Breaking News

ಹುಕ್ಕೇರಿ

ಯುವಕ,ಯುವತಿಯರಿಗೆ ಉದ್ಯೋಗ ಮಾಡುವ ಮನಸ್ಸು ಇರಬೇಕು – ಚಂದ್ರಶೇಖರ ಮಹಾಸ್ವಾಮಿಗಳು.

ಹುಕ್ಕೇರಿ : ಯುವಕ,ಯುವತಿಯರಿಗೆ ಉದ್ಯೋಗ ಮಾಡುವ ಮನಸ್ಸು ಇರಬೇಕು – ಚಂದ್ರಶೇಖರ ಮಹಾಸ್ವಾಮಿಗಳು. ನಮ್ಮ ಯುವಕ, ಯುವತಿಯರಿಗೆ ಉದ್ಯೋಗ ಮಾಡುವ ಮನಸ್ಸು ಇರಬೇಕು ಎಂದು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಹೇಳಿದರು. ಹುಕ್ಕೇರಿ ನಗರದ ಸಿ ಎಸ್ ತುಬಚಿ ಶಿಕ್ಷಣ ಸಂಸ್ಥೆ ,ಸಿ ಆರ್ ಶೇಟ್ಟಿ ಫೌಂಡೇಶನ್ ಮತ್ತು ಬೆಳಗಾವಿ ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ಹಾಗೂ ಹುಕ್ಕೇರಿ ಗೆಳೆಯರ ಬಳಗ ವತಿಯಿಂದ ಬೃಹತ್ ಉಚಿತ ಉದ್ಯೋಗ ಮೇಳವನ್ನು ಹುಕ್ಕೇರಿ …

Read More »

ಉದ್ಯೋಗ ಖಾತರಿ ರಥಕ್ಕೆ ಚಾಲನೆ

ಹುಕ್ಕೇರಿ: ಉದ್ಯೋಗ ಖಾತರಿ ಯೋಜನೆಯಡಿ 2025-26ನೇ ಸಾಲಿನ ಕ್ರಿಯಾ ಯೋಜನೆ ತಯಾರಿಸಲು ‘ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ಅಭಿಯಾನಕ್ಕೆ ತಾಲ್ಲೂಕು ಪಂಚಾಯ್ತಿ ಇಒ ಟಿ.ಆರ್. ಮಲ್ಲಾಡದ ಚಾಲನೆ ನೀಡಿದರು. ಮಂಗಳವಾರ ತಾಲ್ಲೂಕು ಪಂಚಾಯ್ತಿ ಆವರಣದಲ್ಲಿ ನರೇಗಾ ಯೋಜನೆಯಡಿಯ ‘ಉದ್ಯೋಗ ಖಾತರಿ ನಡಿಗೆ ಸಬಲತೆಯೆಡೆಗೆ’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕೃಷಿ, ತೋಟಗಾರಿಕೆ ಮತ್ತು ರೇಷ್ಮೆ ಬೆಳೆಗಳನ್ನು ಬೆಳಯಲು ಈ ಯೋಜನಯಡಿಯಲ್ಲಿ ಅವಕಾಶವಿದೆ. ಗ್ರಾಮ ಪಂಚಾಯ್ತಿಗಳಿಂದ ವೈಯಕ್ತಿಕ ಕಾಮಗಾರಿ ಕೈಕೊಳ್ಳಲು …

Read More »

ವಿಪತ್ತು ಬಂದಾಗ ಸೇವೆ ಮಾಡಿ’

ಹುಕ್ಕೇರಿ: ಹುಕ್ಕೇರಿ ಮತ್ತು ಸಂಕೇಶ್ವರ ವಲಯಗಳ ವಿಪತ್ತು ನಿರ್ವಹಣೆ ಘಟಕದ ಸ್ವಯಂ ಸೇವಕರಿಗೆ ತಾಲ್ಲೂಕಿನ ನಿಡಸೋಶಿಯ ದುರದುಂಡೇಶ್ವರ ಮಠದಲ್ಲಿ ಗುರುವಾರ ನಡೆದ ‘ಶೌರ್ಯ ವಿಪತ್ತು ಸ್ವಯಂ ಸೇವಕರ ತರಬೇತಿ’ ಕಾರ್ಯಕ್ರಮವನ್ನು ಸುಬೇದಾರ್ ಎಸ್.ಕೆ.ದೇಸಾಯಿ ಹಾಗೂ ನಿಡಸೋಸಿ ಗ್ರಾಮ ಪಂಚಾಯ್ತಿ ಉಪಾಧ್ಯಕ್ಷೆ ಮದೀನಾ ಶಾನೂರ್ ಮಕಾಂದಾರ್ ಉದ್ಘಾಟಿಸಿದರು.   ನಂತರ ಮಾತನಾಡಿದ ಸುಬೇದಾರ್ ಎಸ್.ಕೆ.ದೇಸಾಯಿ, ‘ಯುವಕರು ಸೈನ್ಯದಲ್ಲಿ ಸೇರಿ ದೇಶ ಮಾಡಬೇಕಂತಿಲ್ಲ. ದೇಶದ ಒಳಗೆ ಜನರಿಗೆ ವಿಪತ್ತು ಬಂದಾಗ ಸೇವೆ ಸಲ್ಲಿಸಿದರೆ, …

Read More »

ಉತ್ತರ ಕರ್ನಾಟಕದಲ್ಲಿ ಮಠ -ಮಾನ್ಯಗಳು ಶೈಕ್ಷಣಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ:ಸತೀಶ್‌ ಜಾರಕಿಹೊಳಿ

ಹುಕ್ಕೇರಿ: ಉತ್ತರ ಕರ್ನಾಟಕದಲ್ಲಿ ಮಠ -ಮಾನ್ಯಗಳು ಶೈಕ್ಷಣಿಕ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿವೆ. ಈ ನಿಟ್ಟಿನಲ್ಲಿ ಔಜೀಕರ ಜ್ಞಾನಯೋಗಾಶ್ರಮವು ಶಿಕ್ಷಣ ಸಂಸ್ಥೆ ಆರಂಭಿಸಲು ಮುಂದಾದಲ್ಲಿ ಎಲ್ಲ ರೀತಿಯ ಸಹಾಯ, ಸಹಕಾರ ನೀಡಲು ಸಿದ್ಧ ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೇಳಿದರು.   ಪಟ್ಟಣದ ಹೊರವಲಯದ ಕ್ಯಾರಗುಡ್ ಬಳಿಯ ಔಜೀಕರ ಜ್ಞಾನಯೋಗಾಶ್ರಮದಲ್ಲಿ ಔಜೀಕರ ಮಹಾರಾಜರ ಹಾಗೂ ಜಗನ್ನಾಥ ಮಹಾರಾಜರ ಸ್ಮರಣಾರ್ಥ ಮಂಗಳವಾರ ಏರ್ಪಡಿಸಿದ್ದ ಸಪ್ತಾಹ ಹಾಗೂ ಜಾತ್ರಾ ಮಹೋತ್ಸವದಲ್ಲಿ …

Read More »

ಹರಗಾಪುರ: ಗುಡ್ಡ ಕುಸಿತ, ಪ್ರಾಣಾಪಾಯ ಇಲ್ಲ

ಹುಕ್ಕೇರಿ: ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ತಾಲ್ಲೂಕಿನ ಹರಗಾಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿನ ಗುಡ್ಡ ಕುಸಿತದ ಸ್ಥಳಕ್ಕೆ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿ ಪ್ರವೀಣ ಕಟ್ಟಿ ಭೇಟಿ ನೀಡಿ ಪರಿಶೀಲಿಸಿದರು. ‘ಕಲ್ಲುಗಳು ಉರುಳಿ ಬಿದ್ದು, ವಸತಿ ಪ್ರದೇಶದ ಸಮೀಪ ಬಂದು ನಿಂತಿವೆ. ಯಾವುದೇ ಪ್ರಾಣಹಾನಿ ಅಥವಾ ಮನೆಗೆ ತೊಂದರೆ ಆಗಿಲ್ಲ. ಆದರೆ ಕಲ್ಲು ಬಿದ್ದ ಹೊಡೆತಕ್ಕೆ ಚರಂಡಿ ರಿಪೇರಿಗೆ ಬಂದಿವೆ’ ಎಂದು ಟಾಸ್ಕ್ ಫೋರ್ಸ್ ಸಮಿತಿ ಅಧ್ಯಕ್ಷ ಅಧ್ಯಕ್ಷ …

Read More »

ಪತ್ರಿಕೆ ಓದಿ ಜ್ಞಾನ ಹೆಚ್ಚಿಸಿಕೊಳ್ಳಿ: ಮುರಗೇಶ ಶಿವಪೂಜಿ

ಹುಕ್ಕೇರಿ: ಯುವಕರು ಮತ್ತು ಕಾಲೇಜು ವಿದ್ಯಾರ್ಥಿಗಳು ದಿನನಿತ್ಯ ಪತ್ರಿಕೆ ಓದಿ ಜ್ಞಾನ ಬೆಳೆಸಿಕೊಂಡು ಪ್ರಬುದ್ಧ ನಾಗರಿಕರಾಗಬೇಕು. ಜತೆಗೆ ಪತ್ರಿಕೆಗಳಲ್ಲಿ ಬರುವ ಮಹತ್ವದ ಘಟನೆಗಳನ್ನು ಟಿಪ್ಪಣೆ ಮಾಡಿಕೊಂಡು, ವೈಯಕ್ತಿಕ ಬೆಳವಣಿಗೆಗೆ ಸದುಪಯೋಗ ಮಾಡಿಕೊಳ್ಳಿ ಎಂದು ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಘಟಕ ಅಧ್ಯಕ್ಷ ಮುರಗೇಶ ಶಿವಪೂಜಿ ಹೇಳಿದರು.   ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಪತ್ರಕರ್ತರ ಸಂಘ, ಸಮ್ಮೂರ ಬಾನುಲಿ ಸಮುದಾಯ ರೆಡಿಯೊ ಕೇಂದ್ರ, ಎಲ್ಲಾಪುರ ಹಾಗೂ ಸ್ಥಳೀಯ ಪತ್ರಕರ್ತರ ಬಳಗದ ಸಹಯೋಗದಲ್ಲಿ …

Read More »

ಹುಕ್ಕೇರಿ: ಹೊಸ ನ್ಯಾಯಾಲಯ ನಿರ್ಮಾಣಕ್ಕೆ ಮನವಿ

ಹುಕ್ಕೇರಿ: ಈಗಿರುವ ಸ್ಥಳೀಯ ನ್ಯಾಯಾಲಯ ಕಟ್ಟಡದಲ್ಲಿಯೇ ನೂತನ ನ್ಯಾಯಾಲಯದ ಕಟ್ಟಡವನ್ನು ಕಟ್ಟಬೇಕು ಎಂದು ಹನ್ನೊಂದ್ ಜಮಾತ ಅಧ್ಯಕ್ಷರಾ ಸಲೀಮ್ ನದಾಫ್ ನೇತೃತ್ವದಲ್ಲಿ ತಹಶೀಲ್ದಾರರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಈಗಿನ ಕಟ್ಟಡ ಪಟ್ಟಣದ ಮಧ್ಯಭಾಗದಲ್ಲಿದ್ದು, ನ್ಯಾಯಾಲಯಕ್ಕೆ ತಹಶೀಲ್ದಾರ್ ಕಚೇರಿ, ನೋಂದಣಿ ಕಚೇರಿ, ತಾಲ್ಲೂಕು ಪಂಚಾಯ್ತಿ, ಮುಖ್ಯ ಅಂಚೆ ಕಚೇರಿ, ದಾಖಲಾತಿ ಕಚೇರಿ, ಕೆನರಾ ಬ್ಯಾಂಕ್, ಪಿಡಬ್ಲೂಡಿ, ಅರಣ್ಯ ಇಲಾಖೆ, ಸಾರ್ವಜನಿಕ ಆಸ್ಪತ್ರೆ, ಪ್ರವಾಸಿ ಮಂದಿರ, ಪೊಲೀಸ್ ಠಾಣೆ, ಬಸ್ ನಿಲ್ದಾಣ ಸೇರಿದಂತೆ ಶಾಲಾ …

Read More »

₹4 ಲಕ್ಷ ಮೌಲ್ಯದ ಶ್ರೀಗಂಧ ಕಟ್ಟಿಗೆ ವಶ

ಹುಕ್ಕೇರಿ: ತಾಲ್ಲೂಕಿನ ಗುಡಸ್ ಗ್ರಾಮದ ಗಾಯರಾಣ ಪ್ರದೇಶಕ್ಕೆ ಹೊಂದಿಕೊಂಡಿರುವ ಲಕ್ಷ್ಮೀದೇವಿ ಗುಡಿಯ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧ ತುಂಡುಗಳನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಹುಕ್ಕೇರಿ ವಲಯದ ಸಿಬ್ಬಂದಿ ಕಾರೊಂದನ್ನು ಬೆನ್ನತ್ತಿ ಹಿಡಿದು ನಿಲ್ಲಿಸಿದಾಗ, ತಕ್ಷಣಕ್ಕೆ ಕತ್ತಲಾಗಿದ್ದರಿಂದ ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ. ವಾಹನ ಸಮೇತ ₹4 ಲಕ್ಷ ಮೌಲ್ಯದ (40.605 ಕೆ.ಜಿ.) ಶ್ರೀಗಂಧದ ತುಂಡುಗಳನ್ನು ಇಲಾಖೆಯವರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ …

Read More »

ಇ ಗ್ರಂಥಾಲಯದಲ್ಲಿ ರೈತ ಆತ್ಮಹತ್ಯೆ

ಹುಕ್ಕೇರಿ: ಸ್ಥಳೀಯ ಕೋರ್ಟ್ ಆವರಣದಲ್ಲಿರುವ ಇ- ಗ್ರಂಥಾಲಯದ ಸಂಗ್ರಹ ಕೊಠಡಿಯಲ್ಲಿ ವಕೀಲೆಯೊಬ್ಬರ ಪತಿ, ರೈತ ಲಗಮಪ್ಪ ಹೊಸೂರಿ(48) ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ತಾಲ್ಲೂಕಿನ ನೇರ್ಲಿ ಗ್ರಾಮದವರಾದ ಲಗಮಪ್ಪ ಜಾಬಾಪುರದಲ್ಲಿ ವಾಸಿಸುತ್ತಿದ್ದರು. ಗ್ರಾಮದಲ್ಲಿ ಕೃಷಿ ಮಾಡಿಕೊಂಡಿದ್ದ ಅವರು, ವಿವಿಧ ಸಂಘ ಸಂಸ್ಥೆಗಳಲ್ಲಿ ಮತ್ತು ಕೈಗಡವಾಗಿ ₹5.20 ಲಕ್ಷ ಸಾಲ ಮಾಡಿದ್ದರು’ ಎಂದು ಅವರ ಪತ್ನಿ ಅನಿತಾ ಕುಲಕರ್ಣಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ‘ಸಾಲ ತೀರಿಸಲಾಗದೆ ಬೇಸತ್ತು ಮಧ್ಯಾಹ್ನದ ವೇಳೆ …

Read More »

ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ.

ಬೆಳಗಾವಿ: ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ. ದೇಶದ ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹಾಗೂ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟರು.   ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ಮಂಗಳವಾರ ಹಿರೇಮಠದ ವತಿಯಿಂದ ಸ್ವರ್ಣವಲ್ಲೀ ಶ್ರೀಗಳನ್ನು ಸತ್ಕರಿಸಿ, ಗೀತಾಭಿಯಾನಾರ್ಣವ ಬಿರುದು ಪ್ರದಾನ ಮಾಡಲಾಯಿತು. ಶ್ರೀ ಚಂದ್ರಶೇಖರ …

Read More »