ಬೆಳಗಾವಿಯ ವಂಟಮುರಿ ಕಾಲೋನಿಯಲ್ಲಿ ಆಶ್ರಯ ಯೋಜನೆ ಕಾಲೋನಿ ನಿವಾಸಿಗಳ ಸಂಘದ ವತಿಯಿಂದ ಇಂದು ಬಸವ ಪಂಚಮಿ ಕಾರ್ಯಕ್ರಮವನ್ನು ವಿಭಿನ್ನ ರೀತಿಯಲ್ಲಿ ಆಯೋಜಿಸಲಾಗಿತ್ತು. ಈ ಬಾರಿಯ ಬಸವ ಪಂಚಮಿಯನ್ನು ನಾಗದೇವತೆಗೆ ಹಾಲಿನ ಅಭಿಷೇಕದ ಬದಲು ಮಕ್ಕಳಿಗೆ ಹಾಲು, ಸಿಹಿತಿಂಡಿ ನೀಡಿ ಆಚರಿಸಲಾಯಿತು. ಸಮಾಜದಲ್ಲಿ ದೇವರ ಹೆಸರಿನಲ್ಲಿ ಮೂಢನಂಬಿಕೆ ಹೋಗಲಾಡಿಸಲು, ಆಹಾರ ಪೋಲು ಮಾಡುವದನ್ನು ನಿಲ್ಲಿಸಲು ಹಾಗೂ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳ ಸಂಖ್ಯೆಯನ್ನು ಕಡಿಮೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಸಾಮಾಜಿಕ …
Read More »ಶಾಹಪೂರ ನಗರದ ನಿವಾಸಿಯಾಗಿದ್ದ ಗೋಪಾಲ ರೋಹಿದಾಸ ಹೊನಗೆಕರ ಹೃದಯಘಾತದಿಂದ ಇಂದು ನಿಧನ
ಶಾಹಪೂರ ನಗರದ ನಿವಾಸಿಯಾಗಿದ್ದ ಗೋಪಾಲ ರೋಹಿದಾಸ ಹೊನಗೆಕರ ಹೃದಯಘಾತದಿಂದ ಇಂದು ನಿಧನರಾದರು. ಇಂದು ಹೃದಯಘಾತದಿಂದ ಶಾಹಪೂರ ನಗರದ ನಿವಾಸಿ ಗೋಪಾಲ ರೋಹಿದಾಸ ಹೊನಗೆಕರ ಯವರು ನಿಧನರಾಗಿದ್ದಾರೆ ,ಮೃತರು ಹೆಂಡತಿ ,ಇಬ್ಬರು ಮಕ್ಕಳು, ತಂದೆ ತಾಯಿಗಳು ಸಹೋದರ ಸಹೋದರಿಯನ್ನು ಅಗಲಿದ್ದಾರೆ ಮೃತರನ್ನ ಆತ್ಮಕ್ಕೆ ಶಾಂತಿ ಸಿಗಲೇಂದು ಹೊನಗೆಕರ ಕುಟುಂಬಸ್ಥರು ಪ್ರಾರ್ಥಿಸಿದ್ದಾರೆ , ಇನ್ನೂ ಮೃತನ ಪುಣ್ಯತಿಥಿ ಕಾರ್ಯಕ್ರವನ್ನು ಆ.23 ರಂದು ನೇರವೇರಿಸುವುದಾಗಿ ಗುರು ಹಿರಿಯರು ತಿಳಿಸಿದ್ದಾರೆ
Read More »ನಂಬಿಕೆ ದ್ರೋಹ ಮಾಡಿದನೆಂದು ಸ್ನೇಹಿತನನ್ನೇ ದುಷ್ಕರ್ಮಿಗಳ ಕೊಲೆ
ಚಿಕ್ಕೋಡಿ : ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಚಿಕ್ಕೋಡಿಯಲ್ಲಿ ನಡೆದಿದೆ. ಹಾರುಗೇರಿ ಗ್ರಾಮದ ಅಕ್ಬರ್ ಶಬ್ಬೀರ್ ಜಮಾದಾರ್ (22) ಕೊಲೆಯಾದ ವ್ಯಕ್ತಿ ಎಂದು ತಿಳಿದುಬಂದಿದೆ. ಕಳ್ಳತನದ ವ್ಯವಹಾರದಲ್ಲಿ ನಂಬಿಕೆ ದ್ರೋಹ ಎಸಗಿದ್ದಾನೆಂದು ಸ್ನೇಹಿತನನ್ನೇ ಬರ್ಬರವಾಗಿ ಹತ್ಯೆ ಮಾಡಿದ್ದಾರೆ ಎಂದು ಮೃತನ ತಾಯಿ ಕೈರುಣ ಜಮಾದಾರ ಆರೋಪಿಸಿದರು. ಬಸ್ತವಾಡ ಗ್ರಾಮದ ಹೊರವಲಯದಲ್ಲಿ ಜಮಾದಾರ್ನನ್ನು ದುಷ್ಕರ್ಮಿಗಳು ಭೀಕರವಾಗಿ ಕೊಲೆಗೈದು, ಪರಾರಿಯಾಗಿದ್ದಾರೆ. ಸ್ಥಳಕ್ಕೆ ಹಾರೂಗೇರಿ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕಳೆದ ಎರಡು …
Read More »ಭೋಲೇನಾಥ ಕಲಾಕೃತಿ ಕಲ್ಲಂಗಡಿಯಲ್ಲಿ ರಚಿಸಿದ ಕಲ್ಲಪ್ಪ ಶಿವಾಜಿ ಭಾತಕಾಂಡೆ
ಹಬ್ಬಗಳು ಮತ್ತು ಆಚರಣೆಗಳ ತಿಂಗಳು ಎಂದು ಕರೆಯಲ್ಪಡುವ ಶ್ರಾವಣ ಮಾಸ ಮತ್ತು ಶ್ರಾವಣ ಸೋಮವಾರ ಕೂಡ ಹಿಂದೂ ಸಂಸ್ಕೃತಿಯಲ್ಲಿ ಬಹಳ ಮಹತ್ವದ್ದಾಗಿದೆ. ಈ ಹಿನ್ನೆಲೆಯಲ್ಲಿ ಬೆಳಗಾವಿಯ ಕಲ್ಲಪ್ಪ ಶಿವಾಜಿ ಭಾತಕಾಂಡೆ ಕಲ್ಲಂಗಡಿಯಲ್ಲಿಶಂಕರ ಮತ್ತು ಶಿವಲಿಂಗವನ್ನು ರಚಿಸಿದ್ದಾರೆ. ನಾಳೆ ಈ ವರ್ಷದ ಪವಿತ್ರ ಶ್ರಾವಣದ ಮೊದಲ ಸೋಮವಾರ. ಹೀಗಾಗಿ ನಗರದ ಶಿವಾಲಯಗಳಲ್ಲಿ ಶಂಕರನಿಗೆ ಪೂಜೆ ಸಲ್ಲಿಸಲು ಸಿದ್ಧತೆ ನಡೆಸಲಾಗಿದೆ. ಈ ಹಿನ್ನೆಲೆಯಲ್ಲಿ ಕಲ್ಲಪ್ಪ ಭಾತಕಾಂಡೆ ತಮ್ಮ ಶಿವಭಕ್ತಿಯನ್ನು ವಿಶಿಷ್ಟ ರೀತಿಯಲ್ಲಿ ಅನಾವರಣಗೊಳಿಸಿದ್ದಾರೆ. …
Read More »ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ
ಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಮೂಡಲಗಿ ತಾಲೂಕಿನ ಸಂಗನಕೇರಿ ಗ್ರಾಮದಲ್ಲಿ ಶ್ರೀ ಹನುಮಂತೆಶ್ವರ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ …
Read More »ಬೆಳಗಾವಿ: ಆಸ್ತಿಗಾಗಿ ಉಪ್ಪಿಟ್ಟಿನಲ್ಲಿ ಗಂಡನಿಗೆ ವಿಷ ಹಾಕಿದ ಪತ್ನಿ; ಪತಿ ಐಸಿಯುಗೆ, ನಾಯಿ-ಬೆಕ್ಕು ಸಾವು
ಬೆಳಗಾವಿ: ಎರಡು ಎಕರೆ ಜಮೀನನ್ನು ತಮ್ಮ ಹೆಸರಿಗೆ ಮಾಡಿಸಿಕೊಳ್ಳುವ ಉದ್ದೇಶದಿಂದ ಮಹಿಳೆಯೊಬ್ಬಳು, ತನ್ನ ಪತಿಗೆ ಉಪ್ಪಿಟ್ಟಿನಲ್ಲಿ ವಿಷ ಹಾಕಿ ಕೊಲೆಗೆ ಯತ್ನಿಸಿದ ಪ್ರಕರಣ ಪತ್ತೆ ಹಚ್ಚುವಲ್ಲಿ ಸವದತ್ತಿ ಪೊಲೀಸರು ಯಶಸ್ವಿಯಾಗಿದ್ದಾರೆ. ವಿಷಪೂರಿತ ಉಪ್ಪಿಟ್ಟು ಸೇವಿಸಿ ಅಸ್ವಸ್ಥರಾಗಿದ್ದ ಸವದತ್ತಿ ತಾಲೂಕಿನ ಗೋರಾಬಾಳ ಗ್ರಾಮದ ನಿಂಗಪ್ಪ ಫಕೀರಪ್ಪ ಹಮಾನಿ (35) ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಪತ್ನಿ ಸಾವಕ್ಕ (32) ಹಾಗೂ ಇವರ ಸಹೋದರ ಫಕೀರಪ್ಪ ಲಕ್ಷ್ಮಣ ಸಿಂಧೋಗಿ (30) ಕೊಲೆಗೆ …
Read More »ಬಿಜೆಪಿಯಲ್ಲಿ ಕಿರುಕುಳ ಅನುಭವಿಸುವವರು ಕಾಂಗ್ರೆಸ್ಗೆ ಬರಬಹುದು: ಗೃಹ ಸಚಿವ
ಬೆಳಗಾವಿ: ನಮ್ಮಲ್ಲಿಂದ ಹೋಗಿರುವ ಶಾಸಕರಿಗೆ ಬಿಜೆಪಿಯಲ್ಲಿ ಕಿರುಕುಳ ಇರೋದು ಸತ್ಯವಾದರೆ, ಕಾಂಗ್ರೆಸ್ ಪಕ್ಷದ ಸಿದ್ಧಾಂತ ಒಪ್ಪಿ ಬಂದರೆ ಸ್ವಾಗತ ಎಂದು ಗೃಹ ಸಚಿವ ಜಿ ಪರಮೇಶ್ವರ ತಿಳಿಸಿದ್ದಾರೆ. ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಜತೆಗೆ ಮಾತನಾಡಿದ ಅವರು, ನಾವು ಯಾರಿಗೂ ಬರಬೇಡಿ ಅಂತ ಹೇಳಿಲ್ಲ. ನಮ್ಮ ಸಿದ್ಧಾಂತ ಒಪ್ಪಿ ಬರೋದಾದರೆ ಬರಲಿ ಅವರನ್ನು ಸ್ವಾಗತ ಮಾಡುತ್ತೇವೆ. ಯಾವ ಶಾಸಕರು ಬರ್ತಾರೆ ಅಂತ ನನಗೆ ಗೊತ್ತಿಲ್ಲ. ಆದರೆ, ಬರ್ತಾರೆ ಎನ್ನುವ ಮಾತಿದೆ …
Read More »ರೈತರ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಯಾಗದಿದ್ದರೆ ಉಗ್ರ ಪ್ರತಿಭಟನೆ:ಕಡಾಡಿ
ಬೆಳಗಾವಿ: ಲೋಡ್ ಶೆಡ್ಡಿಂಗ್ ಪರಿಣಾಮವಾಗಿ ರೈತರ ಬೆಳೆಗಳು ನೀರಿಲ್ಲದೆ ಒಣಗುವ ಪರಿಸ್ಥಿತಿಗೆ ತಲುಪಿದ್ದು, ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಕೆಗೆ ತಕ್ಷಣ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ರೈತರೊಂದಿಗೆ ಸೇರಿ ಬಿಜೆಪಿ ರೈತ ಮೋರ್ಚಾ ವತಿಯಿಂದ ಉಗ್ರ ಪ್ರತಿಭಟನೆ ಮಾಡಬೇಕಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಹೇಳಿದ್ದಾರೆ. ನಗರದಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಐಪಿ ಸೆಟ್ಗಳಿಗೆ ಸರಿಯಾಗಿ ವಿದ್ಯುತ್ ಪೂರೈಕೆ ಮಾಡದಿದ್ದರೆ ಈಗ ಬಿತ್ತಿರುವ ಶೇ.80ರಷ್ಟು ಬೆಳೆಗಳು ಒಣಗಿ, ಜಿಲ್ಲೆಯಲ್ಲಿ ಆಹಾರ …
Read More »ಶ್ರಾವಣ ಮಾಸದ ನಿಮಿತ್ತ ಆಗಸ್ಟ್ 17ರಿಂದ ಸೆಪ್ಟೆಂಬರ್ 14ರ ವರೆಗೆ ಯಲ್ಲಮ್ಮನ ಗುಡ್ಡದಲ್ಲಿ ವಿಶೇಷ ಪೂಜೆ
ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿದೇವತೆ ಸವದತ್ತಿಯ ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನಕ್ಕೆ ಶ್ರಾವಣ ಮಾಸದ ಮೊದಲ ದಿನ ಭಕ್ತಸಾಗರವೇ ಹರಿದುಬಂತು. ಬೆಳಗ್ಗೆ ಸರತಿ ಸಾಲಿನಲ್ಲಿ ನಿಂತು ಭಕ್ತರು ದೇವಿಯ ದರ್ಶನ ಪಡೆದು ಪುನೀತರಾದರು. ಆಗಸ್ಟ್ 17ರಿಂದ ಸೆಪ್ಟೆಂಬರ್ 14ರ ವರೆಗೆ ಯಲ್ಲಮ್ಮಗುಡ್ಡದಲ್ಲಿ ವಿಶೇಷ ಪೂಜೆ ಹಮ್ಮಿಕೊಳ್ಳಲಾಗಿದೆ. ಇಂದು ರಾತ್ರಿ 2 ಗಂಟೆಗೆ ವಿಶೇಷ ಪೂಜೆ ನೆರವೇರಿದ್ದು, ಬೆಳಗ್ಗೆ 4 ಗಂಟೆಯಿಂದ ದೇವಿಯ ದರ್ಶನಕ್ಕೆ ಭಕ್ತರಿಗೆ ಅವಕಾಶ ನೀಡಲಾಯಿತು. ಬೆಳಗ್ಗೆ ಸಾವಿರಾರು …
Read More »ನಾವು ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಸ್ಥಾನವನ್ನು ಗೆಲ್ಲುತ್ತೇವೆ: ಸತೀಶ್ ಜಾರಕಿಹೊಳಿ
ಚಿಕ್ಕೋಡಿ (ಬೆಳಗಾವಿ): “ಲೋಕಸಭಾ ಚುನಾವಣೆಗೆ ಇನ್ನು ತುಂಬಾ ಸಮಯವಿದೆ. ಯಾರು ಸ್ಪರ್ಧೆ ಮಾಡಬೇಕೆಂಬುದು ಇನ್ನೂ ಅಂತಿಮವಾಗಿಲ್ಲ. ಪಕ್ಷ ಯಾರನ್ನು ಗುರುತಿಸುತ್ತದೋ ಅವರು ಸ್ಪರ್ಧೆ ಮಾಡುತ್ತಾರೆ. ನಾವು ಬೆಳಗಾವಿ ಜಿಲ್ಲೆಯ ಎರಡು ಲೋಕಸಭಾ ಸ್ಥಾನವನ್ನು ಗೆಲ್ಲುತ್ತೇವೆ” ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ ವ್ಯಕ್ತಪಡಿಸಿದರು. ಜಿಲ್ಲೆಯ ಹುಕ್ಕೇರಿ ತಾಲೂಕಿನ ಹುನ್ನೂರು ಪ್ರವಾಸ ಮಂದಿರದಲ್ಲಿ ಇಂದು ಮಾಧ್ಯಮದವರೊಂದಿಗೆ ಅವರು ಮಾತನಾಡಿದರು. ಎರಡೂವರೆ ವರ್ಷದ ಬಳಿಕ ಹಿರಿಯ ಸಚಿವರು ಬೇರೆಯವರಿಗೆ ಅವಕಾಶ ನೀಡಬೇಕು ಎಂಬ …
Read More »