Breaking News

ಸವದತ್ತಿ

ಸಮಾಜ ಸೇವಕ ಆನಂದ ಚೋಪ್ರಾ ಅಕಾಲಿಕ ನಿಧನ ಅವರ ಆತ್ಮಕ್ಕೆ ಶಾಂತಿ ಸಿಗಲಿ : ರಮೇಶ ಜಾರಕಿಹೊಳಿ.

ಸವದತ್ತಿ ತಾಲ್ಲೂಕಿನ ಹಿರಿಯ ಸಮಾಜ ಸೇವಕರಾಗಿದ್ದ ನನ್ನ ಸ್ನೇಹಿತ *ಆನಂದ ಚೋಪ್ರಾ* ಅವರ ಅಕಾಲಿಕ ಮರಣವು ನನ್ನ ಮನಸ್ಸಿಗೆ ದುಃಖ ತಂದಿದೆ.       ಧಾರ್ಮಿಕ ಮತ್ತು ಸಾಮಾಜಿಕ ಸೇವೆಯಲ್ಲಿ ತೊಡಗಿದ್ದ *ಆನಂದ ಚೋಪ್ರಾ* ಅವರು ಜನಪರ ಕಾಳಜಿ ಹೊಂದಿದ್ದರು. ಬಡವರ ಮತ್ತು ದೀನದಲಿತರ ಬಗ್ಗೆ ವಿಶೇಷ ಕಾಳಜಿ ಹೊಂದಿದ್ದರು. ಇವರ ನಿಧನದಿಂದ ನಾನು ಒಬ್ಬ ಒಳ್ಳೆಯ ಸ್ನೇಹಿತನನ್ನು ಕಳೆದುಕೊಂಡಿದ್ದೇನೆ. ಅವರ ಆತ್ಮಕ್ಕೆ ಚಿರಶಾಂತಿ‌ ದೊರಕಲಿ‌ ಮತ್ತು ಅವರ …

Read More »

ಸವದತ್ತಿ: ತಹಶೀಲ್ದಾರ್‌ ಕಚೇರಿ ಮುಂದೆ ಶವವಿಟ್ಟು ಪ್ರತಿಭಟನೆ

ಸವದತ್ತಿ: ರುದ್ರಭೂಮಿಗೆ ಹೋಗಲು ಸಮರ್ಪಕ ರಸ್ತೆ ನಿರ್ಮಿಸಿಕೊಡುವಂತೆ ಆಗ್ರಹಿಸಿ ತಾಲ್ಲೂಕಿನ ಕೆಂಚಲಾರಕೊಪ್ಪ ಗ್ರಾಮಸ್ಥರು ಇಲ್ಲಿನ ತಹಶೀಲ್ದಾರ್‌ ಕಚೇರಿ ಎದುರು ಶವವಿಟ್ಟು ಭಾನುವಾರ ಪ್ರತಿಭಟನೆ ನಡೆಸಿದರು. ‘ಈ ಹಿಂದೆ ಪುರಸಭೆ ಮುಖ್ಯಾಧಿಕಾರಿಗೆ ಹಾಗೂ ತಹಶೀಲ್ದಾರ್‌ ಕಚೇರಿಗೆ ಮನವಿ ಸಲ್ಲಿಸಲಾಗಿದೆ. ಆದರೆ, ಈವರೆಗೆ ಯಾರೂ ಇತ್ತ ಗಮನಹರಿಸುತ್ತಿಲ್ಲ. ಗ್ರಾಮದಲ್ಲಿ ಯಾರಾದರೂ ಮೃತರಾದರೆ ಸಂಸ್ಕಾರ ನಡೆಸಲು ರುದ್ರಭೂಮಿಗೆ ತೆರಳುವುದಕ್ಕೆ ಸರಿಯಾದ ರಸ್ತೆ ಇಲ್ಲ. ಇದರಿಂದ ಬಹಳ ತೊಂದರೆ ಆಗುತ್ತಿದೆ’ ಎಂದು ತಿಳಿಸಿದರು. ಸ್ಥಳಕ್ಕೆ ಬಂದ ತಹಶೀಲ್ದಾರ್‌ …

Read More »

ಅತಿವೃಷ್ಟಿಯಿಂದ ಬೆಳೆ ಹಾನಿ: ಪರಿಹಾರಕ್ಕೆ ಆಗ್ರಹ

ಸವದತ್ತಿ: ‘ತಾಲ್ಲೂಕಿನಲ್ಲಿ ಅತಿವೃಷ್ಟಿಯಿಂದಾಗಿ ಬೆಳೆ ಹಾನಿಯಾಗಿದ್ದು, ಕಂಗಾಲಾಗಿರುವ ರೈತರಿಗೆ ಕೂಡಲೇ ಸಮರ್ಪಕ ಪರಿಹಾರ ನೀಡಬೇಕು’ ಎಂದು ಆಗ್ರಹಿಸಿ ರೈತ ಸಂಘದವರು ಉಪ ತಹಶೀಲ್ದಾರ್‌ ಆರ್.ಎಸ್. ನೇಸರಗಿ ಅವರಿಗೆ ಬುಧವಾರ ಮನವಿ ಸಲ್ಲಿಸಿದರು. ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಬಿಜ್ಜೂರ ಮಾತನಾಡಿ, ‘ಬರ, ನೆರೆ, ಅತಿವೃಷ್ಟಿ ಹೀಗೆ ಒಂದಿಲ್ಲೊಂದು ತೊಂದರೆಗೆ ರೈತರು ಪ್ರತಿ ವರ್ಷವೂ ಸಿಲುಕುತ್ತಿದ್ದೇವೆ. ಕಷ್ಟಪಟ್ಟು ಬೆಳೆದ ಬೆಳೆ ನಮ್ಮ ಕೈ ಸೇರುತ್ತಿಲ್ಲ. ಈ ಬಾರಿ ಅತಿವೃಷ್ಟಿಯಿಂದ ಹೆಸರು, ಮೆಕ್ಕೆಜೋಳ, …

Read More »

ಬಿಟ್ಟು ಬ್ಯಾಸರಲೇ ಕೇಂದ್ರ ತಂಡದ ಅಧ್ಯಯನ : ವರದಿಯಿಂದ ರೈತರ ಕಣ್ಣೀರು ಒರಸತ್ತಾ ಮೂಲೆಗೆ ಸೇರುತ್ತಾ?

ಹುಬ್ಬಳ್ಳಿ; ಆಗಸ್ಟ್​ನಿಂದ ಈವರೆಗೆ ಸುರಿದ ಭಾರಿ ಮಳೆಯಿಂದ ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹ ಉಂಟಾಗಿ ಹಾನಿಗೀಡಾದ ತಾಲೂಕಿನ ವಿವಿಧ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ನಿನ್ನೆ ಭೇಟಿ ನೀಡಿ ಪರಿಶೀಲಿಸಿತು. ತಾಲೂಕಿನ 2 ಹಳ್ಳಿಗೆ ಭೇಟಿ ನೀಡಿದ ತಂಡದ ಅಧಿಕಾರಿಗಳು, ಹಾನಿ ಪಟ್ಟಿಯಲ್ಲಿದ್ದ ರೈತರ ಜಮೀನಿಗೆ ಭೇಟಿ ನೀಡದೆ ರೈತನೊಬ್ಬನನ್ನು ತಾವಿದ್ದಲ್ಲೇ ಕರೆಸಿಕೊಂಡರು. ಕಾಲು ದಾರಿಯಲ್ಲಿ ನೀರಿದೆ ಎಂದು ರೈತ ಮಹಿಳೆಯನ್ನು ತಮ್ಮ ಹತ್ತಿರ ಕರೆಸಿಕೊಂಡಿದ್ದು ಕಾಟಾಚಾರದ ಅಧ್ಯಯನಕ್ಕೆ ಹಿಡಿದ …

Read More »

ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರಾಗಿ ಮಾಮನಿ ನೇಮಕ

ಸವದತ್ತಿ / ಉಗರಗೋಳ: ಇಲ್ಲಿನ ಶ್ರೀಕ್ಷೇತ್ರ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷರನ್ನಾಗಿ ವಿಧಾನಸಭೆ ಉಪಸಭಾಧ್ಯಕ್ಷ ಹಾಗೂ ಕ್ಷೇತ್ರದ ಶಾಸಕರೂ ಆದ ಆನಂದ ಮಾಮನಿ ಅವರನ್ನು ನೇಮಿಸಿ ಧಾರ್ಮಿಕ ದತ್ತಿ ಇಲಾಖೆ ಆಯುಕ್ತರು ಸೋಮವಾರ ಆದೇಶ ಹೊರಡಿಸಿದ್ದಾರೆ. ‘2018ರ ಮಾರ್ಚ್‌ 23ರಂದು 16 ಸದಸ್ಯರನ್ನು ಒಳಗೊಂಡ ವ್ಯವಸ್ಥಾಪನಾ ಸಮಿತಿಯನ್ನು ಸರ್ಕಾರ ರಚಿಸಿತ್ತು. ಅದರ ಅಧಿಕಾರದ ಅವಧಿ ಮುಗಿದಿದ್ದು, ಹೊಸದಾಗಿ ರಚನೆ ಆಗಬೇಕಿದೆ. ಅಲ್ಲಿವರೆಗೆ ಅಧ್ಯಕ್ಷರನ್ನಾಗಿ ಆನಂದ ಮಾಮನಿ ಅವರನ್ನು ನೇಮಿಸಲಾಗಿದೆ’ ಎಂದು …

Read More »

ಯೂರಿಯಾ ವಿತರಣೆಗೆ ಆಗ್ರಹಿಸಿ ಪ್ರತಿಭಟನೆ

ಬೆಳಗಾವಿ: ಸವದತ್ತಿ ತಾಲ್ಲೂಕಿನ ಮುಗಳಿಹಾಳ ಗ್ರಾಮದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಸಮರ್ಪಕವಾಗಿ ಯೂರಿಯಾ ಗೊಬ್ಬರ ವಿತರಿಸುವಂತೆ ಆಗ್ರಹಿಸಿ ರೈತ ಕೃಷಿ ಕಾರ್ಮಿಕ ಸಂಘಟನೆ ನೇತೃತ್ವದಲ್ಲಿ ರೈತರು ಮಂಗಳವಾರ ಪ್ರತಿಭಟನೆ ನಡೆಸಿದರು. ‘ಸಂಘದಿಂದ ಅವಶ್ಯ ಪ್ರಮಾಣದಲ್ಲಿ ಯೂರಿಯಾ ನೀಡುತ್ತಿಲ್ಲ. ಇದರಿಂದ ತೊಂದರೆಯಾಗಿದೆ. ಇತರ ಗೊಬ್ಬರಗಳ ಬದಲಿಗೆ ಯೂರಿಯಾವನ್ನೇ ಕೊಡಬೇಕು’ ಎಂದು ಒತ್ತಾಯಿಸಿದರು. ಸಂಘಟನೆಯ ಜಿಲ್ಲಾ ಸಂಚಾಲಕ ಲಕ್ಕಪ್ಪ ಬಿಜ್ಜನ್ನವರ, ರಾಜು ಗಾಣಗಿ, ವಿಠ್ಠಲ ದೊಡಗೌಡ್ರ, ಬಸಪ್ಪ ದಳವಾಯಿ, ಮಲ್ಲಪ್ಪ ದಳವಾಯಿ, ವಿಠ್ಠಲ …

Read More »

ಕೊರೊನಾ ಸೋಂಕಿಗೆ ಸವದತ್ತಿಯ ನಿವೃತ್ತ ಪಿಎಸ್ ಐ ಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ.

ಬೆಳಗಾವಿ: ಕೊರೊನಾ ಸೋಂಕಿಗೆ ಸವದತ್ತಿಯ ನಿವೃತ್ತ ಪಿಎಸ್ ಐ ಯೊಬ್ಬರು ಸೋಮವಾರ ಮೃತಪಟ್ಟಿದ್ದಾರೆ. ಬೆಂಗಳೂರು ಸೇರಿದಂತೆ ವಿವಿಧೆಡೆ ಪೊಲೀಸ್ ಇಲಾಖೆಯಲ್ಲಿ ಸೇವೆ ಸಲ್ಲಿಸಿದ ಇವರು, ಕಳೆದ ನಾಲ್ಕು ದಿನಗಳ ಹಿಂದೆ ಕೊರೊನಾ ಸೋಂಕು ದೃಢ ಪಟ್ಟಿರುವ ಹಿನ್ನೆಲೆ ಸವದತ್ತಿ ಆಸ್ಪತ್ರೆಯಿಂದ ಬೆಳಗಾವಿ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಇಂದು ಕೊರೊನಾ ವೈರಸ್ ಗೆ ಬಲಿಯಾಗಿದ್ದಾರೆ. 65 ವರ್ಷದ ನಿವೃತ್ತ ಪಿಎಸ್ ಐ ಮಗಳ ಸವದತ್ತಿಯಲ್ಲಿ‌ ನೆಲೆಸಿದ್ದರು. ಮಗಳ ಆಕ್ರಂದನ ಮುಗಿಲು …

Read More »

ಸವದತ್ತಿ ಯಲ್ಲಮ್ಮ ದರ್ಶನಕ್ಕೆ ಭಕ್ತರ ಕಾತರ…?

ಸವದತ್ತಿ: ವರ್ಷದ 12 ತಿಂಗಳೂ ಭಕ್ತರು, ವ್ಯಾಪಾರಿಗಳಿಂದ ಗಿಜುಗುಡುತ್ತಿದ್ದ ತಾಲೂಕಿನ ಸುಕ್ಷೇತ್ರ ಯಲ್ಲಮ್ಮ ದೇವಿ ಸನ್ನಿಧಿಗೆ ಲಾಕ್‌ಡೌನ್‌ ಸಡಿಲಿಕೆಯಾದ ಬಳಿಕ ಮಂಗಳವಾರ ಮತ್ತು ಶುಕ್ರವಾರ ಬರುವ ಭಕ್ತರ ಸಂಖ್ಯೆ ಹೆಚ್ಚಿದೆ. ಇದರಿಂದ ತಾಲೂಕಿಗೆ ಅಲ್ಪ ಪ್ರಮಾಣದಲ್ಲಿದ್ದ ಕೋವಿಡ್‌ ಸೋಂಕು ಹರಡುವ ಸಾಧ್ಯತೆಗಳಿವೆ. ಈಗಾಗಲೇ ಸರಕಾರದ ಆದೇಶದನ್ವಯ ರಾಜ್ಯದ ಬಹುತೇಕ ದೇವಸ್ಥಾನಗಳಲ್ಲಿ ಸಾರ್ವಜನಿಕ ದರ್ಶನಕ್ಕೆ ಅನುಮತಿ ನೀಡಲಾಗಿದೆ. ಯಲ್ಲಮ್ಮ ದೇವಸ್ಥಾನಕ್ಕೆ ಮಹಾರಾಷ್ಟ್ರದಿಂದ ಹೆಚ್ಚು ಭಕ್ತರು ಬರುವ ನಿರೀಕ್ಷೆಯಿಂದ ಸರಕಾರ ಮತ್ತು ಜಿಲ್ಲಾಧಿಕಾರಿಗಳು …

Read More »

ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ.

ಬೆಳಗಾವಿ, ಜೂನ್ 30 : ಸವದತ್ತಿ ರೇಣುಕಾ ಯಲ್ಲಮ್ಮದೇವಿ ಸೇರಿದಂತೆ ಮೂರು ದೇವಾಲಯಗಳಿಗೆ ಜುಲೈ 31ರ ತನಕ ಭಕ್ತರ ಪ್ರವೇಶ ನಿಷೇಧಿಸಲಾಗಿದೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ಬೆಳಗಾವಿ ಜಿಲ್ಲಾಡಳಿತ ಈ ಆದೇಶ ನೀಡಿದೆ. ಬೆಳಗಾವಿ ಜಿಲ್ಲಾಧಿಕಾರಿ ಡಾ. ಎಸ್. ಬಿ. ಬೊಮ್ಮನಹಳ್ಳಿ ಈ ಕುರಿತು ಆದೇಶ ಹೊರಡಿಸಿದ್ದಾರೆ. ಕೊರೊನಾ ಸೋಂಕು ಹರಡುವ ಆತಂಕ ಮತ್ತು ಭಕ್ತರ ಆರೋಗ್ಯದ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದ್ದಾರೆ. ಸವದತ್ತಿ …

Read More »

ಅಖಿಲ ಕರ್ನಾಟಕ ವಿಶ್ವ ಕರ್ಮ ಹೋರಾಟಗಾರರ ಸಮಿತಿ ವತಿಯಿಂದ ಬಡ ಕುಟುಂಬದವರಿಗೆ ದಿನ ಬಳಕೆಗೆ ಬೇಕಾದ ದಿನಸಿ ಸಾಮಗ್ರಿಗಳ ವಿತರಣೆ

ಬೆಳಗಾವಿ ಜಿಲ್ಲೆ ಸವದತ್ತಿ ತಾಲೂಕಿನ ಕುಟುರನಟ್ಟಿ ಗ್ರಾಮದಲ್ಲಿ 300 ಕ್ಕೂ ಹೆಚ್ಚು ಬಡ ಕುಟುಂಬಗಳಿಗೆ ಬೇಕಾದ ಆಹಾರ ಕಿಟ್ ಗಳನ್ನು ಅಖಿಲ ಕರ್ನಾಟಕ ವಿಶ್ವ ಕರ್ಮ ಸಮಿತಿಯ ರಾಜ್ಯ ಪ್ರದಾನ ಕಾರ್ಯದರ್ಶಿಯಾದ ಸುರೇಶ ಪತ್ತಾರ ರವರು ವಿತರಿದರು. ಮಾತನಾಡಿ ನಮ್ಮ ಸಮಿತಿಯಿಂದ ಪ್ರತಿ ಹಳ್ಳಿ ಹಳ್ಳಿಗೂ ವಿಷಯ ತಿಳಿದು ಕೊಂಡು ಬಡ ಕುಟುಂಬಗಳಿಗೆ ದಿನಸಿ ಸಾಮಗ್ರಿಗಳು ಪೂರೈಸಲು ಮುಂದಾಗಿದ್ದು. ಕುಟುರನಟ್ಟಿ ಗ್ರಾಮಸ್ಥರಿಗೆ ಸರ್ಕಾರದಿಂದ ಸರಿಯಾಗಿ ಸೌಲಭ್ಯಗಳು ದೊರೆತಾಯಿಲ್ಲ.ಆದುದರಿಂದ ದಯಮಾಡಿ ಈ …

Read More »