Breaking News

ಬೆಳಗಾವಿ

ಜೈನ ಮುನಿ ಕೊಲೆ ಪ್ರಕರಣ: ಇಬ್ಬರು ಆರೋಪಿಗಳನ್ನು ವಶಕ್ಕೆ

ಚಿಕ್ಕೋಡಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಹಿರೇಕೋಡಿಯ ನಂದಿ ಪರ್ವತ ಜೈನ ಆಶ್ರಮದ ಜೈನ ಮುನಿ ಕಾಮ ಕುಮಾರ ನಂದಿ ಮಹಾರಾಜರ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಬೆಳಗಾವಿ ಎಸ್ಪಿ ಡಾ ಸಂಜೀವ ಪಾಟೀಲ್ ಹೇಳಿದರು. ಈ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಟಕಬಾವಿ ಗ್ರಾಮದಲ್ಲಿ ಮಾಧ್ಯಮಮಗಳ ಜೊತೆ ಮಾತನಾಡಿದ ಅವರು, ರಾಯಭಾಗ ತಾಲೂಕು ಕಟಕಬಾವಿ ಗ್ರಾಮದ ನಿವಾಸಿ ನಾರಾಯಣ ಮಾಳಿ ಹಾಗೂ ಚಿಕ್ಕೋಡಿ ಪಟ್ಟಣದ ನಿವಾಸಿ …

Read More »

ಅರ್ಚಕನ ಕೆಲಸ ಬಿಡಿಸಿದ್ದಕ್ಕೆ ಮಲಪ್ರಭಾ ನದಿ ತೀರದಲ್ಲಿ ಧರಣಿಗೆ ಕುಳಿತ

ಅರ್ಚಕನ ಕೆಲಸ ಬಿಡಿಸಿದ್ದಕ್ಕೆ ಮಲಪ್ರಭಾ ನದಿ ತೀರದಲ್ಲಿ ಧರಣಿಗೆ ಕುಳಿತ ಘಟನೆ ಬೆಳಗಾವಿ ಜಿಲ್ಲೆ ಖಾನಾಪುರ ತಾಲೂಕಿನ ಹಬ್ಬನಹಟ್ಟಿ ಗ್ರಾಮದಲ್ಲಿ ನಡೆದಿದೆ. ಪೊಲೀಸರು, ಆಡಳಿತ ಮಂಡಳಿ ಹಾಗೂ ಸ್ಥಳೀಯರು ಅರ್ಚಕನನ್ನು ಅಲ್ಲಿಂದಹೊರತೆಗೆಯಲು ಹರಸಾಹಸ ಪಟ್ಟರು.  ಹರಿಯಾಣ ಮೂಲದ ಅರ್ಚಕ ದೇವೇಂದ್ರ ಸಿಂಗ್ ಶರ್ಮಾ ಅವರು ನದಿ ಬಳಿ ಧರಣಿಕುಳಿತಿದ್ದು. ಖಾನಾಪುರ ಪೊಲೀಸರು, ಗ್ರಾಮಾಂತರ ಪಿಡಿಒ ಹಾಗೂ ಸ್ಥಳೀಯರು. ನದಿಯ ದಡದಲ್ಲಿ ಕುಳಿತಿದ್ದ ಅರ್ಚಕರನ್ನು ಸ್ಥಳೀಯ ನಾಗರಿಕರು ಹೊರ ಬರುವಂತೆ ಮನವಿ …

Read More »

ನಾಪತ್ತೆಯಾಗಿದ್ದ ಚಿಕ್ಕೋಡಿಯ ಜೈನಮುನಿ ಹತ್ಯೆ.. ವೈಯಕ್ತಿಕ ಕಾರಣಕ್ಕೆ ಕೊಲೆ : S.P.

ಚಿಕ್ಕೋಡಿ (ಬೆಳಗಾವಿ): ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದ ಹಿರೇಕೋಡಿ ಆಶ್ರಮದ ಜೈನ ಮುನಿ ಕೊಲೆಗೀಡಾಗಿದ್ದಾರೆ. ಕಳೆದ ಬುಧವಾರ ಹಿರೇಕೋಡಿ ಆಶ್ರಮದ ಆಚಾರ್ಯ ಕಾಮಕುಮಾರ ನಂದಿ ಮಹಾರಾಜರು ನಾಪತ್ತೆಯಾಗಿದ್ದರು. ರಾಯಬಾಗ ತಾಲೂಕಿನ ಕಟಕಬಾವಿ ಗ್ರಾಮದಲ್ಲಿ ಮಹಾರಾಜರು ಹತ್ಯೆಗೀಡಾಗಿರುವುದು ಪೊಲೀಸರಿಗೆ ತಿಳಿದಿದೆ. ಸ್ಥಳಕ್ಕೆ ಬೆಳಗಾವಿ ಎಸ್ಪಿ ಸಂಜೀವ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಎಸ್ಪಿ ಸಂಜೀವ್ ಪಾಟೀಲ್, ಬುಧವಾರ ರಾತ್ರಿಯಿಂದ ಸ್ವಾಮೀಜಿ ಕಾಣೆಯಾಗಿರುವ ಬಗ್ಗೆ ಶುಕ್ರವಾರ ಭಕ್ತರು …

Read More »

**ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

ಸವದತ್ತಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ ಅನ್ನದಾಸೋಹ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಪ್ರತಿ ಶನಿವಾರ ಶ್ರೇಷ್ಠ ಫೌಂಡೇಶನ್ ವತಿಯಿಂದ ವಿವಿಧ ಕಡೆಗಳಲ್ಲಿ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಸಂತೋಷ ಜಾರಕಿಹೊಳಿ ಅವರು ಹಮ್ಮಿಕೊಂಡಿದ್ದು ಈ ಶನಿವಾರ ಸವದತ್ತಿ ತಾಲೂಕಿನ ಕುಟರಣಟ್ಟಿ ಗ್ರಾಮದಲ್ಲಿ ಶ್ರೀ ಆಂಜನೇಯ ದೇವಸ್ಥಾನದ ಆವರಣದಲ್ಲಿ ಅನ್ನ ಸಂತರ್ಪಣೆ ಹಮ್ಮಿಕೊಂಡಿದ್ದರು. ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ …

Read More »

ಕಿಡ್ನಾಪ್ ಆಗಿದ ಜೈನ್ ಮಹಾ ರಾಜರ್ ಕೊಲೆ!?

ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಹಿರೇಕೋಡಿ ಗ್ರಾಮದಿಂದ ನಾಪತ್ತೆಯಾಗಿದ್ದ ಹಿರೇಕೋಡಿಯ ಆಚಾರ್ಯ ಶ್ರೀ 108 ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ನಡೆದಿದೆ. ಹಂತಕರು ಬರ್ಬರವಾಗಿ ಕೊಂದು ಬಾವಿಗೆ ಎಸೆದಿದ್ದಾರೆಂಬ ಮಾಹಿತಿ ಲಭ್ಯವಾಗಿದ್ದು, ಶವ ಇನ್ನೂ ಪತ್ತೆಯಾಗಿಲ್ಲ, ಚಿಕ್ಕೋಡಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಜೈನ ಮುನಿಗಳು ಎಂತಹ ಪರಿ ತ್ಯಾಗಿಗಳು ಎಂದರೆ ಬಟ್ಟೆಯನ್ನೂ ಸಹ ಅವರು ಬಿಟ್ಟು ನಿಂತಿರುತ್ತಾರೆ. ಎಂತಹ ಅಹಿಂಸಾ ಮಾರ್ಗವನ್ನು ಪಾಲಿಸುತ್ತಾರೆಂದರೆ ಚಿಕ್ಕ ಚಿಕ್ಕ …

Read More »

ಸಿದ್ದರಾಮಯ್ಯ ಬಜೆಟ್​ನಲ್ಲಿ ಬೆಳಗಾವಿಗೆ ಸಿಕ್ಕಿದ್ದ ಸಾಸಿವೆಯಷ್ಟು..!

ಬೆಳಗಾವಿ: ರಾಜ್ಯದ ಅತಿ ದೊಡ್ಡ ಜಿಲ್ಲೆ ಬೆಳಗಾವಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಡಿಸಿದ ಬಹುನಿರೀಕ್ಷಿತ ಬಜೆಟ್​​ನಲ್ಲಿ ಅಂದುಕೊಂಡಷ್ಟು ಅನುದಾನ, ಯೋಜನೆಗಳು ಘೋಷಣೆ ಆಗದೇ ಇರುವುದು ಜಿಲ್ಲೆಯ ಜನರನ್ನು ನಿರಾಸೆಗೊಳಿಸಿದೆ. 18 ಶಾಸಕರು, ಇಬ್ಬರು ಸಂಸದರು, ಓರ್ವ ರಾಜ್ಯಸಭಾ ಸದಸ್ಯ, ಐವರು ಪರಿಷತ್ ಸದಸ್ಯರು ಹಾಗೂ ಇಬ್ಬರು ಸಚಿವರನ್ನು ಒಳಗೊಂಡಿರುವ ರಾಜ್ಯದ ಅತಿ ದೊಡ್ಡ ಜಿಲ್ಲೆ ಬೆಳಗಾವಿ ಈ ಬಾರಿಯ ಬಜೆಟ್​ ಮೇಲೆ ಹಲವು ನಿರೀಕ್ಷೆಗಳನ್ನು ಹೊಂದಲಾಗಿತ್ತು. ಆದರೆ, ನಿರೀಕ್ಷೆಗೆ ತಕ್ಕಂತೆ ನುದಾನ, …

Read More »

ಈ ಬಜೆಟ್ ಪೂರಕ, ಆಶಾದಾಯಕವಾಗಿದ್ದು, ಜನಪರ, ಜನಸ್ನೇಹಿ ಬಜೆಟ್ ಆಗಿದೆ: ಸತೀಶ್ ಜಾರಕಿಹೊಳಿ

ಬೆಂಗಳೂರು: ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಎಂಬ ಧ್ಯೇಯವಾಕ್ಯದೊಂದಿಗೆ ರಾಜ್ಯದ ಜನರನ್ನು ಹಿತದೃಷ್ಟಿಯಲ್ಲಿಟ್ಟುಕೊಂಡು 3 ಲಕ್ಷ 28 ಸಾವಿರ ಕೋಟಿ ಮೊತ್ತದ ಬಜೆಟ್ ಮಂಡನೆ ಮಾಡಲಾಗಿದೆ. ರಾಜ್ಯದ ಸಮಗ್ರ ಅಭಿವೃದ್ಧಿ, ರಾಜ್ಯದ ಎಲ್ಲ ವರ್ಗದ ಜನರ ಸಬಲೀಕರಣಕ್ಕಾಗಿ ಈ ಬಜೆಟ್ ಪೂರಕ, ಆಶಾದಾಯಕವಾಗಿದ್ದು, ಜನಪರ, ಜನಸ್ನೇಹಿ ಬಜೆಟ್ ಆಗಿದೆ ಎಂದುಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಮೆಚ್ಚುಗೆ ವ್ಯಕ್ತಪಡಿಸಿದರು. ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು …

Read More »

ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಳ ಮಾಡುವಂತೆ ಒತ್ತಾಯ

ಬೆಳಗಾವಿ : ಐದು ಗ್ಯಾರಂಟಿಗಳ ಬಗ್ಗೆ ಮಾತನಾಡುತ್ತಿರುವ ಪ್ರಸ್ತುತ ಕಾಂಗ್ರೆಸ್ ಸರ್ಕಾರ ತಾವೇ ಘೋಷಿಸಿದ 6ನೇ ಗ್ಯಾರಂಟಿ ಏಕೆ ಜಾರಿಗೆ ತರುತ್ತಿಲ್ಲ. ಅಂಗನವಾಡಿ ಕಾರ್ಯಕರ್ತೆಯರ ವೇತನ ಹೆಚ್ಚಿಸುವ ಬಗ್ಗೆ ಯಾಕೆ ಮಾತನಾಡುತ್ತಿಲ್ಲ. ಈ ಬಜೆಟ್​ನಲ್ಲಿ ತಾವು ಕೊಟ್ಟ ಮಾತಿನಂತೆ ನಮ್ಮ ವೇತನ ಹೆಚ್ಚಿಸಲು ಆದೇಶ ಹೊರಡಿಸಬೇಕು ಎಂದು ಬೆಳಗಾವಿಯ ಅಂಗನವಾಡಿ ಕಾರ್ಯಕರ್ತೆಯರು ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ಹೌದು, ಕಡಿಮೆ ವೇತನದಲ್ಲಿ ನಾವೆಲ್ಲಾ ಕಳೆದ 20 ವರ್ಷಗಳಿಂದ ಸೇವೆ ಸಲ್ಲಿಸುತ್ತಾ ಬಂದಿದ್ದೇವೆ. ಪ್ರತಿ …

Read More »

(ನರೇಗಾ) ಯೋಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ

ಬೆಳಗಾವಿ: ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ (ನರೇಗಾ) ಮಾನವ ದಿನ ಸೃಜನೆಯಲ್ಲಿ ಬೆಳಗಾವಿ ಜಿಲ್ಲೆ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದಿದೆ. ಜೊತೆಗೆ ಈ ಸಾಲಿನ ಆರ್ಥಿಕ ವರ್ಷದ ಕೇವಲ ಮೂರು ತಿಂಗಳಲ್ಲಿ 61.41 ಲಕ್ಷದಷ್ಟು ಮಾನವ ದಿನ ಸೃಜನೆ ಮಾಡಿರುವುದು ದಾಖಲೆಯಾಗಿದೆ ಎಂದು ಬೆಳಗಾವಿ ಜಿಪಂ ಸಿಇಒ ಹರ್ಷಲ್ ಭೊಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಳಗಾವಿ ಜಿಲ್ಲೆಗೆ 2023-24ನೇ ಸಾಲಿಗೆ 1.40 ಕೋಟಿ ಮಾನವ ದಿನಗಳ ಸೃಜನೆಯ …

Read More »

ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರ ಬೆಟ್ಟದಷ್ಟು ನಿರೀಕ್ಷೆ

ಬೆಳಗಾವಿ: ಐದು ಗ್ಯಾರಂಟಿ‌ ಯೋಜನೆಗಳನ್ನು ಘೋಷಿಸುವ ಮೂಲಕ ರಾಜ್ಯದಲ್ಲಿ ಅಧಿಕಾರಕ್ಕೆ ಬಂದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಬಜೆಟ್ ನಾಳೆ ಮಂಡನೆಯಾಗಲಿದೆ. ಈ ಬಜೆಟ್ ಮೇಲೆ ಬೆಳಗಾವಿ ಜಿಲ್ಲೆಯ ರೈತರು ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈ ಬಾರಿಯಾದರೂ ನಮ್ಮ ಬೇಡಿಕೆ ಈಡೇರುತ್ತವೋ ಎಂದು ಆಸೆಗಣ್ಣಿನಿಂದ ಕಾಯುತ್ತಿದ್ದಾರೆ. ಬೆಳಗಾವಿ ರಾಜ್ಯದ ಎರಡನೇ ಅತೀ ದೊಡ್ಡ ಜಿಲ್ಲೆ. ರಾಜ್ಯದ ಎರಡನೇ ರಾಜಧಾನಿ ಅಂತಾನೂ ಕರೆಸಿಕೊಳ್ಳುತ್ತದೆ. ಇಲ್ಲಿನ ಜನರ ಬಹುತೇಕ ಕಸಬು ಕೃಷಿ. ಜಿಲ್ಲೆಯಲ್ಲಿ …

Read More »