ಬೆಳಗಾವಿ

ನೂತನ ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಧಿಕಾರ ಸ್ವೀಕಾರ

ಬೆಳಗಾವಿ: ಬೆಳಗಾವಿಯ ನೂತನ ಜಿಲ್ಲಾಧಿಕಾರಿಯಾಗಿ ಮೊಹಮ್ಮದ್ ರೋಷನ್ ಶುಕ್ರವಾರ ಅಧಿಕಾರ ವಹಿಸಿಕೊಂಡರು. ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಅವರು ಅಧಿಕಾರವನ್ನು ಹಸ್ತಾಂತರಿಸಿದರು. 2015 ನೇ ಬ್ಯಾಚಿನ ಐ.ಎ.ಎಸ್. ಅಧಿಕಾರಿಯಾಗಿರುವ ಮೊಹಮ್ಮದ್ ರೋಷನ್ ಅವರು, ಈ ಮುನ್ನ ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.   ಬಿ.ಟೆಕ್ ಹಾಗೂ ಎಂ.ಬಿ.ಎ.(ಫೈನಾನ್ಸ್), ಎಂ.ಎ.(ಪಬ್ಲಿಕ್ ಪಾಲಿಸಿ) ಪದವೀಧರರಾಗಿರುವ ರೋಷನ್, ಹಾವೇರಿ ಮತ್ತು ಉತ್ತಕ ಕನ್ನಡ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿಯೂ ಕಾರ್ಯನಿರ್ವಹಿಸಿದ್ದಾರೆ. ಕಳೆದ ಎರಡು …

Read More »

ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಗಳಿಗೆ ಪರಿಹಾರ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ

ಗೋಕಾಕ: ರೈತ ಬಾಂಧವರು ಸಾಲಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾಗದೇ ಧೈರ್ಯದಿಂದ ಎದುರಿಸುವಂತೆ ಶಾಸಕ ಹಾಗೂ ಬೆಳಗಾವಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ನಗರದ ಎನ್‍ಎಸ್‍ಎಫ್ ಅತಿಥಿಗೃಹದಲ್ಲಿ ಕೃಷಿ ಇಲಾಖೆಯಿಂದ ಆತ್ಮಹತ್ಯೆ ಮಾಡಿಕೊಂಡ ರೈತ ಕುಟುಂಬಕ್ಕೆ ಸರ್ಕಾರದ ಸಹಾಯಧನದ ಮಂಜೂರಾತಿ ಆದೇಶ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ರೈತರು ಸಮಸ್ಯೆಗಳನ್ನು ಧೈರ್ಯದಿಂದ ಎದುರಿಸಿ ನಿಮ್ಮೊಂದಿಗೆ ನಾವಿದ್ದೇವೆ. ಸಮಸ್ಯೆಗಳು ಎಲ್ಲರಿಗೂ ಸರ್ವೆ ಸಾಮಾನ್ಯ ಮನೆಯ ಯಜಮಾನ ಆತ್ಮಹತ್ಯೆ …

Read More »

ಮುಂದಿನ ಸಿಎಂ ಸತೀಶ್ ಜಾರಕಿಹೊಳಿ! ಎನ್ನುತ್ತಲೇ ಅವರ ಕಾರಿಗೆ ಮುತ್ತಿಗೆ ಹಾಕಿದ

ಹಾವೇರಿ: ಲೋಕಸಭೆ ಚುನಾವಣೆ (Lok Sabha Election) ಮುಗೀತು. ಇದೀಗ ವಿಧಾನಸಭೆ ಉಪ ಚುನಾವಣೆ (Assembly By Election) ಕಣ ನಿಧಾನಕ್ಕೆ ರಂಗೇರುತ್ತಿದೆ. ಒಂದೆಡೆ ಎಚ್‌ಡಿ ಕುಮಾರಸ್ವಾಮಿಯವರಿಂದ (HD Kumaraswamy) ತೆರವಾಗಿರೋ ರಾಮನಗರದ (Ramanagar) ಚನ್ನಪಟ್ಟಣ (Channapatna) ಉಪ ಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ -ಜೆಡಿಎಸ್ ಮೈತ್ರಿ ಪಕ್ಷಗಳು ತಯಾರಿ ನಡೆಸುತ್ತಿವೆ. ಅತ್ತ ಹಾವೇರಿಯಲ್ಲಿ ಬಸವರಾಜ ಬೊಮ್ಮಾಯಿಯವರಿಂದ ತೆರವಾದ ಸ್ಥಾನಕ್ಕೆ ಉಪ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್‌ನಲ್ಲಿ ಟಿಕೆಟ್ ಆಕಾಂಕ್ಷಿಗಳ ಗದ್ದಲ …

Read More »

ಸಾರ್ವಜನಿಕ ಶ್ರೀ ಪಾಂಡುರಂಗ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು.

ಸಾರ್ವಜನಿಕ ಶ್ರೀ ಪಾಂಡುರಂಗ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿದ್ದರು. ಬೆಳಗಾವಿ ಜಿಲ್ಲೆಯ ಯರಗಟ್ಟಿ ತಾಲೂಕಿನ ಕಡಬಿ ಗ್ರಾಮದಲ್ಲಿ 8 ನೇ ವರ್ಷದ ಸಪ್ತಾಹ ಕಾರ್ಯಕ್ರಮದಲ್ಲಿ ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ ಅವರು ಭಾಗವಹಿಸಿ, ವಿಶೇಷ ಪೂಜೆ ಸಲ್ಲಿಸಿದರು. ನಂತರ ಕೊಟುರ ಶಿವಾಪುರ ಗ್ರಾಮದ ಶ್ರೀ ದ್ಯಾಮವ್ವದೇವಿ ದೇವಸ್ಥಾನಕ್ಕೆ ಭೇಟಿ ನೀಡಿ, ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಊರಿನ ಮುಖಂಡರು ಶ್ರೀಮತಿ ಅಂಬಿಕಾ ಸಂತೋಷ್ ಜಾರಕಿಹೊಳಿ …

Read More »

ಬಾಡಿ ಬಿಲ್ಡ್ ಮಾಡಿ ಯುವತಿಯರ ಮುಂದೆ ಪ್ರದರ್ಶಿಸುತ್ತಿದ್ದ ಯುವಕನಿಗೆ ಪೊಲೀಸರ ವರ್ಕೌಟ್

ಬೆಳಗಾವಿ: ಜಿಮ್ ಹೋಗೋದು, ವ್ಯಾಯಾಮ, ಕಸರತ್ತು ಮಾಡಿ ದೇಹವನ್ನು ಸಾಮು ಮಾಡಿಕೊಳ್ಳುವುದು ತಪ್ಪಲ್ಲ. ಅದರೆ ನಾನು ದೇಹವನ್ನು ಸಾಮು ಮಾಡಿಕೊಂಡಿದ್ದೇನೆ, ನನ್ನ ದೇಹ ನೋಡಿ ಅಂತ ಎದೆ ಮೇಲಿನ ಕೂದಲು ಬೋಳಿಸಿಕೊಂಡು ಶರ್ಟ್ ಬಿಚ್ಚಿ ಕಾಲೇಜು ಯವತಿಯರ ಮುಂದೆ ನಿಂತುಕೊಳ್ಳೋದು ಖಂಡಿತ ತಪ್ಪು. ಜಿಲ್ಲೆಯ ಅಥಣಿ ತಾಲೂಕಿನ ಶಿನಾಳ ಗ್ರಾಮದ ಬಾಳೇಶ್ ಹೆಸರಿನ ಯುವಕನಿಗೆ ಇಂಥ ತಪ್ಪು ಅರ್ಥಮಾಡಿಸಲು ಪೊಲೀಸರು ಮಧ್ಯಪ್ರವೇಶಿಸಬೇಕಾಯಿತು. ಇವನು ನನ್ನ ದೇಹ ಸಲ್ಮಾನ್ ಖಾನ್ ನಂತಿದೆ ಅಂತ …

Read More »

ಮಾಟಮಂತ್ರದ ಕಾಟ: ಕುಟುಂಬದ ವಿರುದ್ಧವೇ ದೂರು ನೀಡಲು ಮುಂದಾದ ಉದ್ಯಮಿ ವಿಜಯ ಸಂಕೇಶ್ವರ ಪುತ್ರಿ

ಬೆಳಗಾವಿ: ಆಸ್ತಿ ಕಬಳಿಸಲು ಮಾಟಮಂತ್ರ ಮಾಡಿದ್ದಾರೆ ಎಂದು ಆರೋಪಿಸಿ ಪ್ರತಿಷ್ಠಿತ ಉದ್ಯಮಿ ವಿಜಯ ಸಂಕೇಶ್ವರ ಅವರ ಪುತ್ರಿ ದೀಪಾ ಸಿದ್ನಾಳ ಅವರು ತಮ್ಮ ಕುಟುಂಬದ ಸದಸ್ಯರ ವಿರುದ್ಧವೇ ದೂರು ದಾಖಲಿಸಿದ್ದಾರೆ. ಉದ್ಯಮಿ ಶಶಿಕಾಂತ ಸಿದ್ನಾಳ, ಪತ್ನಿ ವಾಣಿ ಸಿದ್ನಾಳ ಹಾಗೂ ಪುತ್ರ, ಬಿಜೆಪಿ ಯುವ ಮೋರ್ಚಾ ಜಿಲ್ಲಾ ಕಾರ್ಯದರ್ಶಿ ದಿಗ್ವಿಜಯ ಸಿದ್ನಾಳ ವಿರುದ್ಧ ಬೆಳಗಾವಿ ನಗರದ ಕ್ಯಾಂಪ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮಾಜಿ ಸಂಸದ ಎಸ್.ಬಿ. ಸಿದ್ನಾಳ ಅವರ ಪುತ್ರ …

Read More »

ಗೋಕಾಕ | ನಕಲಿ ನೋಟು ಪತ್ತೆ: ಐವರ ಬಂಧನ

ಗೋಕಾಕ: ಗೋಕಾಕ-ಬೆಳಗಾವಿ ರಸ್ತೆಯ ಕಡಬಗಟ್ಟಿ ಗ್ರಾಮದ ಮೂಲಕ ಸಾಗುವ ರಸ್ತೆಯಲ್ಲಿ ಸಾಗುತ್ತಿದ್ದ ಕಾರೊಂದನ್ನು ತಪಾಸಣೆ ಮಾಡಿದಾಗ ₹100, ₹500 ಮುಖಬೆಲೆಯ ನಕಲಿ ನೋಟುಗಳು ಪತ್ತೆಯಾಗಿದ್ದು, ಐವರನ್ನು ಬಂಧಿಸಲಾಗಿದೆ. ಈಚೆಗೆ ಬೆಳಗಿನ ಜಾವ ಗಸ್ತು ಪೊಲೀಸರು ನಡೆಸಿದ ತಪಾಸಣೆ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.   ಮೂಡಲಗಿ ತಾಲ್ಲೂಕಿನ ಅರಭಾವಿಯ ಅನ್ವರ ಮೊಹ್ಮದಸಲೀಂ ಯಾದವಾಡ, ಮಹಾಲಿಂಗಪೂರದ ಸದ್ದಾಮ ಮುಸಾ ಯಡಹಳ್ಳಿ, ರವಿ ಚನ್ನಪ್ಪ ಹ್ಯಾಗಡಿ, ದುಂಡಪ್ಪ ಮಹಾದೇವ ವನಶೆಣವಿ ಮತ್ತು ವಿಠ್ಠಲ …

Read More »

ಬೆಳಗಾವಿ ಮಹಾನಗರ ಪಾಲಿಕೆ: ನಾಲ್ಕು ಸ್ಥಾಯಿ ಸಮಿತಿಗಳಿಗೆ ಅವಿರೋಧ ಆಯ್ಕೆ

ಬೆಳಗಾವಿ: ಇಲ್ಲಿನ ಮಹಾನಗರ ಪಾಲಿಕೆ 22ನೇ ಅವಧಿಗೆ ನಾಲ್ಕು ಸ್ಥಾಯಿ ಸಮಿತಿಗಳ 28 ಸದಸ್ಯ ಸ್ಥಾನಗಳಿಗೆ ಮಂಗಳವಾರ ಅವಿರೋಧ ಆಯ್ಕೆ ನಡೆಯಿತು. ತೆರಿಗೆ ನಿರ್ಧರಣೆ, ಹಣಕಾಸು ಮತ್ತು ಅಪೀಲುಗಳ ಸ್ಥಾಯಿ ಸಮಿತಿ, ಸಾರ್ವಜನಿಕ ಆರೋಗ್ಯ, ಶಿಕ್ಷಣ ಮತ್ತು ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ, ನಗರ ಯೋಜನೆ ಮತ್ತು ಅಭಿವೃದ್ಧಿ ಸ್ಥಾಯಿ ಸಮಿತಿ ಹಾಗೂ ಲೆಕ್ಕಗಳ ಸ್ಥಾಯಿ ಸಮಿತಿಯ ತಲಾ ಏಳು ಸದಸ್ಯ ಸ್ಥಾನಗಳಿಗೆ ಚುನಾವಣೆ ನಿಗದಿಯಾಗಿತ್ತು. ಮೂರು ಸಮಿತಿಗಳಿಗೆ ತಲಾ …

Read More »

ಹಿನ್ನೀರಿನಲ್ಲಿ ಈಜಲು ತೆರಳಿದ್ದ ಯುವಕರಿಬ್ಬರು ನೀರು ಪಾಲು

ಚಿಕ್ಕೋಡಿ: ನೆರೆಯ ಮಹಾರಾಷ್ಟ್ರದ ಕಾಳಮ್ಮವಾಡಿ ಡ್ಯಾಂನಲ್ಲಿ ನಿಪ್ಪಾಣಿಯ ಯುವಕರಿಬ್ಬರು ನೀರುಪಾಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಮಹಾರಾಷ್ಡ್ರದ ಕೊಲ್ಲಾಪೂರ ಜಿಲ್ಲೆಯ ರಾಧಾನಗರಿ ತಾಲೂಕಿನ ಕಾಳಮ್ಮವಾಡಿ ಜಲಾಶಯಕ್ಕೆ ನಿಪ್ಪಾಣಿ ಮೂಲದ 13 ಜನ ಯುವಕರು ಪ್ರವಾಸಕ್ಕೆ ತೆರಳಿದರು. ಜಲಾಶಯದ ಹಿನ್ನೀರಿನಲ್ಲಿ ಇಬ್ಬರು ಯುವಕರು ನೀರಿನಲ್ಲಿ ಮುಳುಗಿ ಜೀವ ಕಳೆದುಕೊಂಡಿದ್ದಾರೆ. ನಿಪ್ಪಾಣಿಯ ಗಣೇಶ ಕದಮ್, ಪ್ರತೀಕ್ ಪಾಟೀಲ್ ನೀರುಪಾಲಾದ ಯುವಕರು. ಕಾಳಮ್ಮವಾಡಿ ಜಲಾನಯನ ಪ್ರದೇಶದಲ್ಲಿ ಸದ್ಯ ಮಳೆಯ ಅಬ್ಬರ ಮುಂದುವರಿದಿದೆ. ಆದರೂ ಶವ …

Read More »

ಕಾರುಗಳ ಮುಖಾಮುಖಿ ಡಿಕ್ಕಿ: 8 ಮಂದಿಗೆ ಗಂಭೀರ ಗಾಯ

ಬೈಲಹೊಂಗಲ: ಎರಡು ಕಾರುಗಳು ಮುಖಾಮುಖಿ ಡಿಕ್ಕಿ ಸಂಭವಿಸಿ ಎಂಟು ಜನರು ಗಂಭೀರ ಗಾಯಗೊಂಡ ಘಟನೆ ತಾಲೂಕಿನ ನಯಾನಗರ ಗ್ರಾಮದ ಸಮೀಪ ಸೋಮವಾರ ನಡೆದಿದೆ. ನಯಾನಗರ ಗ್ರಾಮದ ಮಲಪ್ರಭಾ ನದಿ ಹತ್ತಿರದ ದಾಬಾ ದಾಟಿ ಸಂಚರಿಸುತ್ತಿದ್ದ ಮಾರುತಿ 800 ಮತ್ತು ಅಲ್ಟೋ ಕಾರು ಪರಸ್ಪರ ಡಿಕ್ಕಿ ಹೊಡಿದಿವೆ. ಅಪಘಾತದ ರಭಸಕ್ಕೆ ಕಾರುಗಳು ಸಂಪೂರ್ಣ ಜಖಂಗೊಂಡು ನುಜ್ಜುಗುಜ್ಜಾಗಿವೆ. ಚಾಲಕರಾದ ಲಿಂಗದಳ್ಳಿ ಗ್ರಾಮದ ಕಿರಣ ಅಡಿವೆಪ್ಪ ಪೂಜೇರ, ಆನಿಗೋಳದ ಮಹಾಂತೇಶ ರಾಮನಿಂಗಪ್ಪ ಕುರಿ ಸೇರಿದಂತೆ ಎಂಟು …

Read More »