿ ಗ್ರಾಮದ ರುದ್ರಪ್ಪ ಶಿವಬಸಪ್ಪ ಪಾಗಾದ(64) ಕೊಲೆಯಾದವರು. ಮಲ್ಲಪ್ಪ ಶಿವಶಂಕರ ಯರಗೊಪ್ಪ(42) ಕೊಲೆ ಆರೋಪಿ. ಮೃತ ರುದ್ರಪ್ಪ ತನ್ನ ಉಪಹಾರವಿದ್ದ ಕೈಚೀಲವನ್ನು ಗ್ರಾಮ ಪಂಚಾಯಿತಿ ಕಟ್ಟೆ ಮೇಲೆ ಇಟ್ಟು, ಇನ್ನೊಬ್ಬ ಕೂಲಿ ಕಾರ್ಮಿಕನನ್ನು ಕರೆತರಲು ಹೋಗಿದ್ದರು. ರುದ್ರಪ್ಪನ ಉಪಹಾರದ ಕೈಚೀಲವ ಆರೋಪಿ …

Read More »

ಶಾಂತಿ, ಸೌಹಾರ್ದದಿಂದ ಗಣೇಶ ಹಬ್ಬ ಆಚರಿಸಿ: ತಹಶೀಲ್ದಾರ್‌ ಮನವಿ

ಬೈಲಹೊಂಗಲ: ‘ಗೌರಿಗಣೇಶ ಹಬ್ಬವನ್ನು ಸಾರ್ವಜನಿಕರು ಶಾಂತಿ ಹಾಗೂ ಸೌಹಾರ್ದಯುತವಾಗಿ ಆಚರಿಸಬೇಕು. ಗಜಾನನ ಯುವಕ ಮಂಡಳಿಗ ಹಿರಿಯರು, ಮುಖಂಡರು ಯಾವುದೇ ಅಹಿತಕರ ಘಟನೆಗಳು ಆಗದಂತೆ ಮುಂಜಾಗೃತಿವಹಿಸಬೇಕು’ ಎಂದು ತಹಶೀಲ್ದಾರ್‌ ಎಚ್.ಎನ್.ಶಿರಹಟ್ಟಿ ಹೇಳಿದರು. ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾ ಭವನದಲ್ಲಿ ಗಣೇಶ ಹಬ್ಬ ಆಚರಣೆ ಅಂಗವಾಗಿ ಮಂಗಳವಾರ ಬೈಲಹೊಂಗಲ ಹಾಗೂ ನೇಸರಗಿ ಪೊಲೀಸ್ ಠಾಣೆ ವ್ಯಾಪ್ತಿಯ ಗಣೇಶ ಉತ್ಸವ ಮಂಡಳಿಗಳಿಗೆ ಮಂಗಳವಾರ ನಡೆದ ಶಾಂತಿಪಾಲನೆ ಸಭೆ ನೇತೃತ್ವ ವಹಿಸಿ ಮಾತನಾಡಿದರು.   ಡಿವೈಎಸ್ಪಿ ರವಿ …

Read More »

ಬೈಲಹೊಂಗಲದ ಬಳಿ ಕ್ಯಾಂಟರ್ ಪಲ್ಟಿ: ಮೂರು ಕರು ಸಾವು

ಬೈಲಹೊಂಗಲ: ತಾಲ್ಲೂಕಿನ ಚಿಕ್ಕಬಾಗೇವಾಡಿ ಗ್ರಾಮದ ಹೆದ್ದಾರಿಯಲ್ಲಿ ಗುರುವಾರ ಗೋವುಗಳನ್ನು ಅಕ್ರಮವಾಗಿ ಸಾಗಿಸುತ್ತಿದ್ದ ಕ್ಯಾಂಟರ್ ಪಲ್ಟಿಯಾಗಿ, ಮೂರು ಕರುಗಳು ಮೃತಪಟ್ಟಿವೆ. ಮಹಾರಾಷ್ಟ್ರ ನೋಂದಣಿ ಹೊಂದಿದ ಕ್ಯಾಂಟರ್‌ನಲ್ಲಿ 12 ಗೋವುಗಳನ್ನು ತುಂಬಿಕೊಂಡು ಸಾಗುವಾಗ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಚಾಲಕ ಪರಾರಿಯಾಗಿದ್ದಾನೆ. ಘಟನೆಯಲ್ಲಿ 3 ಕರುಗಳು ಮೃತಪಟ್ಟಿದ್ದು, ಎರಡು ಹಸುಗಳ ಸ್ಥಿತಿ ಗಂಭೀರವಾಗಿವೆ.‌ ಏಳು ಹಸುಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ.ವಿಷಯ ತಿಳಿದು ಸ್ಥಳಕ್ಕೆ ಬಂದ ಪೊಲೀಸರು, ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಕ್ಯಾಂಟರ್‌ನಲ್ಲಿ ಸಿಲುಕಿದ್ದ ಹಸುಗಳನ್ನು …

Read More »

ಬೈಲಹೊಂಗಲ ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ವ್ಯಕ್ತಿಯ ಕೊಲೆ

ಬೈಲಹೊಂಗಲ: ಸಮೀಪದ ಬೆನಕಟ್ಟಿ ಗ್ರಾಮದಲ್ಲಿ ವ್ಯಕ್ತಿಯೊಬ್ಬನನ್ನು ಕೊಲೆ ಮಾಡಿದ ಘಟನೆ ಶನಿವಾರ ನಡೆದಿದೆ. ಸವದತ್ತಿ ತಾಲೂಕಿನ ಬೆನಕಟ್ಟಿ ಗ್ರಾಮದ ಕಾಡಪ್ಪ ರುದ್ರಪ್ಪ ಶಿರಸಂಗಿ(42) ಕೊಲೆಯಾದ ವ್ಯಕ್ತಿ. ಮಬನೂರ ಗ್ರಾಮದ ಲಕ್ಷ್ಮಣ ದೇವೇಂದ್ರಪ್ಪ ಹೂಲಿ(21), ಜೀವಾಪುರ ಗ್ರಾಮದ ಸತೀಶ ಯಮನಪ್ಪ ಅರಿಬೆಚ್ಚಿ(28) ಬಂಧಿತ ಆರೋಪಿಗಳು. ಮುರಗೋಡ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸಿದ್ದಾರೆ.

Read More »

0 ಪಂಪ್‌ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿ

ಬೈಲಹೊಂಗಲ: ತಾಲ್ಲೂಕಿನ ನಯಾನಗರ ಗ್ರಾಮದ ಮಲಪ್ರಭಾ ನದಿ ದಡದಲ್ಲಿರುವ ರೈತರ ಜಮೀನಿನ 10 ಪಂಪ್‌ಸೆಟ್ ಕಳವು ಮಾಡಿ ಪರಾರಿಯಾಗಿದ್ದ ಆರೋಪಿಗಳನ್ನು ಪೊಲೀಸರು ಪತ್ತೆ ಹಚ್ಚಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಧಾರವಾಡದ ಮಾಳಾಪೂರ ಖಾದ್ರಿ ಗಲ್ಲಿ ನಿವಾಸಿಗಳಾದ ಮೊಹಮ್ಮದನದೀಮ ಮಹಮ್ಮದಹನೀಫ ಹೆಬ್ಬಳ್ಳಿ (33), ರಿಯಾಜ ರಫೀಕ ಕಾರಿಗಾರ (28), ಸಮೀರ ನಜೀರ ಹೆಬ್ಬಳ್ಳಿ (21), ಜಾಕೀರಹುಸೇನ ನೂರಹ್ಮದ ಮಾಲದಾರ (25) ಬಂಧಿತರು. ಬಂಧಿತರಿಂದ ₹2 ಲಕ್ಷ ಮೌಲ್ಯದ 10 ಪಂಪ್‌ಸೆಟ್‍ಗಳನ್ನು ಹಾಗೂ ಅಪಾರಧಕ್ಕೆ ಬಳಸಿದ್ದ …

Read More »

ಬೈಲಹೊಂಗಲ | ಮೊಹರಂ ಸಿದ್ಧತೆ: ಚಿನಕೋಲು, ಹುಲಿ‌ಕುಣಿತದ ಸದ್ದು

ಬೈಲಹೊಂಗಲ: ಸರ್ವಧರ್ಮ ಸಮನ್ವಯದ ಸಂದೇಶ ಸಾರುವ ಮೊಹರಂ ಹಬ್ಬದ ಸಂಭ್ರಮದ ಆಚರಣೆಗಾಗಿ ತಾಲ್ಲೂಕಿನ ವಕ್ಕುಂದ ಗ್ರಾಮದಲ್ಲಿ ಈಗಾಗಲೇ ತಯಾರಿ ಶುರುವಾಗಿದೆ. ವಾಲ್ಮೀಕಿ ಸಮಾಜದ ಯುವ ಪಡೆ ಹಾಗೂ ಎಲ್ಲ ಸಮಾಜದವರು ಸೇರಿಕೊಂಡು ಹಬ್ಬದ ಆಚರಣೆಗೆ ಭರದ ಸಿದ್ಧತೆ ನಡೆಸಿದ್ದಾರೆ. ಚಿನಕೋಲು, ಹುಲಿಕುಣಿತದ ತಯಾರಿ: ವಾಲ್ಮೀಕಿ ಸಮಾಜದ ಯುವ ಪಡೆಯ 20ಕ್ಕೂ ಹೆಚ್ಚಿನ ಜನ ಸದಸ್ಯರು ಕಾಲಿಗೆ ಗೆಜ್ಜೆ ಕಟ್ಟಿಕೊಂಡು, ಹಿರಿಯರ ಮಾರ್ಗದರ್ಶನದಂತೆ ಮೊಹರಂ ಗೀತೆಗಳಿಗೆ ಹೆಜ್ಜೆ ಹಾಕುತ್ತಿದ್ದಾರೆ. ವಕ್ಕುಂದದ ಸುತ್ತಲಿನ …

Read More »

ಚನ್ನಮ್ಮನ ಸ್ಮಾರಕ ಬಾವಿ ಅಭಿವೃದ್ಧಿಗೆ ₹ 50 ಲಕ್ಷ: ಪ್ರಭಾವತಿ

ಬೈಲಹೊಂಗಲ: ಪಟ್ಟಣದ ಹುಡೇದ ಗಲ್ಲಿಯಲ್ಲಿರುವ ವೀರರಾಣಿ ಕಿತ್ತೂರು ಚನ್ನಮ್ಮನ ಸ್ಮಾರಕ ಬಾವಿ ಅಭಿವೃದ್ಧಿಗೆ 50 ಲಕ್ಷ ರೂ. ಅನುದಾನದಲ್ಲಿ ಅಭಿವೃದ್ಧಿ ಪಡಿಸಲು ಕ್ರೀಯಾಯೋಜನೆ ರೂಪಿಸಲಾಗಿದೆ ಎಂದು ಉಪ ವಿಭಾಗಾಧಿಕಾರಿ ಪ್ರಭಾವತಿ ಫಕೀರಪೂರ ಹೇಳಿದರು. ಪಟ್ಟಣದ ವೀರರಾಣಿ ಕಿತ್ತೂರು ಚನ್ನಮ್ಮನ ಐಕ್ಯ ಸ್ಥಳ ಹಾಗೂ ಹುಡೇದ ಗಲ್ಲಿ ಹತ್ತಿರ ಇರುವ ವೀರರಾಣಿ ಕಿತ್ತೂರು ಚನ್ನಮ್ಮನ ಸ್ಮಾರಕ ಭಾವಿಗೆ ಭೇಟಿ ನೀಡಿ ಪರಿಶೀಲಿಸಿ ಅವರು ಮಾತನಾಡಿದರು. ‘ಕಿತ್ತೂರು ಚನ್ನಮ್ಮ ಸ್ಮಾರಕ ಬಾವಿ ಅಭಿವೃದ್ದಿಗೆ …

Read More »

ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

ಬೈಲಹೊಂಗಲ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಸಂಭವಿಸಿ ಎಂಟು ಜನರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಯಾನಗರ ಗ್ರಾಮದ ಸಮೀಪ ಸೋಮವಾರ ನಡೆದಿದೆ. ನಯಾನಗರ ಗ್ರಾಮದ ಮಲಪ್ರಭಾ ನದಿ ಹತ್ತಿರದ ದಾಬಾ ದಾಟಿ ಸಂಚರಿಸುತ್ತಿದ್ದ ಮಾರುತಿ 800 ಮತ್ತು ಅಲ್ಟೋ ಕಾರು ಪರಸ್ಪರ ಡಿಕ್ಕಿ ಹೊಡಿದಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ಜಖಂಗೊಂಡು ನುಜ್ಜುಗುಜ್ಜಾಗಿವೆ. ಚಾಲಕರಾದ ಲಿಂಗದಳ್ಳಿ ಗ್ರಾಮದ ಕಿರಣ ಅಡಿವೆಪ್ಪ ಪೂಜೇರ, ಆನಿಗೋಳದ ಮಹಾಂತೇಶ ರಾಮನಿಂಗಪ್ಪ ಕುರಿ ಸೇರಿದಂತೆ ಎಂಟು …

Read More »

ಬೆಳಗಾವಿ | ಧಾರಾಕಾರ ಮಳೆ: ಮನೆಗಳಿಗೆ ನುಗ್ಗಿದ ನೀರು

ಬೈಲಹೊಂಗಲ: ಪಟ್ಟಣ ಹಾಗೂ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಗುರುವಾರ ಧಾರಾಕಾರ ಮಳೆ ಸುರಿಯಿತು. ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣವಿತ್ತು. ಮಧ್ಯಾಹ್ನದ ಹೊತ್ತಿಗೆ ಬಿರುಸಿನ ಮಳೆ ಬಿದ್ದು, ಪಟ್ಟಣದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿತು. ಹೊಸೂರ ರಸ್ತೆಯ ವಿಜಯ ಸೋಸಿಯಲ್ ಕ್ಲಬ್, ಪೊಲೀಸ್ ಠಾಣೆ, ಬಸ್ ನಿಲ್ದಾಣ ಮುಖ್ಯ ರಸ್ತೆಗಳು ಮಳೆ ನೀರಿನಿಂದಾಗಿ ಕೆರೆಯಂತೆ ಕಂಡವು. ಕಾರ್‌, ಬೈಕ್‌ ಸವಾರರು ಸಂಚಾರಕ್ಕೆ ಪರದಾಡುವಂತಾಯಿತು. ಈಟಿ ಬಸವೇಶ್ವರ ದೇವಸ್ಥಾನ ಹತ್ತಿರದ ಎಂ.ಜೆ. ಹೌಸಿಂಗ್ …

Read More »