Breaking News

ಬೆಳಗಾವಿ

ಗೋಹತ್ಯೆ ನಿಷೇಧ ಅಷ್ಟೇ ಅಲ್ಲ, ಯಾವುದೇ ಪ್ರಾಣಿಯ ಹತ್ಯೆಯನ್ನು ನಾನು ಸಹಿಸಲ್ಲ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಬೆಳಗಾವಿ: ಸದ್ಯ ಕಾಂಗ್ರೆಸ್​ ಸರ್ಕಾರದ ಸಿಎಂ ಸಿದ್ದರಾಮಯ್ಯ ಸೇರಿದಂತೆ ಅವರ ಸಂಪುಟ ಸಚಿವರು ಹಿಂದಿನ ಬಿಜೆಪಿ ಸರ್ಕಾರ ಜಾರಿಗೆ ತಂದಿದ್ದ ಗೋಹತ್ಯೆ ನಿಷೇಧ ಕಾನೂನು ಮತ್ತು ಇತರೆ ಕಾಯ್ದೆಗಳನ್ನು ಪರಿಶೀಲಿಸುವ ಬಗ್ಗೆ ಮಾತನಾಡುತ್ತಿದ್ದಾರೆ. ಸರ್ಕಾರದ ಈ ನಿಲುವನ್ನು ವಿರೋಧಿಸಿ ಬಿಜೆಪಿ ಇಂದು ರಾಜ್ಯಾದ್ಯಂತ ಪ್ರತಿಭಟನೆ ಸಹ ಹಮ್ಮಿಕೊಂಡಿದೆ. ಈ ಮಧ್ಯೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್​ ಅವರು, ಈ ಕುರಿತಂತೆ ಪ್ರತಿಕ್ರಿಯಿಸಿದ್ದಾರೆ. ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ‘ನಾನು ಮಹಿಳೆಯಾಗಿ ಹೇಳುತ್ತೇನೆ. ಗೋಹತ್ಯೆ …

Read More »

ಆಸ್ತಿ ವಿಚಾರವಾಗಿ ಸಹೋದರರ ಮಧ್ಯೆ ನಡೆದ ಜಗಳ ಓರ್ವನ

ಬೆಳಗಾವಿ : ಬೆಳಗಾವಿ ಜಿಲ್ಲೆಯ ಬೈಲಹೊಂಗಲ ತಾಲೂಕಿನ ತಿಗಡಿ ಗ್ರಾಮದಲ್ಲಿ ಆಸ್ತಿ ವಿಚಾರವಾಗಿ ಸಹೋದರರ ಮಧ್ಯೆ ನಡೆದ ಜಗಳ ಓರ್ವನ ಕೊಲೆಯಲ್ಲಿ ಅಂತ್ಯವಾದ ಘಟನೆ ಭಾನುವಾರ ನಡೆದಿದೆ. ಹತ್ಯೆಯಾದ ವ್ಯಕ್ತಿ ತಿಗಡಿ ಗ್ರಾಮದ ನಿವಾಸಿ ಸುರೇಶ್ ಖಣಗಾಂವಿಯಾಗಿದ್ದು, ಶಂಕರ್ ಖಣಗಾಂವಿ ಕೊಲೆ ಮಾಡಿದ ವ್ಯಕ್ತಿ ಎಂದು ತಿಳಿದು ಬಂದಿದೆ. ಹತ್ಯೆಗೀಡಾದ ಸುರೇಶ್ ಮಾಜಿ ಸೈನಿಕನಾಗಿದ್ದು, ಸದ್ಯ ಜಮೀನಿನಲ್ಲಿ ಮನೆ ಮಾಡಿಕೊಂಡು ವಾಸವಾಗಿದ್ದರು. ಆಸ್ತಿ ವಿಚಾರವಾಗಿ ಆರೋಪಿ ಶಂಕರ್ ಖಣಗಾಂವಿ ಹಾಗೂ ಹತ್ಯೆಗೀಡಾದ …

Read More »

ಹಾವೇರಿಯಲ್ಲಿದೆ ಸುಸಜ್ಜಿತ ಅತ್ಯಾಧುನಿಕ ಗ್ರಂಥಾಲಯ:

ಹಾವೇರಿ: ಮೊಬೈಲ್​ ಹಾವಳಿಗೆ ಮರೆಮಾಚುತ್ತಿರುವ ಹವ್ಯಾಸಗಳಲ್ಲಿ ಓದುವ ಹವ್ಯಾಸ ಸಹ ಒಂದು. ಈ ಹಿಂದೆ ಪ್ರತಿ ಗ್ರಾಮಕ್ಕೆ ಒಂದು ಗ್ರಂಥಾಲಯಗಳಿದ್ದವು. ಗ್ರಾಮದ ಜನರು ದಿನಪತ್ರಿಕೆ ವಾರಪತ್ರಿಕೆ ಮಾಸಿಕ ಪತ್ರಿಕೆ ಸೇರಿದಂತೆ ವಿವಿಧ ಪತ್ರಿಕೆ ಓದಲು ಗ್ರಂಥಾಲಯಕ್ಕೆ ಬರುತ್ತಿದ್ದರು. ಅದರ ಜೊತೆಗೆ ಕನ್ನಡ ನುಡಿಯ ಗ್ರಂಥಗಳು ಗ್ರಂಥಾಲಯದಲ್ಲಿ ಸಿಗುತ್ತಿದ್ದವು. ಕವನಸಂಕಲನ, ಕಾದಂಬರಿ, ಕಾವ್ಯ ಪ್ರಭಂದಗಳು ಕಾದಂಬರಿಗಳು ಕಥಾಸಂಕಲನ ಸೇರಿದಂತೆ ವಿವಿಧ ಪ್ರಕಾರದ ಗ್ರಂಥಗಳು ಗ್ರಂಥಾಲಯದಲ್ಲಿ ಸಿಗುತ್ತಿದ್ದವು. ಅಷ್ಟೇ ಯಾಕೆ ಕನ್ನಡದ ಆದಿಕವಿಗಳಿಂದ ಹಿಡಿದು …

Read More »

ದೇಶ ಸೇವೆಗೆ ಸನ್ನದ್ಧರಾದ ಅಗ್ನಿವೀರರು: ತರಬೇತಿಯಲ್ಲಿ ಕ್ಷಮತೆ ತೋರಿದ ವೀರರಿಗೆ ಸಿಕ್ತು ಏರ್ ಮಾರ್ಷಲ್ ಕಡೆಯಿಂದ ಬಹುಮಾನ

ಬೆಳಗಾವಿ: ಬೆಳಗಾವಿ ಏರ್​ಮನ್ ತರಬೇತಿ ಶಾಲೆಯಲ್ಲಿ ತರಬೇತಿ ಪಡೆದ ಅಗ್ನಿವೀರರನ್ನು ಅದ್ಧೂರಿಯಾಗಿ ಬೀಳ್ಕೊಡಲಾಯಿತು. ಅಗ್ನಿಪಥ್ ಯೋಜನೆಯಡಿ ದೇಶದಲ್ಲೇ ತರಬೇತಿ ಪೂರ್ಣಗೊಳಿಸಿದ ಮೊದಲ ಅಗ್ನವೀರರು ಎಂಬ ಖ್ಯಾತಿಗೆ ಈ ಶಿಬಿರಾರ್ಥಿಗಳು ಪಾತ್ರರಾಗಿದ್ದಾರೆ. ಸಾಂಬ್ರಾದಲ್ಲಿನ ಏರ್​ಮನ್ ತರಬೇತಿ ಶಾಲೆಯಲ್ಲಿ 22 ವಾರಗಳ‌ ಕಾಲ ತರಬೇತಿ ಪಡೆದ 2675 ಅಗ್ನಿವೀರರ ಬೀಳ್ಕೊಡುಗೆ ಕಾರ್ಯಕ್ರಮ ಶನಿವಾರ ಅದ್ಧೂರಿಯಾಗಿ ನೆರವೇರಿತು. ತರಬೇತಿ ಅವಧಿಯಲ್ಲಿ ತಾವು ಪಡೆದ ವಿವಿಧ ಕೌಶಲ್ಯಗಳನ್ನು ಅಗ್ನಿವೀರರು ಪ್ರದರ್ಶಿಸಿ, ತಮ್ಮ ಸಾಮರ್ಥ್ಯ ಸಾಬೀತು ಮಾಡಿದರು. ಅಗ್ನಿ …

Read More »

ವಡಗಾಂವ ಆನಂದನಗರ, ಎರಡನೇ ಕ್ರಾಸ್, ನಲ್ಲಿಗಳಲ್ಲಿ ಚರಂಡಿ ಮಿಶ್ರಿತ ನೀರು

ಬೆಳಗಾವಿ ವಡಗಾಂವ ಆನಂದನಗರ, ಎರಡನೇ ಕ್ರಾಸ್, ನಲ್ಲಿಗಳಲ್ಲಿ ಚರಂಡಿ ಮಿಶ್ರಿತ ನೀರು ಬರುತ್ತಿದ್ದು, ನಾಗರಿಕರ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ ಎಂದು ನಗರಸಭೆ ಅಧಿಕಾರಿಗಳಿಗೆ ಹಲವು ಬಾರಿ ತೀಳಿಸಿದರು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಹೌದು, ಕಳೆದ ಎಂಟು ದಿನಗಳಿಂದ ಆನಂದನಗರ 2ನೇ ಕ್ರಾಸ್ನಲ್ಲಿ ಅಪಾರ ಪ್ರಮಾಣದ ಚರಂಡಿ ನೀರು ಹರಿಯುತ್ತಿದೆ. ಈ ನೀರು ಸುತ್ತಮುತ್ತಲಿನ ಮನೆಗಳ ಬಾವಿಗಳಿಗೆ ನುಗ್ಗುತ್ತಿದ್ದು, ಬಾವಿಗಳ ನೀರು ಕೂಡ ಕಲುಷಿತಗೊಂಡಿದೆ. ಹೀಗಾಗಿ ಬಳಕೆಗೆ ಬೇಕಾದ ನೀರನ್ನು …

Read More »

ಎಂಇಎಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಎನ್‌ಸಿಪಿ ಶಾಸಕ ರಾಜೇಶ್ ಪಾಟೀಲ್ ಭಾಗಿ

ಬೆಳಗಾವಿ: ತಾಲೂಕಿನ ಹಿಂಡಲಗಾ ಗ್ರಾಮದ ಹುತಾತ್ಮ ಸ್ಮಾರಕದಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ವೇಳೆ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ಕಾರ್ಯಕರ್ತರು ನಾಡದ್ರೋಹಿ ಎಂಬ ಘೋಷಣೆ ಕೂಗುವ ಮೂಲಕ ಮತ್ತೆ ಕನ್ನಡಿಗರನ್ನು ಕೆರಳಿಸುವ ಕೆಲಸ ಮಾಡಿದ್ದಾರೆ. 1986ರಲ್ಲಿ ಗಡಿ ಗಲಾಟೆಯಲ್ಲಿ ಮೃತಪಟ್ಟ ಮರಾಠಿ ಭಾಷಿಕರಿಗೆ ಎಂಇಎಸ್ ಆಯೋಜಿಸಿದ್ದ ಶ್ರದ್ಧಾಂಜಲಿ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರದ ಎನ್‌ಸಿಪಿ ಶಾಸಕ ರಾಜೇಶ್ ಪಾಟೀಲ್ ಕೂಡ ಭಾಗಿಯಾಗುವ ಮೂಲಕ ಕನ್ನಡಿಗರ ಕೆಂಗಣ್ಣಿಗೆ ಕಾರಣರಾಗಿದ್ದಾರೆ. ಈ ವೇಳೆ ಬೆಳಗಾವಿ, ಕಾರವಾರ, ನಿಪ್ಪಾಣಿ, ಬೀದರ್, …

Read More »

ಕೆಎಸ್​ಆರ್​ಟಿಸಿ, ಬೈಕ್ ನಡುವೆ ಮುಖಾಮುಖಿ‌ ಡಿಕ್ಕಿ: ಒಬ್ಬನ ಸಾವು, ಮೂವರಿಗೆ ಗಂಭೀರ ಗಾಯ

  ಬೆಳಗಾವಿ: ಬೈಕ್ ಹಾಗೂ ಕೆಎಸ್‌ಆರ್​​ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಬೈಕ್​​ ಸವಾರ ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಖಾನಾಪುರ ತಾಲೂಕಿನ ಗೊಲ್ಲಿಹಳ್ಳಿ‌ ಗ್ರಾಮದ ಬಳಿ ನಡೆದಿದೆ. ಯಲ್ಲಪ್ಪ ವಣ್ಣೂರ್ (25)​ ಅಪಘಾತದಲ್ಲಿ ಮೃತ ಪಟ್ಟವರು. ಒಂದೇ ಬೈಕ್​ನಲ್ಲಿ ಚಲಿಸುತ್ತಿದ್ದ ಪಲ್ಲವಿ ವಣ್ಣೂರ್​ (16), ಐಶ್ವರ್ಯಾ ವಣ್ಣೂರ್ (16)​, ಭೀಮಪ್ಪ ವಣ್ಣೂರ್ (40) ಎಂಬವರು ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಿರಸಿಯಿಂದ ಬೆಳಗಾವಿ ಕಡೆಗೆ …

Read More »

ಜೂನ್ 9 ರಿಂದ 11 ರವರೆಗೆ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಾಧ್ಯಮ ಸಮ್ಮೇಳನ

ಬೆಳಗಾವಿ: ರಾಜ್ಯದಲ್ಲಿಯೇ ಪ್ರಥಮ ಬಾರಿಗೆ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಮಾಧ್ಯಮ ಸಮ್ಮೇಳನ ಜೂನ್ 9 ರಿಂದ 11 ರವರೆಗೆ ನೆಹರು ನಗರದ ಕೆ.ಎಲ್.ಇ ಡಾ. ಹೆಚ್.ಬಿ ರಾಜಶೇಖರ ಸಭಾ ಭವನದಲ್ಲಿ ನಡೆಯಲಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪತ್ರಕರ್ತರು ಪಾಲ್ಗೊಳ್ಳಬೇಕು ಎಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ದಿಲೀಪ್ ಕುರಂದವಾಡೆ ಅವರು ತಿಳಿಸಿದರು.   ಬುಧವಾರ ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು, ಅಂತಾರಾಷ್ಟ್ರೀಯ ಮಟ್ಟದಲ್ಲಿ ಸಾಧನೆಗೈದ ಪತ್ರಕರ್ತರು, ಸಂಪಾದಕರು ಹಾಗೂ ಸಾಧಕರು …

Read More »

ವೃದ್ಧಾಪ್ಯ ವೇತನ, ಅಂಗವಿಕಲ ಮಾಸಾಶನಕ್ಕೆ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ಅವ್ಯವಹಾರ

ಅಥಣಿ: ‘ಅಥಣಿ ಹಾಗೂ ಕಾಗವಾಡ ತಾಲ್ಲೂಕುಗಳಲ್ಲಿ ವೃದ್ಧಾಪ್ಯ ವೇತನ, ಅಂಗವಿಕಲ ಮಾಸಾಶನಕ್ಕೆ ಫಲಾನುಭವಿಗಳನ್ನು ಆಯ್ಕೆ ಮಾಡುವಲ್ಲಿ ಅವ್ಯವಹಾರ ನಡೆಯುತ್ತಿದೆ’ ಎಂದು ಕಾಗವಾಡ ಶಾಸಕ ಭರಮಗೌಡ ಕಾಗೆ ಆರೋಪಿಸಿದರು. ಇಲ್ಲಿನ ತಾಲ್ಲೂಕು ಪಂಚಾಯ್ತಿ ಸಭಾಂಗಣದಲ್ಲಿ ಮಂಗಳವಾರ ನಡೆದ ಅಥಣಿ, ಕಾಗವಾಡ ತಾಲ್ಲೂಕುಗಳ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.   ’60 ವರ್ಷ ದಾಟಿದವರಿಗೆ ಹಾಗೂ ಶೇ 75ಕ್ಕಿಂತ ಅಧಿಕ ಅಂಗವೈಕಲ್ಯ ಹೊಂದಿದವರಿಗೆ ಈ ಸೌಲಭ್ಯ …

Read More »

ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರ ಸಾವು

ಚಿಕ್ಕೋಡಿ (ಬೆಳಗಾವಿ): ರಾಜ್ಯದಲ್ಲಿ ಮುಂಗಾರು ಮಳೆ ಆಗಮನದ ಮೊದಲೇ ಗುಡಗು, ಸಿಡಿಲಿನ ಅಬ್ಬರ ಹೆಚ್ಚಾಗಿದ್ದು, ಸಂಜೆ ಸುರಿದ ಭಾರಿ ಮಳೆಗೆ ಅಥಣಿಯಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯಲ್ಲಿ ಅಥಣಿ ತಾಲೂಕಿನಲ್ಲಿ ಪ್ರತ್ಯೇಕ ಗ್ರಾಮದಲ್ಲಿ ಸಿಡಿಲು ಬಡೆದು ಒಬ್ಬ ಯುವಕ, ಒರ್ವ ಮಹಿಳೆ ಮೃತ ಪಟ್ಟಿದ್ದಾರೆ. ತಾಲೂಕಿನ ಕೋಹಳ್ಳಿ ಗ್ರಾಮದ ಕೆಸ್ಕರಿ ದಡ್ಡಿ ನಿವಾಸಿಯಾದ ಅಮೂಲ್ ಜಯಸಿಂಗ ಕಾನಡೆ (24) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ತೋಟದಲ್ಲಿ …

Read More »