Breaking News

ಬೆಳಗಾವಿ

ಅಕ್ರಮವಾಗಿ ರಾತ್ರೋರಾತ್ರಿ ಮರಳು ಗಣಿಗಾರಿಕೆ ನಡೆಸುತ್ತಿರುವ ಅಡ್ಡೆಗಳ ಮೇಲೆ ಅಥಣಿ ಪೊಲೀಸರ ದಾಳಿ

ಚಿಕ್ಕೋಡಿ (ಬೆಳಗಾವಿ): ಕೃಷ್ಣಾ ನದಿಯಲ್ಲಿ ಅಕ್ರಮವಾಗಿ ರಾತ್ರೋರಾತ್ರಿ ಮರಳು ಗಣಿಗಾರಿಕೆ ನಡೆಸುತ್ತಿರುವ ಅಡ್ಡೆಗಳ ಮೇಲೆ ಅಥಣಿ ಪೊಲೀಸರು ದಾಳಿ ನಡೆಸಿ 30ಕ್ಕೂ ಹೆಚ್ಚು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ. ಮಳೆಯಿಲ್ಲದೇ ಬತ್ತಿ ಹೋಗಿರುವ ನದಿಯೊಡಲಿನ ಅಲ್ಲಲ್ಲಿ ಮರಳು ಗಣಿಗಾರಿಕೆ ನಡೆಯುತ್ತಿದೆ. ಸರ್ಕಾರ ಇದಕ್ಕಾಗಿ ನಿಯಮಗಳನ್ನು ಮಾಡಿದ್ದರೂ ಗುತ್ತಿಗೆ ಪಡೆಯದೇ ಅಧಿಕಾರಿಗಳಿಗೆ ತಿಳಿಯದಂತೆ ದಂದೆ ನಡೆಸುತ್ತಿದ್ದಾರೆ ಎಂದು ಸ್ಥಳೀಯರು ತಿಳಿಸಿದ್ದಾರೆ. ಅಥಣಿ ತಾಲೂಕಿನ ಮಹಿಷವಾಡಗಿ ಗ್ರಾಮದ ಸಮೀಪದಲ್ಲಿ ಹರಿಯುವ ಕೃಷ್ಣಾ ನದಿಯಲ್ಲಿ ರಾತ್ರಿ ಅಕ್ರಮವಾಗಿ ಮರಳು …

Read More »

ಕಳ್ಳತನ,ಕಳ್ಳತನ,ಕಳ್ಳತನ ಘಟಪ್ರಭಾದಲ್ಲಿ ಮತ್ತೆ ಕಳ್ಳರ ಕೈಚಳಕ..!

ಘಟಪ್ರಭಾ : ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ ಬಂಗಾರದ ಆಭರಣ ಸೇರಿದಂತೆ ನಗದು ಕಳ್ಳತನ ಮಾಡಿದ ಘಟನೆ ಪಟ್ಟಣದಲ್ಲಿ ನಡೆದಿದೆ. ಪಟ್ಟಣ ಸೇರಿದಂತೆ ಅನೇಕ ಕಡೆಗಳಲ್ಲಿ ಕಳ್ಳತನಗಳು ಕೆಲವು ತಿಂಗಳ ಹಿಂದೆ ಸಾಕಷ್ಟು ಕಳ್ಳತನ ಪ್ರಕರಣಗಳು ಕೇಳಿಬರುತ್ತಿದ್ದವು, ಈಗ ಮತ್ತೆ ಖದೀಮರು ತಮ್ಮ ಕೈಚಳಕ ಆರಂಭಿಸಿದ್ದಾರೆ. ನಿನ್ನೆ ರಾತ್ರಿ ಘಟಪ್ರಭಾ ಸೇರಿದಂತೆ ಶಿಂಧಿಕುರಭೇಟ, ಅರಭಾವಿ, ಸಂಗನಕೇರಿ ಸೇರಿದಂತೆ ಅನೇಕ ಕಡೆಗಳಲ್ಲಿ ಕಳ್ಳತನವಾಗಿವೆ. ಘಟಪ್ರಭಾ ಪಟ್ಟಣದ ಮಲ್ಲಿಕಾರ್ಜುನ ನಗರದ ಬಾರಾ ಕೂಟ್ …

Read More »

ವಿದ್ಯುತ್ ಕಂಬಕ್ಕೆ ಮಾರ್ಕೆಟ್​ನಲ್ಲಿ 20 ಸಾವಿರ ರೂ. ಬೆಲೆ ಇದ್ದರೆ, 60-70 ಸಾವಿರ ರೂ. ಹಾಕಿದ್ದಾರೆ

ಬೆಳಗಾವಿ: ಬೆಳಗಾವಿ ಅಷ್ಟೇ ಅಲ್ಲದೇ ಎಲ್ಲ ಕಡೆ ಸ್ಮಾರ್ಟ್ ಸಿಟಿ ಕಾಮಗಾರಿಗಳಲ್ಲಿ ಮೂಲ ನೀಲನಕ್ಷೆ ಪ್ರಕಾರ ಆಗಿಲ್ಲ. ಮೊನ್ನೆ ಕ್ಯಾಬಿನೆಟ್​ನಲ್ಲೂ ಈ ಬಗ್ಗೆ ಚರ್ಚೆ ಆಗಿದೆ. ಅದಕ್ಕೆ ಸರ್ಕಾರದಿಂದ ಉನ್ನತ ಮಟ್ಟದ ತನಿಖೆ ಆಗಬೇಕು ಎಂದು ಲೋಕೋಯೋಗಿ ಇಲಾಖೆ ಸಚಿವ ಸತೀಶ ಜಾರಕಿಹೊಳಿ ಅಭಿಪ್ರಾಯ ಪಟ್ಟರು. ಬೆಳಗಾವಿ ನಗರಾಭಿವೃದ್ಧಿ ಪ್ರಾಧಿಕಾರ ಕಚೇರಿಯಲ್ಲಿ ಸ್ಮಾರ್ಟ್ ಸಿಟಿ ಅಧಿಕಾರಿಗಳ ಜೊತೆಗಿನ ಸಭೆ ಬಳಿಕ, ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸ್ಮಾರ್ಟ್ ಸಿಟಿ ಕಾಮಗಾರಿಗಳ ಪ್ರಥಮ ಸಭೆ …

Read More »

ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ : ಶಾಸಕ ರಮೇಶ ಜಾರಕಿಹೊಳಿ

ಗೋಕಾಕ ಜು 1 : ನಾವು ಪರಿಸರ ರಕ್ಷಿಸಿದರೆ ಪರಿಸರ ನಮ್ಮನ್ನು ರಕ್ಷಿಸುತ್ತದೆ. ಪರಿಸರ ಕಾಳಜಿ ಪ್ರತಿಯೊಬ್ಬರ ಜವಾಬ್ದಾರಿ ಎಂದು ಮಾಜಿ ಸಚಿವ ,ಶಾಸಕ ರಮೇಶ ಜಾರಕಿಹೊಳಿ ಹೇಳಿದರು . ಶನಿವಾರದಂದು ಅರಣ್ಯ ಇಲಾಖೆ ವತಿಯಿಂದ ನಗರದ ನ್ಯೂ ಇಂಗ್ಲಿಷ್ ಸ್ಕೂಲ್ ಶಾಲಾ ಆವರಣದಲ್ಲಿ ಹಮ್ಮಿಕೊಂಡ ವನಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಪ್ರಸ್ತುತ ದಿನಗಳಲ್ಲಿ ಪರಿಸರ ಅಸಮತೋಲನದಿಂದಲೇ ಹವಾಮಾನ ವೈಪರಿತ್ಯ ಕಾಣುತ್ತಿದೆ.ಇದಕ್ಕೆ ಪರಿಹಾರ ಕಂಡುಕೊಳ್ಳಬೇಕಾದರೆ ಪರಿಸರ ರಕ್ಷಣೆಗೆ ಹೆಚ್ಚಿನ …

Read More »

ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನ ಜಾವ ನಡೆದಿದೆ.

ಬೆಳಗಾವಿ: ಇಲ್ಲಿನ ಗಾಂಧಿ ನಗರದ ಸುಭಾಷ್​ ಗಲ್ಲಿಯ ಮನೆಯೊಂದರಲ್ಲಿ ಬೆಳಗ್ಗೆ ಅಡುಗೆ ಅನಿಲ ಸಿಲಿಂಡರ್ ಸ್ಫೋಟಗೊಂಡು ನಾಲ್ವರು ಗಂಭೀರವಾಗಿ ಗಾಯಗೊಂಡಿರುವ ಹೃದಯವಿದ್ರಾವಕ ಘಟನೆ ಇಂದು ಬೆಳಗಿನ ಜಾವ ನಡೆದಿದೆ. ಗಾಂಧಿ ನಗರದ ಸುಭಾಷ್ ಗಲ್ಲಿಯ ಮಂಜುನಾಥ ನರಸಪ್ಪ ಅಥಣಿ (42), ಪತ್ನಿ ಲಕ್ಷ್ಮೀ (36), ವೈಷ್ಣವಿ (13), ಪುತ್ರ ಸಾಯಿಪ್ರಸಾದ (10) ಗಂಭೀರ ಗಾಯಾಳುಗಳು. ಮನೆಯಲ್ಲಿದ್ದ ಬಹುತೇಕ ವಸ್ತುಗಳು ಬೆಂಕಿಗಾಹುತಿಗಾಗಿದ್ದು, ಮನೆಯಲ್ಲಿದ್ದ ವಸ್ತುಗಳೆಲ್ಲ ಚೆಲ್ಲಾಪಿಲ್ಲಿಯಾಗಿದ್ದವು. ಸುಭಾಷ್​ ಗಲ್ಲಿಯ ಕಟ್ಟಡದ ಮೊದಲ ಮಹಡಿಯಲ್ಲಿ …

Read More »

ರಾಷ್ಟ್ರೀಯ ಶಿಕ್ಷಣ ನೀತಿ ಕಿತ್ತೆಸೆದು, ರಾಜ್ಯ ಶಿಕ್ಷಣ ನೀತಿ ಜಾರಿಗೊಳಿಸುತ್ತೇವೆ: ಸಚಿವ ಡಾ‌.ಎಂ.ಸಿ.ಸುಧಾಕರ್​

ಬೆಳಗಾವಿ: ರಾಷ್ಟ್ರೀಯ ಶಿಕ್ಷಣ ನೀತಿ ರದ್ದುಪಡಿಸುವ ಬಗ್ಗೆ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ ಸ್ಪಷ್ಟವಾಗಿ ಹೇಳಿದ್ದೇವೆ. ವಿದ್ಯಾರ್ಥಿಗಳ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಹೊಸ ಶಿಕ್ಷಣ ನೀತಿ ಕಿತ್ತೆಸೆದು, ರಾಜ್ಯ ಶಿಕ್ಷಣ ನೀತಿ ಜಾರಿಗೆ ತರುತ್ತೇವೆ ಎಂದು ಉನ್ನತ ಶಿಕ್ಷಣ ಸಚಿವ ಡಾ‌.ಎಂ.ಸಿ. ಸುಧಾಕರ್ ತಿಳಿಸಿದ್ದಾರೆ.​ ಬೆಳಗಾವಿಯಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಎರಡು ವರ್ಷದ ಹಿಂದೆ ನಮ್ಮ ರಾಜ್ಯದಲ್ಲಿ ಮಾತ್ರ ಹೊಸ ಶಿಕ್ಷಣ ನೀತಿ ಅನುಷ್ಠಾನಕ್ಕೆ ತರಲಾಗಿದೆ. ಅದಕ್ಕೆ ಬಹಳಷ್ಟು ಪೂರ್ವ ತಯಾರಿ‌ ಆಗಬೇಕಿತ್ತು ಮತ್ತು …

Read More »

12 ವರ್ಷಗಳ ನಂತರ ಗೋಚರಿಸಿದ ಪುರಾತನ ದೇವಾಲಯ

ಚಿಕ್ಕೋಡಿ (ಬೆಳಗಾವಿ): ಜೂನ್ ತಿಂಗಳು ಮುಗಿದರೂ ಮಳೆ ಮಾತ್ರ ಆಗುವ ಲಕ್ಷಣಗಳು ಕಾಣುತ್ತಿಲ್ಲ. ಈಗಾಗಲೇ ಬರದ ಛಾಯೆ ಆವರಿಸಿ ಹಲವು ಜಿಲ್ಲೆಯಲ್ಲಿ ಬಹುತೇಕ ನದಿಗಳು ಬತ್ತಿ ಹೋಗಿವೆ. ಮಳೆಯಾಗದೇ ಇರುವುದರಿಂದ ಉತ್ತರ ಕರ್ನಾಟಕದ ಬಹುತೇಕ ಡ್ಯಾಂಗಳು ಖಾಲಿಖಾಲಿಯಾಗಿ ಗೋಚರಿಸುತ್ತಿವೆ. ಹಾಗೇ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ ನೀರು ಖಾಲಿಯಾಗಿದ್ದು, ಬರೋಬ್ಬರಿ 12 ವರ್ಷಗಳ ನಂತರ ಪುರಾತನ ದೇವಸ್ಥಾನವೊಂದು ದರ್ಶನಕ್ಕೆ ಮುಕ್ತವಾಗಿದೆ. ವಿಠ್ಠಲ ದೇವಾಲಯ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಹಿಡಕಲ್ ಡ್ಯಾಂ …

Read More »

ನನ್ನ ಝಂಡಾ ಬದಲಾವಣೆ ಆಗಬಹುದು, ಅಜೆಂಡಾ ಬದಲಾಗಲ್ಲ: ಹೆಚ್.ವಿಶ್ವನಾಥ್​

ಬೆಳಗಾವಿ: ನನ್ನ ಝಂಡಾ ಬದಲಾವಣೆ ಆಗಬಹುದು ಆದರೆ, ಅಜೆಂಡಾ ಬದಲಾಗದು ಎಂದು ಬಿಜೆಪಿ ಎಂಎಲ್​ಸಿ ಹೆಚ್. ವಿಶ್ವನಾಥ್​ ಹೇಳಿದ್ದಾರೆ. ನನ್ನ ರಕ್ತದ ಕಣಕಣದಲ್ಲೂ ಕಾಂಗ್ರೆಸ್​ ಇದ್ದು, ಬಿಜೆಪಿ ತೊರೆಯುವ ಕಾಲ ಸನ್ನಿಹಿತವಾಗಿದೆ ಎಂಬ ಅವರ ಹೇಳಿಕೆ ಕುರಿತು ಬೆಳಗಾವಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗೆ ಉತ್ತರಿಸಿ, ಸಂದರ್ಭಗಳು ಹಾಗು ಹಲವಾರು ಕಾರಣಗಳಿಂದ ಕಾಂಗ್ರೆಸ್ ಬಿಟ್ಟು ಬಿಜೆಪಿ ಸೇರಬೇಕಾಯಿತು ಎಂದರು.   ವಲಸಿಗರಿಂದ ಬಿಜೆಪಿ ಹಾಳಾಯ್ತು ಎಂದು ಕೆ.ಎಸ್‌.ಈಶ್ವರಪ್ಪ ಹೇಳಿದ್ದಾರೆ ಎಂದು ಮಾಧ್ಯಮಗಳು ಕೇಳಿದ …

Read More »

ಇಂಡಿಯಾ ಬುಕ್ ಆಫ್ ರೆಕಾರ್ಡ್​ ಸೇರಿದ ಅಥಣಿಯ 2 ವರ್ಷದ ಪುಟಾಣಿಯ ವಿಶೇಷ ಜ್ಞಾಪಕಶಕ್ತಿ!

ಚಿಕ್ಕೋಡಿ : ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬ ಗಾದೆ ಮಾತಿದೆ. ಅದರಂತೆ ಇಲ್ಲೊಬ್ಬ ಬಾಲಕನ ಜ್ಞಾಪಕಶಕ್ತಿಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್​ನಿಂದ ಪ್ರಶಸ್ತಿ ದೊರೆತಿದೆ. ಅಂದಹಾಗೆ ಇದು ಅಥಣಿಯ ಪುಟಾಣಿಯ ಸಾಧನೆ. 2 ವರ್ಷ 9 ತಿಂಗಳಿನ ಸ್ಕಂದ ಗುರುರಾಜ ಮಳಸಿದ್ದನವರ ಎಂಬ ಬಾಲಕ ವಾಹನ, ಬಣ್ಣ, ಸಂಕೇತಗಳನ್ನು ಗುರುತಿಸುವುದು, ರೈಮ್ಸ್, ಶ್ಲೋಕ ಹೇಳುವುದರ ಮೂಲಕ ಇಂಡಿಯಾ ಬುಕ್ ಆಫ್ ರೆಕಾರ್ಡ್​ನಲ್ಲಿ ದಾಖಲೆ ಮಾಡಿ ಚಿಕ್ಕ ವಯಸ್ಸಿನಲ್ಲೇ ಪ್ರತಿಷ್ಟಿತ ಪ್ರಶಸ್ತಿ …

Read More »

17 ವರ್ಷಗಳ ನಂತರ ನಡೆದಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವ ಸಕಲರಿಗೂ ದೇವಿ ಒಳ್ಳೆದನ್ನು ಮಾಡಲಿ:. ಬಾಲಚಂದ್ರ ಜಾರಕಿಹೊಳಿ

ಮೂಡಲಗಿ : 17 ವರ್ಷಗಳ ನಂತರ ಸಡಗರ ಸಂಭ್ರಮದಿಂದ ನಡೆದಿರುವ ಹಳ್ಳೂರ ಗ್ರಾಮ ದೇವತೆ ಜಾತ್ರಾ ಮಹೋತ್ಸವವನ್ನು ಅತ್ಯಂತ ಯಶಸ್ವಿಯಾಗಿ ಮಾಡಿರುವ ಗ್ರಾಮದ ಮುಖಂಡರು ಮತ್ತು ಜಾತ್ರಾ ಕಮೀಟಿ ಪದಾಧಿಕಾರಿಗಳನ್ನು ಅಭಿನಂದಿಸಿರುವ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು, ಸಕಲರಿಗೂ ದೇವಿಯು ಒಳ್ಳೆಯದನ್ನು ಮಾಡಲಿ. ನಾಡು ಸಂಪದ್ಭರಿತವಾಗಿ ಹಚ್ಚ ಹಸಿರಿನಿಂದ ಕಂಗೊಳಿಸಲಿ ಎಂದು ಅವರು ಪ್ರಾರ್ಥಿಸಿದರು.   ತಾಲೂಕಿನ ಹಳ್ಳೂರ ಗ್ರಾಮದ ಮಹಾಲಕ್ಷ್ಮೀದೇವಿ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದ ಅವರು, …

Read More »