Breaking News
Home / ಜಿಲ್ಲೆ / ಬೆಳಗಾವಿ / ಸವದತ್ತಿ (page 3)

ಸವದತ್ತಿ

ನವ ದುರ್ಗೆಯ ಅವತಾರಿಣಿ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಭ್ರಮ

ಸವದತ್ತಿ: ನವ ದುರ್ಗೆಯ ಅವತಾರಿಣಿ ಯಲ್ಲಮ್ಮ ದೇವಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವ ಸಂಭ್ರಮ ಮನೆ ಮಾಡಿದೆ. ಮೊದಲ ದಿನವಾದ ಸೋಮವಾರದಿಂದಲೇ ಭಕ್ತರು ಸಾಗರೋಪಾದಿಯಲ್ಲಿ ಹರಿದುಬಂದರು. ಘಟಸ್ಥಾಪನೆಯ ಮೂಲಕ ನವವೈಭವಕ್ಕೆ ವಿಧ್ಯುಕ್ತ ಚಾಲನೆಯೂ ದೊರೆಯಿತು.   ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಭಕ್ತರು ದೇವಿಯ ದರ್ಶನಕ್ಕೆ ಬರುತ್ತಿದ್ದಾರೆ. ಅವಮಾಸ್ಯೆ ನಂತರದ ಮೊದಲ ದಿನ ಸೋಮವಾರ ಸಂಜೆ 4.30 ರಿಂದ 6.30 ಒಳಗಾಗಿ ಅಮ್ಮನಿಗೆ ವಿಶೇಷ ಪೂಜೆ ಸಲ್ಲಿಸಿ ಮಹಾಮಂಗಳಾರತಿ ಮೂಲಕ ಘಟಸ್ಥಾಪನೆ ಜರುಗಿತು. …

Read More »

ಆನಂದ ಮಾಮನಿ ಅನಾರೋಗ್ಯದ ಹಿನ್ನೆಲೆ ಬೆಳಗಾವಿಯಲ್ಲಿ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಮೃತ್ಯುಂಜಯ ಯಾಗ ಹೋಮಾ, ಉರುಳು ಸೇವೆ,

ಬೆಳಗಾವಿ: ಸವದತ್ತಿ ವಿಧಾನಸಭಾ ಕ್ಷೇತ್ರದ ಶಾಸಕ, ವಿಧಾನಸಭೆ ಉಪಸಭಾಪತಿ ಆನಂದ ಮಾಮನಿ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆ ಸವದತ್ತಿಯ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಅವರ ಅಭಿಮಾನಿಗಳು ಉರುಳು ಸೇವೆ, ಮೃತ್ಯುಂಜಯ ಯಾಗ ಹೋಮ ಮಾಡಿದ್ದಾರೆ.   ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಶ್ರೀರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಶಾಸಕ ಆನಂದ ಮಾಮನಿ ಗುಣಮುಖರಾಗಲಿ, ಆರೋಗ್ಯವಂತರಾಗಿ ಬರಲಿ ಎಂದು ಸವದತ್ತಿ ಕ್ಷೇತ್ರದ ಅವರ ಅಭಿಮಾನಿಗಳು ವಿಶೇಷ ಪೂಜೆ, ಉರುಳು ಸೇವೆ, ಮೃತ್ಯುಂಜಯ ಯಾಗ ಹೋಮ ಮಾಡಿದ್ದಾರೆ.

Read More »

‘ಸೈನಿಕರ ಸಾಹಸ ಯುವಕರಿಗೆ ಪ್ರೇರಣೆ’

ಸವದತ್ತಿ: 1965ರ ಸೆಪ್ಟೆಂಬರ್‌ನಲ್ಲಿ ಜಮ್ಮು ಕಾಶ್ಮೀರದಲ್ಲಿ ಪಾಕಿಸ್ತಾನದ ಆಧೀನಕ್ಕೊಳಪಟ್ಟ ಮಹಾರಾಜ ಕೆ ಗ್ರಾಮವನ್ನು ಯುದ್ಧದಿಂದ ಮರಳಿ ಪಡೆಯುವ ಸಂದರ್ಭದಲ್ಲಿ ಕರ್ನಲ್ ಹನಬರಲಾಲ್ ಮೆಹ್ತಾ, ಸುಬೇದಾರ ನಂಬಿಯಾರ್, ಸಿಪಾಯಿ ಕನ್ನನ್, ಸಿ.ಬಿ. ಪಾಟೀಲ ಸೇರಿ ಹುತಾತ್ಮರಾದ ಯೋಧರಿಗೆ ಗುರುವಾರ ನವಿಲುತೀರ್ಥದಲ್ಲಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.   ನಾಲ್ಕನೇ ಮದ್ರಾಸ್ ಬಟಾಲಿಯನ್‍ದಲ್ಲಿ ಸೇವೆ ಸಲ್ಲಿಸಿದ 55 ಮಾಜಿ ಸೈನಿಕರು ಯಲ್ಲಮ್ಮ ದೇವಸ್ಥಾನಕ್ಕೆ ತೆರಳಿ ರೇಣುಕಾದೇವಿಗೆ ವಿಶೇಷ ಪೂಜೆ ಸಲ್ಲಿಸಿದರು. ಕಾರ್ಗಿಲ್, ಪಂಜಾಬ ಸುವರ್ಣ ಸೌಧದಲ್ಲಿ …

Read More »

ರಸ್ತೆ ಪಕ್ಕ ನಿಲ್ಲಿಸುತ್ತಿದ್ದ ಟ್ರಕ್‍ಗಳಿಂದ ಡಿಸೇಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಸವದತ್ತಿ ಪೊಲೀಸರು ಯಶಸ್ವಿ

ರಾತ್ರಿ ವೇಳೆ ರಸ್ತೆ ಪಕ್ಕ ನಿಲ್ಲಿಸುತ್ತಿದ್ದ ಟ್ರಕ್‍ಗಳಿಂದ ಡಿಸೇಲ್ ಕಳ್ಳತನ ಮಾಡುತ್ತಿದ್ದ ಇಬ್ಬರು ಕಳ್ಳರನ್ನು ಬಂಧಿಸುವಲ್ಲಿ ಸವದತ್ತಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಂಧಿತ ಇಬ್ಬರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಹೌದು ರಾತ್ರಿವೇಳೆಯಲ್ಲಿ ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‍ಗಳಿಂದ ಡಿಸೇಲ್ ಕದಿಯುತ್ತಿದ್ದ ಇಬ್ಬರು ಕಳ್ಳರನ್ನು ಸವದತ್ತಿ ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ದಿನಾಂಕ 14/04/2022 ರಂದು ಸವದತ್ತಿ ತಾಲೂಕಿನ ಯಡ್ರಾಂವಿ ಗ್ರಾಮದ ಮಲ್ಲಿಕಾರ್ಜುನ ಫಕ್ಕೀರಪ್ಪ ಕಗದಾಳ ತಾವು ಚಲಾಯಿಸುವ ಟ್ರಕ್‍ನ್ನು …

Read More »

ಅನೈತಿಕ ಸಂಬಂಧ: ಸವದತ್ತಿಯಲ್ಲಿ ಪತಿಯಿಂದ ಪತ್ನಿಯ ಬರ್ಬರ ಹತ್ಯೆ

ಸವದತ್ತಿ: ಅನೈತಿಕ ಸಂಬಂಧದ ಶಂಕೆಯಿಂದ ವ್ಯಕ್ತಿಯೊಬ್ಬ ತನ್ನ ಪತ್ನಿಯನ್ನೇ ಮಾರಕಾಸ್ತ್ರದಿಂದ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಇಲ್ಲಿನ ರಾಮಾಪೂರ ಸೈಟಿನಲ್ಲಿ ಗುರುವಾರ ನಡೆದಿದೆ. ಶಬಾನಾ (28) ಕೊಲೆಗೀಡಾದ ಮಹಿಳೆ. ಆರೋಪಿ ಮೆಹಬೂಬಸಾಬ ಗರೀಬಸಾಬ ಗೊರವನಕೊಳ್ಳ (30) ತನ್ನ ಪತ್ನಿಯನ್ನು ಕೊಲೆಗೈದು ಪೊಲೀಸರಿಗೆ ಶರಣಾಗಿದ್ದಾನೆ. ದಂಪತಿಗೆ ಇಬ್ಬರು ಮಕ್ಕಳು ಇದ್ದಾರೆ. ಸ್ಥಳಕ್ಕೆ ಪಿಐ ಕರುಣೇಶಗೌಡ ಜೆ. ಭೇಟಿ ನೀಡಿ ಪರಿಶೀಲಿಸಿದ್ದಾರೆ. ಆರೋಪಿಯೊಂದಿಗೆ ಕೃತ್ಯಕ್ಕೆ ಬಳಿಸಿದ ಮಾರಕಾಸ್ತ್ರವನ್ನು ವಶ ಪಡಿಸಿಕೊಳ್ಳಲಾಗಿದೆ. ಆಗಾಗ ಪತಿ ಪತ್ನಿ …

Read More »

ಕುಟುಂಬ ಸಮೇತ ತಾಯಿ ಸವದತ್ತಿ ಯಲ್ಲಮ್ಮನ ದರ್ಶನ ಪಡೆದ ಸಂತೋಷ್ ಜಾರಕಿಹೊಳಿ ಅವರು

ಸವದತ್ತಿ: ಸವದತ್ತಿ ಯಲ್ಲಮ್ಮ ನಮ್ಮ ಬೆಳಗಾವಿಯ ಆರಾಧ್ಯ ದೇವತೆ ಸದಾ ಭಕ್ತಿ ಭಾವ ಸಾಮಾಜಿಕ ಚಟುವಟಿಕೆ ಗಳಲ್ಲಿರುವ ಶ್ರೀ ಸಂತೋಷ್ ಜಾರಕಿಹೊಳಿ ಅವರು ಇಂದು ಕುಟುಂಬ ಸಮೇತ ತಾಯಿ ಯಲ್ಲಮ್ಮನ ಗುಡ್ಡಕ್ಕೆ ಪ್ರಯಾಣ ಬೆಳೆಸಿದ್ದರು. ಇಂದು 75ನೆಯ ಸ್ವತಂತ್ರ ಮಹೋತ್ಸವ ಅಂಗವಾಗಿ ಸವದತ್ತಿ ಕ್ಷೇತ್ರಕ್ಕೆ ಸಂತೋಷ್ ಜಾರಕಿಹೊಳಿ ಹಾಗೂ ಅವರ್ ಪತ್ನಿ ಹಾಗೂ ಮಗ ಸೂರ್ಯ ಶ್ರೇಷ್ಠ ಅವರ್ ಜೊತೆ ಭೇಟಿ ನೀಡಿ ತಾಯಿಯ ಆಶೀರ್ವಾದ ಪಡೆದರು. ಶ್ರಾವಣ ಮಾಸದಲ್ಲಿ …

Read More »

ಸವದತ್ತಿ ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ವರ್ಷಕ್ಕೆ ಐದು ದಿನಗಳ ಕಾಲ ವಿಜೃಂಭಣೆಯಿಂದ ಮೊಹರಂ ಆಚರಿಸಲಾಗುತ್ತದೆ.

ಬೆಳಗಾವಿ, : ಮುಸ್ಲಿಮರಿಲ್ಲದ ಮೊಹರಂ ಆಚರಣೆಯ ಬಗ್ಗೆ ನೀವು ಎಂದಾದರೂ ಕೇಳಿದ್ದೀರಾ?. ಮುಸಲ್ಮಾನರ ಸಂಖ್ಯೆಯೇ ಇಲ್ಲದ ಬೆಳಗಾವಿಯ ಹಳ್ಳಿಯೊಂದು ಈ ಹಬ್ಬವನ್ನು ವರ್ಷಗಳಿಂದ ಆಚರಿಸಿಕೊಂಡು ಬರುತ್ತಿದೆ.   ಬೆಳಗಾವಿಯ ಸವದತ್ತಿ ತಾಲೂಕಿನ ಹಿರೇಬಿದನೂರು ಗ್ರಾಮದಲ್ಲಿ ವರ್ಷಕ್ಕೆ ಐದು ದಿನಗಳ ಕಾಲ ವಿಜೃಂಭಣೆಯಿಂದ ಮೊಹರಂ ಆಚರಿಸಲಾಗುತ್ತದೆ. ಮೊಹರಂ, ರಂಜಾನ್ ನಂತರ ಎರಡನೇ ಪವಿತ್ರ ಹಬ್ಬವಾಗಿದೆ ಇಸ್ಲಾಮಿಕ್ ಕ್ಯಾಲೆಂಡರ್‌ನ ಮೊದಲ ತಿಂಗಳು ಬರುತ್ತದೆ. ಈ ವರ್ಷ ಜುಲೈ 31 ರಂದು ಪ್ರಾರಂಭವಾಗಿ ಆಗಸ್ಟ್ …

Read More »

ಸುತಗಟ್ಟಿ ಕ್ರಾಸ್‌: ರಸ್ತೆ ತಡೆದು ಪ್ರತಿಭಟನೆ

ಸವದತ್ತಿ: ರಸ್ತೆ ಕಾಮಗಾರಿ ಕಳಪೆಯಾಗಿದೆ ಎಂದು ಆರೋಪಿಸಿ ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ತಾಲ್ಲೂಕಿನ ಹಿಟ್ಟಣಗಿ, ಸುತಗಟ್ಟಿ, ಗೋವನಕೊಪ್ಪ ಕೆ.ವೈ, ಭಮಗುಂಡಿಕೊಪ್ಪ ಮತ್ತು ಏಣಗಿ ಗ್ರಾಮಸ್ಥರು ಹಿಟ್ಟಣಗಿ ಗ್ರಾಮದಿಂದ ಪಾದಯಾತ್ರೆ ನಡೆಸಿ ಸುತಗಟ್ಟಿ ಕ್ರಾಸ್‌ನಲ್ಲಿ ಸುಮಾರು 5 ಗಂಟೆಗಳ ಕಾಲ ರಸ್ತೆ ತಡೆದು ಪ್ರತಿಭಟಿಸಿದರು.   ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಶಂಕರ ಮಾಡಲಗಿ ಮಾತನಾಡಿ, ಜಿಲ್ಲಾ ಪಂಚಾಯಿತಿಯಿಂದ ನಡೆದಿರುವ ₹ 60 ಲಕ್ಷ ವೆಚ್ಚದ ರಸ್ತೆ ಕಾಮಗಾರಿ …

Read More »

ಸವದತ್ತಿ: ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರ ಸಾವು

ಸವದತ್ತಿ: ತಾಲೂಕಿನ ಹಿರೂರು ಗ್ರಾಮದಲ್ಲಿ ವಿದ್ಯುತ್ ಶಾಕ್ ತಗುಲಿ ಇಬ್ಬರು ರೈತರು ಶನಿವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.   ಫಕೀರಪ್ಪಾ ಸಿದ್ದಪ್ಪಾ ಚಂದರಗಿ (54) ಹಾಗೂ ಮಹಾದೇವ ದುರ್ಗಪ್ಪಾ ಮೇತ್ರಿ (40) ಮೃತಪಟ್ಟವರು.   ಇವರಿಬ್ಬರೂ ಕಬ್ಬಿನ ಹೊಲದಲ್ಲಿ ಕೆಲಸ ಮಾಡುವಾಗ ಹರಿದು ಬಿದ್ದ ವಿದ್ಯುತ್ ತಂತಿ ಸ್ಪರ್ಷಿಸಿ ಈ ಅವಘಡ ಸಂಭವಿಸಿದೆ.   ಸ್ಥಳಕ್ಕೆ ಸವದತ್ತಿ ಠಾಣೆ ಪೊಲೀಸರು ತೆರಳಿ ಕ್ರಮ ಕೈಗೊಂಡಿದ್ದಾರೆ.

Read More »

ಜನವರಿ ನಂತರ ಸವದತ್ತಿಯಲ್ಲಿ ಯಾರು ಸ್ಪರ್ಧಿಸುತ್ತಾರೆ ಎಂಬ ಬಗ್ಗೆ ಸ್ಪಷ್ಟ ನಿರ್ಧಾರ: ಸತೀಶ ಜಾರಕಿಹೊಳಿ

ಸವದತ್ತಿಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ ಬಗ್ಗೆ ಹೇಳಲು ಆಗಲ್ಲ. ಜನವರಿ ನಂತರ ಯಾರು ಸ್ಪರ್ಧೆ ಮಾಡುತ್ತಾರೆ ಎಂಬುದು ಸ್ಪಷ್ಟವಾಗಲಿದೆ. ಜನವರಿ ನಂತರ ರಾಜ್ಯದಲ್ಲಿ ಬದಲಾವಣೆ ಪರ್ವ ಆರಂಭವಾಗಲಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೊಸ ಬಾಂಬ್ ಸಿಡಿಸಿದ್ದಾರೆ. ಬೆಳಗಾವಿಯ ಡಿಸಿ ಕಚೇರಿ ಬಳಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ ಜಾರಕಿಹೊಳಿ ಸವದತ್ತಿಯಲ್ಲಿ ಯಾವುದೇ ಗೊಂದಲ ಇಲ್ಲ, ಎಲ್ಲಾ ಕ್ಲಿಯರ್ ಇದೆ. ಸವದತ್ತಿಯಲ್ಲಿ ಗ್ರೌಂಡ್ ಸಿದ್ಧಪಡಿಸುತ್ತಿದ್ದೇವೆ. ಸ್ಥಳೀಯರು ಮತ್ತು …

Read More »