Breaking News

ಬೆಳಗಾವಿ

ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಸಾಧ್ಯವಿಲ್ಲ: ಸಚಿವ ಸತೀಶ್​ ಜಾರಕಿಹೊಳಿ

ಬೆಳಗಾವಿ : ಚುನಾವಣೆಯಲ್ಲಿ ಮನೆ ಮನೆಗೆ ಗ್ಯಾರಂಟಿ ಕಾರ್ಡ್ ಎಸೆದ ಹಾಗೆ ಎಲ್ಲರಿಗೂ ಗ್ಯಾರಂಟಿ ಯೋಜನೆ ಕೊಡಲು ಸಾಧ್ಯವಿಲ್ಲ. ನಿರ್ಗತಿಕರು, ಬಡವರನ್ನು ಗುರುತಿಸಿ ಯೋಜನೆಗಳನ್ನು ತಲುಪಿಸುತ್ತೇವೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಚಿವರಾದ ಬಳಿಕ ಕಿತ್ತೂರು ತಾಲೂಕಿನ ಬೈಲೂರು ಗ್ರಾಮದ ನಿಷ್ಕಲ ಮಂಟಪಕ್ಕೆ ಮೊದಲ ಬಾರಿ ಭೇಟಿ ನೀಡಿದ ಅವರು ಶ್ರೀಮಠದ ನಿಜಗುಣಾನಂದ ಶ್ರೀಗಳ ಆಶೀರ್ವಾದ ಪಡೆದು ಕಾರ್ಯಕ್ರಮದಲ್ಲಿ ಮಾತನಾಡಿದರು. ಚುನಾವಣೆಯಲ್ಲಿ ನಾವು ನೀಡಿದ ಎಲ್ಲ ಭರವಸೆಗಳನ್ನು ಈಡೇರಿಸುತ್ತೇವೆ. …

Read More »

ಸತೀಶ್ ಜಾರಕಿಹೊಳಿ, ಭರ್ಜರಿ ಮೆರವಣಿಗೆ

ಬೆಳಗಾವಿ: ಸಚಿವರಾಗಿ ಮೊದಲಬಾರಿಗೆ ಬೆಳಗಾವಿಗೆ ಆಗಮಿಸಿದ ಲಕ್ಷ್ಮೀ ಹೆಬ್ಬಾಳಕರ್ ಮತ್ತು ಸತೀಶ್ ಜಾರಕಿಹೊಳಿ ಅವರನ್ನು ಭಾನುವಾರ ಸಂಜೆ ಬೆಳಗಾವಿಯಲ್ಲಿ ಅಭಿಮಾನಿಗಳು ಭರ್ಜರಿ ಮೆರವಣಿಗೆಯಲ್ಲಿ ಕರೆದೊಯ್ದರು. ತನ್ಮೂಲಕ ನಗರದ ವಿವಿಧ ಭಾಗಗಳಲ್ಲಿರುವ ಮಹಾನ್ ಐತಿಹಾಸಿಕ ವ್ಯಕ್ತಿಗಳ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು. ಕಾಂಗ್ರೆಸ್‌ ಭವನದಿಂದ ತೆರದ ವಾಹನದಲ್ಲಿ ನಗರಾದ್ಯಂತ  ನೂತನ ಸಚಿವರಾದ ಸತೀಶ್‌ ಜಾರಕಿಹೊಳಿ ಹಾಗೂ ಲಕ್ಷ್ಮೀ ಹೆಬ್ಬಾಳಕರ ಅವರನ್ನು ಅದ್ದೂರಿಯಾಗಿ ಮೆರವಣಿಗೆ ಮಾಡಲಾಯಿತು.  ಶಾಸಕರಾದ ರಾಜು ಸೇಠ್‌, ಬಾಬಾ ಸಾಹೇಬ್‌ ಪಾಟೀಲ, ವಿಶ್ವಾಸ …

Read More »

ಉದ್ಯೋಗ ಅರಸಿ ವಲಸೆ ಹೋಗುವವರ ಸಮಸ್ಯೆ ನೀಗಿಸುರುವರೇ ಶಾಸಕ ಮಹಾಂತೇಶ ಕೌಜಲಗಿ?

ಬೈಲಹೊಂಗಲ: ಬೈಲಹೊಂಗಲ ಮತಕ್ಷೇತ್ರದ ಹೆಸರಲ್ಲೇ ಒಂದು ಐತಿಹಾಸಿಕ, ಕ್ರಾಂತಿಕಾರಕ ಶಕ್ತಿ ಅಡಗಿದೆ. ಎರಡನೇ ಬಾರಿ ಆಯ್ಕೆಯಾದ ಶಾಸಕ ಮಹಾಂತೇಶ ಕೌಜಲಗಿ ಅವರು ಹಳೆಯ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ಜೊತೆಗೆ ಕ್ಷೇತ್ರದ ಜನರ ಹೊಸ ನಿರೀಕ್ಷೆಗಳನ್ನು ಈಡೇರಿಸುವ ಸವಾಲು ಎದುರಿಸಬೇಕಾಗಿದೆ.‌ ಈ ಕ್ಷೇತ್ರದಲ್ಲಿ ಅವರ ಎರಡೂ ಗೆಲುವುಗಳಿಗೆ ಅವರಿಗಿಂತ ಹೆಚ್ಚಾಗಿ ಬಿಜೆಪಿ ನಾಯಕರ ಒಳಜಗಳವೇ ಕಾರಣ ಎಂಬುದು ಈಗ ಜನಜನಿತ. ಈ ಅವಕಾಶವು ಮಹಾಂತೇಶ ಅವರಿಗೆ ಎರಡು ಬಾರಿ ಒಲಿದಿದೆ. ಆದರೆ, ಇದು …

Read More »

ಕಾಳಮ್ಮವಾಡಿ ಜಲಾಶಯದಿಂದ ದೂಧಗಂಗೆಗೆ ನೀರು

ಚಿಕ್ಕೋಡಿ: ಮಹಾರಾಷ್ಟ್ರದ ಕಾಳಮ್ಮವಾಡಿ ಜಲಾಶಯದಿಂದ ಎರಡನೇ ಬಾರಿಗೆ ತಾಲ್ಲೂಕಿನ ದೂಧಗಂಗಾ ನದಿಗೆ ನೀರು ಬಿಡುಗಡೆ ಮಾಡಲಾಗಿದ್ದು, ರೈತರು ಹಾಗೂ ಸಾರ್ವಜನಿಕರಲ್ಲಿ ಸಂತಸ ಮೂಡಿಸಿದೆ ಎಂದು ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ ಹೇಳಿದರು.   ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮೇ 18ರಂದು ಮಹಾರಾಷ್ಟ್ರದ ಕೊಲ್ಹಾಪುರದ ನೀರಾವರಿ ಇಲಾಖೆಯ ಸೂಪರಿಟೆಂಡೆಂಟ್ ಎಂಜಿನಿಯರ್ ಸುರವೆ ಹಾಗೂ ಎಇ ಎಬಾಂದಿವಾಡೇಕರ ಅವರನ್ನು ಭೇಟಿ ಮಾಡಿ ನೀರಿನ ಸಮಸ್ಯೆ ಕುರಿತು ಮನವರಿಕೆ ಮಾಡಿ ದೂಧಗಂಗಾ ನದಿಗೆ …

Read More »

ಯಾರ ಒತ್ತಡಕ್ಕೂ ಮಣಿಯದೆ ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ಕೆಲಸ ಮಾಡಬೇಕು: ಬಾಬಾಸಾಹೇಬ ಪಾಟೀಲ

ಕಿತ್ತೂರು: ‘ಯಾರ ಒತ್ತಡಕ್ಕೂ ಮಣಿಯದೆ ಪಾರದರ್ಶಕ ಮತ್ತು ನ್ಯಾಯಸಮ್ಮತವಾಗಿ ಕೆಲಸ ಮಾಡಬೇಕು. ಕಚೇರಿಗೆ ಬರುವ ಸಾರ್ವಜನಿಕರಿಗೆ ಜನಸ್ನೇಹಿ ಆಡಳಿತ ನೀಡಬೇಕು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಹೇಳಿದರು. ಇಲ್ಲಿಯ ತಾಲ್ಲೂಕು ಪಂಚಾಯ್ತಿ ಸಭಾಭವನದಲ್ಲಿ ಶುಕ್ರವಾರ ನಡೆದ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಸಮನ್ವಯತೆಯಿಂದ ಕೆಲಸ ಮಾಡೋಣ. ಸಾರ್ವಜನಿಕರಿಗೆ ಒಳ್ಳೆಯ ಆಡಳಿತ ನೀಡುವ ಸಂದೇಶ ಕೊಡೋಣ’ ಎಂದರು. ‘ಎಲ್ಲ ಕೆಲಸಗಳಲ್ಲೂ ಉತ್ತಮ ಗುಣಮಟ್ಟವಿರಲಿ. ಚುನಾವಣೆ ಪ್ರಚಾರದ ವೇಳೆ …

Read More »

ತಮ್ಮ ಪ್ರಥಮ ತಿಂಗಳ ವೇತನವನ್ನ ಗ್ರಂಥಾಲಯಕ್ಕೆ ನೀಡುವುದಾಗಿ ಘೋಷಣೆ:ವಿಶ್ವಾಸ ವೈದ್ಯ

ಸವದತ್ತಿ ತಾಲೂಕಿನ ಗ್ರಂಥಾಲಯಗಳ ಕಾಯಕಲ್ಪಕ್ಕೆ ನೂತನ ಶಾಸಕರ ಸಂಕಲ್ಪನೂತನ ಶಾಸಕ ವಿಶ್ವಾಸ ವೈದ್ಯರಿಂದ ವಿನೂತನ ಕಾರ್ಯಕ್ಕೆ ಚಾಲನೆಇಂದು ಸವದತ್ತಿ   ಸರ್ಕಾರಿ ಗ್ರಂಥಾಲಯಕ್ಕೆ ಅನಿರೀಕ್ಷಿತ ಭೇಟಿ, ಪರಿಶೀಲನೆ ಗ್ರಂಥಾಲಯದ ಕಟ್ಟಡ, ಮೂಲಭೂತ ಸೌಲಭ್ಯಗಳ ಪರಿಶೀಲನೆ ಗ್ರಂಥಾಲಯದಲ್ಲಿ ಅಧ್ಯಯನ ಮಾಡುವ ಯುವಕರಿಂದ ಮಾಹಿತಿ ಪಡೆದ ಶಾಸಕರು ತಮ್ಮ ಪ್ರಥಮ ತಿಂಗಳ ವೇತನವನ್ನ ಗ್ರಂಥಾಲಯಕ್ಕೆ ನೀಡುವುದಾಗಿ ಘೋಷಣೆ ಮುಂದಿನ ಹಂತದಲ್ಲಿ ತಾಲೂಕಿನ ಎಲ್ಲ ಗ್ರಂಥಾಲಯಗಳ ಅಭಿವೃದ್ಧಿ ಭರವಸೆ ಶಾಸಕರ ಕಾರ್ಯಕ್ಕೆ ತೀವ್ರ‌ ಮೆಚ್ಚುಗೆ …

Read More »

ವಿದ್ಯುತ್ ತಂತಿ ತಗುಲಿ ಬಾಲಕಿ ದುರ್ಮರಣ

ಬೆಳಗಾವಿ: ಮನೆ ಮೇಲೆ ಹಾದುಹೋಗಿದ್ದ ವಿದ್ಯುತ್ ತಂತಿ ತಗುಲಿ ಬಾಲಕಿ ಸಾವನ್ನಪ್ಪಿರುವ ದುರ್ಘಟನೆ ಬೆಳಗಾವಿ ಜಿಲ್ಲೆಯ ಮಚ್ಚೆ ಗ್ರಾಮದ ಮನೆಯಲ್ಲಿ ನಡೆದಿದೆ. 13 ವರ್ಷದ ಮಧುರಾ ಕೇಶವ್ ಮೋರೆ ಮೃತ ಬಾಲಕಿ. ಖಾನಾಪುರ ತಾಲೂಕಿನ ಮಾಚಿಘಡ ಗ್ರಾಮದ ನಿವಾಸಿ. ಶಾಲೆಗೆ ರಜೆ ಹಿನ್ನೆಲೆಯಲ್ಲಿ ಸೋದರ ಮಾವನ ಮನೆಗೆ ಬಂದಿದ್ದಾಗ ಈ ದುರಂತ ಸಂಭವಿಸಿದೆ. ಮನೆ ಮೇಲೆ ಆಟವಾಡುತ್ತಿದ್ದಾಗ ಬಾಲಕಿಗೆ ವಿದ್ಯುತ್ ತಂತಿ ತಗುಲಿ ಬಾಲಕಿ ಸಾವನ್ನಪ್ಪಿದ್ದಾಳೆ. ಹಲವು ಬಾರಿ ಹೆಸ್ಕಾಂ ಗೆ …

Read More »

ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ಚಿಕ್ಕೋಡಿಯ ಭೂ ಮಾಪನ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ

ಚಿಕ್ಕೋಡಿ: ಸರ್ವೆ ಮಾಡಲು ಲಂಚ ಪಡೆಯುತ್ತಿದ್ದ ಚಿಕ್ಕೋಡಿಯ ಭೂ ಮಾಪನ ಇಲಾಖೆಯ ಅಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಭೂಮಾಪನ ಇಲಾಖೆಯ ಸೂಪರ್ ವೈಸರ್ ಎಸ್.ಎಂ.ಕಲ್ಯಾಣ ಶೆಟ್ಟಿ ಲೋಕಾಯುಕ್ತ ಬಲೆಗೆ ಬಿದ್ದವರು. 6 ಸಾವಿರ ರೂ. ಲಂಚ ಪಡೆಯುತ್ತಿದ್ದಾಗ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿಯಲಾಗಿದೆ. ಸಿದ್ದಪ್ಪ ಪೂಜಾರಿ ಎನ್ನುವವರಿಂದ ಸರ್ವೆ ಕಾರ್ಯಕ್ಕಾಗಿ ಲಂಚ ಪಡೆಯುತ್ತಿದ್ದರು. ವಿವರ: ಜಮೀನುಗಳ 11ಇ ನಕ್ಷೆ ಅವಧಿ ವಿಸ್ತರಿಸಿ ಕೊಡಲು ಲಂಚ ಸ್ವೀಕರಿಸುವ ವೇಳೆ ಚಿಕ್ಕೋಡಿಯ …

Read More »

ಮಾರೀಹಾಳ: ವೈಯಕ್ತಿಕ ದ್ವೇಷ ಹಿನ್ನೆಲೆ; ಯುವಕನ ಬರ್ಬರ ಹತ್ಯೆ

ಬೆಳಗಾವಿ: ವೈಯಕ್ತಿಕ ದ್ವೇಷ ಹಿನ್ನೆಲೆಯಲ್ಲಿ ಯುವಕನನ್ನು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ ಘಟನೆ ತಾಲೂಕಿನ ಮಾರೀಹಾಳ ಗ್ರಾಮದಲ್ಲಿ ಗುರುವಾರ ತಡರಾತ್ರಿ ನಡೆದಿದೆ. ಮಾರಿಹಾಳ ಗ್ರಾಮದ ಮಹಾಂತೇಶ ರುದ್ರಪ್ಪ ಕರಲಿಂಗನವರ(23) ಎಂಬ ಯುವಕನನ್ನು ನಾಲ್ಕೈದು ಜನ ಯುವಕರು ಸೇರಿ ಹತ್ಯೆಗೈದಿದ್ದಾರೆ. ಅತ್ತೆಗೆ ನಿಖ ನಿಖರ ಕಾರಣ ತಿಳಿದು ಬಂದಿಲ್ಲವಾದರೂ ಹಳೆಯ ದ್ವೇಷದಿಂದಲೇ ಕೊಲೆಗೈದಿರುವುದು ಮೇಲ್ನೋಟಕ್ಕೆ ತಿಳಿದು ಬಂದಿದೆ. ಸ್ಥಳಕ್ಕೆ ಅಪರಾಧ ವಿಭಾಗದ ಡಿಸಿಪಿ ಪಿ.ವಿ. ಸ್ನೇಹ ಹಾಗೂ ಮರೀಹಾಳ ಇನ್ಸ್ಪೆಕ್ಟರ್ ಭೇಟಿ ನೀಡಿ …

Read More »

ಅಂದು ಸ್ಮಶಾನದಲ್ಲಿ ಸತೀಶ್​ ಜಾರಕಿಹೊಳಿ ನುಡಿದಿದ್ದ ಭವಿಷ್ಯ ಈಗ ನಿಜವಾಯ್ತು..!

ಬೆಳಗಾವಿ: ನಮ್ಮ ಕಾಂಗ್ರೆಸ್ ಸರ್ಕಾರ 2023ರಲ್ಲಿ ಅಧಿಕಾರಕ್ಕೆ ಬರಲಿದೆ ಎಂದು ಭವಿಷ್ಯ ನುಡಿದು, 2020 ರಲ್ಲಿಯೇ ತಾವು ತೆಗೆದುಕೊಂಡಿದ್ದ ಹೊಸ ಕಾರಿಗೆ 2023 ಎಂದು ನಂಬರ್‌ ಪ್ಲೇಟ್‌ ಹಾಕಿಸಿ ಸ್ಮಶಾನದಲ್ಲಿ ಪೂಜೆ ಸಲ್ಲಿಸಿದ್ದ ಸತೀಶ್‌ ಜಾರಕಿಹೊಳಿ ಅವರ ಭವಿಷ್ಯ ನಿಜವಾಗಿದ್ದು, ಈಗ ಕಾಂಗ್ರೆಸ್‌ 135 ಕ್ಷೇತ್ರಗಳಲ್ಲಿ ಗೆದ್ದು ಸ್ಪಷ್ಟ ಬಹುಮತದಿಂದ ಸರ್ಕಾರ ರಚಿಸುತ್ತಿದೆ.   ಹೌದು, ಸದಾ ಕಾಲ ಮೌಢ್ಯತೆಗೆ ಸೆಡ್ಡು ಹೊಡೆಯುವ ಮೂಲಕ ವಿವಿಧ ಕಾರ್ಯಕ್ರಮ ಆಯೋಜಿಸಿಕೊಂಡು ಬಂದಿರುವ ಸತೀಶ್​ …

Read More »