Breaking News

ಸವದತ್ತಿ

ನೀರು ಕೊಟ್ಟು, ರಸ್ತೆ ಕಿತ್ತುಕೊಂಡರು

ಸವದತ್ತಿ: ನಿರಂತರ ನೀರು (24X7) ಪೂರೈಕೆಗಾಗಿ ಪಟ್ಟಣದ ಬಹುಪಾಲು ರಸ್ತೆಗಳನ್ನು ಅಗೆದು ಹಾಕಲಾಗಿದೆ. ಕಾಮಗಾರಿ ಮುಗಿದ ಮೇಲೆ ಮತ್ತೆ ರಸ್ತೆ ದುರಸ್ತಿ ಮಾಡಿಲ್ಲ. ಇದೇ ಪರಿಸ್ಥಿತಿ ತಾಲ್ಲೂಕಿನ ವಿವಿಧ ಗ್ರಾಮಗಳಲ್ಲೂ ತಲೆದೋರಿದೆ. ಕೊರಕಲು ರಸ್ತೆಗಳಿಂದ ಜನ ಬೇಸತ್ತುಹೋಗಿದ್ದಾರೆ. ಅಧಿಕಾರಿಗಳು ಮಾತ್ರ ಒಬ್ಬರ ಮೇಲೊಬ್ಬರ ನೆಪ ಹೇಳಿಕೊಂಡು ದಿನ ಕಳೆಯುತ್ತಿದ್ದಾರೆ. ಸುಪ್ರಸಿದ್ಧ ಪ್ರೇಕ್ಷಣೀಯ ಸ್ಥಾನ ಯಲ್ಲಮ್ಮನ ಗುಡ್ಡವನ್ನು ಸುತ್ತವರಿದು ಸವದತ್ತಿ ಪಟ್ಟಣ ಹಾಗೂ ಗ್ರಾಮಗಳಿವೆ. ವಿಶಾಲವಾಗಿ ಹರಿದ ಮಲಪ್ರಭೆಯಿಂದ ಸಾಕಷ್ಟು ನೀರಿನ …

Read More »

ಟಿಎಚ್‌ಒಗೆ ಪಿಡಿಒ ಅವಾಚ್ಯ ಪದ ಬಳಕೆ: ಖಂಡನೆ

ಸವದತ್ತಿ: ಇಂಚಲ ಪಿಡಿಒ, ತಾಲ್ಲೂಕು ಆರೋಗ್ಯಾಧಿಕಾರಿಗಳಿಗೆ ಅವಾಚ್ಯವಾಗಿ ಬೈದು, ನಿಂದಿಸಿದ್ದನ್ನು ಖಂಡಿಸಿ ಶಿಸ್ತುಕ್ರಮಕ್ಕೆ ಆಗ್ರಹಿಸಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಸಿಬ್ಬಂದಿ ಸೋಮವಾರ ಪ್ರತಿಭಟಿಸಿ ತಹಶೀಲ್ದಾರ್ ಎಂ.ಎನ್. ಹೆಗ್ಗನ್ನವರ ಅವರಿಗೆ ಮನವಿ ಸಲ್ಲಿಸಿದರು. ಮುಖ್ಯ ವೈದ್ಯಾಧಿಕಾರಿ ಎಚ್.ಎಂ. ಮಲ್ಲನಗೌಡರ ಮಾತನಾಡಿ, ‘ಇಂಚಲ ಗ್ರಾಮದ ಪಿಎಚ್‌ಸಿಯಲ್ಲಿ ವೈದ್ಯಾಧಿಕಾರಿ ಹುದ್ದೆ ಖಾಲಿ ಇದ್ದು, ಪರ್ಯಾಯವಾಗಿ ಚಚಡಿಯ ಪಿಎಚ್‌ಸಿಯ ಡಾ.ವಿಶಾಲು ಗದಗ ಮತ್ತು ಡಾ. ನಾಗರಾಜಗೌಡ ಮಾಳಿಪಾಟೀಲರನ್ನು ಹೆಚ್ಚುವರಿಯಾಗಿ ನೇಮಿಸಲಾಗಿದೆ. ಸಾರ್ವಜನಿಕರಿಗೆ ಸಮಸ್ಯೆಯಾಗದಂತೆ ಇಲಾಖೆಯಿಂದ …

Read More »

ಸವದತ್ತಿ: 99 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ

ಸವದತ್ತಿ: ಇಲ್ಲಿನ ಗುರ್ಲಹೊಸೂರಿನ ಚಿದಂಬರೇಶ್ವರ ದೇವಸ್ಥಾನದಲ್ಲಿ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸುಜ್ಞಾನನಿಧಿ ಶಿಷ್ಯವೇತನ ಮಂಜೂರಾತಿ ಪತ್ರ ವಿತರಣಾ ಕಾರ್ಯಕ್ರಮ ಶುಕ್ರವಾರ ಜರುಗಿತು. ಪಿಐ ಧರ್ಮಾಕರ ಧರ್ಮಟ್ಟಿ ಮಾತನಾಡಿ, ಮಹಿಳೆಯರ ಆರ್ಥಿಕಾಭಿವೃದ್ಧಿಗೆ ಮಾತ್ರವಲ್ಲದೇ ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೂ ಧರ್ಮಸ್ಥಳ ಸಂಘ ಆರ್ಥಿಕ ನೆರವು ನೀಡುತ್ತಿರುವ ಕಾರ್ಯ ಶ್ಲಾಘನೀಯ. ತಾಲ್ಲೂಕಿನ 99 ವಿದ್ಯಾರ್ಥಿಗಳಿಗೆ ಸುಜ್ಞಾನನಿಧಿ ಶಿಷ್ಯವೇತನ ನೀಡಿ ಬಡ ಮಕ್ಕಳನ್ನು ಶೈಕ್ಷಣಿಕವಾಗಿ ಮೇಲೆತ್ತುವ ಕಾರ್ಯ ಮಾದರಿಯಾಗಿದೆ ಎಂದರು. ವೇದಿಕೆಯಲ್ಲಿ 99 ಮಂದಿ …

Read More »

ರಥದ ಕಳಸ ಬಿದ್ದು ಬಾಲಕ ಸಾವು

ಚಚಡಿ: ಸವದತ್ತಿ ತಾಲ್ಲೂಕಿನ ಚಚಡಿ ಗ್ರಾಮದಲ್ಲಿ ಸೋಮವಾರ, ರಥೋತ್ಸವ ವೇಳೆ ರಥದ ಮೇಲಿನ ಬೆಳ್ಳಿಯ ನವಿಲು ಬಿದ್ದು ಶಿವಾನಂದ ರಾಜಕುಮಾರ ಸಾವಳಗಿ (13) ಎಂಬ ಬಾಲಕ ಮೃತಪಟ್ಟಿದ್ದಾನೆ. ಪ್ರತಿ ವರ್ಷದ ವಾಡಿಕೆಯಂತೆ ಶ್ರಾವಣದ ಪ್ರಯುಕ್ತ ಸಂಗಮೇಶ್ವರ ರಥೋತ್ಸವಕ್ಕೆ ಸಿದ್ಧತೆಯಾಗಿತ್ತು. 30 ಅಡಿ ಎತ್ತರದ ರಥದ ಮೇಲಿನ ಕಳಸದ ಮೇಲೆ 5 ಕೆಜಿ ತೂಕದ ಬೆಳ್ಳಿಯ ನವಿಲು ಪ್ರತಿಷ್ಠಾಪಿಸಲಾಗಿತ್ತು. ಸಾವಿರ ವರ್ಷಗಳ ಇತಿಹಾಸಯುಳ್ಳ ಈ ಜಾತ್ರೆಯಲ್ಲಿ ಇದೇ ಮೊದಲ ಸಲ ಬೆಳ್ಳಿಯ …

Read More »

ನವಿಲುತೀರ್ಥ ಭರ್ತಿಗೆ ಕಾಲ ಸನ್ನಿಹಿತ

ಸವದತ್ತಿ: ಪಶ್ಚಿಮ ಘಟ್ಟದಲ್ಲಿ ಸುರಿದ ಭಾರೀ ಮಳೆಯಿಂದ ಮಲಪ್ರಭಾ ನದಿಯ ಒಳಹರಿವು ಗಣನೀಯ ಪ್ರಮಾಣದಲ್ಲಿ ಏರಿಕೆಯಾಗುತ್ತಿದೆ. ನವಿಲುತೀರ್ಥ (ಇಂದಿರಾ) ಅಣೆಕಟ್ಟು 10ನೇ ಬಾರಿ ಭರ್ತಿಯಾಗುವ ಕಾಲ ಸನ್ನಿಹಿತವಾಗಿದೆ. ಇದರಿಂದ ಆಣೆಕಟ್ಟೆ ಕೆಳಭಾಗದ ಮತ್ತು ನದಿ ಪಾತ್ರದ ಜನತೆಗೆ ಈಗಾಗಲೇ ಮುನ್ನೆಚ್ಚರಿಕೆ ನೀಡಲಾಗಿದೆ. ನವಿಲುತೀರ್ಥ ಅಣೆಕಟ್ಟೆ ಗರಿಷ್ಠ ಮಟ್ಟ 2079.50 ಅಡಿ. ಇದೀಗ 2069.60 ಅಡಿ ನೀರು ಸಂಗ್ರಹವಾಗಿದೆ. ಸದ್ಯ 21 ಸಾವಿರ ಕ್ಯುಸೆಕ್‌ಗೂ ಅಧಿಕ ಒಳಹರಿವಿದೆ. 10 ಸಾವಿರ ಕ್ಯುಸೆಕ್‌ನಷ್ಟು ನೀರನ್ನು …

Read More »

50 ದಿನದಲ್ಲಿ ರೇಣುಕಾ ಯಲ್ಲಮ್ಮ ದೇವಿಗೆ ಬಂದ ಕಾಣಿಕೆ ಎಷ್ಟು ಕೋಟಿ ಗೊತ್ತಾ..?

ಬೆಳಗಾವಿ : ಕರ್ನಾಟಕ ,ಮಹಾರಾಷ್ಟ್ರ ಹಾಗೂ ಗೋವಾ ಸೇರಿದಂತೆ ವಿವಿಧ ಕಡೆ ಭಕ್ತರನ್ನು ಹೊಂದಿರುವ ಸವದತ್ತಿ ಶ್ರೀರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ಕೇವಲ 50 ದಿನದಲ್ಲಿ ಬರೋಬರಿ 1.96ಕೋಟಿ ಭಕ್ತರ ಕಾಣಿಕೆ ಸಂಗ್ರಹವಾಗಿದೆ‌. ಬೆಳಗಾವಿ ಜಿಲ್ಲೆಯ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮನ ದೇವಸ್ಥಾನದಲ್ಲಿ ಹುಂಡಿ ಎಣಿಕೆ ಕಾರ್ಯ ಮುಕ್ತಾಯವಾಗಿದ್ದು, ಏಪ್ರಿಲ್‌ 1ರಿಂದ ಮೇ 20ರ ಅವಧಿಯಲ್ಲಿ ಭಕ್ತರು ಹಾಕಿದ್ದ ಭಕ್ತರ ಕಾಣಿಕೆ ಎಣಿಕೆ ಬುಧುವಾರ ರಾತ್ರಿ ಮುಕ್ತಾಯವಾಗಿದೆ‌‌.     50ದಿನಗಳಲ್ಲಿ ಒಟ್ಟು …

Read More »

ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ..!

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಮಾರ್ಗದರ್ಶಕರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾ ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲ್ಲೂಕಿನ ನುಗ್ಗಾನಟ್ಟಿ ಗ್ರಾಮದ ಶ್ರೀ ಪಾಂಡುರಂಗ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮೀ ಶುಗರ್ಸ್ ಮಾರ್ಗದರ್ಶಕರಾದ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ …

Read More »

ಸವದತ್ತಿ: ಬಹಿರ್ದೆಸೆ ತಾಣವಾದ ಚಿಕ್ಕುಂಬಿ ಕೆರೆ, ಅಧಿಕಾರಿಗಳ ವಿರುದ್ಧ ಜನರ ಆಕ್ರೋಶ

ಸವದತ್ತಿ: ಗ್ರಾಮಸ್ಥರ ಜೀವನಾಡಿಯಾಗಿದ್ದ ಚಿಕ್ಕುಂಬಿ ಕೆರೆ ಇದೀಗ ಬಹಿರ್ದೆಸೆ ತಾಣವಾಗಿ ಮಾರ್ಪಟ್ಟಿದೆ. ಗ್ರಾಮ ಪ್ರವೇಶಿಸುತ್ತಿದ್ದಂತೆ ದುರ್ವಾಸನೆಯೇ ಸ್ವಾಗತಿಸುತ್ತದೆ.   ಕೆರೆಯ ಸುತ್ತಲೂ ಮುತ್ತಿಕೊಂಡಿರುವ ಕಸರದ ರಾಶಿ, ತಿಪ್ಪೆ ಗುಂಡಿಗಳು ರಸ್ತೆವರೆಗೂ ಹಬ್ಬಿವೆ.

Read More »

ರೈತನ ಬಾಳು ಬೆಳಗಿದ ‘ಕೃಷಿ ಹೊಂಡ’

ಸವದತ್ತಿ: ಈ ಹಿಂದೆ ನೀರಿನ ಕೊರತೆಯಿಂದ ಕೃಷಿ ಕಾಯಕದಲ್ಲಿ ಹಿನ್ನಡೆ ಅನುಭವಿಸುತ್ತಿದ್ದ ತಾಲ್ಲೂಕಿನ ಗೊಂತಮಾರದ ರೈತ ಬಸವರಾಜ ನೇಕಾರ, ಈಗ ಕೃಷಿ ಹೊಂಡದ ನೆರವಿನಿಂದ ಸಮೃದ್ಧವಾಗಿ ಕೃಷಿ ಮಾಡುತ್ತಿದ್ದಾರೆ. ಹೊಂಡದಲ್ಲಿ ಸಂಗ್ರಹವಾದ ಮಳೆ ನೀರನ್ನು ಬೇಡಿಕೆಯನುಸಾರ ವಿವಿಧ ಬೆಳೆಗಳಿಗೆ ಉಣಿಸಿ ಉತ್ತಮ ಆದಾಯ ಗಳಿಸುತ್ತಿದ್ದಾರೆ.   13 ಎಕರೆ ಜಮೀನು ಹೊಂದಿರುವ ಬಸವರಾಜ ಓದಿದ್ದು 9ನೇ ತರಗತಿಯಷ್ಟೇ. ಆದರೆ, ಕೃಷಿಯಲ್ಲಿ ಏನನ್ನಾದರೂ ಸಾಧಿಸುವ ತವಕ ಅವರಲ್ಲಿತ್ತು. ಮಳೆಗಾಲದಲ್ಲೇನೂ ಹೆಚ್ಚಿನ ಸಮಸ್ಯೆಯಾಗುತ್ತಿರಲಿಲ್ಲ. …

Read More »

‘ವಚನ ಕಟ್ಟು ರಕ್ಷಿಸಿದ ಮಾಚಿದೇವ’

ಸವದತ್ತಿ: ‘ಹನ್ನೆರಡನೇ ಶತಮಾನದ ಬಸವಣ್ಣನವರ ಕಾಲದಲ್ಲಿನ ವಚನ ಕಟ್ಟುಗಳನ್ನು ರಕ್ಷಿಸುವಲ್ಲಿ ಮಾಚಿದೇವ ಪ್ರಮುಖ ಪಾತ್ರ ವಹಿಸಿದ್ದರು. ಜೊತೆಗೆ ಸಕಲ ಶರಣರ ವಸ್ತ್ರಗಳನ್ನು ಶುಚಿಗೊಳಿಸುವಲ್ಲಿ ತಲ್ಲೀನರಾಗಿದ್ದರು’ ಎಂದು ತಹಶೀಲ್ದಾರ್‌ ಎಂ.ಎನ್.ಹೆಗ್ಗನ್ನವರ ಹೇಳಿದರು.‌ ಇಲ್ಲಿನ ತಹಶೀಲ್ದಾರ್ ಕಚೇರಿಯಲ್ಲಿ ಗುರುವಾರ ಮಡಿವಾಳ ಮಾಚಿದೇವರ ಜಯಂತಿ ಆಚರಿಸಿ ಮಾತನಾಡಿದ, ವಚನಗಳ ರಕ್ಷಣೆ ವೇಳೆ ಮಾಚಿದೇವರು ವೀರಭದ್ರನ ಅವತಾರ ತಾಳಿದ್ದು ವಿಶೇಷ. ಇಂದು ಮಡಿವಾಳ ಸಮುದಾಯ ಸಮಾಜದ ಮುಖ್ಯವಾಹಿನಿಗೆ ಬರುತ್ತಿರುವುದು ಶ್ಲಾಘನೀಯವೆಂದರು. ಶಾಸಕರ ಸಹೋದರ ಅಶ್ವತ್ ವೈದ್ಯ …

Read More »