Breaking News
Home / ಜಿಲ್ಲೆ / ಬೆಳಗಾವಿ / ಹುಕ್ಕೇರಿ (page 3)

ಹುಕ್ಕೇರಿ

ಹಗೇದಾಳ ಗುಟಗುದ್ದಿ ರಾಮದ ಯುವಕರಿಂದ ರಾಹುಲ್ ಜಾರಕಿಹೊಳಿಗೆ ಸತ್ಕಾರ

ಹಗೇದಾಳ ಗ್ರಾಮದ ಯುವಕರಿಂದ ರಾಹುಲ್ ಜಾರಕಿಹೊಳಿಗೆ ಸತ್ಕಾರ ಹುಕ್ಕೇರಿ : ತಾಲ್ಲೂಕಿನ ಹಗೇದಾಳ ಗ್ರಾಮದ ಯುವಕರು ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರನ್ನು ಬುಧವಾರ ಸತ್ಕರಿಸಿ ಗೌರವಿಸಿದರು. ಗುಟಗುದ್ದಿ ಗ್ರಾಮದಲ್ಲಿ ಇಂದು ನಡೆಯಲಿರುವ ರಾಹುಲ್ ಜಾರಕಿಹೊಳಿ ಯುವಕ ಸಂಘದ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವ ಸಂದರ್ಭದಲ್ಲಿ ದಾರಿ ಮಧ್ಯದಲ್ಲಿ ಹಗೇದಾಳ ಗ್ರಾಮದ ಯುವಕರು, ರಾಹುಲ್ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು.   ಸನ್ಮಾನ ಸ್ವೀಕರಿಸಿ ಯುವ ನಾಯಕ ರಾಹುಲ್ ಜಾರಕಿಹೊಳಿ …

Read More »

ಹಿಡಕಲ್ ಜಲಾಶಯದಿಂದ ನೀರು ಬಿಡುತ್ತಾರೆ ಎಂಬ ಸುದ್ದಿ ಸುಳ್ಳು ; ಹುಕ್ಕೇರಿ ತಹಶೀಲ್ದಾರ ಹೂಗಾರ

  ಘಟಪ್ರಭ; ನದಿಪಾತ್ರದ ಜನರಿಗೆ ಸುಳ್ಳು ಸುದ್ದಿ ಕೊಡುತ್ತಿರುವ ವಾಟ್ಸಪ್ ಸಂದೇಶಗಳು ಶುದ್ಧ ಸುಳ್ಳು ಎಂದು ಹುಕ್ಕೇರಿ ತಹಸಿಲ್ದಾರ ಡಿ.ಎಚ್.ಹೂಗಾರ ತಿಳಿಸಿದ್ದಾರೆ.   ಪ್ರಸ್ತುತ ಹುಕ್ಕೇರಿ ತಾಲೂಕಿನಲ್ಲಿ ಅತಿಯಾಗಿ ಮಳೆ ಸುರಿಯುತ್ತಿದ್ದು ಕಾರಣ ಹುಕ್ಕೇರಿ ತಾಲೂಕಿನ ಯರನಾಳ ಮದಮಕನಾಳ ಗ್ರಾಮಗಳ ಮಧ್ಯೆ ಇರುವ ಸೇತುವೆ ಹಾಗೂ ಪಾಶ್ಚಪೂರ ಕುಂದರಗಿ ಗ್ರಾಮಗಳ ಮಧ್ಯೆ ಇರುವ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಹಾಗೂ ಸದರಿ ಗ್ರಾಮಗಳಿಗೆ ತೆರಳಲು ಪರ್ಯಾಯ ಮಾರ್ಗಗಳು ಲಭ್ಯವಿರುತ್ತವೆ …

Read More »

ಯಮಕನಮರಡಿ: ಬಾಲಕಿಯೊಬ್ಬಳ ಮೇಲೆ ಅವಳ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ

ಯಮಕನಮರಡಿ: ಬಾಲಕಿಯೊಬ್ಬಳ ಮೇಲೆ ಅವಳ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಜೈ ಹನುಮಾನ ನಗರದ ತೋಟ ಮನೆಯ ಕಬ್ಬಿನ ಗದ್ದೆಯಲ್ಲಿ ಶನಿವಾರ ನಡೆದಿದೆ. ಅತ್ಯಾಚಾರ ಎಸಗಿದ ಆರೋಪಿ ಮಾರುತಿ ಪೂಜೇರಿ(42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 14ವರ್ಷ ಬಾಲಕಿ ತನ್ನ ಮಾವನ ಮನೆಯಲ್ಲಿ ಬಹಳ ದಿನದಿಂದ ವಾಸ ಇದ್ದಳು. ಶನಿವಾರ ಆರೋಪಿ ಆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಮನನೊಂದು ವಿಷ ಸೇವಿಸಿದ್ದು, ಆ …

Read More »

ಹುಕ್ಕೇರಿ ನೂತನ ತಹಶೀಲ್ದಾರ್ ಡಿ.ಎಚ್. ಹೂಗಾರ ಅಧಿಕಾರ ಸ್ವೀಕಾರ

ಹುಕ್ಕೇರಿ: ತಾಲೂಕಿನ ನೂತನ ತಹಶೀಲ್ದಾರ ಆಗಿ ಡಿ.ಎಚ್. ಹೂಗಾರ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ನೂತನ ತಹಶೀಲ್ದಾರರನ್ನು ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಹೂಗಾರ ಅವರು ಶಾಸಕ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.

Read More »

ದಡ್ಡಿ, ಮಜತಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸತೀಶ

  ಬೆಳಗಾವಿ: ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯ ದಡ್ಡಿ, ಮಜತಿ ಹಾಗೂ ಚಿಕ್ಕಲದಿನ್ನಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಸತೀಶ ಜಾರಕಿಹೊಳಿ ಗುರುವಾರ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯ ಸುಮಾರು 45 ಲಕ್ಷ ರೂ. ಅನುದಾನದಲ್ಲಿ ದಡ್ಡಿ, ಮಜತಿ, ಮಾವನೂರು, ಕುರ್ಣಿ, ಚಿಕ್ಕಲದಿನ್ನಿ ಗ್ರಾಮದಲ್ಲಿನ ಎಸ್, ಸಿ ಕಾಲೋನಿಗಳಲ್ಲಿನ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ರಮೇಶ ಪಾಟೀಲ್, ಸುರೇಶ ಬೆನ್ನಿ, ಮಾಲಿಂಗ ಶಿರಗುಪ್ಪಿ, …

Read More »

ಸಿದ್ದರಾಮಯ್ಯ ಅವರ ಹೇಳಿಕೆ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ: ಶಾಸಕ ಸತೀಶ್ ಜಾರಕಿಹೊಳಿ

ಯಮಕನಮರಡಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಒಳ ಒಪ್ಪಂದ ಕಾರಣ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ಅದನ್ನು ಇಷ್ಟು ದೊಡ್ಡದು ಮಾಡುವ ಅವಶ್ಯಕತೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಕೇವಲ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ. ಸ್ಥಳೀಯ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಎಲ್ಲರೂ ಈ ಹೇಳಿಕೆಗೆ ಅಭಿಪ್ರಾಯ ನೀಡುವುದು ಸೂಕ್ತವಲ್ಲ ಎಂದು ಹೇಳಿದರು.‌ ಕಳೆದ ಆರು …

Read More »

ಕಾಂಗ್ರೇಸ್ ಮುಖಂಡರ ಮೇಲೆ ಗುಂಡಿ ದಾಳಿ: ಗ್ರಾ,ಪಂ, ಚುನಾವಣೆ ಹಿನ್ನೆಲೆ ಶಂಕೆ,

ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಶಾಸಕ ಸತೀಶ ಜಾರಕಿಹೋಳಿ ಆಪ್ತರಾದ ಕೀರಣ ರಜಪೂತ, ಬರಮಾ ದೂಪದಾಳೆ ಮೇಲೆ ಗುಂಡಿನ ದಾಳಿ ಗ ನಡೆಸಿ ಫರಾರಿಯಾಗಿರುವ ಘಟನೆ ನಡೆದಿದೆ. ಈ ದಾಳಿಯು ಕಂಟ್ರಿ ಪಿಸ್ತೋಲದಿಂದ ನಡೆಸಲಾಗಿದೆ. ಕಳೆದ ಬುಧವಾರ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ವ್ಯಕ್ತಿಯ ನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಪ್ರಾಣಾಪಾಯದಿಂದ …

Read More »

ಹತ್ತರಗಿ ಗ್ರಾಪಂಗೆ ಪತಿ-ಪತ್ನಿ ಅವಿರೋಧ ಆಯ್ಕೆ: ಖಾತೆ ತೆರೆದ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿಗಳು!!

ಯಮಕನಮರಡಿ: ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಹತ್ತರಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪತಿ-ಪತ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯ 2 ನೇ ವಾರ್ಡ್‍ನ ಎಸ್‍ಸಿ ಪುರುಷ ಮೀಸಲು ಕ್ಷೇತ್ರದಿಂದ ಉಮೇಶ ನಾಗಪ್ಪಾ ಭೀಮಗೋಳ, 1 ನೇ ವಾರ್ಡ್‍ನ ಎಸ್‍ಸಿ ಮಹಿಳಾ ಮೀಸಲು ಕ್ಷೇತ್ರದಿಂದ ಅಕ್ಷತಾ ಉಮೇಶ ಭೀಮಗೋಳ ಅವರ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿವೆ. ಹೀಗಾಗಿ ಈ ದಂಪತಿಯ ಆಯ್ಕೆ ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ ತಳಮಟ್ಟದಲ್ಲಿ …

Read More »

ಯರನಾಳ ಗ್ರಾಮದ ಶ್ರೀ ಕಾಳಿಕಾ ದೇವಸ್ಥಾನದ ಬ್ರಹ್ಮಾನಂದ ಮಠದಲ್ಲಿ ಭಕ್ತಿಗೀತೆಗಳ ಸಿ ಡಿ ಯನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು.

ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದ ಶ್ರೀ ಕಾಳಿಕಾ ದೇವಸ್ಥಾನದ ಬ್ರಹ್ಮಾನಂದ ಮಠದಲ್ಲಿ ಕಾಳಿಕಾಂಬೆಂಯ ಕಂದ ಗುರು ಬ್ರಹ್ಮಾನಂದ ಎಂಬ ಭಕ್ತಿಗೀತೆಗಳ ಸಿ ಡಿ ಯನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು.ನಂತರ ಮಾತನಾಡಿದ ಶ್ರೀಗಳು ಅರುಣ ಐಹೋಳೆ ಮತ್ತು ಮುಕುಂದ ಮಠದ ನೇತೃತ್ವದಲ್ಲಿ ರಚಿಸಿದ ಶ್ರೀ ಬ್ರಹ್ಮಾನಂದ ಗುರುಗಳ ಭಕ್ತಿ ಗೀತೆಗಳು ಚನ್ನಾಗಿ ಮೂಡಿಬಂದಿವೆ ಎಂದರು , ರಾಯಬಾಗ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅರುಣ ಐಹೋಳೆ ಕಲಾವಿದರಾದ …

Read More »

‘ಮಹಾನಾಯಕ’ ಧಾರಾವಾಹಿಯಿಂದ ಮರೆತು ಹೋದ ಡಾ. ಬಿ.ಆರ್.ಅಂಬೇಡ್ಕರ್ ಅವರ  ಇತಿಹಾಸವನ್ನು ತಿಳಿದುಕೊಳ್ಳುವ ಪ್ರಯತ್ನವಾಗುತ್ತಿದೆ:ಸತೀಶ್ ಜಾರಕಿಹೊಳಿ

ಹುಕ್ಕೇರಿ : ‘ ಝೀ ವಾಹಿನಿಯಲ್ಲಿ  ಪ್ರಸಾರವಾಗುತ್ತಿರುವ ‘ಮಹಾನಾಯಕ’ ಧಾರಾವಾಹಿಯಿಂದ ಮರೆತು ಹೋದ ಡಾ. ಬಿ.ಆರ್.ಅಂಬೇಡ್ಕರ್ ಅವರ  ಇತಿಹಾಸವನ್ನು ತಿಳಿದುಕೊಳ್ಳುವ ಪ್ರಯತ್ನವಾಗುತ್ತಿದೆ ‘ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಅರ್ಜುನ ವಾಡ್ ಗ್ರಾಮದಲ್ಲಿ ಗುರುವಾರ ಮಹಾನಾಯಕ ಬ್ಯಾನರ್ ಉದ್ಘಾಟನೆಗೊಳಿಸಿ ಮಾತನಾಡಿದರು. ‘ ಇಡೀ ಕರ್ನಾಟಕದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ಭಾವಚಿತ್ರವಿರುವ ಪೊಸ್ಟರ್ ಉದ್ಘಾಟನೆಗೊಳಿಸುವ ಪರಂಪರೆ ಮುಂದುವರೆದಿದೆ. ಇದಕ್ಕೆ ಝೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ …

Read More »