ಹುಕ್ಕೇರಿ: ಯುವಕರು ಮತ್ತು ಕಾಲೇಜು ವಿದ್ಯಾರ್ಥಿಗಳು ದಿನನಿತ್ಯ ಪತ್ರಿಕೆ ಓದಿ ಜ್ಞಾನ ಬೆಳೆಸಿಕೊಂಡು ಪ್ರಬುದ್ಧ ನಾಗರಿಕರಾಗಬೇಕು. ಜತೆಗೆ ಪತ್ರಿಕೆಗಳಲ್ಲಿ ಬರುವ ಮಹತ್ವದ ಘಟನೆಗಳನ್ನು ಟಿಪ್ಪಣೆ ಮಾಡಿಕೊಂಡು, ವೈಯಕ್ತಿಕ ಬೆಳವಣಿಗೆಗೆ ಸದುಪಯೋಗ ಮಾಡಿಕೊಳ್ಳಿ ಎಂದು ಕರ್ನಾಟಕ ಪತ್ರಕರ್ತರ ಸಂಘದ ರಾಜ್ಯ ಘಟಕ ಅಧ್ಯಕ್ಷ ಮುರಗೇಶ ಶಿವಪೂಜಿ ಹೇಳಿದರು. ತಾಲ್ಲೂಕಿನ ಹಿಡಕಲ್ ಡ್ಯಾಂನಲ್ಲಿ ಪತ್ರಕರ್ತರ ಸಂಘ, ಸಮ್ಮೂರ ಬಾನುಲಿ ಸಮುದಾಯ ರೆಡಿಯೊ ಕೇಂದ್ರ, ಎಲ್ಲಾಪುರ ಹಾಗೂ ಸ್ಥಳೀಯ ಪತ್ರಕರ್ತರ ಬಳಗದ ಸಹಯೋಗದಲ್ಲಿ …
Read More »ಹುಕ್ಕೇರಿ: ಹೊಸ ನ್ಯಾಯಾಲಯ ನಿರ್ಮಾಣಕ್ಕೆ ಮನವಿ
ಹುಕ್ಕೇರಿ: ಈಗಿರುವ ಸ್ಥಳೀಯ ನ್ಯಾಯಾಲಯ ಕಟ್ಟಡದಲ್ಲಿಯೇ ನೂತನ ನ್ಯಾಯಾಲಯದ ಕಟ್ಟಡವನ್ನು ಕಟ್ಟಬೇಕು ಎಂದು ಹನ್ನೊಂದ್ ಜಮಾತ ಅಧ್ಯಕ್ಷರಾ ಸಲೀಮ್ ನದಾಫ್ ನೇತೃತ್ವದಲ್ಲಿ ತಹಶೀಲ್ದಾರರಿಗೆ ಶುಕ್ರವಾರ ಮನವಿ ಸಲ್ಲಿಸಲಾಯಿತು. ಈಗಿನ ಕಟ್ಟಡ ಪಟ್ಟಣದ ಮಧ್ಯಭಾಗದಲ್ಲಿದ್ದು, ನ್ಯಾಯಾಲಯಕ್ಕೆ ತಹಶೀಲ್ದಾರ್ ಕಚೇರಿ, ನೋಂದಣಿ ಕಚೇರಿ, ತಾಲ್ಲೂಕು ಪಂಚಾಯ್ತಿ, ಮುಖ್ಯ ಅಂಚೆ ಕಚೇರಿ, ದಾಖಲಾತಿ ಕಚೇರಿ, ಕೆನರಾ ಬ್ಯಾಂಕ್, ಪಿಡಬ್ಲೂಡಿ, ಅರಣ್ಯ ಇಲಾಖೆ, ಸಾರ್ವಜನಿಕ ಆಸ್ಪತ್ರೆ, ಪ್ರವಾಸಿ ಮಂದಿರ, ಪೊಲೀಸ್ ಠಾಣೆ, ಬಸ್ ನಿಲ್ದಾಣ ಸೇರಿದಂತೆ ಶಾಲಾ …
Read More »₹4 ಲಕ್ಷ ಮೌಲ್ಯದ ಶ್ರೀಗಂಧ ಕಟ್ಟಿಗೆ ವಶ
ಹುಕ್ಕೇರಿ: ತಾಲ್ಲೂಕಿನ ಗುಡಸ್ ಗ್ರಾಮದ ಗಾಯರಾಣ ಪ್ರದೇಶಕ್ಕೆ ಹೊಂದಿಕೊಂಡಿರುವ ಲಕ್ಷ್ಮೀದೇವಿ ಗುಡಿಯ ಬಳಿ ಅಕ್ರಮವಾಗಿ ಸಾಗಿಸುತ್ತಿದ್ದ ಶ್ರೀಗಂಧ ತುಂಡುಗಳನ್ನು ಅರಣ್ಯ ಇಲಾಖೆ ವಶಪಡಿಸಿಕೊಂಡ ಘಟನೆ ಸೋಮವಾರ ರಾತ್ರಿ ನಡೆದಿದೆ. ಖಚಿತ ಮಾಹಿತಿ ಆಧರಿಸಿ ಹುಕ್ಕೇರಿ ವಲಯದ ಸಿಬ್ಬಂದಿ ಕಾರೊಂದನ್ನು ಬೆನ್ನತ್ತಿ ಹಿಡಿದು ನಿಲ್ಲಿಸಿದಾಗ, ತಕ್ಷಣಕ್ಕೆ ಕತ್ತಲಾಗಿದ್ದರಿಂದ ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ. ವಾಹನ ಸಮೇತ ₹4 ಲಕ್ಷ ಮೌಲ್ಯದ (40.605 ಕೆ.ಜಿ.) ಶ್ರೀಗಂಧದ ತುಂಡುಗಳನ್ನು ಇಲಾಖೆಯವರು ವಶಪಡಿಸಿಕೊಂಡು ಪ್ರಕರಣ ದಾಖಲಿಸಿ ನ್ಯಾಯಾಲಯಕ್ಕೆ …
Read More »ಇ ಗ್ರಂಥಾಲಯದಲ್ಲಿ ರೈತ ಆತ್ಮಹತ್ಯೆ
ಹುಕ್ಕೇರಿ: ಸ್ಥಳೀಯ ಕೋರ್ಟ್ ಆವರಣದಲ್ಲಿರುವ ಇ- ಗ್ರಂಥಾಲಯದ ಸಂಗ್ರಹ ಕೊಠಡಿಯಲ್ಲಿ ವಕೀಲೆಯೊಬ್ಬರ ಪತಿ, ರೈತ ಲಗಮಪ್ಪ ಹೊಸೂರಿ(48) ಗುರುವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ‘ತಾಲ್ಲೂಕಿನ ನೇರ್ಲಿ ಗ್ರಾಮದವರಾದ ಲಗಮಪ್ಪ ಜಾಬಾಪುರದಲ್ಲಿ ವಾಸಿಸುತ್ತಿದ್ದರು. ಗ್ರಾಮದಲ್ಲಿ ಕೃಷಿ ಮಾಡಿಕೊಂಡಿದ್ದ ಅವರು, ವಿವಿಧ ಸಂಘ ಸಂಸ್ಥೆಗಳಲ್ಲಿ ಮತ್ತು ಕೈಗಡವಾಗಿ ₹5.20 ಲಕ್ಷ ಸಾಲ ಮಾಡಿದ್ದರು’ ಎಂದು ಅವರ ಪತ್ನಿ ಅನಿತಾ ಕುಲಕರ್ಣಿ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ‘ಸಾಲ ತೀರಿಸಲಾಗದೆ ಬೇಸತ್ತು ಮಧ್ಯಾಹ್ನದ ವೇಳೆ …
Read More »ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ.
ಬೆಳಗಾವಿ: ಎಲ್ಲ ಮಠಗಳ ಮಧ್ಯೆ ಆತ್ಮೀಯತೆ ಬಂದರೆ, ಎಲ್ಲ ಧಾರ್ಮಿಕ ಸಂಪ್ರದಾಯಗಳೂ ಒಂದಾದರೆ ದೇಶ ಅಖಂಡವಾಗುತ್ತದೆ. ದೇಶದ ಎಲ್ಲ ಸಮಸ್ಯೆಗಳೂ ಪರಿಹಾರವಾಗುತ್ತವೆ ಎಂದು ಸೋಂದಾ ಸ್ವರ್ಣವಲ್ಲಿ ಮಹಾಸಂಸ್ಥಾನದ ಶ್ರೀ ಗಂಗಾಧರೇಂದ್ರ ಸರಸ್ವತಿ ಸ್ವಾಮಿಗಳು ಹಾಗೂ ಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಅಭಿಪ್ರಾಯ ಪಟ್ಟರು. ಹುಕ್ಕೇರಿ ಹಿರೇಮಠದ ಬೆಳಗಾವಿ ಶಾಖೆಯಲ್ಲಿ ಮಂಗಳವಾರ ಹಿರೇಮಠದ ವತಿಯಿಂದ ಸ್ವರ್ಣವಲ್ಲೀ ಶ್ರೀಗಳನ್ನು ಸತ್ಕರಿಸಿ, ಗೀತಾಭಿಯಾನಾರ್ಣವ ಬಿರುದು ಪ್ರದಾನ ಮಾಡಲಾಯಿತು. ಶ್ರೀ ಚಂದ್ರಶೇಖರ …
Read More »ಹಿರೆಮಠದ ಚಂದ್ರಶೇಖರ ಮಹಾಸ್ವಾಮಿಗಳ ಅಡ್ಡ ಪಲ್ಲಕ್ಕಿ ಉತ್ಸವ ಜರಗಿಸುವ ಮೂಲಕ ದಸರಾ ಹಬ್ಬಕ್ಕೆ ತೆರೆ
ಹುಕ್ಕೇರಿ ನಗರದಲ್ಲಿ ಕಳೆದ 9 ದಿನಗಳಿಂದ ಜರಗುತ್ತಿರುವ ನವರಾತ್ರಿ ಉತ್ಸವಕ್ಕೆ ಹಿರೆಮಠದ ಚಂದ್ರಶೇಖರ ಮಹಾಸ್ವಾಮಿಗಳ ಅಡ್ಡ ಪಲ್ಲಕ್ಕಿ ಉತ್ಸವ ಜರಗಿಸುವ ಮೂಲಕ ದಸರಾ ಹಬ್ಬಕ್ಕೆ ತೆರೆ ಎಳೆಯಲಾಯಿತು. ನವರಾತ್ರಿ ಅಂಗವಾಗಿ ಹುಕ್ಕೇರಿ ನಗರದ ಹಿರೇಮಠದಲ್ಲಿ ಒಂಬತ್ತು ದಿನಗಳ ಕಾಲ ಗುರುಶಾಂತೇಶ್ವರನಿಗೆ ಅಭಿಷೇಕ,ಮಹಾ ಚಂಡಿಕಾಹೋಮ, ಅದ್ಯಾತ್ಮೀಕ ಪ್ರವಚನ ದೊಂದಿಗೆ ಭಾವೈಕ್ಯ ದಸರಾ, ಕೃಷಿ ದಸರಾ, ಮಹಿಳಾ ದಸರಾ, ಜಾನಪದ ದಸರಾ, ಮಕ್ಕಳ ದಸರಾ, ಯುವ ದಸರಾ ಕಾರ್ಯಕ್ರಮಗಳಲ್ಲಿ ನಾಡಿನ ವಿವಿಧ ಮಠಾಧೀಶರು, …
Read More »ಶಾಲಾ ಬಾಲಕರಿದ್ದ ಬಸ್ಸನ್ನು ಪ್ರವಾಹದ ನೀರಿನಲ್ಲಿ ನುಗ್ಗಿಸಿದ ಚಾಲಕ
ಬೆಳಗಾವಿ : ಮಳೆಯ ಆರ್ಭಟಕ್ಕೆ ಹಳ್ಳದಲ್ಲಿ ಉಂಟಾಗಿದ್ದ ಪ್ರವಾಹದ ನೀರಿನಲ್ಲಿ ಶಾಲಾ ಬಾಲಕರಿದ್ದ ಬಸ್ಸನ್ನು ಎಗ್ಗಿಲ್ಲದೆ ನುಗ್ಗಿಸಿ ಚಾಲಕ ಚಲಾಯಿಸಿದ್ದು, ಇನ್ನೇನು ಬಸ್ ನೀರಲ್ಲಿ ಕೊಚ್ವಿ ಹೋಗುವ ಮಟ್ಟಕ್ಕೆ ಬಂದಾಗ ಎಚ್ಚರಗೊಂಡ ಗ್ರಾಮಸ್ಥರು ಶಾಲಾ ಮಕ್ಕಳನ್ನು ರಕ್ಷಣೆ ಮಾಡಿದ್ದಾರೆ. ಇದರಿಂದ ಭಾರಿ ಅನಾಹುತ ತಪ್ಪಿರುವ ಘಟನೆ ಹುಕ್ಕೇರಿ ತಾಲೂಕಿನ ಎಲಿಮುನ್ನೋಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ನಡೆದಿದೆ. ಹುಕ್ಕೇರಿ ತಾಲೂಕಿನಲ್ಲಿ ಮಂಗಳವಾರ ಸಂಜೆಯಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ನದಿ, ಹಳ್ಳಗಳು …
Read More »ಮನನೊಂದು ಮಹಿಳೆ ಆತ್ಮಹತ್ಯೆ
ಸಂಕೇಶ್ವರ ಸೋಲಾಪುರದ ಸುಧಾ ಸೋಮನಾಥ್ ವಾಜಂತ್ರಿ ವಯಸ್ಸು 25 ಸುಮಾರು 8 ವರ್ಷಗಳಿಂದ ಮಕ್ಕಳು ಆಗದ ಕಾರಣ ಮನನೊಂದು ಮಹಿಳೆ ಆತ್ಮಹತ್ಯೆಗೆ ಶರಣಾಗಿದ್ದಾಳೆ ಎಂದು ಜನರು ಮಾತನಾಡುತ್ತಿದ್ದಾರೆ. ಆದರೆ ಬಾವಿಯಲ್ಲಿ ಬಿದ್ದು ಆತ್ಮಹತ್ಯೆ ಮಾಡಿಕೊಂಡರೆ ಮೃತ ದೇಹವು ಮೂರು ದಿನಗಳ ನಂತರ ನೀರಿನ ಮೇಲೆ ತೇಲಾಡುತ್ತದೆ ಆದರೆ ಇಲ್ಲಿ ಆತ್ಮಹತ್ಯೆ ಮಾಡಿಕೊಂಡ ತಕ್ಷಣವೇ ಮೃತ ದೇಹ ನೀರಿನ ಮೇಲೆ ತೇಲಾಡುತ್ತಿದೆ. ಈ ಮೃತ ದೇಹ ಹಲವಾರು ಅನುಮಾನಗಳಿಗೆ ಎಡೆ ಮಾಡಿಕೊಟ್ಟಿದೆ …
Read More »ಈ ಬಾರಿ ಹುಕ್ಕೇರಿ ಮತಕ್ಷೇತ್ರದ ಶಾಸಕ ಯಾರಾಗ್ತಾರೆ?
ಈ ಬಾರಿ ಹುಕ್ಕೇರಿ ಮತಕ್ಷೇತ್ರದ ಶಾಸಕ ಯಾರಾಗ್ತಾರೆ ಎಂದು ಜನ ಎದುರು ನೋಡುತ್ತಿದ್ದಾರೆ, ಉತ್ತರ ಕರ್ನಾಟಕದ ಬಲಿಷ್ಟ ನಾಯಕ ಉಮೇಶ್ ಕತ್ತಿ ನಿಧನದಿಂದ ಹುಕ್ಕೇರಿ ಕ್ಷೇತ್ರದಲ್ಲಿ ಚುನಾವಣೆ ಈ ಬಾರಿ ಕುತುಹಲ ಕೇರಳಿಸಿದೆ. ಹುಕ್ಕೇರಿ ಮತಕ್ಷೇತ್ರದಲ್ಲಿ ಯಾವದೇ ಪಕ್ಷದ ಮೇಲಿನ ಚುನಾವಣೆ ಜರುಗಿದ ಉದಾಹರಣೆಗಳಿಲ್ಲಾ, ಉಮೇಶ್ ಕತ್ತಿ ಯಾವಪಕ್ಷದಿಂದ ಸ್ಪರ್ಧೆ ಮಾಡುತ್ತಾರೋ ಅದೆ ಗೆಲವು ಪಡೆಯುತ್ತಿತ್ತು ಆದರೆ ಉಮೇಶ್ ಕತ್ತಿ ನಿಧನದಿಂದ ಕ್ಷೇತ್ರದಲ್ಲಿ ವಿವಿಧ ಪಕ್ಷಗಳ ಚಟುವಟುಕೆಗಳು ಗದಿಗೇರಿವೆ ಈಗಾಗಲೇ …
Read More »ಹುಕ್ಕೇರಿ ಕ್ಷೇತ್ರದಲ್ಲಿ ನಿಖಿಲ್ ಕತ್ತಿ ಹಾಗೂ ರಮೇಶ್ ಕತ್ತಿ ನಡುವೆ ಟಿಕೆಟ್ ಕಸರತ್ತು..
ಹುಕ್ಕೇರಿ: ಉತ್ತರ ಕರ್ನಾಟಕದ ಅತ್ಯಂತ ಗಟ್ಟಿ ಧ್ವನಿ ಎಂದೇ ಹೆಸರಾಗಿದ್ದ ಉಮೇಶ ಕತ್ತಿ ಅವರ ಅಕಾಲಿಕ ಅಗಲಿಕೆಯಿಂದ ಹುಕ್ಕೇರಿ ವಿಧಾನಸಭಾ ಕ್ಷೇತ್ರ ಖಾಲಿಖಾಲಿ ಎನಿಸುತ್ತಿದೆ. ಕತ್ತಿ ಕುಟುಂಬಕ್ಕೆ ನಿಷ್ಠರಾದ ಮತದಾರರನ್ನು ಸೆಳೆದು ಹೊಸ ಮುಖ ಗೆಲ್ಲುವುದೋ ಅಥವಾ ವಂಶವಾಹಿ ಪರಂಪರೆ ಮುಂದುವರಿಯುವುದೋ ಎಂಬುದೇ ಈಗಿರುವ ಕುತೂಹಲ. ‘ಉಮೇಶ ಕತ್ತಿ ಅಗಲಿಕೆಯಿಂದ ಅನುಕಂಪದ ಮತಗಳನ್ನು ಪಡೆದು ಗೆಲ್ಲುವ ಅವಶ್ಯಕತೆ ಇಲ್ಲ. ಕತ್ತಿ ಕುಟುಂಬಕ್ಕೇ ಸಾಂಪ್ರದಾಯಿಕ ಮತಗಳಿವೆ. ಕುಟುಂಬದಲ್ಲಿ ಯಾರು ನಿಂತರೂ ಜನ …
Read More »