ಯಮಕನಮರಡಿ: ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸೋಲಲು ಒಳ ಒಪ್ಪಂದ ಕಾರಣ ಎಂಬ ಸಿದ್ದರಾಮಯ್ಯ ಅವರ ಹೇಳಿಕೆ ರಾಜ್ಯಕ್ಕೆ ಸಂಬಂಧಪಟ್ಟ ವಿಷಯವಲ್ಲ. ಅದನ್ನು ಇಷ್ಟು ದೊಡ್ಡದು ಮಾಡುವ ಅವಶ್ಯಕತೆಯೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಇದು ಕೇವಲ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಸಂಬಂಧಿಸಿದ ವಿಷಯ. ಸ್ಥಳೀಯ ಸಮಸ್ಯೆ ಬಗ್ಗೆ ಹೇಳಿದ್ದಾರೆ. ಎಲ್ಲರೂ ಈ ಹೇಳಿಕೆಗೆ ಅಭಿಪ್ರಾಯ ನೀಡುವುದು ಸೂಕ್ತವಲ್ಲ ಎಂದು ಹೇಳಿದರು. ಕಳೆದ ಆರು …
Read More »ಕಾಂಗ್ರೇಸ್ ಮುಖಂಡರ ಮೇಲೆ ಗುಂಡಿ ದಾಳಿ: ಗ್ರಾ,ಪಂ, ಚುನಾವಣೆ ಹಿನ್ನೆಲೆ ಶಂಕೆ,
ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಯಮಕನಮರಡಿ ಗ್ರಾಮದಲ್ಲಿ ಅನಾಮಧೇಯ ವ್ಯಕ್ತಿಯೊಬ್ಬ ಶಾಸಕ ಸತೀಶ ಜಾರಕಿಹೋಳಿ ಆಪ್ತರಾದ ಕೀರಣ ರಜಪೂತ, ಬರಮಾ ದೂಪದಾಳೆ ಮೇಲೆ ಗುಂಡಿನ ದಾಳಿ ಗ ನಡೆಸಿ ಫರಾರಿಯಾಗಿರುವ ಘಟನೆ ನಡೆದಿದೆ. ಈ ದಾಳಿಯು ಕಂಟ್ರಿ ಪಿಸ್ತೋಲದಿಂದ ನಡೆಸಲಾಗಿದೆ. ಕಳೆದ ಬುಧವಾರ ರಾತ್ರಿ ಸುಮಾರು 11.30ಕ್ಕೆ ಈ ಘಟನೆ ನಡೆದಿದೆ. ಗುಂಡಿನ ದಾಳಿಯಲ್ಲಿ ಗಾಯಗೊಂಡಿರುವ ವ್ಯಕ್ತಿಯ ನ್ನು ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಇಬ್ಬರು ಪ್ರಾಣಾಪಾಯದಿಂದ …
Read More »ಹತ್ತರಗಿ ಗ್ರಾಪಂಗೆ ಪತಿ-ಪತ್ನಿ ಅವಿರೋಧ ಆಯ್ಕೆ: ಖಾತೆ ತೆರೆದ ಶಾಸಕ ಸತೀಶ ಜಾರಕಿಹೊಳಿ ಬೆಂಬಲಿತ ಅಭ್ಯರ್ಥಿಗಳು!!
ಯಮಕನಮರಡಿ: ವಿಧಾನಸಭಾ ಮತಕ್ಷೇತ್ರ ವ್ಯಾಪ್ತಿಯ ಹತ್ತರಗಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪತಿ-ಪತ್ನಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪಂಚಾಯಿತಿಯ 2 ನೇ ವಾರ್ಡ್‍ನ ಎಸ್‍ಸಿ ಪುರುಷ ಮೀಸಲು ಕ್ಷೇತ್ರದಿಂದ ಉಮೇಶ ನಾಗಪ್ಪಾ ಭೀಮಗೋಳ, 1 ನೇ ವಾರ್ಡ್‍ನ ಎಸ್‍ಸಿ ಮಹಿಳಾ ಮೀಸಲು ಕ್ಷೇತ್ರದಿಂದ ಅಕ್ಷತಾ ಉಮೇಶ ಭೀಮಗೋಳ ಅವರ ತಲಾ ಒಂದೊಂದೇ ನಾಮಪತ್ರ ಸಲ್ಲಿಕೆಯಾಗಿವೆ. ಹೀಗಾಗಿ ಈ ದಂಪತಿಯ ಆಯ್ಕೆ ಬಹುತೇಕ ಖಚಿತವಾಗಿದೆ. ಅಧಿಕೃತ ಘೋಷಣೆ ಬಾಕಿ ಇದೆ. ರಾಜಕೀಯ ಪಕ್ಷಗಳಿಗೆ ತಳಮಟ್ಟದಲ್ಲಿ …
Read More »ಯರನಾಳ ಗ್ರಾಮದ ಶ್ರೀ ಕಾಳಿಕಾ ದೇವಸ್ಥಾನದ ಬ್ರಹ್ಮಾನಂದ ಮಠದಲ್ಲಿ ಭಕ್ತಿಗೀತೆಗಳ ಸಿ ಡಿ ಯನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು.
ಹುಕ್ಕೇರಿ ತಾಲೂಕಿನ ಯರನಾಳ ಗ್ರಾಮದ ಶ್ರೀ ಕಾಳಿಕಾ ದೇವಸ್ಥಾನದ ಬ್ರಹ್ಮಾನಂದ ಮಠದಲ್ಲಿ ಕಾಳಿಕಾಂಬೆಂಯ ಕಂದ ಗುರು ಬ್ರಹ್ಮಾನಂದ ಎಂಬ ಭಕ್ತಿಗೀತೆಗಳ ಸಿ ಡಿ ಯನ್ನು ಹುಕ್ಕೇರಿ ಹಿರೇಮಠದ ಚಂದ್ರಶೇಖರ ಮಹಾಸ್ವಾಮಿಗಳು ಬಿಡುಗಡೆ ಮಾಡಿದರು.ನಂತರ ಮಾತನಾಡಿದ ಶ್ರೀಗಳು ಅರುಣ ಐಹೋಳೆ ಮತ್ತು ಮುಕುಂದ ಮಠದ ನೇತೃತ್ವದಲ್ಲಿ ರಚಿಸಿದ ಶ್ರೀ ಬ್ರಹ್ಮಾನಂದ ಗುರುಗಳ ಭಕ್ತಿ ಗೀತೆಗಳು ಚನ್ನಾಗಿ ಮೂಡಿಬಂದಿವೆ ಎಂದರು , ರಾಯಬಾಗ ಮಹಾಲಿಂಗೇಶ್ವರ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಅರುಣ ಐಹೋಳೆ ಕಲಾವಿದರಾದ …
Read More »‘ಮಹಾನಾಯಕ’ ಧಾರಾವಾಹಿಯಿಂದ ಮರೆತು ಹೋದ ಡಾ. ಬಿ.ಆರ್.ಅಂಬೇಡ್ಕರ್ ಅವರ ಇತಿಹಾಸವನ್ನು ತಿಳಿದುಕೊಳ್ಳುವ ಪ್ರಯತ್ನವಾಗುತ್ತಿದೆ:ಸತೀಶ್ ಜಾರಕಿಹೊಳಿ
ಹುಕ್ಕೇರಿ : ‘ ಝೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ‘ಮಹಾನಾಯಕ’ ಧಾರಾವಾಹಿಯಿಂದ ಮರೆತು ಹೋದ ಡಾ. ಬಿ.ಆರ್.ಅಂಬೇಡ್ಕರ್ ಅವರ ಇತಿಹಾಸವನ್ನು ತಿಳಿದುಕೊಳ್ಳುವ ಪ್ರಯತ್ನವಾಗುತ್ತಿದೆ ‘ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ, ಶಾಸಕ ಸತೀಶ್ ಜಾರಕಿಹೊಳಿ ಹೇಳಿದರು. ತಾಲ್ಲೂಕಿನ ಯಮಕನಮರಡಿ ವಿಧಾನಸಭಾ ಕ್ಷೇತ್ರದ ಅರ್ಜುನ ವಾಡ್ ಗ್ರಾಮದಲ್ಲಿ ಗುರುವಾರ ಮಹಾನಾಯಕ ಬ್ಯಾನರ್ ಉದ್ಘಾಟನೆಗೊಳಿಸಿ ಮಾತನಾಡಿದರು. ‘ ಇಡೀ ಕರ್ನಾಟಕದಲ್ಲಿ ಬಾಬಾಸಾಹೇಬ ಅಂಬೇಡ್ಕರ್ ಭಾವಚಿತ್ರವಿರುವ ಪೊಸ್ಟರ್ ಉದ್ಘಾಟನೆಗೊಳಿಸುವ ಪರಂಪರೆ ಮುಂದುವರೆದಿದೆ. ಇದಕ್ಕೆ ಝೀ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ …
Read More »ಸಿಪಿಐ ಕಲ್ಯಾಣಶೆಟ್ಟಿ ಸಹಜ ತಾಳ್ಮೆ-ದೊಡ್ಡತನ ಕಾಯ್ದುಕೊಳ್ಳದೇ ಸಾರ್ವಜನಿಕರಿಗೆ ಹಲ್ಲೆನಡೆಸಿ ತಡರಾತ್ರಿ
ಬೆಳಗಾವಿ: ಹುಕ್ಕೇರಿ ಸಿಪಿಐ ಕಲ್ಯಾಣಶೆಟ್ಟಿ ಸಹಜ ತಾಳ್ಮೆ-ದೊಡ್ಡತನ ಕಾಯ್ದುಕೊಳ್ಳದೇ ಸಾರ್ವಜನಿಕರಿಗೆ ಹಲ್ಲೆನಡೆಸಿ ತಡರಾತ್ರಿ ಗನ್ ತೋರಿಸಿ ಬೆದರಿಸಿದ ಬಗ್ಗೆ ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಮೊದಲ ಆರೋಪಿಯಾಗಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದವರು ಕೊಟ್ಟ ದೂರು ಮತ್ತು ದಾಖಲಾದ FIR ಅಂಶಗಳ ಅನ್ವಯ ಖಾನಾಪುರ ತಾಲೂಕಿನ ಕಸಮಳ್ಳಿ ಗ್ರಾಮದಿಂದ ಬರುತ್ತಿದ್ದ ಬೆಳಗಾವಿ ಶಹಾಪುರದ ಇನ್ನೋವಾ ಕಾರು ರಸ್ತೆ ತಗ್ಗಿನ ಬಳಿ ಮುಂದಿನ ಸ್ವಿಫ್ಟ್ ಗೆ ತಾಗಿದ್ದೇ ಈ ಅವಾಂತರಕ್ಕೆ ಕಾರಣ ಎನ್ನಲಾಗಿದೆ. …
Read More »ನಟಿ ಸಂಜನಾ ಜತೆ ಶಾಸಕ ಜಮೀರ್ ಅಹಮ್ಮದ್ಹೆಸರು ಕೇಳಿ ಬಂದಿರುವ ವಿಚಾರವಾಗಿ ಶಾಸಕ ಸತೀಶ್ ಜಾರಕಿಹೊಳಿ ಪ್ರತಿಕ್ರಿಯೆ
ಹುಕ್ಕೇರಿ : ಡ್ರಗ್ಸ್ ದಂಧೆ ಜಾಲದಲ್ಲಿ ನಟಿ ಸಂಜನಾ ಜೊತೆ ಕಾಂಗ್ರೆಸ್ ಶಾಸಕ ಜಮೀರ್ ಅಹಮ್ಮದ್ ಹೆಸರು ಕೇಳಿ ಬಂದಿರುವ ವಿಚಾರವಾಗಿ ಶಾಸಕ ಸತೀಶ್ ಜಾರಕಿಹೊಳಿ ಮಂಗಳವಾರ ಪ್ರತಿಕ್ರಿಯೆ ನೀಡಿದ್ದಾರೆ. ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಡ್ರಗ್ಸ್ ದಂಧೆಯಲ್ಲಿ ಜಮೀರ್ ಇಲ್ಲ. ಹೀಗಾಗಿ ಅವರೊಂದಿಗೆ ಹೊಲಿಕೆ ಮಾಡುವುದು ಸರಿಯಲ್ಲ. ನಟಿ ಸಂಜನಾ ಜತೆ ಶಾಸಕ ಜಮೀರ್ ಅಹಮ್ಮದ್ ಪಾರ್ಟಿಗೆ ಹೋದರೆ ಅಥವಾ ತಿರುಗಾಡಿದ್ರೆ ಏನೂ ಸಂಬಂಧವಿಲ್ಲ. ಡ್ರಗ್ಸ್ ತೆಗೆದುಕೊಂಡರೆ, ಮಾರಾಟ ಮಾಡಿದರೆ …
Read More »ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಕಂಪ್ಯೂಟರ್, ಗ್ರಂಥಾಲಯ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ: ಸತೀಶ ಜಾರಕಿಹೊಳಿ
ಬೆಳಗಾವಿ: ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಹೆಚ್ಚಿಸುವ ನಿಟ್ಟಿನಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಶಾಲೆಗಳಿಗೆ ಕಂಪ್ಯೂಟರ್, ಗ್ರಂಥಾಲಯ ಸೇರಿ ಅಗತ್ಯ ಮೂಲಸೌಕರ್ಯ ಕಲ್ಪಿಸಲಾಗುತ್ತಿದೆ ಎಂದು ಕೆಪಿಸಿಸಿ ಸದಸ್ಯ ಮಲಗೌಡಾ ಪಾಟೀಲ್ ಹೇಳಿದರು. ಯಮಕನಮರಡಿ ಕ್ಷೇತ್ರ ವ್ಯಾಪ್ತಿಯ ಮಣ್ಣಿಕೇರಿ ಸರಕಾರಿ ಪ್ರೌಢ ಶಾಲೆಯಲ್ಲಿ ಶಿಕ್ಷಕರು, ಶಾಲಾ ಅಭಿವೃದ್ದಿ ಪದಾಧಿಕಾರಿಗಳು ನೇತೃತ್ವದಲ್ಲಿ ಸೋಮವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು. ಗ್ರಾಮೀಣ ಭಾಗದ ಯುವಕ, …
Read More »ಯುವ ಬ್ರಿಗೇಡ್ ವತಿಯಿಂದ ಕಟ್ಟಿಸಿದ ‘ನಮ್ಮನೆ’ ಪ್ರವೇಶಿಸಿದ ಮೀರಮ್ಮ
ಹುಕ್ಕೇರಿ: ‘ನಂದು ಮನೆ ಪೂರಾ ಬಿದ್ದು ಹೋಗಿತ್ರಿ. ಮಲಗಾಕ ಬಹಳ ತೊಂದರೆ ಇತ್ತು. ಚಕ್ರವರ್ತಿ ಸೂಲಿಬೆಲೆ ಹಾಗೂ ಯುವ ಬ್ರಿಗೇಡ್ ಸದಸ್ಯರು ಹೊಸ ಮನೆ ಕಟ್ಟಿ ಕೊಟ್ಟಾರು. ನಾನು ಬಡುವಿ ಅದಿನಿ ಅಂತ. ವಾಸ್ತು ಅವ್ರ ಮಾಡ್ಯಾರು. ನಾನು ಆರಾಮ ಅದನ್ರಿ. ನನಗ ಎಲ್ಲ ವ್ಯವಸ್ಥ ಮಾಡ್ಯಾರು. ದೇವರು ಅವರನ್ನು ತಂಪಾಗಿ ಇಟ್ಟಿರಲಿ’ ಎಂದು ಮನ ಮಿಡಿಯುವ ಮಾತುಗಳು ಕೇಳಿ ಬಂದಿದ್ದು, ತಾಲ್ಲೂಕಿನ ಹೊಸೂರ ಗ್ರಾಮದ ಮೀರಮ್ಮ ಬಾಗವಾನ್ ಅವರಿಂದ. ಇದು …
Read More »ಹಿಡಕಲ್ ಜಲಾಶಯಿಂದ 40 ಸಾವಿರ ಕ್ಯೂಸೆಕ್ಸ ನೀರು ಘಟಪ್ರಭಾ ನದಿಗೆ ಬಿಡುಗಡೆ- ಗ್ರಾಮಸ್ಥರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗೋಕಾಕ ತಹಶಿಲ್ದಾರ ಸೂಚನೆ.
ಬೆಳಗಾವಿ: ಪಶ್ಚಿಮ ಗಟ್ಟದಲ್ಲಿ ಧಾರಾಕಾರು ಮಳೆಯಾಗುತ್ತಿರುವುದರಿಂದ ಹಿಡಕಲ್ ಜಲಾಶಯಕ್ಕೆ ಭಾರಿ ಪ್ರಮಾಣದಲ್ಲಿ ಒಳ ಹರಿಯುವ ಹೆಚ್ಚಾಗಿದ್ದು ಜಲಾಶಯದಿಂದ ಇಂದು 40000 ಕ್ಯೂಸೆಕ್ಸ ನೀರು ಹೊರ ಬಿಡಲಾಗಿದೆ . ಹಿಡಕಲ್ ಜಲಾಶಯ ಸಂಪೂರ್ಣ ಭರ್ತಿಯಾಗಿದ್ದು ಒಳಹರಿಯುವ 18052 ಕ್ಯೂಸೆಕ್ಸ ಇದ್ದು ಈ ಒಳ ಹರಿವಿನ ಪ್ರಮಾಣವನ್ನು ದೃಷ್ಟಿಯಲ್ಲಿಟ್ಟುಕೊಂಡು ಜಲಾಶಯದ ಕ್ರಷ್ಟ ಗೇಟುಗಳು ಮೂಲಕ ಘಟಪ್ರಭಾ ನದಿಗೆ ನೀರು ಹರಿದು ಬಿಡಲಾಗಿದೆ. ಬಾನುವಾರ ಸಂಜೆ 5:30 ಕ್ಕೆ 40 ಸಾವಿರ ಕ್ಯೂಸೆಕ್ಸ ನೀರು ನದಿಗೆ …
Read More »