ಬೆಳಗಾವಿ: ಹುಕ್ಕೇರಿ ತಾಲೂಕಿನ ಯಾದಗೂಡ ಗ್ರಾಮದಲ್ಲಿ ಕೃಷಿ ಹೊಂಡಕ್ಕೆ ಬಿದ್ದು ಬಾಲಕರಿಬ್ಬರು ಬಲಿಯಾಗಿದ್ದಾರೆ. ಯಮನಪ್ಪ ಪ್ರಕಾಶ ರೆಡ್ಡರಟ್ಟಿ (10) ಹಾಗೂ ಯೇಶು ಬಸಪ್ಪ (14) ಮತರಾದ ಬಾಲಕರು. ಭಾನುವಾರ ಸಂಜೆ 4.30ರ ಹೊತ್ತಿಗೆ ಈ ಬಾಲಕರು ಈಸಲೆಂದು ಕೃಷಿ ಹೊಂಡಕ್ಕೆ ಇಳಿದಿದ್ದಾರೆ. ಈ ವೇಳೆ ಯಮನಪ್ಪ ನೀರಿನಲ್ಲಿ ಮುಳುಗುತ್ತಿದ್ದ. ಆತನನ್ನು ರಕ್ಷಿಸಲು ಯೇಶು ಪ್ರಯತ್ನಿಸಿದ್ದಾನೆ. ಆದರೆ ಇಬ್ಬರೂ ಬದುಕುಳಿಯಲಿಲ್ಲ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದಾರೆ.
Read More »ಕಿತ್ತೂರು ಕರ್ನಾಟಕ ಅಭಿವೃದ್ಧಿಗೆ ಸರಕಾರ ಪ್ರತ್ಯೇಕ ಬಜೆಟ್ ಮಂಡಿಸಲಿ:ಶ್ರೀ ಚಂದ್ರಶೇಖರ ಶಿವಾಚಾರ್ಯ
ಬೆಳಗಾವಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರ ಕಿತ್ತೂರು ಕರ್ನಾಟಕದ ಅಭಿವೃದ್ಧಿಗಾಗಿ ಪ್ರತ್ಯೇಕ ಬಜೆಟ್ ಮಂಡಿಸಬೇಕು. ಇದಕ್ಕಾಗಿ ಈ ಭಾಗದ ಶಾಸಕರು, ಸಚಿವರು ಮುಖ್ಯಮಂತ್ರಿಗಳ ಮನವಿ ಮಾಡಬೇಕು ಎಂದು ಎಂದು ಹುಕ್ಕೇರಿ ಹಿರೇಮಠದ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಶ್ರೀಗಳು, ರಾಜ್ಯದ ಆಡಳಿತವನ್ನು ಸಮರ್ಥವಾಗಿ ನಿಭಾಯಿಸುವ ಮೂಲಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಅವರ ಕಾರ್ಯಕ್ಷಮತೆ, ನಾಡಿಗೆ ನೀಡಿದ ಕೊಡುಗೆಗಳು …
Read More »ಕಾರು ಕಳುವು ಮಾಡಿ ಮಾರುತ್ತಿದ್ದ ಆರೋಪಿಗಳ ಬಂಧನ
ಹುಕ್ಕೇರಿ: ಕಾರು ಖರೀದಿಸಿ ಮಾರಾಟ ಮಾಡಿ, ಅದೇ ಕಾರನ್ನು ಕಳ್ಳತನ ಮಾಡಿ ಮತ್ತೆ ಮಾರಾಟ ಮಾಡುತ್ತಿದ್ದ ಪ್ರಕರಣದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳ ಕಿಂಗ್ ಪಿನ್ ಮಹಾರಾಷ್ಟ್ರದ ಔರಂಗಾಬಾದ್ ನಿವಾಸಿಯಾಗಿದ್ದು ಗಡಹಿಂಗ್ಲಜ್ ನಲ್ಲಿ ಮಹಾರಾಷ್ಟ್ರರಾಜ್ಯ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಗುಮಾಸ್ತನಾಗಿ ಕೆಲಸ ಮಾಡುತ್ತಿದ್ದ. ನಂತರದಲ್ಲಿ ಕೆಲಸ ಕಳೆದುಕೊಂಡಿದ್ದ ಈತ ಹಳೆಯ ಕಾರುಗಳನ್ನು ಕೊಳ್ಳುವಿಕೆ ವ್ಯವಹಾರ ಪ್ರಾರಂಭಿಸಿದ್ದ. ಬೇರೆಯವರ ಕಾರುಗಳನ್ನು ತಾನು ನಡೆಸುವುದಾಗಿ ಹೇಳಿ ಅವುಗಳನ್ನು ಪಡೆದ ನಂತರ ನಂಬರ್ ಪ್ಲೇಟ್ ಗಳನ್ನು …
Read More »ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 66 ನೇ ಪರಿನಿರ್ವಾಹಣ ದಿನವನ್ನು ಮೊಂಬತ್ತಿ ಬೆಳಕಿನಲ್ಲಿ ಮೌನ ಮೇರವಣೆಗೆ
ದೇಶದಲ್ಲಿ ಶಾಂತಿ ಸಮಾನತೆ ಮತ್ತು ಸೌಹಾರ್ದ ಲಭಿಸಲು ಇಂದು ಡಾ, ಬಾಬಾಸಾಹೇಬ ಅಂಬೇಡ್ಕರ್ ರವರ 66 ನೇ ಪರಿನಿರ್ವಾಹಣ ದಿನವನ್ನು ಮೊಂಬತ್ತಿ ಬೆಳಕಿನಲ್ಲಿ ಮೌನ ಮೇರವಣೆಗೆ ಮಾಡಲಾಗುತ್ತಿದೆ ಎಂದು ಹುಕ್ಕೇರಿ ದಲಿತ ಮುಖಂಡ ಮಾಜಿ ಪುರಸಭೆ ಅದ್ಯಕ್ಷ ಉದಯ ಹುಕ್ಕೇರಿ ಹೇಳಿದರು. ಅವರು ಮಂಗಳವಾರ ರಾತ್ರಿ ಹುಕ್ಕೇರಿ ನಗರದ ಅಂಬೇಡ್ಕರ್ ನಗರದಿಂದ ಕೋರ್ಟ್ ಸರ್ಕಲ್ ವರೆಗೆ ಮೌನ ಮೇರವಣೆಗೆ ನಡೆಸಿದರು. ಈ ಸಂದರ್ಭದಲ್ಲಿ ಪುರಸಭೆ ಸದಸ್ಯೆ ಸಂಗೀತಾ ಹುಕ್ಕೇರಿ, …
Read More »ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಹತ್ಯೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹುಕ್ಕೇರಿ ಪೊಲೀಸರು ಯಶಸ್ವಿ
ಹುಕ್ಕೇರಿ ತಾಲೂಕಿನ ಬೆಲ್ಲದ ಬಾಗೇವಾಡಿ ಗ್ರಾಮದಲ್ಲಿ ಓರ್ವ ಅಜ್ಜಿಯನ್ನು ಹತ್ಯೆ ಮಾಡಿದ್ದ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಹುಕ್ಕೇರಿ ಪೊಲೀಸರು ಯಶಸ್ವಿಯಾಗಿದ್ದಾರೆ. ಹೌದು ಅಕ್ಟೋಬರ್ 7ರಂದು ಬೆಲ್ಲದಬಾಗೇವಾಡಿಯ ಮನೆಯೊಂದರಲ್ಲಿ 75 ವರ್ಷದ ಮಲ್ಲವ್ವ ಜೀವಪ್ಪ ಕಮತೆ ಎಂಬ ವೃದ್ಧ ಮಹಿಳೆ ಸಾವನ್ನಪ್ಪಿದ್ದರು. ಈ ವೇಳೆ ಸ್ಥಳಕ್ಕೆ ಭೇಟಿ ಕೊಟ್ಟಿದ್ದ ಹುಕ್ಕೇರಿ ಪೊಲೀಸರು ಆರಂಭದಲ್ಲಿ ಅನೈಸರ್ಗಿಕ ಸಾವು ಎಂದು ಕೇಸ್ ದಾಖಲಿಸಿಕೊಂಡಿದ್ದರು. ಆದರೆ ಮರಣೋತ್ತರ ಪರೀಕ್ಷೆ ವರದಿಯಲ್ಲಿ ಈ ಅಜ್ಜಿಯನ್ನು ಕತ್ತು …
Read More »ಹಿಡಕಲ್ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ
ಹುಕ್ಕೇರಿ ತಾಲೂಕಿನ ಹಿಡಕಲ್ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರಕ್ಕೆ ಬಿಡಲಾಗಿದೆ ಎಂದು ತಹಶೀಲ್ದಾರ ಡಾ.ಡಿ.ಎಚ್.ಹೂಗಾರ್ ಅವರು ಮಾಹಿತಿ ನೀಡಿದ್ದಾರೆ. ರವಿವಾರ ದಿನ ಹುಕ್ಕೇರಿ ತಾಲೂಕಿನ ರಾಜಾ ಲಖಮಗೌಡಾ ಜಲಾಶಯದಿಂದ 20 ಸಾವಿರ ಕ್ಯೂಸೆಕ್ ನೀರು ಹೊರ ಬಿಡಲಾಗಿದೆ ಕಾರಣ ಘಟಪ್ರಭಾ ನದಿ ಪಾತ್ರದ ಜನರು ತಮ್ಮ ಜಾನುವಾರುಗಳ ಸಮೇತ ಸುರಕ್ಷಿತ ಸ್ಥಳಕ್ಕೆ ಹೋಗಬೇಕು ಎಂದು ಹುಕ್ಕೇರಿ ತಹಶೀಲ್ದಾರ ಡಾ.ದೊಡ್ಡಪ್ಪಾ ಹೂಗಾರ ಪ್ರಕಟಣೆ ಮೂಲಕ ತಿಳಿಸಿದ್ದಾರೆ. ಈಗಾಗಲೆ ಪ್ರತಿ …
Read More »ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ.
ಕತ್ತಿ ಕುಟುಂಬದಕ್ಕೆ ಸಾಂತ್ವನ ಹೇಳಲು ತೆರಳುತಿದ್ದವರ ಕಾರು ಅಪಫಾತ. ಇತ್ತಿಚಿಗೆ ಮೃತರಾದ ಸಚಿವ ಉಮೇಶ ಕತ್ತಿ ಅವರ ಕುಟುಂಬಕ್ಕೆ ಸಾಂತ್ವನ ತಿಳಿಸಲು ಹೊರಟಿದ್ದ ಉಪ್ಪಾರ ಸಮಾಜದ ಪ್ರಭಾವಿ ಹಿರಿಯ ಮುಖಂಡ, ಜಿಲ್ಲಾ ಪರಿಷತ್ ಮಾಜಿ ಸದಸ್ಯ, ಕತ್ತಿ ಕುಟುಂಬದ ಆಪ್ತರಾಗಿದ್ದ ದಿವಂಗತ ದುಂಡಪ್ಪ ಚೌಕಶಿ ಅವರ ಸಹೋದರ ಹಾಗೂ ಬೆಳಗಾವಿ ಜಿಲ್ಲಾ ಪಂಚಾಯತ ಮಾಜಿ ಸದಸ್ಯೆ ಪತಿ ಕಲ್ಲಪ್ಪ ಚೌಕಶಿ, ಗೋಕಾಕ ತಾಲೂಕು ಪಂಚಾಯತಿ ಮಾಜಿ ಸದಸ್ಯರಿಬ್ಬರಾದ ನಿಂಗಪ್ಪ …
Read More »ಅಂಗಡಿಗಳಲ್ಲಿ ಕಳ್ಳತನ ನಡೆಸುತ್ತಿದ್ದ ಅಂತಾರಾಜ್ಯ ಇರಾನಿ ಗ್ಯಾಂಗ್ ನ ಇಬ್ಬರ ಬಂಧನ
ಬೆಳಗಾವಿ: ನಾನಾ ರಾಜ್ಯಗಳಲ್ಲಿ ಕಿರಾಣಿ ಹಾಗೂ ಆಭರಣ ಅಂಗಡಿಗಳಲ್ಲಿ ಕಳುವು ನಡೆಸುತ್ತಿದ್ದ ಕುಖ್ಯಾತ ಇರಾನಿ ಗ್ಯಾಂಗ್ ನ ಇಬ್ಬರನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9,58,000 ರೂ. ಮೌಲ್ಯದ ಬಂಗಾರದ ಆಭರಣ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಕಳೆದ ತಿಂಗಳು ಹುಕ್ಕೇರಿ ಪಟ್ಟಣದ ವಿದ್ಯಾ ಜ್ಯುವೆಲರಿ ಶಾಪ್‌ನಲ್ಲಿ ಮಾಲೀಕರ ಗಮನ ಬೇರೆಡೆ ಸೆಳೆದು ಬಂಗಾರದ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಅಂಗಡಿ ಮಾಲೀಕರು ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. …
Read More »ಮನೆ ಕಳ್ಳನನ್ನು ಬಂಧಿಸಿದ ಹುಕ್ಕೇರಿ ಪೊಲೀಸರು
ಹುಕ್ಕೇರಿ – ಐದು ದಿನಗಳ ಹಿಂದೆ ಹುಕ್ಕೇರಿ ಪಟ್ಟಣದ ವಿವಿಧ ಗಲ್ಲಿಗಳಲ್ಲಿ 6 ಮನೆಗಳ ಸರಣಿ ಕಳ್ಳತನ ಆಗಿ ಸುಮಾರು 48,000/-ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣ ಹಾಗೂ 5000/- ರೂ ನಗದು ಕಳ್ಳತನ ಆಗಿತ್ತು. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ (ಅಪರಾಧ ಸಂಖ್ಯೆ: 116/2022, ಕಲಂ 454, 457, 380, 51 ಐ.ಪಿ.ಸಿ) ಪ್ರಕರಣ ದಾಖಲಾಗಿತ್ತು. ಹುಕ್ಕೇರಿ ತಾಲೂಕಿನ ಸಂಕೇಶ್ವರ, ಯಮಕನಮರಡಿ ಮತ್ತು ಹುಕ್ಕೇರಿ ಠಾಣಾ …
Read More »ಭರಮಾಪುರಕ್ಕೆ ಬೆಳಕು ನೀಡಿದ ಶಾಸಕ ಸತೀಶ್ ಜಾರಕಿಹೊಳಿ
ಹುಕ್ಕೇರಿ: ಕಳೆದ ಎಂಟು ವರ್ಷಗಳ ಸತತ ಪ್ರಯತ್ನದಿಂದ ಇಂದು ಭರಮಾಪುರ ಗ್ರಾಮಕ್ಕೆ ವಿದ್ಯುತ್ ಸೌಲಭ್ಯ ದೊರಕಿದ್ದು ಸಂತಸ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಅವರು ಹೇಳಿದರು. ತಾಲೂಕಿನ ಭರಮಾಪುರ ಗ್ರಾಮದಲ್ಲಿ ರಾಜೀವ ಗಾಂಧಿ ಗ್ರಾಮೀಣ ವಿದ್ಯುತೀಕರಣ ಮತ್ತು ಬೆಳಕು ಯೋಜನೆಯಲ್ಲಿ 25 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಕಾಮಗಾರಿಗಳ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಕೆಲವರಿಗೆ ವಿದ್ಯುತ್ ದೊರಕಿದ್ದು, ಇನ್ನೂ …
Read More »