Breaking News

ಹುಕ್ಕೇರಿ

ಅಂಗಡಿಗಳಲ್ಲಿ ಕಳ್ಳತನ ನಡೆಸುತ್ತಿದ್ದ ಅಂತಾರಾಜ್ಯ ಇರಾನಿ ಗ್ಯಾಂಗ್ ನ ಇಬ್ಬರ ಬಂಧನ

ಬೆಳಗಾವಿ: ನಾನಾ ರಾಜ್ಯಗಳಲ್ಲಿ ಕಿರಾಣಿ ಹಾಗೂ ಆಭರಣ ಅಂಗಡಿಗಳಲ್ಲಿ ಕಳುವು ನಡೆಸುತ್ತಿದ್ದ ಕುಖ್ಯಾತ ಇರಾನಿ ಗ್ಯಾಂಗ್ ನ ಇಬ್ಬರನ್ನು ಹುಕ್ಕೇರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳಿಂದ 9,58,000 ರೂ. ಮೌಲ್ಯದ ಬಂಗಾರದ ಆಭರಣ ಹಾಗೂ ನಗದು ವಶಪಡಿಸಿಕೊಳ್ಳಲಾಗಿದೆ. ಕಳೆದ ತಿಂಗಳು ಹುಕ್ಕೇರಿ ಪಟ್ಟಣದ ವಿದ್ಯಾ ಜ್ಯುವೆಲರಿ ಶಾಪ್‌ನಲ್ಲಿ ಮಾಲೀಕರ ಗಮನ ಬೇರೆಡೆ ಸೆಳೆದು ಬಂಗಾರದ ಆಭರಣಗಳನ್ನು ಕಳ್ಳತನ ಮಾಡಲಾಗಿತ್ತು. ಈ ಸಂಬಂಧ ಅಂಗಡಿ ಮಾಲೀಕರು ಹುಕ್ಕೇರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದರು. …

Read More »

ಮನೆ ಕಳ್ಳನನ್ನು ಬಂಧಿಸಿದ ಹುಕ್ಕೇರಿ ಪೊಲೀಸರು

ಹುಕ್ಕೇರಿ – ಐದು ದಿನಗಳ ಹಿಂದೆ ಹುಕ್ಕೇರಿ ಪಟ್ಟಣದ ವಿವಿಧ ಗಲ್ಲಿಗಳಲ್ಲಿ 6 ಮನೆಗಳ ಸರಣಿ ಕಳ್ಳತನ ಆಗಿ ಸುಮಾರು 48,000/-ರೂ ಮೌಲ್ಯದ ಬಂಗಾರ ಹಾಗೂ ಬೆಳ್ಳಿಯ ಆಭರಣ ಹಾಗೂ 5000/- ರೂ ನಗದು ಕಳ್ಳತನ ಆಗಿತ್ತು. ಈ ಸಂಬಂಧ ಹುಕ್ಕೇರಿ ಪೊಲೀಸ್ ಠಾಣೆಯಲ್ಲಿ (ಅಪರಾಧ ಸಂಖ್ಯೆ: 116/2022, ಕಲಂ 454, 457, 380, 51 ಐ.ಪಿ.ಸಿ) ಪ್ರಕರಣ ದಾಖಲಾಗಿತ್ತು. ಹುಕ್ಕೇರಿ ತಾಲೂಕಿನ ಸಂಕೇಶ್ವರ, ಯಮಕನಮರಡಿ ಮತ್ತು ಹುಕ್ಕೇರಿ ಠಾಣಾ …

Read More »

ಭರಮಾಪುರಕ್ಕೆ ಬೆಳಕು ನೀಡಿದ ಶಾಸಕ ಸತೀಶ್ ಜಾರಕಿಹೊಳಿ

    ಹುಕ್ಕೇರಿ: ಕಳೆದ ಎಂಟು ವರ್ಷಗಳ ಸತತ ಪ್ರಯತ್ನದಿಂದ ಇಂದು ಭರಮಾಪುರ ಗ್ರಾಮಕ್ಕೆ ವಿದ್ಯುತ್‌ ಸೌಲಭ್ಯ ದೊರಕಿದ್ದು ಸಂತಸ ತಂದಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್‌ ಜಾರಕಿಹೊಳಿ ಅವರು ಹೇಳಿದರು.   ತಾಲೂಕಿನ ಭರಮಾಪುರ ಗ್ರಾಮದಲ್ಲಿ ರಾಜೀವ ಗಾಂಧಿ ಗ್ರಾಮೀಣ ವಿದ್ಯುತೀಕರಣ ಮತ್ತು ಬೆಳಕು ಯೋಜನೆಯಲ್ಲಿ 25 ಲಕ್ಷ ರೂ ವೆಚ್ಚದಲ್ಲಿ ನಿರ್ಮಾಣವಾದ ಕಾಮಗಾರಿಗಳ ಉದ್ಘಾಟನಾ ಸಮಾರಂಭ ನೆರವೇರಿಸಿ ಮಾತನಾಡಿದ ಅವರು, ಕೆಲವರಿಗೆ ವಿದ್ಯುತ್‌ ದೊರಕಿದ್ದು, ಇನ್ನೂ …

Read More »

ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ತಿಳಿ ಹೇಳಿದರು.

  ಹುಕ್ಕೇರಿ: ಯುವಕರು ವಿದ್ಯಾಭ್ಯಾಸ ಹಾಗೂ ಕ್ರೀಡೆ ಜೊತೆಗೆ ಸಮಾಜಸೇವೆ ಮಾಡಲು ಮುಂದಾಗಬೇಕು ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ತಿಳಿ ಹೇಳಿದರು. ಹುಕ್ಕೇರಿ ತಾಲೂಕಿನ ಗುಮಚಿನಮರಡಿ ಗ್ರಾಮದಲ್ಲಿ ಕಾಲೇಜು ಶಿಕ್ಷಣ ಇಲಾಖೆ ,ಸರ್ಕಾರಿ ಪ್ರಥಮ ದರ್ಜೆ ಕಾಲೇಜು ,ಪಾಶ್ಚಾಪುರ ಕಾಲೇಜಿನ ಎನ್.ಎಸ್.ಎಸ್ ಘಟಕದ ವತಿಯಿಂದ ಗುಮಚನಮರಡಿ ಗ್ರಾಮದ ಕಮಲಾದೇವಿ ದೇವಾಲಯದ ಅವರಣದಲ್ಲಿ ನಡೆದ ವಿಶೇಷ ವಾರ್ಷಿಕ ಶಿಬಿರದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಜಗದೀಶ್ ಎಸ್.ಎಸ್. …

Read More »

ಛತ್ರಪತಿ ಶಿವಾಜಿ ಮೂರ್ತಿ ನಿರ್ಮಾಣ ಕಾಮಗಾರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಚಾಲನೆ ನೀಡಿದರು

ಬೆಳಗಾವಿ: ಹೊನಗಾ ಗ್ರಾಮದಲ್ಲಿ ಪ್ರತಿಷ್ಠಾಪಿಸಲು ಉದ್ದೇಶಿಸಲಾಗಿರುವ ಛತ್ರಪತಿ ಶಿವಾಜಿ ಮೂರ್ತಿ ನಿರ್ಮಾಣ ಕಾಮಗಾರಿಗೆ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರು ಇಂದು ಚಾಲನೆ ನೀಡಿದರು. ಮೂರ್ತಿ ಪ್ರತಿಷ್ಠಾಪಿಸಲು ಕಟ್ಟೆ ಹಾಗೂ ಸುತ್ತಲೂ ಉದ್ಯಾನ ನಿರ್ಮಿಸಲಾಗುತ್ತಿದ್ದು, ಇದಕ್ಕೆ ರಾಹುಲ್ ಅವರು ಇಂದು ಪೂಜೆ ನೆರವೇರಿಸಿದರು. ಈ ಕಾಮಗಾರಿಗೆ ಕೆಲವು ತಿಂಗಳ ಹಿಂದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ಭೂಮಿಪೂಜೆ ನೆರವೇರಿಸಿ, ಚಾಲನೆ ನೀಡಿದ್ದರು. ಕಾಮಗಾರಿಗೆ ಈಗಾಗಲೇ ಅಡಿಪಾಯ ಹಾಕಲಾಗಿದ್ದು, …

Read More »

ಹಗೇದಾಳ ಗುಟಗುದ್ದಿ ರಾಮದ ಯುವಕರಿಂದ ರಾಹುಲ್ ಜಾರಕಿಹೊಳಿಗೆ ಸತ್ಕಾರ

ಹಗೇದಾಳ ಗ್ರಾಮದ ಯುವಕರಿಂದ ರಾಹುಲ್ ಜಾರಕಿಹೊಳಿಗೆ ಸತ್ಕಾರ ಹುಕ್ಕೇರಿ : ತಾಲ್ಲೂಕಿನ ಹಗೇದಾಳ ಗ್ರಾಮದ ಯುವಕರು ಕಾಂಗ್ರೆಸ್ ಯುವ ನಾಯಕ ರಾಹುಲ್ ಜಾರಕಿಹೊಳಿ ಅವರನ್ನು ಬುಧವಾರ ಸತ್ಕರಿಸಿ ಗೌರವಿಸಿದರು. ಗುಟಗುದ್ದಿ ಗ್ರಾಮದಲ್ಲಿ ಇಂದು ನಡೆಯಲಿರುವ ರಾಹುಲ್ ಜಾರಕಿಹೊಳಿ ಯುವಕ ಸಂಘದ ಉದ್ಘಾಟನೆ ಕಾರ್ಯಕ್ರಮಕ್ಕೆ ತೆರಳುವ ಸಂದರ್ಭದಲ್ಲಿ ದಾರಿ ಮಧ್ಯದಲ್ಲಿ ಹಗೇದಾಳ ಗ್ರಾಮದ ಯುವಕರು, ರಾಹುಲ್ ಅವರನ್ನು ಭೇಟಿ ಮಾಡಿ ಸನ್ಮಾನಿಸಿದರು.   ಸನ್ಮಾನ ಸ್ವೀಕರಿಸಿ ಯುವ ನಾಯಕ ರಾಹುಲ್ ಜಾರಕಿಹೊಳಿ …

Read More »

ಹಿಡಕಲ್ ಜಲಾಶಯದಿಂದ ನೀರು ಬಿಡುತ್ತಾರೆ ಎಂಬ ಸುದ್ದಿ ಸುಳ್ಳು ; ಹುಕ್ಕೇರಿ ತಹಶೀಲ್ದಾರ ಹೂಗಾರ

  ಘಟಪ್ರಭ; ನದಿಪಾತ್ರದ ಜನರಿಗೆ ಸುಳ್ಳು ಸುದ್ದಿ ಕೊಡುತ್ತಿರುವ ವಾಟ್ಸಪ್ ಸಂದೇಶಗಳು ಶುದ್ಧ ಸುಳ್ಳು ಎಂದು ಹುಕ್ಕೇರಿ ತಹಸಿಲ್ದಾರ ಡಿ.ಎಚ್.ಹೂಗಾರ ತಿಳಿಸಿದ್ದಾರೆ.   ಪ್ರಸ್ತುತ ಹುಕ್ಕೇರಿ ತಾಲೂಕಿನಲ್ಲಿ ಅತಿಯಾಗಿ ಮಳೆ ಸುರಿಯುತ್ತಿದ್ದು ಕಾರಣ ಹುಕ್ಕೇರಿ ತಾಲೂಕಿನ ಯರನಾಳ ಮದಮಕನಾಳ ಗ್ರಾಮಗಳ ಮಧ್ಯೆ ಇರುವ ಸೇತುವೆ ಹಾಗೂ ಪಾಶ್ಚಪೂರ ಕುಂದರಗಿ ಗ್ರಾಮಗಳ ಮಧ್ಯೆ ಇರುವ ಸೇತುವೆಗಳು ಸಂಪೂರ್ಣವಾಗಿ ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿದೆ. ಹಾಗೂ ಸದರಿ ಗ್ರಾಮಗಳಿಗೆ ತೆರಳಲು ಪರ್ಯಾಯ ಮಾರ್ಗಗಳು ಲಭ್ಯವಿರುತ್ತವೆ …

Read More »

ಯಮಕನಮರಡಿ: ಬಾಲಕಿಯೊಬ್ಬಳ ಮೇಲೆ ಅವಳ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ

ಯಮಕನಮರಡಿ: ಬಾಲಕಿಯೊಬ್ಬಳ ಮೇಲೆ ಅವಳ ಸಂಬಂಧಿಕನೇ ಅತ್ಯಾಚಾರ ಎಸಗಿದ ಘಟನೆ ಹುಕ್ಕೇರಿ ತಾಲೂಕಿನ ಬಡಕುಂದ್ರಿ ಗ್ರಾಮದ ಜೈ ಹನುಮಾನ ನಗರದ ತೋಟ ಮನೆಯ ಕಬ್ಬಿನ ಗದ್ದೆಯಲ್ಲಿ ಶನಿವಾರ ನಡೆದಿದೆ. ಅತ್ಯಾಚಾರ ಎಸಗಿದ ಆರೋಪಿ ಮಾರುತಿ ಪೂಜೇರಿ(42) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. 14ವರ್ಷ ಬಾಲಕಿ ತನ್ನ ಮಾವನ ಮನೆಯಲ್ಲಿ ಬಹಳ ದಿನದಿಂದ ವಾಸ ಇದ್ದಳು. ಶನಿವಾರ ಆರೋಪಿ ಆ ಬಾಲಕಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಬಾಲಕಿ ಮನನೊಂದು ವಿಷ ಸೇವಿಸಿದ್ದು, ಆ …

Read More »

ಹುಕ್ಕೇರಿ ನೂತನ ತಹಶೀಲ್ದಾರ್ ಡಿ.ಎಚ್. ಹೂಗಾರ ಅಧಿಕಾರ ಸ್ವೀಕಾರ

ಹುಕ್ಕೇರಿ: ತಾಲೂಕಿನ ನೂತನ ತಹಶೀಲ್ದಾರ ಆಗಿ ಡಿ.ಎಚ್. ಹೂಗಾರ ಅಧಿಕಾರ ಸ್ವೀಕರಿಸಿದರು. ಕೆಪಿಸಿಸಿ ಕಾರ್ಯಾಧ್ಯಕ್ಷ ಹಾಗೂ ಶಾಸಕ ಸತೀಶ ಜಾರಕಿಹೊಳಿ ಅವರು ನೂತನ ತಹಶೀಲ್ದಾರರನ್ನು ಸ್ವಾಗತಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಹೂಗಾರ ಅವರು ಶಾಸಕ ಸತೀಶ ಜಾರಕಿಹೊಳಿ ಅವರನ್ನು ಸತ್ಕರಿಸಿದರು.

Read More »

ದಡ್ಡಿ, ಮಜತಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ಸತೀಶ

  ಬೆಳಗಾವಿ: ಯಮಕನಮರಡಿ ಮತಕ್ಷೇತ್ರ ವ್ಯಾಪ್ತಿಯ ದಡ್ಡಿ, ಮಜತಿ ಹಾಗೂ ಚಿಕ್ಕಲದಿನ್ನಿ ಗ್ರಾಮಗಳಲ್ಲಿ ವಿವಿಧ ಕಾಮಗಾರಿಗಳಿಗೆ ಶಾಸಕ ಸತೀಶ ಜಾರಕಿಹೊಳಿ ಗುರುವಾರ ಚಾಲನೆ ನೀಡಿದರು. ಲೋಕೋಪಯೋಗಿ ಇಲಾಖೆಯ ಸುಮಾರು 45 ಲಕ್ಷ ರೂ. ಅನುದಾನದಲ್ಲಿ ದಡ್ಡಿ, ಮಜತಿ, ಮಾವನೂರು, ಕುರ್ಣಿ, ಚಿಕ್ಕಲದಿನ್ನಿ ಗ್ರಾಮದಲ್ಲಿನ ಎಸ್, ಸಿ ಕಾಲೋನಿಗಳಲ್ಲಿನ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಜಿಪಂ ಉಪಾಧ್ಯಕ್ಷ ಅರುಣ ಕಟಾಂಬಳೆ, ರಮೇಶ ಪಾಟೀಲ್, ಸುರೇಶ ಬೆನ್ನಿ, ಮಾಲಿಂಗ ಶಿರಗುಪ್ಪಿ, …

Read More »